Tag: ಶ್ರೀರಾಮ ಸೇನೆ

  • ನಾನು ಸಹ ನಗರ ನಕ್ಸಲ್ ಬೋರ್ಡ್ ಪ್ರದರ್ಶಿಸಿದ್ದ ಕಾರ್ನಾಡ್ ವಿರುದ್ಧ ದೂರು

    ನಾನು ಸಹ ನಗರ ನಕ್ಸಲ್ ಬೋರ್ಡ್ ಪ್ರದರ್ಶಿಸಿದ್ದ ಕಾರ್ನಾಡ್ ವಿರುದ್ಧ ದೂರು

    ಬೆಂಗಳೂರು: ಗೌರಿ ಸಂಸ್ಮರಣಾ ದಿನದ ಆಚರಣೆ ವೇಳೆ ಸಾಹಿತಿ ಗಿರೀಶ್ ಕಾರ್ನಾಡ್ ಅವರು ನಾನು ಸಹ ನಗರ ನಕ್ಸಲ್ ಎಂಬ ಅಡಿಬರಹವಿದ್ದ ಬೋರ್ಡನ್ನು ಹಾಕಿಕೊಂಡು ಪರೋಕ್ಷವಾಗಿ ನಕ್ಸಲ್ ಚಟುವಟಿಕೆಗಳಿಗೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

    ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಗಿರೀಶ್ ಕಾರ್ನಾಡ್ ಸಾಹಿತಿಯಾಗಿದ್ದುಕೊಂಡು ಹಿಂಸೆಗೆ ಪರೋಕ್ಷವಾಗಿ ಪ್ರಚೋದನೆ ನೀಡುತ್ತಿದ್ದಾರೆ. ಈ ರೀತಿ ಮಾಡುವ ಮೂಲಕ ಅವರು ಉಗ್ರವಾದಿ ವ್ಯಕ್ತಿಗೆ ಸಮನಾಗಿದ್ದಾರೆ. ನಾನು ಒಬ್ಬ ನಕ್ಸಲ್ ಎನ್ನುವ ಹೇಳುವ ಮೂಲಕ ನಕ್ಸಲರಿಗೆ ಪ್ರಚೋದನೆ ನೀಡುತ್ತಿದ್ದಾರೆ. ಒಂದು ವೇಳೆ ಹಿಂದೂ ಸಂಘಟನೆಗಳು ಇಂತಹ ಹೇಳಿಕೆಗಳನ್ನು ನೀಡಿದ್ದರೆ, ಕೂಡಲೇ ಸ್ವಯಂಪ್ರೇರಿತ ಕೇಸ್ ದಾಖಲಿಸುತ್ತಿದ್ದರು ಎಂದು ಕಿಡಿಕಾರಿದರು.

    ಪ್ರಚೋದನೆಗೆ ಹೇಳಿಕೆ ನೀಡುವ ಹೇಳಿಕೆಗಳನ್ನು ನೀಡುತ್ತಿದ್ದರೂ, ಗಿರೀಶ್ ಕಾರ್ನಾಡ್ ವಿರುದ್ಧ ಸುಮೋಟೋ ಕೇಸ್ ಹಾಕಿಲ್ಲ. ನಮಗೊಂದು ಕಾನೂನು, ಅವರಿಗೊಂದು ಕಾನೂನು ಇದೆಯೇ ಎಂದು ಪ್ರಶ್ನಿಸಿದರು. ಅಲ್ಲದೇ ಶೀಘ್ರವೇ ಅವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ, ಕಾರ್ನಾಡ್ ಅವರ ಮನೆ ಮುಂದೆ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದರು.

    ಕಳೆದ ಬುಧವಾರ ಸೆಂಟ್ರಲ್ ಕಾಲೇಜಿನ ಜ್ಞಾನ ಜ್ಯೋತಿ ಸಂಭಾಗಣದಲ್ಲಿ ಗೌರಿ ಡೇ ಆಚರಣೆಯ ಕಾರ್ಯಕ್ರಮದಲ್ಲಿ ಗಿರೀಶ್ ಕಾರ್ನಾಡ್‍ರವರು `ನಾನು ಒಬ್ಬ ನಗರ ನಕ್ಸಲ್’ ಎನ್ನುವ ಬೋರ್ಡ್ ಹಾಕಿಕೊಳ್ಳುವ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಾವಿರಕ್ಕೂ ಅಧಿಕ ಶ್ರೀರಾಮಸೇನೆ ಕಾರ್ಯಕರ್ತರ ಸಾಮೂಹಿಕ ರಾಜೀನಾಮೆ!

    ಸಾವಿರಕ್ಕೂ ಅಧಿಕ ಶ್ರೀರಾಮಸೇನೆ ಕಾರ್ಯಕರ್ತರ ಸಾಮೂಹಿಕ ರಾಜೀನಾಮೆ!

    ಬೆಳಗಾವಿ: ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ನಡೆಗೆ ಬೇಸತ್ತು, ಒಂದು ಸಾವಿರಕ್ಕೂ ಅಧಿಕ ಸೇನಾ ಕಾರ್ಯಕರ್ತರು ನಗರದ ಖಾಸಬಾಗ್ ನಲ್ಲಿರುವ ಸಾಯಿ ಭವನದಲ್ಲಿ ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ.

    ಈ ಕುರಿತು ಮಾತನಾಡಿದ ಶ್ರೀರಾಮ ಸೇನೆಯ ಮಾಜಿ ಜಿಲ್ಲಾಧ್ಯಕ್ಷ ರಮಾಕಾಂತ್ ಕೊಂಡುಸ್ಕರ್ ರವರು, ಶ್ರೀರಾಮ ಸೇನೆಗೆ ಸೇರುವ ಮುನ್ನ ಯಾವುದೇ ರಾಜಕೀಯ ಪಕ್ಷಗಳ ಅಡಿಯಲ್ಲಿ ಕೆಲಸ ಮಾಡಬಾರದೆಂದು ಪ್ರಮಾಣ ಮಾಡಿದ್ದೇವು. ಆದರೆ ಶ್ರೀರಾಮ ಸೇನೆಯ ಮುಖ್ಯಸ್ಥರಾದ ಪ್ರಮೋದ್ ಮುತಾಲಿಕ್‍ರವರು ತಮಗೆ ಬೇಕಾದ ರಾಜಕೀಯ ಪಕ್ಷಗಳಿಗೆ ಬೆಂಬಲ ನೀಡುವಂತೆ ಹೇಳುತ್ತಾರೆ. ಅಲ್ಲದೇ ಬಿಜೆಪಿಯಲ್ಲಿ ಟಿಕೆಟ್ ನೀಡದಿದ್ದಾಗ, ಬಿಜೆಪಿಗೆ ವಿರೋಧ ಮಾಡಿ ಅನ್ನುತ್ತಾರೆ. ಮತ್ತೊಂದು ದಿನ ಅದೇ ಪಕ್ಷಕ್ಕೆ ಬೆಂಬಲ ನೀಡಬೇಕು ಎಂದು ಹೇಳುತ್ತಾರೆ. ಹೀಗಾಗಿ ಅವರ ನಡೆಗೆ ಬೇಸತ್ತು ಸಂಘಟನೆಯಿಂದ ಹೊರಬರಲು ತೀರ್ಮಾನಿಸಿದ್ದೇವೆ ಎಂದು ತಿಳಿಸಿದರು.

    ಪ್ರಮೋದ್ ಮುತಾಲಿಕ್‍ರವರು ಕಾರ್ಯಕರ್ತರನ್ನು ತಮಗೆ ಬೇಕಾದ ಹಾಗೇ ಬಳಕೆ ಮಾಡಿಕೊಂಡು, ಆಮೇಲೆ ಕೈ ಬಿಡುತ್ತಾರೆ. ಹೀಗಾಗಿ ಜಿಲ್ಲೆಯ ಬಹುತೇಕ ಕಾರ್ಯಕರ್ತರು ಇಂದು ಸಾಮೂಹಿಕ ರಾಜೀನಾಮೆ ನೀಡಿದ್ದೇವೆ. ಇನ್ನು ಮುಂದೆ ಶ್ರೀರಾಮಸೇನೆ ಹಿಂದೂಸ್ಥಾನ ಎನ್ನುವ ಹೊಸ ಸಂಘಟನೆಯ ಮೂಲಕ ಕೆಲಸಗಳನ್ನು ಮುಂದುವರಿಸಿಕೊಂಡು ಹೋಗುತ್ತೇವೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಿಜೆಪಿಯವರಿಗೆ ಹಿಂದೂವಾದಿಗಳು ಬೇಕಾಗಿಲ್ಲ: ಪ್ರಮೋದ್ ಮುತಾಲಿಕ್

    ಬಿಜೆಪಿಯವರಿಗೆ ಹಿಂದೂವಾದಿಗಳು ಬೇಕಾಗಿಲ್ಲ: ಪ್ರಮೋದ್ ಮುತಾಲಿಕ್

    ಹಾಸನ: ಬಿಜೆಪಿಯವರಿಗೆ ಹಿಂದೂವಾದಿಗಳು ಬೇಕಾಗಿಲ್ಲ, ಕೇವಲ ಭ್ರಷ್ಟರು, ನೀಚರು ಹಾಗೂ ಕೊಲೆಗಡುಕರು ಬೇಕೆಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಗುಡುಗಿದ್ದಾರೆ.

    ಸಕಲೇಶಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲ್ಲ, ಸದ್ಯದ ರಾಜಕೀಯ ಕುಲಗೆಟ್ಟು ಹೋಗಿದೆ. ಹಿಂದೂಪರ ಪಕ್ಷವೆಂದು ಗುರುತಿಸಿಕೊಂಡಿರುವ ಬಿಜೆಪಿಗೆ ಹಿಂದೂವಾದಿಗಳು ಬೇಕಾಗಿಲ್ಲ. ಕೇವಲ ಅವರಿಗೆ ಎಸ್.ಎಂ.ಕೃಷ್ಣ ಹಾಗೂ ಯೋಗೇಶ್ವರ್ ಅವರಂತಹ ಭ್ರಷ್ಟರು, ನೀಚರು ಹಾಗೂ ಕೊಲೆಗಡುಕರು ಬೇಕಾಗಿದ್ದಾರೆ. ನಮ್ಮಂಥ ಹಿಂದೂವಾದಿಗಳಿಗೆ ಬಿಜೆಪಿಯಲ್ಲಿ ಅವಕಾಶವಿಲ್ಲ. ಹೀಗಾಗಿ ನಾನು ಯಾವುದೇ ಪಕ್ಷಕ್ಕೂ ಸಹ ಹೋಗುವುದಿಲ್ಲವೆಂದು ಹೇಳಿದ್ದಾರೆ.

    ಈ ವೇಳೆ ಮಾಧ್ಯಮಗಳು ಬಸವಣ್ಣ ಹಾಗೂ ವಿವೇಕಾನಂದರ ಸಾವಿನ ಬಗ್ಗೆ ಪ್ರೋ.ಕೆ.ಎಸ್.ಭಗವಾನ್ ವಿವಾದಾತ್ಮಕ ಹೇಳಿಕೆ ವಿಚಾರ ಪ್ರಸ್ತಾಪಿಸಿದಾಗ, ಬಸವಣ್ಣ ಮತ್ತು ವಿವೇಕಾನಂದರ ಕೊಲೆಯಾಗಿದೆ ಅನ್ನೋದು ಹಾಸ್ಯಾಸ್ಪದ ಹಾಗೂ ಮೂರ್ಖತನದ ಹೇಳಿಕೆ. ಅವರು ಭಗವಾನ್ ಅಲ್ಲ ಸೈತಾನಾಗಿರಬೇಕು, ಹಾಗಾಗಿ ಅಂತಹ ಹೇಳಿಕೆಗಳನ್ನು ನೀಡಿದ್ದಾರೆ. ಇಬ್ಬರು ಮಹಾನ್ ವ್ಯಕ್ತಿಗಳ ಬಗ್ಗೆ ಮಾತನಾಡುವ ಯೋಗ್ಯತೆ ಅವರಿಗಿಲ್ಲ. ಅವರು ಶುದ್ಧ ಅಯೋಗ್ಯರು ಎಂದು ಕಿಡಿಕಾರಿದರು.

    ನಂತರ ಮಾತನಾಡಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯಲ್ಲಿ ಶ್ರೀರಾಮ ಸೇನೆ ಅಥವಾ ಹಿಂದೂ ಸಂಘಟನೆಗಳ ಯಾವುದೇ ಪಾತ್ರ ಇಲ್ಲ. ಆದರೂ ತನಿಖೆಯ ದಿಕ್ಕನ್ನು ತಪ್ಪಿಸಲಾಗುತ್ತಿದೆ. ಸರ್ಕಾರಕ್ಕೆ ನಿಜವಾದ ಹಂತಕರು ಬೇಕಿಲ್ಲ, ಕೇವಲ ಹಿಂದೂ ಸಂಘಟನೆಗಳನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ಈ ಬಗ್ಗೆ ನಕ್ಸಲರ ಮೇಲೆ ಸಂಶಯ ಹೊಂದಿದ್ದರೂ, ಆ ನಿಟ್ಟಿನಲ್ಲಿ ತನಿಖೆ ಮಾಡುತ್ತಿಲ್ಲ ಎಂದು ಆರೋಪಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಕ್ರಮ ಬಾಂಗ್ಲಾನಿವಾಸಿಗಳನ್ನು ಗಡಿಪಾರು ಮಾಡಿ: ಶ್ರೀರಾಮ ಸೇನೆ

    ಅಕ್ರಮ ಬಾಂಗ್ಲಾನಿವಾಸಿಗಳನ್ನು ಗಡಿಪಾರು ಮಾಡಿ: ಶ್ರೀರಾಮ ಸೇನೆ

    ಯಾದಗಿರಿ: ದೇಶದಲ್ಲಿರುವ ಅಕ್ರಮ ಬಾಂಗ್ಲಾ ನಿವಾಸಿಗಳನ್ನು ಗಡಿಪಾರು ಮಾಡುವಂತೆ ನಗರದ ಜಿಲ್ಲಾಡಳಿತ ಕಚೇರಿ ಮುಂಭಾಗ ಶ್ರೀರಾಮ ಸೇನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

    ದೇಶದಲ್ಲಿ ಅಕ್ರಮವಾಗಿ ವಾಸವಾಗಿರುವ ಬಾಂಗ್ಲಾ ದೇಶದ ವಲಸಿಗರು ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ, ಕೊಲೆ, ದರೋಡೆ ಸೇರಿದಂತೆ ಇನ್ನಿತರ ಅನೈತಿಕ ಚಟುವಟಿಕೆಗಳಲ್ಲಿ ಹೆಚ್ಚಾಗಿ ಭಾಗಿಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ಅವರನ್ನೆಲ್ಲಾ ಗಡಿ ಪಾರು ಮಾಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.

    ಬೆಂಗಳೂರು ನಗರ ಸೇರಿದಂತೆ ಇತರ ಜಿಲ್ಲೆಯಲ್ಲಿ ಡ್ರಗ್ಸ್ ಮಾಫಿಯಾದಲ್ಲಿ ಬಾಂಗ್ಲಾ ವಲಸಿಗರು ಹೆಚ್ಚಾಗಿ ಗುರುತಿಸಿಕೊಂಡಿದ್ದಾರೆ. ಇಂತಹ ಅಕ್ರಮ ವಲಸಿಗರು ನಮ್ಮ ದೇಶದಲ್ಲಿದ್ದರೆ ನಮ್ಮ ದೇಶಕ್ಕೆ ಅಪಾಯ ಕಟ್ಟಿಟ್ಟ ಬುತ್ತಿ. ಈ ಹಿನ್ನಲೆಯಲ್ಲಿ ಅವರನ್ನು ನಮ್ಮ ರಾಜ್ಯ, ದೇಶದಿಂದ ಹೊರಹಾಕಬೇಕು, ಅವರಿಗೆ ಯಾವುದೇ ಸೌಲಭ್ಯಗಳನ್ನು ನೀಡದೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಕ್ರೋಶ ಹೊರಹಾಕಿದರು.

    ರಾಜ್ಯ ಸರ್ಕಾರ ಬಾಂಗ್ಲಾ ನಿವಾಸಿಗಳಿಗೆ ವೀಸಾ ನೀಡಬಾರದು. ಇನ್ನಷ್ಟು ಜನರನ್ನು ಹಾಳು ಮಾಡುವ ಮುನ್ನ ಅವರನ್ನು ರಾಜ್ಯದಿಂದ ಮತ್ತು ದೇಶದಿಂದ ಗಡಿಪಾರು ಮಾಡಬೇಕೆಂದು ಶ್ರೀರಾಮ ಸೇನೆಯ ಕಾರ್ಯಕರ್ತರು ಪ್ರತಿಭಟನೆ ಮಾಡುವ ಮೂಲಕ ಸರ್ಕಾರಕ್ಕೆ ಒತ್ತಾಯ ಮಾಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ವಾಗ್ಮೋರೆ ಓರ್ವ ಧರ್ಮ ರಕ್ಷಕ – ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕೊಂಡ ಶ್ರೀರಾಮ ಸೇನೆ ಸಂಚಾಲಕ

    ವಾಗ್ಮೋರೆ ಓರ್ವ ಧರ್ಮ ರಕ್ಷಕ – ಫೇಸ್‍ಬುಕ್‍ನಲ್ಲಿ ಪೋಸ್ಟ್ ಹಾಕೊಂಡ ಶ್ರೀರಾಮ ಸೇನೆ ಸಂಚಾಲಕ

    ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಸಿಂಧಗಿ ಪರಶುರಾಮ್ ವಾಗ್ಮೋರೆ ಓರ್ವ ಧರ್ಮ ರಕ್ಷಕ ಅಂತಾ ವಿಜಯಪುರ ಜಿಲ್ಲಾ ಶ್ರೀರಾಮ ಸೇನೆ ಸಂಚಾಲಕ ನೀಲಕಂಠ ಕಂದಗಲ್ ಫೇಸ್‍ಬುಕ್ ಪೇಜಿನಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆಯ ಆರೋಪಿಗಳನ್ನು ಹಿಡಿಯಲು ಸುಳಿವು ನೀಡಿತ್ತು ಕಾಯಿನ್ ಬಾಕ್ಸ್!

    ಫೇಸ್‍ಬುಕ್ ನಲ್ಲಿ ವಾಗ್ಮೋರೆ ಓರ್ವ ಧರ್ಮ ರಕ್ಷಕ ಅಂತಾ ಬರೆದಿರು ಫೋಟೋವನ್ನು ಶ್ರೀರಾಮ ಸೇನೆಯ ಸಂಚಾಲಕ ಹಾಕಿಕೊಂಡಿದ್ದಾರೆ. ಮಾತೃ ಭೂಮಿಯ ರಕ್ಷಣೆಗಾಗಿ ಮುಡುಪಾಗಿದೆ ನನ್ನ ಪ್ರಾಣ. ಧರ್ಮಕ್ಕಾಗಿ ಪ್ರಾಣ ತ್ಯಾಗಕ್ಕೂ ಸಿದ್ಧ. ದೇಶದ್ರೋಹಿಗಳಿಗೆ ಹಾಗು ನಕ್ಸಲರಿಗೆ ಬೆಂಬಲಿಸುವವರನ್ನು ಕೊಲ್ಲುವುದು ತಪ್ಪೇ ಅಂತಾ ಬರೆಯಲಾಗಿದೆ. ಇದನ್ನೂ ಓದಿ: ವಾಗ್ಮೋರೆ ಮೇಲೆ ಎಸ್‍ಐಟಿಗೆ ಅನುಮಾನ ಮೂಡಿದ್ದು ಹೇಗೆ?

    ಪರಶುರಾಮ್ ಬಂಧನವಾದಾಗ ಆತನಿಗೂ ಸೇನೆಗೂ ಯಾವುದೇ ಸಂಬಂಧವಿಲ್ಲ ಎಂದು ಶ್ರೀರಾಮ ಸೇನಾ ಸಂಚಾಲಕ ಪ್ರಮೋದ ಮುತಾಲಿಕ್ ಹೇಳಿದ್ದರು. ಈ ಎಲ್ಲ ಬೆಳವಣಿಗೆ ನಡುವೆ ನೀಲಕಂಠರ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇದನ್ನೂ ಓದಿ: ಗೌರಿ ಹತ್ಯೆ ನಡೆದಿದ್ದು ಹೇಗೆ? – ‘ಆ’ ಆರು ಗುಂಡುಗಳ ಕಥೆ ಇಲ್ಲಿದೆ

     ಇದನ್ನೂ ಓದಿ: ಗೌರಿ ಹತ್ಯೆ ಕೇಸ್: ಆರೋಪಿ ವಾಗ್ಮೋರೆಯಿಂದ ಎಸ್‍ಐಟಿ ತನಿಖೆ ದಾರಿ ತಪ್ಪಿಸೋ ಯತ್ನ!

    https://www.youtube.com/watch?v=AIwNtdKGVGs

    https://www.youtube.com/watch?v=Muzh1bCrCp8

  • ರಾಜಕೀಯ ಸ್ವಾರ್ಥಕ್ಕಾಗಿ ಬಿಜೆಪಿ ಹಿಂದುತ್ವ ಬಳಕೆ ಮಾಡ್ತಿದೆ: ಪ್ರಮೋದ್ ಮುತಾಲಿಕ್

    ರಾಜಕೀಯ ಸ್ವಾರ್ಥಕ್ಕಾಗಿ ಬಿಜೆಪಿ ಹಿಂದುತ್ವ ಬಳಕೆ ಮಾಡ್ತಿದೆ: ಪ್ರಮೋದ್ ಮುತಾಲಿಕ್

    ಚಿಕ್ಕಮಗಳೂರು: ಬಿಜೆಪಿ ತನ್ನ ರಾಜಕೀಯ ಸ್ವಾರ್ಥಕ್ಕಾಗಿ ಹಿಂದುತ್ವವನ್ನು ಬಳಕೆ ಮಾಡುತ್ತಿದೆ. ಗೋರಕ್ಷಣೆ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗೆ ಇಲ್ಲ ಅಂತ ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ವಿಧಾನಸಭಾ ಚುನಾವಣೆಗೆ ಶಿವಸೇನೆ ಜೊತೆ ಶ್ರೀರಾಮಸೇನೆ ಕಣಕ್ಕಿಳಿಯಲಿದೆ. ಒಟ್ಟು 60 ಕ್ಷೇತ್ರಗಳಲ್ಲಿ ಚುನಾವಣೆಗೆ ಸ್ಪರ್ಧೆ ಮಾಡಲಿದ್ದೇವೆ. ನಾನು ಶೃಂಗೇರಿ ಅಥವಾ ತೇರದಾಳ ಕ್ಷೇತ್ರದಿಂದ ಸ್ಪರ್ಧಿಸಲು ಇಚ್ಛಿಸಿದ್ದೇನೆ. ಇನ್ನೆರಡು ದಿನಗಳಲ್ಲಿ ಅಂತಿಮವಾಗುವ ಸಾಧ್ಯತೆಗಳಿವೆ ಅಂತ ಅಂದ್ರು.

    ಇತ್ತ ಜೇವರ್ಗಿ ಕ್ಷೇತ್ರದಿಂದ ಸಿದ್ದಲಿಂಗಸ್ವಾಮೀಜಿ ಸ್ಪರ್ಧೆ ಮಾಡ್ತಿದ್ದಾರೆ. ಈಗಾಗಲೇ ಆಕಾಂಕ್ಷಿಗಳ ಪಟ್ಟಿಯನ್ನು ಮುಂಬೈಗೆ ಕಳುಹಿಸಲಾಗಿದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ರೂ, ಗೋ ಮಾಂಸ ರಫ್ತು ಮಾಡುವ ನಂ.1 ದೇಶವಾಗಿದೆ. ಬಿಜೆಪಿಗೆ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ ಬೆಂಬಲ ನೀಡುವುದಿಲ್ಲ. ಕಾರಣ ಶಿವಸೇನೆಯದ್ದು ಕೂಡ ಹಿಂದುತ್ವ ಪ್ರಮುಖ ಅಜೆಂಡವಾಗಿದೆ ಎಂದು ಮುತಾಲಿಕ್ ಹೇಳಿದ್ರು.

  • ಗಾಂಧಿ-ನೆಹರುವಿನಿಂದಲ್ಲ, ಬಾಂಬ್-ಬಂದೂಕಿನಿಂದ ಸ್ವಾತಂತ್ರ್ಯ ಸಿಕ್ಕಿದೆ- ಪ್ರಮೋದ್ ಮುತಾಲಿಕ್

    ಗಾಂಧಿ-ನೆಹರುವಿನಿಂದಲ್ಲ, ಬಾಂಬ್-ಬಂದೂಕಿನಿಂದ ಸ್ವಾತಂತ್ರ್ಯ ಸಿಕ್ಕಿದೆ- ಪ್ರಮೋದ್ ಮುತಾಲಿಕ್

    ಬಾಗಲಕೋಟೆ: ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ್ದು ಕೇವಲ ಗಾಂಧೀಜಿ, ನೆಹರೂಜಿ ಅವ್ರಿಂದಲ್ಲ, ಬಾಂಬ್-ಬಂದೂಕಿನಿಂದ ಸಿಕ್ಕಿದೆ. ಭಗತ್ ಸಿಂಗ್, ರಾಜ್‍ಗುರು, ಸುಖದೇವ, ಚಂದ್ರಶೇಕರ್ ಆಜಾದ್, ಸಂಗೊಳ್ಳಿ ರಾಯಣ್ಣ, ಕಿತ್ತೂರು ಚನ್ನಮ್ಮ ಅವರಂತಹ ಕಾಂತ್ರಿಕಾರಿಗಳಿಂದ ದೇಶ ಸ್ವಂತಂತ್ರವಾಗಿದೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

    ನಗರದ ವಿದ್ಯಾಗಿರಿಯ 17ನೇ ಕ್ರಾಸ್ ನಲ್ಲಿ, ಡೆಮಾಕ್ರೆಟಿಕ್ ಯೂತ್ ಸೇನಾ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಭಗತ್ ಸಿಂಗ್ ಬಲಿದಾನ್ ದಿವಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಭಗತ್‍ಸಿಂಗ್ ಬಲಿದಾನ ದಿವಸ ಕಾರ್ಯಕ್ರಮಕ್ಕೆ ಅಡ್ಡಿ ಮಾಡುತ್ತಿರುವ ಪಕ್ಷಕ್ಕೆ ನನ್ನ ಧಿಕ್ಕಾರವಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ರು.

    ಇಂತಹ ಕ್ರಾಂತಿಕಾರಿ ಬಲಿದಾನದ ಇವರ ಆಚರಣೆಗೆ ವಿರೋಧ ವ್ಯಕ್ತಪಡಿಸೋದು ದೇಶ ದ್ರೋಹ. ನನ್ನ ಮೇಲೆ 97 ಅಲ್ಲ 107 ಕೇಸ್ ದಾಖಲಾಗಿವೆ. ಇದಕ್ಕೆ ನಾನು ಹೆದರಲ್ಲ. ನನಗ್ಯಾಕೆ ತೊಂದರೆ ಕೊಡುತ್ತಿದ್ದೀರಿ. ನನಗೆ ಮದುವೆಯಿಲ್ಲ, ಮಕ್ಕಳಿಲ್ಲ, ಆಸ್ತಿ ಗಳಿಸಿಲ್ಲ. ಕ್ರಾಂತಿಕಾರಿಗಳ ಹೋರಾಟ, ತ್ಯಾಗವನ್ನು ವ್ಯವಸ್ಥಿತವಾಗಿ ಮುಚ್ಚುಹಾಕಲಾಗಿದೆ ಎಂದು ಗುಡುಗಿದ್ರು.

    ನಮ್ಮ ದೇಶದಲ್ಲಿ ದೇಶಭಕ್ತರಿರಬಾರದು, ಅಂಜುಪುಕಲರು ಇರಬೇಕು. ಢರ್ಪೋಕ್ ಭಾರತೀಯರು, ಬ್ರಿಟಿಷರ ನೋಡಿ ಉಚ್ಚೆ ಹೊಯ್ಕೊಳ್ಳುವಂತಹ ವ್ಯವಸ್ಥೆ ನಿರ್ಮಾಣ ಮಾಡಿದ್ದಾರೆ. ಇಂತಹ ಭಾರತೀಯರಿಗೆ ಧೈರ್ಯ ತುಂಬಲು ಭಗತ್ ಸಿಂಗ್ ಪಾರ್ಲಿಮೆಂಟ್‍ನಲ್ಲಿ ಬಾಂಬ್ ಹಾಕಿದ್ರು ಅಂತ ಮುತಾಲಿಕ್ ಹೇಳಿದ್ರು.

  • ಪ್ರತಿಯೊಬ್ಬ ಹಿಂದೂ ಮನೆಯಲ್ಲಿ ಖಡ್ಗ ಇಟ್ಟುಕೊಳ್ಬೇಕು, ಧರ್ಮ ವಿರೋಧಿಯ ತಲೆ ಕಡೀಬೇಕು- ಹೈದರಾಬಾದ್ ಶಾಸಕ

    ಪ್ರತಿಯೊಬ್ಬ ಹಿಂದೂ ಮನೆಯಲ್ಲಿ ಖಡ್ಗ ಇಟ್ಟುಕೊಳ್ಬೇಕು, ಧರ್ಮ ವಿರೋಧಿಯ ತಲೆ ಕಡೀಬೇಕು- ಹೈದರಾಬಾದ್ ಶಾಸಕ

    ಯಾದಗಿರಿ: ಹಿಂದೂ ವಿರಾಟ್ ಸಮಾವೇಶದಲ್ಲಿ ಹೈದರಾಬಾದ್ ಶಾಸಕ ರಾಜಾ ಸಿಂಗ್ ಪ್ರಚೋದನಕಾರಿ ಭಾಷಣ ಮಾಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ.

    ಶಾಸಕರು ತಮ್ಮ ಭಾಷಣದಲ್ಲಿ ಪ್ರತಿಯೊಬ್ಬ ಹಿಂದೂ ಮನೆಯಲ್ಲಿ ಲಾಠಿ, ಖಡ್ಗ ಇಟ್ಟುಕೊಳ್ಳಬೇಕು. ಸಂದರ್ಭ ಬಂದರೆ ಧರ್ಮ ವಿರೋಧಿಯ ತಲೆ ಕಡಿಯಬೇಕು ಅಂತ ಫರ್ಮಾನ್ ಹೊರಡಿಸಿದ್ದರು. ಶಾಸಕರು ಈ ರೀತಿ ಹೇಳಿಕೆ ಕೊಡುತ್ತಿದ್ದಂತೆಯೇ ನೆರೆದಿದ್ದ ಯುವ ಸಮೂಹ ಕತ್ತಿ ಹಿಡಿದು ಕೇಕೆ ಹಾಕಿದೆ. ಯಾದಗಿರಿ ಪೊಲೀಸರ ಸಮ್ಮುಖದಲ್ಲಿಯೇ ಶಾಸಕರು ಈ ರೀತಿ ಹೇಳಿಕೆ ಕೊಟ್ಟಿರುವುದಕ್ಕೆ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

    ಶ್ರೀರಾಮ ಸೇನಾ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಈ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿ, ದೇಶ ಹಾಗೂ ಧರ್ಮದ ಸುರಕ್ಷತೆಗೋಸ್ಕರ ಪ್ರತಿಯೊಬ್ಬ ಹಿಂದೂವಿನ ಮನೆಯಲ್ಲಿ ಖಡ್ಗ ಇಟ್ಟುಕೊಳ್ಳಬೇಕು ಅಂತ 15 ವರ್ಷಗಳಿಂದ ಹೇಳುತ್ತಾ ಬಂದಿದ್ದೇನೆ. ಕುಡಿದು ಇನ್ಯಾರನ್ನೋ ಹೊಡಿಯೋಕೆ, ಜಾತಿಗಳ ಮಧ್ಯೆ ಕಲಹ ತರಲು ಅಲ್ಲ. ದೇಶದ ಸುರಕ್ಷತೆಯ ಹಿನ್ನೆಲೆಯಲ್ಲಿ ನಾವು ಹೇಳುವುದು ಅಂತ ಹೇಳಿದ್ರು.

    ಈ ದೇಶದಲ್ಲಿ 33 ಲಕ್ಷ ಪೊಲೀಸರಿದ್ದಾರೆ. 13 ಲಕ್ಷ ಮಿಲಿಟರಿ ಇದೆ. ಆದುದರಿಂದ 100 ಕೋಟಿ ಭಾರತೀಯರನ್ನು ಈ ದೇಶದಲ್ಲಿ ಸಂರಕ್ಷಿಸುವುದು ಇವರ ಕಡೆಯಿಂದ ಸಾಧ್ಯವಾಗುವುದಿಲ್ಲ. ಇವತ್ತಲ್ಲ ನಾಳೆ ಈ ದೇಶದಲ್ಲಿ ಆಂತರಿಕ ಗಲಭೆಗಳಾದಾಗ ಈ ಪೊಲೀಸರು ಹಾಗೂ ಮಿಲಿಟರಿಯವರಿಂದ ರಕ್ಷಣೆ ಮಾಡಲು ಸಾಧ್ಯವಿಲ್ಲ. ಒಟ್ಟಿನಲ್ಲಿ ಆ ಕಾರ್ಯಕ್ರಮದಲ್ಲಿ ಏನೂ ಆಗಿಲ್ಲ. ಶಾಂತ ರೀತಿಯಲ್ಲೇ ಈ ಕಾರ್ಯಕ್ರಮ ನಡೆದಿದೆ. ದೇಶದ ಸುರಕ್ಷತೆಗೋಸ್ಕರ ಪ್ರತಿಯೊಬ್ಬ ನಾಗರಿಕ ತಯಾರಾಗಲೇ ಬೇಕಿದೆ ಅಂತ ಹೇಳಿದ್ರು.

    https://www.youtube.com/watch?v=8dbv5Wp6EGc

     

  • ಎಕ್ಸಾಂಗೆಂದು ಕಾರ್ ಬುಕ್ ಮಾಡಿ, ಮಾರ್ಗ ಮಧ್ಯೆಯೇ ಕುತ್ತಿಗೆಗೆ ಹಗ್ಗ ಬಿಗಿದು ಹಿಂದೂ ಕಾರ್ಯಕರ್ತನ ಕೊಲೆಗೈದ್ರು!

    ಎಕ್ಸಾಂಗೆಂದು ಕಾರ್ ಬುಕ್ ಮಾಡಿ, ಮಾರ್ಗ ಮಧ್ಯೆಯೇ ಕುತ್ತಿಗೆಗೆ ಹಗ್ಗ ಬಿಗಿದು ಹಿಂದೂ ಕಾರ್ಯಕರ್ತನ ಕೊಲೆಗೈದ್ರು!

    ಕಲಬುರಗಿ: ಜಿಲ್ಲೆಯ ಜೇವರ್ಗಿ ತಾಲೂಕಿನ ನೇಲೋಗಿ ಗ್ರಾಮದ ಜಮೀನಿನಲ್ಲಿ ಹಿಂದೂ ಕಾರ್ಯಕರ್ತರೊಬ್ಬರನ್ನು ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ ಮಾಡಲಾಗಿದೆ.

    30 ವರ್ಷದ ಶರಣು ಕೊಲೆಯಾದ ಹಿಂದೂ ಕಾರ್ಯಕರ್ತ. ಶರಣು ಕಲಬುರಗಿಯ ಶ್ರೀರಾಮ ಸೇನೆಯಲ್ಲಿ ಸಕ್ರೀಯ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದರು. ಶರಣು ಕಲಬುರಗಿ ನಗರದ ದೇವಿ ಕಾಲೋನಿಯ ನಿವಾಸಿಯಾಗಿದ್ದರು. ಮೂರು ದಿನಗಳ ಹಿಂದೆ ನೆಲೋಗಿ ಗ್ರಾಮದ ಬಸವರಾಜ್ ಗುಜಗೊಂಡ ಎಂಬವರ ಜಮೀನಿನಲ್ಲಿ ಶರಣು ಅವರ ಶವ ಪತ್ತೆಯಾಗಿತ್ತು. ಆದರೆ ಅಂದು ಶವವನ್ನು ಯಾರು ಗುರುತು ಹಿಡಿದಿರಲಿಲ್ಲ. ಇದೀಗ ಇಂದು ಕೊಲೆಯಾದ ಯುವಕನ ಗುರುತು ಪತ್ತೆಯಾಗಿದೆ.

    ಎಕ್ಸಾಂಗೆಂದು ಕಾರ್ ಬುಕ್ ಮಾಡಿದ್ರು: ಶರಣು ನಗರದಲ್ಲಿ ಕಾರ್ ಚಾಲಕರಾಗಿ ಕೆಲಸ ಮಾಡಿಕೊಂಡಿದ್ದರು. ನವೆಂಬರ್ 17ರಂದು ಶರಣು ಬಳಿ ಬಂದು ಮೂವರು ಧಾರವಾಡಕ್ಕೆ ಪರೀಕ್ಷೆಗಾಗಿ ಹೋಗಬೇಕು ಎಂದು ಕಾರ್ ಬುಕ್ ಮಾಡಿದ್ದಾರೆ. ಈ ವೇಳೆ ಮಾರ್ಗ ಮಧ್ಯೆಯೇ ಶರಣು ಕೊಲೆಯಾಗಿದೆ. ಆದರೆ ಶರಣು ಕೊಲೆ ಇದೇ ಕಾರಣಕ್ಕೆ ನಡೆದಿದೆ ಎಂಬುದಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಕಾರ್ ಬುಕ್ ಮಾಡಲು ಬಂದಿದ್ದ ಮೂವರನ್ನು ಸ್ನೇಹಿತರು ಗುರುತು ಹಿಡಿದಿದ್ದಾರೆ ಎಂದು ಹೇಳಲಾಗಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.

    ಮೃತದೇಹ ಪತ್ತೆಯಾದ ಬಳಿಕ ಮಾಧ್ಯಮಗಳಲ್ಲಿ ಮತ್ತು ಪತ್ರಿಕೆಗಳಲ್ಲಿ ಅಪರಿಚಿತ ಶವ ಎಂದು ಸುದ್ದಿ ಪ್ರಸಾರಗೊಂಡಿತ್ತು. ಸುದ್ದಿ ನೀಡಿದ ಕುಟುಂಬಸ್ಥರು ಶರಣು ಮೃತ ದೇಹವನ್ನು ಗುರುತಿಸಿದ್ದಾರೆ. ಶರಣು ಮೃತದೇಹವನ್ನು ಜಿಲ್ಲಾಸ್ಪತ್ರೆಯಲ್ಲಿ ಇರಿಸಲಾಗಿದ್ದು, ಇಂದು ಕುಟುಂಬಸ್ಥರಿಗೆ ಶವವನ್ನು ಹಸ್ತಾಂತರಿಸಲಾಗುವುದು. ಶವಾಗಾರದ ಮುಂದೆ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

    ಈ ಸಂಬಂಧ ನೇಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

     

  • ಶ್ರೀರಾಮಸೇನೆ ಗೌರವಾಧ್ಯಕ್ಷರ ಬಂಧನಕ್ಕೆ ವಿರೋಧ- ಹೊತ್ತಿ ಉರಿದ ಜೇವರ್ಗಿ, ಪೊಲೀಸರ ಮೇಲೆ ಕಲ್ಲು

    ಶ್ರೀರಾಮಸೇನೆ ಗೌರವಾಧ್ಯಕ್ಷರ ಬಂಧನಕ್ಕೆ ವಿರೋಧ- ಹೊತ್ತಿ ಉರಿದ ಜೇವರ್ಗಿ, ಪೊಲೀಸರ ಮೇಲೆ ಕಲ್ಲು

    ಕಲಬುರಗಿ: ಶ್ರೀರಾಮಸೇನೆ ರಾಜ್ಯ ಗೌರವಾಧ್ಯಕ್ಷ ಶ್ರೀ ಸಿದ್ದಲಿಂಗ ಶಿವಚಾರ್ಯ ಸ್ವಾಮೀಜಿ ಬಂಧನ ಖಂಡಿಸಿ ಜೇವರ್ಗಿ ಪಟ್ಟಣದಲ್ಲಿ ಹಿಂದೂ ಕಾರ್ಯಕರ್ತರಿಂದ ಭಾರೀ ಪ್ರತಿಭಟನೆ ನಡೆಸಲಾಯಿತು.

    400ಕ್ಕೂ ಹೆಚ್ಚು ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಉದ್ರಿಕ್ತ ಪ್ರತಿಭಟನಾಕಾರರು ಜೇವರ್ಗಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿ ಪೊಲೀಸರ ವಿರುದ್ಧ ತೀವ್ರ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಘಟನೆ ವೇಳೆ ಸ್ಟೇಷನ್ ಬಜಾರ್ ಠಾಣೆ ಪೇದೆ ವಿಠಲ್ ಮತ್ತು ಶಹಬಾದ ಠಾಣೆ ಪೇದೆ ಹೋಬಳೆಶ ಎಂಬವರು ಗಾಯಗೊಂಡಿದ್ದಾರೆ.

    ಪೊಲೀಸರು ಉದ್ರಿಕ್ತ ಪ್ರತಿಭಟನಾಕಾರರನ್ನು ಚದುರಿಸಲು ಲಘು ಲಾಠಿ ಪ್ರಹಾರ ಕೂಡ ನಡೆಸಿದ್ದಾರೆ. ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಪಟ್ಟಣದಾದ್ಯಂತ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಈಶಾನ್ಯ ವಲಯ ಐಜಿಪಿ ಅಲೋಕ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.