Tag: ಸಂಗೀತ ಕಾರ್ಯಕ್ರಮ

  • ರಷ್ಯಾದಲ್ಲಿ ಉಗ್ರರ ಅಟ್ಟಹಾಸ- 70ಕ್ಕೂ ಹೆಚ್ಚು ಮಂದಿ ದುರ್ಮರಣ

    ರಷ್ಯಾದಲ್ಲಿ ಉಗ್ರರ ಅಟ್ಟಹಾಸ- 70ಕ್ಕೂ ಹೆಚ್ಚು ಮಂದಿ ದುರ್ಮರಣ

    ಮಾಸ್ಕೋ: ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ಉಗ್ರರ ಅಟ್ಟಹಾಸ ಮೆರೆದಿದ್ದು, ಶುಕ್ರವಾರ ರಾತ್ರಿ ಮಾಲ್‌ ಒಂದರಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮದಲ್ಲಿ (Crocus City Hall Attack) ಉಗ್ರರು ಅಮಾಯಕರ ಜೀವ ಬಲಿತೆಗೆದುಕೊಂಡಿದ್ದಾರೆ.

    ಹೌದು. ರಷ್ಯಾದ (Russia) ರಾಜಧಾನಿ ಮಾಸ್ಕೋದ (Moscow)  ಕ್ರೋಕಸ್ ಸಿಟಿ ಹಾಲ್‌ನಲ್ಲಿ ಐವರು ಬಂದೂಕುಧಾರಿಗಳು ಜನರ ಗುಂಪಿನ ಮೇಲೆ ಗುಂಡಿನ ದಾಳಿ ನಡೆಸಿದ್ದು, ಈ ಭಯಾನಕ ಘಟನೆಯಲ್ಲಿ 70ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಜೊತೆಗೆ 140ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

    ಸ್ಥಳೀಯ ಮಾಧ್ಯಮಗಳ ಪ್ರಕಾರ, ಗುಂಡಿನ ದಾಳಿ ಪ್ರಾರಂಭವಾದ ಸ್ವಲ್ಪ ಸಮಯದ ನಂತರ ಕ್ರೋಕಸ್ ಸಿಟಿ ಹಾಲ್‌ನಲ್ಲಿ ಸ್ಫೋಟ ಸಂಭವಿಸಿದೆ. ಹಾಲ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆಯ ವೀಡಿಯೊಗಳು ಮತ್ತು ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಮಾಸ್ಕೋದ ಕ್ರೋಕಸ್ ಸಿಟಿ ಹಾಲ್‌ನಲ್ಲಿ ಗುಂಡಿನ ದಾಳಿಯ ಬಳಿಕ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ ಎಂದು ರಷ್ಯಾದ ಭದ್ರತಾ ಸಂಸ್ಥೆ ಎಫ್‌ಎಸ್‌ಬಿ ಹೇಳಿದೆ. ಜೊತೆಗೆ ಅಲ್ಲಿ ಸಿಲುಕಿರುವ ಜನರನ್ನು ರಕ್ಷಿಸುವ ಕಾರ್ಯವೂ ನಡೆಯುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ದಾಳಿಕೋರನೊಬ್ಬ ಕೂಡ ಕಾಣಿಸಿಕೊಂಡಿದ್ದಾನೆ.

    ಇರಾಕ್ ಮತ್ತು ಸಿರಿಯಾದ ಮೇಲೆ ಹಿಡಿತ ಸಾಧಿಸಲು ಪ್ರಯತ್ನಿಸುತ್ತಿದ್ದ ಭಯೋತ್ಪಾದಕ ಸಂಘಟನೆಯಾದ ಇಸ್ಲಾಮಿಕ್ ಸ್ಟೇಟ್ ದಾಳಿಯ ಹೊಣೆಗಾರಿಕೆಯನ್ನು ಹೊತ್ತುಕೊಂಡಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

    ರಷ್ಯಾದ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ದಾಳಿಯಲ್ಲಿ ತನ್ನ ದೇಶದ ಕೈವಾಡವಿಲ್ಲ ಎಂದು ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಹೇಳಿದ್ದಾರೆ.

  • ಅನಂತ್ ಅಂಬಾನಿ ಪ್ರೀ-ವೆಡ್ಡಿಂಗ್ ಕಾರ್ಯಕ್ರಮಕ್ಕೆ 4 ಗಾಡಿ ಲಗೇಜ್ ಜೊತೆ ಬಂದ ಗಾಯಕಿ

    ಅನಂತ್ ಅಂಬಾನಿ ಪ್ರೀ-ವೆಡ್ಡಿಂಗ್ ಕಾರ್ಯಕ್ರಮಕ್ಕೆ 4 ಗಾಡಿ ಲಗೇಜ್ ಜೊತೆ ಬಂದ ಗಾಯಕಿ

    ತ್ಯಂತ ಶ್ರೀಮಂತ ಕುಟುಂಬದ ಅನಂತ್ ಅಂಬಾನಿ (Anant Ambani) ಪ್ರೀ-ವೆಡ್ಡಿಂಗ್ (Pre-Wedding) ಕಾರ್ಯಕ್ರಮ ಇಂದಿನಿಂದ ಗುಜರಾತಿನ ಜಾಮ್ ನಗರ್ ದಲ್ಲಿ ಇಂದಿನಿಂದ ನಡೆಯುತ್ತಿದೆ. ಈ ಪ್ರೀ-ವೆಡ್ಡಿಂಗ್ ನ ಆಕರ್ಷಣೆ ಎಂದರೆ ಸುಪ್ರಸಿದ್ಧ ಗಾಯಕಿ ರಿಯಾನಾ (Rihanna) ಅವರ ಸಂಗೀತ ಕಾರ್ಯಕ್ರಮ. ಈ ಕಾರ್ಯಕ್ರಮವನ್ನು ನೀಡುವುದಕ್ಕಾಗಿ ಅವರು ಬರೋಬ್ಬರಿ 4 ಗಾಡಿ ಲಗೇಜ್ ನೊಂದಿಗೆ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾರೆ. ಆ ವಿಡಿಯೋ ವೈರಲ್ ಕೂಡ ಆಗಿದೆ.

    ಈ ಕಾರ್ಯಕ್ರಮ ನೀಡುವುದಕ್ಕಾಗಿ ರಿಯಾನಾ ಕೋಟಿ ಕೋಟಿ ಹಣ ಪಡೆದಿದ್ದಾರೆ ಎಂದು ಸುದ್ದಿ ಆಗಿತ್ತು. ಐವತ್ತು ಕೋಟಿಗೂ ಅಧಿಕ ಸಂಭಾವನೆಯಲ್ಲಿ ಅವರು ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ. ಅಷ್ಟೊಂದು ಹಣ ಪಡೆದಿದ್ದರಿಂದ ಕಾರ್ಯಕ್ರಮ ಯಾವ ರೀತಿಯಲ್ಲಿ ಅದ್ಧೂರಿಯಾಗಿ ಇರಬಹುದು ಎಂದು ಊಹಿಸಬಹುದು.

    ಅಂಬಾನಿ ಕುಟುಂಬ ಪ್ರೀ-ವೆಡ್ಡಿಂಗ್ ಬಾಲಿವುಡ್ ಸ್ಟಾರ್ ಸೆಲೆಬ್ರಿಟಿಗಳ ದಂಡೇ ಹಾಜರಿ ಹಾಕುತ್ತಿದೆ.  ಕೇವಲ ಬಾಲಿವುಡ್ ಸೆಲೆಬ್ರಿಟಿಗಳ ಮಾತ್ರವಲ್ಲ ತಮಿಳು, ತೆಲುಗು, ಮಲಯಾಳಂ ಹೀಗೆ ನಾನಾ ಚಿತ್ರರಂಗದ ಗಣ್ಯರಿಗೆ, ಮಾಜಿ ಮುಖ್ಯಮಂತ್ರಿಗಳಿಗೆ, ನಾನಾ ಕ್ಷೇತ್ರಗಳ ಸಾಧಕರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ.

    ಅನಂತ್ ಮತ್ತು ರಾಧಿಕಾ ಮದುವೆ ಇದೇ ಜೂನ್ 12ಕ್ಕೆ ಫಿಕ್ಸ್ ಆಗಿದೆ. ಮಾರ್ಚ್ 1ರಿಂದ 3ರವರೆಗೆ ವಿವಾಹ ಪೂರ್ವ ಕಾರ್ಯಕ್ರಮ ನಡೆಯುತ್ತಿವೆ. ಅದಕ್ಕಾಗಿ ಗುಜರಾತ್‌ನ ಜಾಮ್ ನಗರವನ್ನು ಸಿಂಗರಿಸಲಾಗಿದೆ. ಅನಂತ್ ಪ್ರೀ ವೆಡ್ಡಿಂಗ್ ಮದುವೆ ಸಂಗೀತ, ನೃತ್ಯ ಹೀಗೆ ವಿವಿಧ ರೀತಿಯ ಪ್ರದರ್ಶನಗಳು ಇರಲಿದೆ. ಖ್ಯಾತ ಗಾಯಕ ಬಿ ಪ್ರಾಕ್‌ ಅವರ ಗಾಯನ ಇರಲಿದೆ.

    ಅನಂತ್ ಅಂಬಾನಿ ಮದುವೆಯಾಗಿ ಅದ್ಧೂರಿ ದೇಗುಲ ನಿರ್ಮಿಸಲಾಗಿದೆ. ಸೊಗಸಾಗಿ ಕೆತ್ತನೆ ಮಾಡಿದ ಸ್ಥಂಭಗಳು, ಕಲಾಕೃತಿಗಳು  ಹಾಗೂ ಕರಕುಶಲವಸ್ತುಗಳು ಇಲ್ಲಿ ಕಾಣಬಹುದು. ಅನಂತ್ ಅಂಬಾನಿ ಮನೆಯ ಕಾರ್ಯಕ್ರಮದಲ್ಲಿ ಸ್ಟಾರ್ ಸೆಲೆಬ್ರಿಟಿಗಳ ದಂಡೇ ಇದೆ. ಅಮಿತಾಭ್ ಬಚ್ಚನ್, ಶಾರುಖ್ ಖಾನ್, ಸಲ್ಮಾನ್ ಖಾನ್, ಆಮೀರ್ ಖಾನ್, ರಜನಿಕಾಂತ್, ರಣ್‌ಬೀರ್ ಕಪೂರ್, ಆಲಿಯಾ ಭಟ್ (Aliaa Bhat), ಕತ್ರಿನಾ ಕೈಫ್, ದೀಪಿಕಾ ಪಡುಕೋಣೆ (Deepika Padukone) ಸೇರಿದಂತೆ ಅನೇಕರು ಭಾಗಿಯಾಗುತ್ತಿದ್ದಾರೆ.

     

    ವಿಶೇಷ ಆಹ್ವಾನಿತರಷ್ಟೇ ಈ ಮದುವೆ ಸಂಭ್ರಮದಲ್ಲಿ ಭಾಗಿಯಾಗಲಿದ್ದು, ಸುಮಾರು 1000 ಗಣ್ಯರು ಭಾಗಿಯಾಲಿದ್ದಾರೆ. ಮೈಕ್ರೋಸಾಪ್ಟ್ ಸಂಸ್ಥಾಪಕ ಬಿಲ್ ಗೇಟ್ಸ್, ಮೆಲಿಂಡಾ ಗೇಟ್ಸ್, ಮೆಟಾ ಸಿಇಒ ಮಾರ್ಕ್ ಜುಕರ್‌ಬರ್ಗ್ ಹಲವರು ಹಾಜರಿ ಹಾಕಲಿದ್ದಾರೆ.

  • ಸಂಗೀತ ಕಾರ್ಯಕ್ರಮದಲ್ಲಿ ಬಿಯರ್ ಬಾಟಲಿ, ಕಲ್ಲು ತೂರಿ ಪೊಲೀಸರ ಮೇಲೆ ಹಲ್ಲೆ

    ಸಂಗೀತ ಕಾರ್ಯಕ್ರಮದಲ್ಲಿ ಬಿಯರ್ ಬಾಟಲಿ, ಕಲ್ಲು ತೂರಿ ಪೊಲೀಸರ ಮೇಲೆ ಹಲ್ಲೆ

    ತಿರುವನಂತಪುರಂ: ಬೀಚ್‍ನಲ್ಲಿ ಆಯೋಜಿಸಲಾಗಿದ್ದ ಸಂಗೀತ ಕಾರ್ಯಕ್ರಮದ ವೇಳೆ ನಡೆದ ಘರ್ಷಣೆಯಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಓರ್ವನನ್ನು ಬಂಧಿಸಿ 50 ಜನರ ಮೇಲೆ ಪ್ರಕರಣ ದಾಖಲಾಗಿದೆ.

    ಸಂಗೀತ ಕಾರ್ಯಕ್ರಮದ ವೇಳೆ ಸ್ಥಳದಲ್ಲಿ ನಿಲ್ಲಲಾಗದವರು ಗಲಾಟೆ ಮಾಡಿದ್ದು, ಜನದಟ್ಟಣೆಯಿಂದ ಬ್ಯಾರಿಕೇಡ್‍ಗಳಿಗೂ ಹಾನಿಯಾಗಿತ್ತು. ಈ ಹಿನ್ನೆಲೆಯಲ್ಲಿ ಅಲ್ಲಿನ ಪೊಲೀಸರು ಕಾರ್ಯಕ್ರಮವನ್ನು ನಿಲ್ಲಿಸಲು ಒತ್ತಾಯಿಸಿದ್ದಾರೆ. ಆದರೆ ಅಲ್ಲಿ ನೆರೆದಿದ್ದ ಗುಪೊಂದು ಕಲ್ಲು ಹಾಗೂ ಬಿಯರ್ ಬಾಟಲಿಗಳನ್ನು ಪೊಲೀಸರ ಮೇಲೆ ತೂರಿ ಹಲ್ಲೆ ನಡೆಸಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋದ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸರನ್ನು ಕರೆಸಿ ಪರಿಸ್ಥಿತಿ ನಿಯಂತ್ರಿಸಲಾಯಿತು.

    POLICE JEEP

    ಘಟನೆಯಲ್ಲಿ 6 ಪೊಲೀಸರು ಹಾಗೂ 30ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಈ ಕುರಿತು ವೆಲ್ಲಾಯಿಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ 50 ಮಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಓರ್ವನನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಹಿಜಬ್‍ಗೆ ಅವಕಾಶ ಇಲ್ಲದ ಕಾಲೇಜಿನಿಂದ ಟಿಸಿ ಪಡೆದ ವಿದ್ಯಾರ್ಥಿನಿಯರು

    ಸರಿಯಾದ ಸೌಲಭ್ಯಗಳಿಲ್ಲದೆ ಕಾರ್ಯಕ್ರಮವನ್ನು ಆಯೋಜಿಸಿದ್ದ ಆಯೋಜಕರು ಹಾಗೂ ಜೆಡಿಟಿ ಕಾಲೇಜಿನವರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮೊಟ್ಟೆ ಎಸೆತ ರಾಷ್ಟ್ರೀಯ ಸಮಸ್ಯೆಯಂತಾಗಿದೆ, ಶಕ್ತಿ ಪ್ರದರ್ಶನ ಸರಿಯಲ್ಲ: ವಿಶ್ವನಾಥ್

    Live Tv
    [brid partner=56869869 player=32851 video=960834 autoplay=true]

  • ಕಾಫಿನಾಡಲ್ಲಿ ಗಾನಕೋಗಿಲೆ ಎಸ್.ಪಿ.ಬಿ ಹೆಜ್ಜೆ ಗುರುತು

    ಕಾಫಿನಾಡಲ್ಲಿ ಗಾನಕೋಗಿಲೆ ಎಸ್.ಪಿ.ಬಿ ಹೆಜ್ಜೆ ಗುರುತು

    ಚಿಕ್ಕಮಗಳೂರು: ಗಾನ ಕೋಗಿಲೆ, ಸಾವಿರಾರು ಹಾಡುಗಳ ಸರದಾರ, ಸಂಗೀತದ ಮಾಂತ್ರಿಕ, ಸ್ವರಭಾಸ್ಕರ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರ ಹೆಜ್ಜೆ ಗುರುತುಗಳು ಕಾಫಿನಾಡಲ್ಲೂ ಮೂಡಿವೆ.

    ದಂಪತಿ ಸಮೇತ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ರಂಭಾಪುರಿ ಪೀಠಕ್ಕೆ ಭೇಟಿ ನೀಡಿದ್ದ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಶ್ರೀಗಳ ಆಶೀರ್ವಾದ ಪಡೆದಿದ್ದರು. ಕ್ರೇಜಿಸ್ಟಾರ್ ಸ್ಟಾರ್ ರವಿಚಂದ್ರನ್ ಅಭಿನಯದ ಮಾಂಗಲ್ಯಂ ತಂತು ನಾನೇನ, ಜಯಸೂರ್ಯ ಚಿತ್ರದಲ್ಲಿ ಸಾಯಿಬಾಬಾರ ಭಕ್ತನಾಗಿ, ಮಣಿಕಂಠನ ಮಹಿಮೆ, ಬಾಳೊಂದು ಚದುರಂಗ, ತಿರುಗುಬಾಣ, ಮಹಾಯಡಬಿಡಂಗಿ, ಕಲ್ಯಾಣೋತ್ಸವ, ಮುದ್ದಿನ ಮಾವ ಸೇರಿದಂತೆ ವಿವಿಧ ಭಾಷೆಗಳ ಹಲವು ಚಿತ್ರಗಳಲ್ಲಿ ಅಭಿನಯಿಸಿದ್ದರು.

    ಶಶಿಕುಮಾರ್, ಶೃತಿ ಅಭಿನಯದ ಮುದ್ದಿನ ಮಾವ ಚಿತ್ರದ ಚಿತ್ರೀಕರಣಕ್ಕಾಗಿ ಜಿಲ್ಲೆಯ ಶೃಂಗೇರಿ, ಹೊರನಾಡು, ಕಳಸ ಸೇರಿದಂತೆ ಧಾರ್ಮಿಕ ಹಾಗೂ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದರು. ಈ ವೇಳೆ ಶೃಂಗೇರಿ ಶಾರದಾಂಬೆ, ಹೊರನಾಡು ಅನ್ನಪೂರ್ಣೇಶ್ವರಿ ದರ್ಶನ ಪಡೆದಿದ್ದರು. ಇಲ್ಲಿ ಚಿತ್ರೀಕರಣವೂ ನಡೆದಿತ್ತು. ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು ಹಲವು ಸಂಗೀತದ ಕಾರ್ಯಕ್ರಮಗಳನ್ನು ಕಾಫಿನಾಡಿನಲ್ಲಿ ನಡೆಸಿಕೊಟ್ಟಿದ್ದಾರೆ.

    2006ರಲ್ಲಿ ಬಾಳೆಹೊನ್ನೂರಿನ ರಂಭಾಪುರಿ ಪೀಠದ ಆವರಣದಲ್ಲಿ ನಡೆದ ಸಂಗೀತದ ಕಾರ್ಯಕ್ರಮಕ್ಕೂ ಅವರು ಆಗಮಿಸಿದ್ದರು. ಆದರೆ ಬಾಳೆಹೊನ್ನೂರಿನಲ್ಲಿ ಭಾರೀ ಮಳೆ ಸುರಿದಿದ್ದರಿಂದ ಅಂದು ಕಾರ್ಯಕ್ರಮ ನಡೆದಿರಲಿಲ್ಲ. ಜನ ಗಾನ ಗಂಧರ್ವನ ನೋಡಲು ಮುಗಿಬಿದ್ದಿದ್ದರು. ಅಂದು ದಂಪತಿ ಸಮೇತ ರಂಭಾಪುರಿ ಶ್ರೀಗಳ ಆಶೀರ್ವಾದ ಪಡೆದಿದ್ದರು. ಮಠದಲ್ಲಿ ಓಡಾಡಿ ಕಾಲ ಕಳೆದಿದ್ದರು.

  • ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಅಮೇರಿಕ ಡಿಜೆ ಮಾರ್ಷ್ ಮೆಲ್ಲೋ

    ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಅಮೇರಿಕ ಡಿಜೆ ಮಾರ್ಷ್ ಮೆಲ್ಲೋ

    ಪುಣೆ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಅಮೇರಿಕದ ಸಂಗೀತ ನಿರ್ಮಾಪಕ ಹಾಗೂ ಖ್ಯಾತ ಡಿಜೆ ಮಾರ್ಷ್ ಮೆಲ್ಲೋ ಅವರು ತಮ್ಮ ಸಂಗೀತ ಕಾರ್ಯಕ್ರಮದಲ್ಲಿ ಮೌನಾಚರಣೆ ಮಾಡುವ ಮೂಲಕ ನಮನವನ್ನು ಸಲ್ಲಿಸಿದ್ದಾರೆ.

    ಭಾನುವಾರದಂದು ಪುಣೆಯಲ್ಲಿ ನಡೆದ ವಿಎಚ್1 ಸೂಪರ್‍ಸೋನಿಕ್ 2019ರ ಸಂಗೀತ ಕಾರ್ಯಕ್ರಮಕ್ಕೆ ಮಾರ್ಷ್ ಮೆಲ್ಲೋ ಆಗಮಿಸಿದ್ದರು. ಈ ವೇಳೆ ತಮ್ಮ ಡಿಜೆ ಕಾರ್ಯಕ್ರಮವನ್ನು ಆರಂಭಿಸುವ ಮುನ್ನ ಪುಲ್ವಾಮ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರ ಆತ್ಮಕ್ಕೆ ಶಾಂತಿ ಸಿಗಲೆಂದು 2 ನಿಮಿಷ ಮೌನಾಚರಣೆ ಮಾಡಿ ವೀರರಿಗೆ ನಮನ ಸಲ್ಲಿಸಿದ್ದಾರೆ.

    ಅಷ್ಟೇ ಅಲ್ಲದೇ ಪುಲ್ವಾಮ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ನನ್ನ ನಮನ ಎಂದು ಬರೆದು ಮಾರ್ಷ್ ಮೆಲ್ಲೋ ಅವರು ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

    ಈ ಸಂಗೀತ ಕಾರ್ಯಕ್ರಮದಲ್ಲಿ ಸಾಕಷ್ಟು ಸ್ವದೇಶಿ ಕಲಾವಿದರು ತಮ್ಮ ಸಂಗೀತ ಕಾರ್ಯಕ್ರಮ ನೀಡಿದರು. ಆದರೇ ಯಾರು ಕೂಡ ಪುಲ್ವಾಮ ದಾಳಿಯನ್ನು ನೆನೆಪಿಸಿಕೊಳ್ಳಲಿಲ್ಲ. ವಿದೇಶಿ ಕಲಾವಿದರಾದರೂ ಮಾರ್ಷ್ ಮೆಲ್ಲೋ ಅವರು ಭಾರತದ ವೀರ ಯೋಧರಿಗೆ ನಮನ ಸಲ್ಲಿಸಿ ಅಭಿಮಾನಿಗಳ ಮನ ಗೆದ್ದಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಗಳ ಸಂಗೀತ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ಸ್ ಹಾಕಿದ ಅಂಬಾನಿ ದಂಪತಿ

    ಮಗಳ ಸಂಗೀತ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ಸ್ ಹಾಕಿದ ಅಂಬಾನಿ ದಂಪತಿ

    ಉದಯ್‍ಪುರ: ಶನಿವಾರ ರಾತ್ರಿ ಸರೋವರಗಳ ನಗರಿ ಉದಯ್‍ಪುರದಲ್ಲಿ ಆಯೋಜಿಸಿದ್ದ ಇಶಾ ಅಂಬಾನಿ ಮದುವೆಯ ಸಂಗೀತ ಕಾರ್ಯಕ್ರಮದಲ್ಲಿ ಉದ್ಯಮಿ ಮುಕೇಶ್ ಅಂಬಾನಿ ಹಾಗೂ ಪತ್ನಿ ನೀತಾ ಅಂಬಾನಿ ನೃತ್ಯ ಮಾಡಿ ಸಂಭ್ರಮಿಸಿದ್ದಾರೆ.

    ಮುಕೇಶ್ ಅಂಬಾನಿ ಹಾಗೂ ನೀತಾ ಅಂಬಾನಿಯ ಮುದ್ದಿನ ಮಗಳಾದ ಇಶಾ ಅಂಬಾನಿ ಹಾಗೂ ಆನಂದ್ ಪಿರಾಮಾಲ್ ಅವರ ವಿವಾಹವು ಡಿಸೆಂಬರ್ 12ರಂದು ಅದ್ದೂರಿಯಾಗಿ ನಡೆಯಲಿದೆ. ಮದುವೆಯ ಪೂರ್ವ ಶಾಸ್ತ್ರಗಳ ಪ್ರಕಾರ ಶನಿವಾರ ರಾತ್ರಿ ಉದಯ್‍ಪುರದಲ್ಲಿ ಇಶಾ ಅವರ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂಭ್ರಮದಲ್ಲಿ ಬಾಲಿವುಡ್‍ನ ಖ್ಯಾತ ನಟ ನಟಿಯರು ಹಾಗೂ ಸಿನಿಮಾ ರಂಗದ ಗಣ್ಯರು ಭಾಗಿಯಾಗಿದ್ದರು.

    https://www.instagram.com/p/BrJD2i3lz_0/

    ಬಿಟೌನ್ ಸ್ಟಾರ್‌ಗಳಾದ ಪ್ರಿಯಾಂಕ ಚೋಪ್ರಾ ಹಾಗೂ ಪತಿ ನಿಕ್ ಜೋನ್ಸ್, ಐಶ್ವರ್ಯಾ ರೈ ಬಚ್ಚನ್ ಹಾಗೂ ಅಭಿಷೇಕ್ ಬಚ್ಚನ್, ಶಾರೂಕ್ ಖಾನ್, ಅಮೀರ್ ಖಾನ್ ಹಾಗೂ ಸಲ್ಮಾನ್ ಖಾನ್ ಸೇರಿದಂತೆ ಇಡೀ ಬಾಲಿವುಡ್ ಸಿನಿರಂಗವೇ ಇಶಾ ಅಂಬಾನಿ ಸಂಗೀತ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

    ಈ ಅದ್ಧೂರಿ ಸಂಭ್ರಮಾಚರಣೆಯಲ್ಲಿ ಇಶಾ ಅಂಬಾನಿ ಹಾಗೂ ಆನಂದ್ ಜೊತೆಗೂಡಿ `ಕಬಿ ಅಲ್ವಿದಾ ನಾ ಕೆಹೆನಾ’ ಚಿತ್ರದ `ಮಿಥುವಾ’ ಹಾಡಿಗೆ ರೊಮಾಂಟಿಕ್ ಆಗಿ ಸ್ಟೆಪ್ಸ್ ಹಾಕುವ ಮೂಲಕ ಎಲ್ಲರ ಮನ ಗೆದ್ದರು. ಬಳಿಕ ಇಶಾ ಹಾಗೂ ಆನಂದ್ ಜೊತೆ ಮುಕೇಶ್ ಅಂಬಾನಿ ಹಾಗೂ ನೀತಾ ಅಂಬಾನಿ, ಮಗ ಅನಂತ್ ಹಾಗೂ ಆಕಾಶ್ ಸೇರಿ ಒಟ್ಟಾಗಿ ಹೆಜ್ಜೆ ಹಾಕಿ ಖುಷಿಪಟ್ಟರು. ಅದರಲ್ಲೂ ಮುಕೇಶ್ ಅಂಬಾನಿ ಹಾಗೂ ನೀತಾ ಅವರ ಡ್ಯಾನ್ಸ್ ಸ್ಟೆಪ್ಸ್ ಗೆ ಎಲ್ಲರು ಫಿದಾ ಆಗಿದ್ದಾರೆ.

    https://www.instagram.com/p/BrJn8pfAo8X/?utm_source=ig_embed&utm_campaign=embed_video_watch_again

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮೈಸೂರಿನಲ್ಲಿ ಗಾಯನ ನಿಲ್ಲಿಸಲಿದ್ದಾರೆ ಗಾನ ಕೋಗಿಲೆ ಎಸ್.ಜಾನಕಿ!

    ಮೈಸೂರಿನಲ್ಲಿ ಗಾಯನ ನಿಲ್ಲಿಸಲಿದ್ದಾರೆ ಗಾನ ಕೋಗಿಲೆ ಎಸ್.ಜಾನಕಿ!

    ಮೈಸೂರು: ಗಾನ ಕೋಗಿಲೆ ಎಂದೆ ಪ್ರಸಿದ್ಧಿ ಪಡೆದಿರುವ ಖ್ಯಾತ ಗಾಯಕಿ ಎಸ್. ಜಾನಕಿ ಅವರು ತಮ್ಮ ಗಾಯನ ಪಯಣದಿಂದ ಹಿಂದೆ ಸರಿಯಲು ನಿರ್ಧಾರ ಮಾಡಿದ್ದಾರೆ.

    ಮೈಸೂರು ವಿಶ್ವವಿದ್ಯಾಲಯದ ಬಯಲು ರಂಗಮಂದಿರದಲ್ಲಿ ಅಕ್ಟೋಬರ್ 28 ರಂದು ನಡೆಯುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ತಿಳಿಸಿದ್ದಾರೆ. ಅಷ್ಟೇ ಅಲ್ಲದೇ ತಮ್ಮ ಜೀವನದ ನಿರಂತರ ಆರು ದಶಕದ ಸಂಗೀತ ಗಾಯನದ ಪಯಣದ ಕೊನೆಯ ಕಾರ್ಯಕ್ರಮ ಎಂದು ತಿಳಿಸಿದ್ದಾರೆ.

    ದಕ್ಷಿಣ ಭಾರತದ ಹೆಮ್ಮೆಯ ಗಾಯಕಿ ಎಂದೆ ಹೆಗ್ಗಳಿಕೆಯನ್ನು ಪಡೆದಿರುವ ಎಸ್.ಜಾನಕಿ ಅವರು, “ನನಗೆ ವಯಸ್ಸಾಗಿದೆ. ಇನ್ನು ಮುಂದೆ ನಾನು ಹಾಡುವುದಿಲ್ಲ. ಆದ್ದರಿಂದ ಗಾಯನದಿಂದ ಹಿಂದೆ ಸರಿಯುತ್ತಿದ್ದೇನೆ. ಈ ವಯಸ್ಸಿನಲ್ಲಿ ಹಾಡುವುದನ್ನು ನಿಲ್ಲಿಸುವುದೇ ಸರಿ ಎನಿಸಿದೆ. ಆದ್ದರಿಂದ ಮೈಸೂರಿನಲ್ಲಿ ನಡೆಯಲಿರುವ ಕಾರ್ಯಕ್ರಮವೇ ನನ್ನ ಕೊನೆಯ ಬಹಿರಂಗ ಗಾಯನ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮ ಮುಗಿದ ನಂತರ ನಾನು ಇನ್ನು ಮುಂದೆ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಹಾಗೂ ಟಿವಿ, ಪತ್ರಿಕೆಗಳಿಗೆ ಸಂದರ್ಶನವನ್ನು ನೀಡುವುದಿಲ್ಲ” ಎಂದು ಸ್ಪಷ್ಟವಾಗಿ ತಿಳಿಸಿದ್ದಾರೆ.

    ಎಸ್ ಜಾನಕಿ ಅವರಿಗೆ ಈಗ ಸುಮಾರು 80 ವರ್ಷ ವಯಸ್ಸಾಗಿದ್ದು, ಸುಮಾರು 17 ಭಾಷೆಗಳಲ್ಲಿ 48 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಜೊತೆಗೆ ನಾಲ್ಕು ಬಾರಿ ತಮ್ಮ ಹಾಡಿಗೆ ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ಇವರು 1952ರಲ್ಲಿ ಅಂದಿನ ಪ್ರಖ್ಯಾತ ಸಂಗೀತ ನಿರ್ದೇಶಕ ಜಿ.ಕೆ. ವೆಂಕಟೇಶ್ ಅವರಿಂದ ಆಯೋಜಿಸಲ್ಪಟ್ಟಿದ್ದ ಸಂಗೀತ ಸಂಜೆಯಲ್ಲಿ ಪಿ. ಬಿ. ಶ್ರೀನಿವಾಸ್ ಜೊತೆಗೆ ಹಾಡಿದ್ದರು. ಹೀಗಾಗಿ ಜಾನಕಿ ಅವರು ತಮ್ಮ ಸಂಗೀತ ಪಯಣವನ್ನು ಪ್ರಥಮ ಬಾರಿಗೆ ಮಹಾನಗರಿಯಲ್ಲಿಯೇ ಆರಂಭಿಸಿದ್ದರು. ಇದೀಗ ಅವರ ಕೊನೆಯ ಗಾಯನ ಕೂಡ ಇಲ್ಲಿಯೇ ನಡೆಯಲಿದೆ.

    ಈ ಕಾರ್ಯಕ್ರಮಕ್ಕೆ ತಮಿಳುನಾಡು, ಆಂಧ್ರ ಮತ್ತು ಕೇರಳದಿಂದಲೂ ಅನೇಕ ಅಭಿಮಾನಿಗಳು ಬರುವ ನಿರೀಕ್ಷೆ ಇದೆ. ಈ ಬಾರಿ ರಾಜಮಾತೆ ಪ್ರಮೋದಾದೇವಿ ಅವರಿಂದ ಸನ್ಮಾನವನ್ನು ಸ್ವೀಕರಿಸಲಿದ್ದಾರೆ ಎಂದು ಅಂದಿನ ಕಾರ್ಯಕ್ರಮ ಆಯೋಜಕರು ತಿಳಿಸಿದ್ದಾರೆ.

     

    https://www.youtube.com/watch?v=u7hM79uZF_U

  • ಇಂಗ್ಲೆಂಡ್: ಅರಿಯಾನಾ ಗ್ರಾಂಡೇ ಸಂಗೀತ ಕಾರ್ಯಕ್ರಮದಲ್ಲಿ ಬಾಂಬ್ ಸ್ಫೋಟ – 19 ಮಂದಿ ಸಾವು

    ಇಂಗ್ಲೆಂಡ್: ಅರಿಯಾನಾ ಗ್ರಾಂಡೇ ಸಂಗೀತ ಕಾರ್ಯಕ್ರಮದಲ್ಲಿ ಬಾಂಬ್ ಸ್ಫೋಟ – 19 ಮಂದಿ ಸಾವು

    ಲಂಡನ್: ಇಂಗ್ಲೆಂಡ್‍ನ ಮ್ಯಾಂಚೆಸ್ಟರ್ ಅರೇನಾದಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಪಾಪ್ ಗಾಯಕಿ ಅರಿಯಾನ ಗ್ರಾಂಡೇ ಸಂಗೀತ ಕಾರ್ಯಕ್ರಮದಲ್ಲಿ ಬಾಂಬ್ ಸ್ಫೋಟಗೊಂಡು ಕನಿಷ್ಠ 19 ಮಂದಿ ಬಲಿಯಾಗಿದ್ದಾರೆ.

    ಘಟನೆಯಲ್ಲಿ 50ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾತ್ರಿ 3 ಗಂಟೆಗೆ ಈ ಘಟನೆ ನಡೆದಿದ್ದು, ಸ್ಫೋಟದ ಸದ್ದಿಗೆ ಕಾರ್ಯಕ್ರಮದಲ್ಲಿ ನೆರೆದಿದ್ದ ಜನ ಭಯಭೀತರಾಗಿ ದಿಕ್ಕಾಪಾಲಾಗಿ ಓಡಿದ್ದಾರೆ. ಇದರಿಂದಾಗಿ ಸ್ಥಳದಲ್ಲಿ ಕಾಲ್ತುಳಿತ ಸಂಭವಿಸಿದ್ದರಿಂದ ಸಾವಿನ ಸಂಖ್ಯೆ ಹೆಚ್ಚಾಗಿದೆ.

    ಬಾಂಬ್ ಸ್ಫೋಟವಾದ ಸ್ಥಳದಲ್ಲಿ ತುರ್ತು ಸೇವೆ ಒದಗಿಸಲಾಗುತ್ತಿದ್ದು ಹಲವರು ಮೃತಪಟ್ಟಿದ್ದರೆ, ಹಲವರಿಗೆ ಗಾಯಗಳಾಗಿವೆ. ಆ ಸ್ಥಳದಲ್ಲಿ ಶೀಘ್ರ ಕಾರ್ಯಾಚರಣೆ ಕೈಗೊಳ್ಳುತ್ತಿದ್ದು ಗಾಯಾಳುಗಳ ಬಗ್ಗೆ ಶೀಘ್ರವೇ ಮಾಹಿತಿ ನೀಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    ಸಂಗೀತ ಕಾರ್ಯಕ್ರಮದಲ್ಲಿ ಎರಡು ಬಾರಿ ದೊಡ್ಡ ಶಬ್ದ ಕೇಳಿಸಿದೆ. ಈ ಬಗ್ಗೆ ತನಿಖೆ ನಡೆಯುತ್ತಿದ್ದು ಇದೊಂದು ಭಯೋತ್ಪಾದನಾ ಕೃತ್ಯ ಎಂದು ಪರಿಗಣಿಸಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.

    https://twitter.com/ArianaGrande/status/866849021519966208

    https://www.youtube.com/watch?v=4UyH__FSlbo