Tag: ಶ್ರೇಯಸ್ ತಲ್ಪಾಡೆ

  • ಜೀವಂತ ಇದ್ದಾಗಲೇ ಶ್ರೇಯಸ್ ತಲ್ಪಾಡೆ ಸಾವಿನ ಸುದ್ದಿ ವೈರಲ್- ಮೌನ ಮುರಿದ ನಟ

    ಜೀವಂತ ಇದ್ದಾಗಲೇ ಶ್ರೇಯಸ್ ತಲ್ಪಾಡೆ ಸಾವಿನ ಸುದ್ದಿ ವೈರಲ್- ಮೌನ ಮುರಿದ ನಟ

    ಬಾಲಿವುಡ್ (Bollywood) ನಟ ಶ್ರೇಯಸ್ ತಲ್ಪಾಡೆ (Shreyas Talpade) ಇನ್ನಿಲ್ಲ ಎಂಬ ಸುಳ್ಳು ವದಂತಿಯ ಪೋಸ್ಟ್‌ಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಜೀವಂತವಾಗಿ ಇದ್ದಾಗಲೇ ಸಾವಿನ ಕುರಿತು ಸುಳ್ಳು ಸುದ್ದಿ ಮತ್ತು ಟ್ರೋಲ್ ವೈರಲ್ ಆದ ಬೆನ್ನಲ್ಲೇ ಶ್ರೇಯಸ್ ತಲ್ಪಾಡೆ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಜೀವಂತವಾಗಿದ್ದೇನೆ, ನಮ್ಮ ಭಾವನೆಗಳ ಜೊತೆ ಆಟವಾಡಬೇಡಿ ಎಂದು ನಟ ಮನವಿ ಮಾಡಿದ್ದಾರೆ.

    ನಾನು ಜೀವಂತವಾಗಿದ್ದೇನೆ, ಸಂತೋಷವಾಗಿದ್ದೇನೆ ಮತ್ತು ಆರೋಗ್ಯವಾಗಿದ್ದೇನೆ ಎಂದು ಎಲ್ಲರಿಗೂ ಭರವಸೆ ನೀಡಲು ನಾನು ಬಯಸುತ್ತೇನೆ. ನನ್ನ ಸಾವಿನ ಕುರಿತು ವೈರಲ್‌ ಆದ ಪೋಸ್ಟ್ ಬಗ್ಗೆ ನನ್ನ ಅರಿವಿಗೆ ಬಂದಿದೆ. ಅದನ್ನು ನೋಡಿದ ಕೂಡಲೇ ಯಾರೋ ತಮಾಷೆಯಾಗಿ ಶುರು ಮಾಡಿದ್ದೆಲ್ಲ ಈಗ ಚಿಂತೆಯನ್ನು ಹುಟ್ಟು ಹಾಕುವಂತಿದೆ. ನನ್ನ ಬಗ್ಗೆ ಅದರಲ್ಲೂ ಮುಖ್ಯವಾಗಿ ನನ್ನ ಕುಟುಂಬದವರ ಭಾವನೆಗಳ ಜೊತೆ ಆಟವಾಡುತ್ತಿದೆ ಎಂದು ಶ್ರೇಯಸ್ ತಲ್ಪಾಡೆ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಗೆ ರಾಖಿ ಕಟ್ಟಿದ ಶ್ರುತಿ

     

    View this post on Instagram

     

    A post shared by Shreyas Talpade (@shreyastalpade27)

    ಪ್ರತಿದಿನ ಶಾಲೆಗೆ ಹೋಗುವ ನನ್ನ ಪುಟ್ಟ ಮಗಳು ಈಗಾಗಲೇ ನನ್ನ ಯೋಗ‌ಕ್ಷೇಮದ ಬಗ್ಗೆ ಚಿಂತಿಸುತ್ತಾಳೆ. ನಿರಂತರವಾಗಿ ಪ್ರಶ್ನೆಗಳನ್ನು ಕೇಳುತ್ತಾಳೆ. ಈ ಸುಳ್ಳು ಸುದ್ದಿಯು ಅವಳ ಭಯವನ್ನು ಇನ್ನಷ್ಟು ಗಾಢವಾಗಿಸುತ್ತದೆ. ಅವಳ ಗೆಳೆಯರು ಮತ್ತು ಶಿಕ್ಷಕರಿಂದ ಹೆಚ್ಚಿನ ಪ್ರಶ್ನೆಗಳನ್ನು ಎದುರಿಸುವಂತೆ ಮಾಡಿದೆ. ಈ ಸಮಯದಲ್ಲಿ ನನ್ನಗೆ ಸಾಕಷ್ಟು ಜನರು ಫೋನ್ ಮಾಡಿ ಕೇಳಿದ್ದಕ್ಕೆ ತುಂಬಾ ಕೃತಜ್ಞನಾಗಿದ್ದೇನೆ. ನಿಮ್ಮ ಕಾಳಜಿ ಮತ್ತು ಪ್ರೀತಿ ನನಗೆ ಪ್ರಪಂಚವಾಗಿದೆ. ಟ್ರೋಲ್‌ ಮಾಡುವವರಿಗೆ ನನ್ನದೊಂದು ಸರಳ ವಿನಂತಿ. ದಯವಿಟ್ಟು ಇದನ್ನು ನಿಲ್ಲಿಸಿ. ಇತರರ ಜೀವಕ್ಕೆ ಹಾನಿಯಾಗುವ ಹಾಗೆ ಜೋಕ್ ಮಾಡಬೇಡಿ ಮತ್ತು ಬೇರೆ ಯಾರಿಗೂ ಇದನ್ನು ಮಾಡಬೇಡಿ ಎಂದು ನಟ ಕೇಳಿಕೊಂಡಿದ್ದಾರೆ.

    ಸದ್ಯ ‘ವೆಲ್‌ಕಮ್ ಟು ದಿ ಜಂಗಲ್’ ಎಂಬ ಸಿನಿಮಾದಲ್ಲಿ ಶ್ರೇಯಸ್ ತಲ್ಪಾಡೆ ಬ್ಯುಸಿಯಾಗಿದ್ದಾರೆ. ಕನ್ನಡದ ನಟಿ ರಾಧಿಕಾ ಕುಮಾರಸ್ವಾಮಿ (Radhika Kumarswamy) ಜೊತೆ ‘ಅಜಾಗ್ರತ’ ಸಿನಿಮಾ ಮಾಡ್ತಿದ್ದಾರೆ. ಹಲವು ಸಿನಿಮಾಗಳು ಅವರ ಕೈಯಲ್ಲಿವೆ.

  • ಯುವನಟ ಶ್ರೇಯಸ್ ತಲ್ಪಾಡೆಗೆ ಹೃದಯಾಘಾತ

    ಯುವನಟ ಶ್ರೇಯಸ್ ತಲ್ಪಾಡೆಗೆ ಹೃದಯಾಘಾತ

    ಬಾಲಿವುಡ್ (Bollywood) ನ ಖ್ಯಾತ ಯುವನಟ ಶ್ರೇಯಸ್ ತಲ್ಪಾಡೆಗೆ (Shreyas Talpade) ಹೃದಯಾಘಾತವಾಗಿದೆ (Heart Attack). ಶೂಟಿಂಗ್ ಸಮಯದಲ್ಲಿ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ಆರೋಗ್ಯ ತಪಾಸಣೆಗೆ ಒಳಗಾಗಿದ್ದಾರೆ. ಲಘು ಹೃದಯಾಘಾತವಾಗಿರುವ ಹಿನ್ನೆಲೆಯಲ್ಲಿ ಅವರನ್ನು ಮುಂಬೈನ ಅಂಧೇರಿ ಪ್ರದೇಶದ ಬೆಲ್ಲೆವ್ಯೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

    ನಿನ್ನೆ ರಾತ್ರಿ 10 ಗಂಟಗೆ ವೈದ್ಯರು ಆಂಜಿಯೋಪ್ಲಾಸ್ಟಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಆರೋಗ್ಯ ಸ್ಥಿರವಾಗಿದ್ದು, ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆದಿದೆ ಎಂದು ವೈದ್ಯರು ತಿಳಿಸಿದ್ದಾರೆ. ಕೆಲವೇ ದಿನಗಳಲ್ಲೇ ನಟ ಮನೆಗೆ ವಾಪಸ್ಸಾಗಲಿದ್ದಾರೆ.

     

    ಲಘು ಹೃದಯಾಘಾತವಾದಾಗ ಶ್ರೇಯಸ್ ವೆಲ್ ಕಲ್ ಟು ಜಂಗಲ್ ಸಿನಿಮಾದ  ಶೂಟಿಂಗ್ ನಲ್ಲಿ ಭಾಗಿಯಾಗಿದ್ದರು. ಹೃದಯಾಘಾತ ಸಂದರ್ಭದಲ್ಲಿ ಕುಸಿದು ಬಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ.

  • ಸಹೋದರನಿಗಾಗಿ ಪ್ಯಾನ್ ಇಂಡಿಯಾ ಸಿನಿಮಾ ಒಪ್ಪಿಕೊಂಡೆ : ರಾಧಿಕಾ ಕುಮಾರಸ್ವಾಮಿ

    ಸಹೋದರನಿಗಾಗಿ ಪ್ಯಾನ್ ಇಂಡಿಯಾ ಸಿನಿಮಾ ಒಪ್ಪಿಕೊಂಡೆ : ರಾಧಿಕಾ ಕುಮಾರಸ್ವಾಮಿ

    ಲವು ತಿಂಗಳುಗಳ ನಂತರ ರಾಧಿಕಾ ಕುಮಾರಸ್ವಾಮಿ (Radhika Kumaraswamy) ಮತ್ತೆ ಕ್ಯಾಮೆರಾ ಮುಂದೆ ನಿಂತಿದ್ದಾರೆ. ತೀರಾ ಅಪರೂಪಕ್ಕೆ ಎನ್ನುವಂತೆ ಸಿನಿಮಾಗಳನ್ನು ಮಾಡುವ ರಾಧಿಕಾ, ಈ ಬಾರಿ ಪ್ಯಾನ್ ಇಂಡಿಯಾ ಚಿತ್ರವನ್ನು ಒಪ್ಪಿಕೊಂಡಿದ್ದಾರೆ. ಈ ಸಿನಿಮಾಗೆ ಸಹಿ ಮಾಡಲು ಕಾರಣ ತಮ್ಮ ಸಹೋದರ ಎಂದು ಹೇಳಿದ್ದಾರೆ. ಈ ಸಿನಿಮಾಗೆ ಸಹೋದರ ಹಣ ಹೂಡುತ್ತಿರುವುದರಿಂದ ಚಿತ್ರದಲ್ಲಿ ನಟಿಸಲು ಒಪ್ಪಿಕೊಂಡಿರುವುದಾಗಿ ಅವರು ತಿಳಿಸಿದ್ದಾರೆ.

    ರಾಧಿಕಾ ಕುಮಾರಸ್ವಾಮಿ ಅವರು ನಾಯಕಿಯಾಗಿ ನಟಿಸುತ್ತಿರುವ ‘ಅಜಾಗ್ರತ’ (Ajagrata) ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಹೈದರಾಬಾದ್ (Hyderabad) ನ ರಾಮನಾಯ್ಡು ಸ್ಟುಡಿಯೋದಲ್ಲಿ ನೆರವೇರಿದೆ. ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕ ಎ.ಎಂ.ರತ್ನಂ ಚಿತ್ರದ ಪ್ರಥಮ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರೆ, ಹೆಸರಾಂತ ವಿತರಕ ಟ್ಯಾಗೋರ್ ಮಧು ಕ್ಯಾಮೆರಾ ಚಾಲನೆ ಮಾಡಿದ್ದರು. ಚಿತ್ರರಂಗದ ವಿವಿಧ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದ್ದಾರೆ.

    ಬಾಲಿವುಡ್ ನ ಖ್ಯಾತ ನಟ ಶ್ರೇಯಸ್ ತಲ್ಪಾಡೆ (Shreyas Talpade) ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ರಾಧಿಕಾ ಕುಮಾರಸ್ವಾಮಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ರಾವ್ ರಮೇಶ್‌, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಇದನ್ನೂ ಓದಿ:ಅಜಯ್ ರಾವ್ ಚಿತ್ರಕ್ಕೆ ಕೆಜಿಎಫ್ ನಟಿ ಅರ್ಚನಾ ಜೋಯಿಸ್ ನಾಯಕಿ

    ತೆಲುಗು, ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ರವಿರಾಜ್ ನಿರ್ಮಿಸುತ್ತಿದ್ದಾರೆ.  ಎಂ.ಶಶಿಧರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಸಂದೀಪ್ ವಲ್ಲೂರಿ ಛಾಯಾಗ್ರಹಣ, ಶ್ರೀಹರಿ ಸಂಗೀತ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

    ಏಳು ಭಾಷೆಗಳಲ್ಲಿ ಈ ಚಿತ್ರ ಬರಲಿದೆ. ಡಬ್ ಮಾಡದೆ, ಆಯಾ ಭಾಷೆಗಳಲ್ಲಿ ಪ್ರತ್ಯೇಕವಾಗಿ ಚಿತ್ರೀಕರಣ ನಡೆಯಲಿರುವುದು ಈ ಚಿತ್ರದ ವಿಶೇಷ . ಹಲವು ದಿನಗಳ ನಂತರ ಮತ್ತೆ ರಾಧಿಕಾ ಕುಮಾರಸ್ವಾಮಿ ಸಿನಿಮಾ ರಂಗಕ್ಕೆ ಬಂದಿರುವುದು ಅವರ ಅಭಿಮಾನಿಗಳಿಗೆ ಸಹಜವಾಗಿಯೇ ಸಂಭ್ರಮ ತಂದಿದೆ.

  • ರಾಧಿಕಾ ಕುಮಾರಸ್ವಾಮಿ ಹೊಸ ಚಿತ್ರಕ್ಕೆ ಹೈದರಾಬಾದ್ ನಲ್ಲಿ ಮುಹೂರ್ತ

    ರಾಧಿಕಾ ಕುಮಾರಸ್ವಾಮಿ ಹೊಸ ಚಿತ್ರಕ್ಕೆ ಹೈದರಾಬಾದ್ ನಲ್ಲಿ ಮುಹೂರ್ತ

    ರಾಧಿಕಾ ಕುಮಾರಸ್ವಾಮಿ (Radhika Kumaraswamy) ಅವರು ನಾಯಕಿಯಾಗಿ ನಟಿಸುತ್ತಿರುವ ‘ಅಜಾಗ್ರತ’ (Ajagrata) ಚಿತ್ರದ ಮುಹೂರ್ತ (Muhurta) ಸಮಾರಂಭ ಇತ್ತೀಚೆಗೆ ಹೈದರಾಬಾದ್ (Hyderabad) ನ ರಾಮನಾಯ್ಡು ಸ್ಟುಡಿಯೋದಲ್ಲಿ ನೆರವೇರಿತು. ತೆಲುಗು ಚಿತ್ರರಂಗದ ಖ್ಯಾತ ನಿರ್ಮಾಪಕ ಎ.ಎಂ.ರತ್ನಂ ಚಿತ್ರದ ಪ್ರಥಮ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಹೆಸರಾಂತ ವಿತರಕ ಟ್ಯಾಗೋರ್ ಮಧು ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರರಂಗದ ವಿವಿಧ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

    ಬಾಲಿವುಡ್ ನ ಖ್ಯಾತ ನಟ ಶ್ರೇಯಸ್ ತಲ್ಪಾಡೆ (Shreyas Talpade) ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ರಾಧಿಕಾ ಕುಮಾರಸ್ವಾಮಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ರಾವ್ ರಮೇಶ್‌, ಸುನೀಲ್, ಆದಿತ್ಯ ಮೆನನ್, ರಾಘವೇಂದ್ರ ಶ್ರವಣ್, ದೇವರಾಜ್, ಜಯಪ್ರಕಾಶ್, ವಿನಯಾಪ್ರಸಾದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    ತೆಲುಗು, ಕನ್ನಡ ಸೇರಿದಂತೆ ಏಳು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ. ರವಿರಾಜ್ ನಿರ್ಮಿಸುತ್ತಿದ್ದಾರೆ.  ಎಂ.ಶಶಿಧರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಸಂದೀಪ್ ವಲ್ಲೂರಿ ಛಾಯಾಗ್ರಹಣ, ಶ್ರೀಹರಿ ಸಂಗೀತ ನಿರ್ದೇಶನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಇದನ್ನೂ ಓದಿ:ವಿಜಯ್ ದೇವರಕೊಂಡ ಹುಟ್ಟುಹಬ್ಬಕ್ಕೆ ವಿಶ್ ಮಾಡಲಿಲ್ಲ ರಶ್ಮಿಕಾ

    ಏಳು ಭಾಷೆಗಳಲ್ಲಿ ಈ ಚಿತ್ರ ಬರಲಿದೆ. ಡಬ್ ಮಾಡದೆ, ಆಯಾ ಭಾಷೆಗಳಲ್ಲಿ ಪ್ರತ್ಯೇಕವಾಗಿ ಚಿತ್ರೀಕರಣ ನಡೆಯಲಿರುವುದು ಈ ಚಿತ್ರದ ವಿಶೇಷ . ಹಲವು ದಿನಗಳ ನಂತರ ಮತ್ತೆ ರಾಧಿಕಾ ಕುಮಾರಸ್ವಾಮಿ ಸಿನಿಮಾ ರಂಗಕ್ಕೆ ಬಂದಿರುವುದು ಅವರ ಅಭಿಮಾನಿಗಳಿಗೆ ಸಹಜವಾಗಿಯೇ ಸಂಭ್ರಮ ತಂದಿದೆ.