Tag: ಶ್ರೀಶೈಲಂ

  • ಹೋಳಿ ಹುಣ್ಣಿಮೆ –   ಶ್ರೀಶೈಲಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದಾರೆ ಭಕ್ತರು

    ಹೋಳಿ ಹುಣ್ಣಿಮೆ – ಶ್ರೀಶೈಲಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದಾರೆ ಭಕ್ತರು

    ಬಾಗಲಕೋಟೆ: ಹೋಳಿ ಹುಣ್ಣಿಮೆ (Holi Hunnime) ಶುರುವಾಗುತ್ತಿದ್ದಂತೆ ಪಾದಯಾತ್ರೆ (Padyatra) ಮೂಲಕ ಶ್ರೀಶೈಲ ಮಲ್ಲಿಕಾರ್ಜುನನ (Sri Shaila Mallikarjuna) ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದೆ.

    ಬೆಳಗಾವಿ, ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆ ಸೇರಿದಂತೆ ಸುಮಾರು ಊರುಗಳಿಂದ ಪಾದಯಾತ್ರೆ ಮೂಲಕ ಹೋಗುವ ಯಾತ್ರಿಗಳು ಬೆಳಿಗ್ಗೆಯಿಂದ ಬಾಗಲಕೋಟೆ ಮಾರ್ಗವಾಗಿ ಶ್ರೀಶೈಲಕ್ಕೆ ತೆರಳುತ್ತಿದ್ದಾರೆ. ಇದನ್ನೂ ಓದಿ: ಕರಾವಳಿಯಲ್ಲಿ ನಿಷೇಧಿತ PFI ಮತ್ತೆ ಆಕ್ಟಿವ್‌? – ಅಕ್ರಮ ಪಿಸ್ತೂಲ್‌ ಮಾರಾಟ ಜಾಲ ಭೇದಿಸಿದ ಪೊಲೀಸರು

     ಶ್ರೀಶೈಲ ಯಾತ್ರಿಗಳು ಹೋಗುವ ರಸ್ತೆಯುದ್ದಕ್ಕೂ ಭಕ್ತರು ಉಚಿತ ಊಟ, ಉಪಹಾರ ಹಾಗೂ ಆರೋಗ್ಯ ಸೇವೆಗಳನ್ನು ಒದಗಿಸುತ್ತಿದ್ದಾರೆ.

    ಬೆಳಿಗ್ಗೆಯಿಯಿಂದ ಪಾದಯಾತ್ರೆ ಮೂಲಕ ಬರುವ ಭಕ್ತ ಗಣಕ್ಕೆ ಜನರು ಹಾಲು, ಹಣ್ಣು, ಜ್ಯೂಸ್, ಸಿಹಿ ತಿಸಿಸು, ಮಜ್ಜಿಗೆ ನೀರು, ಕಲ್ಲಂಗಡಿ, ಈ ರೀತಿಯ ವ್ಯವಸ್ಥೆ ಕಲ್ಪಿಸಿ, ಶ್ರೀಶೈಲ ಮಲ್ಲಿಕಾರ್ಜುನನಿಗೆ ತಮ್ಮ ಭಕ್ತಿ ಪ್ರದರ್ಶಿಸುತ್ತಿದ್ದಾರೆ.

  • ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಪ್ರಾರ್ಥಿಸಿ ಶ್ರೀಶೈಲ ಮಲ್ಲಿಕಾರ್ಜುನ ಮೊರೆ

    ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಪ್ರಾರ್ಥಿಸಿ ಶ್ರೀಶೈಲ ಮಲ್ಲಿಕಾರ್ಜುನ ಮೊರೆ

    ಚಿಕ್ಕೋಡಿ: ಪಂಚಮಸಾಲಿ (Panchamasali) ಸಮಾಜದ 2ಎ ಮೀಸಲಾತಿಗಾಗಿ (2A reservation) ಸಮಾಜದ ಯುವಕರು ಶ್ರೀಶೈಲ (Srisaila) ಮಲ್ಲಿಕಾರ್ಜುನನ ಮೊರೆ ಹೋಗಿದ್ದಾರೆ.

    ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು ಎಂಬ ಹೋರಾಟ ನಡೆಯುತ್ತಿರುವ ಬೆನ್ನಲ್ಲೇ ಮೀಸಲಾತಿಗಾಗಿ ಯುವಕರು ದೇವರ ಮೊರೆ ಹೋಗಿದ್ದಾರೆ. ಇದನ್ನೂ ಓದಿ: ಯುಗಾದಿಯಂದೇ ಕಳ್ಳತನ – ಬಾಗಿಲು ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

    ಆಂಧ್ರ ಪ್ರದೇಶದ ಶ್ರೀಶೈಲ ಮಲ್ಲಿಕಾರ್ಜುನ ಸನ್ನಿಧಿಯಲ್ಲಿ ನಡೆಯುತ್ತಿರುವ ರಥೋತ್ಸವದಲ್ಲಿ ಬಾಳೆ ಹಣ್ಣಿನ ಮೇಲೆ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಸಿಗಲಿ ಎಂದು ಬರೆದು ರಥದ ಮೇಲಿರಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.

    ಬಿಜೆಪಿ (BJP) ಸರ್ಕಾರ ಬಹುಮತದಿಂದ ಅಧಿಕಾರಕ್ಕೆ ಬರಲಿ. ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕೊಟ್ಟ ಪಕ್ಷ ಅಧಿಕಾರಕ್ಕೆ ಬರಲಿ ಎಂದು ಬಾಳೆಹಣ್ಣಿನ ಮೇಲೆ ಬರೆಯಲಾಗಿದೆ. ಇದನ್ನೂ ಓದಿ: ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಾಯಗೊಂಡಿದ್ದ ಆಟೋ ಚಾಲಕನ ಮನೆಗೆ ಬೆಳಕಾದ ಗುರು ಬೆಳದಿಂಗಳು ಟ್ರಸ್ಟ್

  • ಶ್ರೀಶೈಲದಲ್ಲಿ ಮಲಗಿದ್ದ ಕೆಎಸ್‌ಆರ್‌ಟಿಸಿ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ

    ಶ್ರೀಶೈಲದಲ್ಲಿ ಮಲಗಿದ್ದ ಕೆಎಸ್‌ಆರ್‌ಟಿಸಿ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ

    ಬಾಗಲಕೋಟೆ: ಆಂಧ್ರ ಪ್ರದೇಶದ ಪ್ರಸಿದ್ಧ ಯಾತ್ರಾ ಕ್ಷೇತ್ರ ಶ್ರೀಶೈಲದಲ್ಲಿ ಕನ್ನಡಿಗರ ಮೇಲೆ ಮತ್ತೆ ಹಲ್ಲೆ ನಡೆದಿದೆ.

    ಕೆಎಸ್‍ಆರ್‌ಟಿಸಿ ಬಸ್ ಚಾಲಕ ಬಸವರಾಜ್ ಬಿರಾದಾರ್ ಮೇಲೆ  10-12 ಜನರ ಗುಂಪೊಂದು ಹಲ್ಲೆ ಮಾಡಿದೆ.  ಗಾಜು ಪುಡಿ-ಪುಡಿ ಮಾಡಿದ ಕಿಡಿಗೇಡಿಗಳು, ಕಟ್ಟೆಯ ಮೇಲೆ ಮಲಗಿದ್ದ ಬಿರಾದಾರ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ.

    ಅಶ್ಲೀಲವಾಗಿ ನಿಂದಿಸಿ, ಕರ್ನಾಟಕದವನು ಇಲ್ಲೇಕೆ ಇದ್ದೀಯಾ? ಅಂತಲೇ ಬಸ್ ಮೇಲೆ ಕಲ್ಲು ತೂರಿದ್ದಾರೆ. ಪ್ರಶ್ನಿಸಿದ್ದಕ್ಕೆ ನನ್ನ ಮುಖ, ಕಾಲಿಗೆ ಕಲ್ಲಿನಿಂದ ಹೊಡೆದ್ದಾರೆ ಎಂದು ಡ್ರೈವರ್ ಬಸವರಾಜ್ ಹೇಳಿದ್ದಾರೆ. ಇದನ್ನೂ ಓದಿ: ಪಠ್ಯಪುಸ್ತಕ ಪರಿಷ್ಕರಣೆ ವಿವಾದ- ಎಲ್ಲಾ ಆರೋಪಗಳಿಗೆ ಸರ್ಕಾರ ಸ್ಪಷ್ಟನೆ

    ಬಳಿಕ ಸಾರಿಗೆ ನಿಯಂತ್ರಕರಿಗೆ ತಿಳಿಸಿ, ಬಸ್‍ಗಳ ಚಾಲಕರು, ನಿರ್ವಾಹಕರು ಎದ್ದು ಬರುವಷ್ಟರಲ್ಲಿ ದುಷ್ಕರ್ಮಿಗಳು ಕಾಲ್ಕಿತ್ತಿದ್ದಾರೆ. ತೀವ್ರವಾಗಿ ಗಾಯಗೊಂಡ ಬಸವರಾಜ್ ಅವರನ್ನು ಸಮೀಪದ ಸುನ್ನಿಪೇಠ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು,  ಚಿಕಿತ್ಸೆ ಪಡೆದಿದ್ದಾರೆ. ಶ್ರೀಶೈಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    ಈ ಹಿಂದೆ ಯುಗಾದಿ ಸಂದರ್ಭ ಮಾರ್ಚ್ 31 ರಂದು ಕನ್ನಡಿಗರ ಮೇಲೆ ಹಲ್ಲೆ ನಡೆದಿತ್ತು.

  • ಮೊದಲ ಬಾರಿಗೆ ಶ್ರೀಶೈಲ ಖಾಲಿ ಖಾಲಿ – ಯುಗಾದಿ ಜಾತ್ರೆ ರಥೋತ್ಸವ ರದ್ದು

    ಮೊದಲ ಬಾರಿಗೆ ಶ್ರೀಶೈಲ ಖಾಲಿ ಖಾಲಿ – ಯುಗಾದಿ ಜಾತ್ರೆ ರಥೋತ್ಸವ ರದ್ದು

    ರಾಯಚೂರು: ಯುಗಾದಿ ಹಬ್ಬಕ್ಕೆ ಲಕ್ಷಾಂತರ ಸಂಖ್ಯೆಯ ಭಕ್ತರಿಂದ ಕೂಡಿರುತ್ತಿದ್ದ ಆಂಧ್ರಪ್ರದೇಶದ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನ ಈಗ ಕೊರೊನಾ ವೈರಸ್ ಭೀತಿಯಿಂದ ಬಣಗುಡುತ್ತಿದೆ. ಅಲ್ಲದೇ ಇತಿಹಾಸದಲ್ಲೇ ಮೊದಲ ಬಾರಿಗೆ ಯುಗಾದಿ ವೇಳೆ ದೇವಾಲಯ ಖಾಲಿ ಖಾಲಿಯಾಗಿದೆ. ಜೊತೆಗೆ ಜಾತ್ರೆ ರಥೋತ್ಸವ ಕೂಡ ರದ್ದಾಗಿದೆ.

    ರಾಯಚೂರು ಮಾರ್ಗವಾಗಿ ಸಾವಿರಾರು ಜನ ಪಾದಯಾತ್ರೆ ತೆರಳುತ್ತಿದ್ದು, ಯುಗಾದಿ ರಥೋತ್ಸವಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದರು. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಿಂದ ಭಕ್ತರು ಪಾದಯಾತ್ರೆ ಹಾಗೂ ಬಸ್ಸಿನಲ್ಲಿ ತೆರಳುತ್ತಿದ್ದರು. ಆದರೆ ಕೊರೊನಾ ಎಫೆಕ್ಟ್‌ನಿಂದ ಶ್ರೀಶೈಲ ಮಲ್ಲಿಕಾರ್ಜುನ ದೇವಸ್ಥಾನವನ್ನು ಮುಚ್ಚಲಾಗಿದೆ.

    ಕೊರೊನಾ ಭೀತಿ ಹಿನ್ನೆಲೆಯಲ್ಲಿ ಈ ಮೊದಲೇ ಶ್ರೀಶೈಲ ಜಗದ್ಗುರುಗಳು ಜಾತ್ರೆ ಹಾಗೂ ರಥೋತ್ಸವ ರದ್ದಾಗಿರುವುದನ್ನ ಘೋಷಣೆ ಮಾಡಿದ್ದರು. ಆಗ ಸಾವಿರಾರು ಸಂಖ್ಯೆಯಲ್ಲಿ ಪಾದಯಾತ್ರೆ ಹೊರಟಿದ್ದ ಜನ ವಾಪಸ್ ಮನೆಗೆ ಹೋಗಿದ್ದರು. ಅಲ್ಲದೇ ದರ್ಶನಕ್ಕಾಗಿ ಬಂದಿದ್ದ ಸಾವಿರಾರು ಭಕ್ತರು ದರ್ಶನವೂ ಸಿಗದೆ, ವಾಪಸ್ ಬರಲು ಬಸ್ ಸೇರಿದಂತೆ ವಾಹನ ವ್ಯವಸ್ಥೆಯಿಲ್ಲದೆ ಪರದಾಡಿದ್ದಾರೆ. ಈಗ ಯುಗಾದಿ ಹಬ್ಬಕ್ಕೆ ಒಂದು ದಿನ ಬಾಕಿ ಇರುವಾಗಲೇ ಇಡೀ ಶ್ರೀಶೈಲ ಸಂಪೂರ್ಣ ಖಾಲಿ ಖಾಲಿಯಾಗಿದೆ.

    ಜಾತ್ರೆ, ರಥೋತ್ಸವ ರದ್ದಾದ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ದೇವಾಲಯ ಹಾಗೂ ದೇವಾಲಯದ ಸುತ್ತಲಿನ ಪ್ರದೇಶ ಖಾಲಿಯಾಗಿ ಕಾಣುತ್ತಿದೆ. ಶ್ರೀಶೈಲದ ಈಗಿನ ದೃಶ್ಯಗಳು ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಯಾವ ವಾಹನಗಳು, ಜನರ ಓಡಾಟವೂ ಇಲ್ಲದೆ ಶ್ರೀಕ್ಷೇತ್ರ ಸಂಪೂರ್ಣ ಸ್ತಬ್ಧವಾಗಿದೆ.

  • ಶ್ರೀಶೈಲಂನಲ್ಲಿ ರಾಜ್ಯದ ಭಕ್ತರಿಗೆ ಅನ್ಯಾಯ – ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಭಕ್ತರ ಪರದಾಟ

    ಶ್ರೀಶೈಲಂನಲ್ಲಿ ರಾಜ್ಯದ ಭಕ್ತರಿಗೆ ಅನ್ಯಾಯ – ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಭಕ್ತರ ಪರದಾಟ

    ರಾಯಚೂರು: ಶ್ರೀಶೈಲ ಭ್ರಮರಾಂಭ ಮಲ್ಲಿಕಾರ್ಜುನ ದೇವಸ್ಥಾನ ಎಂದರೆ ದೇಶದ ಮೂಲೆ ಮೂಲೆಯಲ್ಲೂ ಭಕ್ತರಿದ್ದಾರೆ. ಆದರೆ ಶ್ರೀಶೈಲದಲ್ಲಿ ಕರ್ನಾಟಕದ ಭಕ್ತರಿಗೆ ಮಾತ್ರ ಅನ್ಯಾಯವಾಗುತ್ತಿದೆ. ಹೀಗಾಗಿ ರಾಯಚೂರಿನ ನೂರಾರು ಭಕ್ತರು ಹೋರಾಟಕ್ಕೆ ಮುಂದಾಗಿದ್ದಾರೆ.

    ಕರ್ನಾಟಕ ಸರ್ಕಾರ ಪರಭಾರೆಯಿರುವ 4 ಎಕರೆ 13 ಗುಂಟೆ ಜಾಗ ಈಗ ಆಂಧ್ರಪ್ರದೇಶ ಪಾಲಾಗುತ್ತಿದೆ. ವೀರೇಂದ್ರ ಪಾಟೀಲ್ ಮುಖ್ಯಮಂತ್ರಿ ಇದ್ದ ಅವಧಿಯಲ್ಲಿ ಕರ್ನಾಟಕ ಭಕ್ತರಿಗಾಗಿ 99 ವರ್ಷ ಕಾಲ ರಾಜ್ಯಕ್ಕೆ ನೀಡಿದ ಭೂಮಿ ರಾಜ್ಯ ಸರ್ಕಾದಿಂದಲೇ ನಿರ್ಲಕ್ಷ್ಯಕ್ಕೊಳಗಾಗಿದೆ. ಹೀಗಾಗಿ ಶ್ರೀಶೈಲಂ ಆಡಳಿತ ಮಂಡಳಿ ಕರ್ನಾಟಕಕ್ಕೆ ಮಾಹಿತಿಯನ್ನು ನೀಡದೆ ಕಟ್ಟಡ ನಿರ್ಮಿಸಿಕೊಳ್ಳುತ್ತಿದ್ದಾರೆ.

    ಶ್ರೀಶೈಲಂನಲ್ಲಿರುವ ಕರ್ನಾಟಕ ಛತ್ರ ಸಂಪೂರ್ಣ ನಿರ್ಲಕ್ಷ್ಯಕ್ಕೊಳಗಾಗಿದ್ದು, ಭಕ್ತರಿಗೆ ಯಾವುದೇ ವ್ಯವಸ್ಥೆ ಇಲ್ಲದಂತಾಗಿದೆ. ರಾಜ್ಯದಿಂದ ತೆರಳುವ ಸಾವಿರಾರು ಭಕ್ತರು ವಸತಿ ವ್ಯವಸ್ಥೆ ಇಲ್ಲದೆ ಶ್ರೀಶೈಲಂನಲ್ಲಿ ಪರದಾಡುತ್ತಿದ್ದಾರೆ. ಹೀಗಾಗಿ ರಾಯಚೂರಿನ ಭಕ್ತರು ಶ್ರೀಶೈಲಂನಲ್ಲಿ ಇಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ರಾಜ್ಯಕ್ಕೆ ನೀಡಿದ ಜಾಗವನ್ನು ಅಭಿವೃದ್ಧಿಪಡಿಸಿ ರಾಜ್ಯದ ಭಕ್ತರಿಗೆ ಸೌಲಭ್ಯ ಕಲ್ಪಿಸಿಕೊಡಲು ಆಗ್ರಹಿಸಿದ್ದಾರೆ.