Tag: ಶ್ರೀಶೈಲಂ ಎಡದಂಡೆ ಕಾಲುವೆ

  • ತೆಲಂಗಾಣ ಸುರಂಗ ಕುಸಿತ – 16 ದಿನಗಳ ಬಳಿಕ ಓರ್ವ ಕಾರ್ಮಿಕನ ಶವ ಪತ್ತೆ

    ತೆಲಂಗಾಣ ಸುರಂಗ ಕುಸಿತ – 16 ದಿನಗಳ ಬಳಿಕ ಓರ್ವ ಕಾರ್ಮಿಕನ ಶವ ಪತ್ತೆ

    -ಮೃತರ ಕುಟುಂಬಸ್ಥರಿಗೆ ತೆಲಂಗಾಣ ಸರ್ಕಾರದಿಂದ 25 ಲಕ್ಷ ರೂ. ಪರಿಹಾರ

    ಹೈದರಬಾದ್: ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (Srisailam Left Bank Canal) ನಿರ್ಮಾಣ ಹಂತದಲ್ಲಿದ್ದ ಸುರಂಗದ ಮೇಲ್ಛಾವಣಿ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ 16 ದಿನಗಳ ಬಳಿಕ ಓರ್ವ ಕಾರ್ಮಿಕನ ಶವ ಪತ್ತೆಯಾಗಿದ್ದು, ಇನ್ನೂ 7 ಕಾರ್ಮಿಕರನ್ನು ಪತ್ತೆಹಚ್ಚಬೇಕಿದೆ.

    ಮೃತ ಕಾರ್ಮಿಕನನ್ನು ಗುರುಪ್ರೀತ್ ಸಿಂಗ್ ಎಂದು ಗುರುತಿಸಲಾಗಿದ್ದು, ಮೃತದೇಹ ಯಂತ್ರದೊಳಗೆ ಸಿಲುಕಿಕೊಂಡಾಗ ಪತ್ತೆಯಾಗಿದೆ. ತೆಲಂಗಾಣ ಸಿಎಂ ಎ.ರೇವಂತ್ ರೆಡ್ಡಿ ಹಾಗೂ ನೀರಾವರಿ ಸಚಿವ ಎನ್ ಉತ್ತಮ್ ಕುಮಾರ್ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಸ್ಥರಿಗೆ 25 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.ಇದನ್ನೂ ಓದಿ: ಚಾಂಪಿಯನ್ಸ್‌ ಟ್ರೋಫಿ ಗೆದ್ದ ಬಳಿಕ ಮೊಹಮ್ಮದ್‌ ಶಮಿ ತಾಯಿಯ ಕಾಲು ಮುಟ್ಟಿ ಆಶೀರ್ವಾದ ಪಡೆದ ಕೊಹ್ಲಿ

    ದೋಮಲಪೆಂಟಾ ಬಳಿಯ ಶ್ರೀಶೈಲಂ ಆಣೆಕಟ್ಟಿನ ಹಿಂಭಾಗದ ಸುರಂಗದಲ್ಲಿ ಸೋರಿಕೆ ಉಂಟಾಗಿದ್ದು, ಸೋರಿಕೆ ಸರಿಪಡಿಸಲು ಕಾರ್ಮಿಕರು ಒಳಗೆ ಹೋದಾಗ ಛಾವಣಿ ಕುಸಿದಿತ್ತು. ಈ ವೇಳೆ 56 ಕಾರ್ಮಿಕರು ಒಳಗೆ ಸಿಲುಕಿದ್ದರು. ಈ ಪೈಕಿ 48 ಜನರನ್ನು ಆರಂಭದಲ್ಲಿಯೇ ರಕ್ಷಿಸಲಾಗಿದ್ದು, 8 ಕಾರ್ಮಿಕರು ಸಿಲುಕಿಕೊಂಡಿದ್ದರು. ಕಾರ್ಮಿಕರನ್ನು ಪತ್ತೆಹಚ್ಚಲು ಕಳೆದ 17 ದಿನಗಳಿಂದ ರಕ್ಷಣಾ ಕಾರ್ಯ ನಡೆಯುತ್ತಿದ್ದು, ಭಾನುವಾರ ಓರ್ವ ಕಾರ್ಮಿಕನ ಶವ ಪತ್ತೆಯಾಗಿದೆ.

    ಫೆ.22 ರಂದು ಸುರಂಗ ಕುಸಿತದ ಬಳಿಕ ಸ್ಥಳದಲ್ಲಿ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಉತ್ತರಾಖಂಡದ ರ‍್ಯಾಟ್ ಮೈನರ್, ಸ್ನಿಫರ್ ನಾಯಿ ಸೇರಿದಂತೆ 300ಕ್ಕೂ ಅಧಿಕ ಸಿಬ್ಬಂದಿ ಜೊತೆಗೂಡಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಕಳೆದ 17 ದಿನಗಳಿಂದ ಹಗಲು, ರಾತ್ರಿ ಕಾರ್ಯಾಚರಣೆ ನಡೆಯುತ್ತಿದೆ.

    ಕಾರ್ಯಾಚರಣೆ ಭರದಿಂದ ಸಾಗುತ್ತಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರ ಎರಡೂ ಅತ್ಯುತ್ತಮ ಪ್ರಯತ್ನ ಮಾಡುತ್ತಿದೆ. ಓರ್ವನ ಮೃತದೇಹ ಪತ್ತೆಯಾದ ಬಳಿಕ ಇನ್ನುಳಿದವರ ರಕ್ಷಣೆಗಾಗಿ ರೋಬೋಟ್ ಬಳಸಲು ರಾಜ್ಯ ಸರ್ಕಾರ ಯೋಜಿಸಿದ್ದು, 4 ಕೋಟಿ ರೂ. ಖರ್ಚು ಮಾಡಲಿದೆ.

    ಇನ್ನೂ ಘಟನಾ ಸ್ಥಳಕ್ಕೆ ತೆಲಂಗಾಣ ಸಿಎಂ ಎ.ರೇವಂತ್ ರೆಡ್ಡಿ ಮಾ.2 ರಂದು ಭೇಟಿ ನೀಡಿದ್ದರು. ಇದೀಗ ಮಾ.11 ರಂದು ಘಟನಾ ಸ್ಥಳಕ್ಕೆ ಇನ್ನೊಮ್ಮೆ ಭೇಟಿ ನೀಡುವ ಮೂಲಕ ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಘಟನೆ ಏನು?
    ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಮೇಲ್ಛಾವಣಿ ಕುಸಿದು 8 ಮಂದಿ ಕಾರ್ಮಿಕರು ಸಿಲುಕಿದ್ದು, ಸುರಂಗ ನಿರ್ಮಾಣ ಕಂಪನಿ ನೀಡಿದ ಮಾಹಿತಿಯ ಪ್ರಕಾರ, ಸುರಂಗದಲ್ಲಿ 12-13 ಕಿ.ಮೀ ಒಳಗೆ ಸೋರಿಕೆ ಉಂಟಾಗಿತ್ತು. ಅದನ್ನು ಸರಿಪಡಿಸಲು ಕಾರ್ಮಿಕರು ಒಳಗೆ ಹೋದಾಗ ಎಡಭಾಗದಲ್ಲಿರುವ ಸುರಂಗದ ಮೇಲ್ಛಾವಣಿ ಮೂರು ಮೀಟರ್‌ಗಳಷ್ಟು ಕುಸಿದಿತ್ತು.ಇದನ್ನೂ ಓದಿ: ಮಹಿಳೆಯರನ್ನು ಬಲವಂತವಾಗಿ ಮತಾಂತರ ಮಾಡಿದ್ರೆ ನೇಣು ಶಿಕ್ಷೆ ಕಾಯ್ದೆ ತರ್ತೀವಿ: ಮ.ಪ್ರದೇಶ ಸಿಎಂ

  • ತೆಲಂಗಾಣ ಸುರಂಗ ಕುಸಿತ – 10 ದಿನ ಕಳೆದ್ರೂ ಸಂಪರ್ಕಕ್ಕೆ ಸಿಗದ 8 ಕಾರ್ಮಿಕರು

    ತೆಲಂಗಾಣ ಸುರಂಗ ಕುಸಿತ – 10 ದಿನ ಕಳೆದ್ರೂ ಸಂಪರ್ಕಕ್ಕೆ ಸಿಗದ 8 ಕಾರ್ಮಿಕರು

    ಹೈದರಾಬಾದ್: ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (Srisailam Left Bank Canal) ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಮೇಲ್ಛಾವಣಿ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ಕಾರ್ಯಾಚರಣೆ ಪ್ರಾರಂಭವಾಗಿ 10 ದಿನ ಕಳೆದರೂ 8 ಕಾರ್ಮಿಕರು ಪತ್ತೆಯಾಗಿಲ್ಲ.

    ದೋಮಲಪೆಂಟಾ ಬಳಿಯ ಶ್ರೀಶೈಲಂ ಆಣೆಕಟ್ಟಿನ ಹಿಂಭಾಗದ ಸುರಂಗದಲ್ಲಿ ಸೋರಿಕೆ ಉಂಟಾಗಿದ್ದು, ಸೋರಿಕೆ ಸರಿಪಡಿಸಲು ಕಾರ್ಮಿಕರು ಒಳಗೆ ಹೋದಾಗ ಛಾವಣಿ ಕುಸಿದಿತ್ತು. ಈ ವೇಳೆ ಕುಸಿತದಲ್ಲಿ 8 ಮಂದಿ ಕಾರ್ಮಿಕರು ಸಿಲುಕಿದ್ದರು. ಈಗಾಗಲೇ 48 ಕಾರ್ಮಿಕರನ್ನು ರಕ್ಷಿಸಲಾಗಿದೆ.ಇದನ್ನೂ ಓದಿ:  ಸಿದ್ದರಾಮಯ್ಯ ಇರೋವರೆಗೂ ಅವರ ಸ್ಥಾನ ಕಿತ್ತುಕೊಳ್ಳುವುದು ಕಷ್ಟ: ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿ

    ಈ ಕುರಿತು ಎನ್‌ಡಿಆರ್‌ಎಫ್ ಕಮಾಂಡೆಂಟ್ ವಿವಿಎನ್ ಪ್ರಸನ್ನ ಕುಮಾರ್ ಮಾತನಾಡಿ, ಸುರಂಗ ಕುಸಿತದ ಸ್ಥಳದಲ್ಲಿ ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಸೇರಿದಂತೆ ಉತ್ತರಾಖಂಡದ ರ‍್ಯಾಟ್ ಮೈನರ್, 300 ಸಿಬ್ಬಂದಿ ಜೊತೆಗೂಡಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ. ಕಳೆದ 10 ದಿನಗಳಿಂದ ಹಗಲು, ರಾತ್ರಿ ಕಾರ್ಯಾಚರಣೆ ನಡೆದಿದ್ದು, ಇಲ್ಲಿಯವರೆಗೂ ಯಾವುದೇ ಕಾರ್ಮಿಕರು ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ.

    ಸದ್ಯ ಕಾರ್ಯಾಚರಣೆ ಭರದಿಂದ ಸಾಗುತ್ತಿದ್ದು, ರಾಜ್ಯ ಮತ್ತು ಕೇಂದ್ರ ಸರ್ಕಾರ ಎರಡೂ ಅತ್ಯುತ್ತಮ ಪ್ರಯತ್ನ ಮಾಡುತ್ತಿದೆ. ಇನ್ನೂ ಹೈದರಾಬಾದ್‌ನ ರಾಷ್ಟ್ರೀಯ ಭೂಭೌತ ಸಂಶೋಧನಾ ಸಂಸ್ಥೆಯ ವಿಜ್ಞಾನಿಗಳು ಸುರಂಗದೊಳಗೆ ನೆಲಕ್ಕೆ ನುಗ್ಗುವ ರಾಡಾರ್ ಸಮೀಕ್ಷೆಯನ್ನು ನಡೆಸಿದ್ದಾರೆ. ಸಮೀಕ್ಷೆ ಬಳಿಕ ಗುರುತಿಸಿದ ಸ್ಥಳಗಳನ್ನು ರಕ್ಷಣಾ ತಂಡಗಳು ಪರಿಶೀಲನೆ ನಡೆಸುತ್ತಿದ್ದಾರೆ.

    ಇನ್ನೂ ಘಟನಾ ಸ್ಥಳಕ್ಕೆ ತೆಲಂಗಾಣ ಸಿಎಂ ಎ.ರೇವಂತ್ ರೆಡ್ಡಿ ಭಾನುವಾರ ಭೇಟಿ ನೀಡಿ, ಸಿಲುಕಿಕೊಂಡಿರುವ ಕಾರ್ಮಿಕರ ಮಾಹಿತಿ ಪಡೆದುಕೊಂಡರು ಮತ್ತು ಸಂತ್ರಸ್ತ ಕುಟುಂಬಗಳಿಗೆ ಸರ್ಕಾರ ಬೆಂಬಲ ನೀಡುವ ಕುರಿತು ತಿಳಿಸಿದರು.

    ಘಟನೆ ಏನು?
    ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಮೇಲ್ಛಾವಣಿ ಕುಸಿದು 8 ಮಂದಿ ಕಾರ್ಮಿಕರು ಸಿಲುಕಿದ್ದು, ಘಟನೆಯಲ್ಲಿ 48 ಕಾರ್ಮಿಕರನ್ನು ರಕ್ಷಿಸಿದ್ದಾರೆ. ಸುರಂಗ ನಿರ್ಮಾಣ ಕಂಪನಿ ನೀಡಿದ ಮಾಹಿತಿಯ ಪ್ರಕಾರ, ಸುರಂಗದಲ್ಲಿ 12-13 ಕಿಮೀ ಒಳಗೆ ಸೋರಿಕೆ ಉಂಟಾಗಿತ್ತು. ಅದನ್ನು ಸರಿಪಡಿಸಲು ಕಾರ್ಮಿಕರು ಒಳಗೆ ಹೋದಾಗ ಎಡಭಾಗದಲ್ಲಿರುವ ಸುರಂಗದ ಮೇಲ್ಛಾವಣಿ ಮೂರು ಮೀಟರ್‌ಗಳಷ್ಟು ಕುಸಿದಿತ್ತು.ಇದನ್ನೂ ಓದಿ: ಹಕ್ಕಿ ಜ್ವರ ಭೀತಿ – ಬಾಗಲಕೋಟೆ ಜಿಲ್ಲಾಡಳಿತದಿಂದ ಸಭೆ

     

     

  • ಶ್ರೀಶೈಲಂ ಎಡದಂಡೆ ಕಾಲುವೆ ಮೇಲ್ಛಾವಣಿ ಕುಸಿತ – ಕಾರ್ಮಿಕರ ರಕ್ಷಣೆಗೆ ಹರಸಾಹಸ

    ಶ್ರೀಶೈಲಂ ಎಡದಂಡೆ ಕಾಲುವೆ ಮೇಲ್ಛಾವಣಿ ಕುಸಿತ – ಕಾರ್ಮಿಕರ ರಕ್ಷಣೆಗೆ ಹರಸಾಹಸ

    ಹೈದರಾಬಾದ್: ತೆಲಂಗಾಣದ ನಾಗರ್‌ಕರ್ನೂಲ್ (Nagarkurnool) ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (Srisailam Left Bank Canal) ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಮೇಲ್ಛಾವಣಿ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

    ದೋಮಲಪೆಂಟಾ ಬಳಿಯ ಶ್ರೀಶೈಲಂ ಅಣೆಕಟ್ಟಿನ ಹಿಂಭಾಗದ ಸುರಂಗದಲ್ಲಿ ಸೋರಿಕೆ ಉಂಟಾಗಿದ್ದು, ಸೋರಿಕೆ ಸರಿಪಡಿಸಲು ಕಾರ್ಮಿಕರು ಒಳಗೆ ಹೋದಾಗ ಛಾವಣಿ ಕುಸಿದಿತ್ತು. ಈ ವೇಳೆ ಕುಸಿತದಲ್ಲಿ 8 ಮಂದಿ ಕಾರ್ಮಿಕರು ಸಿಲುಕಿದ್ದು, ಈಗಾಗಲೇ 48 ಕಾರ್ಮಿಕರನ್ನು ರಕ್ಷಿಸಲಾಗಿದೆ.ಇದನ್ನೂ ಓದಿ: ತಲೆ ಬುರುಡೆ ಛಿದ್ರ, ಕಿವಿ ಕಟ್ – 56 ಕಡೆ ಕೊಚ್ಚಿ ಕಾಂಗ್ರೆಸ್ ಮುಖಂಡನ ಭೀಕರ ಹತ್ಯೆ

    ಈ ಕುರಿತು ಎನ್‌ಡಿಆರ್‌ಎಫ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ಕುಸಿತದಿಂದಾಗಿ ಸುರಂಗದ ಪ್ರವೇಶದ್ವಾರ ಮುಚ್ಚಿಕೊಂಡಿದ್ದು, ಪರ್ಯಾಯ ಸುರಂಗ ಮಾರ್ಗದ ಮೂಲಕ ಕಾರ್ಮಿಕರನ್ನು ರಕ್ಷಿಸಲು ಚಿಂತಿಸಲಾಗಿದೆ. ಸದ್ಯ ಸ್ಥಳಕ್ಕೆ ಸುರಂಗ ಕೊರೆಯುವ ಯಂತ್ರಗಳನ್ನು ಕರೆತರಲಾಗಿದ್ದು, ಇನ್ನಷ್ಟು ಯಂತ್ರಗಳನ್ನು ತರಲು ಸಿದ್ಧತೆ ನಡೆಸಿದೆ ಅಧಿಕಾರಿಯೊಬ್ಬರು ಮಾಹಿತಿ ನಿಡಿದ್ದಾರೆ.

    ರಕ್ಷಣಾ ತಂಡವು ಭಾನುವಾರ ರಾತ್ರಿ ಲೋಕೋಮೋಟಿವ್‌ನ ಸಹಾಯದಿಂದ 11 ಕಿ.ಮೀ ಹಾಗೂ ಕನ್ವೇಯರ್ ಬೆಲ್ಟ್ನ ನೆರವಿನಿಂದ 2 ಕಿ.ಮೀ ಕ್ರಮಿಸಿದ್ದೇವೆ. ಈ ವೇಳೆ ಕಾರ್ಮಿಕರ ಹೆಸರಿನಿಂದ ಕೂಗಿದ್ದು, ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ. ಇನ್ನೂ ಸುರಂಗದ ಕೊನೆಯ 2 ಕಿ.ಮೀ ಪ್ರದೇಶವು ನೀರಿನಿಂದ ತುಂಬಿದ್ದು, ಅದನ್ನು ಸ್ವಚ್ಛಗೊಳಿಸಿದ ಬಳಿಕ ಮುಂದೆ ಸಾಗಲು ಸಾಧ್ಯವಾಗುತ್ತದೆ ಎಂದು ಮಾಹಿತಿ ನೀಡಿದರು.

    ಸದ್ಯ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತರುವ ಉದ್ದೇಶದೊಂದಿಗೆ ವಿಪತ್ತು ನಿರ್ವಹಣಾ ಪಡೆಗಳು ಕಾರ್ಯನಿರ್ವಹಿಸುತ್ತಿದ್ದು, ಸುರಂಗದೊಳಗೆ ಸಿಲುಕಿರುವವರನ್ನು ಹೊರತರುವುದು ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಂಡಗಳಿಗೆ ಸವಾಲಾಗಿ ಪರಿಣಮಿಸಿದೆ.

    ಸುರಂಗದ ಒಳಗಿನ ಸ್ಥಳಕ್ಕೆ ಹೋಗಲು ಯಾವುದೇ ಅವಕಾಶವಿಲ್ಲ. ಅದು ಸಂಪೂರ್ಣವಾಗಿ ಕುಸಿದಿದ್ದು, ಮಣ್ಣು ತುಂಬಿಕೊಂಡಿದೆ. ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಮತ್ತು ಇತರ ರಕ್ಷಣಾ ತಂಡಗಳು, ಸಿಂಗರೇಣಿ ಕಾಲಿಯರೀಸ್‌ನ ಅಧಿಕಾರಿಗಳು ಕುಸಿದು ಬಿದ್ದ ಭಾಗದ ಸುರಂಗವನ್ನು ಪರಿಶೀಲಿಸಿದ್ದು, ಮುಂದಿನ ಕಾರ್ಯಾಚರಣೆಗೆ ಯೋಜನೆ ರೂಪಿಸುವತ್ತ ಗಮನ ಹರಿಸಿದ್ದಾರೆ.

    ಘಟನೆ ಏನು?
    ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಮೇಲ್ಛಾವಣಿ ಕುಸಿದು 8 ಮಂದಿ ಕಾರ್ಮಿಕರು ಸಿಲುಕಿದ್ದು, ಘಟನೆಯಲ್ಲಿ 48 ಕಾರ್ಮಿಕರನ್ನು ರಕ್ಷಿಸಿದ್ದಾರೆ. ಸುರಂಗ ನಿರ್ಮಾಣ ಕಂಪನಿ ನೀಡಿದ ಮಾಹಿತಿಯ ಪ್ರಕಾರ, ಸುರಂಗದಲ್ಲಿ 12-13 ಕಿಮೀ ಒಳಗೆ ಸೋರಿಕೆ ಉಂಟಾಗಿತ್ತು. ಅದನ್ನು ಸರಿಪಡಿಸಲು ಕಾರ್ಮಿಕರು ಒಳಗೆ ಹೋದಾಗ ಎಡಭಾಗದಲ್ಲಿರುವ ಸುರಂಗದ ಮೇಲ್ಛಾವಣಿ ಮೂರು ಮೀಟರ್‌ಗಳಷ್ಟು ಕುಸಿದಿತ್ತು.ಇದನ್ನೂ ಓದಿ: ಕಲಬುರಗಿ | ಜಿಮ್ಸ್ ಆಸ್ಪತ್ರೆಯ ವೈದ್ಯರ ಎಡವಟ್ಟು – ಬಾಣಂತಿ ಹೊಟ್ಟೆಯಲ್ಲೇ ಬಟ್ಟೆ ಉಂಡೆ, ಹತ್ತಿ ಬಿಟ್ಟು ಹೊಲಿಗೆ

  • ತೆಲಂಗಾಣದ ಶ್ರೀಶೈಲಂ ಎಡದಂಡೆ ಕಾಲುವೆ ಮೇಲ್ಛಾವಣಿ ಕುಸಿತ – 8 ಮಂದಿ ಸಿಲುಕಿರುವ ಶಂಕೆ, 48 ಕಾರ್ಮಿಕರ ರಕ್ಷಣೆ

    ತೆಲಂಗಾಣದ ಶ್ರೀಶೈಲಂ ಎಡದಂಡೆ ಕಾಲುವೆ ಮೇಲ್ಛಾವಣಿ ಕುಸಿತ – 8 ಮಂದಿ ಸಿಲುಕಿರುವ ಶಂಕೆ, 48 ಕಾರ್ಮಿಕರ ರಕ್ಷಣೆ

    ಹೈದರಾಬಾದ್: ತೆಲಂಗಾಣದ ನಾಗರ್‌ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (SLBC) ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಮೇಲ್ಛಾವಣಿ ಕುಸಿದು (Tunnel Collapses) ಕನಿಷ್ಠ 8 ಮಂದಿ ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ 48 ಕಾರ್ಮಿಕರನ್ನು ರಕ್ಷಿಸಲಾಗಿದೆ.

    ನಾಗರ್‌ಕರ್ನೂಲ್ (Nagarkurnool) ಜಿಲ್ಲೆಯ ಅಮ್ರಾಬಾದ್‌ನಿಂದ ಸುರಂಗ ನಿರ್ಮಾಣವಾಗುತ್ತಿದೆ. ದೋಮಲಪೆಂಟಾ ಬಳಿಯ ಶ್ರೀಶೈಲಂ ಅಣೆಕಟ್ಟಿನ ಹಿಂಭಾಗದ ಸುರಂಗದಲ್ಲಿ ಸೋರಿಕೆ ಉಂಟಾಗಿದ್ದು, ಸೋರಿಕೆ ಸರಿಪಡಿಸಲು ಕಾರ್ಮಿಕರು ಒಳಗೆ ಹೋದಾಗ ಛಾವಣಿ ಕುಸಿದಿದೆ. ಈ ಪೈಕಿ ಮೂವರು ತಪ್ಪಿಸಿಕೊಂಡಿದ್ದು, ಕನಿಷ್ಠ 8 ಮಂದಿ ಸುರಂಗದಲ್ಲಿ ಸಿಲುಕಿರುವ ಶಂಕೆಯಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿರುವುದಾಗಿ ವರದಿಗಳು ತಿಳಿಸಿವೆ.

    ಸದ್ಯ ಸುರಂಗ ನಿರ್ಮಾಣ ಕಂಪನಿ ನೀಡಿದ ಮಾಹಿತಿಯ ಪ್ರಕಾರ, ಸುರಂಗದಲ್ಲಿ 12-13 ಕಿಮೀ ಒಳಗೆ ಸೋರಿಕೆ ಉಂಟಾಗಿತ್ತು. ಅದನ್ನು ಸರಿಪಡಿಸಲು ಕಾರ್ಮಿಕರು ಒಳಗೆ ಹೋದಾಗ ಎಡಭಾಗದಲ್ಲಿರುವ ಸುರಂಗದ ಮೇಲ್ಛಾವಣಿ ಮೂರು ಮೀಟರ್‌ಗಳಷ್ಟು ಕುಸಿದಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಬಾಡಿಗೆ, ಲೀಸ್‌ ಪಡೆಯುವ ಮುನ್ನ ಎಚ್ಚರವಾಗಿರಿ – 50ಕ್ಕೂ ಹೆಚ್ಚು ಮಂದಿಗೆ ಕೋಟ್ಯಂತರ ರೂ. ವಂಚನೆ

    ಘಟನೆ ಕುರಿತು ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ (Revanth Reddy) ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದು, ಆಘಾತ ವ್ಯಕ್ತಪಡಿಸಿದ್ದಾರೆ. ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದಾರೆ. ಆದ್ರೆ ಈಗಲೇ ನಿಖರವಾದ ಅಂಕಿ-ಅಂಶ ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಹಾ ಕುಂಭಮೇಳ ಅಂತ್ಯಕ್ಕೆ 4 ದಿನ ಬಾಕಿ – ಮಹಾಶಿವರಾತ್ರಿ ಹಿನ್ನೆಲೆ ಪುಣ್ಯಸ್ನಾನಕ್ಕೆ ಆಗಮಿಸುತ್ತಿರುವ ಭಕ್ತಕೋಟಿ

    ಜೊತೆಗೆ ಜಿಲ್ಲಾಧಿಕಾರಿ, ಎಸ್ಪಿ, ಅಗ್ನಿಶಾಮಕ ದಳ, ಜಲಮಂಡಳಿ ಮತ್ತು ನೀರಾವರಿ ಇಲಾಖೆ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಪರಿಹಾರ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಸಿಎಂ ಸೂಚನೆ ಬೆನ್ನಲ್ಲೇ ನೀರಾವರಿ ಸಚಿವ ಎನ್ ಉತ್ತಮ್ ಕುಮಾರ್ ಹಾಗೂ ನೀರಾವರಿ ಇಲಾಖೆಯ ಇತರ ಅಧಿಕಾರಿಗಳು ವಿಶೇಷ ಹೆಲಿಕಾಪ್ಟರ್‌ನಲ್ಲಿ ಘಟನಾ ಸ್ಥಳಕ್ಕೆ ತೆರಳಿದ್ದಾರೆ. ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಇದನ್ನೂ ಓದಿ: ಕಿಡಿಗೇಡಿಗಳು ಒಣಹುಲ್ಲಿಗೆ ಬೆಂಕಿ ಹಚ್ಚಿದ್ದರಿಂದ ಚಾಮುಂಡಿಬೆಟ್ಟದಲ್ಲಿ 35 ಎಕ್ರೆ ಅರಣ್ಯ ನಾಶವಾಗಿದೆ: ಡಿಸಿಎಫ್