Tag: ಶ್ರೀ ಸಿದ್ದಲಿಂಗ ಸ್ವಾಮೀಜಿ

  • ಚುನಾವಣೆ ವ್ಯವಸ್ಥೆಯೇ ಹದಗೆಟ್ಟು ಹೋಗಿದೆ: ಸಿದ್ದಲಿಂಗ ಸ್ವಾಮೀಜಿ

    ಚುನಾವಣೆ ವ್ಯವಸ್ಥೆಯೇ ಹದಗೆಟ್ಟು ಹೋಗಿದೆ: ಸಿದ್ದಲಿಂಗ ಸ್ವಾಮೀಜಿ

    ಮಡಿಕೇರಿ: ಇಂದಿನ ದಿನಗಳಲ್ಲಿ ಚುನಾವಣೆ ವ್ಯವಸ್ಥೆಯೇ ಹದಗೆಟ್ಟು ಹೋಗಿದೆ. ಹಣವಿಲ್ಲದೆ ಏನೂ ಇಲ್ಲ ಎನ್ನುವಂತಾಗಿದೆ ಎಂದು ತುಮಕೂರು ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ವಿಷಾದ ವ್ಯಕ್ತಪಡಿಸಿದರು.

    ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತಾನಾಡಿದ ಅವರು, ಗ್ರಾಮ ಪಂಚಾಯತಿ ಚುನಾವಣೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದರು. ಪ್ರಜಾಪ್ರಭುತ್ವ ಬೇರು ಮಟ್ಟದಲ್ಲಿ ಭದ್ರಗೊಳ್ಳಬೇಕೆಂದು ಗ್ರಾಮಪಂಚಾಯಿತಿ ಚುನಾವಣೆ ಮಾಡಲಾಗುತ್ತದೆ. ಆದರೆ ಹಣವಿಲ್ಲದೆ ಗೆದ್ದವರು ಯಾರಿದ್ದಾರೆ? ಮತದಾರರೇ ಭ್ರಷ್ಟರಾದರೆ ಭ್ರಷ್ಟಾಚಾರಕ್ಕೆ ಕಡಿವಾಣವೆಲ್ಲಿ ಎಂದು ಪ್ರಶ್ನಿಸಿದರು.

    ಜಿಲ್ಲಾ, ತಾಲೂಕು ಪಂಚಾಯಿತಿಗಿಂತ ಗ್ರಾಮ ಪಂಚಾಯಿತಿ ಚುನಾವಣೆಗೆ ಪೈಪೋಟಿ ಹೆಚ್ಚಿದೆ. ಈ ಬಾರಿ ಅನುದಾನ ಹೆಚ್ಚು ಬರುತದೆ ಎಂದು ತಾಲೂಕು, ಜಿಲ್ಲಾ ಪಂಚಾಯತಿ ಚುನಾವಣೆಗೆ ಸ್ಪರ್ಧೆ ಮಾಡುವವರಿಗಿಂತ ಗ್ರಾಮ ಪಂಚಾಯಿತಿ ಚುನಾವಣೆಗೆ ಬರುವವರ ಸಂಖ್ಯೆ ಹೆಚ್ಚಾಗಿದೆ ಎಂದರು.

    ಪ್ರಧಾನಿ ಮೋದಿಯವರ ಆಶಯದಂತೆ ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಗೆ ಬರಬೇಕು. ಆಗ ರಾಷ್ಟ್ರದ ಸಾಕಷ್ಟು ಹಣ ಉಳಿತಾಯವಾಗುತ್ತದೆ ಎಂದು ಕಾರ್ಯಕ್ರಮದಲ್ಲಿ ಶ್ರೀ ಸಿದ್ದಲಿಂಗ ಸ್ವಾಮೀಜಿ ಹೇಳಿದರು.

  • ಎರಡು ತಿಂಗಳಿಂದ ರೇಷನ್ ಬಂದಿಲ್ಲ- ಸಿದ್ದಗಂಗಾ ಶ್ರೀ ಸ್ಪಷ್ಟನೆ

    ಎರಡು ತಿಂಗಳಿಂದ ರೇಷನ್ ಬಂದಿಲ್ಲ- ಸಿದ್ದಗಂಗಾ ಶ್ರೀ ಸ್ಪಷ್ಟನೆ

    ತುಮಕೂರು: ಮಠಕ್ಕೆ ಪೂರೈಕೆ ಆಗುತ್ತಿದ್ದ ಅಕ್ಕಿ ಹಾಗೂ ಗೋಧಿ ಎರಡು ತಿಂಗಳಿಂದ ಬಂದಿಲ್ಲ ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ ಸ್ವಾಮೀಜಿಗಳು, ಮಠಕ್ಕೆ ಪೂರೈಕೆಯಾಗುತ್ತಿದ್ದ ರೇಷನ್ ಎಷ್ಟು ಬಳಕೆಯಾಗುತ್ತಿದೆ ಎಂಬ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ಕೇಳಿತ್ತು. ಅದರಂತೆ ನಾವು ಸೂಕ್ತ ದಾಖಲೆ, ಮಾಹಿತಿ ಸಲ್ಲಿಸಿದ್ದೇವೆ. ಆದರೆ ಕೆಲ ಸಂಸ್ಥೆಗಳು ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸರ್ಕಾರ ಅಕ್ಕಿ ಹಾಗೂ ಗೋಧಿ ವಿತರಣೆಯನ್ನು ನಿಲ್ಲಿಸಿರಬಹುದು. ಮುಂದಿನ ದಿನಗಳಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ರೇಷನ್ ಪೂರೈಕೆ ಮಾಡುತ್ತದೆ ಎಂಬ ಭರವಸೆ ಇದೆ ಎಂದು ಹೇಳಿದರು.

    ಖಾದರ್ ಆರೋಪ ಏನು?:
    ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದ ಮಾಜಿ ಸಚಿವ ಯು.ಟಿ.ಖಾದರ್ ಅವರು, ಸಿದ್ದಗಂಗಾ ಮಠದ ಒಟ್ಟು 7,359 ವಿದ್ಯಾರ್ಥಿಗಳಿಗೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ 73,590 ಕೆಜಿ ಅಕ್ಕಿ ಹಾಗೂ 36,795 ಕೆಜಿ ಗೋಧಿ ವಿತರಣೆ ಮಾಡುತ್ತಿತ್ತು. ದಾಸೋಹ ಯೋಜನೆ ಅಡಿ ಸಿದ್ದಗಂಗಾ ಮಠದ ವಿದ್ಯಾರ್ಥಿಗಳಿಗೂ ಅಕ್ಕಿ, ಗೋಧಿ ನೀಡಲಾಗುತ್ತಿತ್ತು. ಆದರೆ ಬಿಜೆಪಿ ಸರ್ಕಾರವು ಕಳೆದ ಮೂರು ತಿಂಗಳಿಂದ ಮಠಕ್ಕೆ ನೀಡುತ್ತಿದ್ದ ಅಕ್ಕಿಯನ್ನು ತಡೆ ಹಿಡಿದಿದೆ ಎಂದು ಆರೋಪಿಸಿದ್ದರು. ಜೊತೆಗೆ ಪ್ರಮುಖ ದಾಖಲೆ ಬಿಡುಗಡೆ ಮಾಡಿದ್ದರು.

    ತುಮಕೂರು ಸಿದ್ದಗಂಗಾ ಮಠದಲ್ಲಿ ಸಾಕಷ್ಟು ಜನರು ವಸತಿ ಪಡೆದು ಶಿಕ್ಷಣ ಪಡೆಯುತ್ತಿದ್ದಾರೆ. ಹೀಗಾಗಿ ಅಂತಹ ಶಿಕ್ಷಣ ಸಂಸ್ಥೆಗಳಿಗೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ವಿವಿಧ ಸಂಘಗಳ ಸಹಭಾಗಿತ್ವದಲ್ಲಿ ಅಕ್ಕಿ, ಗೋಧಿ ವಿತರಿಸುತ್ತಿತ್ತು. ಇದರಿಂದ ಸಂಸ್ಥೆಗಳಿಗೆ ಹೆಚ್ಚು ಅನುಕೂಲವಾಗುತ್ತಿತ್ತು. ಆದರೆ ಬಿಜೆಪಿ ಸರ್ಕಾರ ಏಕಾಏಕಿ ಸಿದ್ದಗಂಗಾ ಮಠ ಹಾಗೂ ವಿವಿಧ ಸಂಸ್ಥೆಗಳಿಗೆ ವಿತರಿಸುತ್ತಿದ್ದ ಅಕ್ಕಿ ಹಾಗೂ ಗೋಧಿಯನ್ನು ನಿಲ್ಲಿಸಿದೆ ಎಂದು ದೂರಿದ್ದರು.

  • ರಾಮ ಮಂದಿರಕ್ಕೆ ಪೇಜಾವರ ಶ್ರೀಗಳಿಂದಲೇ ಶಂಕುಸ್ಥಾಪನೆ ಮಾಡಿಸಬೇಕೆಂಬ ಅಪೇಕ್ಷೆ ಇತ್ತು- ಸಿದ್ದಗಂಗಾ ಶ್ರೀ

    ರಾಮ ಮಂದಿರಕ್ಕೆ ಪೇಜಾವರ ಶ್ರೀಗಳಿಂದಲೇ ಶಂಕುಸ್ಥಾಪನೆ ಮಾಡಿಸಬೇಕೆಂಬ ಅಪೇಕ್ಷೆ ಇತ್ತು- ಸಿದ್ದಗಂಗಾ ಶ್ರೀ

    ತುಮಕೂರು: ವಿಶ್ವ ಸಂತ ಪೇಜಾವರ ಶ್ರೀಗಳು ಕೃಷ್ಣೈಕ್ಯರಾಗಿರುವುದಕ್ಕೆ ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಸಂತಾಪ ಸೂಚಿಸಿದ್ದಾರೆ.

    ಸಿದ್ದಗಂಗಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೇಜಾವರ ಶ್ರೀಗಳ ಅಗಲಿಕೆ ನೋವು ತಂದಿದೆ. ವೈದ್ಯರ ಪ್ರಯತ್ನದ ನಡುವೆಯೂ ಅವರು ನಮ್ಮನ್ನು ಅಗಲಿರುವುದು ದು:ಖದ ಸಂಗತಿ ಎಂದು ಕಂಬನಿ ಮಿಡಿದ್ದಾರೆ.

    ಈ ಸಂದರ್ಭದಲ್ಲಿ ಪೇಜಾವರ ಶ್ರೀಗಳ ಸಾಮಾಜಿಕ-ಧಾರ್ಮಿಕ ಕಾರ್ಯವನ್ನು ಮೆಲುಕು ಹಾಕಿದ ಶ್ರೀಗಳು, ರಾಮ ಜನ್ಮ ಭೂಮಿ ವಿಚಾರದಲ್ಲಿ ವಿಶ್ವೇಶ ತೀರ್ಥರು ಮುಂಚೂಣಿಯಲ್ಲಿದ್ದರು. ಅವರು ಬದುಕಿದ್ದಾಗಲೇ ರಾಮಮಂದಿರ ಕಾನೂನು ಸಮರ ತೀರ್ಮಾನವಾಗಿದ್ದು ಸಂತಸ ತಂದಿದೆ. ಆದರೂ ರಾಮ ಮಂದಿರ ಶಂಕುಸ್ಥಾಪನೆ ಪೇಜಾವರ ಶ್ರೀಗಳಿಂದಲೇ ನೆರವೇರಬೇಕು ಎಂಬುದು ಬಹುಜನರ ಅಪೇಕ್ಷೆಯಾಗಿತ್ತು. ಆದರೆ ಪ್ರಕೃತಿ ನಿಯಮದಂತೆ ಅವರು ನಮ್ಮನ್ನು ಅಗಲಿದ್ದು ದುಃಖದ ವಿಚಾರ ಎಂದರು.

    ಪೇಜಾವರ ಶ್ರೀಗಳು ನಾಡು, ರಾಷ್ಟ್ರಕ್ಕೆ ಅದ್ಭುತವಾದ ಸೇವೆ ಸಲ್ಲಿಸಿದ್ದಾರೆ. ಸಂಘಟನೆ ಮತ್ತು ಸಂಸ್ಕಾರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ದೊಡ್ಡ ಸಂತರಾಗಿ, ಆಧ್ಯಾತ್ಮದ ಸಾಧನೆ ಮಾಡಿದ್ದಾರೆ. ಅವರ ಸಾಮಾಜಿಕ ಕಳಕಳಿ, ಸೇವಾ ಕೈಂಕರ್ಯ ನಮಗೆ ಆದರ್ಶವಾಗಿದೆ. ಮಠದ ಕಿರಿಯ ಶ್ರೀಗಳಿಗೆ ಪೇಜಾವರ ಸ್ವಾಮೀಜಿ ಅಗಲಿಕೆ ದು:ಖ ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದರು.

    ಸಿದ್ದಗಂಗಾ ಮಠದ ಬಗ್ಗೆ ಹಾಗೂ ಶ್ರೀ ಶಿವಕುಮಾರ ಸ್ವಾಮೀಜಿ ಬಗ್ಗೆ ಪೇಜಾವರ ಶ್ರೀಗಳು ಅಪಾರ ಕಳಕಳಿ ಭಕ್ತಿ ಹೊಂದಿದ್ದರು. ಶಿವಕುಮಾರ ಸ್ವಾಮೀಜಿಗೆ ವಿಶ್ವೇಶ ತೀರ್ಥರು ಮಹಾಸ್ವಾಮಿಗಳು ಎಂದು ಹೇಳುತ್ತಿದ್ದರು ಎಂದು ಶಿವಕುಮಾರ ಶ್ರೀಗಳೊಂದಿಗಿನ ಪೇಜಾವರ ಶ್ರೀಗಳ ಒಡನಾಟವನ್ನು ನೆನಪಿಸಿಕೊಂಡರು.

  • ಭಕ್ತರ ಪ್ರೀತಿಗೆ ಭಾವುಕರಾದ ಸಿದ್ದಲಿಂಗ ಶ್ರೀಗಳು

    ಭಕ್ತರ ಪ್ರೀತಿಗೆ ಭಾವುಕರಾದ ಸಿದ್ದಲಿಂಗ ಶ್ರೀಗಳು

    ತುಮಕೂರು: ಶ್ರೀ ಶಿವಕುಮಾರ ಸ್ವಾಮೀಜಿಗಳ ಪುಣ್ಯಾರಾಧನೆ ಹಿನ್ನೆಲೆ ಸಿದ್ದಗಂಗಾ ಮಠಕ್ಕೆ ಭಕ್ತಾಧಿಗಳು ದಾಸೋಹಕ್ಕಾಗಿ ಸಾಮಾಗ್ರಿಗಳನ್ನು ಕಾಣಿಕೆ ನೀಡುತ್ತಿರುವುದನ್ನು ಕಂಡು ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ.

    ಇದೇ ತಿಂಗಳ 31ರಂದು ಡಾ. ಶ್ರೀ ಶಿವಕುಮಾರ ಸ್ವಾಮಿಜಿ ಅವರ ಪುಣ್ಯಾರಾಧನೆಯನ್ನು ಮಾಡಲಾಗುತ್ತಿದೆ. ಆದರಿಂದ ಶ್ರೀಗಳ ಭಕ್ತಾಧಿಗಳು ವಿವಿಧೆಡೆಯಿಂದ ತಮ್ಮ ಕೈಲಾದ ಸಾಮಾಗ್ರಿಗಳನ್ನು ಕಾಣಿಕೆ ರೂಪದಲ್ಲಿ ನೀಡಿ ದಾಸೋಹಕ್ಕೆ ಸಹಾಯ ಮಾಡುತ್ತಿದ್ದಾರೆ. ನಡೆದಾಡುವ ದೇವರಿಗೆ ನಮನ ಸಲ್ಲಿಸಲು ರಾಜ್ಯದ ಹಲವೆಡೆಯಿಂದ ಭಕ್ತಾಧಿಗಳು ಸ್ವಯಂ ಪ್ರೇರಿತರಾಗಿ ಸಾಕಷ್ಟು ಪ್ರಮಾಣದಲ್ಲಿ ಅಕ್ಕಿ, ಬೇಳೆ, ದವಸ ಧಾನ್ಯಗಳನ್ನು ತಂದು ಸಿದ್ದಗಂಗಾ ಮಠಕ್ಕೆ ನೀಡುತ್ತಿದ್ದಾರೆ.ಇದನ್ನೂ ಓದಿ: ಶ್ರೀಗಳ ಪುಣ್ಯಾರಾಧನೆಗೆ ಭಕ್ತರಿಂದ 11 ಟನ್ ಅಕ್ಕಿ ಕಾಣಿಕೆ!

    ಭಕ್ತರು ಶ್ರೀ ಶಿವಕುಮಾರ ಸ್ವಾಮೀಜಿ ಹಾಗೂ ಸಿದ್ದಗಂಗಾ ಮಠದ ಮೇಲೆ ಇಟ್ಟಿರುವ ಪ್ರೀತಿಯನ್ನು ಕಂಡು ಸಿದ್ದಲಿಂಗ ಶ್ರೀಗಳ ಕಣ್ತುಂಬಿ ಬಂತು. ಭಕ್ತರಿಂದ ಕಣ್ಣೀರು ಮರೆ ಮಾಚಲು ಸಿದ್ದಲಿಂಗ ಶ್ರೀಗಳು ತಿರುಗಿನಿಂತು ಕಣ್ಣೀರು ಒರೆಸಿಕೊಂಡರು. ಶ್ರೀಗಳ ಪುಣ್ಯಾರಾಧನೆಗೆ ಸಿದ್ದತೆಗಳು ನಡೆಯುತ್ತಿದ್ದು, ಸಾಲು ಸಾಲಾಗಿ ಲಾರಿಗಳ ಮೂಲಕ ಭಕ್ತಾಧಿಗಳು ದವಸ ಧಾನ್ಯಗಳು ತಂದು ಕಾಣಿಕೆಯಾಗಿ ಮಠಕ್ಕೆ ನೀಡುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv