Tag: ಶ್ರೀಲಂಕಾ ಕ್ರಿಕೆಟಿಗ

  • ರಾಜ್ಯದಲ್ಲಿ ಎತ್ತರದ ಗ್ರಾನೈಟ್ ಪೊಲೀಸ್ ಹುತಾತ್ಮ ಸ್ಮಾರಕ ನಿರ್ಮಾಣ – ಮುತ್ತಯ್ಯ ಮುರಳೀಧರನ್ ಕಂಪನಿ ಸಾಥ್

    ರಾಜ್ಯದಲ್ಲಿ ಎತ್ತರದ ಗ್ರಾನೈಟ್ ಪೊಲೀಸ್ ಹುತಾತ್ಮ ಸ್ಮಾರಕ ನಿರ್ಮಾಣ – ಮುತ್ತಯ್ಯ ಮುರಳೀಧರನ್ ಕಂಪನಿ ಸಾಥ್

    ಚಾಮರಾಜನಗರ: ದೇಶದ ಆಂತರಿಕ ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ತ್ಯಾಗ ಬಲಿದಾನಗೈದ ಪೊಲೀಸರನ್ನ ಪ್ರತಿವರ್ಷ ಸ್ಮರಿಸಿ ಗೌರವ ಸಲ್ಲಿಸಲಾಗುತ್ತದೆ. ಇದಕ್ಕಾಗಿ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ (Muttiah Muralitharan) ಚಾಮರಾಜನಗರದಲ್ಲಿ ರಾಜ್ಯದಲ್ಲಿಯೇ ಅತಿ ಎತ್ತರದ ಸ್ಮಾರಕ (Police Martyrs Memorial) ನಿರ್ಮಿಸಿಕೊಡುವ ಮೂಲಕ ಹುತಾತ್ಮ ಪೊಲೀಸರಿಗೆ ಗೌರವ ಸಮರ್ಪಿಸಿದ್ದಾರೆ.

    ಖ್ಯಾತ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ. ಈ ಸ್ಪಿನ್ ಮಾಂತ್ರಿಕ ಕ್ರಿಕೆಟ್ ಜೀವನಕ್ಕೆ ವಿದಾಯ ಹೇಳಿದ ಬಳಿಕ ಶ್ರೀಲಂಕಾದಲ್ಲಿ (Sri Lanka) ಸಿಲೋನ್ ಬೇವರೆಜಸ್ ಕ್ಯಾನ್ ಕಂಪನಿ ಮೂಲಕ ತಂಪು ಪಾನೀಯ ಮತ್ತು ಎನರ್ಜಿ ಡ್ರಿಂಕ್ ಉತ್ಪಾದನಾ ಉದ್ಯಮಕ್ಕೆ ಕೈ ಹಾಕಿ ಯಶಸ್ವಿಯಾಗಿದ್ದಾರೆ.

    ಶ್ರೀಲಂಕಾದ ಯಶಸ್ಸಿನ ಬಳಿಕ ಕರ್ನಾಟಕದಲ್ಲಿ ತಮ್ಮ ಉದ್ದಿಮೆಯ 2ನೇ ಇನ್ನಿಂಗ್ಸ್ ಆರಂಭಿಸಿರುವ ಮುತ್ತಯ್ಯ ಮುರಳೀಧರನ್ ಗಡಿ ಜಿಲ್ಲೆ ಚಾಮರಾಜನಗರ ಜಿಲ್ಲೆ ಕೆಲ್ಲಂಬಳ್ಳಿ ಬದನಗುಪ್ಪೆ ಕೈಗಾರಿಕಾ ಪ್ರದೇಶದಲ್ಲಿ ‌400 ಕೋಟಿ ವೆಚ್ಚದಲ್ಲಿ ಮುತ್ತಯ್ಯ ಬೇವರೇಜ್ ಅಂಡ್ ಕನ್ಫೆಕ್ಷನರಿ ಪ್ರೈವೆಟ್ ಲಿಮಿಟೆಡ್ ಎಂಬ ತಂಪುಪಾನೀಯ ಉದ್ಯಮ ಸ್ಥಾಪಿಸಿ ನೂರಾರು ಜನರಿಗೆ ಉದ್ಯೋಗ ನೀಡಿದ್ದಾರೆ. ಇದೀಗ ರಾಜ್ಯದಲ್ಲೇ ಅತಿ ಎತ್ತರದ ಅಂದರೆ ಸುಮಾರು 27 ಅಡಿಯ ಪೊಲೀಸ್ ಸ್ಮಾರಕ ನಿರ್ಮಿಸಿಕೊಡುವ ಮೂಲಕ ಹುತಾತ್ಮ ಪೊಲೀಸ್ ಸ್ಮರಣೆಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.

    ಉತ್ಕೃಷ್ಟ ದರ್ಜೆಯ ಬ್ಲಾಕ್ ಗ್ರಾನೈಟ್‌‌ನಲ್ಲಿ ಈ ಪೊಲೀಸ್ ಸ್ಮಾರಕ ನಿರ್ಮಿಸಲಾಗಿದ್ದು ಎಲ್ಲರ ಗಮನ ಸೆಳೆಯುತ್ತಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ ನಗರದ ಡಿಎಆರ್ ಗ್ರೌಂಡ್‌‌ನಲ್ಲಿ ಈ ಸುಂದರ ಸ್ಮಾರಕ ನಿರ್ಮಿಸಲಾಗಿದೆ. ಈ ವರ್ಷ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆಯಲ್ಲಿ ಈ ಸ್ಮಾರಕಕ್ಕೆ ಜಿಲ್ಲಾ ನ್ಯಾಯಾಧೀಶರಾದ ಪ್ರಭಾವತಿ ಪುಷ್ಪಗುಚ್ಚವಿರಿಸಿ ಹುತಾತ್ಮ ಪೋಲಿಸರಿಗೆ ಗೌರವ ಸಲ್ಲಿಸುವ ಮೂಲಕ ಸ್ಮಾರಕ ಲೋಕಾರ್ಪಣೆಗೊಳಿಸಿದರು.

    ಒಟ್ಟಿನಲ್ಲಿ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಸದ್ದಿಲ್ಲದೆ ರಾಜ್ಯದಲ್ಲಿ ನೂರಾರು ಉದ್ಯೋಗ ಸೃಷ್ಟಿಸಿರುವುದಲ್ಲದೇ ಸಮಾಜ ಸೇವೆಗೂ ತಮ್ಮ ಸಹಾಯ ಹಸ್ತ ಚಾಚಿರುವುದು ಪ್ರಶಂಸನೀಯವಾಗಿದೆ.

  • ಅತ್ಯಾಚಾರ ಆರೋಪ – ಲಂಕಾ ಕ್ರಿಕೆಟಿಗ ದನುಷ್ಕಾ ಗುಣತಿಲಕ ಸಿಡ್ನಿಯಲ್ಲಿ ಬಂಧನ

    ಅತ್ಯಾಚಾರ ಆರೋಪ – ಲಂಕಾ ಕ್ರಿಕೆಟಿಗ ದನುಷ್ಕಾ ಗುಣತಿಲಕ ಸಿಡ್ನಿಯಲ್ಲಿ ಬಂಧನ

    ಕ್ಯಾನ್‌ಬೆರಾ: ಟಿ20 ವಿಶ್ವಕಪ್‌ನ (T20 World) ಶ್ರೀಲಂಕಾದ (Sri Lanka) ತಂಡದಲ್ಲಿರುವ ಕ್ರಿಕೆಟಿಗ (Cricketer) ದನುಷ್ಕಾ ಗುಣತಿಲಕ (Danushka Gunathilaka) ಅವರನ್ನು ಲೈಂಗಿಕ ದೌರ್ಜನ್ಯದ (Sexual Assault) ಆರೋಪದ ಮೇಲೆ ಆಸ್ಟ್ರೇಲಿಯಾದಲ್ಲಿ (Australia) ಬಂಧಿಸಲಾಗಿದೆ ಎಂದು ಮೂಲಗಳು ಭಾನುವಾರ ತಿಳಿಸಿದೆ.

    ನವೆಂಬರ್ 2 ರಂದು ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ತನಿಖೆಯ ಬಳಿಕ ಗುಣತಿಲಕ (31) ಅವರನ್ನು ಇಂದು ಮುಂಜಾನೆ ಬಂಧಿಸಿ, ಸಿಡ್ನಿ (Sydney) ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

    ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಶ್ರೀಲಂಕಾ ತಂಡ ಸೋತಿದ್ದು, ಟೂರ್ನಿಯಿಂದ ಹೊರಬಿದ್ದಿದೆ. ಇದರ ಬೆನ್ನಲ್ಲೇ ಅತ್ಯಾಚಾರದ ಆರೋಪದಡಿ ಲಂಕಾದ ಕ್ರಿಕೆಟಿಗ ದನುಷ್ಕಾ ಗುಣತಿಲಕ ಅವರನ್ನು ಆಸ್ಟ್ರೇಲಿಯಾದಲ್ಲಿ ಬಂಧಿಸಲಾಗಿದೆ. ಇದೀಗ ಶ್ರೀಲಂಕಾದ ತಂಡ ಗುಣತಿಲಕ ಅವರನ್ನು ಬಿಟ್ಟು, ಆಸ್ಟ್ರೇಲಿಯಾವನ್ನು ತೊರೆದಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಲಂಕಾ ವಿರುದ್ಧ ಜಯ – ಆಸ್ಟ್ರೇಲಿಯಾವನ್ನು ಹೊರದಬ್ಬಿ ಸೆಮಿಸ್‍ಗೆ ಎಂಟ್ರಿಕೊಟ್ಟ ಇಂಗ್ಲೆಂಡ್

    ವರದಿಗಳ ಪ್ರಕಾರ ಸಿಡ್ನಿಯ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪದ ಮೇಲೆ ಗುಣತಿಲಕ ಅವರನ್ನು ಬಂಧಿಸಲಾಗಿದೆ. ಆನ್‌ಲೈನ್ ಡೇಟಿಂಗ್ ಅಪ್ಲಿಕೇಶನ್‌ನಲ್ಲಿ ಹಲವು ದಿನಗಳ ಹಿಂದೆ ಇಬ್ಬರ ಪರಿಚಯವಾಗಿದ್ದು, ನವೆಂಬರ್ 2 ರಂದು ಅವರಿಬ್ಬರು ಭೇಟಿಯಾದ ವೇಳೆ ಲೈಂಗಿಕ ದೌರ್ಜನ್ಯ ನಡೆದಿರುವುದಾಗಿ ಮಹಿಳೆ ಆರೋಪಿಸಿದ್ದಾರೆ. ಇದನ್ನೂ ಓದಿ: ಭಾರತ-ಜಿಂಬಾಬ್ವೆ ಪಂದ್ಯ ಮಳೆಯಿಂದ ರದ್ದಾದರೆ ಯಾರಿಗೆ ಅವಕಾಶ? – ಸೆಮಿಸ್ ಲೆಕ್ಕಾಚಾರ ಹೀಗಿದೆ

    Live Tv
    [brid partner=56869869 player=32851 video=960834 autoplay=true]