Tag: ಶ್ವೇತಾ ಪ್ರಸಾದ್

  • ಖ್ಯಾತ ಕಿರುತೆರೆ ನಟಿ ಶ್ವೇತಾ ಪ್ರಸಾದ್ ಗೆ ಸೌದಿ ಅರೇಬಿಯಾ ಗೌರವ

    ಖ್ಯಾತ ಕಿರುತೆರೆ ನಟಿ ಶ್ವೇತಾ ಪ್ರಸಾದ್ ಗೆ ಸೌದಿ ಅರೇಬಿಯಾ ಗೌರವ

    ಶ್ರೀರಸ್ತು ಶುಭಮಸ್ತು’, ‘ರಾಧಾ ರಮಣ’ ಧಾರಾವಾಹಿ ಖ್ಯಾತಿಯ ನಟಿ ಶ್ವೇತಾ ಪ್ರಸಾದ್. ‘ಕಳ್ಬೆಟ್ಟದ ದರೋಡೆಕೋರರು’ ಚಿತ್ರದ ಮೂಲಕ ಬೆಳ್ಳಿ ಪರದೆಯಲ್ಲೂ ಮಿಂಚಿದ್ದಾರೆ. ‘ರಾಧಾ ರಮಣ’ ಧಾರಾವಾಹಿ ಶ್ವೇತಾ ಅವರಿಗೆ ಅಪಾರ ಖ್ಯಾತಿಯನ್ನು ತಂದುಕೊಟ್ಟಿದೆ. ರಾಧಾ ಮಿಸ್ ಎಂದೇ ಚಿರಪರಿಚಿತರಾಗಿರುವ ಶ್ವೇತಾ ಪ್ರಸಾದ್ ಅವರನ್ನು ಇತ್ತೀಚೆಗೆ ಸೌದಿ ಅರೇಬಿಯಾ ಪ್ರವಾಸೋದ್ಯಮ ಪ್ರಾಧಿಕಾರ ಆಹ್ವಾನಿಸಿ ಆತಿಥ್ಯ ನೀಡಿದೆ.

    ಸೌದಿ ಅರೇಬಿಯಾ ಪ್ರವಾಸೋದ್ಯಮ ಪ್ರಾಧಿಕಾರ ಪ್ರವಾಸೋಧ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ಬೇರೆ ಬೇರೆ ದೇಶದ ಸೆಲೆಬ್ರಿಟಿಗಳನ್ನು ತನ್ನ ದೇಶಕ್ಕೆ ಆಹ್ವಾನಿಸುತ್ತಿದೆ. ಆರು ದಿನಗಳ ಕಾಲ ಸಕಲ ಸೌಕರ್ಯದ ಜೊತೆಗೆ ಸೌದಿ ಅರೇಬಿಯಾದ ಪ್ರವಾಸಿ ತಾಣಗಳನ್ನು ಪರಿಚಯಿಸುವ ಕೆಲಸವನ್ನು ಮಾಡುತ್ತಿದೆ. ನಟಿ ಶ್ವೇತಾ ಪ್ರಸಾದ್ ಸೌದಿ ಅರೇಬಿಯಾ ಪ್ರವಾಸೋದ್ಯಮ ಪ್ರಾಧಿಕಾರದ ಆಹ್ವಾನಕ್ಕೆ ಪಾತ್ರರಾಗಿದ್ದು, ಆರು ದಿನಗಳ ಸೌದಿ ಅರೇಬಿಯಾ ಪ್ರವಾಸ ಮುಗಿಸಿ ವಾಪಾಸ್ಸಾಗಿದ್ದಾರೆ. ಕರ್ನಾಟಕದಿಂದ ಈ ಆಹ್ವಾನಕ್ಕೆ ಪಾತ್ರರಾದವರಲ್ಲಿ ಶ್ವೇತಾ ಪ್ರಸಾದ್ ಮೊದಲಿಗರಾಗಿದ್ದಾರೆ. ಇದನ್ನೂ ಓದಿ: `ಕಾಂತಾರ’ ಎಫೆಕ್ಟ್, ಭೂತಕೋಲ ನೋಡಲು ಧರ್ಮಸ್ಥಳಕ್ಕೆ ಬರಲಿದ್ದಾರೆ ನಟ ವಿಶಾಲ್

    ಈ ಬಗ್ಗೆ ಸಂತಸ ಹಂಚಿಕೊಂಡಿರುವ ಶ್ವೇತಾ ಪ್ರಸಾದ್ ಸೌದಿ ಅರೇಬಿಯಾ ಪ್ರವಾಸೋದ್ಯಮ ಪ್ರಾಧಿಕಾರದಿಂದ ಆಹ್ವಾನಿಸಲ್ಪಟ್ಟಿದ್ದು ಬಹಳ ಖುಷಿ ನೀಡಿದೆ. ಕರ್ನಾಟಕದಿಂದ ಈ ಆಹ್ವಾನಕ್ಕೆ ಪಾತ್ರಳಾದವರಲ್ಲಿ ಮೊದಲಿಗಳು ನಾನು. ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶದಿಂದ ಅಲ್ಲಿನ ಪ್ರವಾಸೋಧ್ಯಮ ಪ್ರಾಧಿಕಾರ ಈ ಕೆಲಸ ಮಾಡುತ್ತಿದೆ. ಆರು ದಿನಗಳ ಕಾಲ ಸೌದಿ ಅರೇಬಿಯಾದಲ್ಲಿ ಕಳೆದ ದಿನಗಳು ಮರೆಯಲಾಗದು. ಒಂದು ಹೊಸ ಅನುಭವವನ್ನು ಈ ಪ್ರವಾಸ ನೀಡಿದೆ. ಅಲ್ಲಿನ ರಿಯಾದ್, ಅಲುಲಾ, ಜೆಡಾ ಮೂರು ಹೆಸರಾಂತ ನಗರಗಳಿಗೆ ಭೇಟಿ ನೀಡಲಾಯಿತು. ರಿಯಾದ್ ನಲ್ಲಿ ಸೌದಿ ಅರೇಬಿಯಾದ ಅತಿ ಎತ್ತರದ ಕಟ್ಟಡ ಕಿಂಗ್ ಡಂ ಟವರ್  ಗೆ ಭೇಟಿ ನೀಡಲಾಯಿತು. ಇದಲ್ಲದೇ ಬುರ್ಜ್ ಖಲೀಫಾಗಿಂತ ಎತ್ತರದ ಕಟ್ಟಡವನ್ನು ಅವರು ನಿರ್ಮಿಸುತ್ತಿದ್ದಾರೆ. ಇದೆಲ್ಲವನ್ನು ಕಳೆದ ಮೂರು ವರ್ಷದಿಂದ ಅವರು ಮಾಡುತ್ತಿದ್ದಾರೆ. ಅವರ ಆಹಾರ, ಆತಿಥ್ಯ ಎಲ್ಲವೂ ತುಂಬಾ ಚೆನ್ನಾಗಿತ್ತು. ಟ್ರಾಫಿಕ್ ನಿಯಂತ್ರಣಕ್ಕೆ ದಿ ಲೈನ್ ಎಂಬ ಹೊಸ ಮಾರ್ಗಗಳನ್ನು ಕಂಡು ಕೊಂಡಿದ್ದಾರೆ. ಹೆಣ್ಣು ಮಕ್ಕಳು ಬುರ್ಖಾ ಧರಿಸುತ್ತಾರೆ, ಹೊರಗಡೆ ಓಡಾಡುವುದಿಲ್ಲ ಎಂದುಕೊಂಡಿದ್ದೆ ಆದ್ರೆ ಅಲ್ಲಿ ಬುರ್ಖಾವನ್ನು ನಿಷೇಧಿಸಲಾಗಿದೆ. ಹೆಣ್ಣು ಮಕ್ಕಳು ಆರಾಮಾಗಿ ಓಡಾಡಿಕೊಂಡು ಇದ್ದಾರೆ. ಜೊತೆಗೆ ಭಾರತೀಯರ ಮೇಲೆ ಅಲ್ಲಿನವರು ವಿಶೇಷವಾದ ಪ್ರೀತಿಯನ್ನು ಹೊಂದಿದ್ದಾರೆ ಎಂದು ಪ್ರವಾಸ ಸಂತಸದ ಅನುಭವವನ್ನು ಹಂಚಿಕೊಂಡಿದ್ದಾರೆ.

    ಧಾರಾವಾಹಿಯಿಂದ ಕೊಂಚ ಬ್ರೇಕ್ ಪಡೆದುಕೊಂಡಿರುವ ಶ್ವೇತಾ ಪ್ರಸಾದ್ ಸದ್ಯ ‘ಅರಿಹ’ ಎಂಬ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಾಧಾ ಮಿಸ್ ಪಾತ್ರಕ್ಕೆ ಎಂಟ್ರಿ ಕೊಟ್ಟ ನಟಿ ಕಾವ್ಯ ಗೌಡ

    ರಾಧಾ ಮಿಸ್ ಪಾತ್ರಕ್ಕೆ ಎಂಟ್ರಿ ಕೊಟ್ಟ ನಟಿ ಕಾವ್ಯ ಗೌಡ

    ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ರಾಧಾ ರಮಣ’ ಧಾರಾವಾಹಿಗೆ ಕಿರುತೆರೆ ನಟಿ ಕಾವ್ಯ ಗೌಡ ಅವರು ರಾಧಾ ಮಿಸ್ ಆಗಿ ಎಂಟ್ರಿ ಕೊಡುತ್ತಿದ್ದಾರೆ.

    ರಾಧಾ ಪಾತ್ರಧಾರಿಯ ನಟಿ ಶ್ವೇತಾ ಪ್ರಸಾದ್ ಧಾರಾವಾಹಿಯಿಂದ ಹೊರ ನಡೆದಿದ್ದಾರೆ. ಈಗ ಅವರ ಪಾತ್ರವನ್ನು ಕಿರುತೆರೆ ನಟಿ ಕಾವ್ಯ ಗೌಡ ನಿರ್ವಹಿಸಲಿದ್ದಾರೆ. ಮುಂದಿನ ಸಂಚಿಕೆಗಳಲ್ಲಿ ಧಾರಾವಾಹಿಯಲ್ಲಿ ಶ್ವೇತಾ ಅವರ ಬದಲು ಕಾವ್ಯ ಪ್ರೇಕ್ಷಕರ ಮುಂದೆ ಬರಲಿದ್ದಾರೆ.

    ಕಾವ್ಯ ಗೌಡ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಪ್ಯಾಟೆ ಮಂದಿ ಕಾಡಿಗೆ ಬಂದ್ರು’ ರಿಯಾಲಿಟಿ ಶೋ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟಿದ್ದರು. ನಂತರ ‘ಶುಭ ವಿವಾಹ’, ‘ಮೀರಾ ಮಾಧವ’ ಹಾಗೂ ‘ಗಾಂಧಾರಿ’ ಧಾರಾವಾಹಿಯಲ್ಲಿ ನಟಿಸಿದ್ದರು.

    ಧಾರಾವಾಹಿಗಾಗಿ ನಟಿ ಶ್ವೇತಾ ಅವರು ಒಂದು ವರ್ಷಗಳ ಕಾಲ ಒಪ್ಪಂದಕ್ಕೆ ಸಹಿ ಹಾಕಿದ್ದರು. ಆದರೆ ಆ ಒಪ್ಪಂದ ಮುಗಿದು ವರ್ಷವೇ ಆಗಿತ್ತು. ಹೀಗಾಗಿ ಅವರು ಸೀರಿಯಲ್‍ನಿಂದ ಹೊರಬಂದಿದ್ದಾರೆ. ಶ್ವೇತಾ ಧಾರಾವಾಹಿ ಮಾತ್ರವಲ್ಲದೇ ಕೆಲವು ಸಿನಿಮಾಗಳಲ್ಲೂ ಅಭಿನಯಿಸಿದ್ದಾರೆ.

    ರಮಣ ಪಾತ್ರಧಾರಿಗೆ ಪತ್ನಿಯಾಗಿ ಶಾಂತ ಸ್ವಭಾವದ ಗೃಹಿಣಿಯಾಗಿ ನಟಿಸಿದ್ದರು. ಇದರಿಂದ ಅಪಾರ ಪ್ರೇಕ್ಷಕರು ಇವರನ್ನು ಮೆಚ್ಚಿಕೊಂಡಿದ್ದರು. ಸದ್ಯಕ್ಕೆ ನಟಿ ಶ್ವೇತಾ ಪ್ರಸಾದ್ ಅವರು ನಟನೆಯಿಂದ ಸ್ವಲ್ಪ ದಿನದವರೆಗೂ ಬ್ರೇಕ್ ತೆಗೆದುಕೊಂಡು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

  • ‘ರಾಧಾ ರಮಣ’ ಸೀರಿಯಲ್‍ನಿಂದ ಹೊರಬಂದ ರಾಧಾ ಮಿಸ್

    ‘ರಾಧಾ ರಮಣ’ ಸೀರಿಯಲ್‍ನಿಂದ ಹೊರಬಂದ ರಾಧಾ ಮಿಸ್

    ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ರಾಧಾ ರಮಣ’ ಧಾರಾವಾಹಿ ಪ್ರೇಕ್ಷಕರ ಮನಗೆದ್ದಿತ್ತು. ಆದರೆ ರಾಧಾ ಪಾತ್ರಧಾರಿಯಾಗಿ ಅಭಿನಯಿಸಿದ್ದ ಶ್ವೇತಾ ಪ್ರಸಾದ್ ಅವರು ಸೀರಿಯಲ್‍ನಿಂದ ಹೊರಬರುತ್ತಿದ್ದಾರೆ.

    ನಟಿ ಶ್ವೇತಾ ಪ್ರಸಾದ್ ಇನ್ನು ಮುಂದೆ ಈ ಧಾರಾವಾಹಿಯಲ್ಲಿ ಅಭಿನಯಿಸುತ್ತಿಲ್ಲ. ಶ್ವೇತಾ ಅವರು ಸೀರಿಯಲ್‍ನಲ್ಲಿ ರಮಣ ಪಾತ್ರಧಾರಿಗೆ ಪತ್ನಿಯಾಗಿ ಶಾಂತ ಸ್ವಭಾವದ ಗೃಹಿಣಿಯಾಗಿ ಕಾಣಿಸಿಕೊಂಡಿದ್ದರು. ಇದರಿಂದ ಅಪಾರ ಪ್ರೇಕ್ಷಕರು ಇವರನ್ನು ಮೆಚ್ಚಿಕೊಂಡಿದ್ದರು. ಆದರೆ ಇದೀಗ ಈ ಧಾರಾವಾಹಿಯಿಂದ ಶ್ವೇತಾ ಅವರು ಹೊರ ಬರುತ್ತಿದ್ದಾರೆ ಎಂದು ತಿಳಿದು ಬಂದಿದೆ.

    ಧಾರಾವಾಹಿಗಾಗಿ ನಟಿ ಶ್ವೇತಾ ಅವರು ಒಂದು ವರ್ಷಗಳ ಕಾಲ ಒಪ್ಪಂದಕ್ಕೆ ಸಹಿ ಹಾಕಿದ್ದರು. ಆದರೆ ಆ ಒಪ್ಪಂದ ಮುಗಿದು ವರ್ಷವೇ ಆಗಿದೆ. ಹೀಗಾಗಿ ಇದೇ ಕಾರಣದಿಂದ ಶ್ವೇತಾ ಸೀರಿಯಲ್‍ನಿಂದ ಹೊರ ಬರುವ ನಿರ್ಧಾರ ಮಾಡಿದ್ದರಂತೆ. ಶ್ವೇತಾ ಧಾರಾವಾಹಿ ಮಾತ್ರವಲ್ಲದೇ ಕೆಲವು ಸಿನಿಮಾಗಳಲ್ಲೂ ಅಭಿನಯಿಸಿದ್ದಾರೆ

    ಧಾರಾವಾಹಿಯಲ್ಲಿ ಇನ್ನೂ 15 ದಿನಗಳು ಮಾತ್ರ ಶ್ವೇತಾ ಅವರು ಕಾಣಿಸಿಕೊಳ್ಳಲಿದ್ದಾರೆ. ನಂತರ ಆ ಪಾತ್ರಕ್ಕೆ ಬೇರೆ ನಟಿ ಬರುತ್ತಾರೆ ಎಂದು ತಿಳಿದು ಬಂದಿದೆ. ಸದ್ಯಕ್ಕೆ ಅವರು ನಟನೆಯಿಂದ ಸ್ವಲ್ಪ ದಿನದವರೆಗೂ ಬ್ರೇಕ್ ತೆಗೆದುಕೊಂಡು ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಾರೆ ಎಂದು ತಿಳಿದು ಬಂದಿದೆ.