Tag: ಶ್ರೀರಾಮು

  • ನಾನೂ ರಾಮಭಕ್ತ, ನನ್ನನ್ನು ಬಂಧಿಸಿ..- ಬಿಜೆಪಿ ನಾಯಕರ ಪ್ರೊಫೈಲ್ ಪಿಕ್ ಚೇಂಜ್

    ನಾನೂ ರಾಮಭಕ್ತ, ನನ್ನನ್ನು ಬಂಧಿಸಿ..- ಬಿಜೆಪಿ ನಾಯಕರ ಪ್ರೊಫೈಲ್ ಪಿಕ್ ಚೇಂಜ್

    ಬೆಂಗಳೂರು: ಹುಬ್ಬಳ್ಳಿಯಲ್ಲಿ ಕರಸೇವಕನ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ (BJP) ನಾಯಕರು ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ.

    ಸದ್ಯ ಸರ್ಕಾರದ ವಿರುದ್ಧ ಕಿಡಿಕಾರಿರುವ ಬಿಜೆಪಿ ನಾಯಕರು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಪ್ರೊಫೈಲ್ ಪಿಕ್ (Profile Pic) ಬದಲಾಯಿಸಿಕೊಂಡಿದ್ದಾರೆ. ನಾನೂ ರಾಮಭಕ್ತ ನನ್ನನ್ನು ಬಂಧಿಸಿ ಸಿದ್ದರಾಮಯ್ಯನವರೇ (Siddaramaiah) ಎಂದು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್ ಆಗಿದೆ. ‌

    ಹುಬ್ಬಳ್ಳಿ ಕರಸೇವಕನ (Hubballi Karasevaka) ಬಂಧನ ಬೆನ್ನಲ್ಲೇ ಈಗ ಸಾಮಾಜಿಕ ಜಾಲತಾಣದಲ್ಲಿ ರಾಮ ಹನುಮ ಪೋಸ್ಟರ್ ಜೊತೆಗೆ ನಾನು ರಾಮಭಕ್ತ ನನ್ನನ್ನು ಬಂಧಿಸಿ ಸಿದ್ದರಾಮಯ್ಯನವರೇ ಅಂತಾ ಪೋಸ್ಟರ್ ವೈರಲ್ ಆಗುತ್ತಿದೆ. ಬಿಜೆಪಿ ಮುಖಂಡರು ಸೇರಿದಂತೆ ಹಿಂದೂ ಸಂಘಟನೆಗಳಿಂದ ಪೋಸ್ಟರ್ ಅಭಿಯಾನ ಆರಂಭವಾಗಿದೆ. ಈ ಮೂಲಕ ಕರಸೇವಕನ ಬಂಧನದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.

    ತಮ್ಮ ಪ್ರೊಫೈಲ್ ಪಿಕ್ ಬದಲಾವಣೆ ಮಾಡಿರುವ ಬಿಜೆಪಿ ನಾಯಕರು ಶ್ರೀರಾಮಚಂದ್ರನ ಫೋಟೋವಿರುವ ಚಿತ್ರವನ್ನು ಹಾಕಿಕೊಂಡಿದ್ದಾರೆ. ಇದನ್ನೂ ಓದಿ: Ram Mandir: ರಾಮಮಂದಿರ ಉದ್ಘಾಟನೆಯಂದು ಇಡೀ ದಿನ ಪ್ರಧಾನಿ ಮೋದಿ ಉಪವಾಸ!

  • ಸೋಂಕಿತರ ಟ್ರಾವೆಲ್ ಹಿಸ್ಟರಿ ಮುಚ್ಚಿಟ್ಟ ಸರ್ಕಾರ- ಪ್ರಶ್ನಿಸಿದಾಗ ನುಣುಚಿಕೊಂಡ ಶ್ರೀರಾಮುಲು

    ಸೋಂಕಿತರ ಟ್ರಾವೆಲ್ ಹಿಸ್ಟರಿ ಮುಚ್ಚಿಟ್ಟ ಸರ್ಕಾರ- ಪ್ರಶ್ನಿಸಿದಾಗ ನುಣುಚಿಕೊಂಡ ಶ್ರೀರಾಮುಲು

    ಬೆಂಗಳೂರು: ಕೊರೊನಾ ಸೋಂಕಿತರ ಟ್ರಾವೆಲ್ ಹಿಸ್ಟರಿಯನ್ನು ರಾಜ್ಯ ಸರ್ಕಾರ ಇಂದು ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಅಲ್ಲಿ ನಮೂದಿಸದೇ ಇರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದೆ.

    ಇಷ್ಟು ದಿನ ಕೊರೊನಾ ವಿಚಾರವಾಗಿ ದಿನಕ್ಕೆ ಎರಡು ಬುಲೆಟಿನ್ ಬಿಡುಗಡೆ ಮಾಡುತ್ತಿದ್ದ ರಾಜ್ಯ ಆರೋಗ್ಯ ಇಲಾಖೆ, ಅದರಲ್ಲಿ ಸೋಂಕಿತರ ಜಿಲ್ಲೆ ಮತ್ತು ಅವರು ಪ್ರಯಾಣ ಮಾಡಿದ ಹಿನ್ನೆಲೆ ಮತ್ತು ಯಾವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿಯನ್ನು ನಮೂದಿಸುತ್ತಿತ್ತು. ಆದರೆ ಇಂದು ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ಕೇವಲ ಜಿಲ್ಲಾವಾರು ಪಟ್ಟಿಯನ್ನು ಮಾತ್ರ ಬಿಡುಗಡೆ ಮಾಡಿದೆ. ಈ ಮೂಲಕ ಸೋಂಕಿತರ ಪ್ರಯಾಣದ ಹಿನ್ನೆಲೆಯನ್ನು ಮುಚ್ಚಿಟ್ಟಿದೆ.

    ಸದ್ಯ ಕರುನಾಡಲ್ಲಿ ಮುಂಬೈ ಕೊರೊನಾ ಬಾಂಬ್ ಸ್ಫೋಟಿಸಿದೆ. ಮುಂಬೈನಿಂದ ರಾಜ್ಯಕ್ಕೆ ವಾಪಸ್ ಬಂದ ಹಲವರಲ್ಲಿ ಕೊರೊನಾ ಪಾಸಿಟಿವ್ ಬಂದಿದೆ. ಇದರಲ್ಲಿ ಕೆಲವರನ್ನು ಮಾತ್ರ ಕ್ವಾರಂಟೈನ್ ಮಾಡಿದ್ದು, ದಾಖಲೆ ಸಲ್ಲಿಸದೇ ಕಳ್ಳಮಾರ್ಗದಲ್ಲಿ ರಾಜ್ಯಕ್ಕೆ ಬಂದವರ ಮಾಹಿತಿ ಸರ್ಕಾರದ ಬಳಿ ಇಲ್ಲ. ಜೊತೆಗೆ ಕೊರೊನಾ ಟೆಸ್ಟ್ ಮಾಡದೇ ಮಹಾರಾಷ್ಟ್ರದಿಂದ ಜನರನ್ನು ರಾಜ್ಯಕ್ಕೆ ಕರೆದುಕೊಂಡು ಬಂದು ಸರ್ಕಾರ ಎಡವಟ್ಟು ಮಾಡಿಕೊಂಡಿದೆ.

    ಈ ವಿಚಾರವಾಗಿ ಪಬ್ಲಿಕ್ ಟಿವಿಯ ಜೊತೆ ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು, ಹೊರರಾಜ್ಯದಿಂದ ದಾಖಲೆ ನೀಡಿ, ನೋಂದಣಿ ಮಾಡಿಸಿಕೊಂಡು ರಾಜ್ಯಕ್ಕೆ ಬಂದವರ ಟ್ರಾವೆಲ್ ಹಿಸ್ಟರಿ ನಮಗೆ ಸಿಕ್ಕಿದೆ. ಆದರೆ ಯಾವುದೇ ದಾಖಲಾತಿ ಮಾಡಿಕೊಳ್ಳದೆ, ನಮಗೆ ತಿಳಿಸದೇ ರಾಜ್ಯಕ್ಕೆ ಬಂದವರ ಪ್ರಯಾಣದ ಹಿನ್ನೆಲೆ ನಮಗೆ ಸಿಕ್ಕಿಲ್ಲ. ಅದೂ ಸ್ವಲ್ಪ ಕಷ್ಟವಾಗುತ್ತಿದೆ. ನಾವು ಅವರ ಟ್ರಾವೆಲ್ ಹಿಸ್ಟರಿ ಕಂಡುಹಿಡಿಯಲು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿ ನುಣುಚಿಕೊಂಡಿದ್ದಾರೆ.