Tag: ಸಂಗೊಳ್ಳಿ ರಾಯಣ್ಣ

  • ಉದ್ಘಾಟನೆಗೊಳ್ಳದ ರಾಯಣ್ಣನ ಫೈಬರ್ ಮೂರ್ತಿ ತೆರವು ಮಾಡಿ ಕಂಚಿನ ಪುತ್ಥಳಿ ನಿರ್ಮಾಣ: ನಾರಾ ಭರತ್ ರೆಡ್ಡಿ

    ಉದ್ಘಾಟನೆಗೊಳ್ಳದ ರಾಯಣ್ಣನ ಫೈಬರ್ ಮೂರ್ತಿ ತೆರವು ಮಾಡಿ ಕಂಚಿನ ಪುತ್ಥಳಿ ನಿರ್ಮಾಣ: ನಾರಾ ಭರತ್ ರೆಡ್ಡಿ

    ಬಳ್ಳಾರಿ: ಈಗಿರುವ ಸಂಗೊಳ್ಳಿ ರಾಯಣ್ಣನ ಪುತ್ಥಳಿಯು (Sangolli Rayanna Statue) ಫೈಬರ್‌ನಿಂದ ತಯಾರಿಸಲಾಗಿದ್ದು, ಇದನ್ನು ತೆರವುಗೊಳಿಸಿ ನೂತನ ಕಂಚಿನ ಪುತ್ಥಳಿಯನ್ನು ನಿರ್ಮಿಸಿ ಸ್ಥಾಪಿಸಲಾಗುವುದು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ (Nara Bharath Reddy) ಹೇಳಿದರು.

    ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಎದುರು ಇರುವ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದ ನಂತರ ಸಮುದಾಯದ ಮುಖಂಡರು ಹಾಗೂ ವೀರ ಸಂಗೊಳ್ಳಿ ರಾಯಣ್ಣ ಪುತ್ಥಳಿ ನಿರ್ಮಾಣ ಹೋರಾಟ ಸಮಿತಿಯ ಮುಖಂಡರೊಂದಿಗೆ ಮಾತುಕತೆ ನಡೆಸಿದರು. ಇದನ್ನೂ ಓದಿ: ಧರ್ಮಸ್ಥಳ ಕೇಸ್ NIAಗೆ ಇಲ್ಲ – ಸಿಎಂ ಪರೋಕ್ಷ ಹೇಳಿಕೆ

     

    ಈ ಹಿಂದೆ ರಾಯಣ್ಣನ ಪ್ರತಿಮೆ ಸ್ಥಾಪನೆ ವೇಳೆ ಸರ್ಕಾರ ಹಾಗೂ ಕಾನೂನಾತ್ಮಕ ಅನುಮತಿಗಳನ್ನು ಪಡೆಯಲಾಗಿರಲಿಲ್ಲ, ಹೀಗಾಗಿ ಪುತ್ಥಳಿಯ ಅನಾವರಣ ಕಾರ್ಯ ನೆನೆಗುದಿಗೆ ಬಿದ್ದಿತ್ತು, ಸಮುದಾಯದ ಮುಖಂಡರ ಬೇಡಿಕೆಯನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಗಮನಕ್ಕೆ ತಂದು, ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ಅನುಮತಿ ದೊರಕಿಸಿ ಕೊಟ್ಟಿದ್ದೇವೆ ಎಂದರು. ಇದನ್ನೂ ಓದಿ:  ಖಾಸಗಿ ಕಾಲೇಜಿನ ವೈದ್ಯ ವಿದ್ಯಾರ್ಥಿನಿಯಿಂದ ಬಿಮ್ಸ್‌ನಲ್ಲಿ ರೋಗಿಗಳಿಗೆ ಚಿಕಿತ್ಸೆ!

    ಪುತ್ಥಳಿಯ ಸ್ಥಾಪನೆ ವಿಚಾರದಲ್ಲಿ ನನ್ನೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್, ಮಾಜಿ ಸಚಿವ ಬಿ.ನಾಗೇಂದ್ರ ಅವರು ಕೂಡ ಸರ್ಕಾರದ ಮೇಲೆ ಒತ್ತಡ ತಂದು ಈ ಕಾರ್ಯವನ್ನು ಸಾಧ್ಯವಾಗಿಸಿದ್ದಾರೆ. ಸಮುದಾಯದ ಪರ ಅವರಿಗೂ ಧನ್ಯವಾದ ಸಲ್ಲಿಸುವೆ. ಈಗಿರುವ ಪುತ್ಥಳಿಯು ಫೈಬರ್ ನಿಂದ ತಯಾರಿಸಲಾಗಿದ್ದು, ಈ ಪುತ್ಥಳಿಯನ್ನು ತೆರವುಗೊಳಿಸಲಾಗುವುದು ಎಂದು ಹೇಳಿದ ಶಾಸಕ ನಾರಾ ಭರತ್ ರೆಡ್ಡಿ, ರಾಯಣ್ಣನ ನೂತನ ಕಂಚಿನ ಪ್ರತಿಮೆಯನ್ನು ನಿರ್ಮಿಸಿ, ಇದೇ ಜಾಗದಲ್ಲಿ ಸ್ಥಾಪಿಸಿ, ಅನಾವರಣಗೊಳಿಸಲಾಗುವುದು ಎಂದು ಭರವಸೆ ನೀಡಿದರು.

    ಈ ಸಂದರ್ಭ ಲಿಡ್ಕರ್ ಅಧ್ಯಕ್ಷ ಮುಂಡ್ರಿಗಿ ನಾಗರಾಜ, ಕುರುಬರ ಸಂಘದ ಜಿಲ್ಲಾಧ್ಯಕ್ಷ ಡಾ.ಗಾದಿಲಿಂಗನಗೌಡ, ಮಾಜಿ ಮೇಯರ್ ಎಂ.ರಾಜೇಶ್ವರಿ, ಮಾಜಿ ಉಪ ಮೇಯರ್ ಬೆಣಕಲ್ ಬಸವರಾಜಗೌಡ, ಹೋರಾಟ ಸಮಿತಿಯ ಇಟ್ಟಂಗಿ ಭಟ್ಟಿ ಯರಿಸ್ವಾಮಿ, ಕೆ.ಮೋಹನ್, ಸುಬ್ಬರಾಯುಡು, ಬೆಣಕಲ್ ಮಂಜುನಾಥ, ಕೆ.ಯಶೋಧಾ, ಕೊಳಗಲ್ ಅಂಜಿನಿ, ಸುರೇಂದ್ರಗೌಡ, ಕವಿತಾ ಸೇರಿದಂತೆ ಹಲವರು ಇದ್ದರು.

  • ಸಂಗೊಳ್ಳಿ ರಾಯಣ್ಣನ ಮೂರ್ತಿ ಭಗ್ನ – ಯುವಕ ಪೊಲೀಸ್ ವಶಕ್ಕೆ

    ಸಂಗೊಳ್ಳಿ ರಾಯಣ್ಣನ ಮೂರ್ತಿ ಭಗ್ನ – ಯುವಕ ಪೊಲೀಸ್ ವಶಕ್ಕೆ

    ಧಾರವಾಡ: ಸಂಗೊಳ್ಳಿ ರಾಯಣ್ಣ (Sangolli Rayanna) ಹಾಗೂ ರೈತ ಹುತಾತ್ಮನ ಮೂರ್ತಿ ಭಗ್ನ ಮಾಡಿದ ಘಟನೆ ಧಾರವಾಡದ (Dharwad) ಜಿಲ್ಲೆಯ ನವಲಗುಂದ ತಾಲೂಕಿನ ಅಳಗವಾಡಿ ಗ್ರಾಮದಲ್ಲಿ ನಡೆದಿದೆ.

    ನರಗುಂದ-ನವಲಗುಂದ ಬಂಡಾಯದ ಗೋಲಿಬಾರ್‌ನಲ್ಲಿ ಹುತಾತ್ಮರಾದ ಬಸಪ್ಪ ಲಕ್ಕುಂಡಿ ಪ್ರತಿಮೆ ಭಗ್ನ ಮಾಡಿದ ಯುವಕ, ಗ್ರಾಮದ ಬಸ್ ನಿಲ್ದಾಣದ ಎದುರಿನ ಸಂಗೊಳ್ಳಿ ರಾಯಣ್ಣನ ಮೂರ್ತಿ ಹಾಗೂ ಮೂರ್ತಿಯ ಖಡ್ಗಕ್ಕೆ ಭಗ್ನ ಮಾಡಿದ್ದಾನೆ. ಮೂರ್ತಿಯ ಕೆಲ ಭಾಗ ಭಗ್ನ ಮಾಡಿರುವವನು ಮಾನಸಿಕ ಅಸ್ವಸ್ಥ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಒಂದು ದೇಶ ಒಂದು ಚುನಾವಣೆ ಮಸೂದೆಗೆ ಕ್ಯಾಬಿನೆಟ್‌ ಒಪ್ಪಿಗೆ

    ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದ್ದು, ಘಟನೆ ಬಳಿಕ ನವಲಗುಂದ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸದ್ಯ ಭಗ್ನವಾಗಿರುವ ಮೂರ್ತಿಗಳಿಗೆ ಬಟ್ಟೆ ಸುತ್ತಿರುವ ಪೊಲೀಸರು, ಭಗ್ನ ಮಾಡಿರೋ ಮಾನಸಿಕ ಅಸ್ವಸ್ಥನನ್ನು ವಶಕ್ಕೆ ಪಡೆದು ತನಿಖೆ ನಡೆಸಿದ್ದಾರೆ. ಇದನ್ನೂ ಓದಿ: ಉದಯನಿಧಿ ಸ್ಟಾಲಿನ್‌ಗೆ ಡಿಸಿಎಂ ಪಟ್ಟ – ಶೀಘ್ರವೇ ಘೋಷಣೆ ಸಾಧ್ಯತೆ

    ಅಳಗವಾಡಿ ಗ್ರಾಮದಲ್ಲಿ ಪೊಲೀಸರು ಶಾಂತಿ ಸಭೆನ್ನು ಮಾಡಿದ್ದು, ಐದು ದಿನಗಳಲ್ಲಿ ರಾಯಣ್ಣನ ಹಾಗೂ ರೈತ ಹುತಾತ್ಮನ ಹೊಸ ಮೂರ್ತಿ ಮಾಡಿಸಿ ಕೊಡುವ ಭರವಸೆ ನೀಡಿದ್ದಾರೆ. ಮೂರ್ತಿ ಭಗ್ನ ಮಾಡಿದವನ ಮೇಲೆ ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಇದನ್ನೂ ಓದಿ: ಕರ್ನಾಟಕ ಸುರಕ್ಷಿತವಲ್ಲ, ರಾಜ್ಯವನ್ನು ಲೂಟಿ ಹೊಡೆಯುತ್ತಿದ್ದಾರೆ: ರವಿಕುಮಾರ್ ಕಿಡಿ

  • ಕರ್ನಾಟಕ ಸುರಕ್ಷಿತವಲ್ಲ, ರಾಜ್ಯವನ್ನು ಲೂಟಿ ಹೊಡೆಯುತ್ತಿದ್ದಾರೆ: ರವಿಕುಮಾರ್ ಕಿಡಿ

    ಕರ್ನಾಟಕ ಸುರಕ್ಷಿತವಲ್ಲ, ರಾಜ್ಯವನ್ನು ಲೂಟಿ ಹೊಡೆಯುತ್ತಿದ್ದಾರೆ: ರವಿಕುಮಾರ್ ಕಿಡಿ

    ಬೆಂಗಳೂರು: ಕರ್ನಾಟಕ ಸುರಕ್ಷಿತವಲ್ಲ, ರಾಜ್ಯವನ್ನು ಲೂಟಿ ಹೊಡೆಯುತ್ತಿದ್ದಾರೆ ಎಂದು ನಾಗಮಂಗಲ ಗಲಭೆ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ರವಿಕುಮಾರ್ (N Ravikumar) ಸಿಎಂ ವಿರುದ್ಧ ಕಿಡಿಕಾರಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ (CM Siddaramaiah) ಅವರೇ ನಿಮ್ಮ ಆಡಳಿತದಲ್ಲಿ ಪಾಕಿಸ್ತಾನ್ ಪರ ಘೋಷಣೆ ಕೂಗುತ್ತಾರೆ. ಪ್ಯಾಲೆಸ್ತೀನ್ ಧ್ವಜ ಹಾರಿಸುತ್ತಾರೆ. ರಾಮೇಶ್ವರಂ ಕೆಫೆ ಮೇಲೆ ಬಾಂಬ್ ಹಾಕಿದ್ದಾರೆ. ಕುಕ್ಕರ್ ಬ್ಲಾಸ್ಟ್ ಮಾಡಿದ್ದಾರೆ. ಕರ್ನಾಟಕ ಸುರಕ್ಷಿತವಲ್ಲ, ರಾಜ್ಯವನ್ನು ಲೂಟಿ ಹೊಡೆಯುತ್ತಿದ್ದಾರೆ. ಎಲ್ಲಾ ಇಲಾಖೆಗಳಲ್ಲೂ ಭ್ರಷ್ಟಾಚಾರ ಮನೆಮಾತಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.ಇದನ್ನೂ ಓದಿ:ಸಿನಿ ಪ್ರೇಕ್ಷಕರಿಗೆ ಗುಡ್ ನ್ಯೂಸ್: ಸೆ.20ರಂದು ಟಿಕೆಟ್ ಬೆಲೆ 99ಕ್ಕೆ ಇಳಿಕೆ

    ಅಶ್ವಥ್ ನಾರಾಯಣ್ ನೇತೃತ್ವದ ಸತ್ಯಶೋಧನಾ ಸಮಿತಿ ನಾಗಮಂಗಲಕ್ಕೆ ಭೇಟಿ ನೀಡಿತ್ತು. ಅದೇ ರೀತಿ ಪಿಎಫ್‌ಐ ಬೆಂಬಲಿತ, ದೇಶದ್ರೋಹಿ ಸಂಘಟನೆ, ಎಸ್‌ಡಿಪಿಐ (SDPI) ಕೂಡ ಅಲ್ಲಿಯೇ ಹೋಗಿತ್ತು. ಎಸ್‌ಡಿಪಿಐ (PFI) ಅಧ್ಯಕ್ಷ ಅಬ್ದುಲ್ ಮಜೀದ್ ನೇತೃತ್ವದಲ್ಲಿ ಸತ್ಯಶೋಧನಾ ಸಮಿತಿ ವರದಿ ಮಾಡಲು ಹೋಗಿತ್ತು. ಅವರ ವರದಿ ಏನಿರುತ್ತದೆ ಎಂದು ನಮಗೆ ಈಗಾಗಲೇ ಗೊತ್ತಾಗಿದೆ. ಹಿಂದೂಗಳಿಗೆ ಅನ್ಯಾಯ ಮಾಡಿದ್ದಾರೆ. ಅವರೇ ಮೆರವಣಿಗೆ ವೇಳೆ ಕಲ್ಲು ಹೊಡೆದಿದ್ದಾರೆ ಎಂದು ವರದಿ ನೀಡುತ್ತಾರೆ. ಹಿಂದೂ ವಿರೋಧಿ ಇದ್ದರೆ ಅದು ಸಿದ್ದರಾಮಯ್ಯನವರೇ, ಗಣೇಶ ಕೂರಿಸಿದವರಿಗೆ ದ್ರೋಹ ಬಗೆದವರೂ ಅವರೇ ಎಂದು ಹೇಳಿದರು.

    ಇದೇ ವೇಳೆ ಸಂಗೊಳ್ಳಿ ರಾಯಣ್ಣನಂತೆ ತಮ್ಮ ಹಿಂದೆಯೂ ಪಿತೂರಿ ನಡೀತಿದೆ ಎಂದು ಸಿಎಂ ನೀಡಿದ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣನಿಗೆ ಅವರ ಬಾಂಧವರೇ ಹಿಡಿದುಕೊಟ್ಟು ದ್ರೋಹ ಮಾಡಿದಂತೆ ನನಗೂ ದ್ರೋಹ ಮಾಡುತ್ತಾರೆ ಎಂದಿದ್ದೀರಿ. ರಾಯಣನನ್ನು ಹಿಡಿದುಕೊಟ್ಟಿದ್ದು ಅತ್ಯಂತ ದೇಶದ್ರೋಹತನ, ಕೆಟ್ಟದ್ದು ಅದನ್ನು ನಾವು ಒಪ್ಪುತ್ತೇವೆ. ಆದರೆ ನಿಮ್ಮನ್ನು ಯಾರು ಹಿಡಿದು ಕೊಡುತ್ತಿದ್ದಾರೆ. ಅದನ್ನು ಸಿಎಂ ಬಹಿರಂಗಪಡಿಸಬೇಕು. ಯಾರು ಸಿಎಂ ಆಗಬೇಕು ಅನ್ಕೊಂಡಿದ್ದಾರೋ ಅವರು ನಿಮ್ಮನ್ನು ಬಲಿ ಕೊಡ್ತಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.

    ಯಾರು ನಿಮ್ಮನ್ನ ರಾಯಣ್ಣನ ರೀತಿಯಲ್ಲಿ ದ್ರೋಹ ಮಾಡ್ತಿದ್ದಾರೆ? ರಾಯಣ್ಣನಿಗೂ ಸಿದ್ದರಾಮಯ್ಯಗೂ ಎತ್ತಲಿಂದ ಸಂಬಂಧ. ರಾಯಣ್ಣ ಒಬ್ಬ ವೀರ ಸೇನಾನಿ, ಬ್ರಿಟಿಷರ ವಿರುದ್ಧ ಹೋರಾಡಿದವನು. ಸಂಗೊಳ್ಳಿ ರಾಯಣ್ಣನೇನು 14 ಸೈಟುಗಳನ್ನು ಅಕ್ರಮವಾಗಿ ತಗೊಂಡಿರಲಿಲ್ಲ. ಸಂಗೊಳ್ಳಿ ರಾಯಣ್ಣ 3.16 ಗುಂಟೆ ಜಮೀನು ಖರೀದಿಸಲಿಲ್ಲ. ರಾಯಣ್ಣ ನಾಡಿಗಾಗಿ ನಿಸ್ವಾರ್ಥ ಸೇವೆ, ತ್ಯಾಗ, ಬಲಿದಾನ ಮಾಡಿದ್ದಾನೆ. ನೀವು ಯಾವ ನಾಡಿಗೆ ಕೀರ್ತಿ ತಗೊಂಡ್ ಬಂದಿದ್ದೀರಿ? ನೀವು ಯಾವ ರಾಜ್ಯಕ್ಕೆ ದಂಡನಾಯಕನ ಕೆಲಸ ಮಾಡಿದ್ದೀರಿ? ಎಂದು ವ್ಯಂಗ್ಯವಾಡಿದ್ದಾರೆ.ಇದನ್ನೂ ಓದಿ: ಮುನಿರತ್ನ ಧ್ವನಿ ಮಾದರಿಯನ್ನ FSLಗೆ ಕಳಿಸಿದ್ದೀವಿ, ಮ್ಯಾಚ್‌ ಆದ್ರೆ ಗ್ಯಾರಂಟಿ ಕ್ರಮ – ಸಚಿವ ಪರಮೇಶ್ವರ್‌ ಎಚ್ಚರಿಕೆ

    ಸಂಗೊಳ್ಳಿ ರಾಯಣ್ಣ ಹೆಸರು ಹೇಳುವ ನೈತಿಕತೆ ಸಿಎಂಗಿಲ್ಲ. ಸಿದ್ದರಾಮಯ್ಯ ನಾಡಿಗೆ ಕ್ಷಮೆಯನ್ನು ಕೇಳಬೇಕು. ಸಂಗೊಳ್ಳಿ ರಾಯಣ್ಣನ ನಿಸ್ವಾರ್ಥತೆಯನ್ನು ಸಿದ್ದರಾಮಯ್ಯ ತಮ್ಮ ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿರುವುದು ಖಂಡನೀಯ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

  • ಬೆಳಗಾವಿಯಲ್ಲಿ ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ – ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ

    ಬೆಳಗಾವಿಯಲ್ಲಿ ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ – ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ

    ಬೆಳಗಾವಿ: ತಾಲೂಕಿನ ಮಚ್ಚೆ ಪಟ್ಟಣದಲ್ಲಿ ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣ (Sangolli Rayanna) ಪ್ರತಿಮೆ (Statue) ಪ್ರತಿಷ್ಠಾಪನೆಯಾಗಿದ್ದು ಸ್ಥಳಕ್ಕೆ ಬೆಳಗಾವಿ (Belagavi) ನಗರದ ಡಿಸಿಪಿ ಶೇಖರ್ ಹೆಚ್‌ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಭದ್ರತೆ ನಿಯೋಜನೆ ಮಾಡಲಾಗಿದೆ.

    ತಾಲೂಕಿನ ಮಚ್ಚೆ ಪಟ್ಟಣದಲ್ಲಿ ಸಂಗೋಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆಯಿಂದ ಸದ್ಯ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ ನಿರ್ಮಾಣ ಆಗಿದೆ. ಹೀಗಾಗಿ ಮಚ್ಚೆ ಪಟ್ಟಣಕ್ಕೆ ಡಿಸಿಪಿ ಶೇಖರ್ ಹೆಚ್‌ಟಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ.

    ಬೆಳಗಾವಿ ಜಿಲ್ಲೆ ಮಚ್ಚೆ ಪಟ್ಟಣದ ಜೀಜಾಮಾತಾ ಚೌಕ್‌ನಲ್ಲಿರುವ ಪಟ್ಟಣ ಪಂಚಾಯಿತಿ ಕಚೇರಿ ಮುಂದೆ ಕಳೆದ ಹಲವು ವರ್ಷಗಳಿಂದ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆಗೆ ಕನ್ನಡಪರ ಸಂಘಟನೆಗಳು ಮನವಿ ಮಾಡಿದ್ದವು. ಮತ್ತೊಂದು ಕಡೆ ಜೀಜಾಮಾತಾ ಅಥವಾ ಶಿವಾಜಿ ಮಹಾರಾಜರ ಪ್ರತಿಮೆ ಪ್ರತಿಷ್ಠಾಪಿಸಲು ಮರಾಠಿ ಭಾಷಿಕರು ಮನವಿ ಮಾಡಿದ್ದರು. ಇದೆಲ್ಲದರ ನಡುವೆ ಇದೀಗ ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿದೆ. ಇದನ್ನೂ ಓದಿ: ವಿಶ್ವ ಪರಿಸರ ದಿನಾಚರಣೆಯಂದೇ ಅರಣ್ಯಾಧಿಕಾರಿಗಳಿಗೆ ಡಿಕೆಶಿ ಕ್ಲಾಸ್

    ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಿಗಿ ಭದ್ರತೆಗೆ ಸ್ಥಳದಲ್ಲಿ ಒಂದು ಕೆಎಸ್‌ಆರ್‌ಪಿ ತುಕಡಿ ನಿಯೋಜನೆ ಮಾಡಲಾಗಿದೆ. ಸದ್ಯ ಸಂಗೊಳ್ಳಿ ರಾಯಣ್ಣ ಮೂರ್ತಿ ಎದುರು ಕನ್ನಡಪರ ಸಂಘಟನೆಗಳ ಕಾರ್ಯಕರ್ತರ ಜಮಾವಣೆ ಆಗಿದ್ದು ಡಿಸಿಪಿ ಶೇಖರ್ ಹೆಚ್‌ಟಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಭದ್ರತೆ ವಹಿಸಲಾಗಿದೆ. ಇದನ್ನೂ ಓದಿ: ಶೃಂಗೇರಿಯಿಂದ ಪಂಚಲೋಹ ಮೂರ್ತಿ ರವಾನೆ – 75 ವರ್ಷಗಳ ಬಳಿಕ ಕಾಶ್ಮೀರದ ಶಾರದಾಂಬೆ ದೇಗುಲದಲ್ಲಿ ಪೂಜೆ

  • ನಮ್ಮನ್ನು ನಾವು ರಕ್ಷಣೆ ಮಾಡ್ಕೋಬೇಕು, ಇಲ್ಲದಿದ್ರೆ ನಮ್ಮ ದೇಶವನ್ನು ಪಾಕಿಸ್ತಾನ ಮಾಡ್ತಾರೆ: ಬಿ.ಸಿ.ಪಾಟೀಲ್

    ನಮ್ಮನ್ನು ನಾವು ರಕ್ಷಣೆ ಮಾಡ್ಕೋಬೇಕು, ಇಲ್ಲದಿದ್ರೆ ನಮ್ಮ ದೇಶವನ್ನು ಪಾಕಿಸ್ತಾನ ಮಾಡ್ತಾರೆ: ಬಿ.ಸಿ.ಪಾಟೀಲ್

    ಹಾವೇರಿ: ನಮ್ಮನ್ನು ನಾವು ರಕ್ಷಣೆ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ನಮ್ಮ ದೇಶವನ್ನು ಪಾಕಿಸ್ತಾನ (Pakistan) ಮಾಡಲು ಸಹ ಹಿಂದೇಟು ಹಾಕಲ್ಲ ಎಂದು ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ ಕುರಿತು ಬಿ.ಸಿ.ಪಾಟೀಲ್ (B.C.Patil) ಎಚ್ಚರಿಕೆಯ ಮಾತುಗಳನ್ನಾಡಿದರು.

    ಹಾವೇರಿ (Haveri) ಜಿಲ್ಲೆಯ ರಟ್ಟಿಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಅನಾವರಣದ ಬಳಿಕ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ (Sangolli Rayanna) ಮತ್ತು ಶಿವಾಜಿ (Shivaji) ಮಹಾರಾಜರು ಹಿಂದುತ್ವಕ್ಕಾಗಿ ಹೋರಾಟ ಮಾಡಿದ ಎರಡು ಮುತ್ತುಗಳು. ಹೀಗಾಗಿ ಇವರಿಬ್ಬರ ಮೂರ್ತಿಯನ್ನೂ ಪ್ರತಿಷ್ಠಾನ ಮಾಡಿದ್ದೇವೆ. ಸಂಗೊಳ್ಳಿ ರಾಯಣ್ಣನವರ ಸಾಧನೆ ಇಡೀ ದೇಶಕ್ಕೆ ಮಾದರಿಯಾಗಿದೆ. ಆದರೆ ರಾಯಣ್ಣ ಪ್ರತಿಮೆ ಮೆರವಣಿಗೆ ವೇಳೆ ಕಲ್ಲು ಹೊಡೆಯುವವರನ್ನು ರಕ್ಷಣೆ ಮಾಡುವ ಪಕ್ಷಗಳಿವೆ. ನಾವೇನು ಪಾಕಿಸ್ತಾನದಲ್ಲಿ ಇದ್ದೀವಾ ಎಂದು ಕಲ್ಲು ತೂರಾಟ ಮಾಡಿದವರ ವಿರುದ್ಧ ಗರಂ ಆದರು. ಇದನ್ನೂ ಓದಿ: ಮತ್ತೊಮ್ಮೆ ಸಿಎಂ ಆಗಲೆಂದು ಹರಕೆ- ಸಿದ್ದು ಭಾವಚಿತ್ರ ಹಿಡಿದು ಅಭಿಮಾನಿ ಶ್ರೀಶೈಲ ಪಾದಯಾತ್ರೆ

    ನಾನು ಯಾವುದೇ ಜಾತಿಗೆ ಸೀಮಿತವಾಗಿಲ್ಲ. ನನಗೆ ಎಲ್ಲಾ ಸಮುದಾಯದ ಜನರು ಮತ ಹಾಕಿದ್ದಾರೆ. ಎಲ್ಲಾ ಸಮುದಾಯದವರನ್ನು ಪ್ರೀತಿಸುವ ಗುಣ ನನ್ನಲ್ಲಿದೆ. ಇಡೀ ಸಮುದಾಯ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆಗೆ ಕೊಡುಗೆ ನೀಡಿದ್ದಾರೆ. ಸಂಗೊಳ್ಳಿ ರಾಯಣ್ಣನ ಮೂರ್ತಿಗೆ ಸಹಾಯ ಮಾಡಿದ್ದು ನನ್ನ ಪುಣ್ಯ. ಸಂಗೊಳ್ಳಿ ರಾಯಣ್ಣ ಪ್ರತಿಮೆ ಮೆರವಣಿಗೆ ಹೋಗುವ ವೇಳೆ ಕಲ್ಲು ಹೊಡೆಯುವ ಜನರನ್ನು ರಕ್ಷಣೆ ಮಾಡುವ ಪಕ್ಷಗಳಿವೆ. ಮಂಗಳೂರಿನಲ್ಲಿ (Mangaluru) ಕುಕ್ಕರ್ ಬ್ಲಾಸ್ಟ್ ಮಾಡಿದವರಿಗೆ ರಕ್ಷಣೆಯನ್ನು ನೀಡುತ್ತಿದ್ದಾರೆ. ಮೊದಲು ನಮ್ಮನ್ನು ನಾವು ರಕ್ಷಣೆ ಮಾಡಿಕೊಳ್ಳಬೇಕು. ಇಲ್ಲವಾದರೆ ನಮ್ಮ ದೇಶವನ್ನು ಪಾಕಿಸ್ತಾನ ಮಾಡಲು ಸಹ ಹಿಂದೇಟು ಹಾಕುವುದಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಮಂಡ್ಯದಲ್ಲಿ ಚಕ್ರವ್ಯೂಹ ಮಾಡಿ ಸೋಲಿಸಿದ್ರು, ರಾಮನಗರದಲ್ಲೂ ಆ ಸಂಚು ನಡೀತಿದೆ- ನಿಖಿಲ್ ಕಿಡಿ 

    ಕಲ್ಲು ತೂರಾಟ ಪ್ರಕರಣದ ಕುರಿತು ಪ್ರತಿಕ್ರಿಯಿಸಿ, ನನಗೆ ಇನ್ನೂ ಅದರ ಬಗ್ಗೆ ಮಾಹಿತಿ ಬರಲಿಲ್ಲ. ಪೊಲೀಸ್ ಅಧಿಕಾರಿಗಳ ಬಳಿ ಕೇಳಿ ತಿಳಿದುಕೊಳ್ಳುತ್ತೇನೆ. ಅಂತಹ ಕೀಳುಮಟ್ಟಕ್ಕೆ ಬಿ.ಸಿ.ಪಾಟೀಲ್ ಎಂದಿಗೂ ಹೋಗುವುದಿಲ್ಲ. ಅವರು ಶಾಂತರೀತಿಯಿಂದ ಹೋಗಬೇಕು ಎಂದು ಪ್ರಾರಂಭದಲ್ಲಿಯೇ ಹೇಳಿದ್ದೇನೆ. ಈಗಲೂ ಹೇಳುತ್ತೇನೆ. ಸಂಗೊಳ್ಳಿ ರಾಯಣ್ಣ ಪ್ರತಿಮೆ ಏರಿಯಾದಲ್ಲಿ ಹೋಗುವ ಸಮಯದಲ್ಲಿ ಸ್ವಾಗತ ಮಾಡಬೇಕಾದವರು, ಕಲ್ಲು ತೆಗೆದುಕೊಂಡು ಹೆದರಿಸಿ ಕಳುಹಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: Karnataka Politics: ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರದ ಪರ್ವ ಏಳು ಬೀಳುಗಳು

    ಸಂಗೊಳ್ಳಿ ರಾಯಣ್ಣ ದೇಶಕ್ಕಾಗಿ ಪ್ರಾಣಕೊಟ್ಟ ವ್ಯಕ್ತಿ. ಅವರು ಜನಾಂಗ ಅಥವಾ ಧರ್ಮದ ಪರವಾಗಿ ಹೋರಾಟ ಮಾಡಿದವರಲ್ಲ. ರಾಷ್ಟ್ರಕ್ಕಾಗಿ ಪ್ರಾಣ ತೆತ್ತು, ಬ್ರಿಟಿಷರ ವಿರುದ್ಧ ಕತ್ತಿ ಝಳಪಿಸಿದ ವ್ಯಕ್ತಿಗೆ ಅವಮಾನ ಮಾಡಿದ್ದಾರೆ. ಅದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ಯಾರೇ ಕೈಮುಗಿದರೂ ಮೋದಿ ವಾಪಸ್ ಕೈಮುಗಿಯುತ್ತಾರೆ- ಕೋಟ ಶ್ರೀನಿವಾಸ ಪೂಜಾರಿ

  • ಹಾವೇರಿಯಲ್ಲಿ ರಾಯಣ್ಣ ಮೆರವಣಿಗೆ ವೇಳೆ ಪುಂಡಾಟ – ಮನೆ, ಆಟೋ, ಕಾರುಗಳಿಗೆ ಹಾನಿ

    ಹಾವೇರಿಯಲ್ಲಿ ರಾಯಣ್ಣ ಮೆರವಣಿಗೆ ವೇಳೆ ಪುಂಡಾಟ – ಮನೆ, ಆಟೋ, ಕಾರುಗಳಿಗೆ ಹಾನಿ

    – ರಟ್ಟಿಹಳ್ಳಿ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ

    ಹಾವೇರಿ: ಹಿಂದೂಪರ ಸಂಘಟನೆಗಳು ಸೇರಿ ರಟ್ಟಿಹಳ್ಳಿ ಪಟ್ಟದಲ್ಲಿ ಇಂದು ಪ್ರಮುಖ ಬೀದಿಯಲ್ಲಿ ಬೃಹತ್ ರ್‍ಯಾಲಿ ಮಾಡಿದರು. ರ್‍ಯಾಲಿ ವೇಳೆ ಜಮಾಯಿಸಿದ ನೂರಾರು ಹಿಂದೂಪರ ಸಂಘಟನೆ ಕಾರ್ಯಕರ್ತರು ರ್‍ಯಾಲಿ ಮಧ್ಯದಲ್ಲಿ ಅನ್ಯಕೋಮಿನ ಜನರ ಮಂದಿರ ಹಾಗೂ ಶಾಲೆ ಮನೆಗಳ ಮೇಲೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದಾರೆ.

    ಒಂದು ವಾರಗಳ ಹಿಂದೆ ರಟ್ಟಿಹಟ್ಟಿ ಪಟ್ಟದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮೆರವಣಿಗೆ ವೇಳೆ ಅನ್ಯಕೋಮಿನ ಯುವಕರಿಂದ ಕಲ್ಲು ತೂರಾಟ ಮಾಡಿದ್ರಂತೆ. ಈ ಹಿನ್ನೆಲೆ ಇಂದು ಹಿಂದೂಪರ ಸಂಘಟನೆಯ ಕಾರ್ಯಕರ್ತರು ಕಲ್ಲು ತೂರಾಟ ಖಂಡಿಸಿ ಶೋಭಾಯಾತ್ರೆ ಹಮ್ಮಿಕೊಂಡಿದ್ರು. ನಗರದ ಪ್ರಮುಖ ಬೀದಿಯಲ್ಲಿ ಸಾಗಿದ ಬೃಹತ್ ಬೈಕ್ ರ್‍ಯಾಲಿ ವೇಳೆ ಕಿಡಗೇಡಿಗಳು ಕಲ್ಲು ತೂರಿದ್ದಾರೆ. ಇಲ್ಲಿ ಜಾತಿ ಮತ ಪಂತ ಬಿಟ್ಟು ನಾವೆಲ್ಲರು ಒಂದೇ ರೀತಿ ಇದ್ದೇವೆ. ನಮ್ಮ ದೇಹದಲ್ಲಿ ಇರೋ ರಕ್ತ ಕೆಂಪೇ ಆಗಿರುತ್ತದೆ. ಆದರೆ ಯಾರೋ ಹೊರಗಿನವರು ಬಂದು ನಮ್ಮ ಮನೆಯ ಮೇಲೆ ಕಲ್ಲುತೂರಿ ನಮ್ಮಲ್ಲಿ ಜಗಳ ಹಚ್ಚೋ ಕೆಲಸ ಮಾಡ್ತಿದ್ದಾರೆ ಅಂತ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಮಂಡ್ಯದಲ್ಲಿ ಚಕ್ರವ್ಯೂಹ ಮಾಡಿ ಸೋಲಿಸಿದ್ರು, ರಾಮನಗರದಲ್ಲೂ ಆ ಸಂಚು ನಡೀತಿದೆ- ನಿಖಿಲ್ ಕಿಡಿ

    ಕಲ್ಲು ತೂರಾಟದ ಬಗ್ಗೆ ನನಗೆ ಅದರ ಮಾಹಿತಿ ಬಂದಿಲ್ಲ. ಪೊಲೀಸ್ ಅಧಿಕಾರಿಗಳ ಬಳಿ ಕೇಳಿ ತಿಳಿದುಕೊಳ್ಳುತ್ತೇನೆ. ಶಾಂತ ರೀತಿಯಿಂದ ಹೋಗಬೇಕು ಅಂತಾ ಪ್ರಾರಂಭದಲ್ಲಿ ಹೇಳಿದ್ದೇನೆ. ಈಗಲೂ ಹೇಳುತ್ತೇನೆ. ಸಂಗೊಳ್ಳಿ ರಾಯಣ್ಣ ಪ್ರತಿಮೆ ಏರಿಯಾದಲ್ಲಿ ಹೋಗುವ ಸಮಯದಲ್ಲಿ ಸ್ವಾಗತ ಮಾಡಬೇಕಾದವರು ಕಲ್ಲು ತೆಗೆದುಕೊಂಡು ಹೆದರಿಸಿ ಕಳಿಸಿದ್ದಾರೆ. ಬ್ರಿಟಿಷ್ ವಿರುದ್ಧ ಕತ್ತಿ ಝಳಪಿಸಿದ ವ್ಯಕ್ತಿಗೆ ಅವಮಾನ ಮಾಡಿದ್ದಾರೆ. ಅದನ್ನ ಯಾವುದೇ ಕಾರಣಕ್ಕೂ ಸಹಿಸಲ್ಲ ಎಂದರು.

    ರಟ್ಟಿಹಳ್ಳಿ ಪಟ್ಟಣದಲ್ಲಿ ಸದ್ಯ ಬಿಗುವಿನ ವಾತಾವರಣದ ನಿರ್ಮಾಣವಾಗಿದೆ. ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿ ಹತೋಟಿಗೆ ಬಂದಿದೆ.

     

  • ಕಿತ್ತೂರು ಉತ್ಸವ ಆಮಂತ್ರಣ ಪತ್ರಿಕೆಯಲ್ಲಿ ರಾಯಣ್ಣನ ಭಾವಚಿತ್ರ ಮಾಯ- ಅಭಿಮಾನಿಗಳು ಗರಂ

    ಕಿತ್ತೂರು ಉತ್ಸವ ಆಮಂತ್ರಣ ಪತ್ರಿಕೆಯಲ್ಲಿ ರಾಯಣ್ಣನ ಭಾವಚಿತ್ರ ಮಾಯ- ಅಭಿಮಾನಿಗಳು ಗರಂ

    ಬೆಳಗಾವಿ: ಕಿತ್ತೂರು ಉತ್ಸವದ ಆಮಂತ್ರಣ ಪತ್ರಿಕೆಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ (Sangolli Rayanna) ಭಾವಚಿತ್ರವೇ ಮಾಯವಾಗಿದ್ದು, ಕಿತ್ತೂರು ರಾಣಿ ಚೆನ್ನಮ್ಮನ ಬಲಗೈ ಬಂಟ ರಾಯಣ್ಣನ ಫೋಟೋ (Photo) ಹಾಕದಿದ್ದಕ್ಕೆ ರಾಯಣ್ಣನ ಅಭಿಮಾನಿಗಳು ಅಸಮಾಧಾನ ಹೊರಹಾಕಿದರು.

    ಬೆಳಗಾವಿ ಜಿಲ್ಲೆಯ ಕಿತ್ತೂರು ವೀರರಾಣಿ ಚೆನ್ನಮ್ಮನ (Kittur Rani Chennamma) ಉತ್ಸವವನ್ನು ಇದೇ ಮೊದಲ ಬಾರಿಗೆ ಸರ್ಕಾರ ರಾಜ್ಯಮಟ್ಟದ ಕಿತ್ತೂರು ಉತ್ಸವ ಆಚರಣೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಭರದ ಸಿದ್ಧತೆ ಮಾಡಿಕೊಂಡಿದೆ. ಆದರೆ, ರಾಜ್ಯಮಟ್ಟದ ಕಿತ್ತೂರು ಉತ್ಸವ ಆಮಂತ್ರಣ ಪತ್ರಿಕೆಯಲ್ಲಿ ಸಾಲು ಸಾಲು ಅದ್ವಾನ ಆರೋಪ ಕೇಳಿಬಂದಿದೆ.

    ಕಿತ್ತೂರು ಉತ್ಸವದ ಆಮಂತ್ರಣ ಪತ್ರಿಕೆಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಬಲಗೈ ಬಂಟ ರಾಯಣ್ಣನ ಫೋಟೋ ಹಾಕದಿದ್ದಕ್ಕೆ ಬೆಳಗಾವಿ (Belagavi) ಜಿಲ್ಲಾಡಳಿತದ ವಿರುದ್ಧ ರಾಯಣ್ಣನ ಅಭಿಮಾನಿಗಳು ಅಸಮಾಧಾನ ಹೊರಹಾಕಿದ್ದಾರೆ. ಅ. 23 ರಿಂದ 3 ದಿನಗಳ ಕಾಲ ರಾಜ್ಯಮಟ್ಟದ ಕಿತ್ತೂರು ಉತ್ಸವ ನಡೆಯುತ್ತಿದ್ದು, ಇದೇ ಮೊದಲ ಬಾರಿಗೆ ಕಿತ್ತೂರು ಉತ್ಸವ ರಾಜ್ಯಮಟ್ಟದ ಉತ್ಸವವಾಗಿ ಪರಿವರ್ತನೆಗೊಂಡಿದೆ. ಆದರೆ, ಆಮಂತ್ರಣ ಪತ್ರಿಕೆಯಲ್ಲಿ ಸ್ಥಳೀಯ ಶಾಸಕ ಮಹಾಂತೇಶ್ ದೊಡ್ಡಗೌಡರ ಪತ್ನಿಯ ಹೆಸರು ಆಹ್ವಾನ ಪತ್ರಿಕೆಯಲ್ಲಿ ಹಾಕಿದ್ದಾರೆ.

    ಮಹಿಳಾ ಉತ್ಸವ ಉದ್ಘಾಟನಾ ಸಮಾರಂಭದಲ್ಲಿ ಗೌರವ ಉಪಸ್ಥಿತಿಯಾಗಿ ಶಾಸಕ ಮಹಾಂತೇಶ್ ದೊಡ್ಡಗೌಡರ ಪತ್ನಿ ಮಂಜುಳಾ ದೊಡ್ಡಗೌಡರಿಗೆ ಸ್ಥಾನ ನೀಡಲಾಗಿದೆ. ಆಹ್ವಾನ ಪತ್ರಿಕೆಯಲ್ಲಿ ಪಂಚಮಸಾಲಿ ಎರಡೂ ಪೀಠಗಳ ಸ್ವಾಮೀಜಿಗಳ ಹೆಸರು ಹಾಕದಿದ್ದಕ್ಕೂ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಖರ್ಗೆಗೆ ಭರ್ಜರಿ ಗೆಲುವು – 24 ವರ್ಷಗಳ ಬಳಿಕ ಗಾಂಧೀಯೇತರ ವ್ಯಕ್ತಿಗೆ ಕಾಂಗ್ರೆಸ್‌ ಪಟ್ಟ

    ಸಾಮಾಜಿಕ ಜಾಲತಾಣದಲ್ಲಿ ಹೊಸ ಚರ್ಚೆ ಹುಟ್ಟು ಹಾಕಿದ್ದು ಶಾಸಕರ ಹೆಸರು ಓಕೆ, ಅವರ ಪತ್ನಿಯ ಹೆಸರು ಆಹ್ವಾನ ಪತ್ರಿಕೆಯಲ್ಲಿ ಏಕೆ ಎಂದು ಸಾಮಾಜಿಕ ಜಾಲತಾಣದಲ್ಲಿ ಜನರು ಪ್ರಶ್ನೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಅಮ್ಮನನ್ನು ಜೈಲಿಗೆ ಹಾಕಿ ಎಂದ ಪುಟ್ಟ ಕಂದಮ್ಮನಿಗೆ ಸಚಿವರಿಂದ ದೀಪಾವಳಿ ಗಿಫ್ಟ್

    Live Tv
    [brid partner=56869869 player=32851 video=960834 autoplay=true]

  • ಸುವರ್ಣಸೌಧದಲ್ಲಿ ಈ ವರ್ಷ ಚೆನ್ನಮ್ಮ, ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ- ಬೊಮ್ಮಾಯಿ

    ಸುವರ್ಣಸೌಧದಲ್ಲಿ ಈ ವರ್ಷ ಚೆನ್ನಮ್ಮ, ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ- ಬೊಮ್ಮಾಯಿ

    ಬೆಂಗಳೂರು: ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. ಅನುದಾನ ಒದಗಿಸಲಾಗಿದ್ದು, ಇದೇ ವರ್ಷ ಬೆಳಗಾವಿ ಸುವರ್ಣಸೌಧದಲ್ಲಿ ರಾಣಿ ಚೆನ್ನಮ್ಮ (Kittur Rani Chennamma) ಹಾಗೂ ಸಂಗೊಳ್ಳಿ ರಾಯಣ್ಣ (Sangolli Rayanna) ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.

    ಬೆಳಗಾವಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ (Tourism Department) ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ (kannada and culture department) ವತಿಯಿಂದ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಕಿತ್ತೂರು ಉತ್ಸವದ ಪೂರ್ವಭಾವಿಯಾಗಿ ಆಯೋಜಿಸಿದ್ದ ಕಿತ್ತೂರು ಚೆನ್ನಮ್ಮಾಜಿ ವಿಜಯ ಜ್ಯೋತಿ ಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಇದನ್ನೂ ಓದಿ:  ಸಮಾವೇಶಕ್ಕೂ ಮುನ್ನವೇ ದೇವರ ಮೊರೆ ಹೋದ ಕಾಂಗ್ರೆಸ್‌ ನಾಯಕರು- ಬಳ್ಳಾರಿಯಲ್ಲಿ ಹೋಮ

    ಕಿತ್ತೂರು ಉತ್ಸವ ಪ್ರಾರಂಭವಾಗಿ 25-30 ವರ್ಷ ಕಳೆದಿದೆ. ಮಧ್ಯೆ-ಮಧ್ಯೆ ಕುಂಟುತ್ತಾ ಇದ್ದ ಉತ್ಸವಕ್ಕೆ ನಮ್ಮ ಸರ್ಕಾರ ಅಧಿಕೃತ ಆದೇಶದ ಮೂಲಕ ರಾಜ್ಯ ಮಟ್ಟದಲ್ಲಿ ಕಿತ್ತೂರು ಉತ್ಸವ ಆಚರಣೆ ಮಾಡುತ್ತಿದೆ. ಹಿಂದೆ ತಾವು ಬೆಳಗಾವಿ ಉಸ್ತುವಾರಿ ಸಚಿವರಾಗಿದ್ದ ಸಂದರ್ಭದಲ್ಲಿ ಹೆಚ್ಚಿನ ಅನುದಾನ ನೀಡಿ 3 ದಿನಗಳ ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಿದ್ದನ್ನು ಸ್ಮರಿಸಿದ ಅವರು, ಅಂದು ಜ್ಯೋತಿ ಕಿತ್ತೂರಿನಿಂದ ಬೆಂಗಳೂರಿಗೆ (Bengaluru) ಚೆನ್ನಮ್ಮಳ ಸಂದೇಶ ಹೊತ್ತು ಬರುತ್ತಿತ್ತು. ಈಗ ಕರ್ನಾಟಕದ ರಾಜಧಾನಿ ಬೆಂಗಳೂರಿನಿಂದ ಕಿತ್ತೂರು ಸಂಸ್ಥಾನದ ರಾಜಧಾನಿ ಕಿತ್ತೂರಿಗೆ ಜ್ಯೋತಿ ಯಾತ್ರೆ ಬೆಳೆಸಿದೆ ಎಂದು ತಿಳಿಸಿದರು.

    ಸ್ವಾತಂತ್ರ‍್ಯ ಹೋರಾಟದ ಮೊದಲ ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಎಂಬುದಾಗಿ ನಮ್ಮ ಕರ್ನಾಟಕ ವಿಶ್ವವಿದ್ಯಾಲಯ ಗೆಜೆಟಿಯರ್‌ನಲ್ಲಿ ಪ್ರಕಟಗೊಂಡಿದೆ. ಇದನ್ನು ರಾಷ್ಟ್ರೀಯ ದಾಖಲೆಗಳ ಪಟ್ಟಿಗೂ ನೋಂದಣಿ ಮಾಡಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಶುರುವಾಯ್ತು ಮತ್ತೊಂದು ಧರ್ಮ ದಂಗಲ್ – ಮದರಸಾ ಬ್ಯಾನ್‍ಗೆ ಹಿಂದೂ ಸಂಘಟನೆಗಳಿಂದ ಒತ್ತಾಯ

    ಕಿತ್ತೂರಿನಲ್ಲಿ ಶಿಥಿಲಗೊಂಡಿರುವ ಪ್ರಸ್ತುತ ಅರಮನೆಯನ್ನು ಗಟ್ಟಿಗೊಳಿಸಿ, ಪಕ್ಕದಲ್ಲೇ ಹೊಸ ಅರಮನೆಯನ್ನೂ ಕಟ್ಟಿಸಲು ತೀರ್ಮಾನ ಮಾಡಲಾಗಿದೆ. ಇದರ ಜೊತೆಗೆ ಕಿತ್ತೂರನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಮಾಡಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಬೈಲಹೊಂಗಲ, ಸಂಗೊಳ್ಳಿ ಸೇರಿದಂತೆ ಕಿತ್ತೂರು ಸಂಸ್ಥಾನದ ಪ್ರಾಚೀನ ಕುರುಹುಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದರು.

    ಈಗಾಗಲೇ ಸಂಗೊಳ್ಳಿ ರಾಯಣ್ಣ ಹೆಸರಿನಲ್ಲಿ ಸೈನಿಕ ಶಾಲೆ ಪ್ರಾರಂಭ ಮಾಡಿದ್ದೇವೆ. ಮುಂದಿನ ತಿಂಗಳು ಸೈನಿಕ ಶಾಲೆ ಉದ್ಘಾಟನೆ ಮಾಡುತ್ತೇವೆ. ಇದರೊಂದಿಗೆ ರಾಯಣ್ಣನನ್ನು ನೇಣುಗಂಬಕ್ಕೆ ಹಾಕಿದ ನಂದಗಡ ಸಮಾಧಿ ಸ್ಥಳವನ್ನೂ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಲ್ಲೆಸೆದ ಕಿಡಿಗೇಡಿಗಳು

    ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಲ್ಲೆಸೆದ ಕಿಡಿಗೇಡಿಗಳು

    ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಕಿಡಿಗೇಡಿಗಳು ಕಲ್ಲು ತೂರಿರುವ ಘಟನೆ ಬೆಳಗಾವಿ ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ನಡೆದಿದೆ.

    ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರಾಯಣ್ಣನ ಮೂರ್ತಿಗೆ ಕಲ್ಲು ತೂರಿ, ಸ್ಥಳದಿಂದ ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಘಟನೆಯಲ್ಲಿ ರಾಯಣ್ಣನ ಮೂರ್ತಿಯ ಕಾಲಿನ ಭಾಗದಲ್ಲಿ ಹಾನಿಯಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳದಲ್ಲಿ ಜಮಾಯಿಸಿದ ರಾಯಣ್ಣ ಅಭಿಮಾನಿಗಳು ತೀವ್ರ ಆಕ್ರೋಶವನ್ನು ಹೊರ ಹಾಕಿದ್ದಾರೆ. ಇದನ್ನೂ ಓದಿ: ಪಾಪದ ಕೊಡ ನಮ್ಮದಾ ನಿಮ್ಮದಾ?: ಅಶೋಕ್‍ಗೆ ತಿರುಗೇಟು ಕೊಟ್ಟ ಸಿದ್ದು

    ಬೆಂಡಿಗೇರಿ ಗ್ರಾಮಕ್ಕೆ ಹಿರೇಬಾಗೇವಾಡಿ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ರಾಯಣ್ಣನ ಮೂರ್ತಿಗೆ ಕಲ್ಲು ತೂರಿರುವ ದುಷ್ಕರ್ಮಿಗಳನ್ನು ತಕ್ಷಣವೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಈ ಘಟನೆಯಿಂದ ಬೆಂಡಿಗೇರಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಗ್ರಾಮದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ನಿಯೋಜಿಸಲಾಗಿದೆ. ಇದನ್ನೂ ಓದಿ: ಆಜಾನ್‌ಗೆ ವಿರೋಧ ರಾಜ್ಯಾದ್ಯಂತ ಜೂ. 1ರಿಂದ ಎರಡನೇ ಸುತ್ತಿನ ಹೋರಾಟ: ಪ್ರಮೋದ್ ಮುತಾಲಿಕ್

  • ನಾವು ಮತ್ತೆ ಅಧಿಕಾರಕ್ಕೆ ಬಂದ್ರೆ 7 ಕೆಜಿ ಅಲ್ಲ, ತಲಾ 10 ಕೆಜಿ ಅಕ್ಕಿ ಕೊಡುತ್ತೇವೆ: ಸಿದ್ದು

    ನಾವು ಮತ್ತೆ ಅಧಿಕಾರಕ್ಕೆ ಬಂದ್ರೆ 7 ಕೆಜಿ ಅಲ್ಲ, ತಲಾ 10 ಕೆಜಿ ಅಕ್ಕಿ ಕೊಡುತ್ತೇವೆ: ಸಿದ್ದು

    ಬೆಳಗಾವಿ: 2023ಕ್ಕೆ ಜನರು ಆಶೀರ್ವಾದ ಮಾಡಿದರೆ, ನಾವು ಮತ್ತೆ ಅಧಿಕಾರಕ್ಕೆ ಬಂದರೆ 7 ಕೆಜಿ ಅಲ್ಲ ತಲಾ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಶ್ವಾಸನೆ ನೀಡಿದರು.

    ರಾಮದುರ್ಗ ತಾಲೂಕಿನ ಅವರಾದಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಅನಾವರಣ ಮಾಡಿದ ಬಳಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಹದಿನೈದು ಲಕ್ಷ ಮನೆಗಳನ್ನ ಕಟ್ಟಿಸಿದ್ದೇನೆ. ಬಸವಣ್ಣನವರ ಜಯಂತಿ ದಿನ ಪ್ರಮಾಣ ವಚನ ಸ್ವೀಕರಿಸಿ ಜನರ ಭರವಸೆ ಈಡೇರಿಸಿದ್ದೇನೆ. ಸಾಕಷ್ಟು ಭಾಗ್ಯಗಳನ್ನು ಕೊಟ್ಟಿದ್ದೇನೆ. 2023ಕ್ಕೆ ಮತ್ತೆ ನಾವು ಅಧಿಕಾರಕ್ಕೆ ಬಂದರೆ 7 ಕೆಜಿ ಅಲ್ಲ ತಲಾ 10 ಕೆಜಿ ಕೊಡುತ್ತೇವೆ ಎಂದರು.

    ಬಿಜೆಪಿ ಸರ್ಕಾರಕ್ಕೆ ಮಾನ ಮರ್ಯಾದೆ ಏನೂ ಇಲ್ಲ, ಸತ್ತೋಗಿದೆ. ಬಸವರಾಜ ಬೊಮ್ಮಾಯಿ ಸಿಎಂ ಆಗಿ ಆಯ್ಕೆ ಆಗಿಲ್ಲ, ಅವರನ್ನು ನೇಮಕ ಮಾಡಲಾಗಿದೆ. ಆರ್‍ಎಸ್‍ಎಸ್‍ನವರು ಮುಖ್ಯಮಂತ್ರಿ ಮಾಡಿದ್ದಾರೆ. ಅವರು ಹೇಳಿದ್ದನ್ನ ಕೇಳುತ್ತಾರೆ. ಇಂತಹ ಸರ್ಕಾರ ಇರಬೇಕಾ ಎಂದು ಪ್ರಶ್ನಿಸಿದರು.

    ಕರ್ನಾಟಕದಲ್ಲಿ ಪಿಎಸ್‍ಐ ನೇಮಕಾತಿಯಲ್ಲಿ 300 ಕೋಟಿ ಹೊಡೆದಿದ್ದಾರೆ. ಇಂತಹ ಬಿಜೆಪಿ ಸರ್ಕಾರ ಇರಬೇಕಾ? ಯಾವ ಕಾರಣಕ್ಕೆ ಇರಬೇಕು? ನಾನು ಕೈಮುಗಿದು ಕೇಳಿಕೊಳ್ಳುತ್ತೇನೆ. ಇದನ್ನು ಬೇರು ಸಹಿತ ಕಿತ್ತು ಒಗೆಯಬೇಕು. ಈ ಸರ್ಕಾರ ಏನೂ ಮಾಡಲ್ಲ. ಘೇಂಡಾಮೃಗದ ದಪ್ಪ ಚರ್ಮದಂತ ಸರ್ಕಾರ ಇದು. ಇಂತಹ ಕೆಟ್ಟ, ಭ್ರಷ್ಟ, ಜನವಿರೋಧಿ ಸರ್ಕಾರವನ್ನು ನಾನು ಯಾವ ಕಾಲದಲ್ಲೂ ನೋಡಿಲ್ಲ. ನಮ್ಮ ಸರ್ಕಾರ ಬಂದ ಮೇಲೆ ಎಲ್ಲಾ ಮಾಡೋಣ. ದಯಮಾಡಿ ಕೈಜೋಡಿಸಿ ಪ್ರಾರ್ಥನೆ ಮಾಡ್ತೇನೆ ಕಾಂಗ್ರೆಸ್‍ಗೆ ಅವಕಾಶ ಕೊಡಿ ಎಂದು ಮನವಿ ಮಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಜನವಿರೋಧಿ ಸರ್ಕಾರವಿದೆ. ರಾಜ್ಯ ಮತ್ತು ನಾವು ಉಳಿಯಲಿಕ್ಕೆ ಬಿಜೆಪಿ ಸರ್ಕಾರವನ್ನು ತೊಲಗಿಸಬೇಕು. ಹೀಗಾಗಿ 2023ರ ಚುನಾವಣೆಯಲ್ಲಿ ಕಾಂಗ್ರೆಸ್ ಪರವಾಗಿ ಒಳ್ಳೆಯ ನಿರ್ಧಾರ ಮಾಡಿ ಎಂದು ಜನತೆಗೆ ಹೇಳಿದರು.

    ನಾನು ಬಹಳ ಸಂತೋಷದಿಂದ ಸಂಗೊಳ್ಳಿ ರಾಯಣ್ಣ ಪುತ್ಥಳಿ ಅನಾವರಣ ಮಾಡಿದ್ದೇನೆ. ಸಂಗೊಳ್ಳಿ ರಾಯಣ್ಣ ಆಕಸ್ಮಿಕವಾಗಿ ಕುರುಬರ ಜಾತಿಯಲ್ಲಿ ಹುಟ್ಟಿದ್ದಾರೆ. ಸಂಗೊಳ್ಳಿ ರಾಯಣ್ಣ ಅವರಿಗೆ ದೇಶಪ್ರೇಮ, ನಾಡಿನ ಪ್ರೇಮ ಹೆಚ್ಚಿತ್ತು. ಹೀಗಾಗಿ ಅವರು ದೇಶಕ್ಕಾಗಿ ಹೋರಾಟ ಮಾಡಿದ್ದಾರೆ. ನಾವೆಲ್ಲರೂ ದೇಶಭಕ್ತಿ ಮನೋಭಾವ ಬೆಳೆಸಿಕೊಳ್ಳಬೇಕು. ದೇಶಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂದು ತಿಳಿಸಿದರು.