Tag: ಸಂಜಯ್ ಮಂಜ್ರೇಕರ್

  • ರೋಹಿತ್ ನಾಯಕತ್ವ ತೊರೆಯಬಹುದು: ಮಂಜ್ರೇಕರ್

    ರೋಹಿತ್ ನಾಯಕತ್ವ ತೊರೆಯಬಹುದು: ಮಂಜ್ರೇಕರ್

    ಮುಂಬೈ: ರೋಹಿತ್ ಶರ್ಮಾ ಮುಂಬೈ ಇಂಡಿಯನ್ಸ್ ತಂಡದ  ನಾಯಕತ್ವವನ್ನು ತೊರೆಯಬಹುದು ಎಂದು ಎಂದು ಭಾರತ ತಂಡದ ಮಾಜಿ ಆಟಗಾರ ಸಂಜಯ್ ಮಂಜ್ರೇಕರ್ ಹೇಳಿದ್ದಾರೆ.

    ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ರೋಹಿತ್ ಈಗಾಗಲೇ ಮುಂಬೈಗೆ ಐದು ಪ್ರಶಸ್ತಿಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ ಅದನ್ನು ಮರೆಯುವಂತಿಲ್ಲ. ಅವರು ಕೂಡಾ ವಿರಾಟ್ ಕೊಹ್ಲಿಯಂತೆಯೇ ನಾಯಕತ್ವವನ್ನು ತೊರೆಯಬಹುದು. ಸ್ವಲ್ಪ ವಿಶ್ರಾಂತಿ ಪಡೆದು ಶುದ್ಧ ಬ್ಯಾಟರ್ ಆಗಿ ಆಡಬಹುದು. ತಂಡದ ನಾಯಕನಾಗಿ ಪೊಲಾರ್ಡ್‍ಗೆ ಜವಾಬ್ದಾರಿಯನ್ನು ವಹಿಸಬಹುದು ಎಂದು ನಾನು ಭಾವಿಸಿದ್ದೇನೆ ಎಂದರು. ಇದನ್ನೂ ಓದಿ: 74 ಎಸೆತಗಳಲ್ಲಿ 165 ರನ್‌ ಚಚ್ಚಿದ ಉತ್ತಪ್ಪ, ದುಬೆ – ಚೆನ್ನೈಗೆ 23 ರನ್‌ಗಳ ಜಯ

    ಐಪಿಎಲ್ 2022 ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡದ ನಾಯಕ ರೋಹಿತ್ ಶರ್ಮಾ ತಂಡವನ್ನು ಜಯದ ಲಯಕ್ಕೆ ಕೊಂಡಯ್ಯಲು ಹೆಣಗಾಡುತ್ತಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಐಪಿಎಲ್ 2022ರಲ್ಲಿ ಫಾಫ್ ಡು ಪ್ಲೆಸಿಸ್ ಚೆನ್ನೈ ಸೂಪರ್ ಕಿಂಗ್ಸ್ ನಾಯಕನಾಗಬೇಕಿತ್ತು: ರವಿಶಾಸ್ತ್ರಿ

    ಐಪಿಎಲ್ 2022 ರಲ್ಲಿ ರೋಹಿತ್ ಎಲ್ಲಾ ಇನ್ನಿಂಗ್ಸ್‌ಗಳಲ್ಲಿ ವಿಫಲರಾಗಿದ್ದಾರೆ. ಭಾರತಕ್ಕಾಗಿ ಆಡಿದಾಗ ಅವರ ಸ್ಟ್ರೈಕ್-ರೇಟ್ ಉತ್ತಮವಾಗಿರುತ್ತದೆ. ಅವರು ತಮ್ಮ ಬಗ್ಗೆ ಮಾತ್ರ ಯೋಚಿಸುತ್ತಾರೆ. ತಂಡದ ಬಗ್ಗೆ ಕಡಿಮೆ ಯೋಚಿಸುತ್ತಾರೆ ಎಂದು ವ್ಯಂಗ್ಯವಾಡಿದರು.

    ನಾವು ಭಾರತೀಯ ಕ್ರಿಕೆಟ್‍ನಲ್ಲಿ ಕಾಣುವ ರೋಹಿತ್ ಅವರನ್ನು ಐಪಿಎಲ್‍ನಲ್ಲಿ ಕಾಣಲು ಸಾಧ್ಯವಾಗುತ್ತಿಲ್ಲ. ರೋಹಿತ್ ಐಪಿಎಲ್ 2022 ಕ್ಕೆ ನಂತರ ನಿವೃತ್ತಿ ಹೊಂದಬಹುದು ಎಂದು ನಾನು ಭಾವಿಸುತ್ತೇನೆ ಎಂದು ಅಭಿಪ್ರಾಯಪಟ್ಟಿದ್ದಾರೆ.

  • ‘ಐಪಿಎಲ್ ನಡೆಯಲೇಬೇಕು’: ಟೂರ್ನಿ ನಡೆಸುವ ಬಗ್ಗೆ ಪೀಟರ್ಸನ್ ಸಲಹೆ

    ‘ಐಪಿಎಲ್ ನಡೆಯಲೇಬೇಕು’: ಟೂರ್ನಿ ನಡೆಸುವ ಬಗ್ಗೆ ಪೀಟರ್ಸನ್ ಸಲಹೆ

    ಮುಂಬೈ: ವಿಶ್ವಾದ್ಯಂತ ಹಾಗೂ ದೇಶದಲ್ಲಿ ಕೊರೊನಾ ವೈರಸ್ ಹೆಚ್ಚುತ್ತಿರುವ ಕಾರಣ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿ ತೊಂದರೆಗೆ ಸಿಲುಕಿದೆ. ಆದರೆ ಏನೇ ಆದರೂ ಈ ಬಾರಿಯ ಟೂರ್ನಿ ನಡೆಯಲೇ ಬೇಕು ಅಂತ ಮಾಜಿ ಇಂಗ್ಲೆಂಡ್ ಕ್ರಿಕೆಟಿಗ ಕೆವಿನ್ ಪೀಟರ್ಸನ್ ಅಭಿಪ್ರಾಯಪಟ್ಟಿದ್ದಾರೆ. ಜೊತೆಗೆ ಟೂರ್ನಿ ನಡೆಸುವ ಬಗ್ಗೆ ಸಲಹೆ ಕೂಡ ನೀಡಿದ್ದಾರೆ.

    ಖಾಲಿ ಮೈದಾನ, ಕ್ರಿಕೆಟ್ ಅಭಿಮಾನಿಗಳಿಲ್ಲದ ಮೂರು ಸುರಕ್ಷಿತ ಕ್ರೀಡಾಂಗಣಗಳಲ್ಲಿ ಆಯ್ಕೆ ಮಾಡಿಕೊಳ್ಳಬೇಕು. ಇಲ್ಲಿಯೇ ಟೂರ್ನಿ ನಡೆಸಬೇಕು. ಇದರಿಂದ ಪ್ರೇಕ್ಷಕರ ಜೀವಕ್ಕೆ ಯಾವುದೇ ಅಪಾಯವಿಲ್ಲ ಇರುವುದಿಲ್ಲ ಎಂದು ಪಿಟರ್ಸನ್ ಸಲಹೆ ನೀಡಿದ್ದಾರೆ.

    ಐಪಿಎಲ್ ಟೂರ್ನಿ ಮೂರು ಅಥವಾ ನಾಲ್ಕು ವಾರಗಳಲ್ಲಿ ಕೊನೆಗೊಳ್ಳಬೇಕು. ಹೀಗಾಗಿ ಈ ಬಾರಿ ಐಪಿಎಲ್‍ನ ಸ್ವರೂಪವೂ ಚಿಕ್ಕದಾಗಿರಬೇಕು ಎಂದು ಪೀಟರ್ಸನ್ ಸಲಹೆ ನೀಡಿದ್ದಾರೆ.

    ಕೊರೊನಾ ವೈರಸ್ ಹಾಗೂ ವಿದೇಶಿ ಆಟಗಾರರಿಗೆ ವೀಸಾ ನಿರ್ಬಂಧದಿಂದಾಗಿ ಬಿಸಿಸಿಐ ಐಪಿಎಲ್ ಟೂರ್ನಿಯನ್ನು ಮಾರ್ಚ್ 29ರಿಂದ ಏಪ್ರಿಲ್ 15ರವರೆಗೆ ಮುಂದೂಡಿದೆ. ಮೊದಲ ಪಂದ್ಯ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಬೇಕಿತ್ತು.

    “ಜುಲೈ-ಆಗಸ್ಟ್‍ನಲ್ಲಿ ಕ್ರೀಡಾ ಚಟುವಟಿಕೆ ಆರಂಭವಾಗಬೇಕು. ಐಪಿಎಲ್‍ನ 13ನೇ ಆವೃತ್ತಿಯನ್ನು ಸಹ ನಡೆಸಬೇಕು ಎಂದು ಬಯಸುತ್ತೇನೆ. ವಿಶ್ವದ ಪ್ರತಿಯೊಬ್ಬ ಆಟಗಾರನೂ ಇದನ್ನೇ ಬಯಸುತ್ತಿದ್ದಾರೆ. ಅವರು ಸಹ ಟೂರ್ನಿಯಲ್ಲಿ ಆಡಲೇಬೇಕು ಎನ್ನುವ ಇಚ್ಛೆಯನ್ನು ಹೊಂದಿದ್ದಾರೆ. ಆಟಗಾರರು ಮತ್ತು ಫ್ರಾಂಚೈಸಿಗಳ ಜೊತೆಗೆ ತೆರೆಮರೆಯಲ್ಲಿ ಕೆಲಸ ಮಾಡುವವರಿಗೆ ಐಪಿಎಲ್ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತದೆ. ಫ್ರ್ಯಾಂಚೈಸಿ ಸ್ವಲ್ಪ ಹಣವನ್ನು ಉಳಿಸುವ ಮಾರ್ಗವನ್ನು ಸಹ ಕಂಡುಕೊಳ್ಳಬೇಕು. ಉದಾಹರಣೆಗೆ ಎಲ್ಲಾ ಪಂದ್ಯಗಳನ್ನು ಪ್ರೇಕ್ಷಕರು ಇಲ್ಲದೆ ಮೂರು ಸುರಕ್ಷಿತ ಕ್ರೀಡಾಂಗಣಗಳಲ್ಲಿ ನಡೆಸಲಾಗುತ್ತದೆ. ಹೀಗಾಗಿ ಟೂರ್ನಿಯನ್ನು ಮೂರು ಅಥವಾ ನಾಲ್ಕು ವಾರಗಳಿಗೆ ಕಡಿತಗೊಳಿಸಬಹುದು” ಎಂದು ಸಲಹೆ ನೀಡಿದ್ದಾರೆ.

    ಭಾರತದ ಮಾಜಿ ಬ್ಯಾಟ್ಸ್‌ಮನ್ ಸಂಜಯ್ ಮಂಜ್ರೇಕರ್ ಕೂಡ ಐಪಿಎಲ್‍ನ ಮಹತ್ವವನ್ನು ವ್ಯಕ್ತಪಡಿಸಿದ್ದಾರೆ. ಪೀಟರ್ಸನ್ ಅವರ ಸಲಹೆಗೆ ಸಹಮತ ನೀಡಿರುವ ಮಂಜ್ರೇಕರ್, ಸರ್ಕಾರ, ಮಂಡಳಿ ಮತ್ತು ಫ್ರಾಂಚೈಸಿಗಳು ಸೇರಿದಂತೆ ಇತರ ಎಲ್ಲಾ ಸಂಬಂಧಿತ ಸಂಸ್ಥೆಗಳಿಂದ ಒಪ್ಪಿಗೆ ಪಡೆದು ಐಪಿಎಲ್ ನಡೆಸಬೇಕು. ಇದು ವಿಶೇಷ ಆರ್ಥಿಕತೆಯನ್ನು ಸಹ ಪ್ರಾರಂಭಿಸುತ್ತದೆ. ಏಕೆಂದರೆ ಈ ಟೂರ್ನಿ ನಡೆಬೇಕಾಗಿರುವುದು ಮುಂಬೈ ಇಂಡಿಯನ್ಸ್, ಎಂ.ಎಸ್.ಧೋನಿ ಅಥವಾ ವಿರಾಟ್ ಕೊಹ್ಲಿ ಅವರಿಗಾಗಿ ಅಷ್ಟೇ ಅಲ್ಲ. ಐಪಿಎಲ್‍ನಿಂದ ಉದ್ಯೋಗ ಪಡೆಯುವವರಿಗೆ ಟೂರ್ನಿ ಅಗತ್ಯವಾಗಿದೆ ಎಂದು ತಿಳಿಸಿದ್ದಾರೆ.

    ಇದೇ ವಿಚಾರವಾಗಿ ಮಾತನಾಡಿರುವ ಆಸ್ಟ್ರೇಲಿಯಾದ ಮಾಜಿ ಕ್ರಿಕೆಟ್ ಜಸ್ಟಿನ್ ಲ್ಯಾಂಗರ್, ನೀವು ಕ್ರಿಕೆಟ್ ಆಡಲು ಪ್ರಾರಂಭಿಸಿದಾಗ ನಿಮ್ಮ ಮುಂದೆ ಜನಸಂದಣಿ ಇರುತ್ತಿರಲಿಲ್ಲ. ಆಗಲೇ ಕ್ರಿಕೆಟ್ ಆಡಿದ್ದೀರಿ. ಏಕೆಂದರೆ ನೀವು ಆಟವನ್ನು ಇಷ್ಟಪಡುತ್ತೀರಿ. ನಿಮ್ಮ ತಂಡದ ಆಟಗಾರರೊಂದಿಗೆ ಆಡಲು ಇಷ್ಟಪಡುತ್ತೀರಿ. ಈ ಆಟದ ಪ್ರೀತಿಯಿಂದಾಗಿ ಇಂದು ಹೆಚ್ಚಿನ ಜನರು ಟಿವಿ ಮಾಧ್ಯಮ ಮತ್ತು ರೇಡಿಯೋ ಮೂಲಕ ಜನರನ್ನು ರಂಜಿಸಲು ಸಮರ್ಥರಾಗಿದ್ದೀರಿ. ಇದಕ್ಕಾಗಿಯೇ ಖಾಲಿ ಕ್ರೀಡಾಂಗಣದಲ್ಲಿ ಪಂದ್ಯವನ್ನು ನಡೆಸುವುದು ಮುಖ್ಯವಾಗಿದೆ. ಇದು ಸ್ವಲ್ಪ ವಿಭಿನ್ನವಾಗಿರುತ್ತದೆ. ಆದರೆ ನಾವೆಲ್ಲರೂ ಎಷ್ಟು ಅದೃಷ್ಟವಂತರು ಎಂಬುದನ್ನು ಎಂದಿಗೂ ನಿರ್ಲಕ್ಷಿಸಬಾರದು ಎಂದು ಐಪಿಎಲ್ ಟೂರ್ನಿ ನಡೆಸುವ ಬಗ್ಗೆ ಸಲಹೆ ನೀಡಿದ್ದಾರೆ.

  • ಕಾಮೆಂಟರಿ ಪ್ಯಾನೆಲ್‍ನಿಂದ ಕೈಬಿಟ್ಟ ಬಗ್ಗೆ ಮಂಜ್ರೇಕರ್ ಮೊದಲ ಪತ್ರಿಕ್ರಿಯೆ

    ಕಾಮೆಂಟರಿ ಪ್ಯಾನೆಲ್‍ನಿಂದ ಕೈಬಿಟ್ಟ ಬಗ್ಗೆ ಮಂಜ್ರೇಕರ್ ಮೊದಲ ಪತ್ರಿಕ್ರಿಯೆ

    ಮುಂಬೈ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಅವರನ್ನು ಬಿಸಿಸಿಐ ಇತ್ತೀಚೆಗೆ ಕಾಮೆಂಟರಿ ಪ್ಯಾನೆಲ್‍ನಿಂದ ಕೈಬಿಟಿತ್ತು. ಈ ಬಗ್ಗೆ ಮಜೇಂಕರ್ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

    ಸಂಜಯ್ ಮಂಜ್ರೇಕರ್ ಅವರು ಕ್ರಿಕೆಟ್‍ನಿಂದ ನಿವೃತ್ತಿ ಆದ ಬಳಿಕ ಫುಲ್ ಟೈಮ್ ಕಾಮೆಂಟರಿ ಪ್ಯಾನೆಲ್‍ನಲ್ಲಿ ಕಾಣಿಸಿಕೊಂಡಿದ್ದರು. ಆದರೆ ಇತ್ತೀಚೆಗೆ ಅವರನ್ನು ಬಿಸಿಸಿಐ ಕಾಮೆಂಟರಿ ಪ್ಯಾನೆಲ್‍ನಿಂದ ಕೈಬಿಟ್ಟಿತ್ತು. ಜೊತೆಗೆ ಐಪಿಎಲ್‍ನಿಂದಲೂ ಕೈಬಿಡುವ ಸಾಧ್ಯತೆಗಳಿವೆ ಎಂಬ ಮಾತುಗಳು ಕೇಳಿ ಬಂದಿದ್ದವು.

    ಈಗ ಈ ವಿಚಾರವಾಗಿ ಟ್ವೀಟ್ ಮಾಡಿರುವ ಮಂಜ್ರೇಕರ್, ವೀಕ್ಷಕ ವಿವರಣೆ ಹುದ್ದೆ ನನಗೆ ಸಿಕ್ಕಿದ್ದನ್ನು ದೊಡ್ಡ ಜವಾಬ್ದಾರಿ ಎಂದು ಪರಿಗಣಿಸುತ್ತೇನೆ. ಅದು ಒಂದು ಅರ್ಹತೆಯಲ್ಲ. ನನ್ನನ್ನು ಮತ್ತೆ ಆಯ್ಕೆ ಮಾಡುವುದು ಬಿಡುವುದು ಬಿಸಿಸಿಐಗೆ ಬಿಟ್ಟ ವಿಚಾರ. ಅದನ್ನು ನಾನು ಯಾವಗಲೂ ಗೌರವಿಸುತ್ತೇನೆ. ಬಹುಶಃ ನನ್ನ ಹಿಂದಿನ ಕೆಲಸ ಬಿಸಿಸಿಐ ಅವರಿಗೆ ಇಷ್ಟವಾಗಿಲ್ಲ ಅನ್ನಿಸುತ್ತದೆ. ವೃತ್ತಿಪರನಾಗಿ ಈ ವಿಚಾರವನ್ನು ಸ್ವೀಕರಿಸುತ್ತೇನೆ ಎಂದು ಹೇಳಿದ್ದಾರೆ.

    ಈ ಹಿಂದೆ ಬಿಸಿಸಿಐ ಅಧ್ಯಕ್ಷರಾಗುವುದಕ್ಕೂ ಮೊದಲು ಸೌರವ್ ಗಂಗೂಲಿ ಮಂಜ್ರೇಕರ್ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. 2019ರ ಜೂನ್ 9 ರಂದು ಹೆಸರು ಪ್ರಸ್ತಾಪಿಸದೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದ ಸೌರವ್ ಗಂಗೂಲಿ, ಟ್ವಿಟ್ಟರ್ ನಲ್ಲಿ ಅವರು ಮಾಡಿದ ಕಾಮೆಂಟ್, ಬ್ಯಾಟಿಂಗ್ ಅರ್ಥಹೀನ. ಅವರಿಗೆ ಆಲೋಚನೆಗಳ ಕೊರತೆಯಂತಿದೆ. ಅವರು ಕೇವಲ ನಕಾರಾತ್ಮಕ ರೀತಿಯಲ್ಲಿ ಗಮನ ಸೆಳೆಯುವವರಾಗಿರಬಹುದು ಎಂದು ಬರೆದುಕೊಂಡಿದ್ದರು.

    ಮಂಜ್ರೇಕರ್ ಅವರು 1996ರಲ್ಲಿ ನಿವೃತ್ತಿಯಾದ ನಂತರ ಕಳೆದ 3 ವಿಶ್ವಕಪ್ ಮತ್ತು ಎಲ್ಲಾ ಪ್ರಮುಖ ಐಸಿಸಿ ಪಂದ್ಯಾವಳಿಗಳಿಗೆ ಕಾಮೆಂಟರಿ ಪ್ಯಾನೆಲ್‍ನ ಭಾಗವಾಗಿದ್ದರು. ಆದರೆ ಮಂಡಳಿ ಮೂಲಗಳ ಪ್ರಕಾರ, ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಧರ್ಮಶಾಲಾದಲ್ಲಿ ಮಳೆಯಿಂದಾಗಿ ರದ್ದಾದ ಏಕದಿನ ಪಂದ್ಯದ ವೇಳೆ ಅವರು ಹಾಜರಿರಲಿಲ್ಲ. ಆದರೆ ಸುನೀಲ್ ಗವಾಸ್ಕರ್, ಲಕ್ಷ್ಮಣ್ ಶಿವರಾಮಕೃಷ್ಣನ್, ಮುರಳಿ ಕಾರ್ತಿಕ್ ಅವರು ಬಿಸಿಸಿಐ ಕಾಮೆಂಟರಿ ಪ್ಯಾನೆಲ್ ಸೇರಿದ ಸ್ಥಳದಲ್ಲಿದ್ದರು. ಹೀಗಾಗಿ ಅಂದಿನಿಂದ ಅವರನ್ನು ಕೈಬಿಡುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂಬ ಮಾತುಗಳು ಕೇಳಿ ಬಂದಿತ್ತು.

    ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಆಲ್‍ರೌಂಡರ್ ರವೀಂದ್ರ ಜಡೇಜಾ ಹಾಗೂ ವೀಕ್ಷಕ ವಿವರಣೆಗಾರ ಸಂಜಯ್ ಮಂಜ್ರೇಜರ್ ನಡುವೆ ವಾಕ್ ಯುದ್ಧ ನಡೆದಿತ್ತು. ಅಂದು ಜಡೇಜಾರಂತಹ `ಬಿಟ್ಸ್ ಅಂಡ್ ಪೀಸಸ್’ ಆಟಗಾರನಿಗೆ ನಾನು ಅಭಿಮಾನಿಯಲ್ಲ. ಜಡೇಜಾ ಟೆಸ್ಟ್ ಏಕದಿನ ಮಾದರಿ ಸಿಮೀತ ಓವರ್ ಗಳ ಕ್ರಿಕೆಟ್‍ಗೆ ಫಿಟ್ ಅಲ್ಲ. ಆತ ಟೆಸ್ಟ್ ಕ್ರಿಕೆಟ್ ಮಾತ್ರ ಅಗತ್ಯ ಎಂದು ವ್ಯಾಖ್ಯಾನಿಸಿದ್ದರು.

    ಮಂಜ್ರೇಕರ್ ಅವರ ಈ ಕಾಮೆಂಟ್‍ಗಳಿಗೆ ತಿರುಗೇಟು ನೀಡಿದ್ದ ಜಡೇಜಾ, ತನ್ನ ಸ್ಥಾನ ಯಾವುದು ಎಂದು ತಿಳಿದುಕೊಂಡು ಮಾತನಾಡಿ. ನಿಮಗಿಂತ ಹೆಚ್ಚು ಪಂದ್ಯಗಳನ್ನು ದೇಶದ ಪರ ಆಡಿದ್ದೇನೆ ಎಂದಿದ್ದರು.

  • ಬಿಸಿಸಿಐ ಕಾಮೆಂಟರಿ ಪ್ಯಾನೆಲ್‍ನಿಂದ ಸಂಜಯ್ ಮಂಜ್ರೇಕರ್ ಔಟ್

    ಬಿಸಿಸಿಐ ಕಾಮೆಂಟರಿ ಪ್ಯಾನೆಲ್‍ನಿಂದ ಸಂಜಯ್ ಮಂಜ್ರೇಕರ್ ಔಟ್

    ಮುಂಬೈ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಅವರನ್ನು ಬಿಸಿಸಿಐ ಕಾಮೆಂಟರಿ ಪ್ಯಾನೆಲ್‍ನಿಂದ ಕೈಬಿಡಲಾಗಿದೆ. ಜೊತೆಗೆ ಐಪಿಎಲ್‍ನಿಂದಲೂ ಕೈಬಿಡುವ ಸಾಧ್ಯತೆಗಳಿವೆ ಎಂಬ ಮಾತುಗಳು ಕೇಳಿ ಬರುತ್ತಿವೆ.

    ಸಂಜಯ್ ಮಂಜ್ರೇಕರ್ ಅವರನ್ನು ಯಾಕೆ ಬಿಸಿಸಿಐ ಕೈಬಿಟ್ಟಿದೆ? ಈ ಸಮಯದಲ್ಲಿ ಇಂತಹ ನಿರ್ಧಾರ ಯಾಕೆ ಎಂಬ ಬಗ್ಗೆ ಯಾವುದೇ ಸ್ಪಷ್ಟನೆ ಸಿಕ್ಕಿಲ್ಲ. ಆದರೆ ವರದಿಗಳ ಪ್ರಕಾರ, ಬಿಸಿಸಿಐಗೆ ಸಂಜಯ್ ಮಂಜ್ರೇಕರ್ ಅವರ ಕೆಲಸ ತೃಪ್ತಿ ತಂದಿಲ್ಲ ಎನ್ನಲಾಗಿದೆ.

    ಈ ಹಿಂದೆ ಬಿಸಿಸಿಐ ಅಧ್ಯಕ್ಷರಾಗುವುದಕ್ಕೂ ಮೊದಲು ಸೌರವ್ ಗಂಗೂಲಿ ಮಂಜ್ರೇಕರ್ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. 2019ರ ಜೂನ್ 9 ರಂದು ಹೆಸರು ಪ್ರಸ್ತಾಪಿಸದೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದ ಸೌರವ್ ಗಂಗೂಲಿ, ಟ್ವಿಟ್ಟರ್ ನಲ್ಲಿ ಅವರು ಮಾಡಿದ ಕಾಮೆಂಟ್, ಬ್ಯಾಟಿಂಗ್ ಅರ್ಥಹೀನ. ಅವರಿಗೆ ಆಲೋಚನೆಗಳ ಕೊರತೆಯಿದೆ. ಅವರು ಕೇವಲ ನಕಾರಾತ್ಮಕ ರೀತಿಯಲ್ಲಿ ಗಮನ ಸೆಳೆಯುವವರಾಗಿರಬಹುದು ಎಂದು ಬರೆದುಕೊಂಡಿದ್ದರು.

    ಮಂಜ್ರೇಕರ್ ಅವರು 1996ರಲ್ಲಿ ನಿವೃತ್ತಿಯಾದ ನಂತರ ಕಳೆದ 3 ವಿಶ್ವಕಪ್ ಮತ್ತು ಎಲ್ಲಾ ಪ್ರಮುಖ ಐಸಿಸಿ ಪಂದ್ಯಾವಳಿಗಳಿಗೆ ಕಾಮೆಂಟರಿ ಪ್ಯಾನೆಲ್‍ನ ಭಾಗವಾಗಿದ್ದರು. ಆದರೆ ಮಂಡಳಿ ಮೂಲಗಳ ಪ್ರಕಾರ, ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಧರ್ಮಶಾಲಾದಲ್ಲಿ ಮಳೆಯಿಂದಾಗಿ ರದ್ದಾದ ಏಕದಿನ ಪಂದ್ಯದ ವೇಳೆ ಅವರು ಹಾಜರಿರಲಿಲ್ಲ. ಆದರೆ ಸುನೀಲ್ ಗವಾಸ್ಕರ್, ಲಕ್ಷ್ಮಣ್ ಶಿವರಾಮಕೃಷ್ಣನ್, ಮುರಳಿ ಕಾರ್ತಿಕ್ ಅವರು ಬಿಸಿಸಿಐ ಕಾಮೆಂಟರಿ ಪ್ಯಾನೆಲ್ ಸೇರಿದ ಸ್ಥಳದಲ್ಲಿದ್ದರು. ಹೀಗಾಗಿ ಅಂದಿನಿಂದ ಅವರನ್ನು ಕೈಬಿಡುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂಬ ಮಾತುಗಳು ಕೇಳಿ ಬಂದಿವೆ.

    ಜಡೇಜಾ ಬಗ್ಗೆ ವಿವಾದಾತ್ಮಕ ಹೇಳಿಕೆ:
    ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಆಲ್‍ರೌಂಡರ್ ರವೀಂದ್ರ ಜಡೇಜಾ ಹಾಗೂ ವೀಕ್ಷಕ ವಿವರಣೆಗಾರ ಸಂಜಯ್ ಮಂಜ್ರೇಜರ್ ನಡುವೆ ವಾಕ್ ಯುದ್ಧ ನಡೆದಿತ್ತು. ಅಂದು ಜಡೇಜಾರಂತಹ `ಬಿಟ್ಸ್ ಅಂಡ್ ಪೀಸಸ್’ ಆಟಗಾರನಿಗೆ ನಾನು ಅಭಿಮಾನಿಯಲ್ಲ. ಜಡೇಜಾ ಟೆಸ್ಟ್ ಏಕದಿನ ಮಾದರಿ ಸಿಮೀತ ಓವರ್ ಗಳ ಕ್ರಿಕೆಟ್‍ಗೆ ಫಿಟ್ ಅಲ್ಲ. ಆತ ಟೆಸ್ಟ್ ಕ್ರಿಕೆಟ್ ಮಾತ್ರ ಅಗತ್ಯ ಎಂದು ವ್ಯಾಖ್ಯಾನಿಸಿದ್ದರು.

    ಮಂಜ್ರೇಕರ್ ಅವರ ಈ ಕಾಮೆಂಟ್‍ಗಳಿಗೆ ತಿರುಗೇಟು ನೀಡಿದ್ದ ಜಡೇಜಾ, ತನ್ನ ಸ್ಥಾನ ಯಾವುದು ಎಂದು ತಿಳಿದುಕೊಂಡು ಮಾತನಾಡಿ. ನಿಮಗಿಂತ ಹೆಚ್ಚು ಪಂದ್ಯಗಳನ್ನು ದೇಶದ ಪರ ಆಡಿದ್ದೇನೆ ಎಂದಿದ್ದರು.

    ನ್ಯೂಜಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಪಡೆದ ಬಳಿಕ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಕೆಎಲ್ ರಾಹುಲ್ ಅವರಿಗೆ ನೀಡಲಾಗಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಮಂಜ್ರೇಕರ್ ಅವರು, ಈ ಪಂದ್ಯದಲ್ಲಿ ಬೌಲರ್ ಗಳಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ನೀಡಿದ್ದರೆ ಉತ್ತಮವಾಗಿರುತ್ತಿತ್ತು ಎಂದಿದ್ದರು. ಮಂಜ್ರೇಕರ್ ಅವರ ಅಭಿಪ್ರಾಯಕ್ಕೆ ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿದ್ದ ಜಡೇಜಾ, ಆ ಬೌಲರ್ ಹೆಸರನ್ನು ಹೇಳಿ ಎಂದು ಅಣಕಿಸಿದ್ದರು.

    ನ್ಯೂಜಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಪರ ರವೀಂದ್ರ ಜಡೇಜಾ 4 ಓವರ್ ಗಳಲ್ಲಿ 18 ರನ್ ನೀಡಿ ಪ್ರಮುಖ 4 ವಿಕೆಟ್ ಪಡೆದಿದ್ದರು. ಬೌಲರ್ ಗಳ ಪ್ರದರ್ಶನವನ್ನು ಪರಿಗಣಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಿದ್ದರೆ ಜಡೇಜಾ ಅವರಿಗೆ ಲಭಿಸುತ್ತಿತ್ತು. ಜಡೇಜಾ ಅವರ ಟ್ವೀಟ್‍ಗೆ ಪ್ರತಿಕ್ರಿಯೆ ನೀಡಿರುವ ಮಂಜ್ರೇಕರ್ ಅವರು, ನಿನಗೆ ಅಥವಾ ಬುಮ್ರಾಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಬಹುದಿತ್ತು. ಬುಮ್ರಾಗೆ ಏಕೆ ಎಂದರೆ ಆತ ಮಾಡಿದ 3, 10, 18 ಮತ್ತು 20 ಓವರ್ ಗಳ ಎಕಾನಮಿ ತುಂಬಾ ಉತ್ತಮವಾಗಿದೆ ಎಂದು ತಮ್ಮ ಸಮರ್ಥನೆಯನ್ನು ತಿಳಿಸಿದ್ದರು.

    ಹರ್ಷ ಭೋಗ್ಲೆಗೆ ಅವಮಾನ:
    ಮಂಜ್ರೇಕರ್ ತಮ್ಮ ಹೇಳಿಕೆಯೊಂದಿಗೆ ವಿವಾದವನ್ನು ಹುಟ್ಟುಹಾಕಿದ ಏಕೈಕ ಘಟನೆ ಹಲವು ಬಾರಿ ನಡೆದಿದೆ. ಕಳೆದ ವರ್ಷ ಕೋಲ್ಕತ್ತಾದಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಪಿಂಕ್ ಬಾಲ್ ಟೆಸ್ಟ್ ಪಂದ್ಯದಲ್ಲಿ ಸಹವರ್ತಿ ಹರ್ಷ ಭೋಗ್ಲೆ ಅವರನ್ನು ಅವಮಾನಿಸಲು ಪ್ರಯತ್ನಿಸಿದ್ದರು. ‘ನೀವು ಕ್ರಿಕೆಟ್ ಆಡಿಲ್ಲ. ಕ್ರಿಕೆಟ್ ಆಟಗಾರರು ಮಾತ್ರ ಮೈದಾನದಲ್ಲಿ ನಡೆಯುತ್ತಿರುವ ವಿಷಯಗಳ ಬಗ್ಗೆ ಮಾತನಾಡಬಹುದು’ ಎಂದು ಹೇಳಿ ಅಣಕಿಸಿದ್ದರು.

  • ಕೆ.ಎಲ್.ರಾಹುಲ್ ‘360 ಡಿಗ್ರಿ’ ಬ್ಯಾಟ್ಸ್‌ಮನ್‌: ಮಂಜ್ರೇಕರ್

    ಕೆ.ಎಲ್.ರಾಹುಲ್ ‘360 ಡಿಗ್ರಿ’ ಬ್ಯಾಟ್ಸ್‌ಮನ್‌: ಮಂಜ್ರೇಕರ್

    ಮುಂಬೈ: ನ್ಯೂಜಿಲೆಂಡ್ ವಿರುದ್ಧ ಹ್ಯಾಮಿಲ್ಟನ್‍ನಲ್ಲಿ ಬುಧವಾರ ನಡೆದ ಏಕದಿನ ಪಂದ್ಯದಲ್ಲಿ ಕೆ.ಎಲ್.ರಾಹುಲ್ ಅಜೇಯ 88 ರನ್ ಗಳಿಸಿರುವುದನ್ನು ಭಾರತದ ಮಾಜಿ ಕ್ರಿಕೆಟರ್, ನಿರೂಪಕ ಸಂಜಯ್ ಮಂಜ್ರೇಕರ್ ಶ್ಲಾಘಿಸಿದ್ದಾರೆ.

    ಕೆ.ಎಲ್.ರಾಹುಲ್ ನ್ಯೂಜಿಲೆಂಡ್ ವಿರುದ್ಧದ ಏಕದಿನ ಪಂದ್ಯದಲ್ಲಿ ಇನ್ನಿಂಗ್ಸ್ ನ 49ನೇ ಓವರಿನಲ್ಲಿ ಜೇಮ್ಸ್ ನೀಶಮ್ ಅವರು ಎಸೆದ ಬಾಲ್ ಅನ್ನು ರಿವರ್ಸ್ ಸ್ವೀಪ್ ಮೂಲಕ ಸಿಕ್ಸ್ ಸಿಡಿಸಿದ್ದರು. ಈ ಹೊಡೆತವನ್ನು ನೋಡಿ ಮಂಜ್ರೇಕರ್ ಪ್ರಭಾವಿತರಾಗಿದ್ದು, ಕೆ.ಎಲ್.ರಾಹುಲ್ ಅವರನ್ನು ‘ಮಿಸ್ಟರ್ 360’ ಡಿಗ್ರಿ ಬ್ಯಾಟ್ಸ್‌ಮನ್‌ ಎಂದು ಬಣ್ಣಿಸಿದ್ದಾರೆ. ಅವರ ಪ್ರಕಾರ, ರಾಹುಲ್ ಮಾತ್ರ ಅಂತಹ ಬ್ಯಾಟ್ಸ್‌ಮನ್‌ ಆಗಿದ್ದು, ಅವರು ವಿಭಿನ್ನ ರೀತಿಯ ಹೊಡೆತಗಳನ್ನು ಆಡಿದ ನಂತರವೂ ಶಾಸ್ತ್ರೀಯವಾಗಿ ಕಾಣುತ್ತಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕೆಎಲ್ ಅಂದ್ರೆ ಖಡಕ್ ಲಡ್ಕಾ- ರಾಹುಲ್‍ರನ್ನ ಹೊಗಳಿದ ಸೆಹ್ವಾಗ್

    ಹ್ಯಾಮಿಲ್ಟನ್‍ನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ರಾಹುಲ್ ಮತ್ತೊಮ್ಮೆ ಬದಲಾದ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದರು. ಆದರೆ ಇದು ಅವರ ಬ್ಯಾಟಿಂಗ್ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ. ಐದನೇ ಸ್ಥಾನಕ್ಕೆ ಬಂದ ಬ್ಯಾಟ್ಸ್‌ಮನ್‌ ಸ್ಟ್ರೈಕ್ ರೇಟ್ 137.50ನಲ್ಲಿ 64 ಎಸೆತಗಳಲ್ಲಿ ಅಜೇಯ 88 ರನ್ ಗಳಿಸಿದರು. ಈ ವೇಳೆ ರಾಹುಲ್ ಮೂರು ಬೌಂಡರಿ ಮತ್ತು 6 ಸಿಕ್ಸರ್ ಬಾರಿಸಿದರು. ಅವರ ಇನ್ನಿಂಗ್ಸ್ ನಿಂದಾಗಿ ಭಾರತ ನಿಗದಿತ 50 ಓವರ್‍ಗಳಲ್ಲಿ 4 ವಿಕೆಟ್‍ಗಳ ನಷ್ಟದಲ್ಲಿ 347 ರನ್ ಗಳಿಸಿತ್ತು. ಇದನ್ನೂ ಓದಿ: ಮಿಂಚಿನ ವೇಗದಲ್ಲಿ ರನೌಟ್ ಮಾಡಿದ ರಾಹುಲ್- ವಿಡಿಯೋ 

    10 ಇನ್ನಿಂಗ್ಸ್ ಗಳಲ್ಲಿ 5 ಅರ್ಧಶತಕ:
    ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ರಾಹುಲ್ ಅದ್ಭುತ ಬ್ಯಾಟಿಂಗ್ ಕೂಡ ಮಾಡಿದ್ದಾರೆ. ಓಪನರ್ ಆಗಿ ಅವರು 5 ಪಂದ್ಯಗಳಲ್ಲಿ ಎರಡು ಅರ್ಧಶತಕಗಳೊಂದಿಗೆ 224 ರನ್ ಗಳಿಸಿದ್ದಾರೆ. ಈ ಸಮಯದಲ್ಲಿ ರಾಹುಲ್ 40+ ಗಳಿಸಿದ್ದರು. ಈ ಕಾರಣಕ್ಕಾಗಿ ಸರಣಿ ಶ್ರೇಷ್ಠ ಗೌರವಕ್ಕೆ ರಾಹುಲ್ ಪಾತ್ರರಾಗಿದ್ದರು. ಏಕದಿನ ಮತ್ತು ಟಿ 20 ಸೇರಿ ಕೆ.ಎಲ್.ರಾಹುಲ್ ಕಳೆದ 10 ಇನ್ನಿಂಗ್ಸ್ ಗಳಲ್ಲಿ ಐದು ಬಾರಿ ಐವತ್ತು ರನ್‍ಗಳ ಗಡಿ ದಾಟಿದ್ದಾರೆ.

    ಭಾರತದ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರು ಈ ಹಿಂದೆ ಕೆ.ಎಲ್.ರಾಹುಲ್ ಅವರ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ ಪ್ರತಿಕ್ರಿಯಿಸಿ, ಆರಂಭಿಕ ಕ್ರಮಾಂಕದಿಂದ ತೆಗೆದುಹಾಕುವುದು ಒಳ್ಳೆಯದು ಎಂದು ನಾನು ಭಾವಿಸುವುದಿಲ್ಲ. ಬದಲಾಗಿ ತಂಡದ ಆಡಳಿತವು ರಾಹುಲ್ ಮತ್ತು ಮಾಯಾಂಕ್ ಅಗರ್ವಾಲ್ ಅವರೊಂದಿಗೆ ಇನ್ನಿಂಗ್ಸ್ ಪ್ರಾರಂಭಿಸಬಹುದು ಎಂದು ಅಭಿಪ್ರಾಯ ಪಟ್ಟಿದರು. ಇದನ್ನೂ ಓದಿ:  ಕೊನೆಗೂ ತಂಡವನ್ನು ಗೆಲ್ಲಿಸಿದ ರಾಸ್ ಟೇಲರ್- 24 ವೈಡ್ ಎಸೆದ ಟೀಂ ಇಂಡಿಯಾ

  • ‘ಬೌಲರ್ ಹೆಸರೇಳಿ’- ಸಂಜಯ್ ಮಂಜ್ರೇಕರ್​ರನ್ನ ಅಣಕಿಸಿದ ರವೀಂದ್ರ ಜಡೇಜಾ

    ‘ಬೌಲರ್ ಹೆಸರೇಳಿ’- ಸಂಜಯ್ ಮಂಜ್ರೇಕರ್​ರನ್ನ ಅಣಕಿಸಿದ ರವೀಂದ್ರ ಜಡೇಜಾ

    -ಜಡೇಜಾ ಟ್ವೀಟ್‍ಗೆ ಸಂಜಯ್ ಪ್ರತಿಕ್ರಿಯೆ

    ಆಕ್ಲೆಂಡ್: ಕಳೆದ ವರ್ಷ ನಡೆದ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಆಲ್‍ರೌಂಡರ್ ರವೀಂದ್ರ ಜಡೇಜಾ ಹಾಗೂ ವೀಕ್ಷಕ ವಿವರಣೆಗಾರ ಸಂಜಯ್ ಮಂಜ್ರೇಜರ್ ನಡುವೆ ವಾಕ್ ಯುದ್ಧ ನಡೆದಿತ್ತು. ಅಂದು ಜಡೇಜಾರಂತಹ ‘ಬಿಟ್ಸ್ ಅಂಡ್ ಪೀಸಸ್’ ಆಟಗಾರನಿಗೆ ನಾನು ಅಭಿಮಾನಿಯಲ್ಲ. ಜಡೇಜಾ ಟೆಸ್ಟ್ ಏಕದಿನ ಮಾದರಿ ಸಿಮೀತ ಓವರ್ ಗಳ ಕ್ರಿಕೆಟ್‍ಗೆ ಫಿಟ್ ಅಲ್ಲ. ಆತ ಟೆಸ್ಟ್ ಕ್ರಿಕೆಟ್ ಮಾತ್ರ ಅಗತ್ಯ ಎಂದು ವ್ಯಾಖ್ಯಾನಿಸಿದ್ದರು.

     

    ಮಂಜ್ರೇಕರ್ ಅವರ ಈ ಕಾಮೆಂಟ್‍ಗಳಿಗೆ ತಿರುಗೇಟು ನೀಡಿದ್ದ ಜಡೇಜಾ, ತನ್ನ ಸ್ಥಾನ ಯಾವುದು ಎಂದು ತಿಳಿದುಕೊಂಡು ಮಾತನಾಡಿ. ನಿಮಗಿಂತ ಹೆಚ್ಚು ಪಂದ್ಯಗಳನ್ನು ದೇಶದ ಪರ ಆಡಿದ್ದೇನೆ ಎಂದಿದ್ದರು. ಇಂದಿಗೂ ರವೀಂದ್ರ ಜಡೇಜಾ, ಮಂಜ್ರೇಕರ್ ಅವರ ಮಾತುಗಳನ್ನು ಮರೆತಿಲ್ಲ.

    ನ್ಯೂಜಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಪಡೆದ ಬಳಿಕ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಕೆಎಲ್ ರಾಹುಲ್ ಅವರಿಗೆ ನೀಡಲಾಗಿತ್ತು. ಈ ಕುರಿತು ಪ್ರತಿಕ್ರಿಯೆ ನೀಡಿದ್ದ ಮಂಜ್ರೇಕರ್ ಅವರು, ಈ ಪಂದ್ಯದಲ್ಲಿ ಬೌಲರ್ ಗಳಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ನೀಡಿದ್ದರೆ ಉತ್ತಮವಾಗಿರುತ್ತಿತ್ತು ಎಂದಿದ್ದರು. ಮಂಜ್ರೇಕರ್ ಅವರ ಅಭಿಪ್ರಾಯಕ್ಕೆ ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿದ್ದ ಜಡೇಜಾ, ಆ ಬೌಲರ್ ಹೆಸರನ್ನು ಹೇಳಿ ಎಂದು ಅಣಕಿಸಿದ್ದರು.

    ನ್ಯೂಜಿಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಪರ ರವೀಂದ್ರ ಜಡೇಜಾ 4 ಓವರ್ ಗಳಲ್ಲಿ 18 ರನ್ ನೀಡಿ ಪ್ರಮುಖ 4 ವಿಕೆಟ್ ಪಡೆದಿದ್ದರು. ಬೌಲರ್ ಗಳ ಪ್ರದರ್ಶನವನ್ನು ಪರಿಗಣಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಿದ್ದರೆ ಜಡೇಜಾ ಅವರಿಗೆ ಲಭಿಸುತ್ತಿತ್ತು. ಜಡೇಜಾ ಅವರ ಟ್ವೀಟ್‍ಗೆ ಪ್ರತಿಕ್ರಿಯೆ ನೀಡಿರುವ ಮಂಜ್ರೇಕರ್ ಅವರು, ನಿನಗೆ ಅಥವಾ ಬುಮ್ರಾಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಬಹುದಿತ್ತು. ಬುಮ್ರಾಗೆ ಏಕೆ ಎಂದರೇ, ಆತ ಮಾಡಿದ 3, 10, 18 ಮತ್ತು 20 ಓವರ್ ಗಳ ಎಕಾನಮಿ ತುಂಬಾ ಉತ್ತಮವಾಗಿದೆ ಎಂದು ತಮ್ಮ ಸಮರ್ಥನೆಯನ್ನು ತಿಳಿಸಿದ್ದಾರೆ.

  • ಇಂಡೋ-ಪಾಕ್ ಕೇವಲ ಪಂದ್ಯವಲ್ಲ, ಭಾವನೆ, ನಿರೀಕ್ಷೆಗಳ ಸೆಣಸಾಟ: ಪಾಂಡ್ಯ

    ಇಂಡೋ-ಪಾಕ್ ಕೇವಲ ಪಂದ್ಯವಲ್ಲ, ಭಾವನೆ, ನಿರೀಕ್ಷೆಗಳ ಸೆಣಸಾಟ: ಪಾಂಡ್ಯ

    ನವದೆಹಲಿ: ವಿಶ್ವದ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿರುವ ಭಾರತ-ಪಾಕಿಸ್ತಾನ ಪಂದ್ಯಕ್ಕೆ ಮ್ಯಾಂಚೆಸ್ಟರ್‍ನ ಓಲ್ಡ್ ಟ್ರ್ಯಾಫೋರ್ಡ್ ಕ್ರೀಡಾಂಗಣ ಸಿದ್ಧವಾಗಿದೆ. ಇದೇ ಸಂದರ್ಭದಲ್ಲಿ ಭಾರತದ ತಂಡದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಸೇರಿ ಕೆಲವು ನಾಯಕರು ತಮ್ಮ ಮನದಾಳದ ಮಾತನ್ನು ಹಂಚಿಕೊಂಡಿದ್ದಾರೆ.

    ಈ ಕುರಿತ ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ಮತ್ತು ಸಂಜಯ್ ಮಂಜ್ರೇಕರ್ ಮನದಾಳದ ಮಾತನ್ನು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ. ಜನ ಇದನ್ನು ಒಂದು ಆಟವನ್ನಾಗಿ ಮಾತ್ರ ನೋಡುತ್ತಾರೆ. ಆದರೆ ನಾನು ಇದನ್ನು ಒಂದು ಆಟವನ್ನಾಗಿ ಮಾತ್ರ ನೋಡುವುದಿಲ್ಲ. ಇದು ಒಂದು ಸವಾಲು. ಅಲ್ಲದೆ, ಭಾವನೆಗಳು, ನೀರೀಕ್ಷೆಗಳು ಸೇರಿದಂತೆ ಎಲ್ಲವೂ ಭಾರತ-ಪಾಕಿಸ್ತಾನ ಪಂದ್ಯದಲ್ಲಿ ಅಡಗಿದೆ ಎಂದು ಹಾರ್ದಿಕ್ ಪಾಂಡ್ಯ ವಿಡಿಯೋದಲ್ಲಿ ಹೇಳಿದ್ದಾರೆ.

    ಈ ಕುತೂಹಲಕಾರಿ ಪಂದ್ಯ ವೀಕ್ಷಿಸಲು ಒಂದು ಆಸನ ಮಾತ್ರವಲ್ಲ, ಒಂದು ಇಂಚು ಕೂಡ ಜಾಗ ಇರದಷ್ಟು ಕ್ರಿಕೆಟ್ ಅಭಿಮಾನಿಗಳು ಆಗಮಿಸುತ್ತಾರೆ. ನಾನು ಆಟ ಆಡುವ ಮೂಲಕ ಪಂದ್ಯವನ್ನು ಆನಂದಿಸುತ್ತೇನೆ ಎಂದು ವಿಡಿಯೊದಲ್ಲಿ ಪಾಂಡ್ಯ ಹೇಳಿದ್ದಾರೆ.

    ಭಾರತ-ಪಾಕಿಸ್ತಾನದ ಪಂದ್ಯದ ಕುರಿತು ರವೀಂದ್ರ ಜಡೇಜಾ ಸಹ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು, ಭಾರತ-ಪಾಕಿಸ್ತಾನದ ಎಲ್ಲ ಪಂದ್ಯಗಳು ಹೆಚ್ಚು ತೀವ್ರತೆಯಿಂದ ಕೂಡಿರುತ್ತವೆ. ಇದು ಕೇವಲ ಗೆಲುವು ಸೋಲಿನ ಪ್ರಶ್ನೆಯಲ್ಲ, ಇವುಗಳನ್ನು ಮೀರಿದ ಭಾವನೆ. ಪಾಕಿಸ್ತಾನದ ವಿರುದ್ಧ ಆಟವಾಡುವಾಗ ಒತ್ತಡ ತುಂಬಾ ಹೆಚ್ಚಿರುತ್ತದೆ. ಜನರಿಗೆ ಏನಾಗಿದೆ ಎಂಬುದು ಬೇಕಿಲ್ಲ ಆದರೆ ಪಾಕಿಸ್ತಾನದ ವಿರುದ್ಧ ಗೆಲ್ಲಬೇಕಷ್ಟೆ. ಹೀಗಾಗಿ ಒತ್ತಡ ಹೆಚ್ಚಿರುತ್ತದೆ ಎಂದು ಐಸಿಸಿ ಟ್ವಿಟರ್‍ನಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

    ಟಾಸ್ ಗೆದ್ದಿರುವ ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ. ಟೀ ಇಂಡಿಯಾ ಬ್ಯಾಟಿಂಗ್ ನಡೆಸಲಿದೆ. ಟೀಂ ಇಂಡಿಯಾ ತಂಡದಲ್ಲಿ ನಾಯಕ ವಿರಾಟ್ ಕೊಹ್ಲಿ, ಉಪನಾಯಕ ರೋಹಿತ್ ಶರ್ಮಾ, ಕೀಪರ್ ಎಂ.ಎಸ್.ಧೋನಿ, ಕೆ.ಎಲ್.ರಾಹುಲ್, ವಿಜಯ್ ಶಂಕರ್, ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ, ಕೇದಾರ್ ಜಾಧವ್, ಬೌಲರ್ ಗಳಾದ ಜಸ್ಪ್ರೀತ್ ಬುರ್ಮಾ, ಮೊಹಮ್ಮದ್ ಶಮಿ, ಭುವನೇಶ್ವರ್ ಕುಮಾರ್, ಯಜುವೇಂದ್ರ ಚಾಹಲ್ ತಂಡದಲ್ಲಿದ್ದಾರೆ.

    ಆರಂಭಿಕ ಬ್ಯಾಟ್ಸಮನ್ ಶಿಖರ್ ಧವನ್ ಗಾಯದ ಸಮಸ್ಯೆಯಿಂದ ತಂಡದಿಂದ ಹೊರಗುಳಿದಿದ್ದಾರೆ. ಹೀಗಾಗಿ ಈ ಸ್ಥಾನವನ್ನು ಅನುಭವಿ ಆಟಗಾರ ಕೆ.ಎಲ್.ರಾಹುಲ್ ತುಂಬುತ್ತಿದ್ದಾರೆ. ಇತ್ತ ವಿಜಯ್ ಶಂಕರ್ ನಾಲ್ಕನೇ ಸ್ಥಾನದಲ್ಲಿ ಆಡಲಿದ್ದಾರೆ.