Tag: ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

  • ಶಾಲಾ ಪಠ್ಯದಲ್ಲಿ ಭಗವದ್ಗೀತೆ, ರಾಮಾಯಣ ಸೇರ್ಪಡೆ – ಸ್ವಾಮೀಜಿಗಳಿಗೆ ಜವಾಬ್ದಾರಿ ನೀಡಲು ಸರ್ಕಾರ ಚಿಂತನೆ

    ಶಾಲಾ ಪಠ್ಯದಲ್ಲಿ ಭಗವದ್ಗೀತೆ, ರಾಮಾಯಣ ಸೇರ್ಪಡೆ – ಸ್ವಾಮೀಜಿಗಳಿಗೆ ಜವಾಬ್ದಾರಿ ನೀಡಲು ಸರ್ಕಾರ ಚಿಂತನೆ

    ಬೆಂಗಳೂರು: ಶಾಲಾ (School) ಪಠ್ಯದಲ್ಲಿ ಭಗವದ್ಗೀತೆ, ರಾಮಾಯಣ ಸೇರ್ಪಡೆಗೆ ಸಿದ್ಧತೆ ಪ್ರಾರಂಭವಾಗಿದ್ದು, ಅದಕ್ಕಾಗಿ ನೈತಿಕ ಶಿಕ್ಷಣ ಪಠ್ಯ ಸಮಿತಿ ರಚನೆಗೆ ಸರ್ಕಾರ (Government Of Karnataka) ಮುಂದಾಗಿದೆ. ನಾಡಿನ ಪ್ರಮುಖ ಸ್ವಾಮೀಜಿಗಳ ನೇತೃತ್ವದಲ್ಲಿ ಸಮಿತಿ ರಚನೆಯಾಗಲಿದೆ. ನೈತಿಕ ಶಿಕ್ಷಣದ ಪಠ್ಯ ಹೇಗೆ ಇರಬೇಕು? ಅಂತ ಶ್ರೀಗಳು ಪಠ್ಯ ಸಿದ್ಧ ಮಾಡಲಿದ್ದಾರೆ.

    ನೈತಿಕ ಶಿಕ್ಷಣದ ಪಠ್ಯ ಸಿದ್ಧತೆಗೆ ನಾಡಿನ ಶ್ರೇಷ್ಠ ಸ್ವಾಮೀಜಿಗಳಿಗೆ ಜವಾಬ್ದಾರಿ ನೀಡಲು ಸರ್ಕಾರದ ಚಿಂತನೆ ನಡೆಸಿದೆ. ಸುತ್ತೂರು (Shivaratri Deshikendra Swamiji), ಆದಿಚುಂಚನಗಿರಿ, ಸಿದ್ದಗಂಗಾ ಶ್ರೀಗಳು ಸಮಿತಿಯಲ್ಲಿ ಇರಲಿದ್ದಾರೆ. ಸಮಿತಿ ರಚನೆ ಬಗ್ಗೆ ಶಿಕ್ಷಣ ಇಲಾಖೆ ಧರ್ಮಗುರುಗಳು, ಶ್ರೀಗಳೊಂದಿಗೆ ಪ್ರಾಥಮಿಕ ಹಂತದ ಚರ್ಚೆ ನಡೆಸುತ್ತಿದೆ. ಎಲ್ಲವೂ ಅಂದುಕೊಂಡಂತೆ ಆದರೆ ಶೀಘ್ರವೇ ಶ್ರೀಗಳ ನೇತೃತ್ವದಲ್ಲಿ ನೈತಿಕ ಶಿಕ್ಷಣ ಪಠ್ಯ ಸಮಿತಿ ರಚನೆ ಆಗಲಿದೆ. ಇದನ್ನೂ ಓದಿ: ಕಾಂಗ್ರೆಸ್ ವಿಸರ್ಜಿಸುವ ಬಾಪು ಕನಸು ನನಸಾಗುವ ಸಮಯ ಬಂದಿದೆ: ಯೋಗಿ ಆದಿತ್ಯನಾಥ್

    ನೈತಿಕ ಶಿಕ್ಷಣ ಪಠ್ಯದ ಸಮಿತಿಯ ಕೆಲಸ ಏನು?
    ಈ ಸಮಿತಿ ನೈತಿಕ ಶಿಕ್ಷಣ ಪಠ್ಯ ಹೇಗಿರಬೇಕು ಅಂತಾ ನಿರ್ಧಾರ ಮಾಡಲಿದೆ. ಯಾವ ಪಠ್ಯ ಸೇರ್ಪಡೆ ಮಾಡಬೇಕು? ಯಾರ ಪಠ್ಯ ಸೇರ್ಪಡೆ ಮಾಡಬೇಕು? ಎಂಬುದನ್ನ ನಿರ್ಧರಿಸಲಿದೆ. ರಾಮಾಯಣ, ಮಹಾಭಾರತ, ಭಗವದ್ಗೀತೆ ಸೇರಿದಂತೆ ಯಾವ-ಯಾವ ಮಹಾ ದಾರ್ಶನಿಕ ಗ್ರಂಥಗಳು ಪಠ್ಯದಲ್ಲಿ ಸೇರ್ಪಡೆ ಮಾಡಬೇಕು ಅಂತಾ ಸಮಿತಿ ನಿರ್ಧಾರ ಮಾಡಲಿದೆ. ಪಂಚತಂತ್ರ ಕಥೆಗಳು, ದಾರ್ಶನಿಕರ ಜೀವನ ಚರಿತ್ರೆ, ಅವರು ಆಚರಿಸಿಕೊಂಡು ಬಂದ ನೈತಿಕ ಮೌಲ್ಯಗಳ ಕುರಿತು ಪಠ್ಯ ರಚನೆಯಾಗಲಿದೆ. ಇದನ್ನೂ ಓದಿ: ಪ್ರಧಾನಿ ಪಕ್ಕ ಕುಳಿತು ಬಿಜೆಪಿಯನ್ನು ಹಾಡಿ ಹೊಗಳಿದ ಬಾಲಕಿ – ಶಭಾಶ್ ಅಂದ ಮೋದಿ

    ವಿದ್ಯಾರ್ಥಿಗಳು ಉತ್ತಮ ಜೀವನ ರೂಪಿಸಿಕೊಳ್ಳಲು ಅಗತ್ಯವಾದ ಮೌಲ್ಯಾಧಾರಿತ ನೀತಿಕಥೆಗಳನ್ನ ಪಠ್ಯದಲ್ಲಿ ಸೇರ್ಪಡೆ ಮಾಡುವುದು. ಗುರು-ಹಿರಿಯ ಭಕ್ತಿ, ಸಂಸ್ಕಾರ, ಆಚಾರ-ವಿಚಾರಗಳು, ಸತ್ಯ, ಶಾಂತಿ, ಪ್ರೀತಿ ವಿಶ್ವಾಸಗಳ ಬಗ್ಗೆ ಮಕ್ಕಳಿಗೆ ಪಾಠ ಹೇಳುವ ಕಥೆಗಳು, ವ್ಯಕ್ತಿಗಳ ಜೀವನಾಧಾರಿತ ಪಠ್ಯಗಳ ಸೇರ್ಪಡೆಗೆ ಸಮಿತಿ ಅಗತ್ಯವಾದ ಕ್ರಮ ಕೈಗೊಳ್ಳಲಿದೆ.

    Live Tv
    [brid partner=56869869 player=32851 video=960834 autoplay=true]

  • ಗುಂಬಜ್ ಗುದ್ದಾಟಕ್ಕೆ ಟ್ವಿಸ್ಟ್ – ಬಸ್‌ನಿಲ್ದಾಣದ ಜಾಗ ನಮ್ಮದು, ತೆರವು ಮಾಡಿ ಎಂದ NHAI

    ಗುಂಬಜ್ ಗುದ್ದಾಟಕ್ಕೆ ಟ್ವಿಸ್ಟ್ – ಬಸ್‌ನಿಲ್ದಾಣದ ಜಾಗ ನಮ್ಮದು, ತೆರವು ಮಾಡಿ ಎಂದ NHAI

    ಮೈಸೂರು: ಮೈಸೂರಿನ ಗುಂಬಜ್ ಶೈಲಿಯ ಬಸ್ ನಿಲ್ದಾಣ ವಿವಾದ (Mysuru Bus Stand Controversy) ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಈಗ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಕೂಡ ಎಂಟ್ರಿ ಕೊಟ್ಟಿದೆ.

    ನಿಯಮ ಪ್ರಕಾರವೇ ಬಸ್ ನಿಲ್ದಾಣ ನಿರ್ಮಿಸಲಾಗಿದೆ. ತಾವುಗಳು ಬಸ್ ನಿಲ್ದಾಣದ ಪರಿಶೀಲನೆಗೆ ಸಮಿತಿ ಕಳಿಸಿಕೊಡಬೇಕು ಎಂದು ರಾಮದಾಸ್ (SA Ramadas) ಮನವಿ ಮಾಡಿದ್ದಾರೆ. ಆದರೆ ವಿವಾದಿತ ಬಸ್ ನಿಲ್ದಾಣ ನಮ್ಮ ಜಾಗದಲ್ಲಿದೆ. ಇದಕ್ಕೆ ನಮ್ಮ ಅನುಮತಿಯನ್ನೇ ಪಡೆದಿಲ್ಲ. ಹೀಗಾಗಿ ಇದು ಅನಧಿಕೃತ. ಹೀಗಾಗಿ ಏಳು ದಿನದಲ್ಲಿ ತೆರವು ಮಾಡಿ ಎಂದು ಕೆಆರ್‌ಐಡಿಎಲ್‌ (KRIDL) ಗೆ ನೋಟಿಸ್ ನೀಡಿದೆ. ಇದನ್ನೂ ಓದಿ: ಪೊಲೀಸ್ ವಿಚಾರಣೆಗೆ ಹೆದರಿ 3 ವರ್ಷದ ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಟೆಕ್ಕಿ

    ಗುಂಬಜ್ ತೆರವು ಮಾಡುವಂತೆ ಸಂಸದ ಪ್ರತಾಪ್ ಸಿಂಹ (Pratap Simha) ನೀಡಿದ್ದ ಡೆಡ್‌ಲೈನ್ ನಾಳೆಗೆ ಮುಗಿಯಲಿದೆ. ಈ ಹೊತ್ತಲ್ಲೇ ಕಳೆದ ರಾತ್ರಿ, ಗುಂಬಜ್ ಶೈಲಿಯ ಬಸ್ ನಿಲ್ದಾಣದಲ್ಲಿ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ (Basavaraj Bommai), ಸುತ್ತೂರು ಶ್ರೀಗಳ (Shivaratri Deshikendra Swamiji) ಫೋಟೋ ಅಳವಡಿಸಲಾಗಿದೆ. ಇದಕ್ಕೆ ಜೆಎಸ್‌ಎಸ್ (JSS) ಬಸ್ ನಿಲ್ದಾಣ ಅಂತಲೂ ಹೆಸರಿಡಲಾಗಿದೆ. ಇದನ್ನೂ ಓದಿ: ಮೋರ್ಬಿ ದುರಂತ: 1 ಲಕ್ಷ ರೂ. ದಂಡ ಪಾವತಿಸಿ – ಪುರಸಭೆ ವಿರುದ್ಧ ಹೈಕೋರ್ಟ್ ಗರಂ

    ಈ ಮೂಲಕ ಪಕ್ಷ, ಧರ್ಮ ಮುಂದೆ ಬಿಟ್ಟು ಬಸ್ ನಿಲ್ದಾಣದ ಗುಂಬಜ್ ರಕ್ಷಿಸುವುದರ ಜೊತೆಗೆ ಸವಾಲು ಹಾಕಿದ್ದ ಸಂಸದರನ್ನು ಪೇಚಿಗೆ ಸಿಲುಕಿಸುವ ಪ್ರಯತ್ನಗಳು ನಡೆದಿವೆ. ಈ ಚರ್ಚೆಗಳ ಮಧ್ಯೆ ಕೃಷ್ಣರಾಜ ಕ್ಷೇತ್ರದ ಶಾಸಕ ಎಸ್.ಎ ರಾಮದಾಸ್ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ವಿವಾದದ ಕುರಿತಾಗಿ ವಿವರಣೆ ನೀಡಿದ್ದಾರೆ. ಅಂದ ಹಾಗೇ, ಈ ಗುಂಬಜ್ ಗುದ್ದಾಟಕ್ಕೆ ಎಸ್.ಎ ರಾಮದಾಸ್ ಮತ್ತು ಸಂಸದ ಪ್ರತಾಪ್ ಸಿಂಹ ನಡುವಿನ ತಿಕ್ಕಾಟವೇ ಕಾರಣ ಎನ್ನಲಾಗುತ್ತಿದೆ. ಧರ್ಮದ ನೆಪದಲ್ಲಿ ಇಬ್ಬರ ನಡುವೆ ಪ್ರತಿಷ್ಠೆಯ ಕಾಳಗ ಏರ್ಪಟ್ಟಿದೆ.

    ಗುಂಬಜ್ ಗುದ್ದಾಟ.. ರಾಮ್‌ದಾಸ್ ವಾದ ಏನು?
    ಅರಮನೆ ವಿನ್ಯಾಸದಲ್ಲಿ ಈ ನಿಲ್ದಾಣ ನಿರ್ಮಾಣ ಮಾಡಲಾಗಿದೆ. ಇದರ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ, ಶೇ.60 ಕಾಮಗಾರಿ ಮಾತ್ರ ಮುಗಿದಿದೆ. ಶೇ.40ರಷ್ಟು ಕಾಮಗಾರಿ ಬಾಕಿ ಇದೆ. ಆದರೆ, ಇದನ್ನು ತಪ್ಪಾಗಿ ಅರ್ಥೈಸಲಾಗುತ್ತಿದೆ. ಮಸೀದಿ ಶೈಲಿ, ಮುಸ್ಲಿಂ ಗುತ್ತಿಗೆದಾರ ಎಂದು ಸುಳ್ಳು ಹಬ್ಬಿಸಲಾಗುತ್ತಿದೆ. ಪೊಲೀಸ್ ಆಯುಕ್ತರಿಗೆ ಪತ್ರ ಮುಖೇನ ದೂರು ನೀಡಿದ್ದೇನೆ. ಮೈಸೂರಿನಲ್ಲಿ ಇದೇ ಶೈಲಿಯಲ್ಲಿ ಹಲವು ನಿಲ್ದಾಣಗಳಿವೆ. ಇದರ ಗುತ್ತಿಗೆದಾರ ಮಹದೇವ್, ದಂತಿ ಕನ್ಸ್ಟ್ರಕ್ಷನ್ಸ್ ಹೆಸರಿನಲ್ಲಿ ನಿರ್ಮಾಣ ಮಾಡಲಾಗಿದೆ. ಸಂಸದರ ಹೇಳಿಕೆ ನಂತರ ಕಳಶ ಅಳವಡಿಕೆ ಎನ್ನುವುದು ಸುಳ್ಳು. ಒಂದು ವಾರದ ಹಿಂದೆಯೇ ಇದನ್ನು ಅಳವಡಿಸಲಾಗಿದೆ. ಈ ನಿಲ್ದಾಣವನ್ನು ಪಾರಂಪರಿಕ ದೃಷ್ಟಿಯಿಂದ ನಿರ್ಮಿಸಲಾಗುತ್ತಿದೆ. ಇದನ್ನು ಯಾವುದೇ ಧರ್ಮದ ಆಧಾರದ ಮೇಲೆ ನಿರ್ಮಿಸುತ್ತಿಲ್ಲ. ಈ ವಿನ್ಯಾಸವನ್ನು ವಿವಾದ ಎಂದು ಪರಿಗಣಿಸಿದಲ್ಲಿ ತಜ್ಞರ ಸಮಿತಿ ರಚನೆ ಆಗಲಿ, ತಜ್ಞರ ವರದಿಯಲ್ಲಿ ತಪ್ಪಿದೆ ಎಂದು ತಿಳಿದಲ್ಲಿ ಬದಲಾಯಿಸಿ.. ನಮ್ಮ ಅಭ್ಯಂತರವೇನಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]