Tag: ಸಂಕೇಶ್ವರ

  • ಮಾನವೀಯತೆ ಮೆರೆದು ಜನತೆಯಿಂದ ಬೇಶ್ ಅನಿಸಿಕೊಂಡ ಪೊಲೀಸರು

    ಮಾನವೀಯತೆ ಮೆರೆದು ಜನತೆಯಿಂದ ಬೇಶ್ ಅನಿಸಿಕೊಂಡ ಪೊಲೀಸರು

    ಬೆಳಗಾವಿ: ಸಾಮಾನ್ಯವಾಗಿ ಪೊಲೀಸರು ಎಂದರೇ ಬೈಯುವರೇ ಹೆಚ್ಚು, ಆದರೆ ಬೆಳಗಾವಿ ಜಿಲ್ಲೆಯ ಅಥಣಿ ಪೋಲಿಸರು ಮಾನವೀಯತೆ ಮೆರೆದು ಜನತೆಯಿಂದ ಬೇಶ್ ಅನಿಸಿಕೊಂಡಿದ್ದಾರೆ.

    ಸಂಕೇಶ್ವರ-ವಿಜಯಪುರ ರಾಜ್ಯ ಹೆದ್ದಾರಿಯ ಕರಿ ಮಸೂತಿ ಸಮೀಪದಲ್ಲಿ ಕಾರು ಬೈಕ್ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರರು ತೀವ್ರವಾಗಿ ಗಾಯಗೊಂಡಿದ್ದರು. ಈ ವೇಳೆ ಅಂಬುಲೆನ್ಸ್ ಬಾರದ ಕಾರಣ ಗಸ್ತು ತಿರುಗುತ್ತಿದ್ದ ಪೊಲೀಸರು ತಾವೇ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಅಥಣಿ ಸಮುದಾಯ ಆಸ್ಪತ್ರೆಗೆ ದಾಖಲು ಮಾಡಿ ಮಾನವೀಯತೆ ಮೆರೆದಿದ್ದಾರೆ. ಇದನ್ನೂ ಓದಿ:  ಮಧ್ಯೆ ಕೆಟ್ಟು ನಿಂತ ಬಸ್ – ರೊಮೆನಿಯಾ ತಲುಪದ 37 ಕನ್ನಡಿಗರು

    ಪೊಲೀಸ್ ಸಿಬ್ಬಂದಿ ಜಿ, ಎನ್, ದೊಡಮನಿ, ಪಿ ಎಸ್ ಮಲಗೌಡರ ಹಾಗೂ ಗಿರಿಮಲ್ಲ ಆಜುರ ಅವರ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಹಾಗೂ ಅಥಣಿ ಜನರಿಂದ ಪ್ರಶಂಸೆಯ ಹರಿದು ಬಂದಿದೆ. ಇದನ್ನೂ ಓದಿ :ಜೇಮ್ಸ್ ಅಪ್ಪು ನಟನೆಯ ಕೊನೆ ಸಿನಿಮಾವಲ್ಲ: ಜೇಮ್ಸ್ ನಂತರವೂ ಮತ್ತೊಂದು ಚಿತ್ರದಲ್ಲಿ ಪುನೀತ್ ರಾಜ್ ಕುಮಾರ್

  • ಮದುವೆ ದಿನವೇ ಪೊಲೀಸ್ ಠಾಣೆ ಮೆಟ್ಟಿಲೇರಿದ ನವದಂಪತಿ

    ಮದುವೆ ದಿನವೇ ಪೊಲೀಸ್ ಠಾಣೆ ಮೆಟ್ಟಿಲೇರಿದ ನವದಂಪತಿ

    ಚಿಕ್ಕೋಡಿ: ಕೊರೊನಾ ರಣಕೇಕೆ ಹಿನ್ನೆಲೆ ರಾಜ್ಯಾದ್ಯಂತ ಸಭೆ, ಮದುವೆ ಸಮಾರಂಭಗಳಿಗೆ ಸರ್ಕಾರ ಕಟ್ಟು ನಿಟ್ಟಿನ ನಿಯಮ ಜಾರಿಗೊಳಿಸಿದೆ. ಆದರೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ಕೋವಿಡ್ ನಿಯಮದ ನಡುವೆಯೂ ಅದ್ಧೂರಿ ಮದುವೆ ಆಯೋಜಿಸಿದ್ದ ವಧ ವರನ ಮೇಲೆ ಪ್ರಕರಣ ದಾಖಲಾಗಿದೆ.

    ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಜಾರಿಗೊಳಿಸುರುವ ಕೊರೊನಾ ಟಫ್ ರೂಲ್ಸ್ ಬ್ರೇಕ್ ಮಾಡಿ ಸಂಕೇಶ್ವರ ಪಟ್ಟಣದ ನೀಡಸೊಸಿ ರಸ್ತೆಯಲ್ಲಿರುವ ಮಿಲನ್ ಹಾಲ್ ದಲ್ಲಿ ಅದ್ಧೂರಿ ಮದುವೆ ಆಯೋಜನೆ ಮಾಡಿಕೊಂಡಿದ್ದರು. ಮದುವೆಗೆ ಐವತ್ತು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಅದು ಕೂಡ ತಹಶೀಲ್ದಾರ್ ಕಚೇರಿಯಿಂದ ಪಾಸ್ ಪಡೆಯಬೇಕು. ಆದ್ರೆ ಮದುವೆಯಲ್ಲಿ ಎಲ್ಲ ನಿಯಮಗಳನ್ನ ಬ್ರೇಕ್ ಮಾಡಲಾಗಿತ್ತು.

    ಹುಬ್ಬಳ್ಳಿ ಮೂಲದ ವರ ಕಾರ್ತಿಕ್ ಗಾಯಕ್ವಾಡ, ವಧು ಮೇಘ ಹಾಗೂ ಕಲ್ಯಾಣ ಮಂಟಪದ ಮಾಲೀಕ ಝಾಕರೀಯಾ ಸೇರಿದಂತೆ ಏಳು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಂಕೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಮದುವೆ ನಡೆದಿದೆ.

  • ಸಂಕೇಶ್ವರ ಪಟ್ಟಣದ ಇಬ್ಬರು ನ್ಯಾಯಾಧೀಶರಿಗೆ ‘ನ್ಯಾಯಾಂಗದಲ್ಲಿ ಕನ್ನಡ’ ಪ್ರಶಸ್ತಿ

    ಸಂಕೇಶ್ವರ ಪಟ್ಟಣದ ಇಬ್ಬರು ನ್ಯಾಯಾಧೀಶರಿಗೆ ‘ನ್ಯಾಯಾಂಗದಲ್ಲಿ ಕನ್ನಡ’ ಪ್ರಶಸ್ತಿ

    ಬೆಳಗಾವಿ/ಚಿಕ್ಕೋಡಿ: ಕನ್ನಡದಲ್ಲಿ ತೀರ್ಪು ನೀಡಿದ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಇಬ್ಬರು ನ್ಯಾಯಾಧೀಶರಿಗೆ ಇತ್ತೀಚಿಗೆ ಬೆಂಗಳೂರಿನಲ್ಲಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

    ಕನ್ನಡದಲ್ಲಿ ತೀರ್ಪು ನೀಡಿದ 100 ಜನ ನ್ಯಾಯಾಧೀಶರು ಹಾಗೂ ವಾದ ಮಂಡಿಸಿದ ವಕೀಲರನ್ನು ಈ ಸಮಾರಂಭದಲ್ಲಿ ಸನ್ಮಾನಿಸಲಾಯ್ತು. ಸಂಕೇಶ್ವರ ನಗರದ ಇಬ್ಬರು ನ್ಯಾಯಾಧೀಶರಿಗೆ ‘ನ್ಯಾಯಾಂಗದಲ್ಲಿ ಕನ್ನಡ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

    ಸಂಕೇಶ್ವರ ನಗರದವರಾದ ಉಡುಪಿ ಜೆಎಂಎಎಫ್‍ಸಿ ನ್ಯಾಯಾಲಯದ ನ್ಯಾಯಾಧೀಶರಾದ ಮಹಾಂತೇಶ್ ಗಣಪತಿ ಭೂಸಗೋಳ ಹಾಗೂ ನವಲಗುಂದ ಜೆಎಂಎಫ್‍ಸಿಯ ನ್ಯಾಯಾಲದಲ್ಲಿರುವ ಸುನೀಲ ತಳವಾರ ಇವರನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ‘ನ್ಯಾಯಾಂಗದಲ್ಲಿ ಕನ್ನಡ’ ಪ್ರಶಸ್ತಿ ನೀಡಿ ಸನ್ಮಾನಿಸಿದರು.

  • ಉತ್ತರ ಕರ್ನಾಟಕದ ಅಭಿವೃದ್ಧಿಯಲ್ಲಿ ಮಠ ಮಾನ್ಯಗಳ ಪಾತ್ರ ಅಗಾಧ: ಸುತ್ತೂರು ಶ್ರೀ

    ಉತ್ತರ ಕರ್ನಾಟಕದ ಅಭಿವೃದ್ಧಿಯಲ್ಲಿ ಮಠ ಮಾನ್ಯಗಳ ಪಾತ್ರ ಅಗಾಧ: ಸುತ್ತೂರು ಶ್ರೀ

    ಚಿಕ್ಕೋಡಿ: ಉತ್ತರ ಕರ್ನಾಟಕದ ಅಭಿವೃದ್ಧಿಯಲ್ಲಿ ಮಠ ಮಾನ್ಯಗಳು ಹಾಗೂ ಸಂಘ ಸಂಸ್ಥೆಗಳ ಪಾತ್ರ ಅಗಾಧವಾಗಿದೆ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳು ಹೇಳಿದ್ದಾರೆ.

    ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಸಂಕೇಶ್ವರದಲ್ಲಿ ದುರದುಂಡೇಶ್ವರ ವಿದ್ಯಾವರ್ಧಕ ಸಂಘದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ಮತ್ತು ಕಾಯಕಯೋಗಿ ಬಸಗೌಡ ಪಾಟೀಲ್ ಅವರ ಕಂಚಿನ ಪುತ್ಥಳಿ ಉದ್ಘಾಟನಾ ಕಾರ್ಯಕ್ರಮಕ್ಕೆ ಸುತ್ತೂರು ಶ್ರೀಗಳು ಆಗಮಿಸಿದ್ದರು. ಈ ವೇಳೆ ಮಾತನಾಡಿದ ಅವರು, ಗ್ರಾಮಾಂತರ ಪ್ರದೇಶಗಳಲ್ಲಿ ಉತ್ತಮ ಶಿಕ್ಷಣ ಕಲಿಸಬೇಕಾದ ಅವಶ್ಯಕತೆಯಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದ ಬಡ ಜನರಲ್ಲಿ ಶಿಕ್ಷಣದ ಅರಿವು ಮೂಡಿಸುವ ನಿಟ್ಟಿನಲ್ಲಿ ಉತ್ತರ ಕರ್ನಾಟಕದ ಮಠಗಳು ಹಾಗೂ ಸಂಘ ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.

    ಸಮಾರಂಭದಲ್ಲಿ ಆಶೀರ್ವಚನ ನೀಡಿದ ವಿಜಯಪುರ ಯೋಗಜ್ಞಾನಾಶ್ರಮದ ಸಿದ್ದೇಶ್ವರ ಸ್ವಾಮೀಜಿ, ಎಲ್ಲ ದಾನಕ್ಕಿಂತ ಶಿಕ್ಷಣ ದಾನ ಶ್ರೇಷ್ಠವಾಗಿದೆ. ಈ ನಿಟ್ಟಿನಲ್ಲಿ ಶಿಕ್ಷಣದ ದಾನ ನೀಡುತ್ತಿರುವ ದುರದುಂಡೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯ ಜನ ಮೆಚ್ಚುಗೆಗೆ ಕಾರಣವಾಗಿದೆ. ಲಕ್ಷಾಂತರ ವಿದ್ಯಾರ್ಥಿಗಳಿಗೆ ವಿದ್ಯಾ ದಾನ ನೀಡಿರುವ ಈ ಸಂಸ್ಥೆಯ ಕಾರ್ಯ ಸಮಾಜಕ್ಕೆ ಮಾದರಿಯಾಗಿದೆ ಎಂದರು.

    ಸಮಾರಂಭದಲ್ಲಿ ಗದಗದ ತೊಂಟದ ಸಿದ್ದರಾಮ ಮಹಾಸ್ವಾಮೀಜಿಗಳು, ನಿಡಸೋಸಿಯ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ, ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಮಾಜಿ ಸಚಿವ ಎ.ಬಿ.ಪಾಟೀಲ್, ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ, ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಸೇರಿದಂತೆ ಭಾಗವಹಿಸಿ ಹಲವಾರು ಮಾಠಾಧೀಶರು ಉಪಸ್ಥಿತರಿದ್ದರು.

  • ಪ್ರತಿಭಟನೆಗೆ ಬಂದೋಬಸ್ತ್ ಕಲ್ಪಿಸಿದ ಪೊಲೀಸರಿಗೆ ಗುಲಾಬಿ ಹೂವು ಕೊಟ್ಟ ಪ್ರತಿಭಟನಾಕಾರರು

    ಪ್ರತಿಭಟನೆಗೆ ಬಂದೋಬಸ್ತ್ ಕಲ್ಪಿಸಿದ ಪೊಲೀಸರಿಗೆ ಗುಲಾಬಿ ಹೂವು ಕೊಟ್ಟ ಪ್ರತಿಭಟನಾಕಾರರು

    ಚಿಕ್ಕೋಡಿ: ಪೌರತ್ವ ಕಾಯ್ದೆ ವಿರೋಧಿಸಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರದಲ್ಲಿ ಮುಸ್ಲಿಂ ಸಮುದಾಯದಿಂದ ಪ್ರತಿಭಟನೆ ನಡೆಸಲಾಯಿತು.

    ಸಂಕೇಶ್ವರದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸೇರಿದ ಮುಸ್ಲಿಂ ಬಾಂಧವರು ಸಭೆ ನಡೆಸಿದರು. ಬಳಿಕ ಪ್ರತಿಭಟನೆ ನಡೆಸಿ ಪೌರತ್ವ ತಿದ್ದುಪಡೆ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿ ಕಾಯ್ದೆ ವಾಪಸ್ ಪಡೆಯುವಂತೆ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದರು.

    ಈ ವೇಳೆ ಮಾತನಾಡಿದ ವಕೀಲ ವಿಕ್ರಮ್ ಕರನಿಂಗ ಅವರು, ಎನ್‌ಆರ್‌ಸಿ ಹಾಗೂ ಸಿಎಎ ಕಾಯ್ದೆಯನ್ನು ಯಾವುದೇ ಕಾರಣಕ್ಕೂ ಜಾರಿಗೆ ತರಬಾರದು. ಡಾ. ಬಿ.ಆರ್.ಅಂಬೇಡ್ಕರ್ ಅವರು ನೀಡಿದ ಸಂವಿಧಾನ ದೇಶದ ಯಾವುದೇ ನಾಗರಿಕರಿಗೂ ಅನ್ಯಾಯವಾಗಲು ಬಿಡುವುದಿಲ್ಲ. ಆದರೆ ಬಿಜೆಪಿ ಸರ್ಕಾರ ಸಂವಿಧಾನ ವಿರೋಧಿ ಕಾಯ್ದೆಗಳನ್ನು ಜಾರಿ ತಂದರೆ ಸುಮ್ಮನೆ ಕುಳಿತುಕೊಳ್ಳದೆ ಶಾಂತಿಯುತ ಪ್ರತಿಭಟನೆ ನಡೆಸಬೇಕು ಎಂದು ಕರೆ ನೀಡಿದರು.

    ಪ್ರತಿಭಟನೆ ಬಳಿಕ ಹುಕ್ಕೇರಿ ತಹಶೀಲ್ದಾರ್ ರೇಷ್ಮಾ ತಾಳಿಕೋಟೆ ಸ್ಥಳಕ್ಕೆ ಆಗಮಿಸಿ ಪ್ರತಿಭಟನಕಾರರ ಮನವಿ ಪತ್ರ ಸ್ವೀಕರಿಸಿದರು. ಬಳಿಕ ಶಾಂತಿಯುತ ಪ್ರತಿಭಟನೆ ಮಾಡಿದ್ದಕ್ಕೆ ಪ್ರತಿಭಟನಾಕಾರರಿಗೆ ತಹಶೀಲ್ದಾರ್ ಧನ್ಯವಾದ ತಿಳಿಸಿದರು.

    ಪ್ರತಿಭಟನೆ ಹಿನ್ನೆಲೆಯಲ್ಲಿ ಸಂಕೇಶ್ವರ ಪಟ್ಟಣದಲ್ಲಿ ಬೆಳಗಾವಿ ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿಗಳ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು. ಪ್ರತಿಭಟನೆಗೆ ಬಂದೋಬಸ್ತ್ ಕಲ್ಪಿಸಿದ್ದ ಪೊಲೀಸರಿಗೆ ಪ್ರತಿಭಟನಾಕಾರರು ಗುಲಾಬಿ ಹೂವು ಕೊಟ್ಟು ಅಭಿನಂದನೆ ಸಲ್ಲಿಸಿದರು. ಪ್ರತಿಭಟನೆಯಲ್ಲಿ ನೂರಾರು ಮುಸ್ಲಿಂ ಬಾಂಧವರು ಭಾಗವಹಿಸಿದ್ದರು.

  • ಬೆಂಕಿ ಹೊತ್ತಿಕೊಂಡಿದ್ರೂ 5 ಕಿ.ಮೀ ಕ್ಯಾಂಟರ್ ಚಾಲನೆ

    ಬೆಂಕಿ ಹೊತ್ತಿಕೊಂಡಿದ್ರೂ 5 ಕಿ.ಮೀ ಕ್ಯಾಂಟರ್ ಚಾಲನೆ

    – ಚಾಲಕನ ಚಾಣಾಕ್ಷತನದಿಂದ ತಪ್ಪಿದ ಭಾರೀ ಅನಾಹುತ

    ಚಿಕ್ಕೋಡಿ: ಕ್ಯಾಂಟರ್ ಹಿಂಭಾಗದಲ್ಲಿ ಬೆಂಕಿ ಹೊತ್ತಿಕೊಂಡಿದ್ದರೂ ಚಾಲಕ ನೀರು ಇರುವ ಜಾಗದವರೆಗೂ ಚಾಲನೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಹೊರ ವಲಯದಲ್ಲಿ ನಡೆದಿದೆ.

    ಮಹಾರಾಷ್ಟ್ರದ ಕೊಲ್ಲಾಪುರದಿಂದ ತಮಿಳುನಾಡಿನ ಚೆನ್ನೈಗೆ ಜನರೇಟರ್ ಗಳನ್ನು ಕ್ಯಾಂಟರ್ ನಲ್ಲಿ ಸಾಗಿಸಲಾಗುತ್ತಿತ್ತು. ಆದರೆ ಸಂಕೇಶ್ವರ ಪಟ್ಟಣದ ಸಮೀಪದಲ್ಲಿ ಲಾರಿಯ ಹಿಂಬದಿಯಲ್ಲಿದ್ದ ಜನರೇಟರ್ ಗೆ ಆಕಸ್ಮಿಕ ಬೆಂಕಿ ತಗುಲಿ, ಹೊತ್ತಿ ಉರಿಯುತ್ತಿತ್ತು. ಇದನ್ನು ನೋಡಿದ ಸಾರ್ವಜನಿಕರು, ಸವಾರರು ಸಂಕೇಶ್ವರ ಪಟ್ಟಣದಲ್ಲಿ ಚಾಲಕನ ಗಮನಕ್ಕೆ ತಂದಿದ್ದಾರೆ.

    ಈ ವಿಚಾರ ಗೊತ್ತಾಗುತ್ತಿದ್ದಂತೆ ಚಾಲಕ ಸಂಜು ಮಾದಿಗಾರ ಅಗ್ನಿ ಶಾಮಕ ದಳದವರು ಬಂದು ಬೆಂಕಿ ನಂದಿಸುವ ವೇಳೆಗೆ ಲಾರಿ ಕೂಡ ಸುಟ್ಟು ಭಸ್ಮವಾಗುತ್ತದೆ ಎಂದು ಯೋಜಿಸಿದ್ದ. ಹೀಗಾಗಿ ತಕ್ಷಣವೇ ಚಾಣಾಕ್ಷತನ ಮೆರೆದು ವಾಟರ್ ಸರ್ವಿಸ್ ಮಾಡುವ ಗ್ಯಾರೆಜ್‍ವರೆಗೂ ಅಂದ್ರೆ ಹೆಬ್ಬಾಳ ಗ್ರಾಮದ ಸಮೀಪ 5 ಕಿ.ಮೀ ವರೆಗೆ ಜನರೇಟರ್ ಗೆ ಬೆಂಕಿ ಹತ್ತಿದ್ದರೂ ಕ್ಯಾಂಟರ್ ಚಾಲನೆ ಮಾಡಿಕೊಂಡು ಬಂದಿದ್ದಾನೆ.

    ವಾಟರ್ ಸರ್ವಿಸ್ ಗ್ಯಾರೆಜ್‍ಗೆ ಕ್ಯಾಂಟರ್ ಬಂದು ನಿಲ್ಲುತ್ತಿದ್ದಂತೆ ಚಾಲಕನ ಅಲ್ಲಿದ್ದ ಜನರೊಂದಿಗೆ ಸೇರಿ ನೀರು ಸುರಿದು ಬೆಂಕಿಯನ್ನ ನಂದಿಸಿದ್ದಾನೆ. ಘಟನೆಯಲ್ಲಿ ಜನರೇಟರ್ ಸಂಪೂರ್ಣ ಸುಟ್ಟು ಭಸ್ಮವಾದರೂ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಲಾರಿಯಲ್ಲಿದ್ದ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆಯ ದೃಶ್ಯವನ್ನು ಕೆಲವರು ತಮ್ಮ ಮೊಬೈಲ್‍ನಲ್ಲಿ ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಸಂಕೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ಕೆಲಸಕ್ಕೆ ಬರುತ್ತಿದ್ದ ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

    ಕೆಲಸಕ್ಕೆ ಬರುತ್ತಿದ್ದ ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಆರೋಪಿ ಬಂಧನ

    ಚಿಕ್ಕೋಡಿ: ಅಪ್ರಾಪ್ತೆಯ ಮೇಲೆ ಕಾಮುಕನೋರ್ವ ಅತ್ಯಾಚಾರವೆಸಗಿದ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ.

    ಚಿದಂಬರ ಹಿರೇಮಠ 28 ಎಂಬ ಕಾಮುಕ 17 ವರ್ಷದ ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿ ಈಗ ಪೊಲೀಸರ ಅತಿಥಿಯಾಗಿದ್ದಾನೆ.

    ಹೂವಿನ ವ್ಯಾಪಾರಿಯಾಗಿದ್ದ ಚಿದಂಬರನ ಅಂಗಡಿಗೆ ಕೆಲಸಕ್ಕೆಂದು ನಾನು ಹೋಗುತ್ತಿದ್ದೆ. ಈ ವೇಳೆ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಗ್ರಾಮದ ಅಪ್ರಾಪ್ತ ಬಾಲಕಿ ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ.

    ದೂರಿನ ಹಿನ್ನೆಲೆಯಲ್ಲಿ ಸಂಕೇಶ್ವರ ಪೊಲೀಸರು ಪೊಸ್ಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಚಿದಂಬರನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.