Tag: ಶ್ರೇಯಸ್ ಪಟೇಲ್

  • ತೆಂಗು ಮತ್ತು ಮೆಕ್ಕೆಜೋಳಕ್ಕೆ ರೋಗ – ವಿಶೇಷ ಪ್ಯಾಕೇಜ್ ನೀಡಲು ಕೇಂದ್ರಕ್ಕೆ ಸಂಸದ ಶ್ರೇಯಸ್ ಪಟೇಲ್ ಒತ್ತಾಯ

    ತೆಂಗು ಮತ್ತು ಮೆಕ್ಕೆಜೋಳಕ್ಕೆ ರೋಗ – ವಿಶೇಷ ಪ್ಯಾಕೇಜ್ ನೀಡಲು ಕೇಂದ್ರಕ್ಕೆ ಸಂಸದ ಶ್ರೇಯಸ್ ಪಟೇಲ್ ಒತ್ತಾಯ

    ನವದೆಹಲಿ: ಹಾಸನ (Hassan) ಜಿಲ್ಲೆಯಲ್ಲಿ ತೆಂಗು (Coconut) ಮತ್ತು ಮೆಕ್ಕೆಜೋಳ (Maize) ಕೃಷಿ ರೋಗಗಳಿಂದ ಹೆಚ್ಚು ಬಾಧಿತವಾಗುತ್ತಿದ್ದು, ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಸಂಸದ ಶ್ರೇಯಸ್ ಪಟೇಲ್ (Shreyas Patel) ಮನವಿ ಮಾಡಿದ್ದಾರೆ.

    ಲೋಕಸಭೆಯ (Lok Sabha) ಶೂನ್ಯವೇಳೆಯಲ್ಲಿ ಮಾತನಾಡಿದ ಅವರು, ಫಂಗಲ್ ಕಾಯಿಲೆಯಿಂದ ಮೆಕ್ಕೆಜೋಳಕ್ಕೆ ಭಾರೀ ಹಾನಿ ಆಗಿದೆ. 45 ಸಾವಿರ ಹೆಕ್ಟೇರ್ ಪೈಕಿ 12 ಸಾವಿರ ಹೆಕ್ಟೇರ್ ಈಗಾಗಲೇ ಹಾನಿಗೀಡಾಗಿದೆ. ಐಸಿಎಆರ್ ಸರ್ವೆ ಮಾಡಿ ಪರಿಹಾರ ಕೊಡಬೇಕು ಎಂದು ಸಲಹೆ ನೀಡಿದೆ. ಇದನ್ನೂ ಓದಿ: Tumakuru | ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು

    ತೆಂಗು ಬೆಳೆ ನನ್ನ ಜಿಲ್ಲೆಯಲ್ಲಿಯೇ ಹೆಚ್ಚಾಗಿದೆ. 1.18 ಲಕ್ಷ ಹೆಕ್ಟೇರ್ ಚನ್ನರಾಯಪಟ್ಟಣ ಹಾಗೂ ಅರಸೀಕೆರೆ ತಾಲೂಕಿನಲ್ಲಿ 82 ಸಾವಿರ ಹೆಕ್ಟೇರ್ ರೋಗಪೀಡಿತವಾಗಿದೆ. ತೆಂಗು ಅಭಿವೃದ್ಧಿ ಮಂಡಳಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದರು. ಇದನ್ನೂ ಓದಿ: ಡಿಕೆಶಿ ಭರವಸೆ ನೀಡಿದ್ದಾರೆ, ನಾನೇ ಮುಂದಿನ KMF ಅಧ್ಯಕ್ಷ: ನಂಜೇಗೌಡ

  • ಮೈಕ್ ಸಿಕ್ಕಿದೆ, ಜನ ಶಿಳ್ಳೆ ಹೊಡೀತಾರೆ ಅಂತ ಮಾತನಾಡಿದ್ದಾರೆ: ಸೂರಜ್ ವಿರುದ್ಧ ಶ್ರೇಯಸ್ ಕಿಡಿ

    ಮೈಕ್ ಸಿಕ್ಕಿದೆ, ಜನ ಶಿಳ್ಳೆ ಹೊಡೀತಾರೆ ಅಂತ ಮಾತನಾಡಿದ್ದಾರೆ: ಸೂರಜ್ ವಿರುದ್ಧ ಶ್ರೇಯಸ್ ಕಿಡಿ

    ಹಾಸನ: ಮೈಕ್ ಸಿಕ್ಕಿದೆ, ಜನ ಶಿಳ್ಳೆ ಹೊಡೀತಾರೆ ಅಂತ ಮಾತನಾಡಿದ್ದಾರೆ. ಪೆನ್‌ಡ್ರೈವ್ ಒಳಗಿದ್ದ ವಿಡಿಯೋ ಮಾಡಿದ್ದು ಯಾರು? ಮೊದಲು ಆ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಎಂಎಲ್‌ಸಿ ಡಾ.ಸೂರಜ್‌ ರೇವಣ್ಣ (Suraj Revanna) ವಿರುದ್ಧ ಸಂಸದ ಶ್ರೇಯಸ್ ಪಟೇಲ್ (Shreyas Patel) ವಾಗ್ದಾಳಿ ನಡೆಸಿದ್ದಾರೆ.

    ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆನ್‌ಡ್ರೈವ್ (Pendrive) ವಿಚಾರ ನಾನು ಮಾತನಾಡಲ್ಲ. ಅದರಿಂದ ಎಷ್ಟೋ ಹೆಣ್ಣು ಮಕ್ಕಳ ಜೀವನ ಹಾಳಾಗಿದೆ. ಅನೇಕರು ಬಲಿಪಶು ಆಗಿದ್ದಾರೆ. ಅದಕ್ಕೆ ಕಾರಣ ಯಾರು? ಎಂಎಲ್‌ಸಿಯಾಗಿ ಅವರ ಸಾಧನೆ ಏನು ಎಂಬ ಬಗ್ಗೆ ಪಟ್ಟಿ ಬಿಡುಗಡೆ ಮಾಡಲಿ. ದೇವೇಗೌಡರು, ರೇವಣ್ಣ ಅವರದ್ದು ಬಿಡಿ, ಇವರ ಸಾಧನೆ ಬಗ್ಗೆ ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಹೊಸ ವರ್ಷದಲ್ಲಿ 3 ದಿನಕ್ಕೆ 3 ನಾಮ ಹಾಕಿದ್ದಾರೆ, ಇನ್ನೂ ಬಾಕಿಯಿದೆ: ಛಲವಾದಿ ನಾರಾಯಣಸ್ವಾಮಿ

     

    ಈಗಾಗಲೇ ಜನ ಬುದ್ಧಿ ಕಲಿಸಿದ್ದು, ಮುಂದೆಯೂ ಮಂಗಳಾರತಿ ಮಾಡುತ್ತಾರೆ. 2028ರ ಚುನಾವಣೆಯಲ್ಲಿ ಯಾರು ಏನಾಗುತ್ತಾರೆ ಎಂಬುದು ಗೊತ್ತಾಗಲಿದೆ. ಆದರೆ ಅಭಿವೃದ್ಧಿ ಕೆಲಸಕ್ಕೆ ಬೆಂಬಲ ಕೊಡಲಿ, ಇಲ್ಲದಿದ್ದರೆ ಸುಮ್ಮನಿರಲಿ ಎಂದು ಟಾಂಗ್ ನೀಡಿದರು. ಇದನ್ನೂ ಓದಿ: ಜ.6 ರಿಂದ ಹಳದಿ ಮಾರ್ಗದಲ್ಲಿ ಮೆಟ್ರೋ ಶುರುವಾಗಲ್ಲ: BMRCL ಸ್ಪಷ್ಟನೆ

    ಸಾರಿಗೆ ಬಸ್ ದರ ಏರಿಕೆ ಅನಿವಾರ್ಯ. ಇಂಧನ ದರ ಜಾಸ್ತಿ ಆಗಿದೆ. ಸಾರಿಗೆ ಇಲಾಖೆ ನೌಕರರು ವಿವಿಧ ಬೇಡಿಕೆ ಈಡೇರಿಸುವಂತೆ ಪ್ರತಿಭಟನೆ ಮಾಡುತ್ತಿದ್ದಾರೆ. ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯ ಕೊಟ್ಟಿದ್ದೇವೆ. ಜೀವನ ನಿರ್ವಹಣಾ ವೆಚ್ಚ ಜಾಸ್ತಿ ಆಗುತ್ತಿದೆ. ಹಾಲು, ಬಸ್ ದರ ಏರಿಕೆ ನಾವಷ್ಟೇ ಮಾಡಿಲ್ಲ. ಎಲ್ಲಾ ಸರ್ಕಾರಗಳು ಮಾಡಿವೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಶಾಶ್ವತ ಗ್ಯಾರಂಟಿ ನೀಡಿದ್ದು, ಮುಂದೆಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದರು.‌ ಇದನ್ನೂ ಓದಿ: ಮಟನ್‌ 100 ರೂಪಾಯಿ ಇದ್ದದ್ದು 500 ರೂಪಾಯಿ ಆದ್ರೆ ತಗೋತೀರ – ಟಿಕೆಟ್‌ ದರ ಏರಿಕೆ ಬಗ್ಗೆ ಚಲುವರಾಯಸ್ವಾಮಿ ಪ್ರತಿಕ್ರಿಯೆ

  • ನಾನು, ಪ್ರಜ್ವಲ್ ಹಾಸನದ ಋಣ ತೀರಿಸುತ್ತೇವೆ: ಸೂರಜ್ ರೇವಣ್ಣ

    ನಾನು, ಪ್ರಜ್ವಲ್ ಹಾಸನದ ಋಣ ತೀರಿಸುತ್ತೇವೆ: ಸೂರಜ್ ರೇವಣ್ಣ

    – ಪೆನ್‌ಡ್ರೈವ್ ಹಂಚಿ ಎಂಎಲ್‌ಸಿ ಆಗಿಲ್ಲ

    ಹಾಸನ: ಸೂರ್ಯ ಹುಟ್ಟುವುದು ಒಂದೇ ಸಲ ಅಲ್ಲ, ಸೂರ್ಯ ಪ್ರಜ್ವಲಿಸುತ್ತಾನೆ. ನಿಮ್ಮ ಪ್ರಜ್ವಲ್ ಅಣ್ಣ, ಸೂರಜ್ ಅಣ್ಣನೂ ಅಷ್ಟೇ. ಈ ಜಿಲ್ಲೆಯ ಋಣ ತೀರಿಸುವ ಕೆಲಸ ಮಾಡೇ ಮಾಡುತ್ತೇವೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ (Suraj Revanna) ಹೇಳಿದ್ದಾರೆ.

    ತಮ್ಮ ಹುಟ್ಟುಹಬ್ಬದ ಅಂಗವಾಗಿ ಚನ್ನರಾಯಪಟ್ಟಣದಲ್ಲಿ ಬುಧವಾರ ರಾತ್ರಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಕೆಲವು ಅಧಿಕಾರಿಗಳು, ವಿರೋಧಿಗಳು ನಮ್ಮ ಕಾರ್ಯಕರ್ತರಿಗೆ ಯಾವ ರೀತಿ ತೊಂದರೆ ಕೊಡುತ್ತಿದ್ದಾರೆ ಎಂದು ನೋಡುತ್ತಿದ್ದೇವೆ. ಯಾವುದೂ ಶಾಶ್ವತವಲ್ಲ. ಯಾವ ಸರ್ಕಾರವೂ ಶಾಶ್ವತ ಅಲ್ಲ. ನಾನು, ನನ್ನಿಂದ ಮಾಡಿದ್ದು ಅಂತ ಹೇಳಿದವರು ಒಮ್ಮೆ ಸ್ಮಶಾನಕ್ಕೆ ಹೋಗಿ ಬನ್ನಿ. ಎಂತೆಂಥವರೋ ಏನೇನೋ ಆಗಿದ್ದಾರೆ ಅನ್ನೋದು ಗೊತ್ತಾಗುತ್ತದೆ. ನಾವು ಮಾಡುವ ಒಳ್ಳೆಯ ಕೆಲಸ ಮಾತ್ರ ಈ ಭೂಮಿ ಮೇಲೆ ಉಳಿಯುತ್ತದೆ. ಈ ದ್ವೇಷದ ರಾಜಕಾರಣ ಉಳಿಯಲ್ಲ ಎಂದರು. ಇದನ್ನೂ ಓದಿ: ಧರ್ಮಸ್ಥಳದ ಸ್ನಾನಘಟ್ಟ ಅಪವಿತ್ರಕ್ಕೆ ಹುನ್ನಾರ – ನೇತ್ರಾವತಿಯ ಉಪನದಿಯಲ್ಲಿ 11 ಗೋಣಿ ಗೋಮಾಂಸ ಪತ್ತೆ

    ಕೆಲಸ ಮಾಡಲಿ, ಜನಕ್ಕೆ ಒಳ್ಳೆಯದು ಮಾಡಲಿ ಎಂದು ನಿಮಗೆ 135 ಸೀಟ್ ಕೊಟ್ಟಿದ್ದು. ಅದನ್ನು ಬಿಟ್ಟು ದಿನ ಬೆಳಗ್ಗೆಯಾದರೆ ರೇವಣ್ಣ ಅವರನ್ನು ಹೇಗೆ ತುಳಿಯೋದು, ದೇವೇಗೌಡರ ಕುಟುಂಬವನ್ನು ಹೇಗೆ ಮುಗಿಸೋದು ಬರೀ ಇದೇ ಆಗಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಬಿಜೆಪಿ ಕಾರ್ಯಕರ್ತರ ವಿರುದ್ಧ ಚಿಕ್ಕಮಗಳೂರಿನಲ್ಲಿ ಕೇಸ್‌, ತರೀಕೆರೆಯಲ್ಲಿ ವಿಚಾರಣೆ!

    ಸರ್ಕಾರ ಬಂದು ಎಷ್ಟು ತಿಂಗಳು ಆಯ್ತು, ಯಾವ ರೈತರಿಗೆ ಒಳ್ಳೆಯದಾಗಿದೆ ಹೇಳಿ? ಕುತಂತ್ರಿಗಳ, ವಿರೋಧಿಗಳ, ದ್ವೇಷದ ರಾಜಕಾರಣದ ಕತ್ತಲು ಆವರಿಸಿಕೊಂಡಿದೆ. ಮತ್ತೆ ನಿಮ್ಮ ಸೂರಜ್ ರೇವಣ್ಣನ ಮೂಲಕ ಸೂರ್ಯ ಹುಟ್ಟೇ ಹುಟ್ಟುತ್ತಾನೆ. ಇವತ್ತು ಮೂಡಲಹಿಪ್ಪೆಯಿಂದ ಬೆಂಕಿ ಶುರುವಾಗಿದೆ. ದ್ವೇಷದ ರಾಜಕಾರಣ ಮಾಡುತ್ತಿರುವ ಸರ್ಕಾರ, ಕಾಂಗ್ರೆಸ್ ಸರ್ಕಾರ ಇದೆ ಅಂತ ಕೆಲವರು ಕುಣಿಯುತ್ತಿದ್ದಾರೆ. ಅದನ್ನು ಸುಡುವಂತಹ ಪರಿಸ್ಥಿತಿ, ಕಣ್ಣೀರಿಡುವ ಪರಿಸ್ಥಿತಿ ಬಂದೇ ಬರುತ್ತದೆ ಎಂದು ಭವಿಷ್ಯ ನುಡಿದರು. ಇದನ್ನೂ ಓದಿ: ಮದ್ಯ, ಆಹಾರ ನಿರಾಕರಿಸಿದ್ದಕ್ಕೆ ರೆಸಾರ್ಟ್ ಮ್ಯಾನೇಜರ್ ಹತ್ಯೆ – ಕಾನ್‌ಸ್ಟೇಬಲ್‌ಗಳು ಅರೆಸ್ಟ್

    ನಿನ್ನೆ ಮೊನ್ನೆ ಪೆನ್‌ಡ್ರೈವ್ (Pendrive) ಹಂಚಿ ನಾನು ಎಂಎಲ್‌ಸಿ ಆಗಿಲ್ಲ. ನಿಮ್ಮ ತಾತನ ತರ ಕುತಂತ್ರ ಮಾಡಿ ಎಂಎಲ್‌ಸಿ ಆಗಿದ್ದಲ್ಲ. ದೇವೇಗೌಡರು, ರೇವಣ್ಣನ ಕುಟುಂಬ ಮುಗಿಸುತ್ತಾರಂತೆ. ಇದೇ 25 ವರ್ಷದ ಹಿಂದೆ, ಇವತ್ತೇನು ಅಚಾನಕ್ಕಾಗಿ ಸಂಸದರಾಗಿದ್ದಾರೆಯೋ ಅವರ ತಾತ, ನಮ್ಮ ಅಜ್ಜಿ, ತಾಯಿ ಮೇಲೆ ಆಸಿಡ್ ಎರಚಿಸಿದ್ದನ್ನ ಯಾರೂ ಮರೆಯಬಾರದು. ಇದು ಇಲ್ಲಿರುವ ಹಿರಿಯರಿಗೆ ಮಾತ್ರ ನೆನಪಿರುತ್ತದೆ. ಇದೇ ರೀತಿ ಕುತಂತ್ರ, ಒಳಸಂಚು ಮಾಡಿ ನಮ್ಮ ತಾತ ಅವರ ತಮ್ಮನ ಮಕ್ಕಳಿಂದ ನಮ್ಮ ಅಜ್ಜಿ, ಅಮ್ಮನ ಮೇಲೆ ಹರದನಹಳ್ಳಿಯ ಶಿವನ ದೇವಾಲಯದಂತಹ ಪವಿತ್ರ ಸ್ಥಳದಲ್ಲಿ ಆಸಿಡ್ ದಾಳಿ ಮಾಡಿಸಿದ್ದರು. ಇದೇ ರೀತಿ ಇಡೀ ಕುಟುಂಬಕ್ಕೆ ಅವತ್ತೂ ಕೂಡ ಸಂಕಷ್ಟ ಇತ್ತು. ಅಂದೂ ಕಾಂಗ್ರೆಸ್ ಸರ್ಕಾರ ಇತ್ತು. ಈಗ 135 ಸೀಟ್, ಆಗ 130 ಸೀಟ್ ಗೆದ್ದಿದ್ದರು. ಇವರಿಗೆ ದೇವೇಗೌಡರು, ರೇವಣ್ಣ ಕುಟುಂಬ ಮುಗಿಸಬೇಕು ಎಂಬುದು ಒಂದೇ ಉದ್ದೇಶ. 25 ವರ್ಷದ ಹಿಂದೆ ನಮ್ಮ ಕುಟುಂಬ ಸಂಕಷ್ಟದಲ್ಲಿತ್ತು. ನಂತರ ಏನಾಯ್ತು ಸ್ವಾಮಿ, ಇದು ಅದೇ ರೀತಿಯ ಒಂದು ಅನುಭವ ಎಂದು ಸಂಸದ ಶ್ರೇಯಸ್ ಪಟೇಲ್ (Shreyas Patel) ವಿರುದ್ಧ ಹರಿಹಾಯ್ದರು. ಇದನ್ನೂ ಓದಿ: ಜ.4ಕ್ಕೆ ಕಲಬುರಗಿಯಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ: ಗೋವಿಂದ ಕಾರಜೋಳ

  • ಜಾತಿ ಜನಗಣತಿ ವರದಿ ಬಗ್ಗೆ ಸಿಎಂ, ಡಿಸಿಎಂ ಒಳ್ಳೆಯ ನಿರ್ಧಾರಕ್ಕೆ ಬರಲಿದ್ದಾರೆ: ಶ್ರೇಯಸ್ ಪಟೇಲ್

    ಜಾತಿ ಜನಗಣತಿ ವರದಿ ಬಗ್ಗೆ ಸಿಎಂ, ಡಿಸಿಎಂ ಒಳ್ಳೆಯ ನಿರ್ಧಾರಕ್ಕೆ ಬರಲಿದ್ದಾರೆ: ಶ್ರೇಯಸ್ ಪಟೇಲ್

    ಹಾಸನ: ಜಾತಿ ಜನಗಣತಿ ವರದಿ ಸಿಎಂ ಹಾಗೂ ಡಿಸಿಎಂ ಕೈಯಲ್ಲಿದೆ. ಅದರ ಜಾರಿಯ ಬಗ್ಗೆ ಇಬ್ಬರು ಒಳ್ಳೆಯ ನಿರ್ಧಾರಕ್ಕೆ ಬರಲಿದ್ದಾರೆ ಎಂದು ಸಂಸದ ಶ್ರೇಯಸ್ ಪಟೇಲ್ ಹೇಳಿದ್ದಾರೆ.

    ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಜನಗಣತಿಯ ವರದಿ ಜಾರಿ ಬಗ್ಗೆ ಸಿಎಂ, ಡಿಸಿಎಂ ಕೈಗೊಳ್ಳುವ ತೀರ್ಮಾನಕ್ಕೆ ನಾವು ಬದ್ಧರಾಗಿರುತ್ತೇವೆ. ಈ ಬಗ್ಗೆ ಅಂತಿಮವಾಗಿ ಕ್ಯಾಬಿನೆಟ್‍ನಲ್ಲಿ ತೀರ್ಮಾನ ಮಾಡಲಾಗುತ್ತದೆ. ಕ್ಯಾಬಿನೆಟ್ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮಾಡುವ ತೀರ್ಮಾನವೇ ಅಂತಿಮ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಹಾಸನಕ್ಕೆ ರೈಲುಗಳಲ್ಲಿ ಮಾದಕ ವಸ್ತು ಸರಬರಾಜು – ಅಧಿಕಾರಿಗಳಿಗೆ ಶ್ರೇಯಸ್ ಪಟೇಲ್ ಕ್ಲಾಸ್

    ಕ್ಯಾಬಿನೆಟ್‍ನಲ್ಲಿ ಒಳ್ಳೆಯ ರೀತಿ ತೀರ್ಮಾನ ಆಗುತ್ತದೆ. ಅದರಲ್ಲಿ ಯಾವುದೇ ಸಂಶಯ ಬೇಡ. ಈ ವಿಚಾರದಲ್ಲಿ ನನ್ನ ವೈಯುಕ್ತಿಕ ತೀರ್ಮಾನ ಒಂದೇ, ರಾಜ್ಯ ಸರ್ಕಾರ, ಸಿಎಂ, ಡಿಸಿಎಂ ತೀರ್ಮಾನವೇ ಅಂತಿಮ. ಅದನ್ನು ಬಿಟ್ಟು ನಾವ್ಯಾರು ಮಾತನಾಡಬಾರದು ಎಂದಿದ್ದಾರೆ.

    ಸಚಿವ ಸತೀಶ್ ಜಾರಕಿಹೋಳಿ ಕಾಂಗ್ರೆಸ್ ನಾಯಕರ ಭೇಟಿ ವಿಚಾರಕ್ಕೆ ಸಂಬಂದಿಸಿದಂತೆ, ಈ ಬೆಳವಣಿಗೆಯನ್ನು ನಾನು ಮಾಧ್ಯಮಗಳಲ್ಲಿ ನೋಡಿದ್ದೇನೆ. ಸಿಎಂ ಸೀಟ್ ಎಲ್ಲಿ ಖಾಲಿ ಇದೆ? ಮುಖ್ಯಮಂತ್ರಿಯಾಗಿ ಜನಮೆಚ್ಚಿದ ನಾಯಕ ಸಿದ್ದರಾಮಯ್ಯನವರು ಇದ್ದಾರೆ ಎಂದು ಸಿಎಂ ಪರ ಬ್ಯಾಟ್ ಬೀಸಿದ್ದಾರೆ. ಇದನ್ನೂ ಓದಿ: ಕಾಂತರಾಜು ಸಮಿತಿ ವರದಿಗೆ ಆಗ್ರಹ – ಅ.18ರ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನ: ಸಿಎಂ

  • ಹಾಸನಕ್ಕೆ ರೈಲುಗಳಲ್ಲಿ ಮಾದಕ ವಸ್ತು ಸರಬರಾಜು – ಅಧಿಕಾರಿಗಳಿಗೆ ಶ್ರೇಯಸ್ ಪಟೇಲ್ ಕ್ಲಾಸ್

    ಹಾಸನಕ್ಕೆ ರೈಲುಗಳಲ್ಲಿ ಮಾದಕ ವಸ್ತು ಸರಬರಾಜು – ಅಧಿಕಾರಿಗಳಿಗೆ ಶ್ರೇಯಸ್ ಪಟೇಲ್ ಕ್ಲಾಸ್

    ಹಾಸನ: ಜಿಲ್ಲೆಗೆ (Hassan) ರೈಲುಗಳ (Train) ಮೂಲಕ ಮಾದಕ ವಸ್ತುಗಳು ಪೂರೈಕೆಯಾಗುತ್ತಿದೆ. ಹಳ್ಳಿ-ಹಳ್ಳಿಗಳಲ್ಲಿ ಯುವಕರಿಗೆ ಮಾದಕ ವಸ್ತು ಸಿಗುತ್ತಿದೆ. ರೈಲ್ವೆ ಪೊಲೀಸರು ಏನು ಮಾಡುತ್ತಿದ್ದಾರೆ ಎಂದು ರೈಲ್ವೆ ಅಧಿಕಾರಿಗಳನ್ನು ಸಂಸದ ಶ್ರೇಯಸ್ ಪಟೇಲ್ (Shreyas Patel) ತರಾಟೆಗೆ ತೆಗೆದುಕೊಂಡಿದ್ದಾರೆ.

    ಹಾಸನ ಜಿ.ಪಂ.ನ ಹೊಯ್ಸಳ ಸಭಾಂಗಣದಲ್ಲಿ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆ ನಡೆಸಿದರು. ಈ ವೇಳೆ ಆರಂಭದಲ್ಲಿ ಮಾದಕ ವಸ್ತುಗಳ ಬಗ್ಗೆ ಚರ್ಚೆ ಆರಂಭಿಸಿದರು. ರೈಲ್ವೇ ಪೊಲೀಸರು, ಪೊಲೀಸರ ಜೊತೆ ಸೇರಿ ಕೆಲಸ ಮಾಡಬೇಕು. ಮಾದಕ ವಸ್ತುಗಳ ಹಾವಳಿಗೆ ಸಂಪೂರ್ಣ ಕಡಿವಾಣ ಹಾಕಬೇಕು ಎಂದಿದ್ದಾರೆ. ಇದನ್ನೂ ಓದಿ: ನ್ಯಾಯಾಂಗ ಬಂಧನದಲ್ಲಿದ್ದ ಮುರುಘಾಶ್ರೀಗೆ ಬಿಡುಗಡೆ ಭಾಗ್ಯ – ಬೆಂಬಲಿಗರಿಂದ ಸಂಭ್ರಮಾಚರಣೆ

    ಯಾರ ಒತ್ತಡಕ್ಕೂ ಪೊಲೀಸರು ಮಣಿಯದೆ ಪೆಡ್ಲರ್‍ಗಳನ್ನು ಮೊದಲು ಬಂಧಿಸಬೇಕು. ಇದರ ಜೊತೆಗೆ ಮಟ್ಕಾ ದಂಧೆ ನಡೆಯುತ್ತಿದೆ. ಇದೆಲ್ಲದಕ್ಕೂ ಕಡಿವಾಣ ಹಾಕಲು ಪೊಲೀಸರಿಗೆ ಸೂಚನೆ ನೀಡಿ ಎಂದು ಎಸ್ಪಿ ಮಹಮದ್ ಸುಜೀತಾ ಅವರಿಗೆ ಸೂಚನೆ ನೀಡಿದರು.

    ಮಾದಕ ವಸ್ತುಗಳನ್ನು ಸೇವಿಸಿ ಪುಂಡರು ವಿದ್ಯಾರ್ಥಿನಿಯರಿಗೆ ತೊಂದರೆ ಕೊಡುತ್ತಿದ್ದಾರೆ. ಕಾಲೇಜುಗಳು ಬಿಡುವ ವೇಳೆ ಪೊಲೀಸ್ ಬೀಟ್ ಹಾಕಬೇಕು. ಬೆಳಿಗ್ಗೆ ಹಾಗೂ ಸಂಜೆ ಬಸ್ ನಿಲ್ದಾಣಗಳಲ್ಲಿ ಪೊಲೀಸ್ ಬೀಟ್ ಹೆಚ್ಚಿಸಿ ಎಂದು ಅವರು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ನಾನು ಆರೋಗ್ಯವಾಗಿದ್ದೇನೆ, ಆತಂಕ ಬೇಡ – ಅನಾರೋಗ್ಯದ ಬಗ್ಗೆ ರತನ್ ಟಾಟಾ ಸ್ಪಷ್ಟನೆ

  • ನೂರಾರು ಕೋಟಿ ಆಸ್ತಿಗೆ ಕಡಿಮೆ ಮೌಲ್ಯ ತೋರಿಸಿದ್ದಾರೆ, ಶ್ರೇಯಸ್ ಪಟೇಲ್ ಅನರ್ಹಗೊಳ್ಳಬೇಕು: ದೇವರಾಜೇಗೌಡ

    ನೂರಾರು ಕೋಟಿ ಆಸ್ತಿಗೆ ಕಡಿಮೆ ಮೌಲ್ಯ ತೋರಿಸಿದ್ದಾರೆ, ಶ್ರೇಯಸ್ ಪಟೇಲ್ ಅನರ್ಹಗೊಳ್ಳಬೇಕು: ದೇವರಾಜೇಗೌಡ

    ಹಾಸನ: ನೂರಾರು ಕೋಟಿ ಮೌಲ್ಯದ ಆಸ್ತಿಗೆ ಕಡಿಮೆ ಮೌಲ್ಯವನ್ನು ಅಫಿಡವಿಟ್‌ನಲ್ಲಿ ಉಲ್ಲೇಖ ಮಾಡಿರುವ ಸಂಸದ ಶ್ರೇಯಸ್ ಪಟೇಲ್ ಅವರನ್ನು ಸಂಸತ್ ಸ್ಥಾನದಿಂದ ಅನರ್ಹಗೊಳಿಸಬೇಕೆಂದು ದೇವರಾಜೇಗೌಡ (Devaraje Gowda)  ಆಗ್ರಹಿಸಿದ್ದಾರೆ.

    ನೂತನ ಸಂಸದ ಶ್ರೇಯಸ್ ಪಟೇಲ್ (Shreyas Patel) ವಿರುದ್ಧ ಕೇಸ್ ಬಗ್ಗೆ ಸದಸ್ಯತ್ವ ಅನರ್ಹಗೊಳಿಸಬೇಕೆಂದು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಮಾತನಾಡಿದ ಅವರು, ಮಾಜಿ ಸಂಸದ ಪ್ರಜ್ವಲ್ ರೇವಣ್ಣರ (Prajwal Revanna) ಅಶ್ಲೀಲ ಬಿಡುಗಡೆ ಮಾಡಿ ಅದರ ಲಾಭವನ್ನು ಶ್ರೇಯಸ್ ಪಟೇಲ್ ಪಡೆದುಕೊಂಡಿದ್ದಾರೆ. ಅವರ ತಪ್ಪು ಮಾಹಿತಿ ಬಗ್ಗೆ ಕೋರ್ಟ್ ಜೊತೆಗೆ ಕೇಂದ್ರ ಚುನಾವಣಾ ಆಯೋಗಕ್ಕೂ ದೂರು ನೀಡಲಾಗಿದೆ. ಈ ಪ್ರಕರಣದಲ್ಲಿ ನನ್ನ ಮಗನಿಂದಲೇ ದೂರು ಕೊಡಿಸಿದ್ದೇನೆ. ಯಾವುದೇ ಆಮಿಷಕ್ಕೆ ಬಲಿಯಾಗಬಾರದು ಎಂದು ಹೀಗೆ ಮಾಡಿದ್ದೇನೆ. ಇನ್ನು ಮೂರ್ನಾಲ್ಕು ತಿಂಗಳಲ್ಲಿ ಶ್ರೇಯಸ್ ಸದಸ್ಯತ್ವ ಅನರ್ಹತೆ ಆಗಲಿದೆ ಎಂದು ಭವಿಷ್ಯ ನುಡಿದರು. ಇದನ್ನೂ ಓದಿ: ಗಿರೀಶ್‌ನಿಂದ ದೂರವಾಗಿದ್ದಕ್ಕೆ ಹುಬ್ಬಳ್ಳಿ ಅಂಜಲಿ ಕೊಲೆ – ಚಾರ್ಜ್‌ಶೀಟ್‌ ಸಲ್ಲಿಸಿದ ಸಿಐಡಿ

    ಪ್ರಜ್ಚಲ್ ರೇವಣ್ಣ ಕೇಸ್‌ನಲ್ಲಿ ನಮಗೆ ಅನುಭವ ಇರಲಿಲ್ಲ. ಈಗ ನಾವು ಸೂಕ್ತ ರೀತಿಯಲ್ಲಿ ದಾಖಲೆ ನೀಡಿದ್ದೇವೆ. ಶ್ರೇಯಸ್ ಶೀಘ್ರವಾಗಿ ಅನರ್ಹತೆ ಆಗಲಿದ್ದಾರೆ. ಸೆಪ್ಟೆಂಬರ್‌ನಲ್ಲಿ ಖುದ್ದು ಹಾಜರಿಗೆ ಕೋರ್ಟ್ ಸೂಚನೆ ನೀಡಿದೆ. ಶ್ರೇಯಸ್ ಜನರ ಸಿಂಪತಿ ಗಳಿಸಲು ಬೆಲೆ ಬಾಳುವ ಆಸ್ತಿಗೆ ಕಡಿಮೆ ಮೌಲ್ಯ ಇರುವ ಬಗ್ಗೆ ತಪ್ಪು ಮಾಹಿತಿ ನೀಡಿದ್ದಾರೆ. ಹೆಚ್ಚುವರಿಯಾಗಿ 21 ಲಕ್ಷ ರೂ. ಖರ್ಚು ಮಾಡಿರುವ ಬಗ್ಗೆ ದೂರು ನೀಡಲಾಗಿದೆ. ಅಂದಿನ ಚುನಾವಣಾ ಅಧಿಕಾರಿ ಜೊತೆ ಶಾಮೀಲಾಗಿ ಖರ್ಚು ವೆಚ್ಚವನ್ನು ಮುಚ್ಚಿಡಲಾಗಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸೇರ್ಪಡೆಯಾಗ್ತಾರಾ ಕುಸ್ತಿಪಟು ವಿನೇಶ್ ಫೋಗಟ್?

    ಆದಾಯ ತೆರಿಗೆ ಇಲಾಖೆಗೂ ಕೂಡ ತಪ್ಪು ಮಾಹಿತಿ ನೀಡಲಾಗಿದೆ. ತಪ್ಪು ಮಾಹಿತಿ ನೀಡುವುದು ಕೂಡ ಚುನಾವಣಾ ಅಕ್ರಮ ಆಗಲಿದೆ ಎಂದರು. ಇದನ್ನೂ ಓದಿ:KSRTC ಬಸ್ ದರ ಏರಿಕೆ – ಮತ್ತೆ ಸುಳಿವು ನೀಡಿದ ರಾಮಲಿಂಗಾ ರೆಡ್ಡಿ

    ಹಾಸನದ ಮಾಜಿ ಸಂಸದ ಪ್ರಜ್ಚಲ್ ರೇವಣ್ಣ ಸದಸ್ಯತ್ವ ಅನರ್ಹತೆಗೂ ಹೋರಾಟ ನಡೆಸಿ, ಹೈಕೋರ್ಟ್ನಲ್ಲಿ ರೇವಣ್ಣ ಸದಸ್ಯತ್ವ ಅನರ್ಹತೆಗೊಳಿಸುವಲ್ಲಿ ದೇವರಾಜೇಗೌಡ ಯಶಸ್ವಿಯಾಗಿದ್ದರು. ಇದನ್ನೂ ಓದಿ: ನಾವು ತಟಸ್ಥವಾಗಿಲ್ಲ, ಶಾಂತಿ ಕಡೆ ಇದ್ದೇವೆ: ಉಕ್ರೇನ್‌ ಭೇಟಿ ಬಗ್ಗೆ ಮೋದಿ ಮಾತು

  • ಶ್ರೇಯಸ್‌ಗೆ ಸಿಂ`ಹಾಸನ’ – ಎರಡೂವರೆ ದಶಕಗಳ ಬಳಿಕ ಐತಿಹಾಸಿಕ ಗೆಲುವು!

    ಶ್ರೇಯಸ್‌ಗೆ ಸಿಂ`ಹಾಸನ’ – ಎರಡೂವರೆ ದಶಕಗಳ ಬಳಿಕ ಐತಿಹಾಸಿಕ ಗೆಲುವು!

    – ಪ್ರಜ್ವಲ್ ರೇವಣ್ಣ ಸೋಲನ್ನು ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು

    ಹಾಸನ: 25 ವರ್ಷಗಳ ಬಳಿಕ ಹಾಸನ ಲೋಕಸಭಾ ಕ್ಷೇತ್ರ (Hassan Lok Sabha Constituency) ಕಾಂಗ್ರೆಸ್ ತೆಕ್ಕೆಗೆ ವಾಲಿದೆ. ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರನ್ನು ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ (Shreyas Patel) ಮಣಿಸಿದ್ದಾರೆ.

    ಪೆನ್‌ಡ್ರೈವ್‌ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಪ್ರಜ್ವಲ್ ರೇವಣ್ಣ (Prajwal Revanna) ಅವರೀಗ ಸಂಸದ ಸ್ಥಾನವನ್ನೂ ಕಳೆದುಕೊಂಡಿದ್ದಾರೆ. ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರನ್ನು ಶ್ರೇಯಸ್ ಸೋಲಿಸುವ ಮೂಲಕ ಶ್ರೇಯಸ್‌ ಹೊಸ ಇತಿಹಾಸ ಬರೆದಿದ್ದಾರೆ. ಇಡೀ ಹಾಸನ ಜಿಲ್ಲೆಯಾದ್ಯಂತ ಕಾಂಗ್ರೆಸ್ ಕಾರ್ಯಕರ್ತರು ಶ್ರೇಯಸ್ ಗೆಲುವನ್ನು ಕೊಂಡಾಡಿದ್ದಾರೆ. ಶ್ರೇಯಸ್ ಅವರನ್ನು ಹೊತ್ತುಕೊಂಡು ಮೆರವಣಿಗೆ ನಡೆಸಿದರಲ್ಲದೇ, ಪಟಾಕಿ ಸಿಡಿಸಿ ಕುಣಿದು ಕುಪ್ಪಳಿಸಿದ್ದಾರೆ.

    ಪ್ರತಿ ಸುತ್ತಿನಲ್ಲೂ ಮತಗಳ ಅಂತರ ಹೆಚ್ಚಿಸಿಕೊಳ್ಳುತ್ತಲೇ ಇದ್ದ ಶ್ರೇಯಸ್ ಪಟೇಲ್ ಅಂತಿಮವಾಗಿ 6,32,090 ಮತಗಳನ್ನು ಪಡೆದುಕೊಳ್ಳುವ ಮೂಲಕ 42,261 ಮತಗಳ ಅಂತರದಿಂದ ಜಯಭೇರಿ ಬಾರಿಸಿದ್ದಾರೆ. ಇನ್ನೂ 5,89,829 ಮತಗಳನ್ನು ಪಡೆದು ಸೋಲು ಕಂಡಿದ್ದಾರೆ. 8,098 ನೋಟಾ ಮತಗಳು ಚಲಾವಣೆಯಾಗಿವೆ. ಇದನ್ನೂ ಓದಿ: ಅಂಜಲಿ ನಿಂಬಾಳ್ಕರ್‌ ವಿರುದ್ಧ ಕಾಗೇರಿಗೆ ಗೆಲುವು- ಉತ್ತರ ಕನ್ನಡದಲ್ಲಿ ಸಂಭ್ರಮಾಚರಣೆ

    1999ರಲ್ಲಿ ಹೆಚ್.ಡಿ ದೇವೇಗೌಡರಿಂದ ಸೋತಿದ್ದ ಪುಟ್ಟಸ್ವಾಮಿ ಗೌಡ ಅವರ ಮೊಮ್ಮಗ ಶ್ರೇಯಸ್ ಪಟೇಲ್ ಎರಡೂವರೆ ದಶಕಗಳ ಬಳಿಕ ದೇವೇಗೌಡರ ಮೊಮ್ಮಗ ಪ್ರಜ್ವಲ್‌ನನ್ನ ಸೋಲಿಸಿದ್ದಾರೆ.

    ಇನ್ನೂ ಮಗನ ಗೆಲುವಿನ ಸಂತಸವನ್ನು ಪಬ್ಲಿಕ್ ಟಿ.ವಿಯೊಂದಿಗೆ ಹಂಚಿಕೊಂಡ ಶ್ರೇಯಸ್ ಪಟೇಲ್ ತಾಯಿ ಅನುಪಮಾ, ಇದು ನಮ್ಮ ಗೆಲುವಲ್ಲ ಮತದಾರರ ಗೆಲುವು. ನಮಗೆ ಎಲ್ಲಾ ಪಕ್ಷದ ಕಾರ್ಯಕರ್ತರು ಪಕ್ಷಾತೀತವಾಗಿ ಬೆಂಬಲ ನೀಡಿದ್ದಾರೆ. ಹಾಸನ ಜಿಲ್ಲೆ ಮತದಾರರಿಗೆ ಹಾಗೂ ಎಲ್ಲ ಪಕ್ಷಗಳ ನಾಯಕರಿಗೆ ಧನ್ಯವಾದ ಹೇಳುತ್ತೇನೆ ಎಂದು ಭಾವುಕರಾಗಿದ್ದಾರೆ. ಇದನ್ನೂ ಓದಿ: ಕೋಲಾರದಲ್ಲಿ ಜೆಡಿಎಸ್‌ ಅಭ್ಯರ್ಥಿಗೆ ಜಯದ ಮಾಲೆ

    ಬಿಜೆಪಿ ಕಾರ್ಯಕರ್ತರಿಂದಲೂ ಸಂಭ್ರಮ:
    ಹಾಸನದಲ್ಲಿ ಶ್ರೇಯಸ್ ಪಟೇಲ್ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ಪ್ರಜ್ವಲ್ ರೇವಣ್ಣ ಅವರ ಸೋಲನ್ನು ಸಂಭ್ರಮಿಸಿದ್ದಾರೆ. ಹಾಸನ ನಗರದ ಡೈರಿ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಜೊತೆ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

  • 41 ಕೋಟಿ ರೂ. ಆಸ್ತಿ ಘೋಷಿಸಿದ ಹಾಸನದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್

    41 ಕೋಟಿ ರೂ. ಆಸ್ತಿ ಘೋಷಿಸಿದ ಹಾಸನದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್

    ಹಾಸನ: ಇಲ್ಲಿನ (Hassan) ಲೋಕಸಭಾ ಕ್ಷೇತ್ರದ ಕಾಂಗ್ರೆಸ್ (Congress) ಅಭ್ಯರ್ಥಿ ಶ್ರೇಯಸ್ ಪಟೇಲ್ (Shreyas Patel) 41 ಕೋಟಿ ರೂ. ಆಸ್ತಿ ಘೋಷಣೆ ಮಾಡಿಕೊಂಡಿದ್ದಾರೆ. ಇಂದು (ಸೋಮವಾರ) ನಾಮಪತ್ರ ಸಲ್ಲಿಕೆ ವೇಳೆ ಸಲ್ಲಿಸಿರುವ ಅಫಿಡವಿಟ್‍ನಲ್ಲಿ ತಮ್ಮ ಸ್ಥಿರ ಹಾಗೂ ಚರಾಸ್ತಿ ವಿವರವನ್ನು ಅವರು ದಾಖಲಿಸಿದ್ದಾರೆ.

    1.25 ಲಕ್ಷ ರೂ. ನಗದು ಹೊಂದಿರುವ ಶ್ರೇಯಸ್, ವಿವಿಧ ಬ್ಯಾಂಕ್‍ಗಳಲ್ಲಿ 6.23 ಲಕ್ಷ ರೂ. ಮೊತ್ತದ ಠೇವಣಿ ಹೊಂದಿದ್ದಾರೆ. ಸ್ನೇಹಿತರು ಹಾಗೂ ಬಂಧುಗಳಿಂದ 50 ಲಕ್ಷ ರೂ. ಸಾಲ ಪಡೆದಿದ್ದಾರೆ. ಶ್ರೇಯಸ್ ತಮ್ಮ ಪತ್ನಿಗಿಂತ ಹೆಚ್ಚು ಚಿನ್ನಾಭರಣ ಹೊಂದಿದ್ದು, 59.65 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣ ಅವರ ಬಳಿ ಇದೆ. ಎಲ್ಲಾ ಸೇರಿ ಒಟ್ಟು 1.49 ಕೋಟಿ ರೂ. ಮೌಲ್ಯದ ಚರಾಸ್ತಿಯನ್ನು ಹೊಂದಿದ್ದಾರೆ. ಇನ್ನೂ 20 ಎಕರೆ ಕೃಷಿ ಭೂಮಿಯನ್ನೂ ಸಹ ಹೊಂದಿದ್ದಾರೆ. ಇದನ್ನೂ ಓದಿ: 410 ಕೋಟಿ ಒಡೆಯ ಸ್ಟಾರ್‌ ಚಂದ್ರು ಹೆಸರಲ್ಲಿ ಒಂದೇ ಒಂದು ಕಾರಿಲ್ಲ

    ಬೆಂಗಳೂರು ಹಾಗೂ ಹೊಳೆನರಸೀಪುರದ ವಿವಿಧೆಡೆ ಕೃಷಿಯೇತರ ಭೂಮಿ ಹೊಂದಿದ್ದು, ಒಟ್ಟು 39.58 ಕೋಟಿ ರೂ. ಮೌಲ್ಯದ ಕೃಷಿಯೇತರ ಭೂಮಿ ಹಾಗೂ ವಾಣಿಜ್ಯ ಕಟ್ಟಡದ ಮಾಲೀಕರಾಗಿದ್ದಾರೆ. ಪತ್ನಿ ಹೆಸರಿನಲ್ಲಿ ಬೆಂಗಳೂರಿನಲ್ಲಿ 1.36 ಕೋಟಿ ರೂ. ಬೆಲೆ ಬಾಳುವ ಒಂದು ನಿವೇಶನ ಹಾಗೂ ಮನೆ ಹೊಂದಿದ್ದಾರೆ. ಒಂದು ಇನ್ನೋವಾ ಕಾರು, ಒಂದು ಟ್ರ್ಯಾಕ್ಟರ್ ಹೊಂದಿದ್ದಾರೆ. ತಮ್ಮ ಬಳಿ 65 ಸಾವಿರ ರೂ. ಮೌಲ್ಯದ ಮೊಬೈಲ್ ಹಾಗೂ ಪತ್ನಿ ಬಳಿ 55 ಸಾವಿರ ರೂ. ಬೆಲೆಯ ಮೊಬೈಲ್ ಇದೆ ಎಂದು ಅಫಿಡವಿಟ್‍ನಲ್ಲಿ ಘೋಷಣೆ ಮಾಡಿಕೊಂಡಿದ್ದಾರೆ.

    ಅವರ ಪತ್ನಿ ಅಕ್ಷತಾ ಹೆಸರಿನಲ್ಲೂ ಕೋಟಿ ಬೆಲೆಬಾಳುವ ಸ್ಥಿರ ಹಾಗೂ ಚರಾಸ್ತಿ ಇದ್ದು, 3.94 ಲಕ್ಷ ರೂ. ನಗದು ಹಣ ಇದೆ. ಅಕ್ಷತಾ ಅವರ ತಾಯಿ ಅನುಪಮಾ ಅವರಿಂದ 3.64 ಲಕ್ಷ ರೂ. ಹಾಗೂ ವ್ಯಕ್ತಿಯೊಬ್ಬರಿಂದ 88 ಲಕ್ಷ ರೂ. ಸಾಲ ಪಡೆದಿದ್ದಾರೆ. ಹಾಗೆಯೇ 22 ಲಕ್ಷ ರೂ. ಬೆಲೆ ಬಾಳುವ 450 ಗ್ರಾಂ ಚಿನ್ನಾಭರಣ ಹಾಗೂ 1 ಕೆಜಿ ಬೆಳ್ಳಿ, 31,14,917 ರೂ. ಮೌಲ್ಯದ ಚರಾಸ್ತಿ ಒಡತಿಯಾಗಿದ್ದಾರೆ. ಒಟ್ಟು 1.68 ಕೋಟಿ ಚರ ಮತ್ತು ಸ್ಥಿರಾಸ್ತಿ ಇದೆ. ಇದನ್ನೂ ಓದಿ: 2019ರ ಲೋಕಸಭಾ ಚುನಾವಣೆಯಲ್ಲಿ ಏನಾಗಿತ್ತು? – ಗೆದ್ದವರು ಯಾರು? ಸೋತವರು ಯಾರು? – ಇಲ್ಲಿದೆ ಸಂಪೂರ್ಣ ಮಾಹಿತಿ