Tag: ಸಂಜಯ್ ಕುಮಾರ್

  • ಟಿಆರ್‌ಎಸ್‍ನೊಂದಿಗೆ ಕಾಂಗ್ರೆಸ್ ಒಪ್ಪಂದ: ಬಿಜೆಪಿ ಸಂಸದ

    ಟಿಆರ್‌ಎಸ್‍ನೊಂದಿಗೆ ಕಾಂಗ್ರೆಸ್ ಒಪ್ಪಂದ: ಬಿಜೆಪಿ ಸಂಸದ

    ಹೈದರಾಬಾದ್: ಮುಂಬರುವ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ(ಟಿಆರ್‌ಎಸ್) ಜೊತೆಗೆ ಕಾಂಗ್ರೆಸ್ ಸ್ಪರ್ಧಿಸಲಿದೆ ಎಂದು ಸಂಸದ ಹಾಗೂ ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಟಿಆರ್‌ಎಸ್ ಒಟ್ಟಿಗೆ ಸ್ಪರ್ಧಿಸುವುದು ಖಚಿತವಾಗಿದ್ದು, 31 ವಿಧಾನಸಭೆ ಮತ್ತು 4 ಸಂಸದ ಸ್ಥಾನಗಳಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಕಾಂಗ್ರೆಸ್ ಹೋರಾಡುತ್ತಿರುವುದು ಬಿಜೆಪಿಯೊಂದಿಗೆ ಅಲ್ಲ ಟಿಆರ್‌ಎಸ್‍ನೊಂದಿಗೆ ಎಂದರು.

    ರಾಜ್ಯದಲ್ಲಿ ಬಿಜೆಪಿಯನ್ನು ಎದುರಿಸಲು ಸಾಧ್ಯವಾಗದ ಕಾರಣ ಕಾಂಗ್ರೆಸ್ ಮತ್ತು ಟಿಆರ್‌ಎಸ್, ಎಐಎಂಐಎಂ ಜೊತೆ ಮೈತ್ರಿ ಮಾಡಿಕೊಳ್ಳುತ್ತಿವೆ. ರಾಹುಲ್ ಗಾಂಧಿ ಅವರು ಪ್ರಗತಿ ಭವನದಲ್ಲಿ ಟಿಆರ್‌ಎಸ್ ಅವರು ತಯಾರಿಸಿದ ಸ್ಕ್ರೀಪ್ಟ್‌ನ್ನು ಓದುತ್ತಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಟಿಆರ್‌ಎಸ್‌ನ ರಿಮೋಟ್ ಕಂಟ್ರೋಲ್ ಬಿಜೆಪಿಯಲ್ಲಿದೆ: ರಾಹುಲ್ ಗಾಂಧಿ

    ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೆಸಿಆರ್‌ಯನ್ನು ಅಧಿಕಾರದಿಂದ ಕಿತ್ತೊಗೆಯಬೇಕು. ಬಿಜೆಪಿ ಅಧಿಕಾರಕ್ಕೆ ಬರುವ ಮೂಲಕ ಕೆಸಿಆರ್ ಸರ್ವಾಧಿಕಾರವನ್ನು ಅಂತ್ಯ ಮಾಡಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಧ್ವನಿವರ್ಧಕ ಗಲಾಟೆ ಮುಗಿದಿದ್ದು, ರಾಜ್ಯದಲ್ಲಿ ಶಾಂತಿ ನೆಲೆಸಿದೆ: ಸಂಜಯ್ ರಾವತ್

  • ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಅರೆಸ್ಟ್ – ಪ್ರಜಾಪ್ರಭುತ್ವದ ಕೊಲೆ ಎಂದ ಜೆ.ಪಿ.ನಡ್ಡಾ

    ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷ ಅರೆಸ್ಟ್ – ಪ್ರಜಾಪ್ರಭುತ್ವದ ಕೊಲೆ ಎಂದ ಜೆ.ಪಿ.ನಡ್ಡಾ

    ಹೈದರಾಬಾದ್: ತೆಲಂಗಾಣ ಬಿಜೆಪಿ ಅಧ್ಯಕ್ಷ ಬಂಡಿ ಸಂಜಯ್ ಕುಮಾರ್ ಅವರ ಬಂಧನದಿಂದ ಪ್ರಜಾಪ್ರಭುತ್ವದ ಕೊಲೆಯಾಗಿದೆ ಎಂದು ತೆಲಂಗಾಣ ಸರ್ಕಾರದ ವಿರುದ್ಧ ಬಿಜೆಪಿ ರಾಷ್ಟ್ರಾಧ್ಯಕ್ಷ  ಜೆ.ಪಿ. ನಡ್ಡಾ ವಾಗ್ದಾಳಿ ನಡೆಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆಲಂಗಾಣ ಸರ್ಕಾರವು ಸಂಜಯ್ ಹಾಗೂ ಬಿಜೆಪಿ ಕಾರ್ಯಕರ್ತರನ್ನು ಅಮಾನವೀಯವಾಗಿ ನಡೆಸಿಕೊಂಡಿದೆ. ಸಂಜಯ್ ಅವರು ಸರ್ಕಾರದ ಎಲ್ಲಾ ಮಾರ್ಗಸೂಚಿಯನ್ನು ಅನುಸರಿಸಿಯೇ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಆದರೂ ಪೊಲೀಸರು ಅವರನ್ನು ಬಂಧಿಸುವ ಮೊದಲು ಅವರ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ. ಇದು ಪ್ರಜಾಪ್ರಭುತ್ವದ ಕೊಲೆ. ಇದನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದರು.

    ಇತ್ತೀಚಿನ ದಕ್ಷಿಣ ಭಾರತದಲ್ಲಿ ಪಕ್ಷಕ್ಕೆ ಸಿಗುತ್ತಿರುವ ಜನಬೆಂಬಲ ಹಾಗೂ ಉಪಚುನಾವಣೆಯಲ್ಲಿ ಬಿಜೆಪಿಯ ಗೆಲುವಿನಿಂದಾಗಿ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್‍ರಾವ್ ಹತಾಶರಾಗಿದ್ದಾರೆ. ಅದಕ್ಕೆ ಈ ರೀತಿ ವರ್ತಿಸಿದ್ದಾರೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಕಾರ್ಯಕ್ರಮದಲ್ಲಿ ಸಿಎಂ ಎದುರೇ ಡಿಕೆ ಸುರೇಶ್‌, ಅಶ್ವಥ್‌ ನಾರಾಯಣ ನಡುವೆ ಜಟಾಪಟಿ

    ಭಾನುವಾರದಂದು ವಿವಿಧ ಬೇಡಿಕೆಗಳನ್ನು ಈಡೇರಿಸಲು ಶಿಕ್ಷಕರ ಸಂಘಗಳು ನಡೆಸುತ್ತಿದ್ದ ಪ್ರತಿಭಟನೆಗೆ ಸಂಜಯ್ ನೇತೃತ್ವವನ್ನು ವಹಿಸಿದ್ದರು. ಆದರೆ ಕೊರೊನಾ ತಡೆಗೆ ಸರ್ಕಾರ ಹಾಕಿದ್ದ ನಿರ್ಬಂಧಗಳನ್ನು ಉಲ್ಲೇಖಿಸಿದ್ದಾರೆ ಎಂಬ ಆರೋಪದ ಮೇಲೆ ಕರೀಂ ನಗರದ ಪೊಲೀಸರು ಸಂಜಯ್ ಅವರನ್ನು ಬಂಧಿಸಿದ್ದಾರೆ.  ಇದನ್ನೂ ಓದಿ: ಹಿಂದೂ ದೇವಾಲಯಗಳು ಸ್ವತಂತ್ರವಾದ್ರೆ ಒಂದಿಷ್ಟು ಅಭಿವೃದ್ಧಿಗೊಳ್ಳುತ್ತದೆ: ಕೋಟ ಶ್ರೀನಿವಾಸ ಪೂಜಾರಿ