Tag: ಶ್ರೀರಾಮಮಂದಿರ

  • ರಾಮಲಲ್ಲಾ ಪ್ರಾಣಪ್ರತಿಷ್ಠೆ – 96 ವರ್ಷದ ಕರಸೇವಕಿಗೆ ವಿಶೇಷ ಆಹ್ವಾನ – ಈಕೆ ಯಾರು ಗೊತ್ತಾ?

    ರಾಮಲಲ್ಲಾ ಪ್ರಾಣಪ್ರತಿಷ್ಠೆ – 96 ವರ್ಷದ ಕರಸೇವಕಿಗೆ ವಿಶೇಷ ಆಹ್ವಾನ – ಈಕೆ ಯಾರು ಗೊತ್ತಾ?

    ಮುಂಬೈ/ಅಯೋಧ್ಯೆ: 1990ರ ದಶಕದಲ್ಲಿ ಶ್ರೀರಾಮಮಂದಿರ ಚಳವಳಿಯಲ್ಲಿ (Ram Mandir Movement) ಸಕ್ರಿಯವಾಗಿ ಪಾಲ್ಗೊಂಡಿದ್ದ 96ರ ಹರೆಯದ ಕರಸೇವಕಿಗೆ (Karsevak) ಜ.22ರಂದು ರಾಮಲಲ್ಲಾ ಪ್ರಾಣಪ್ರತಿಷ್ಠೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಆಮಂತ್ರಣ ನೀಡಲಾಗಿದೆ.

    ಮಹಾರಾಷ್ಟ್ರದ ನಿವಾಸಿಯಾಗಿರುವ ಶಾಲಿನಿ ದಬೀರ್‌ (96) ಅವರಿಗೆ ಮಂತ್ರಾಕ್ಷತೆ ನೀಡಿ ಭಗವಾನ್ ರಾಮನ ಪ್ರಾಣಪತಿಷ್ಠೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ವಿಶೇಷವಾಗಿ ಆಹ್ವಾನಿಸಲಾಗಿದೆ. ಈ ಸಂದರ್ಭದಲ್ಲಿ ರಾಮಮಂದಿರ (Ram Mandir) ಹೋರಾಟದಲ್ಲಿ ಪಾಲ್ಗೊಂಡಿದ್ದ ದಿನಗಳ ಬಗ್ಗೆ ಮೆಲುಕು ಹಾಕಿದ್ದಾರೆ. ಇದನ್ನೂ ಓದಿ: ಏಳು ಸುತ್ತಿನ ಕೋಟೆಯಾದ ಅಯೋಧ್ಯೆ – 30,000 ಯೋಧರು, AI ಕಣ್ಗಾವಲು – ಭದ್ರತೆಗೆ ವಿಶೇಷ ತಂಡಗಳ‌ ನಿಯೋಜನೆ

    1990ರ ದಶಕದಲ್ಲಿ ಏನಾಗಿತ್ತು?
    ನಾನು 63 ವರ್ಷದವಳಿದ್ದಾಗ ಈ ಹೋರಾಟಕ್ಕೆ ಧುಮುಕಿದ್ದೆ. 1990 ಅಕ್ಟೋಬರ್‌ 30ರಂದು ಮಹರಾಷ್ಟ್ರದಿಂದ ಸುಮಾರು 60 ಕಿಮೀ ದೂರ ನಡೆದುಕೊಂಡೇ ಹೋಗಿ ಅಯೋಧ್ಯೆ ತಲುಪಿದ್ದೆ. ಆಗ ಅಲ್ಲಿ ಬಾಬ್ರಿ ಮಸೀದಿಯ ಮೇಲೆ ಕೇಸರಿ ಧ್ವಜ ಬೀಸುವುದನ್ನೂ ಕಂಡಿದ್ದೆ. ಇದನ್ನು ಕಂಡು ನಾನೂ ಕರಸೇವೆಗೆ ಹೊರಟಿದ್ದೆ. ಈ ಸಂದರ್ಭದಲ್ಲಿ ಪೊಲೀಸರು ಚಿತ್ರಹಿಂಸೆ ನೀಡುತ್ತಿದ್ದರು, ಕರಸೇವಕರ ಮೇಲೆ ಗುಂಡು ಹಾರಿಸಿದ್ದರು, ಉತ್ತರ ಪ್ರದೇಶದ ಪೊಲೀಸರು ದಾದರ್‌ನಿಂದ ಮಹಿಳಾ ಕರಸೇವರ ಗುಂಪನ್ನು ಬಂಧಿಸಿತು. ಜೈಲಿನಲ್ಲಿ ಜಾಗ ಸಾಕಾಗದೇ ಶಾಲೆಯೊಂದರಲ್ಲಿ ಬಂಧಿಸಿ ಬೀಗ ಜಡಿದಿದ್ದರು ಎಂದು ಕಹಿ ನೆನಪುಗಳನ್ನು ಬಿಚ್ಚಿಟ್ಟಿದ್ದಾರೆ.

    ಪೊಲೀಸರು ಲಾಠಿಚಾರ್ಜ್‌ ಮಾಡುವ ಜೊತೆಗೆ ಅಶ್ರುವಾಯು ಸಿಡಿಸಿದ್ದರು, ಗುಂಡಿನ ದಾಳಿ ನಡೆಸುತ್ತಿದ್ದಾಗ ನಾನೂ ಸಾಯಬೇಕಿತ್ತು. ಒಂದು ಬುಲೆಟ್‌ ನನ್ನ ಹಿಂದೆ ಹಾದುಹೋಗಿತ್ತು, ಆದ್ರೆ ನನ್ನ ಪಕ್ಕದಲ್ಲಿದ್ದ ವ್ಯಕ್ತಿಗೆ ತಗುಲಿ ಸತ್ತುಹೋದರು. ಕೊನೆಗೆ ಸತತ ಹೋರಾಟದ ಫಲವಾಗಿ ಬಾಬ್ರಿ ಮಸೀದಿ ಕಟ್ಟದ ಧ್ವಂಸವಾಯಿತು. ಅಂತಹ ಸಂದರ್ಭದಲ್ಲಿ ನನಗೆ ವಿಶೇಷ ಮತ್ತು ಅಚ್ಚರಿ ಅನ್ನಿಸಿದ್ದು, ಮುಸ್ಲಿಂ ವ್ಯಕ್ತಿಯ ವರ್ತನೆ. ಮಸೀದಿ ಧ್ವಂಸವಾಗುತ್ತಿದ್ದಂತೆ ಓರ್ವ ಮುಸ್ಲಿಂ ವ್ಯಕ್ತಿ ನನಗೆ ಸಿಹಿ ತಂದುಕೊಟ್ಟಿದ್ದ ಈಗ ನಿಮಗೆ ಬೇಕಾದುದ್ದನ್ನು ನೀವು ಪಡೆದುಕೊಂಡಿದ್ದೀರಿ ಎಂದು ಸಿಹಿ ನೀಡಿದ್ದ. ನಾನು ಸಹ ಅವನಿಗೆ ಸಿಹಿ ನೀಡಬೇಕು ಅಂದುಕೊಂಡಿದ್ದೆ. ಆದ್ರೆ ಮತ್ತೆ ಅವನು ನನಗೆ ಕಾಣಿಸಲೇ ಇಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೊಪ್ಪಳಕ್ಕುಂಟು ಶ್ರೀರಾಮನ ನಂಟು – ರಾಮ, ಆಂಜನೇಯ, ಸುಗ್ರೀವರು ಭೇಟಿಯಾಗಿದ್ದ ಚಂಚಲಕೋಟೆ ಬಗ್ಗೆ ನಿಮ್ಗೆ ಗೊತ್ತಾ?

    ಇಂದು ಶ್ರೀರಾಮ ಅಯೋಧ್ಯೆಗೆ ಬರಳಿ ಬರುತ್ತಿದ್ದಾನೆ, ನನಗೆ ತುಂಬಾ ಸಂತೋಷವಾಗಿದೆ. ರಾಮಮಂದಿರದಿಂದ ಎಲ್ಲವೂ ಒಳ್ಳೆಯದಾಗುತ್ತದೆ, ಎಲ್ಲರಿಗೂ ಪ್ರಯೋಜನವಾಗುತ್ತದೆ. ಇದಕ್ಕೆ ನರೇಂದ್ರ ಮೋದಿ ಸರ್ಕಾರದ ದೊಡ್ಡ ಕೊಡುಗೆ ಇದೆ ಎಂದ ಅವರು, ದುಃಖದ ಸಂಗತಿ ಅಂದರೆ ನನಗೆ ಕೈಕಾಲುಗಳ ಸ್ವಾದೀನ ಮೊದಲಿನಂತಿಲ್ಲ ಎಂದು ಬೇಸರವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 51 ಇಂಚು ಎತ್ತರ, 1.5 ಟನ್ ತೂಕ ಇರಲಿದೆ ಅಯೋಧ್ಯೆ ರಾಮನ ವಿಗ್ರಹ

  • ರಾಮಮಂದಿರಕ್ಕೆ ದೇಣಿಗೆ ಕೊಟ್ಟಿದ್ದೇನೆ, ಆಹ್ವಾನ ಬರದಿದ್ದರೂ ಅಯೋಧ್ಯೆಗೆ ತೆರಳುತ್ತೇನೆ – ಕಾಂಗ್ರೆಸ್‌ ಸಚಿವ

    ರಾಮಮಂದಿರಕ್ಕೆ ದೇಣಿಗೆ ಕೊಟ್ಟಿದ್ದೇನೆ, ಆಹ್ವಾನ ಬರದಿದ್ದರೂ ಅಯೋಧ್ಯೆಗೆ ತೆರಳುತ್ತೇನೆ – ಕಾಂಗ್ರೆಸ್‌ ಸಚಿವ

    – ನಾನೂ ಶ್ರೀರಾಮನ ಭಕ್ತ ಎಂದ ಮಂಕಾಳ ವೈದ್ಯ
    – ಶ್ರೀರಾಮ ಮಂದಿರ ಕಟ್ಟಿದೋರು ನಾವು
    – ಆಮಂತ್ರಣ ನೀಡದಿದ್ರೆ ಶ್ರೀರಾಮ ನೋಡಿಕೊಳ್ತಾನೆ ಎಂದ ಸಚಿವ

    ಕಾರವಾರ: ಅಯೋಧ್ಯೆಯ ಶ್ರೀರಾಮ ಮಂದಿರ (Ram Mandir) ಉದ್ಘಾಟನೆ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡಲು ಮುಂದಾಗಿರುವುದು ಸರಿಯಲ್ಲ. ಬಿಜೆಪಿಯವರಿಗೆ ನಿಜವಾದ ರಾಮಭಕ್ತಿಯಿದ್ದರೆ ಪಕ್ಷಾತೀತವಾಗಿ ಆಹ್ವಾನ ನೀಡಿ ಎಲ್ಲರನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಮಂಕಾಳ ವೈದ್ಯ (Mankala Vaidya) ಒತ್ತಾಯಿಸಿದ್ದಾರೆ.

    ಕಾರವಾರದಲ್ಲಿ (Karwar) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನೂ ಶ್ರೀರಾಮನ ಭಕ್ತ. ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದೇನೆ. ಆಹ್ವಾನ ಬಂದರೂ ಬಾರದಿದ್ದರೂ ಅಯೋಧ್ಯೆಗೆ (Ayodhya) ತೆರಳುತ್ತೇನೆ. ಜ.22ಕ್ಕೆ ಹೋಗಲು ಪ್ರಯತ್ನಿಸುತ್ತಿದ್ದೇನೆ. ಆಗ ಆಗದಿದ್ದರೆ ನಂತರವಾದರೂ ತೆರಳಿ ಶ್ರೀರಾಮನ ದರ್ಶನ ಪಡೆಯುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಯೋಧ್ಯೆಗೆ ಅಕ್ಕಿ, ತರಕಾರಿ, ಸಾಂಬಾರ್ ಪದಾರ್ಥಗಳ ಅರ್ಪಣೆ – ಪ್ರಾಣಪ್ರತಿಷ್ಠೆಗೆ ಶ್ರೀರಾಮ ಭಕ್ತರ ಕಾಣಿಕೆ

    ರಾಮನ ವಿಚಾರವನ್ನು ರಾಜಕೀಯಕ್ಕೆ ಬಳಸಿಕೊಳ್ಳುವವರನ್ನು ರಾಮನೇ ನೋಡಿಕೊಳ್ಳುತ್ತಾನೆ. ನಮಗೆ ಒಳ್ಳೆಯದನ್ನು ಮಾಡುವ ಪ್ರತಿಯೊಬ್ಬರಲ್ಲೂ ದೇವರನ್ನು ಕಾಣುವ ಸಂಸ್ಕೃತಿ ನಮ್ಮದು. ದೇವರ ಹೆಸರಿನಲ್ಲಿ ರಾಜಕೀಯ ಮಾಡುವುದು ಬಿಜೆಪಿಗರ ಸಂಸ್ಕೃತಿ. ದುಡ್ಡು ನಮ್ಮದು ರಾಮಮಂದಿರ ಕಟ್ಟಿದೋರು ನಾವು, ಸರ್ಕಾರದ ದುಡ್ಡು, ಜನರ ದುಡ್ಡು ಇದು. ಆಮಂತ್ರಣ ಪತ್ರ ನೀಡದಿದ್ರೆ ಬಿಜೆಪಿಯವರು ಉದ್ದೇಶಪೂರ್ವಕವಾಗಿ ನಡೆಸ್ತಿದ್ದಾರೆ ಎಂದರ್ಥ, ರಾಮ ನೋಡಿಕೊಳ್ತಾನೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಅಯೋಧ್ಯೆಗೆ ಹೋಗಲು ಹಿಂದೇಟು ಹಾಕ್ತಿದ್ದವರು ಈಗ ಆಹ್ವಾನ ಬಯಸ್ತಿದ್ದಾರೆ: ಯೋಗಿ ಆದಿತ್ಯನಾಥ್‌

  • Ayodhya Ram Mandir – ಶ್ರೀರಾಮಲಲ್ಲಾ ಅಭಿಷೇಕಕ್ಕೆ ನೇಪಾಳದಿಂದ 16 ಪವಿತ್ರ ನದಿಗಳ ನೀರು

    Ayodhya Ram Mandir – ಶ್ರೀರಾಮಲಲ್ಲಾ ಅಭಿಷೇಕಕ್ಕೆ ನೇಪಾಳದಿಂದ 16 ಪವಿತ್ರ ನದಿಗಳ ನೀರು

    ಅಯೋಧ್ಯೆ: 2024ರ ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮಮಂದಿರ (Sri Ram Mandir) ಉದ್ಘಾಟನೆ ನೆರವೇರಲಿದೆ. ಎಲ್ಲೆಲ್ಲೂ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲಿರುವ ರಾಮಲಲ್ಲಾನ ಅಭಿಷೇಕಕ್ಕೆ ನೇಪಾಳದಿಂದ 16 ಪವಿತ್ರ ನದಿಗಳ ನೀರನ್ನು ತರಿಸಲಾಗಿದೆ.

    ಹೌದು. ಜನವರಿ 22 ರಂದು ಅಯೋಧ್ಯೆಯ (Ayodhya) ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುತ್ತದೆ. ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈಗಾಗಲೇ ಪ್ರಾಣ ಪ್ರತಿಷ್ಠಾಪನೆಗಾಗಿ ನೇಪಾಳ ವಿವಿಧ ರೀತಿಯ ಆಭರಣಗಳು, ವಸ್ತುಗಳು, ವಸ್ತ್ರ ಹಾಗೂ ಸಿಹಿ ತಿನಿಸುಗಳು ಸೇರಿ ಹಲವು ಸ್ಮರಣಿಕೆಗಳನ್ನು ಕಳುಹಿಸಲು ಸಜ್ಜಾಗಿದೆ. ಇದರೊಂದಿಗೆ ರಾಮಲಲ್ಲಾನ ಜಲಾಭಿಷೇಕಕ್ಕೆ ನೇಪಾಳದ ಪವಿತ್ರ ನದಿಗಳಿಂದಲೇ (Nepal Rivers Water) ನೀರನ್ನು ತರಿಸಿರುವುದು ವಿಶೇಷ, ಇದಕ್ಕೆ ಕಾರಣವೂ ಇದೆ.

    ನೇಪಾಳ ನದಿಗಳ ನೀರು ಏಕೆ?
    ಅಯೋಧ್ಯೆಗೂ, ನೆರೆಯ ರಾಷ್ಟ್ರ ನೇಪಾಳಕ್ಕೂ ವಿಶೇಷ ಸಂಬಂಧವಿದೆ. ನೇಪಾಳದಲ್ಲಿ ಜನಿಸಿದ ಸೀತಾಮಾತೆಯನ್ನು ಭಗವಾನ್ ಶ್ರೀರಾಮನು ವರಿಸಿದ್ದ. ಅಂದಿನಿಂದ ಭಾರತ-ನೇಪಾಳದ ಸಂಬಂಧವಿದೆ, ಇದನ್ನು ರೋಟಿ-ಭೇಟಿ ಸಂಬಂಧ ಅಂತಲೂ ಕರೆಯುತ್ತಾರೆ. ಈಗ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದ ಗರ್ಭಗುಡಿ ಉದ್ಘಾಟನೆಯಾಗುತ್ತಿದ್ದು ಬಾಲರಾಮನ (Ram Lalla) ಅಭಿಷೇಕಕ್ಕೆ ಸೀತಾಮಾತೆಯ ತವರು ನೇಪಾಳದಿಂದ ಪವಿತ್ರ ನದಿಗಳ ನೀರನ್ನು ತರಿಸಲಾಗಿದೆ ಎಂದು ಸದಸ್ಯರೊಬ್ಬರು ಹೇಳಿದ್ದಾರೆ. ಇದನ್ನೂ ಓದಿ: ಅಯೋಧ್ಯೆಯ 84 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ- ಯೋಗಿ ಸರ್ಕಾರದ ಮಹತ್ವದ ನಿರ್ಧಾರ

    ಸಪ್ತಕೋಶಿ, ನಾರಾಯಿಣಿ, ಮಹಾಕಾಳಿ, ಕಾಳಿ ಗಂಡಕಿ, ಗಂಗಾ ಸಾಗರ್, ಬಾಗ್ಮತಿ, ಕಮಲಾ ನದಿಗಳು ಸೇರಿದಂತೆ 16 ಪವಿತ್ರ ನದಿಗಳ ನೀರನ್ನು ಶ್ರೀರಾಮನ ಅಭಿಷೇಕಕ್ಕಾಗಿ ತರಿಸಲಾಗಿದೆ. ನೇಪಾಳದಲ್ಲಿರುವ ರಾಮಭಕ್ತರ ಸಮಿತಿ ಮೂಲಕ ನೀರನ್ನು ಸಂಗ್ರಹಿಸಿ ಭಾರತಕ್ಕೆ ತರಿಸಲಾಗಿದೆ. ಈ ಜಲವನ್ನು ಅಯೋಧ್ಯಾ ಶ್ರೀರಾಮಜನ್ಮಭೂಮಿ ಟ್ರಸ್ಟ್ ಮುಖ್ಯ ಕಾರ್ಯದರ್ಶಿ ಚಂಪತ್ ರಾಯ್ ಅವರಿಗೆ ಹಸ್ತಾಂತರಿಸುತ್ತೇವೆ. ರಾಮಮಂದಿರ ಗರ್ಭಗುಡಿ ಉದ್ಘಾಟನೆಯ ದಿನ ವಿವಿಧ ಅಭಿಷೇಕಗಳು ನೇರವೇರುವ ಹೊತ್ತಿನಲ್ಲಿ, ಈ ಪವಿತ್ರ ಜಲದಿಂದ ಅಭಿಷೇಕ ನೆರವೇರಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ರೈಲ್ವೇ ನಿಲ್ದಾಣಕ್ಕೆ `ಅಯೋಧ್ಯಾ ಧಾಮ್’ ಎಂದು ಮರುನಾಮಕರಣ- ವಿಶೇಷತೆ ಏನು?

    ಎಲ್ಲಿಂದ ಏನೇನು ಬರುತ್ತೆ?
    * ಜನವರಿ 22 ರಂದು ರಾಮಲಲ್ಲಾ ಪಟ್ಟಾಭಿಷೇಕ ನಡೆಯಲಿದೆ. ಇದಾದ ನಂತರ ದೇವರಿಗೆ ವಿಶೇಷ ನೈವೇದ್ಯ ಸಮರ್ಪಿಸಲಾಗುತ್ತದೆ. ಭಗವಾನ್ ಶ್ರೀರಾಮನ ತಾಯಿಯ (ಕೌಸಲ್ಯೆ) ಮನೆ ಛತ್ತೀಸ್‌ಗಢದಿಂದ 3,000 ಕ್ವಿಂಟಾಲ್ ಅಕ್ಕಿ ಬರುತ್ತಿದೆ. ಇದು ಇಲ್ಲಿಯವರೆಗಿನ ಅತಿ ಹೆಚ್ಚಿನ ಪ್ರಮಾಣದ ಅಕ್ಕಿ ರವಾನೆಯಾಗಿದ್ದು, ಇದು ಅಯೋಧ್ಯೆಗೆ ತಲುಪಲಿದೆ. ಇದನ್ನು ಛತ್ತೀಸ್‌ಗಢದ ವಿವಿಧ ಜಿಲ್ಲೆಗಳಿಂದ ಸಂಗ್ರಹಿಸಲಾಗಿದೆ. ಇದನ್ನೂ ಓದಿ: Ayodhya Ram Mandir: ಅಹಮದಾಬಾದ್‌ ಗ್ರೂಪ್‌ನಿಂದ ಅಯೋಧ್ಯೆಗೆ 450 ಕೆ.ಜಿ ತೂಕದ ಮೆಗಾ ಡ್ರಮ್ ಗಿಫ್ಟ್‌

    * ಜನವರಿ 5 ರಂದು ಭಗವಾನ್ ರಾಮನ ಅತ್ತೆ ಮನೆಯಾದ ನೇಪಾಳದ ಜನಕ್‌ಪುರದಿಂದ ಬಟ್ಟೆ, ಹಣ್ಣುಗಳು ಮತ್ತು ಒಣ ಹಣ್ಣುಗಳು ಅಯೋಧ್ಯೆಗೆ ತಲುಪುತ್ತವೆ. ಇದಲ್ಲದೆ, ಉಡುಗೊರೆಗಳಿಂದ ಅಲಂಕರಿಸಲ್ಪಟ್ಟ 1,100 ಪ್ಲೇಟ್‌ಗಳು ಸಹ ಇರುತ್ತವೆ.

    * ನೇಪಾಳದಿಂದ ಆಭರಣಗಳು, ಪಾತ್ರೆಗಳು, ಬಟ್ಟೆಗಳು ಮತ್ತು ಸಿಹಿತಿಂಡಿಗಳು ಸಹ ಬರಲಿವೆ. ಇದರಲ್ಲಿ 51 ಬಗೆಯ ಸಿಹಿತಿಂಡಿಗಳು ಇರಲಿವೆ. ಜೊತೆಗೆ ಮೊಸರು, ಬೆಣ್ಣೆ ಮತ್ತು ಬೆಳ್ಳಿಯ ಪಾತ್ರೆಗಳು ಸೇರಿವೆ.

  • ಅಯೋಧ್ಯೆಯಲ್ಲಿ ದೀಪದಿಂದ ಎಣ್ಣೆ ಕದ್ದ ಮಕ್ಕಳು; ವೀಡಿಯೋ ಹಂಚಿಕೊಂಡ ಅಖಿಲೇಶ್‌ ಯಾದವ್‌

    ಅಯೋಧ್ಯೆಯಲ್ಲಿ ದೀಪದಿಂದ ಎಣ್ಣೆ ಕದ್ದ ಮಕ್ಕಳು; ವೀಡಿಯೋ ಹಂಚಿಕೊಂಡ ಅಖಿಲೇಶ್‌ ಯಾದವ್‌

    ಲಕ್ನೋ: ಅಯೋಧ್ಯೆಯ (Ayodhya) ಸರಯು ನದಿಯ ತಟದಲ್ಲಿ 22 ಲಕ್ಷ ದೀಪಗಳನ್ನು ಬೆಳಗಿಸಿ ಗಿನ್ನಿಸ್‌ ವರ್ಲ್ಡ್‌ ರೆಕಾರ್ಡ್‌ ಬರೆಯಲಾಗಿದೆ. ಈ ಸ್ಮರಣೀಯ ಸಂದರ್ಭದ ಮರುದಿನವೇ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್‌ ಯಾದವ್‌ (Akhilesh Yadav) ವೀಡಿಯೋವೊಂದನ್ನು ಹಂಚಿಕೊಂಡಿದ್ದು, ಚರ್ಚೆಗೆ ಗ್ರಾಸವಾಗಿದೆ.

    ದೀಪೋತ್ಸವದ (Deepotsava) ದಿನ ಕೆಲವು ಮಕ್ಕಳು ಘಾಟ್‌ನಲ್ಲಿ ದೀಪದಿಂದ ಎಣ್ಣೆಯನ್ನು ತೆಗೆದುಕೊಂಡು ಪಾತ್ರೆಗಳಲ್ಲಿ ತುಂಬುತ್ತಿರುವ ದೃಶ್ಯದ ವೀಡಿಯೋವನ್ನು ಅಖಿಲೇಶ್‌ ಯಾದವ್‌ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: Ayodhya Deepotsav: ಶ್ರೀರಾಮ ಜನ್ಮಭೂಮಿಯಲ್ಲಿ ದೀಪೋತ್ಸವ – ಅಯೋಧ್ಯೆ ಬೆಳಗಿದ 24 ಲಕ್ಷ ಹಣತೆಗಳು

    ದೈವಿಕತೆಯ ನಡುವೆ ಬಡತನ… ಬಡತನವು ದೀಪಗಳಿಂದ ಎಣ್ಣೆಯನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಿದರೆ, ಆಚರಣೆಯ ಬೆಳಕು ಮಂದವಾಗುತ್ತದೆ. ಘಟ್ಟ ಮಾತ್ರವಲ್ಲದೆ ಪ್ರತಿಯೊಬ್ಬ ಬಡವರ ಮನೆಯೂ ಬೆಳಗುವ ಇಂತಹ ಹಬ್ಬ ಬರಲಿ ಎಂಬುದು ನಮ್ಮ ಹಾರೈಕೆ ಎಂದು ಎಸ್‌ಪಿ ಮುಖ್ಯಸ್ಥ ಬರೆದುಕೊಂಡಿದ್ದಾರೆ.

    7ನೇ ಆವೃತ್ತಿಯ ದೀಪೋತ್ಸವದಂದು ಅಯೋಧ್ಯೆಯ ಸರಯೂ ನದಿಯ ದಡದಲ್ಲಿ 22 ಲಕ್ಷಕ್ಕೂ ಹೆಚ್ಚು ಮಣ್ಣಿನ ದೀಪಗಳನ್ನು ಬೆಳಗಿಸಿ ವಿಶ್ವ ದಾಖಲೆ ಬರೆಯಲಾಯಿತು. ಒಟ್ಟು 22.23 ಲಕ್ಷ ಮಣ್ಣಿನ ದೀಪಗಳು ಅಯೋಧ್ಯೆಯನ್ನು ಬೆಳಗಿದವು. ಕಳೆದ ವರ್ಷಕ್ಕಿಂತ 6.47 ಲಕ್ಷ ಹೆಚ್ಚು ಹಣತೆಗಳನ್ನು ಈ ಬಾರಿ ಹಚ್ಚಲಾಗಿತ್ತು. 25,000 ಸ್ವಯಂಸೇವಕರು ನದಿಯ ಉದ್ದಕ್ಕೂ ರಾಮ್ ಕಿ ಪೈಡಿಯ 51 ಘಾಟ್‌ಗಳಲ್ಲಿ ಬೆಳಗಿದರು. ಇದನ್ನೂ ಓದಿ: ಇಂದು ಅಯೋಧ್ಯೆಯಲ್ಲಿ ಅದ್ಧೂರಿ ದೀಪೋತ್ಸವ – ಏಕಕಾಲದಲ್ಲಿ ಬೆಳಗಲಿದೆ 24 ಲಕ್ಷ ಹಣತೆ

    ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ನ ಪ್ರತಿನಿಧಿಗಳು ಡ್ರೋನ್‌ಗಳನ್ನು ಬಳಸಿ ದೀಪಗಳನ್ನು ಎಣಿಸಿ ಅದನ್ನು ವಿಶ್ವ ದಾಖಲೆಯಾಗಿ ನೋಂದಾಯಿಸಿದ ನಂತರ ಅಯೋಧ್ಯೆ ‘ಜೈ ಶ್ರೀರಾಮ್’ ಘೋಷಣೆಗಳೊಂದಿಗೆ ಪ್ರತಿಧ್ವನಿಸಿತು.

  • ಪೇಜಾವರ ಶ್ರೀಗಳಿಂದ ಹರಿಜನ ಕಾಲೋನಿಯಲ್ಲಿ ರಾಮಮಂದಿರಕ್ಕೆ ನಿಧಿ ಸಂಗ್ರಹ

    ಪೇಜಾವರ ಶ್ರೀಗಳಿಂದ ಹರಿಜನ ಕಾಲೋನಿಯಲ್ಲಿ ರಾಮಮಂದಿರಕ್ಕೆ ನಿಧಿ ಸಂಗ್ರಹ

    – ಸಾಮರಸ್ಯಕ್ಕೆ ಮುನ್ನುಡಿ ಬರೆದ ಶ್ರೀಗಳು

    ತುಮಕೂರು: ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‍ನ ವಿಶ್ವಸ್ಥ ಸದಸ್ಯರಾದ ಪೇಜಾವರ ಮಠಾಧೀಶರಾದ ಶ್ರೀ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದಂಗಳವರು, ತುಮಕೂರು ನಗರದ ನರಸಿಂಹರಾಜ ಕಾಲೋನಿ ಮತ್ತು ಅಂಬೇಡ್ಕರ್ ನಗರದಲ್ಲಿ ಮನೆ ಮನೆ ಸಂಪರ್ಕ ಮಾಡಿ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ಭಕ್ತರಿಂದ ನಿಧಿ ಸಂಗ್ರಹ ಮಾಡಿದ್ದಾರೆ.

    ಪೇಜಾವರ ಶ್ರೀಗಳ ಭೇಟಿಯ ಹಿನ್ನೆಲೆಯಲ್ಲಿ ರಸ್ತೆಗಳನ್ನು ಸ್ವಚ್ಛಗೊಳಿಸಿ ತಳಿರು ತೋರಣಗಳಿಂದ ಅಲಂಕರಿಸಲಾಗಿತ್ತು. ಶ್ರೀಗಳಿಗೆ ಅಲ್ಲಿನ ನಿವಾಸಿಗಳು ಪುಷ್ಪಾರ್ಚನೆಯ ಮೂಲಕ ಸ್ವಾಗತಿಸಿದರು. ಪ್ರತಿಯೊಂದು ಮನೆಯಲ್ಲಿಯೂ ಶ್ರೀಗಳಿಗೆ ಫಲಪುಷ್ಪ ನೀಡಿ ರಾಮಮಂದಿರ ನಿರ್ಮಾಣಕ್ಕೆ ನಿಧಿ ನೀಡಿದ್ದಾರೆ.

    ಪೇಜಾವರ ಶ್ರೀಗಳಿಗೆ 10ಕ್ಕೂ ಹೆಚ್ಚು ಮನೆಗಳಲ್ಲಿ ಪಾದಪೂಜೆ ನೆರವೇರಿಸಿ ಶ್ರೀರಾಮ ನಿಧಿ ಸಮರ್ಪಿಸಲಾಯಿತು. ನಂತರ ಶ್ರೀಗಳು ಕೃಷ್ಣರಾಜ ಬಡಾವಣೆಯಲ್ಲಿರುವ ಶ್ರೀ ಕೃಷ್ಣ ಮಠಕ್ಕೆ ತೆರಳಿ ಆಶೀರ್ವಚನ ನೀಡಿ ರಾಮಮಂದಿರ ನಿಧಿ ಸಂಗ್ರಹ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀಗಳು ಶ್ರೀರಾಮನ ಸೇವೆಗಾಗಿ ಶಬರಿ ಮತ್ತು ಗುಹನಂತೆ ಇಲ್ಲಿನ ಭಕ್ತಸಮೂಹ ತಮ್ಮ ಸೇವೆಯನ್ನು ಸಮರ್ಪಿಸಿದ್ದಾರೆ ಎಂದು ಹೇಳಿದ್ದಾರೆ.

    ತದನಂತರ ನಗರದ ಶ್ರೀ ಸಿದ್ದಗಂಗಾ ಮಠದ ಸಂಜೆಯ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಆಶೀರ್ವಚನ ನೀಡಿ, ಡಾ. ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಗದ್ದುಗೆಗೆ ಭೇಟಿ ನೀಡಿದರು. ಮಠಾಧ್ಯಕ್ಷರಾದ ಶ್ರೀ ಶ್ರೀ ಸಿದ್ಧಲಿಂಗ ಸ್ವಾಮೀಜಿಗಳನ್ನು ಭೇಟಿ ಮಾಡಿದರು. ಎರಡು ಮಠಗಳ ಹಿರಿಯ ಸ್ವಾಮೀಜಿಗಳು ನಡೆದುಕೊಂಡು ಬಂದ ದಾರಿಯನ್ನು ನೆನಪಿಸಿಕೊಂಡರು.