Tag: ಸಂಗೋಳ್ಳಿ ರಾಯಣ್ಣ

  • ಗೋಕಾಕ್‍ನಲ್ಲಿ ಸಂಗೊಳ್ಳಿ ರಾಯಣ್ಣ ಫೋಟೋ ಹರಿದು ಹಾಕಿದ್ದ ಆರೋಪಿ ಅರೆಸ್ಟ್

    ಗೋಕಾಕ್‍ನಲ್ಲಿ ಸಂಗೊಳ್ಳಿ ರಾಯಣ್ಣ ಫೋಟೋ ಹರಿದು ಹಾಕಿದ್ದ ಆರೋಪಿ ಅರೆಸ್ಟ್

    ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಭಾವಚಿತ್ರವನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಆರೋಪಿಯನ್ನ ಬಂಧಿಸಿ ನ್ಯಾಯಾಂಗ ತನಿಖೆಗೆ ಒಪ್ಪಿಸಿದ್ದಾರೆ.

    ಗೋಕಾಕ್ ತಾಲೂಕಿನ ಖನಗಾಂವ ಗ್ರಾಮದ ಲಕ್ಷ್ಮಣ ಸತ್ಯೇಪ್ಪ ಪೂಜೇರಿ(35) ಬಂಧಿತ ಆರೋಪಿ. ಪ್ರಕರಣ ಹಿನ್ನೆಲೆ ನೋಡುವುದಾದರೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಖನಗಾಂವ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಭಾವಚಿತ್ರವನ್ನು ಕಿಡಿಗೇಡಿಗಳು ಹರಿದು ಹಾಕಿದ್ದರು. ಗ್ರಾಮದ ರಸ್ತೆಗೆ ರಾಯಣ್ಣ ಸರ್ಕಲ್ ಎಂದು ನಾಮಕರಣ ಮಾಡಲಾಗಿತ್ತು. ನಾಮಕರಣ ಮಾಡಿ ರಾಯಣ್ಣ ಭಾವಚಿತ್ರದ ಫ್ಲೆಕ್ಸ್ ಬೋರ್ಡ್ ಹಾಕಲಾಗಿತ್ತು. ಈ ಬೋರ್ಡ್‍ನಲ್ಲಿದ್ದ ಸಂಗೊಳ್ಳಿ ರಾಯಣ್ಣ ಭಾವಚಿತ್ರವನ್ನು ಯಾರೋ ಕಿಡಿಗೇಡಿಗಳು ಹರಿದು ವಿಕೃತಿ ಮೆರೆದಿದ್ದರು.  ಇದನ್ನೂ ಓದಿ: ಮಧ್ಯಾಹ್ನ ನಾಟಿ ಕೋಳಿ ಊಟ ಮಾಡಿ ಸಂಜೆ ದೇವಸ್ಥಾನಕ್ಕೆ ಭೇಟಿ ಕೊಟ್ರಾ ಸಿದ್ದರಾಮಯ್ಯ?

    ಇತ್ತ ಕಿಡಿಗೇಡಿಗಳ ಕೃತ್ಯವನ್ನು ಖಂಡಿಸಿ ಗ್ರಾಮದಲ್ಲಿ ರಾಯಣ್ಣ ಅಭಿಮಾನಿಗಳು ಪ್ರತಿಭಟನೆ ನಡೆಸಿ ಟಾಯರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು. ಬಳಿಕ ಪ್ರಕರಣ ದಾಖಲಿಸಿಕೊಂಡ ಗೋಕಾಕ್ ಗ್ರಾಮೀಣ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಈ ಬಗ್ಗೆ ತನಿಖೆ ಮುಂದುವರೆದಿದ್ದು, ಗೋಕಾಕ್ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಒಂದೆಡೆ ಧರ್ಮ ಒಡೆಯೋ, ಮತ್ತೊಂದೆಡೆ ಸಾವರ್ಕರ್‌ಗೆ ಅವಹೇಳನ ಮಾಡ್ತಿರೋದನ್ನ ಜನ ಗಮನಿಸ್ತಿದ್ದಾರೆ: ಸಿದ್ದುಗೆ ವಿಜಯೇಂದ್ರ ಗುದ್ದು

    Live Tv
    [brid partner=56869869 player=32851 video=960834 autoplay=true]

  • MES ಪುಂಡಾಟಿಕೆಯನ್ನು ಖಂಡಿಸಿದ ಸಿಎಂ – 27 ಮಂದಿ ಅರೆಸ್ಟ್

    MES ಪುಂಡಾಟಿಕೆಯನ್ನು ಖಂಡಿಸಿದ ಸಿಎಂ – 27 ಮಂದಿ ಅರೆಸ್ಟ್

    ಹುಬ್ಬಳ್ಳಿ: ಎಂಇಎಸ್ ಪುಂಡರ ಪುಂಡಾಟಿಕೆ ಖಂಡಿಸುವೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

    ಬೆಳಗಾವಿಯಲ್ಲಿ ತಡರಾತ್ರಿ ಪುಂಡರು ಹಿಂಸಾಚಾರ ಕೃತ್ಯವೆಸಗಿದ್ದು, ಸಂಗೊಳ್ಳಿ ರಾಯಣ್ಣ ಪುತ್ಥಾಳಿಗೆ ಹಾನಿಗೊಳಿಸಿ, ಬಸ್, ಹಾಗೂ ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಇದೀಗ ಬೆಳಗಾವಿ ಪೊಲೀಸರು 27 ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ:  ಬೆಳಗಾವಿಯಲ್ಲಿ MES ಪುಂಡರ ಅಟ್ಟಹಾಸ – ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ, ಬಸ್ ಮೇಲೆ ಕಲ್ಲು ತೂರಾಟ

    ಈ ಕುರಿತಂತೆ ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬೊಮ್ಮಾಯಿ ಅವರು, ಎಂಇಎಸ್ ಪುಂಡಾಟಿಕೆಯನ್ನು ಖಂಡಿಸುತ್ತೇನೆ. ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ಸಾರ್ವಜನಿಕರ ಆಸ್ತಿ ಹಾನಿ ಮಾಡುವುದು ಕಾನೂನುಬಾಹಿರ. ಪುಂಡಾಟಿಕೆ ಹಿಂದೆ ಹಲವು ಕಾರಣಗಳಿವೆ. ಈ ವಿಚಾರವಾಗಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ದುಷ್ಟಶಕ್ತಿಗಳಿಗೆ ಕನ್ನಡಿಗರು ಹೆದರೋಲ್ಲ, ಕನ್ನಡಿಗರ ಶಕ್ತಿ ಪ್ರದರ್ಶಿಸುವ ಕಾಲ ಬಂದಿದೆ: ಹೆಚ್‍ಡಿಕೆ

    ರಾಷ್ಟ್ರಭಕ್ತರ ಪ್ರತಿಮೆಗಳನ್ನ ಗೌರವಿಸಬೇಕು. ಅವರಿಗೆ ಅಪಮಾನ ಮಾಡಬಾರದು. ಸಮಾಜದಲ್ಲಿ ಕ್ಷೋಭೆ ಉಂಟು ಮಾಡುವುದು ಸರಿಯಲ್ಲ. ಪೊಲೀಸರಿಗೆ ದೀರ್ಘಾವಧಿ ಕ್ರಮ ಕೈಗೊಳ್ಳುವಂತೆ ಆದೇಶಿಸಿದ್ದೇನೆ. ಇದು ಪುರ್ನಾವರ್ತನೆ ಆಗದಂತೆ ಸೂಚಿಸಿದ್ದೇನೆ ಎಂದು ತಿಳಿಸಿದ್ದೇನೆ ಎಂದು ಹೇಳಿದ್ದಾರೆ.

  • ಬೆಳಗಾವಿಯಲ್ಲಿ MES ಪುಂಡರ ಅಟ್ಟಹಾಸ – ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ, ಬಸ್ ಮೇಲೆ ಕಲ್ಲು ತೂರಾಟ

    ಬೆಳಗಾವಿಯಲ್ಲಿ MES ಪುಂಡರ ಅಟ್ಟಹಾಸ – ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ, ಬಸ್ ಮೇಲೆ ಕಲ್ಲು ತೂರಾಟ

    ಬೆಳಗಾವಿ: ನಗರದ ಅನಗೋಳದ ಕನಕದಾಸ ಕಾಲೋನಿಯಲ್ಲಿ ತಡರಾತ್ರಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುತ್ಥಳಿಯನ್ನು ಕಿಡಿಗೇಡಿಗಳು ಹಾನಿಗೊಳಿಸಿದ್ದಾರೆ.

    ಮಧ್ಯರಾತ್ರಿ ದುಷ್ಕರ್ಮಿಗಳು ಆಗಮಿಸಿ ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಹಾನಿಪಡಿಸಿ ಖಡ್ಗ, ಗುರಾಣಿ ಬೇರೆ ಬೇರೆ ಕಡೆ ಇಟ್ಟು ವಿಕೃತಿಗೊಳಿಸಿ ದುಷ್ಕೃತ್ಯವೆಸಗಿದ್ದಾರೆ. ಇದೀಗ ಸ್ಥಳಕ್ಕೆ ಟೀಳಕವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಅತ್ಯಾಚಾರ ಘೋರ ಅಪರಾಧ, ಅದಕ್ಕೆ ಪೂರ್ಣ ವಿರಾಮ ಹಾಕಿ – ರಮೇಶ್ ಕುಮಾರ್ ವಿರುದ್ಧ ಪ್ರಿಯಾಂಕಾ ಗಾಂಧಿ ಆಕ್ರೋಶ

    ಸಂಗೊಳ್ಳಿ ರಾಯಣ್ಣ ಪುತ್ಥಳಿಗೆ ಹಾನಿಗೊಳಿಸಿರುವ ಕುರಿತಂತೆ ಕನ್ನಡಪರ ಹೋರಾಟಗಾರರು ಬೆಳಗಾವಿಯ ಟಿಳಕವಾಡಿ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದು, ಕಿಡಿಗೇಡಿಗಳನ್ನು ಶೀಘ್ರವೇ ಬಂಧಿಸುವಂತೆ ಆಗ್ರಹಿಸಿದ್ದಾರೆ.

    ಮತ್ತೊಂದೆಡೆ ಬೆಂಗಳೂರಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಅಪಮಾನ, ಆರೋಪ ಘಟನೆಯನ್ನು ಖಂಡಿಸಿ ತಡರಾತ್ರಿಯಿಂದ ಬೆಳಗಾವಿಯಲ್ಲಿ ಎಂಇಎಸ್, ಶ್ರೀರಾಮಸೇನೆ ಹಿಂದೂಸ್ತಾನ್ ಸೇರಿ ವಿವಿಧ ಸಂಘಟನೆಗಳ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಅಧಿವೇಶನದ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ 20ಕ್ಕೂ ಹೆಚ್ಚು ವಾಹನಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ ಹಿಂಸಾಚಾರ ಕೃತ್ಯವೆಸಗಿದ್ದಾರೆ. ಅಲ್ಲದೇ ನಗರದ ವಿವಿಧೆಡೆ ಲಾಡ್ಜ್‌ಗಳ ಮುಂದೆ ನಿಲ್ಲಿಸಿದ್ದ ವಾಹನಗಳ ಮೇಲೂ ಕಲ್ಲು ತೂರಾಟ ನಡೆಸಲಾಗಿದ್ದು, ಆರ್‌ಟಿಒ ವೃತ್ತದ ಬಳಿಯ ನಿರ್ಮಾಣ ಹಂತದ ಪೊಲೀಸ್ ಕಾಂಪ್ಲೆಕ್ಸ್‍ನ ಪಾರ್ಕಿಂಗ್‍ನಲ್ಲಿ ವಾಹನಗಳು ಜಖಂಗೊಂಡಿದೆ. ಇನ್ನೂ ಈ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪೊಲೀಸರು ಆರೋಪಿಗಳು ಪತ್ತೆಗೆ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಸರ್ಕಾರ ನಿರ್ಧಾರ ತಪ್ಪಿರಬಹುದು, ಉದ್ದೇಶವಲ್ಲ: ಅಮಿತ್‌ ಶಾ

    ಬೆಳಗಾವಿ ಹೊರವಲಯದಲ್ಲಿ ಕೂಡ  ಕೆಎಸ್‌ಆರ್‌ಟಿಸಿ ಬಸ್ ಮೇಲೆ ಕಿಡಿಕೇಡಿಗಳು ಕಲ್ಲು ತೂರಾಟ ನಡೆಸಿದ್ದು, ಈ ವೇಳೆ ಓರ್ವ ಕೈಯಲ್ಲಿ ಪೆಟ್ರೋಲ್ ಬಾಟಲಿ ಹಿಡಿದುಕೊಂಡು ಬಸ್‍ಗೆ ಬೆಂಕಿ ಹಚ್ಚಲು ಯತ್ನಿಸಿದ್ದಾನೆ. ಈ ಸಂಬಂಧ ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸದ್ಯ ದುಷ್ಕರ್ಮಿಗಳ ಅಟ್ಟಹಾಸಕ್ಕೆ ನಲುಗಿ ಹೋಗಿರುವ ಬೆಳಗಾವಿ ನಗರದಲ್ಲಿ ಪೊಲೀಸ್ ಬಿಗಿ ಭದ್ರತೆಗೊಳಿಸಲಾಗಿದ್ದು, ನಾಳೆ  ಬೆಳಗ್ಗೆ 8 ಗಂಟೆವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇದೀಗ ಕುಂದಾನಗರಿ ಬೆಳಗಾವಿಯಲ್ಲಿ ಬೂದಿ ಮುಚ್ಚಿದ ಕೆಂಡದಂತಹ ಪರಿಸ್ಥಿತಿ ಸೃಷ್ಟಿಯಾಗಿದೆ. ಇದನ್ನೂ ಓದಿ:  ಪ್ರಧಾನಿ ಮೋದಿಗೆ ಭೂತಾನ್‍ನ ಅತ್ಯುನ್ನತ ನಾಗರಿಕ ಪ್ರಶಸ್ತಿ ಗೌರವ