Tag: ಶ್ವೇತಾ ಗೌಡ

  • ವರ್ತೂರ್ ಪ್ರಕಾಶ್ ಹೆಸರಲ್ಲಿ ಶ್ವೇತಾಗೌಡ ವಂಚನೆ ಕೇಸ್ – 2.1 ಕೆಜಿ ಚಿನ್ನಾಭರಣದ ಮೂಲ ಪತ್ತೆ

    ವರ್ತೂರ್ ಪ್ರಕಾಶ್ ಹೆಸರಲ್ಲಿ ಶ್ವೇತಾಗೌಡ ವಂಚನೆ ಕೇಸ್ – 2.1 ಕೆಜಿ ಚಿನ್ನಾಭರಣದ ಮೂಲ ಪತ್ತೆ

    ಬೆಂಗಳೂರು: ಮಾಜಿ ಸಚಿವ ವರ್ತೂರು ಪ್ರಕಾಶ್ ಹೆಸರಲ್ಲಿ ಶ್ವೇತಾಗೌಡಳಿಂದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು 2.1 ಕೆ.ಜಿ ಚಿನ್ನಾಭರಣದ ಮೂಲ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

    ಮಾಜಿ ಸಚಿವ ವರ್ತೂರು ಪ್ರಕಾಶ್ ಹೆಸರಲ್ಲಿ ಶ್ವೇತಾಗೌಡ ನವರತ್ನ ಜ್ಯುವೆಲರಿ ಮಾಲೀಕರಿಗೆ ವಂಚಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಶ್ವೇತಾಗೌಡ ವಂಚಿಸಿ, ಬಚ್ಚಿಟ್ಟಿದ್ದ 2 ಕೆ.ಜಿ 100 ಗ್ರಾಂ ಚಿನ್ನಾಭರಣದ ಸುಳಿವು ಸಿಕ್ಕಿದೆ.ಇದನ್ನೂ ಓದಿ: ಭಾರತದ ಬಳಿ ಸಾಕಷ್ಟು ಹಣ ಇರುವಾಗ ನಾವು ಯಾಕೆ ದುಡ್ಡು ನೀಡಬೇಕು: ಟ್ರಂಪ್‌

    ಐಶ್ವರ್ಯಾ ಗೌಡಳ ವಂಚನೆ ಪ್ರಕರಣ ಸದ್ದು ಮಾಡುವ ಮೊದಲೇ ಶ್ವೇತಾಗೌಡಳ ವಂಚನೆ ಪ್ರಕರಣ ಸದ್ದು ಮಾಡಿತ್ತು. ಮಾಜಿ ಸಚಿವ ವರ್ತೂರು ಪ್ರಕಾಶ್ ಹೆಸರಲ್ಲಿ ಕೆಜಿಗಟ್ಟಲೆ ಚಿನ್ನಾಭರಣ ವಂಚಿಸಿದ್ದಕ್ಕೆ ಆಕೆಯನ್ನು ಅರೆಸ್ಟ್ ಕೂಡ ಮಾಡಲಾಗಿತ್ತು. ಆರೋಪಿ ಶ್ವೇತಾಗೌಡ ಅರೆಸ್ಟ್ ಆಗಿದ್ದರೂ ಕೂಡ, ಚಿನ್ನದ ಮೂಲ ಗೊತ್ತಾಗಿರಲಿಲ್ಲ. ಬಾಗಲಗುಂಟೆಯಿಂದ ರಾಜಸ್ಥಾನಕ್ಕೆ ಹೋಗಿ ಹುಡುಕಾಡಿದರೂ ಕೂಡ ಬಚ್ಚಿಟ್ಟಿದ್ದ ಚಿನ್ನಾಭರಣದ ಸುಳಿವು ಸಿಕ್ಕಿರಲಿಲ್ಲ. ಆ ಬಳಿಕ ಜೋಧಪುರದಲ್ಲಿ ಮೋಹನ್ ಲಾಲ್ ಎಂಬಾತನನ್ನು ಬಂಧಿಸಿದ ಕರೆತಂದಾಗ ಚಿನ್ನ ಎಲ್ಲಿದೆ ಎಂಬ ಮಾಹಿತಿ ಬಯಲಾಗಿದೆ.

    ನವರತ್ನ ಜ್ಯುವೆಲರಿ ಮಾಲೀಕರಿಗೆ 2 ಕೆ.ಜಿ 945 ಗ್ರಾಂ ಚಿನ್ನಾಭರಣ ವಂಚಿಸಿದ್ದ ಶ್ವೇತಗೌಡಳನ್ನ ಹಾಗೂ ವರ್ತೂರು ಪ್ರಕಾಶ್‌ರನ್ನು ತನಿಖಾಧಿಕಾರಿ ಎಸಿಪಿ ಗೀತಾ ವಿಚಾರಣೆ ನಡೆಸಿದ್ದರು. ಅಲ್ಲದೆ ಪ್ರಕರಣದಲ್ಲಿ ಶ್ವೇತಗೌಡ ಸೇರಿ ಚೆನ್ನರಾಮ್ ಹಾಗೂ ಮೋಹನ್ ಲಾಲ್‌ರನ್ನ ಬಂಧಿಸಿದ್ದರು. ನವರತ್ನ ಜ್ಯುವೆಲರಿ ಮಾಲೀಕ ಸಂಜಯ್ ಭಾಷಾ ಬಳಿ ಪಡೆದಿದ್ದ 2ಕೆ.ಜಿ 945 ಗ್ರಾಂ ಚಿನ್ನದಲ್ಲಿ 800 ಗ್ರಾಂ ರಿಕವರಿ ಆಗಿತ್ತು. ಉಳಿದ 2 ಕೆ.ಜಿ 145 ಗ್ರಾಂ ಚಿನ್ನದ ಸುಳಿವೇ ಸಿಕ್ಕಿರಲಿಲ್ಲ. ಶ್ವೇತಾ ವಿಚಾರಣೆ ವೇಳೆ ರಾಮ್‌ದೇವ್ ಜ್ಯುವೆಲರಿ ಮಾಲೀಕ ಚೆನ್ನಾರಾಮ್‌ಗೆ ನೀಡಿದ್ದಾಗಿ ಮಾಹಿತಿ ನೀಡಿದ್ದಳು.

    ರಾಮ್‌ದೇವ್ ಜ್ಯುವೆಲರಿ ಮಾಲೀಕ ಚೆನ್ನಾರಾಮ್ ಬಂಧಿಸಿ ವಿಚಾರಣೆ ನಡೆಸಿದಾಗ ಚೆನ್ನಾರಾಮ್‌ನ ಸಂಬಂಧಿ ಮೋಹನ್ ಲಾಲ್ ಚಿನ್ನಾಭರಣ ಪಡೆದಿರೋದಾಗಿ ಮಾಹಿತಿ ನೀಡಿದ್ದ. ಮೋಹನ್ ಲಾಲ್‌ನ ಜೋಧಪುರದಿಂದ ಬಂಧಿಸಿ ಕರೆತಂದಾಗ ಬಾಗಲಗುಂಟೆಯ ತೋಟದ ಗುಡ್ಡದಹಳ್ಳಿಯ ಬೇರಾರಾಮ್ ಬಳಿಯಿದೆ ಎಂದು ಮಾಹಿತಿ ನೀಡಿದ್ದಾನೆ.

    ಬೇರಾ ರಾಮ್‌ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದು, ನಂಬರ್ ಸ್ವಿಚ್ ಆಫ್ ಮಾಡಿಕೊಂಡು ಬೆಂಗಳೂರು ಬಿಟ್ಟು ಬೇರೆ ರಾಜ್ಯಕ್ಕೆ ಪರಾರಿಯಾಗಿದ್ದಾನೆ. ಸದ್ಯ ನಾಪತ್ತೆಯಾಗಿರುವ ಬೇರಾ ರಾಮ್‌ಗಾಗಿ ಪೊಲೀಸರಿಂದ ಹುಡುಕಾಟ ನಡೆಯುತ್ತಿದೆ.ಇದನ್ನೂ ಓದಿ: ಮುದುಕಾಗುತ್ತಿರುವ ಚೀನಾ – ಮದುವೆಯಿಂದ ದೂರ ಉಳಿಯುತ್ತಿರುವ ಯುವಜನತೆ!

     

     

  • ಕೋಲಾರದ ರಾಜಕೀಯ ವ್ಯಕ್ತಿಯಿಂದ ಥಾರ್‌ ಗಿಫ್ಟ್‌ – ʼಮೈಸೂರ್‌ಪಾಕ್‌ʼ ಖೆಡ್ಡಾಕ್ಕೆ ಕೆಡವಲು ಶ್ವೇತಾ ಪ್ಲ್ಯಾನ್‌!

    ಕೋಲಾರದ ರಾಜಕೀಯ ವ್ಯಕ್ತಿಯಿಂದ ಥಾರ್‌ ಗಿಫ್ಟ್‌ – ʼಮೈಸೂರ್‌ಪಾಕ್‌ʼ ಖೆಡ್ಡಾಕ್ಕೆ ಕೆಡವಲು ಶ್ವೇತಾ ಪ್ಲ್ಯಾನ್‌!

    ಬೆಂಗಳೂರು: ವಂಚನೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ವರ್ತೂರ್ ಪ್ರಕಾಶ್ (Varthur Prakash) ಅಪ್ತೆ ಶ್ವೇತಾ ಗೌಡಗೆ (Shwetha Gowda) ಕೋಲಾರದ ಪ್ರಮುಖ ರಾಜಕೀಯ ವ್ಯಕ್ತಿ ಜೊತೆ ಸಂಬಂಧ ಹೊಂದಿದ್ದ ವಿಚಾರ ಈಗ ತನಿಖೆಯಿಂದ ಬಯಲಾಗಿದೆ.

    ಪೊಲೀಸರ ತನಿಖೆಯಲ್ಲಿ ಸ್ಫೋಟಕ ಮಾಹಿತಿಗಳು ಒಂದೊಂದಾಗಿ ಬಯಲಾಗುತ್ತಿದ್ದು ಕೋಲಾರ (Kolara) ರಾಜಕೀಯ ನಾಯಕನೊಬ್ಬನನ್ನು ಇತ್ತೀಚೆಗಷ್ಟೇ ಶ್ವೇತಾಗೌಡ ಪರಿಚಯ ಮಾಡಿಕೊಂಡಿದ್ದಳು. ಫೇಸ್‌ಬುಕ್‌ ಮೂಲಕ ಪರಿಚವಾಗಿ ಕೋಲಾರದಲ್ಲೇ ಶ್ವೇತಾಗೌಡ ಭೇಟಿಯಾಗಿದ್ದಳು.

     

    ಈ ವೇಳೆ ಕೋಲಾರದ ವೆಂಕಟೇಶ್ವರ ಸ್ವೀಟ್‌ನಲ್ಲಿ ರಾಜಕೀಯ ಮುಖಂಡ ಮೈಸೂರು ಪಾಕ್ (Mysore Pak) ತಂದು ಕೊಟ್ಟಿದ್ದ. ಈ ಕಾರಣಕ್ಕೆ ಆ ಮುಖಂಡನ ಹೆಸರನ್ನು ಪೋನ್ ನಲ್ಲಿ ʼಮೈಸೂರು ಪಾಕ್ʼ ಎಂದು ಸೇವ್‌ ಮಾಡಿದ್ದಳು. ಇದನ್ನೂ ಓದಿ: ವಂಚನೆ ಕೇಸ್‌ಗೆ ಟ್ವಿಸ್ಟ್ ಕೊಟ್ಟ ವರ್ತೂರು ಪ್ರಕಾಶ್‌ – 12 ಲಕ್ಷ ನಗದು, 3 ಬ್ರಾಸ್‌ಲೆಟ್‌, ಚಿನ್ನದ ಉಂಗುರ ವಾಪಸ್

    ವ್ಯವಹಾರದ ನೆಪದಲ್ಲಿ ಆ ಮುಖಂಡನಿಗೆ ಶ್ವೇತಾ ಗೌಡ ಅಪ್ತವಾಗಿದ್ದಳು. ಮಧುರ ಸ್ನೇಹದ ಕಾಣಿಕೆಯಾಗಿ ಶ್ವೇತಾಗೆ ಮುಖಂಡ ಹೊಸ ಥಾರ್‌ ಜೀಪ್‌ ಕೊಡಿಸಿದ್ದ. ಪೊಲೀಸರು ಬಂಧನದ ವೇಳೆ ಅದೇ ಜಿಪ್ ನಲ್ಲಿ ಮೈಸೂರಿನಲ್ಲಿ ಶ್ವೇತಾ ಸಿಕ್ಕಿಬಿದ್ದಿದ್ದಳು.

    ಪೊಲೀಸರು ತನಿಖೆ ನಡೆಸಿದ ವೇಳೆ ಆ ಮುಖಂಡನನ್ನು ಖೆಡ್ಡಾಗೆ ಬೀಳಿಸಲು ಸಿದ್ದತೆ ನಡೆಸಿದ್ದ ವಿಚಾರ ಬೆಳಕಿಗೆ ಬಂದಿದೆ. ಖೆಡ್ಡಾಗಿ ಬೀಳಿಸಲು ಎಲ್ಲಾ ಎಲ್ಲಾ ಪ್ಲಾನ್‌ಗಳನ್ನು ಶ್ವೇತಾ ಮಾಡಿಕೊಂಡಿದ್ದಳು. ಇನ್ನೇನು ಕೆಲವೇ ದಿನಗಳಲ್ಲಿ ಆ ಮುಖಂಡನನ್ನು ಖೆಡ್ಡಾಗೆ ಬಿಳಿಸೋಕೆ ಅಂತಿಮ ಹಂತದ ಸಿದ್ದತೆ ನಡೆಸುತ್ತಿದ್ದಾಗ ಜ್ಯುವೆಲ್ಲರಿಯಿಂದ ಚಿನ್ನ ಪಡೆದು ವಂಚನೆ ಪ್ರಕರಣದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಳು.

     

  • ವಂಚನೆ ಕೇಸ್‌ಗೆ ಟ್ವಿಸ್ಟ್ ಕೊಟ್ಟ ವರ್ತೂರು ಪ್ರಕಾಶ್‌ – 12 ಲಕ್ಷ ನಗದು, 3 ಬ್ರಾಸ್‌ಲೆಟ್‌, ಚಿನ್ನದ ಉಂಗುರ ವಾಪಸ್

    ವಂಚನೆ ಕೇಸ್‌ಗೆ ಟ್ವಿಸ್ಟ್ ಕೊಟ್ಟ ವರ್ತೂರು ಪ್ರಕಾಶ್‌ – 12 ಲಕ್ಷ ನಗದು, 3 ಬ್ರಾಸ್‌ಲೆಟ್‌, ಚಿನ್ನದ ಉಂಗುರ ವಾಪಸ್

    – ಶ್ವೇತಾ ಹೀಗೆ ಮಾಡ್ತಾಳೆಂದು ನನಗೆ ಗೊತ್ತಿಲ್ಲ ಎಂದ ಮಾಜಿ ಸಚಿವ

    ಬೆಂಗಳೂರು: ವಂಚನೆ ಕೇಸ್‌ನಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಮಾಜಿ ಸಚಿವ ವರ್ತೂರು ಪ್ರಕಾಶ್‌ (Varthur Prakash) ವಿಚಾರಣೆ ಬಳಿಕ ಪ್ರಕರಣಕ್ಕೆ ಟ್ವಿಸ್ಟ್‌ ಸಿಕ್ಕಿದೆ.

    ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದ ವರ್ತೂರು ಪ್ರಕಾಶ್‌, ಎಸಿಪಿ ಗೀತಾ ಎದುರು ವಿಚಾರಣೆ (Police Inquiry) ಎದುರಿಸಿದ್ದಾರೆ. ಇದೇ ವೇಳೆ ಆರೋಪಿ ಶ್ವೇತಾ ಗೌಡ (Shweta Gowda) ಕೊಟ್ಟಿದ್ದ ಗಿಫ್ಟ್‌ಗಳನ್ನ ಅಂದ್ರೆ ನಗದು, ಚಿನ್ನಾಭರಣ ಎಲ್ಲವನ್ನೂ ಪೊಲೀಸರಿಗೆ ವಾಪಸ್‌ ಕೊಟ್ಟಿದ್ದಾರೆ. ಒಟ್ಟು 12.50 ಲಕ್ಷ ರೂ. ನಗದು, ಮೂರು ಬ್ರಾಸ್ ಲೆಟ್, 1 ಚಿನ್ನದ ಉಂಗುರವನ್ನ ಎಸಿಪಿ ಗೀತಾ ಎದುರಿಗೇ ಪೊಲೀಸರಿಗೆ ಒಪ್ಪಿಸಿದ್ದಾರೆ.

    ಶ್ವೇತಾ ಗೌಡ ಹೀಗೆ ಮಾಡ್ತಾಳೆಂದು ನನಗೆ ಗೊತ್ತಿಲ್ಲ, ನನಗೂ ಶ್ವೇತಗೌಡಳಿಗೂ ಯಾವುದೇ ಸಂಬಂಧವಿಲ್ಲ. ಗಿಫ್ಟ್ ಅಂತ ನನಗೆ ಆಕೆ ಕೆಲ ಒಡವೆ ನೀಡಿದ್ಲು ಎಂದು ಪೊಲೀಸರಿಗೆ ಜವಾಬು ನೀಡಿದ್ದಾರೆ. ಇದನ್ನೂ ಓದಿ: ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಆಸಿಡ್ ದಾಳಿ ಸಂತ್ರಸ್ತರಿಗೆ ಉಚಿತ ಚಿಕಿತ್ಸೆ ನಿರಾಕರಿಸುವಂತಿಲ್ಲ: ದೆಹಲಿ ಹೈಕೋರ್ಟ್‌

    ವಿಚಾರಣೆ ಬಳಿಕ ಮಾತನಾಡಿದ ವರ್ತೂರ್ ಪ್ರಕಾಶ್, ನನಗೆ ಆಕೆ ಸ್ನೇಹಿತೆ ಅಲ್ಲ. ಐದಾರು ತಿಂಗಳ. ಹಿಂದೆ ಪರಿಚಯ ಆಗಿದೆ. ನನ್ನ ಹೆಸರು ಬಳಸಿಕೊಂಡು ಚಿನ್ನಭಾರಣ ಖರೀದಿ ಮಾಡಿಕೊಂಡಿದ್ದಾಳೆ. ನನಗೂ ಮನಸ್ಸಿಗೆ ನೋವಾಗಿದೆ. ಚಿನ್ನದ ಅಂಗಡಿಯವರು 2 ಕೋಟಿ ರೂ. ಚಿನ್ನಭಾರಣ ಕೊಟ್ಟಿದ್ದಾರೆ, ಅದ್ಹೇಗೆ ಕೊಟ್ರು ಗೊತ್ತಿಲ್ಲ. ನನ್ನ ತರ ಕೆಲ ರಾಜಕಾರಣಿಗಳು ಹೆಸರು, ಫೋಟೋ ತೆಗೆದುಕೊಂಡು ವಂಚನೆ ಮಾಡಿದ್ದಾಳೆ. ಪೊಲೀಸರ ವಿಚಾರಣೆ ವೇಳೆ ಎಲ್ಲಾ ಮಾಹಿತಿ ಕೊಟ್ಟಿದ್ದೀನಿ ಎಂದು ಸ್ಪಷ್ಟಪಡಿಸಿದ್ದಾರೆ.

    ಚಾಮುಂಡಿ ಬೆಟ್ಟದಲ್ಲಿ ಮೀಟ್‌:
    ವಂಚಕಿ ಶ್ವೇತಾ ವಿಚಾರಣೆ ವೇಳೆ ಹಲವು ಸ್ಪೋಟಕ ಮಾಹಿತಿಗಳು ಬಹಿರಂಗವಾಗಿದೆ. ಶ್ವೇತಾಗೌಡ ಹಾಗೂ ವರ್ತೂರು ಪ್ರಕಾಶ್‌ಗೆ ನಿಕಟ ನಂಟಿರುವುದು ಪತ್ತೆಯಾಗಿದೆ. ಇಬ್ಬರೂ ಹಲವು ಬಾರಿ ಚಾಮುಂಡಿ ಬೆಟ್ಟಕ್ಕೆ ಹೋಗಿ ಬಂದಿದ್ದಾರೆ. ಅಲ್ಲದೇ ತಿರುಪತಿಗೆ ಹೋಗಲು ಸಹ ಟಿಕೆಟ್ ಬುಕ್ ಮಾಡಿರುವುದು ಬಹಿರಂಗವಾಗಿದೆ. ಇದಕ್ಕೆ ಪೂರಕವಾಗಿ ಶ್ವೇತಾ ಮೊಬೈಲ್‌ನಲ್ಲಿ ಹಲವು ಫೋಟೋ ಸಾಕ್ಷ್ಯಗಳು ಸಿಕ್ಕಿವೆ. 3 ಚಿನ್ನದ ಅಂಗಡಿ ಮಾಲೀಕರ ಜ್ಯುವೆಲ್ಲರಿ ಶಾಪ್‌ಗೆ ಶ್ವೇತಾ ಜೊತೆ ವರ್ತೂರು ಪ್ರಕಾಶ್ ಹೋಗಿರುವುದಕ್ಕೆ ಸಾಕ್ಷಿ ಸಿಕ್ಕಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಶಿವಣ್ಣಗೆ ಇಂದು ಶಸ್ತ್ರಚಿಕಿತ್ಸೆ – ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಅಭಿಮಾನಿಗಳಿಂದ ಪೂಜೆ

    ಗುಲಾಬ್ ಜಾಮೂನ್ ಅಂತ ನಂಬರ್ ಸೇವ್:
    6 ತಿಂಗಳ ಹಿಂದೆಯಷ್ಟೇ ಶ್ವೇತಾ, ವರ್ತೂರು ಪ್ರಕಾಶ್‌ಗೆ ಫೇಸ್‌ಬುಕ್‌ನಲ್ಲಿ ಪರಿಚಯವಾಗಿದ್ದಳು, ತಾನೇ ರಿಕ್ವೆಸ್ಟ್ ಕಳಿಸಿ ಸ್ನೇಹದ ಬಲೆಗೆ ಬೀಳಿಸಿಕೊಂಡಿದ್ದಳು. ಬಳಿಕ ಮೆಸೆಂಜರ್‌ನಲ್ಲಿ ಚಾಟಿಂಗ್ ಶುರುವಾಗಿ ಇಬ್ಬರೂ ಮೊಬೈಲ್‌ನಂಬರ್ ವಿನಿಮಯ ಮಾಡಿಕೊಂಡಿದ್ದಾರೆ. ಬಳಿಕ ವಾಟ್ಸಪ್‌ನಲ್ಲೂ ಚಾಟಿಂಗ್ ಮುಂದುವರಿದಿದೆ. ಶ್ವೇತಾ ವರ್ತೂರು ಪ್ರಕಾಶ್ ನಂಬರ್ ಅನ್ನು ಗುಲಾಬ್ ಜಾಮೂನ್ ಎಂಬ ಹೆಸರಿನಿಂದ ಸೇವ್ ಮಾಡಿಕೊಂಡಿದ್ದಳು ಅನ್ನೋ ವಿಚಾರವೂ ತನಿಖೆ ವೇಳೆ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಕೋಲ್ಕತ್ತಾ ರೇಪ್ & ಮರ್ಡರ್ ಕೇಸ್ | ಘಟನಾ ಸ್ಥಳದಲ್ಲಿ ಪ್ರತಿರೋಧದ ಪುರಾವೆ ಇಲ್ಲ – ಸಿಬಿಐಗೆ CFSL ವರದಿ ಸಲ್ಲಿಕೆ

    ಆತ್ಮೀಯತೆ ಮುಂದುವರಿದ ನಂತರ ಶ್ವೇತಾ ಬಳಿಯೇ ವರ್ತೂರು ಪ್ರಕಾಶ್ 10 ಲಕ್ಷ ರೂ. ಸಾಲ ಪಡೆದುಕೊಂಡಿದ್ದಾರೆ ಅನ್ನೋ ಆರೋಪವೂ ಶ್ವೇತಾಳಿಂದ ಕೇಳಿಬಂದಿದೆ. ಮೂರು ಬ್ರೇಸ್ಲೆಟ್, ಒಂದು ಉಂಗುರ ಸೇರಿ, ಬ್ಯಾಂಕ್ ಖಾತೆಗೆ 10 ಲಕ್ಷ ರೂ. ಹಾಕಿಸಿಕೊಂಡಿದ್ದರಂತೆ, ತಿರುಪತಿಗೆ ಹೋಗಲು ಶ್ವೇತಾ ಜೊತೆ ಟಿಕೆಟ್ ಕೂಡ ಬುಕ್ ಮಾಡಿದ್ದರಂತೆ, ಟಿಕೆಟ್ ಬುಕ್ ಮಾಡಿದ್ದ ಫೋಟೋ ಸಹ ಲಭ್ಯವಾಗಿದೆ. ಹೀಗೆ ಇಬ್ಬರೂ ಸೇರಿ ಕೋಟ್ಯಂತರ ರೂ. ವಂಚನೆ ಮಾಡಿದ್ದಾರೆ ಎಂಬ ಆರೋಪ ಬಹಿರಂಗವಾಗಿದೆ.