Tag: ಸಂಚಾರ ದಟ್ಟಣೆ

  • ಪೀಕ್‌ ಅವರ್‌ನಲ್ಲಿ ಬೆಂಗಳೂರಿನಲ್ಲಿ ಒಬ್ಬರೇ ಕಾರ್‌ನಲ್ಲಿ ಸಂಚರಿಸಿದ್ರೆ ಟ್ಯಾಕ್ಸ್‌?

    ಪೀಕ್‌ ಅವರ್‌ನಲ್ಲಿ ಬೆಂಗಳೂರಿನಲ್ಲಿ ಒಬ್ಬರೇ ಕಾರ್‌ನಲ್ಲಿ ಸಂಚರಿಸಿದ್ರೆ ಟ್ಯಾಕ್ಸ್‌?

    – ಸರ್ಕಾರಕ್ಕೆ ತಜ್ಞರ ಸಮಿತಿಯಿಂದ ಪ್ರಸ್ತಾಪ

    ಬೆಂಗಳೂರು: ಸಂಚಾರ ದಟ್ಟಣೆ (Heavy Traffic) ಇರುವ ಬೆಂಗಳೂರಿನ (Bengaluru) ಕೆಲ ರೋಡ್ ಗಳಲ್ಲಿ ನೀವು ಸಿಂಗಲ್ ಆಗಿ ಕಾರ್ ಓಡಿಸ್ತೀರಾ ಹಾಗಾದ್ರೆ ನೀವು ಈ ಸುದ್ದಿಯನ್ನು ಓದಲೇಬೇಕು. ಒಂದು ವೇಳೆ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡರೆ ದೇಶದಲ್ಲಿ ಎಲ್ಲಿಯೂ ಇಲ್ಲದಸಂಚಾರ ದಟ್ಟಣೆ ತೆರಿಗೆ (Congestion Tax) ಪಾವತಿಸಬೇಕಾಗುತ್ತದೆ.

    ಹೌದು. ಸೆಪ್ಟೆಂಬರ್ 24 ರಂದು ಸಂಚಾರ ದಟ್ಟಣೆ, ಗುಂಡಿ ಸಮಸ್ಯೆ ಬಗ್ಗೆ ವಿವಿಧ ಇಲಾಖೆಗಳ ಕೋ ಆರ್ಡಿನೇಶನ್ ಮತ್ತು ಕೆಲ ಉದ್ಯಮಿಗಳ ಮಹತ್ವದ ಸಭೆ ನಡೆದಿದೆ. ಮುಖ್ಯಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ‌ನಡೆದಿದ್ದ ಸಭೆಯಲ್ಲಿ ತಜ್ಞರು ಸಂಚಾರ ದಟ್ಟಣೆ ಟ್ಯಾಕ್ಸ್ ಪ್ರಸ್ತಾಪ ಇಟ್ಟಿದ್ದಾರೆ. ಫಾಸ್ಟ್ ಟ್ಯಾಗ್ ಸಿಸ್ಟಮ್ ಮೂಲಕ ಸಂಚಾರ ದಟ್ಟಣೆ ಇರುವ ನಿರ್ದಿಷ್ಟ ರಸ್ತೆಗಳಲ್ಲಿ ಟ್ಯಾಕ್ಸ್ ಪ್ರಸ್ತಾಪ ಇಟ್ಟಿದ್ದಾರೆ. ಅಲ್ಲದೆ ಕಾರ್ ಪೂಲಿಂಗ್ ಬಗ್ಗೆಯೂ ಪ್ರಸ್ತಾಪ ಮಾಡಿದ್ದಾರೆ.

     

    ಮುಖ್ಯ ಕಾರ್ಯದರ್ಶಿಗಳ ಸಭೆಯಲ್ಲಿ ನಡೆದ ತಜ್ಞರ ಸಮಿತಿ ಈ ಪ್ರಸ್ತಾಪಕ್ಕೆ ಸರ್ಕಾರದಿಂದ ಗ್ರೀನ್ ಸಿಗ್ನಲ್ ನೀಡಿಲ್ಲ. ಸಂಚಾರ ದಟ್ಟಣೆ ಟ್ಯಾಕ್ಸ್ ಹಾಕಿರೆ ಸಾರ್ವಜನಿಕವಾಗಿ ವ್ಯಾಪಕವಾಗಿ ಆಕ್ರೋಶ ಸಾಧ್ಯತೆ ಅರಿತು ಆ ಪ್ರಸ್ತಾಪ ರಿಜೆಕ್ಟ್ ಆಗಬಹುದು. ಹಾಗಾಗಿ ಸರ್ಕಾರ ಮಟ್ಟದಲ್ಲಿ ಇನ್ನೂ ಅಂತಿಮ ತೀರ್ಮಾನ ಆಗಿಲ್ಲ.‌

    ಲಂಡನ್, ಸಿಂಗಾಪುರ್, ನ್ಯೂಯಾರ್ಕ್ ನಗರಗಳಲ್ಲಿ ಸಂಚಾರಣ ದಟ್ಟಣೆ ಟ್ಯಾಕ್ಸ್ ಬಗ್ಗೆ ಉಲ್ಲೇಖಿಸಲಾಗಿದ್ದು, ಬೆಂಗಳೂರು ನಗರದ ಟ್ರಾಫಿಕ್ ವ್ಯವಸ್ಥೆಯನ್ನು ಅಲ್ಲಿಗೆ ಹೋಲಿಸಿ ಟ್ಯಾಕ್ಸ್ ಹಾಕುವ ಪ್ರಸ್ತಾಪಕ್ಕೆ ಬಿಜೆಪಿ ತೀವ್ರವಾಗಿ ವಿರೋಧಿಸಿದೆ.

    ಏನಿದು ಸಂಚಾರ ದಟ್ಟಣೆ ತೆರಿಗೆ?
    ಪೀಕ್ ಅವರ್ ನಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿರುವ ನಿರ್ದಿಷ್ಟ ರಸ್ತೆಗಳಲ್ಲಿ ಜಾರಿ. ಒಬ್ಬರೇ ಕಾರು ಓಡಿಸಿದರೆ ಸಂಚಾರ ದಟ್ಟಣೆ ತೆರಿಗೆ ಕಟ್ಟಬೇಕು. ಫಾಸ್ಟ್ ಟ್ಯಾಗ್ ಮೂಲಕ ಸಂಚಾರ ದಟ್ಟಣೆ ತೆರಿಗೆ ಕಡಿತ ಮಾಡಲು ಪ್ರಸ್ತಾಪ ಇಡಲಾಗಿದೆ.

  • ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ; ದೆಹಲಿ – ಎನ್‌ಸಿಆರ್ ಗಡಿಗಳಲ್ಲಿ ಟೋಲ್ ಪ್ಲಾಜಾಗಳಿಗೆ ಕೊಕ್?

    ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ; ದೆಹಲಿ – ಎನ್‌ಸಿಆರ್ ಗಡಿಗಳಲ್ಲಿ ಟೋಲ್ ಪ್ಲಾಜಾಗಳಿಗೆ ಕೊಕ್?

    ನವದೆಹಲಿ: ದೆಹಲಿ ಮತ್ತು ಎನ್‌ಸಿಆರ್ ಗಡಿಗಳಲ್ಲಿ ನಿರ್ಮಿಸಲಾದ ಟೋಲ್ ಸಂಗ್ರಹಣಾ ಪಾಯಿಂಟ್‌ಗಳಿಂದ (Toll Plaza) ಸಂಚಾರ ದಟ್ಟಣೆ ಹೆಚ್ಚುತ್ತಿದ್ದು, ಇವುಗಳನ್ನು ಮುಖ್ಯ ಹೆದ್ದಾರಿಯಿಂದ ತೆಗೆದುಹಾಕಲು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಎಂಸಿಡಿಗೆ ಸೂಚನೆ ನೀಡಲಿದೆ ಎಂದು ವರದಿಯಾಗಿದೆ.

    ಈ ಟೋಲ್ ಬೂತ್‌ಗಳು ಹೆದ್ದಾರಿಯಲ್ಲಿ ಸಂಚಾರದ ವೇಗವನ್ನು ನಿಧಾನಗೊಳಿಸುತ್ತಿವೆ, ದೆಹಲಿಯನ್ನು ಗಾಜಿಯಾಬಾದ್ ಮತ್ತು ನೋಯ್ಡಾಗೆ ಸಂಪರ್ಕಿಸುವ NH-9 ಮತ್ತು ದೆಹಲಿ-ಗುರುಗ್ರಾಮ್ ಅನ್ನು ಸಂಪರ್ಕಿಸುವ NH-48 ಅತ್ಯಂತ ಜನನಿಬಿಡ ಹೆದ್ದಾರಿಗಳಾಗಿದ್ದು, ಈ ಬದಲಾವಣೆಯ ಪರಿಣಾಮವನ್ನು ಸ್ಪಷ್ಟವಾಗಿ ಕಾಣಬಹುದು. ಇದನ್ನೂ ಓದಿ: ಗ್ರೇಟರ್ ಬೆಂಗಳೂರು ವಿಧೇಯಕ ವಾಪಸ್ ಪಡೆಯದೇ ಹೋದ್ರೆ ಸಿಎಂ, ಸಚಿವರ ಕಾರ್ಯಕ್ರಮಗಳಿಗೆ ಮುತ್ತಿಗೆ – ಜೆಡಿಎಸ್ ಎಚ್ಚರಿಕೆ

    ಎಂಸಿಡಿ ಪ್ರಸ್ತುತ ದೆಹಲಿ ಗಡಿಗಳ ಐದು ಪ್ರಮುಖ ಸ್ಥಳಗಳಲ್ಲಿ ಇಸಿಸಿಯನ್ನು ಸಂಗ್ರಹಿಸುತ್ತದೆ. ಗುರುಗ್ರಾಮ್‌ನ ಸಿರ್ಹೌಲ್ ಗಡಿ, ಘಾಜಿಪುರ (NH 9), ಬದರ್ಪುರ್ (NH 19), ಟಿಕ್ರಿ (NH 10) ಮತ್ತು ಕುಂಡ್ಲಿ (NH 44) ಟೋಲ್ ಬೂತ್‌ಗಳು ಈ ಪ್ರದೇಶಗಳಲ್ಲಿ ಭಾರೀ ಸಂಚಾರ ದಟ್ಟಣೆಯನ್ನು ಉಂಟುಮಾಡುತ್ತವೆ. ಇದನ್ನೂ ಓದಿ: ವೈಮಾನಿಕ ದಾಳಿಯಲ್ಲಿ ಐಸಿಸ್‌ ಕಮಾಂಡರ್‌ ಅಬು ಖದೀಜಾ ಹತ್ಯೆ – ಬಲದ ಮೂಲಕ ಶಾಂತಿ ಎಂದ ಟ್ರಂಪ್‌

    ಕೇಂದ್ರ ಸರ್ಕಾರ, ರಸ್ತೆ ಸಾರಿಗೆ ಸಚಿವಾಲಯ ಮತ್ತು ಹರಿಯಾಣ ಸರ್ಕಾರ ಜಂಟಿಯಾಗಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ಯೋಜಿಸುತ್ತಿವೆ. ಈ ಮನವಿಯಲ್ಲಿ ಟೋಲ್ ಸಂಗ್ರಹಣಾ ಕೇಂದ್ರಗಳನ್ನು ಗಡಿಯಿಂದ ಬೇರೆಡೆಗೆ ಸ್ಥಳಾಂತರಿಸಬೇಕೆಂದು ವಿನಂತಿಸಲಾಗುತ್ತಿದೆ. ಇದನ್ನೂ ಓದಿ: ಮೆಗಾ ಮ್ಯಾಜಿಕ್ ಸ್ಟಾರ್ ಕುದ್ರೋಳಿ ಗಣೇಶ್‌ಗೆ ‘ಗೋಲ್ಡನ್ ಮ್ಯಾಜಿಷಿಯನ್’ ರಾಷ್ಟ್ರೀಯ ಜಾದೂ ಪ್ರಶಸ್ತಿ

    ಕೇಂದ್ರ ಸರ್ಕಾರ ದೆಹಲಿ ಮತ್ತು ಹರಿಯಾಣ ಆಡಳಿತದೊಂದಿಗೆ ಈ ವಿಷಯವನ್ನು ಚರ್ಚಿಸಿದೆ. ಈಗ ಅಂತಿಮ ನಿರ್ಧಾರವು ಸುಪ್ರೀಂ ಕೋರ್ಟ್‌ನ ನಿಲುವಿನ ಮೇಲೆ ನಿರ್ಧಾರವಾಗಲಿದೆ. ಈ ಯೋಜನೆ ಯಶಸ್ವಿಯಾದರೆ, ದೆಹಲಿ-ಎನ್‌ಸಿಆರ್‌ನ ಲಕ್ಷಾಂತರ ಪ್ರಯಾಣಿಕರು ಸಂಚಾರ ದಟ್ಟಣೆಯಿಂದ ಹೆಚ್ಚಿನ ಪರಿಹಾರ ಪಡೆಯಬಹುದು. ಇದನ್ನೂ ಓದಿ: ಹರ್ಯಾಣ| ಭೂ ವಿವಾದ; ಬಿಜೆಪಿ ಮಂಡಲ ಅಧ್ಯಕ್ಷನ ಭೀಕರ ಹತ್ಯೆ

  • ಬೆಂಗ್ಳೂರಿನಲ್ಲಿ ಗುರುವಾರ ಟ್ರಾಫಿಕ್ ಸಮಸ್ಯೆ ಸಾಧ್ಯತೆ

    ಬೆಂಗ್ಳೂರಿನಲ್ಲಿ ಗುರುವಾರ ಟ್ರಾಫಿಕ್ ಸಮಸ್ಯೆ ಸಾಧ್ಯತೆ

    ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ಪ್ರವಾಹ ಪರಿಹಾರ ನೀಡಿಲ್ಲ ಎನ್ನುವುದನ್ನು ಖಂಡಿಸಿ ಗುರುವಾರ ಸಿಲಿಕಾನ್ ಸಿಟಿಯ ಬಹುತೇಕ ಕಡೆಗಳಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದು, ಸಂಚಾರ ದಟ್ಟಣೆ ಎದುರಾಗುವ ಸಾಧ್ಯತೆ ಹೆಚ್ಚಿದೆ.

    ನಗರದ ವಿವಿಧ ಭಾಗಗಳಲ್ಲಿ ಉತ್ತರ ಕರ್ನಾಟಕದ ಜನತೆ ಪ್ರತಿಭಟನೆ ನಡೆಸುತ್ತಿದ್ದು, ರಾಜಾಜಿನಗರ, ಭಾಷ್ಯಂ ವೃತ್ತ, ರಾಮ ಮಂದಿರ, ಸ್ವಾತಂತ್ರ್ಯ ಉದ್ಯಾನವನದ ಬಳಿ ಭಾರೀ ಟ್ರಾಫಿಕ್ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಹೀಗಾಗಿ ವಾಹನ ಸವಾರರು ಪರ್ಯಾಯ ಮಾರ್ಗಗಳನ್ನು ಹುಡುಕಿಕೊಳ್ಳುವುದು ಉತ್ತಮ.

    ಉತ್ತರ ಕರ್ನಾಟಕ ಭಾಗದಲ್ಲಿ ನೆರೆ ಪ್ರವಾಹದಿಂದ ಜನ ತತ್ತರಿಸಿದ್ದಾರೆ. ಆದರೂ ಕೇಂದ್ರ ಸರ್ಕಾರ ರಾಜ್ಯಕ್ಕೆ ಬಿಡಿಗಾಸೂ ನೀಡಿಲ್ಲ. ನೆರೆ ಪೀಡಿತರ ಕಣ್ಣೀರು ಒರೆಸುವ ಪ್ರಯತ್ನ ಮಾಡಿಲ್ಲ. ಕರ್ನಾಟಕವನ್ನು ಸಂಪೂರ್ಣವಾಗಿ ಮರೆತು ಹೋಗಿದ್ದಾರೆ. ಹೀಗಾಗಿ ಉತ್ತರ ಕರ್ನಾಟಕದ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ಕೇಂದ್ರ ಸರ್ಕಾರದ ಈ ಮಲತಾಯಿ ಧೋರಣೆಯನ್ನು ಖಂಡಿಸಿ ಪ್ರತಿಭಟನೆ ಹಮ್ಮಿಕೊಂಡಿದೆ.

    ಗುರುವಾರ ನಗರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲು ನಿರ್ಧರಿಸಲಾಗಿದೆ. ಬೆಳಗ್ಗೆ 9.30ಕ್ಕೆ ರಾಜಾಜಿನಗರದ ಭಾಷ್ಯಂ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಅಲ್ಲಿಂದ ರಾಮಮಂದಿರ ಮಾರ್ಗವಾಗಿ ಸ್ವಾತಂತ್ರ್ಯ ಉದ್ಯಾನವನದ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದೆ.

    ಪ್ರತಿಭಟನೆಯಲ್ಲಿ ನಿವೃತ್ತ ರಾಜ್ಯ ಪೊಲೀಸ್ ಮಹಾನಿರ್ದಶಕ ಶಂಕರ್ ಬಿದರಿ ಪ್ರತಿಭಟನೆಗೆ ಚಾಲನೆ ನೀಡಲಿದ್ದಾರೆ ಎಂದು ಮಹಾ ಸಂಸ್ಥೆ ಅಧ್ಯಕ್ಷ ಶಿವಕುಮಾರ್ ಮೇಟಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಭಾಗದ ಹಲವಾರು ಸಂಘ ಸಂಸ್ಥೆಗಳ ಸಾವಿರಾರು ಜನ ಸದಸ್ಯರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಶಿವಕುಮಾರ್ ತಿಳಿಸಿದ್ದಾರೆ.

    ಬೃಹತ್ ಪ್ರತಿಭಟನೆ ನಡೆಯುತ್ತಿರುವುದರಿಂದ ನಗರದ ಕೇಂದ್ರ ಭಾಗ ಮೆಜೆಸ್ಟಿಕ್, ಸ್ವಾತಂತ್ರ್ಯ ಉದ್ಯಾನವನ, ಮೈಸೂರು ಬ್ಯಾಂಕ್ ವೃತ್ತದ ಕಡೆ ಸಂಚರಿಸುವವರು ಸಹ ಪರ್ಯಾಯ ಮಾರ್ಗಗಳನ್ನು ಬಳಸುವುದು ಉತ್ತಮ.