Tag: ಸಂಜಯ್ ನಿರುಪಮ್

  • ಮುಂಬೈ ಕೊಳೆಗೇರಿ ಪುನರ್ವಸತಿ ಪ್ರಾಧಿಕಾರದ ಯೋಜನೆಗಳಲ್ಲಿ ‘ವಸತಿ ಜಿಹಾದ್’: ಶಿವಸೇನಾ ನಾಯಕ ಆರೋಪ

    ಮುಂಬೈ ಕೊಳೆಗೇರಿ ಪುನರ್ವಸತಿ ಪ್ರಾಧಿಕಾರದ ಯೋಜನೆಗಳಲ್ಲಿ ‘ವಸತಿ ಜಿಹಾದ್’: ಶಿವಸೇನಾ ನಾಯಕ ಆರೋಪ

    ಮುಂಬೈ: ಮುಂಬೈನ ಕೊಳೆಗೇರಿ ಅಭಿವೃದ್ಧಿ ಸಂಸ್ಥೆಯಾದ ಕೊಳೆಗೇರಿ ಪುನರ್ವಸತಿ ಪ್ರಾಧಿಕಾರದ ಯೋಜನೆಗಳಲ್ಲಿ ವಸತಿ ಜಿಹಾದ್ ನಡೆಯುತ್ತಿದೆ ಎಂದು ಆರೋಪಿಸಿರುವ ಶಿವಸೇನಾ ನಾಯಕ ಸಂಜಯ್ ನಿರುಪಮ್ ಅವರು ಮಹಾರಾಷ್ಟ್ರ ವಸತಿ ಸಚಿವರೂ ಆಗಿರುವ ಡಿಸಿಎಂ ಏಕನಾಥ್ ಶಿಂಧೆ ಮತ್ತು ಕೊಳೆಗೇರಿ ಪುನರ್ವಸತಿ ಪ್ರಾಧಿಕಾರದ ಆಯುಕ್ತರಿಗೆ ಪತ್ರ ಬರೆದಿದ್ದಾರೆ.

    ಎಸ್‌ಆರ್‌ಎ ಯೋಜನೆಗಳಲ್ಲಿ ಕೆಲವು ಮುಸ್ಲಿಂ ಡೆವಲಪರ್‌ಗಳು ಹಿಂದೂಗಳು ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸುತ್ತಿದ್ದಾರೆ. ಅವರು ಎಸ್‌ಆರ್‌ಎ ಫ್ಲಾಟ್‌ಗಳು ಅಥವಾ ಅಂಗಡಿಗಳು ಪಡೆಯಲು ಅನರ್ಹರು ಎಂದು ಹೇಳುತ್ತಿದ್ದಾರೆ. ಒಂದು ಸಮುದಾಯಕ್ಕೆ ಯೋಜನೆಗಳನ್ನು ನೀಡುವ ಮೂಲಕ ‘ವಸತಿ ಜಿಹಾದ್’ ಅನ್ನು ಜಾರಿಗೆ ತರುತ್ತಿದ್ದಾರೆ. ಕೆಲವು ಪ್ರದೇಶಗಳ ಜನಸಂಖ್ಯೆಯನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ನಿರುಪಮ್ ಪತ್ರದಲ್ಲಿ ಆರೋಪಿಸಿದ್ದಾರೆ.

    ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಯ ಗೆಲುವನ್ನು ಶ್ಲಾಘಿಸಿದ ಸಂಜಯ್ ನಿರುಪಮ್, ರಾಷ್ಟ್ರ ರಾಜಧಾನಿಯಲ್ಲಿ ಐತಿಹಾಸಿಕ ಅಧಿಕಾರ ಬದಲಾವಣೆಯಾಗಿದೆ ಎಂದು ಹೇಳಿದರು. ಗೆಲುವಿಗೆ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಪ್ ಪಕ್ಷದ ದುರಾಡಳಿತ ಕಾರಣ ಎಂದು ತಿಳಿಸಿದ್ದಾರೆ.

    ದೆಹಲಿಯಲ್ಲಿ ಐತಿಹಾಸಿಕ ಅಧಿಕಾರ ಬದಲಾವಣೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಬಿಜೆಪಿ ಪರಿಣಾಮಕಾರಿ ಮತ್ತು ಯಶಸ್ವಿ ಚುನಾವಣಾ ಪ್ರಚಾರವನ್ನು ನಡೆಸಿತು. ಇದರ ಪರಿಣಾಮವಾಗಿ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ನೇತೃತ್ವದ ದುರಾಡಳಿತ ಕೊನೆಗೊಂಡಿತು ಎಂದು ನಿರುಪಮ್ ಹೇಳಿದ್ದಾರೆ.

  • ಮಸೀದಿಯಿಂದ ಧ್ವನಿವರ್ಧಕ ತೆಗೆಸುವುದು ಸರ್ಕಾರಕ್ಕೆ ನಾಚಿಕೆಗೇಡಿನ ಸಂಗತಿ: ಸಂಜಯ್‌ ನಿರುಪಮ್‌

    ಮಸೀದಿಯಿಂದ ಧ್ವನಿವರ್ಧಕ ತೆಗೆಸುವುದು ಸರ್ಕಾರಕ್ಕೆ ನಾಚಿಕೆಗೇಡಿನ ಸಂಗತಿ: ಸಂಜಯ್‌ ನಿರುಪಮ್‌

    ಮುಂಬೈ: ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ತೆಗೆಸಬೇಕು ಎಂದು ಒತ್ತಾಯಿಸಿದ್ದ ಮಹಾರಾಷ್ಟ್ರ ನವನಿರ್ಮಾಣ ಸೇನಾದ ಅಧ್ಯಕ್ಷ (ಎಂಎನ್‌ಎಸ್‌) ರಾಜ್‌ ಠಾಕ್ರೆ ವಿರುದ್ಧ ಉಪ ಮುಖ್ಯಮಂತ್ರಿ ಅಜಿತ್‌ ಪವಾರ್‌ ಹಾಗೂ ಕಾಂಗ್ರೆಸ್‌ನ ಸಂಜಯ್‌ ನಿರುಪಮ್‌ ಕಿಡಿಕಾರಿದ್ದಾರೆ.

    ರಾಜ್ ಠಾಕ್ರೆ ಅವರಿಗೆ ಅಷ್ಟು ಪ್ರಾಮುಖ್ಯತೆ ನೀಡಬಾರದು. ಸರಿಯಾದ ಸಮಯ ಬಂದಾಗ, ನಾನು ಖಂಡಿತವಾಗಿಯೂ ಉತ್ತರಿಸುತ್ತೇನೆ. ಪ್ರತಿ ಪ್ರಶ್ನೆಗೂ ನನ್ನ ಬಳಿ ಉತ್ತರವಿದೆ ಎಂದು ಅಜಿತ್‌ ಪವಾರ್‌ ತಿರುಗೇಟು ನೀಡಿದ್ದಾರೆ.

    ಮುಂಬೈನ ಒಂದೇ ಒಂದು ಮಸೀದಿಯಿಂದಲೂ ಧ್ವನಿವರ್ಧಕಗಳನ್ನು ತೆಗೆದುಹಾಕಿದರೆ ಅದು ನಾಚಿಕೆಗೇಡಿನ ಸಂಗತಿ ಎಂದು ರಾಜ್ಯ ಸರ್ಕಾರಕ್ಕೆ ಸಂಜಯ್‌ ನಿರೂಪಮ್‌ ಎಚ್ಚರಿಕೆ ನೀಡಿದ್ದಾರೆ.

    ಮಸೀದಿಯಿಂದ ಧ್ವನಿವರ್ಧಕಗಳನ್ನು ತೆಗೆಯದಂತೆ ನಾವು ಸರ್ಕಾರ ಮತ್ತು ಮುಂಬೈ ಪೊಲೀಸರನ್ನು ಕಟ್ಟುನಿಟ್ಟಾಗಿ ಹೇಳಿದ್ದೇವೆ. ಸರ್ಕಾರವು ಡೆಸಿಬಲ್ ನಿಯಂತ್ರಣ ಮಾರ್ಗಸೂಚಿಗಳನ್ನು ನೀಡಲು ಬಯಸಿದರೆ, ಅದನ್ನು ಮಾಡಬಹುದು. ಎಲ್ಲಾ ಮಸೀದಿಗಳಲ್ಲಿ ಇದನ್ನು ಅನುಸರಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಎಂದು ಟ್ವೀಟ್‌ ಮಾಡಿ ಸಂಜಯ್‌ ನಿರುಪಮ್‌ ತಿಳಿಸಿದ್ದಾರೆ.

    ಮುಸ್ಲಿಂ ಸಮುದಾಯದವರು ಧ್ವನಿವರ್ಧಕಗಳ ಮೂಲಕ ಮಸೀದಿಗಳಲ್ಲಿ ಆಜಾನ್ ನುಡಿಸುತ್ತಿರುವುದು ಸರಿಯಲ್ಲ. ಅವರು ಬದಲಾಗದಿದ್ದರೆ ಮಸೀದಿಗಳ ಮುಂದೆ ಅವರ ಧ್ವನಿವರ್ಧಕದ ಎರಡು ಪಟ್ಟು ಹನುಮಾನ್ ಚಾಲೀಸಾ ಹಾಕ್ತಿವಿ ಎಂದು ರಾಜ್‌ ಠಾಕ್ರೆ ಹೇಳಿಕೆ ನೀಡಿದ್ದರು.

    ಶಿವಸೇನೆ, ಕಾಂಗ್ರೆಸ್ ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಮಹಾರಾಷ್ಟ್ರ ಸರ್ಕಾರದ ಮೈತ್ರಿ ಕೂಟ)ಗಳು ರಾಜ್ ಠಾಕ್ರೆ ಅವರ ಬೇಡಿಕೆಯನ್ನು ಬಲವಾಗಿ ವಿರೋಧಿಸಿವೆ. ಇದು ಕರ್ನಾಟಕದಲ್ಲಿಯೂ ಆಜಾನ್ ಗದ್ದಲಕ್ಕೆ ಕಾರಣವಾಗಿದೆ. ಮಸೀದಿಗಳ ಹೊರಗಿನ ಧ್ವನಿವರ್ಧಕದ ಡೆಸಿಬಲ್ ಮಟ್ಟವನ್ನು ನಿಗದಿಪಡಿಸುವ ನಿಯಮಗಳನ್ನು ರಾಜ್ಯ ಸರ್ಕಾರ ಹೊಂದಿದೆ ಎಂದು ಅಭಿಪ್ರಾಯಪಟ್ಟಿದ್ದವು.

  • ಮೋದಿ ಆಧುನಿಕ ಔರಂಗಜೇಬ್: ಸಂಜಯ್ ನಿರುಪಮ್

    ಮೋದಿ ಆಧುನಿಕ ಔರಂಗಜೇಬ್: ಸಂಜಯ್ ನಿರುಪಮ್

    ಲಕ್ನೋ: ಪ್ರಧಾನಿ ನರೇಂದ್ರ ಮೋದಿ ಅವರು ಆಧುನಿಕ ಔರಂಗಜೇಬ್ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಸಂಜಯ್ ನಿರುಪಮ್ ಹೇಳಿದ್ದಾರೆ.

    ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಕಾರಿಡಾರ್ ಯೋಜನೆಗಾಗಿ ನಗರದಲ್ಲಿದ್ದ ನೂರಾರು ದೇವಸ್ಥಾನಗಳನ್ನು ನಾಶ ಮಾಡಿದ್ದಾರೆ. ಮೊಘಲ್ ಚಕ್ರವರ್ತಿ ಔರಂಗಜೇಬ್ ಕೂಡ ಅನೇಕ ಹಿಂದೂ ದೇವಸ್ಥಾನಗಳನ್ನು ನಾಶ ಮಾಡಿದ್ದ. ಈ ಹಿಂದೆ ಔರಂಗಜೇಬ್ ಮಾಡಿದ್ದನ್ನು ಮೋದಿ ಈಗ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

    ಬಾಬಾ ವಿಶ್ವನಾಥ ದೇವಸ್ಥಾನ ಪ್ರವೇಶಕ್ಕೆ ಹಾಗೂ ದೇವರ ದರ್ಶನ ಪಡೆಯಲು 500 ರೂ. ಶುಲ್ಕ ನಿಗದಿ ಮಾಡಿದ್ದಾರೆ. ಔರಂಗಜೇಬ್ ಮಾಡದೇ ಇರುವುದನ್ನು ನರೇಂದ್ರ ಮೋದಿ ಮಾಡುತ್ತಿದ್ದಾರೆ. ಹಿಂದೂಗಳ ಮೇಲೆ ಔರಂಗಜೇಬ್ ದರ್ಪ ಮೆರೆದ, ಶೋಷಣೆ ಮಾಡಿದ. ಈಗ ಅದನ್ನು ಮೋದಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

    ಪ್ರಧಾನಿ ಮೋದಿ ದುರ್ಯೋಧನ ಇದ್ದಂತೆ ಎಂದು ಉತ್ತರ ಪ್ರದೇಶ ಪೂರ್ವದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರು ನಿನ್ನೆಯಷ್ಟೇ ಹೇಳಿದ್ದರು. ಹರ್ಯಾಣದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ್ದ ಅವರು, ಭಾರತದ ನೆಲದಲ್ಲಿ ಅಹಂಕಾರದಿಂದ ನಡೆದುಕೊಳ್ಳುವ ವ್ಯಕ್ತಿಗಳಿಗೆ ತಕ್ಕ ಶಿಕ್ಷೆಯಾಗಿದೆ. ಮಹಾಭಾರತದಲ್ಲಿ ದುರ್ಯೋಧನ ಅಹಂಕಾರದಿಂದ ನಡೆದುಕೊಂಡ. ಕೃಷ್ಣ ಸಂಧಾನಕ್ಕೆ ಬಂದರೂ ಒಪ್ಪಲಿಲ್ಲ. ಕೊನೆಗೆ ದುರ್ಯೋಧನ ನಾಶವಾಗಿ ಹೋದ. ದುರ್ಯೋಧನ ರೀತಿಯಲ್ಲಿಯೇ ಮೋದಿಯವರು ಕೂಡ ಅಹಂಕಾರದಿಂದ ನಡೆದುಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದರು.