Tag: ಸಂಘಟನೆಗಳು

  • ಸಚಿವ ಸೋಮಣ್ಣ ಕಪಾಳಮೋಕ್ಷ ಕೇಸ್ – ಸಂಘಟನೆಗಳು ಕಿರುಕುಳ ನೀಡ್ತಿವೆ ಎಂದು ಪೊಲೀಸರಿಗೆ ಮಹಿಳೆ ದೂರು

    ಸಚಿವ ಸೋಮಣ್ಣ ಕಪಾಳಮೋಕ್ಷ ಕೇಸ್ – ಸಂಘಟನೆಗಳು ಕಿರುಕುಳ ನೀಡ್ತಿವೆ ಎಂದು ಪೊಲೀಸರಿಗೆ ಮಹಿಳೆ ದೂರು

    ಚಾಮರಾಜನಗರ: ಸಚಿವ ವಿ.ಸೋಮಣ್ಣ (V.Somanna) ನನ್ನ ಕೆನ್ನೆಗೆ ಹೊಡೆದಿದ್ದಾರೆ ಎಂದು ಹೇಳಿಕೆ ನೀಡುವಂತೆ ಕೆಲವು ಸಂಘಟನೆಗಳು ನನಗೆ ಕಿರುಕುಳ ನೀಡುತ್ತಿವೆ ಎಂದು ಪೊಲೀಸರಿಗೆ ಮಹಿಳೆ ದೂರು ನೀಡಿದ್ದಾಳೆ.

    ಸಚಿವ ಸೋಮಣ್ಣ ನನ್ನ ಕೆನ್ನೆಗೆ ಹೊಡೆದಿದ್ದಾರೆ ಎಂದು ಹೇಳಿ ಹಲವು ಸಂಘಟನೆಗಳು ನನಗೆ ಕಿರುಕುಳ ನೀಡುತ್ತಿವೆ. ಇಂಥ ಸಂಘಟನೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೆಂಪಮ್ಮ ಗುಂಡ್ಲುಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ನಂಗೆ ಎರಡು ಮುಖವಿಲ್ಲ, ಇರೋದು ಒಂದೇ ಮುಖ: ಹೆಚ್‍ಡಿಕೆಗೆ ಸೋಮಣ್ಣ ಟಾಂಗ್

    ಸಚಿವರ ವಿರುದ್ಧ ಪೊಲೀಸ್ ಠಾಣೆಗೆ ದೂರು ಕೊಡುವಂತೆ ವಿವಿಧ ಸಂಘಟನೆಗಳಿಂದ ಬೆದರಿಕೆ ಬರುತ್ತಿದೆ ಅಂತಾ ಆರೋಪ ಮಾಡಿದ್ದಾರೆ. ವಿವಿಧ ಸಂಘಟನೆಗಳ ವಿರುದ್ಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಮಹಿಳೆ ಕೆಂಪಮ್ಮ ದೂರು ದಾಖಲಿಸಿದ್ದಾರೆ.

    ಸೋಮಣ್ಣ ಹೊಡೆದಿದ್ದಾರೆಂದು ಹೇಳಿಕೆ ನೀಡು, ಪೊಲೀಸರಿಗೆ ದೂರು ಕೊಡು. ಇಲ್ಲದಿದ್ದರೆ ವಾಸ ಮಾಡಲು ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ. ವಿವಿಧ ಸಂಘಟನೆಗಳಿಂದ ಪ್ರಾಣ ಬೆದರಿಕೆ ಇದೆ. ನನಗೆ ರಕ್ಷಣೆ ನೀಡಿ ಎಂದು ಗುಂಡ್ಲುಪೇಟೆ ತಾಲೂಕಿನ ರೈತ ಸಂಘ, ತಾಲೂಕು ನಾಯಕರ ಹಿತರಕ್ಷಣಾ ಸಮಿತಿ, ತಾಲೂಕು ದಸಂಸ, ತಾಲೂಕು ಕೆಆರ್‌ಎಸ್ ಪಾರ್ಟಿ ವಿರುದ್ಧ ಮಹಿಳೆ ದೂರು ನೀಡಿದ್ದಾರೆ. ಇದನ್ನೂ ಓದಿ: ಮಹಿಳೆಗೆ ಕಪಾಳಮೋಕ್ಷ ಪ್ರಕರಣ- ಸೋಮಣ್ಣ ಕ್ಷಮೆಯಾಚನೆ

    Live Tv
    [brid partner=56869869 player=32851 video=960834 autoplay=true]

  • ಪಾಕಿಸ್ತಾನದ ಏಜೆಂಟ್‌ಗಳು ಹುಟ್ಟಿಕೊಳ್ಳುವುದೇ ಮಂಗಳೂರಿನಲ್ಲಿ: ಎ. ನಾರಾಯಣಸ್ವಾಮಿ

    ಪಾಕಿಸ್ತಾನದ ಏಜೆಂಟ್‌ಗಳು ಹುಟ್ಟಿಕೊಳ್ಳುವುದೇ ಮಂಗಳೂರಿನಲ್ಲಿ: ಎ. ನಾರಾಯಣಸ್ವಾಮಿ

    ಚಾಮರಾಜನಗರ: ಮಂಗಳೂರಿನಲ್ಲಿ ಹಲವು ಸಂಘಟನೆಗಳಿದ್ದು, ಪಾಕಿಸ್ತಾನದ ಏಜೆಂಟ್‌ಗಳು ಹುಟ್ಟಿಕೊಳ್ಳುವುದೇ ಅಲ್ಲಿ ಎಂದು ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಹೇಳಿದರು.

    ಮುಸ್ಲಿಂ ಡಿಫೆನ್ಸ್ ಫೋರ್ಸ್ ಎಂಬ ಸಂಘಟನೆ ಬಗ್ಗೆ ಚಾಮರಾಜನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಮಂಗಳೂರು, ಕೇರಳ, ದೆಹಲಿ ಸೇರಿದಂತೆ ಎಲ್ಲೇ ಸಂಘಟನೆಗಳು ಹುಟ್ಟಿಕೊಳ್ಳಲಿ, ಅವರನ್ನು ಸದೆಬಡಿಯುತ್ತೇವೆ. ಯಾವುದೇ ಕಾರಣಕ್ಕೂ ಅವರನ್ನು ಬಿಡಲ್ಲ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ದೇಶದ ಗೌರವ, ಸಾರ್ವಭೌಮತೆಗೆ ಕುಂದು ತರುವ ಸಂಸ್ಥೆಗಳನ್ನು ಬಿಡುತ್ತಿಲ್ಲ. ಯಾವುದನ್ನು ಯಾವ ಕಾಲಘಟ್ಟದಲ್ಲಿ ಬ್ಯಾನ್ ಮಾಡಬೇಕೋ, ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಡಿಕೆಶಿ ಏನೇ ಮಾಡಿದ್ರು ಅಂಜುವ ಮಗ ನಾನಲ್ಲ: ಯತ್ನಾಳ್

    ಪಾಕಿಸ್ತಾನ್ ಜಿಂದಾಬಾದ್, ಛೋಟಾ ಪಾಕಿಸ್ತಾನ್ ಎಂದು ಕೂಗುವ ಪ್ರವೃತ್ತಿಗಳು ಜಮ್ಮು ಕಾಶ್ಮೀರದಲ್ಲಿ ಪ್ರಾರಂಭವಾಗಿತ್ತು. ಹಿಂದಿನ ಸರ್ಕಾರಗಳು ಇದನ್ನು ನಿಗ್ರಹಿಸಲು ವಿಫಲವಾಗಿದ್ದವು. ಪಾಕಿಸ್ತಾನದಲ್ಲಿ ಸರ್ಕಾರ ಬದಲಾವಣೆಯಾದಾಗ ಇಂತಹ ಘಟನೆಗಳು ಮತ್ತೆ ಪ್ರಾರಂಭವಾಗಿವೆ. ಇದನ್ನು ನಿಗ್ರಹಿಸುವ ಶಕ್ತಿ ಭಾರತಕ್ಕಿದ್ದು, ನಿಗ್ರಹ ಮಾಡುತ್ತೇವೆ ಎಂದರು. ಇದನ್ನೂ ಓದಿ: ಕೇಜ್ರಿವಾಲ್ ಓರ್ವ ಅರಾಜಕತೆ ಸೃಷ್ಟಿ ಮಾಡುವ ನಾಯಕ: ಸಂದೀಪ್

    ಪಾಕಿಸ್ತಾನದ ಏಜೆಂಟ್‌ನಂತೆ ನಡೆದುಕೊಳ್ಳುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ, ಕೇಂದ್ರ ಸರ್ಕಾರ ಶಕ್ತವಾಗಿದೆ. ಧರ್ಮ ಸಂಘರ್ಷ ಪ್ರಕರಣಗಳು ನಡೆದಾಗ ನಿರ್ಲಕ್ಷ್ಯ ಮಾಡಿಲ್ಲ. ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಲಾಗಿದ್ದು, ಅವರನ್ನು ಬಂಧಿಸಲಾಗುವುದು. ಕವಲಂದೆ ಪ್ರಕರಣದಲ್ಲೂ ಇಬ್ಬರನ್ನೂ ಬಂಧಿಸಲಾಗಿದೆ ಎಂದು ತಿಳಿಸಿದರು.

    ಪಾಕಿಸ್ತಾನ ಏಜೆಂಟ್‌ಗಳು ದೇಶದಲ್ಲಿ ಸಕ್ರಿಯವಾಗಿದ್ದಾರೆ. ಅದಕ್ಕಾಗಿಯೇ ಜಮ್ಮು-ಕಾಶ್ಮೀರದಲ್ಲಿ ಆರ್ಟಿಕಲ್ 370 ತೆಗೆದು ಹಾಕಿದ್ದೇವೆ. ದೇಶದಲ್ಲಿ ರಾಷ್ಟ್ರೀಯತೆ ಮೈಗೂಡಿಸಲು ಏನೇನು ಕಾನೂನು ಬೇಕು ಅದನ್ನು ತರಲಾಗುತ್ತಿದೆ ಎಂದರು.

  • ರೈಲು ರೋಕೋಗೆ ಪೊಲಿಸರ ತಡೆ – ವಿಜಯಪುರ ನಿಲ್ದಾಣದಲ್ಲಿ ರೈತರ ಪ್ರತಿಭಟನೆ

    ರೈಲು ರೋಕೋಗೆ ಪೊಲಿಸರ ತಡೆ – ವಿಜಯಪುರ ನಿಲ್ದಾಣದಲ್ಲಿ ರೈತರ ಪ್ರತಿಭಟನೆ

    ವಿಜಯಪುರ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತ ಸಂಘಟನೆಗಳ ಹೋರಾಟಕ್ಕೆ ಬೆಂಬಲಿಸಿ ವಿಜಯಪುರದಲ್ಲಿ ಪ್ರಗತಿಪರ ಸಂಘಟನೆಗಳು ‘ರೈಲು ರೋಕೋ’ಗೆ ಇಂದು ಮುಂದಾಗಿದ್ದರು.

    ಈ ವೇಳೆ ರೈಲ್ವೆ ಪೊಲೀಸರು ‘ರೈಲು ರೋಕೋ’ ಚಳುವಳಿಗೆ ಅಡ್ಡಿಪಡಿಸಿದ್ದಾರೆ. ಇದರಿಂದ ಕೇಂದ್ರ ರೈಲ್ವೆ ನಿಲ್ದಾಣದ ಎದುರೇ ಪ್ರತಿಭಟನೆಗೆ ಸಂಘಟನೆಗಳು ಮುಂದಾದವು.

    ರೈಲ್ವೆ ನಿಲ್ದಾಣದ ಎದುರು ರೈತ ಗೀತೆ ಹಾಡುವುದರ ಮೂಲಕ ಹೋರಾಟಗಾರು ಪ್ರತಿಭಟನೆ ಮಾಡಿದರು. ಅಲ್ಲದೆ ಕೇಂದ್ರ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.

    ಸದ್ಯ ಸ್ಥಳದಲ್ಲಿ ಒಂದು ಡಿಎಆರ್ ತುಕಡಿ, ಓರ್ವ ಸಿಪಿಐ, ಮೂವರು ಪಿಎಸ್‍ಐ ಹಾಗೂ ಮೂವತ್ತಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.

  • ಸರ್ಕಾರದ ಭೂಸುಧಾರಣಾ ಕಾಯ್ದೆಯ ತಿದ್ದುಪಡಿಗೆ ಆರ್‌ಎಸ್‌ಎಸ್ ವಲಯದಲ್ಲಿ ಆಕ್ಷೇಪ

    ಸರ್ಕಾರದ ಭೂಸುಧಾರಣಾ ಕಾಯ್ದೆಯ ತಿದ್ದುಪಡಿಗೆ ಆರ್‌ಎಸ್‌ಎಸ್ ವಲಯದಲ್ಲಿ ಆಕ್ಷೇಪ

    ಬೆಂಗಳೂರು: ಯಾರು ಬೇಕಾದರೂ ಕೃಷಿಭೂಮಿ ಖರೀದಿಸಬಹುದೆಂಬ ನಿಯಮವನ್ನು ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಜಾರಿ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರಕ್ಕೆ ಶಾಕಿಂಗ್ ನ್ಯೂಸ್. ಬಿಜೆಪಿ ಸರ್ಕಾರದ ಈ ನಿರ್ಧಾರಕ್ಕೆ ಆರ್‌ಎಸ್‌ಎಸ್ ಚಿಂತನೆಗಳಿಂದ ಪ್ರೇರಿತರಾಗಿರುವ ಇತರೇ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿವೆ.

    ಭಾರತೀಯ ಕಿಸಾನ್ ಸಂಘ, ಸ್ವದೇಶಿ ಜಾಗರಣ ಮಂಚ್ ಮತ್ತು ಕೃಷಿ ಪ್ರಯೋಗ ಪರಿವಾರಗಳಿಂದ ಕಾಯ್ದೆಯ ತಿದ್ದುಪಡಿಗೆ ಆಕ್ಷೇಪ ವ್ಯಕ್ತವಾಗಿದೆ. ಇಂದು ಸಂಜೆ ಸಿಎಂ ಯಡಿಯೂರಪ್ಪ ಭೇಟಿ ಮಾಡಿದ ಸಂಘಟನೆಗಳ ಮುಖ್ಯಸ್ಥರ ನಿಯೋಗ, ಭೂ ಸುಧಾರಣಾ ತಿದ್ದುಪಡಿ ಬಗ್ಗೆ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಿದೆ.

    ಭಾರತೀಯ ಕಿಸಾನ್ ಸಂಘ ದ ರಾಜ್ಯ ಪ್ರಧಾನ ಕಾರ್ಯದರ್ಶಿ ಗಂಗಾಧರ್ ಕಾಸರಘಟ್ಟ, ಸ್ವದೇಶಿ ಜಾಗರಣ ಮಂಚ್ ನ ಕ್ಷೇತ್ರ ಸಂಘಟನಾ ಕಾರ್ಯದರ್ಶಿ ಜಗದೀಶ್, ಅಖಿಲ ಭಾರತ ಸಂಯೋಜಕ್ ಪ್ರೊ.ಕುಮಾರಸ್ವಾಮಿ, ಕೃಷಿ ಪ್ರಯೋಗ ಪರಿವಾರದ ಅರುಣ ಮತ್ತು ವೃಷಾಂಕ್ ಭಟ್ ಇದ್ದ ನಿಯೋಗ ಸಿಎಂ ಯಡಿಯೂರಪ್ಪ ಅವರನ್ನು ಅವರ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿತ್ತು.

    ಸಂಘಟನೆಗಳ ಒತ್ತಾಯ ಮತ್ತು ಆಕ್ಷೇಪಣೆಗಳೇನು?
    1. 79 ಎ, ಬಿ ತಿದ್ದುಪಡಿ ಮೂಲಕ ರೈತರಲ್ಲದವರಿಗೆ ಕೃಷಿ ಭೂಮಿ ಖರೀದಿಸಲು ಅವಕಾಶ ಕೊಡುವುದು, ಸ್ವಾಗತಾರ್ಹ. ಕೃಷಿಗೆ ಹೆಸರು, ವಿದ್ಯಾವಂತರು ಬರುವುದು ಒಳ್ಳೆಯದೇ ಆದರೆ ಹಾಗೆ ಕೃಷಿ ಭೂಮಿ ಪಡೆದವರು ಅಲ್ಲಿ ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಯನ್ನು ಮಾಡಬೇಕು ಕೈಗಾರಿಕಾ ಉದ್ದೇಶಕ್ಕೆ ಈ ಭೂಮಿಯನ್ನು ಬಳಸಬಾರದು ಮತ್ತು ಮುಂದೆ ಸದರಿ ಭೂಮಿಯನ್ನು ಕೈಗಾರಿಕೆ ಉದ್ದೇಶಕ್ಕೆ ಮಾರುವ ಅವಕಾಶವೂ ಇರಬಾರದು ಎಂಬುದು ಆಗ್ರಹ.
    2. ಆದರೆ ಸರ್ಕಾರದ ಈ ಕಾಯ್ದೆ ತಿದ್ದುಪಡಿ ಪ್ರಸ್ತಾಪ ಕೈಗಾರಿಕೆಗಳಿಗೆ, ರಿಯಲ್ ಎಸ್ಟೇಟ್ ಉದ್ಯಮಕ್ಕೆ ಪೂರಕವಾಗಿದೆ ಎಂಬ ವಾದ ಕೇಳಿಬರುತ್ತಿದೆ. ಸರ್ಕಾರ ರೈತರ ಪರವಾಗಿ ಸ್ಪಷ್ಟ ನಿಲುವು ಪ್ರಕಟಿಸದಿರುವುದು ಆತಂಕಕ್ಕೆ ಕಾರಣವಾಗಿದೆ.
    3. ಹೀಗಾಗಿ ಕಾಯ್ದೆಗೆ ತಿದ್ದುಪಡಿ ತರುವ ಮೊದಲು ನೀವು ರೈತ ಸಂಘಟನೆಗಳೊಂದಿಗೆ ಚರ್ಚಿಸಬೇಕು. ವಿಷಯ ಪರಿಣಿತರ ಸಮಿತಿ ರಚಿಸಿ ಸಲಹೆ ಪಡೆಯಬೇಕು.


    4 ಹೊಸದಾಗಿ ಕೃಷಿ ಭೂಮಿ ಖರೀದಿಸುವರಿಗೆ ಗರಿಷ್ಠ ಮಿತಿಯನ್ನು ಹಿಂದಿನಂತೆಯೇ 54 ಎಕರೆಗೆ ಮುಂದುವರಿಸುವುದು ಮತ್ತು ಹೊಸದಾಗಿ ಕೃಷಿ ಭೂಮಿ ಖರೀದಿಸಿದರು ಕನಿಷ್ಠ 8 ವರ್ಷ ಮಾರುವಂತಿಲ್ಲ ಎಂಬ ಷರತ್ತಿರಲಿ.
    5, ಕೃಷಿ ಭೂಮಿಯಲ್ಲಿ ಇಂತಹ ಕೃಷಿ ಪೂರಕ ಘಟಕಗಳನ್ನು ನಿರ್ಮಿಸಲು ಕಂದಾಯ ಇಲಾಖೆಯ ಅನುಮತಿಯ ಅಗತ್ಯ ಇರಕೂಡದು. ರೈತರಿಗೆ ಮನೆ, ಕೊಟ್ಟಿಗೆ, ಕೃಷಿ ಸಂಸ್ಕರಣಾ ಘಟಕ, ಗೋದಾಮು, ಹೋಮ್ ಸ್ಟೇ, ಒಂದು ಎಕರೆಗಿಂತ ಹೆಚ್ಚಿನ ಜಾಗದಲ್ಲಿ ಘಟಕಗಳು ಬಂದಲ್ಲಿ ತಹಶೀಲ್ದಾರ್ ಅಥವಾ ಜಿಲ್ಲಾಧಿಕಾರಿಗಳ ಅನುಮತಿ ಅಗತ್ಯ ಎಂದು ನಮೂದಿಸಬೇಕು.
    6 ಟ್ರಸ್ಟ್, ಕಂಪನಿ, ರಾಜ್ಯದ ಕೇಂದ್ರದ ಬಹುರಾಜ್ಯ ಸಹಕಾರಿ ಕಾಯ್ದೆಗಳಲ್ಲಿ ನೋಂದಣಿ ಮಾಡುವ ಸಂಸ್ಥೆಗಳು ರೈತರಿಂದ ಭೂಮಿ ಖರೀದಿಸುವಾಗ ಖರೀದಿಸುವವರ ಪೂರ್ತಿ ವಿವರ ಮತ್ತು ಖರೀದಿಸುವ ಉದ್ದೇಶ ಮಾರುವ ರೈತರಿಗೆ ತಿಳಿಯುವಂತಾಗಬೇಕು.


    6 ಪ್ಲಾನೇಷನ್ ಕಾಯ್ದೆ ಅಡಿಯಲ್ಲಿ ಸಾವಿರಾರು ಎಕರೆ ಭೂಮಿ ಹೊಂದಲು ಅವಕಾಶವಿದೆ. ಈ ಕಾಯ್ದೆಯನ್ನು ಮರುಪರಿಶೀಲಿಸಬೇಕು.
    8 ನೀರಾವರಿ ಕಲ್ಪಿಸಲಾಗಿದೆ ಸರ್ಕಾರ ಸಾವಿರಾರು ಕೋಟಿ ಹಣ ಖರ್ಚು ಮಾಡಿದೆ. ಈಗ ಅದೆ ನೀರಾವರಿ ಭೂಮಿಯನ್ನು ಕೈಗಾರಿಕೆಗೆ ನೀಡುವ ಬಗ್ಗೆ ಬಿಗಿ ನೀತಿ ಬೇಕು.
    9. ಭೂ ಸುಧಾರಣಾ ಕಾಯಿಯಲ್ಲಿ ತರುವ ಮಾರ್ಪಾಡುಗಳನ್ನು ಪುರ್ವಾನ್ವಯದಿಂದ ಜಾರಿಗೊಳಿಸುವುದು ಬೇಡ. ಹೀಗೆ ಮಾಡುವುದರಿಂದ ಸರ್ಕಾರ ಹೊಸಬರನ್ನು ಕೃಷಿ ಕ್ಷೇತ್ರಕ್ಕೆ ಹಿತ ರಕ್ಷಣೆಗೆ ಬದ್ಧವಾಗಿದೆ ಎಂಬ ಸಂದೇಶ ಸಮಾಜಕ್ಕೆ ಹೋಗುತ್ತದೆ.

  • ಭಾರತ್ ಬಂದ್‍ಗೆ ಮಂಡ್ಯದಲ್ಲಿ ಬೆಂಬಲ

    ಭಾರತ್ ಬಂದ್‍ಗೆ ಮಂಡ್ಯದಲ್ಲಿ ಬೆಂಬಲ

    ಮಂಡ್ಯ: ಬುಧವಾರ ಭಾರತ್ ಬಂದ್ ಹಿನ್ನೆಲೆಯಲ್ಲಿ ಮಂಡ್ಯದಲ್ಲಿ AITUC, STPI, CPM, KSRTC, ಗಾರ್ಮೆಂಟ್ಸ್, ರೈತ ಸಂಘಟನೆಗಳು ಹಾಗೂ ಇತರೆ ಸಂಘಟನೆಗಳು ಬಂದ್‍ಗೆ ಬೆಂಬಲ ಸೂಚನೆ ನೀಡಿವೆ.

    ಬುಧವಾರ ಬಂದ್ ವೇಳೆ ಮಂಡ್ಯದಲ್ಲಿ ಅಲ್ಪ ಪ್ರಮಾಣದಲ್ಲಿ ಅಂಗಡಿ ಮುಗ್ಗಟ್ಟುಗಳು ಬಂದ್ ಆಗುವ ಸಾಧ್ಯತೆ ಇದೆ. ಹೀಗಾಗಿ ಆಟೋ, ಗೂಡ್ಸ್ ವಾಹನಗಳು ಎಂದಿನಂತೆ ಸಂಚಾರ ಮಾಡಲಿವೆ. KSRTC ಬಸ್‍ಗಳು ಪರಿಸ್ಥಿತಿಗೆ ಅನುಗುಣವಾಗಿ ರಸ್ತೆ ಇಳಿಯಲಿವೆ. ಶಾಲಾ-ಕಾಲೇಜುಗಳಿಗೆ ರಜೆ ನೀಡುವ ಸಂಬಂಧ ಇನ್ನೂ ಸಹ ಜಿಲ್ಲಾಧಿಕಾರಿಗಳು ನಿರ್ಧಾರ ಮಾಡಿಲ್ಲ. ಇದನ್ನೂ ಓದಿ: ಬುಧವಾರ ಭಾರತ್ ಬಂದ್ – ಏನು ಇರುತ್ತೆ? ಏನು ಇರಲ್ಲ?

    ಇನ್ನೂ ಉಳಿದಂತೆ ಮಂಡ್ಯದಲ್ಲಿ ಎಂದಿನಂತೆ ಜನ ಜೀವನ ಸಂಚಾರ ಮಾಡುವ ಸಾಧ್ಯತೆ ಇದೆ. ಬಂದ್‍ಗೆ ಕರೆ ಕೊಟ್ಟಿರುವ ಸಂಘಟನೆಗಳು ಬಂದ್ ಬೆಂಬಲಿಸಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಿದ್ದಾರೆ. ಉಳಿದಂತೆ ಯಾರು ಕೂಡ ಬಲವಂತವಾಗಿ ಅಂಗಡಿ ಮುಂಗಟ್ಟುಗಳ ಬಾಗಿಲು ಹಾಕುಸುವಂತಿಲ್ಲ ಎಂದು ಮಂಡ್ಯ ಎಸ್‍ಪಿ ಪರಶುರಾಮ್ ಸಂಘಟನೆಗಳಿಗೆ ಸೂಚನೆ ನೀಡಿದ್ದಾರೆ.

  • ನಟ ವಿಜಯ್ ಬರ್ತ್ ಡೇ, ತಮಿಳುಮಯವಾದ ಶ್ರೀರಾಂಪುರ – ಕನ್ನಡಿಗರ ಆಕ್ರೋಶ

    ನಟ ವಿಜಯ್ ಬರ್ತ್ ಡೇ, ತಮಿಳುಮಯವಾದ ಶ್ರೀರಾಂಪುರ – ಕನ್ನಡಿಗರ ಆಕ್ರೋಶ

    ಬೆಂಗಳೂರು: ತಮಿಳು ನಟ ವಿಜಯ್ ಹುಟ್ಟು ಹಬ್ಬದ ಪ್ರಯುಕ್ತ ಶ್ರೀರಾಂಪುರ ತಮಿಳು ಮಯವಾಗಿದ್ದು ಇದಕ್ಕೆ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ತಮಿಳು ನಟ ವಿಜಯ್ ಅವರ ಬರ್ತ್ ಡೇ ಪ್ರಯುಕ್ತ ಅಖಿಲ ಕರ್ನಾಟಕ ಡಾ. ವಿಜಯ್ ಅಭಿಮಾನಿಗಳ ಸಂಘದಿಂದ ಶ್ರೀರಾಂಪುರದಲ್ಲಿ ವಿಜೃಂಭಣೆಯಿಂದ ಹುಟ್ಟು ಹಬ್ಬ ಆಚರಣೆ ಮಾಡಲಾಗಿದೆ. ಈ ಕಾರ್ಯಕ್ರಮಕ್ಕೆ ಮಾಜಿ ಎಂಎಲ್‍ಎ ಹಾಗೂ ವಿಜಯ್ ಆಪ್ತ ಆನಂದ್ ವಿಶೇಷ ಅತಿಥಿಯಾಗಿ ಆಗಮಿಸಿದ್ದರು.

    ಶ್ರೀರಾಂಪುರದ ಸನ್‍ರೈಸ್ ಸರ್ಕಲ್‍ನಲ್ಲಿ ಬೃಹತ್ ವೇದಿಕೆ ಹಾಕಿ, ಬೆಳಗ್ಗೆಯಿಂದ ವೇದಿಕೆಯಲ್ಲಿ ವಿಜಯ್ ನಟನೆಯ ತಮಿಳು ಹಾಡುಗಳಿಗೆ ನೃತ್ಯ ಮಾಡಲಾಗುತ್ತಿತ್ತು. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿ ಕನ್ನಡಪರ ಸಂಘಟನೆಯ ಕಾರ್ಯಕರ್ತರು ಆಗಮಿಸಿದ ಕೂಡಲೇ ಕನ್ನಡ ಭಕ್ತಿಗೀತೆಗಳನ್ನು ಹಾಕಿ ನೃತ್ಯ ಮಾಡಲಾಗಿದೆ ಎನ್ನಲಾಗಿದೆ.

    ಶ್ರೀರಾಂಪುರ ತಮಿಳುವಾಗಿದ್ದಕ್ಕೆ ವಿರೋಧ ವ್ಯಕ್ತಪಡಿಸಿರುವ ಕನ್ನಡ ಪರ ಸಂಘಟನೆಗಳು ಕರ್ನಾಟಕದಲ್ಲಿ ಕನ್ನಡಕ್ಕೆ ನೆಲೆ ಇಲ್ಲದಾಂತಾಗುತ್ತಿದೆ ಎಂದು ಕಿಡಿಕಾರಿದ್ದಾರೆ. ಇನ್ನೂ ವೇದಿಕೆಯ ಫ್ಲೆಕ್ಸ್‍ನಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಫೋಟೋಗಳು ಕಂಡು ಬಂದಿವೆ.