Tag: ಸಂತೋಷ್ ಪಾಟೀಲ್

  • ಸಿಎಂ ಭೇಟಿಯಾದ ಗುತ್ತಿಗೆದಾರ ಸಂತೋಷ್ ಪಾಟೀಲ್ ಕುಟುಂಬಸ್ಥರು – ಸಿಐಡಿ ತನಿಖೆಗೆ ಮನವಿ

    ಸಿಎಂ ಭೇಟಿಯಾದ ಗುತ್ತಿಗೆದಾರ ಸಂತೋಷ್ ಪಾಟೀಲ್ ಕುಟುಂಬಸ್ಥರು – ಸಿಐಡಿ ತನಿಖೆಗೆ ಮನವಿ

    ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ (Contractor Santosh Patil) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ (Siddaramaiah) ಅವರನ್ನು ಮೃತ ಸಂತೋಷ್ ಪಾಟೀಲ್ ಕುಟುಂಬಸ್ಥರು ಶುಕ್ರವಾರ ಭೇಟಿಯಾಗಿದ್ದಾರೆ. ಈ ವೇಳೆ ಸಿಐಡಿ (CID) ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

    ತಾಲೂಕಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಸಂತೋಷ್ ಪಾಟೀಲ್ ಪತ್ನಿ ಜಯಶ್ರೀ, ಪುತ್ರ, ತಾಯಿ ಪಾರ್ವತಿ, ಸಹೋದರ ಪ್ರಶಾಂತ್ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಬಿ ರಿಪೋರ್ಟ್ ಸಲ್ಲಿಕೆಯಿಂದ ನಮಗೆ ಅನ್ಯಾಯ ಆಗಿದೆ. ಪ್ರಕರಣವನ್ನು ಸಿಬಿಐ ಇಲ್ಲವೇ ಸಿಐಡಿಗೆ ವಹಿಸಬೇಕೆಂದು ಸಿಎಂಗೆ ಮನವಿ ಮಾಡಿದರು.

    ಮನವಿ ನೀಡುವ ವೇಳೆ ಸಿಎಂ ಸಿದ್ದರಾಮಯ್ಯ ಎದುರು ಸಂತೋಷ್ ತಾಯಿ, ಪತ್ನಿ ಕಣ್ಣೀರು ಹಾಕಿದ್ದಾರೆ. ಬಿಕ್ಕಿಬಿಕ್ಕಿ ಅತ್ತ ಸಂತೋಷ್ ಕುಟುಂಬಸ್ಥರನ್ನು ಸಿದ್ದರಾಮಯ್ಯ ಸಂತೈಸಿದ್ದಾರೆ. ಇದನ್ನೂ ಓದಿ: ಬಿಜೆಪಿಯವರು ಹತಾಶರಾಗಿ ಸುಳ್ಳು ಆರೋಪ ಮಾಡುತ್ತಿದ್ದಾರೆ: ಸಿದ್ದರಾಮಯ್ಯ

    2022ರ ಏಪ್ರಿಲ್ 13 ರಂದು ಉಡುಪಿಯ ಲಾಡ್ಜ್ವೊಂದರಲ್ಲಿ ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಮಾಜಿ ಸಚಿವ ಕೆಎಸ್ ಈಶ್ವರಪ್ಪ ವಿರುದ್ಧ ಆರೋಪ ಮಾಡಿ ಅವರು ಆತ್ಮಹತ್ಯೆಗೆ ಶರಣಾಗಿದ್ದರು. ಇದನ್ನೂ ಓದಿ: 4 ವರ್ಷದ ಹಳೆಯ ಕಾಮಗಾರಿಗಳ ಎಸ್‌ಐಟಿ ತನಿಖೆ ಬೇಡ: ಕೆಂಪಣ್ಣ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ- ಈಶ್ವರಪ್ಪಗೆ ಮತ್ತೆ ಸಂಕಷ್ಟ

    ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ- ಈಶ್ವರಪ್ಪಗೆ ಮತ್ತೆ ಸಂಕಷ್ಟ

    ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ (Santhosh Patil) ಆತ್ಮಹತ್ಯೆ ಪ್ರಕರಣ ಸಂಬಂಧ ಬಿಜೆಪಿ ಮಾಜಿ ಸಚಿವ ಈಶ್ವರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ.

    ಈ ಪ್ರಕರಣದಲ್ಲಿ ಸಲ್ಲಿಸಿರುವ ಬಿ ರಿಪೋರ್ಟ್‍ನ ಸಂಪೂರ್ಣ ಸಾಕ್ಷ್ಯಗಳನ್ನು ನ್ಯಾಯಾಲಯದ ಸುಪರ್ದಿಗೆ ನೀಡುವಂತೆ 42ನೇ ವಿಶೇಷ ನ್ಯಾಯಾಲಯ ಆದೇಶಿಸಿದೆ. ವಿಚಾರಣೆ ನಡೆಸಿದ ನ್ಯಾಯಾಲಯ ಜನವರಿ 31ರೊಳಗೆ ಎಲ್ಲಾ ಸಾಕ್ಷ್ಯಗಳನ್ನು ಕೋರ್ಟ್‍ಗೆ ಸಲ್ಲಿಸಿ ಎಂದು ಸೂಚಿಸಿದೆ. ಇದನ್ನೂ ಓದಿ: ಸಂತೋಷ್‌ ಪಾಟೀಲ್‌ ಕೇಸ್‌ಗೆ ಟ್ವಿಸ್ಟ್‌ – 2021ರಲ್ಲಿ ಬೆಳಗಾವಿ ZP ಅಧ್ಯಕ್ಷೆ ಬರೆದ ಪತ್ರ ಔಟ್‌

    ಈ ಹಿಂದೆ ಕುಟುಂಬಸ್ಥರು ಬಿ ರಿಪೋರ್ಟ್ ಪ್ರಶ್ನಿಸಿ, ಕೋರ್ಟ್ ಮೊರೆ ಹೋಗಿದ್ದರು. ಆ ಸಂದರ್ಭದಲ್ಲಿ ದಾಖಲಾತಿ ನೀಡಿದ್ದ ಉಡುಪಿ ಪೊಲೀಸರು (Udupi Police) ಸಂಪೂರ್ಣ ದಾಖಲಾತಿ ಸಲ್ಲಿಕೆಗೆ ಹಿಂದೇಟು ಹಾಕಿದ್ದರು. ಇದನ್ನು ಪ್ರಶ್ನಿಸಿ ಮತ್ತೆ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ ಬಳಿಕ, ನ್ಯಾಯಾಲಯದ ಹೊಸ ಆದೇಶ ಮಾಡಿದೆ. ಇದನ್ನೂ ಓದಿ: ವರ್ಕ್‌ ಆರ್ಡರ್‌ ಇಲ್ಲದೇ 4 ಕೋಟಿ ಕಾಮಗಾರಿ ಮಾಡಿದ್ದ ಸಂತೋಷ್‌ – ಆತ್ಮಹತ್ಯೆಗೆ ಕಾರಣ ಏನು?

    ಕೆಲವೊಂದು ಸಾಕ್ಷ್ಯಗಳಲ್ಲಿ ಸಂತೋಷ್ ಪಾಟೀಲ್ ಮಾಜಿ ಸಚಿವ ಈಶ್ವರಪ್ಪ (KS Eshwarappa) ಪಿಎಗೆ ಹಣ ನೀಡಿರುವುದು ವಾಟ್ಸಪ್ ಚಾಟ್‍ನಲ್ಲಿ ಬಹಿರಂಗವಾಗಿದೆ. ಸಂತೋಷ್ ಪಾಟೀಲ್ ಮಾಜಿ ಸಚಿವ ಈಶ್ವರಪ್ಪ ಪಿಎ ಜೊತೆ ನಡೆಸಿರುವ ವಾಟ್ಸಪ್ ಚಾಟ್ (Whatsapp Chat) ಪ್ರತಿ ಕೂಡ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಈ ಮೂಲಕ ಈಶ್ವರಪ್ಪಗೆ ಸಂತೋಷ್ ಆತ್ಮಹತ್ಯೆ ಪ್ರಕರಣ ಇನ್ನೂ ಸಂಕಷ್ಟ ತಂದಿಟ್ಟಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸರ್ಕಾರ ಪೊಲೀಸರ ಮೇಲೆ ಒತ್ತಡ ಹೇರಿ ಈಶ್ವರಪ್ಪಗೆ ಕ್ಲೀನ್ ಚಿಟ್ ಕೊಡಿಸಿದೆ: ಎಎಪಿ

    ಸರ್ಕಾರ ಪೊಲೀಸರ ಮೇಲೆ ಒತ್ತಡ ಹೇರಿ ಈಶ್ವರಪ್ಪಗೆ ಕ್ಲೀನ್ ಚಿಟ್ ಕೊಡಿಸಿದೆ: ಎಎಪಿ

    ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಸಂಬಂಧಿಸಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪನವರಿಗೆ ಕ್ಲೀನ್ ಚಿಟ್ ನೀಡಿರುವ ಪೊಲೀಸರ ನಡೆಯನ್ನು ಖಂಡಿಸಿ ಆಮ್ ಆದ್ಮಿ ಪಾರ್ಟಿಯು ಬೃಹತ್ ಪ್ರತಿಭಟನೆ ನಡೆಸಿದೆ.

    ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಎಎಪಿಯ ಬೆಂಗಳೂರು ನಗರ ರಾಜಕೀಯ ಚಟುವಟಿಕೆಗಳ ಅಧ್ಯಕ್ಷ ಚನ್ನಪ್ಪ ಗೌಡ ನೆಲ್ಲೂರು, ಕಳಂಕಿತ ಸಚಿವ ಈಶ್ವರಪ್ಪರನ್ನು ಪುನಃ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲು ರಾಜ್ಯ ಸರ್ಕಾರ ಹುನ್ನಾರ ಮಾಡಿದ್ದು, ಇದಕ್ಕಾಗಿಯೇ ಪೊಲೀಸರ ಮೇಲೆ ಒತ್ತಡ ಹೇರಿ ಕ್ಲೀನ್ ಚಿಟ್ ಕೊಡಿಸಿದೆ. ಸಂತೋಷ್ ಪಾಟೀಲ್ ಆತ್ಮಹತ್ಯೆಗೂ ಮುನ್ನ ಸಂತೋಷ್‍ರವರು ಈಶ್ವರಪ್ಪ ವಿರುದ್ಧ ವಾಟ್ಸಪ್‍ನಲ್ಲಿ ಡೆತ್‍ನೋಟ್ ಕಳುಹಿಸಿರುವುದನ್ನು ಪೊಲೀಸರೇ ದೃಢಪಡಿಸಿದ್ದಾರೆ. ಆದರೂ ಕೂಡ ಈಶ್ವರಪ್ಪನವರ ವಿಚಾರಣೆಯನ್ನೂ ನಡೆಸದೇ ಕ್ಲೀನ್ ಚಿಟ್ ನೀಡಿರುವುದು ಖಂಡನೀಯ. ಅಕ್ರಮ ಎಸಗುವವರ ಪರವಾಗಿದ್ದೇವೆ ಎಂಬ ಕೆಟ್ಟ ಸಂದೇಶವನ್ನು ರಾಜ್ಯ ಬಿಜೆಪಿ ಸರ್ಕಾರ ಈ ಮೂಲಕ ರವಾನಿಸಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಪ್ರಕರಣ – ಕೋರ್ಟ್‌ಗೆ ಬಿ ರಿಪೋರ್ಟ್‌ ಸಲ್ಲಿಕೆ; ಈಶ್ವರಪ್ಪಗೆ ಕ್ಲೀನ್‌ ಚಿಟ್‌

    ಘಟನೆ ನಡೆದಾಗಲೇ ಈಶ್ವರಪ್ಪನವರ ಬೆನ್ನಿಗೆ ನಿಂತಿದ್ದ ಬಿಜೆಪಿ ಸರ್ಕಾರವು, ತನಿಖೆಗೂ ಮುನ್ನವೇ ಈಶ್ವರಪ್ಪನವರನ್ನು ನಿರಪರಾಧಿ ಎಂದು ಘೋಷಿಸಿತ್ತು. ನಂತರ ಆಮ್ ಆದ್ಮಿ ಪಾರ್ಟಿಯು ಸಿಎಂ ಮನೆಗೆ ಮುತ್ತಿಗೆ ಹಾಕಲು ಮುಂದಾದಾಗ ಈಶ್ವರಪ್ಪನವರ ರಾಜೀನಾಮೆ ಪಡೆದಿತ್ತು. ಆದರೆ ಕೇವಲ ಕಾಟಾಚಾರಕ್ಕೆ ತನಿಖೆ ನಡೆಸಿ ಸಂತೋಷ್ ಪಾಟೀಲ್‍ರವರ ಕುಟುಂಬಕ್ಕೆ ಅನ್ಯಾಯವೆಸಗಿದೆ. ರಾಜಕೀಯ ಒತ್ತಡಕ್ಕೆ ಮಣಿದ ಉಡುಪಿ ಪೊಲೀಸರು ಈಶ್ವರಪ್ಪನವರ ವಿಚಾರಣೆ ನಡೆಸದೇ ಕೇವಲ ಮೂರು ತಿಂಗಳಲ್ಲಿ ವರದಿ ಸಿದ್ಧಪಡಿಸಿದ್ದಾರೆ. ರಾಜ್ಯ ಪೊಲೀಸ್ ಇಲಾಖೆಯು ಈ ದೋಷಪೂರಿತ ವರದಿಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಯಡಿಯೂರಪ್ಪ ತ್ಯಾಗ ಮಾಡಿಲ್ಲ, ಅವರನ್ನ ಪಕ್ಷದಿಂದ ದಬ್ಬಿದ್ರು: ಸಿಎಂ ಇಬ್ರಾಹಿಂ

    ಡೆತ್‍ನೋಟ್ ಆಧಾರವಾಗಿಟ್ಟುಕೊಂಡು ಈಶ್ವರಪ್ಪನವರನ್ನು ಬಂಧಿಸಬೇಕು. ಸರ್ಕಾರ ಕೈಕೆಳಗೆ ಕಾರ್ಯನಿರ್ವಹಿಸುವ ಸಿಐಡಿ ಬದಲು ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು. ಈಶ್ವರಪ್ಪನವರು ಸಂತೋಷ್ ಪಾಟೀಲ್‍ರವರಿಗೆ ನೀಡಿದ ಕಿರುಕುಳ ಹಾಗೂ ವಂಚನೆಯು ರಾಜ್ಯದ ಜನತೆಗೆ ತಿಳಿಯಬೇಕು. ಈಶ್ವರಪ್ಪನವರ ನೇತೃತ್ವದಲ್ಲಿ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರವಾಗಿದ್ದು, ಈ ಬಗ್ಗೆ ಆಮ್ ಆದ್ಮಿ ಪಾರ್ಟಿ ಹೋರಾಟ ಮಾಡಿದ್ದರೂ ಯಾವುದೇ ಸೂಕ್ತ ತನಿಖೆ ನಡೆದಿಲ್ಲ. ಕೆ.ಜೆ.ಜಾರ್ಜ್ ಪ್ರಕರಣದಲ್ಲಿ ಸಿಬಿಐ ತನಿಖೆ ನಡೆದಿದ್ದರೂ ಟೀಕಿಸುತ್ತಿದ್ದ ಬಿಜೆಪಿಯು ಈಗ ಈಶ್ವರಪ್ಪನವರ ವಿರುದ್ಧ ಪೊಲೀಸ್ ತನಿಖೆಯನ್ನೂ ಸರಿಯಾಗಿ ನಡೆಸದಿರುವುದು ದುರಂತ. ಆರ್‌ಡಿಪಿಆರ್‌ ಹಗರಣಗಳು ಹಾಗೂ ಸಂತೋಷ್ ಪ್ರಕರಣದ ಕುರಿತು ಸಮಗ್ರ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಚನ್ನಪ್ಪಗೌಡ ನೆಲ್ಲೂರು ಒತ್ತಾಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಪ್ರಕರಣ – ಕೋರ್ಟ್‌ಗೆ ಬಿ ರಿಪೋರ್ಟ್‌ ಸಲ್ಲಿಕೆ; ಈಶ್ವರಪ್ಪಗೆ ಕ್ಲೀನ್‌ ಚಿಟ್‌

    ಗುತ್ತಿಗೆದಾರ ಸಂತೋಷ್‌ ಆತ್ಮಹತ್ಯೆ ಪ್ರಕರಣ – ಕೋರ್ಟ್‌ಗೆ ಬಿ ರಿಪೋರ್ಟ್‌ ಸಲ್ಲಿಕೆ; ಈಶ್ವರಪ್ಪಗೆ ಕ್ಲೀನ್‌ ಚಿಟ್‌

    ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣದ ತನಿಖೆ ನಡೆಸಿದ್ದ ಉಡುಪಿ ಎಸ್‌ಪಿ, ಮಾಜಿ ಸಚಿವ ಈಶ್ವರಪ್ಪಗೆ ಕ್ಲೀನ್ ಚಿಟ್ ನೀಡಿದ್ದಾರೆ.

    ಉಡುಪಿ ಎಸ್‌ಪಿ ವಿಷ್ಣುವರ್ಧನ್‌ ಅವರು ಜನಪ್ರತಿನಿಧಿಗಳ ಕೋರ್ಟ್‌ಗೆ ಬಿ ರಿಪೋರ್ಟ್ ಸಲ್ಲಿಸಿದ್ದಾರೆ. ಪ್ರಕರಣ ಸಂಬಂಧ ಯಾವುದೇ ಸಾಕ್ಷ್ಯಾಧಾರ ಲಭ್ಯವಾಗಿಲ್ಲ. ಅಸಲಿಗೆ ಈಶ್ವರಪ್ಪ-ಸಂತೋಷ್ ಮುಖಾಮುಖಿ ಭೇಟಿಯಾಗಿರಲಿಲ್ಲ ಎಂದು ಬಿ ರಿಪೋರ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಟೋಲ್‍ಗೇಟ್‍ಗೆ ಡಿಕ್ಕಿಯಾಗಿ ಪಲ್ಟಿಯಾದ ಅಂಬುಲೆನ್ಸ್- ಮೂವರು ಸಾವು, ಓರ್ವ ಗಂಭೀರ

    ಉದ್ದೇಶಪೂರ್ವಕವಾಗಿಯೇ ಸಚಿವ ಈಶ್ವರಪ್ಪ ಮನೆಯ ಬಳಿ ಸಂತೋಷ್ ಪಾಟೀಲ್ ಹೋಗಿ ನಿಲ್ತಿದ್ರು. ಹಣ ಕೇಳಿರುವುದಕ್ಕೆ ಯಾವುದೇ ಸಾಕ್ಷ್ಯಾಧಾರ ಲಭ್ಯ ಆಗಿಲ್ಲ. ವಾಟ್ಸಪ್ ಚಾಟ್, ಆಡಿಯೋ ಸೇರಿ ಯಾವುದೇ ತಾಂತ್ರಿಕ ದಾಖಲೆಗಳು ಪತ್ತೆ ಆಗಿಲ್ಲ. ಕಾರ್ಯಕರ್ತರು ಯಾವ ರೀತಿ ಬಂದು ಹೋಗ್ತಿದ್ರೋ ಅದೇ ರೀತಿ ಸಂತೋಷ್ ಪಾಟೀಲ್ ಬಂದು ಹೋಗ್ತಿದ್ರು ಎಂದು ಬಿ ರಿಪೋರ್ಟ್‌ನಲ್ಲಿ ವರದಿ ಮಾಡಿದ್ದಾರೆ.

    ಈಶ್ವರಪ್ಪ ವಿರುದ್ಧ ಲಂಚದ ಹಣಕ್ಕೆ ಬೇಡಿಕೆಯಿಟ್ಟ ಆರೋಪ ಮಾಡಿ ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಶಿವಮೊಗ್ಗದ ಲಾಡ್ಜ್‌ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ನಂತರ ಈಶ್ವರಪ್ಪ ತಲೆದಂಡ ಕೂಡ ಆಗಿತ್ತು. ಇತ್ತೀಚಿಗಷ್ಟೇ ರಾಜ್ಯಪಾಲರಿಗೆ ಪತ್ರ ಬರೆದಿದ್ದ ಸಂತೋಷ್ ಪಾಟೀಲ್ ಪತ್ನಿ, ಈಶ್ವರಪ್ಪ ಪ್ರಭಾವದ ಕಾರಣ ಈ ಪ್ರಕರಣವನ್ನು ಮುಚ್ಚಿ ಹಾಕಲು ಪೊಲೀಸರು ಯತ್ನಿಸುತ್ತಿದ್ದಾರೆ. ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದರು. ಇದನ್ನೂ ಓದಿ: ಹೆಚ್‍ಡಿಕೆ ಆಯಸ್ಸು ಗಟ್ಟಿಯಾಗಿದೆ, ಬಂದೂಕಿನಿಂದ ಹೊಡೆದರೂ ಸಾಯಲ್ಲ: ಸಿಎಂ ಇಬ್ರಾಹಿಂ

    Live Tv
    [brid partner=56869869 player=32851 video=960834 autoplay=true]

  • 15 ದಿನದಲ್ಲಿ ಆರೋಪ ಮುಕ್ತನಾಗಿ ಬರುತ್ತೇನೆ ಎಂದ ಈಶ್ವರಪ್ಪ – ಪಾರದರ್ಶಕ ತನಿಖೆಗೆ ರಾಜ್ಯಪಾಲರ ಮೊರೆಹೋದ ಸಂತೋಷ್ ಪಾಟೀಲ್ ಕುಟುಂಬ

    15 ದಿನದಲ್ಲಿ ಆರೋಪ ಮುಕ್ತನಾಗಿ ಬರುತ್ತೇನೆ ಎಂದ ಈಶ್ವರಪ್ಪ – ಪಾರದರ್ಶಕ ತನಿಖೆಗೆ ರಾಜ್ಯಪಾಲರ ಮೊರೆಹೋದ ಸಂತೋಷ್ ಪಾಟೀಲ್ ಕುಟುಂಬ

    ಬೆಳಗಾವಿ: ಗುತ್ತಿಗೆದಾರ ಸಂತೋಷ್‌ ಪಾಟೀಲ್ ಆತ್ಮಹತ್ಯೆ ಪ್ರಕರಣದ ಪಾರದರ್ಶಕ ತನಿಖೆಗೆ ಕೋರಿ ಅವರ ಕುಟುಂಬಸ್ಥರು ರಾಜ್ಯಪಾಲರ ಮೊರೆ ಹೋಗಿದ್ದಾರೆ.

    ಪ್ರಮುಖ ಆರೋಪಿ ಕೆ.ಎಸ್ ಈಶ್ವರಪ್ಪ ನಿರ್ದೇಶನದಂತೆ ತನಿಖೆ ನಡೆಯುತ್ತಿದೆ. ಕೇವಲ 15 ದಿನದಲ್ಲಿ ಈ ಪ್ರಕರಣದಲ್ಲಿ ಆರೋಪ ಮುಕ್ತನಾಗಿ ಬರುತ್ತೇನೆ ಎಂದು ಕೆ.ಎಸ್.ಈಶ್ವರಪ್ಪ ನೀಡಿರುವ ಹೇಳಿಕೆಯೇ ಇದಕ್ಕೆ ಸಾಕ್ಷಿ ಎಂದು ಸಂತೋಷ್ ಪತ್ನಿ ರೇಣುಕಾ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಹುಂಡಿ ಎಣಿಕೆಯಲ್ಲಿ ಕೋಟ್ಯಾಧೀಶನಾದ ಮಾದಪ್ಪ – ಎಣಿಕೆ ವೇಳೆ 500 ರೂ.ಗಳ 80 ನೋಟು ಕದ್ದ ಗುತ್ತಿಗೆ ನೌಕರ

    ಈಶ್ವರಪ್ಪ ಪ್ರಭಾವಿ ಆಗಿದ್ದು, ಪ್ರಕರಣ ತನಿಖೆ ದಿಕ್ಕು ತಪ್ಪಿಸಿರುವ ಅನುಮಾನ ನಮಗಿದೆ. ಪೊಲೀಸ್ ಅಧಿಕಾರಿಗಳು ಈ ಕೇಸ್‍ನ ಪ್ರತಿ ಹಂತದ ತನಿಖೆಯ ಮಾಹಿತಿಯನ್ನು ಸೋರಿಕೆ ಮಾಡುತ್ತಿದ್ದಾರೆ. ಈಶ್ವರಪ್ಪಗೆ ಅನುಕೂಲ ಮಾಡಿ ಕೇಸ್ ಮುಚ್ಚಿ ಹಾಕುವ ಹುನ್ನಾರ ನಡೆದಿದೆ ಎಂದು ಆರೋಪಿಸಿದ್ದಾರೆ. ಪಾರದರ್ಶಕವಾಗಿ ತನಿಖೆ ನಡೆಸುವಂತೆ ತನಿಖಾಧಿಕಾರಿಗಳಿಗೆ ಸೂಚಿಸಲು ರೇಣುಕಾ ಸಂತೋಷ್ ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ – ಗ್ರಾಪಂ ಅಧ್ಯಕ್ಷ ನಾಗೇಶ್ ಮೊಬೈಲ್ ವಶಕ್ಕೆ ಪಡೆದ ಪೊಲೀಸರು

    ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ – ಗ್ರಾಪಂ ಅಧ್ಯಕ್ಷ ನಾಗೇಶ್ ಮೊಬೈಲ್ ವಶಕ್ಕೆ ಪಡೆದ ಪೊಲೀಸರು

    ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ತನಿಖೆಗಾಗಿ ಉಡುಪಿ ಪೊಲೀಸರು ನಗರದ ಹಿಂಡಲಗಾ ಗ್ರಾಂ.ಪಂ ಅಧ್ಯಕ್ಷ ನಾಗೇಶ್ ಮನ್ನೋಳಕರ್ ಮೊಬೈಲ್ ವಶಕ್ಕೆ ಪಡೆದುಕೊಂಡಿದ್ದಾರೆ.

    ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ವಿಚಾರಣೆಗಾಗಿ ಇನ್ಸ್‌ಪೆಕ್ಟರ್ ಶರಣಗೌಡ ಪಾಟೀಲ್ ನೇತೃತ್ವದ ತಂಡ ಮತ್ತೆ ತನಿಖೆ ಚುರುಕುಗೊಳಿಸಿದೆ. ಸಂತೋಷ್ ಪಾಟೀಲ್ ಮನೆಯನ್ನು ನಾಗೇಶ್ ಮನ್ನೋಳಕರ್, ಗ್ರಾ.ಪಂ.ಸದಸ್ಯ ಎನ್.ಎಸ್.ಪಾಟೀಲ್ ಸೇರಿ ಜಿಪಿಎ ಮಾಡಿಸಿಕೊಂಡಿದ್ದರು. ಇದನ್ನೂ ಓದಿ: ಭಾರತಕ್ಕೆ ಆಧ್ಯಾತ್ಮಿಕ ಪ್ರಯಾಣ – ಪ್ರಧಾನಿ ಮೋದಿ ಹೊಗಳಿದ ಡ್ವಿಟ್ ಹೊವಾರ್ಡ್

    ಜಿಪಿಎ ಮಾಡಿಸಿಕೊಂಡಿದ್ದೇಕೆ? ಜಿಪಿಎ ಮಾಡಿಸಿಕೊಂಡು ಎಷ್ಟು ಹಣ ಕೊಟ್ಟಿದ್ದರು? 108 ಕಾಮಗಾರಿ ಆರಂಭಿಸಲು ಹೇಳಿದ್ದು ಯಾರು? ಎಂಬ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸಿದ್ದಾರೆ. ಮತ್ತೊಂದೆಡೆ ಉಡುಪಿ ಪೊಲೀಸರು ನಾಗೇಶ್ ಮನ್ನೋಳಕರ್ ಮೊಬೈಲ್‍ನ್ನು ಅನಾಲಿಸಿಸ್‍ಗೆ ಕಳಿಸಿದ್ದಾರೆ. ಹಿಂಡಲಗಾ ಗ್ರಾ.ಪಂ 35 ಸದಸ್ಯರಿಗೂ ವಿಚಾರಣೆಗೆ ಹಾಜರಾಗಲು ಸೂಚನೆ ನೀಡಿದ್ದಾರೆ. ಪ್ರತಿಯೊಬ್ಬ ಸದಸ್ಯರನ್ನು ಪ್ರತ್ಯೇಕವಾಗಿ ಒನ್ ಟು ಒನ್ ವಿಚಾರಣೆ ನಡೆಸಲು ನಿರ್ಧರಿಸಿದ್ದಾರೆ.  ಇದನ್ನೂ ಓದಿ: ಬಡ ಮುಸ್ಲಿಮರ ಮೇಲೆ ಬಿಜೆಪಿ ಸಮರ ಸಾರಿದೆ: ಓವೈಸಿ ಕಿಡಿ

    ನಿಮ್ಮ ವಾರ್ಡ್‍ನಲ್ಲಿ ಸಂತೋಷ್ ಪಾಟೀಲ್ ಕಾಮಗಾರಿ ಮಾಡಿದ್ದಾರಾ? ಕಾಮಗಾರಿ ಮಾಡಿದ್ರೆ ಎಷ್ಟು ವೆಚ್ಚದಲ್ಲಿ ಕಾಮಗಾರಿ ಮಾಡಿದ್ದಾರೆ? ಯಾವ ಅನುದಾನದಲ್ಲಿ ಕಾಮಗಾರಿ ಮಾಡುತ್ತಿರುವುದಾಗಿ ಹೇಳಿದ್ದರು. ಸಂತೋಷ ಪಾಟೀಲ್‍ರವರೇ ಕಾಮಗಾರಿ ಮಾಡಿದ್ದಾರೋ? ಉಪಗುತ್ತಿಗೆದಾರರು ಮಾಡಿದ್ದಾರೋ? ಹೀಗೆ ಎಲ್ಲ ಮಾಹಿತಿ ಪಡೆದು ಪೊಲೀಸರು ಹೇಳಿಕೆ ದಾಖಲಿಸಿಕೊಳ್ಳಲು ನಿರ್ಧರಿಸಿದ್ದಾರೆ.

    ಗ್ರಾ.ಪಂ. ಮಹಿಳಾ ಸದಸ್ಯರ ವಿಚಾರಣೆಗೆ ಮಹಿಳಾ ಪೇದೆಗಳ ನಿಯೋಜನೆ ಮಾಡಲಾಗಿದೆ. ಸಂತೋಷ್ ಪಾಟೀಲ್‍ನಿಂದ ಉಪ ಗುತ್ತಿಗೆ ಪಡೆದ 12 ಉಪಗುತ್ತಿಗೆದಾರರಿಂದಲೂ ಮಾಹಿತಿ ಸಂಗ್ರಹಿಸಲಿದ್ದಾರೆ. ಉಪಗುತ್ತಿಗೆ ಪಡೆದು ಕಾಮಗಾರಿ ಮಾಡಿದ ವೆಚ್ಚ, ಕಾಮಗಾರಿಗೆ ಸಾಮಗ್ರಿ ಖರೀದಿಸಿದ್ದ ರಶೀದಿ ಸೇರಿ ಎಲ್ಲ ದಾಖಲೆ ನೀಡುವಂತೆಯೂ ಸೂಚನೆ ನೀಡಲಾಗಿದೆ.

  • ವರ್ಕ್ ಆರ್ಡರ್ ಇಲ್ಲದೇ ಕೆಲಸ ಮಾಡುತ್ತಿದ್ದರೆ ಬಂದ್ ಮಾಡಿಸಿ – ಅಧಿಕಾರಿಗಳಿಗೆ ಕಾರಜೋಳ ವಾರ್ನಿಂಗ್

    ವರ್ಕ್ ಆರ್ಡರ್ ಇಲ್ಲದೇ ಕೆಲಸ ಮಾಡುತ್ತಿದ್ದರೆ ಬಂದ್ ಮಾಡಿಸಿ – ಅಧಿಕಾರಿಗಳಿಗೆ ಕಾರಜೋಳ ವಾರ್ನಿಂಗ್

    ಬೆಳಗಾವಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಿಂದಾಗಿ ಬೆಳಗಾವಿ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಎಚ್ಚೆತ್ತುಕೊಂಡಿದ್ದು ಅಧಿಕಾರಿಗಳಿಗೆ ವಾರ್ನಿಂಗ್ ನೀಡಿದ್ದಾರೆ.

    ಬೆಳಗಾವಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯಲ್ಲಿ, ಯಾರಾದರೂ ವರ್ಕ್ ಆರ್ಡರ್ ಇಲ್ಲದೇ ಕೆಲಸ ಮಾಡುತ್ತಿದ್ದರೆ ಬಂದ್ ಮಾಡಿಸಬೇಕು. ವರ್ಕ್ ಆರ್ಡರ್ ಇಲ್ಲದೇ ಕೆಲಸ ಮಾಡಲು ಬಿಡಬಾರದು. ಸರ್ಕಾರದ ಯೋಜನೆ ಮಂಜೂರಾಗದೇ ಯಾರಾದರೂ ಕಾಮಗಾರಿ ಮಾಡುವುದು ಗಮನಕ್ಕೆ ಬಂದರೆ ಪಿಡಿಒಗಳು, ಇಒಗಳು, ಇಂಜಿನಿಯರ್‌ಗಳೇ ಹೊಣೆ ಮಾಡಲಾಗುತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ. ಇದನ್ನೂ ಓದಿ: ಬಿಜೆಪಿ ನಾಯಕರೇ ಅಮಿತ್‌ ಶಾ ಗುಲಾಮರಾಗಬೇಡಿ, ಕನ್ನಡ ತಾಯಿ ಸ್ವಾಭಿಮಾನಿ ಮಕ್ಕಳಾಗಿ: ಸಿದ್ದು

    ನಿಮ್ಮ ಮನೆಯಲ್ಲಿ ಯಾರಾದರೂ ಹೇಳದೇ ಕೆಲಸ ಮಾಡುವುದಕ್ಕೆ ಬಂದರೆ ಸುಮ್ಮನೇ ಇರುತ್ತೀರಾ? ಹೀಗಾಗಿ ಬಹಳ ಬಿಗಿಯಾಗಿ ನೋಡಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಅನಧಿಕೃತ ವ್ಯಕ್ತಿಗಳು ನಮ್ಮ ಪ್ರಿಮೈಸಿಸ್‍ನಲ್ಲಿ ಬರಬಾರದು. ಗ್ರಾಮ ಪಂಚಾಯತ್‍ನಲ್ಲಿ ಯಾರಾದರೂ ಬಂದು ಕೆಲಸ ಮಾಡುತ್ತಾರೆ ಅಂದರೆ ಬಿಡಬಾರದು. ಒಂದು ವೇಳೆ ಬಿಟ್ಟಿದ್ದೆ ಆದರೆ, ಸುಮ್ಮನೇ ಅಧಿಕಾರಿಗಳಿಗೂ ಕೆಟ್ಟ ಹೆಸರು, ಸರ್ಕಾರಕ್ಕೂ ಕೆಟ್ಟ ಹೆಸರು ವಿನಾ ಕಾರಣ ಅಪಪ್ರಚಾರ ಆಗುತ್ತದೆ. ಒಂದು ವೇಳೆ ಯಾರಾದರೂ ಪುಂಡಾಟಿಕೆ ಮಾಡಿದರೆ ಪೊಲೀಸರಿಗೆ ದೂರು ನೀಡಬೇಕು ಎಂದು ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ನೂತನ ಮನೆಗೆ ಮೋದಿ ಹೆಸರಿಟ್ಟ ಚನ್ನಗಿರಿಯ ಅಭಿಮಾನಿ

     

    ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಗೋವಿಂದ ಕಾರಜೋಳ, ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಅಂತ ಅಲ್ಲ. ಈಗಾಗಲೇ ತನಿಖೆ ಆಗುತ್ತಿದೆ ತನಿಖೆ ವರದಿ ಬರಬೇಕು. ತನಿಖೆ ಆಗದೇ ನಾನು ಮಂತ್ರಿಯಾಗಿ ಹೇಳಿದರೆ ಸರ್ಕಾರವೇ ಹೇಳಿದ ಹಾಗೇ ಆಗುತ್ತದೆ. ತನಿಖೆಗೆ ಅಡ್ಡಿಪಡಿಸುವಂತೆ ಆಗಬಾರದು. ಹೀಗಾಗಿ ನಾನು ಮಾತನಾಡುವುದಿಲ್ಲ. ವರ್ಕ್ ಆರ್ಡರ್ ಇಲ್ಲದೇ ಕೆಲಸ ಮಾಡುವಂತಿಲ್ಲ. ನಮ್ಮ ಕಾನೂನಿನಲ್ಲಿ ಇದಕ್ಕೆ ಅವಕಾಶ ಇಲ್ಲ. ಯಾವುದೇ ಕಾಮಗಾರಿ ಮಾಡಬೇಕಾದರೆ ವರ್ಕ್ ಎಸ್ಟಿಮೇಟ್ ಮಾಡಬೇಕಾಗುತ್ತದೆ. ಮಂಜೂರಾತಿ, ಗ್ರ್ಯಾಂಟ್ ಪಡೆಯಬೇಕು ಹೇಳಿದ್ದಾರೆ.

  • ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಕೇಸ್‌ – ಜಿಲ್ಲಾ ಪಂಚಾಯತ್‌ ಪತ್ರವೇ ನಕಲು

    ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಕೇಸ್‌ – ಜಿಲ್ಲಾ ಪಂಚಾಯತ್‌ ಪತ್ರವೇ ನಕಲು

    – ಗ್ರಾಮೀಣಾಭಿವೃದ್ದಿ ಇಲಾಖೆ ದೂರು, ಎಫ್‌ಐಆರ್‌ ದಾಖಲು

    ಬೆಂಗಳೂರು/ಬೆಳಗಾವಿ: ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪಂಚಾಯತ್‌ ನೀಡಿದೆ ಎನ್ನಲಾದ ಅನುಮತಿ ಪತ್ರ ನಕಲು ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ತಿಳಿಸಿದೆ.

    ಹಿಂಡಲಗಾ ಗ್ರಾಮದಲ್ಲಿ ರಸ್ತೆ, ಚರಂಡಿ ಅಭಿವೃದ್ಧಿಗೆ ವಿಶೇಷ ಅನುದಾನ ಮಂಜೂರು ಮಾಡುವಂತೆ ಅಂದಿನ ಬೆಳಗಾವಿ ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ, ಕಾಂಗ್ರೆಸ್‌ ನಾಯಕಿ ಆಶಾ ಐಹೊಳೆ 2021ರ ಫೆಬ್ರವರಿ 15ರಂದು 108 ಕಾಮಗಾರಿಗಳ ಪಟ್ಟಿ ಸಮೇತ ಬರೆದಿದ್ದ ಪತ್ರ ತನಿಖೆ ನಡೆಸುತ್ತಿರುವ ಉಡುಪಿ ಪೊಲೀಸರಿಗೆ ಲಭ್ಯವಾಗಿತ್ತು. ಇದನ್ನೂ ಓದಿ: ಸಂತೋಷ್ ಮಾಡಿದ ಕಾಮಗಾರಿಗಳಿಗೆ ಸರ್ಕಾರದಿಂದ ಅನುಮೋದನೆಯೇ ಸಿಕ್ಕಿಲ್ಲ: ದರ್ಶನ್ ಹೆಚ್‌ವಿ ಸ್ಫೋಟಕ ಮಾಹಿತಿ

    ಈ ಪತ್ರದಲ್ಲಿ ʼಅನುಮೋದನೆಗಾಗಿ ಆದೇಶಿಸಲಾಗಿದೆʼ ಎಂದು ಫೆಬ್ರವರಿ 26ರಂದು ಸಹಿ ಮಾಡಲಾಗಿತ್ತು. ಆದೇಶದ ಪ್ರತಿಗಳನ್ನು ಮಾರ್ಚ್ 5ರಂದು ನೀಡಲಾಗುವುದು’ ಎಂದು ಕೈಬರಹದಲ್ಲಿ ಬರೆದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಇಲಾಖೆಯ ಕಾರ್ಯದರ್ಶಿ ಸಹಿ ಮತ್ತು ಸೀಲ್‌ ಹಾಕಲಾಗಿತ್ತು. ಈ ಪತ್ರದ ಅಧಾರದಲ್ಲಿ ಸಂತೋಷ್ ಕಾಮಾಗಾರಿಗಳನ್ನು ಮಾಡಿಸಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಇದನ್ನೂ ಓದಿ: ಹಿಂಡಲಗಾ ಗ್ರಾ.ಪಂ. ಅಧ್ಯಕ್ಷರಿಗೆ, ಸದಸ್ಯರಿಗೆ ಲೆಟರ್ ಕೊಟ್ಟಿದ್ದು ನಿಜ: ಆಶಾ ಐಹೊಳೆ

    ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಇಲಾಖೆಯ ಕಾರ್ಯದರ್ಶಿ ಸಹಿ ಮತ್ತು ಸೀಲ್‌ ಇದ್ದ ಹಿನ್ನೆಲೆಯಲ್ಲಿ ಹಲವು ಅನುಮಾನಗಳು ಎದ್ದಿತ್ತು. ಈಗ ಈ ಪತ್ರವೇ ನಕಲಿ ಎಂದು ಹೇಳಿರುವ ಗ್ರಾಮೀಣಾಭಿವೃದ್ದಿ ಇಲಾಖೆ ವಿಧಾನಸೌಧ ಠಾಣೆಗೆ ದೂರು ನೀಡಿದೆ. ಅಧೀನ ಕಾರ್ಯದರ್ಶಿ ರಮೇಶ್ ದೂರು ನೀಡಿದ್ದು ಪೊಲೀಸರು ಈಗ ಎಫ್‌ಐಆರ್‌ ದಾಖಲು ಮಾಡಿ ನಕಲಿ ಪತ್ರ ಸೃಷ್ಟಿಸಿದವರ ವಿರುದ್ಧ ತನಿಖೆ ಆರಂಭಿಸಿದ್ದಾರೆ.

    ದರ್ಶನ್‌ ಹೇಳಿದ್ದೇನು?
    ಸಂತೋಷ್ ಪಾಟಿಲ್‌ರ ಕಾಮಗಾರಿಗಳ ಕುರಿತಂತೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಆಶಾ ಐಹೊಳೆಯವರ ಸಹಿಯನ್ನು ಪೋರ್ಜರಿ ಮಾಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಅನುಮೋದನೆ ಪತ್ರದಲ್ಲಿರುವ ಸಹಿ ನನ್ನದಲ್ಲ ಎಂದು ಆಶಾ ಐಹೊಳೆ ಹೇಳಿದ್ದಾರೆ. ಈ ಕುರಿತಂತೆ ತನಿಖೆಯಿಂದಷ್ಟೇ ಎಲ್ಲಾ ಮಾಹಿತಿ ಹೊರಬೀಳಬೇಕಿದೆ ಎಂದು ಬೆಳಗಾವಿ ಸಿಇಒ ದರ್ಶನ್ ತಿಳಿಸಿದ್ದಾರೆ.

    15ನೇ ಹಣಕಾಸಿನ ಆಯೋಗದಲ್ಲಿ ಗರಿಷ್ಠ ಎಂದರೂ 50 ರಿಂದ 60 ಲಕ್ಷ ರೂ. ಹಣ ಬರುತ್ತದೆ. ಆದರೆ 4 ಕೋಟಿ ರೂ. ಅನುದಾನ ಪಂಚಾಯತ್‌ಗೆ ಬರುವುದಿಲ್ಲ. ಪೊಲೀಸರಿಂದ ತನಿಖೆ ನಡೆಯುತ್ತಿದೆ. ನಮ್ಮ ಕಡೆಯಿಂದ ಏನು ಮಾಹಿತಿ ಬೇಕು ಅದನ್ನು ಕೊಡುತ್ತಿದ್ದೇವೆ. ಈ ಕುರಿತು ಪತ್ರ ಬರೆದಿರುವುದು ನಿಜ. ಅನುಮೋದನೆ ಎಂದು ಬರೆದಿರುವುದು ನಿಜವಲ್ಲ. ಈ ಬಗ್ಗೆ ತನಿಖೆ ಆಗಬೇಕು, ಆಗುತ್ತಿದೆ. ಈ ಬಗ್ಗೆ ಸರ್ಕಾರದ ಗಮನಕ್ಕೂ ತಂದಿದ್ದೇನೆ. ಈ ಪತ್ರ ನೋಡಿದಾಗ ಪೋರ್ಜರಿ ಮಾಡಿದ್ದು ಎಂಬುದು ಮೇಲ್ನೋಟಕ್ಕೆ ತಿಳಿಯುತ್ತದೆ ಎಂದರು.

  • ಸಂತೋಷ್ ಮಾಡಿದ ಕಾಮಗಾರಿಗಳಿಗೆ ಸರ್ಕಾರದಿಂದ ಅನುಮೋದನೆಯೇ ಸಿಕ್ಕಿಲ್ಲ: ದರ್ಶನ್ ಹೆಚ್‌ವಿ ಸ್ಫೋಟಕ ಮಾಹಿತಿ

    ಸಂತೋಷ್ ಮಾಡಿದ ಕಾಮಗಾರಿಗಳಿಗೆ ಸರ್ಕಾರದಿಂದ ಅನುಮೋದನೆಯೇ ಸಿಕ್ಕಿಲ್ಲ: ದರ್ಶನ್ ಹೆಚ್‌ವಿ ಸ್ಫೋಟಕ ಮಾಹಿತಿ

    ಬೆಳಗಾವಿ: ಮೃತ ಗುತ್ತಿಗೆದಾರ ಸಂತೋಷ್ ಪಾಟೀಲ್ ಮಾಡಿರುವ ಕಾಮಗಾರಿಗಳಿಗೆ ಸರ್ಕಾರದಿಂದ ಅಥವಾ ಸಂಬಂಧಪಟ್ಟ ಅಧಿಕಾರಿಗಳಿಂದ ಅನುಮೋದನೆಯೇ ಸಿಕ್ಕಿಲ್ಲ ಎಂದು ಬೆಳಗಾವಿ ಜಿಲ್ಲಾ ಪಂಚಾಯತ್ ಸಿಇಒ ದರ್ಶನ್ ಹೆಚ್‌ವಿ ಸ್ಫೋಟಕ ಮಾಹಿತಿ ನೀಡಿದ್ದಾರೆ.

    ಸಂತೋಷ್ ಪಾಟಿಲ್‌ರ ಕಾಮಗಾರಿಗಳ ಕುರಿತಂತೆ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಆಶಾ ಐಹೊಳೆಯವರ ಸಹಿಯನ್ನು ಫೋರ್ಜರಿ ಮಾಡಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಅನುಮೋದನೆ ಪತ್ರದಲ್ಲಿರುವ ಸಹಿ ನನ್ನದಲ್ಲ ಎಂದು ಆಶಾ ಐಹೊಳೆ ಹೇಳಿದ್ದಾರೆ. ಈ ಕುರಿತಂತೆ ತನಿಖೆಯಿಂದಷ್ಟೇ ಎಲ್ಲಾ ಮಾಹಿತಿ ಹೊರಬೀಳಬೇಕಿದೆ ಎಂದು ಸಿಇಒ ದರ್ಶನ್ ಹೇಳಿದ್ದಾರೆ.

    ಸಾಮಾನ್ಯವಾಗಿ ಜಿಪಂ ಅಧ್ಯಕ್ಷರಿಗೆ ಯಾರಾದರೂ ಮನವಿ ನೀಡಿದರೆ, ಅವರು ಆ ಮನವಿಯನ್ನು ಅಧಿಕಾರಿಗಳಿಗೆ ಕಳುಹಿಸುತ್ತಾರೆ. ಹಿಂದಿನ ಜಿ.ಪಂ. ಅಧ್ಯಕ್ಷರು ಪಂಚಾಯತ್ ರಾಜ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ 2021ರ ಫೆಬ್ರವರಿ 15 ರಂದು ಪತ್ರ ಬರೆದಿದ್ದಾರೆ. ಅದರ ಕೆಳಗಡೆ 108 ಕಾಮಗಾರಿಗಳ ಬಗ್ಗೆ ಉಲ್ಲೇಖಿಸಿ ಪಟ್ಟಿ ಮಾಡಿ ಅದರ ಕೆಳಗಡೆ ಸಹಿ ಮಾಡಿದ್ದಾರೆ. ಮೊದಲ ಹಾಗೂ ಕೊನೆಯ ಪುಟದಲ್ಲಿ ಹಸಿರು ಶಾಯಿಯಿಂದ ಬರೆದಿರುವ ಸಹಿ ನನ್ನ ಹಸ್ತಾಕ್ಷರ ಅಲ್ಲ ಎಂದು ಜಿ.ಪಂ. ಮಾಜಿ ಅಧ್ಯಕ್ಷೆ ಆಶಾ ಐಹೊಳೆ ಹೇಳಿದ್ದಾರೆ ಎಂದರು. ಇದನ್ನೂ ಓದಿ: ಮಸೀದಿಯ ಮೇಲೆ ನಾವೇನು ಬಾಂಬ್ ಹಾಕಿದ್ದೇವಾ?: ಮುತಾಲಿಕ್ ಗರಂ

    ಸಾಮಾನ್ಯವಾಗಿ ಕಾಮಗಾರಿಗೆ ಅನುಮೋದನೆ ಕೊಡಬೇಕಾದರೆ ಪಟ್ಟಿ ಮಾಡುವುದಿಲ್ಲ. ಅದಕ್ಕೆ ಅದರದ್ದೇ ಆದಂತಹ ಸರ್ಕಾರದ ನಿಯಮಗಳಿವೆ. ಫೈಲ್ ನೋಟಿಂಗ್ ಆಗಬೇಕು, ಇಲಾಖೆ ಮುಖ್ಯಸ್ಥರು, ಸಂಬಂಧಿಸಿದವರು ಅನುಮೋದನೆ ಕೊಡಬೇಕು. ಆಮೇಲೆ ಅದಕ್ಕೆ ಪ್ರತ್ಯೇಕವಾಗಿ ಸರ್ಕಾರಿ ಆದೇಶ ಬರುತ್ತದೆ. ಸರ್ಕಾರ ಮಟ್ಟದಲ್ಲಿ ಇಲಾಖೆ ಕಾರ್ಯಾದರ್ಶಿಗಳು, ಜಿಲ್ಲಾಮಟ್ಟದಲ್ಲಿ ನನ್ನ ಅನುಮೋದನೆ ಆಗಬೇಕು. ಆದರೆ ಈ ಕಾಮಗಾರಿಗಳಲ್ಲಿ ನನ್ನ ಮಟ್ಟದಲ್ಲೂ ಅನುಮೋದನೆ ಆಗಿಲ್ಲ ಎಂದು ಹಿಂಡಲಗಾದಲ್ಲಿ ನಡೆದ ಕಾಮಗಾರಿಗಳಿಗೆ ಸರ್ಕಾರ ಅಥವಾ ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ಅನುಮೋದನೆ ಸಿಕ್ಕಿಲ್ಲ ಎಂದು ಈ ವೇಳೆ ಸ್ಪಷ್ಟಪಡಿಸಿದರು.

    ಹಿಂಡಲಗಾ ಗ್ರಾಮದಲ್ಲಿ 108 ಕಾಮಗಾರಿ ನಡೆದಿರುವ ವಿಚಾರ ನನಗೂ ಆಶ್ಚರ್ಯವಾಗಿದೆ. ಈ ರೀತಿ 108 ಕಾಮಗಾರಿ ಮಾಡಿರುವುದು ಅಚ್ಚರಿ ತಂದಿದೆ. ಇಷ್ಟೊಂದು ಸಮಸ್ಯೆಯಾದಾಗ ಅವರು ನಮ್ಮನ್ನು ಭೇಟಿ ಮಾಡಬೇಕಿತ್ತು. ಆದರೆ ಈ ಪ್ರಕರಣದಲ್ಲಿ ಈವರೆಗೂ ಯಾವೊಬ್ಬ ಗುತ್ತಿಗೆದಾರರೂ ನನ್ನನ್ನು ಭೇಟಿಯಾಗಿಲ್ಲ ಎಂದರು. ಇದನ್ನೂ ಓದಿ: ಹಿಂಡಲಗಾ ಗ್ರಾ.ಪಂ. ಅಧ್ಯಕ್ಷರಿಗೆ, ಸದಸ್ಯರಿಗೆ ಲೆಟರ್ ಕೊಟ್ಟಿದ್ದು ನಿಜ: ಆಶಾ ಐಹೊಳೆ

    15ನೇ ಹಣಕಾಸಿನ ಆಯೋಗದಲ್ಲಿ ಗರಿಷ್ಠ ಎಂದರೂ 50 ರಿಂದ 60 ಲಕ್ಷ ರೂ. ಹಣ ಬರುತ್ತದೆ. ಆದರೆ 4 ಕೋಟಿ ರೂ. ಅನುದಾನ ಪಂಚಾಯಿತಿಗೆ ಬರುವುದಿಲ್ಲ. ಪೊಲೀಸರ ತನಿಖೆ ನಡೆಯುತ್ತಿದೆ. ನಮ್ಮ ಕಡೆಯಿಂದ ಏನು ಮಾಹಿತಿ ಬೇಕು ಅದನ್ನು ಕೊಡುತ್ತಿದ್ದೇವೆ. ಈ ಕುರಿತು ಪತ್ರ ಬರೆದಿರುವುದು ನಿಜ. ಅನುಮೋದನೆ ಎಂದು ಬರೆದಿರುವುದು ನಿಜವಲ್ಲ. ಈ ಬಗ್ಗೆ ತನಿಖೆ ಆಗಬೇಕು, ಆಗುತ್ತಿದೆ. ಈ ಬಗ್ಗೆ ಸರ್ಕಾರದ ಗಮನಕ್ಕೂ ತಂದಿದ್ದೇನೆ. ಈ ಪತ್ರ ನೋಡಿದಾಗ ಫೋರ್ಜರಿ ಮಾಡಿದ್ದು ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ ಎಂದರು.

  • ಹಿಂಡಲಗಾ ಗ್ರಾ.ಪಂ. ಅಧ್ಯಕ್ಷರಿಗೆ, ಸದಸ್ಯರಿಗೆ ಲೆಟರ್ ಕೊಟ್ಟಿದ್ದು ನಿಜ: ಆಶಾ ಐಹೊಳೆ

    ಹಿಂಡಲಗಾ ಗ್ರಾ.ಪಂ. ಅಧ್ಯಕ್ಷರಿಗೆ, ಸದಸ್ಯರಿಗೆ ಲೆಟರ್ ಕೊಟ್ಟಿದ್ದು ನಿಜ: ಆಶಾ ಐಹೊಳೆ

    ಬೆಳಗಾವಿ: ಹಿಂಡಲಗಾ ಗ್ರಾಮ ಪಂಚಾಯತಿ ಅಧ್ಯಕ್ಷರಿಗೆ, ಸದಸ್ಯರಿಗೆ ನಾನು ಲೇಟರ್ ಕೊಟ್ಟಿದ್ದು ನಿಜ ಎಂದು ಮಾಜಿ ಬೆಳಗಾವಿ ಜಿ.ಪಂ. ಅಧ್ಯಕ್ಷೆ ಆಶಾ ಐಹೊಳೆ ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2021ರಲ್ಲಿ ಹಿಂಡಲಗಾ ಗ್ರಾಮದ ಲಕ್ಷ್ಮಿದೇವಿ ಜಾತ್ರೆ ಇತ್ತು. ಜಾತ್ರೆಯ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತಿ ಸದಸ್ಯರು ನನ್ನ ಬಳಿ ಬಂದಿದ್ದರು. ಸಮಗ್ರ ಅಭಿವೃದ್ಧಿ ಕಾಮಗಾರಿಗೆ ಲೆಟರ್ ನೀಡುವಂತೆ ಕೋರಿದ್ದರು. ಆ ಪ್ರಕಾರ ಗ್ರಾಪಂ ಅಧ್ಯಕ್ಷರಿಗೆ, ಸದಸ್ಯರಿಗೆ ನಾನು ಲೇಟರ್ ಕೊಟ್ಟಿದ್ದು ನಿಜ. ಆದರೆ ನಾನು ಕೊಟ್ಟ ಲೆಟರ್‍ಗೆ ಏನು ಆಕ್ಷನ್ ಆಗಿದೆ ಎಂಬುದು ನನಗೆ ಗೊತ್ತಿಲ್ಲ ಎಂದು ಹೇಳಿದರು. ಇದನ್ನೂ ಓದಿ: ತಮ್ಮದೇ ಪಕ್ಷದ ಸಂಸದರ ವಿರುದ್ಧವೇ ಕಿಡಿಕಾರಿದ ಸಚಿವ ಎಂಟಿಬಿ

    ಆರ್ ಡಿಪಿಆರ್ ಇಲಾಖೆ ಅನುಮೋದನೆ ನೀಡಿರುವ ವಿಷಯ ನನಗೆ ಇವತ್ತಷ್ಟೇ ಗೊತ್ತಾಗಿದೆ. ಗುತ್ತಿಗೆದಾರ ಸಂತೋಷ್ ಪಾಟೀಲ್, ನಾನು ಮುಖಾಮುಖಿಯಾಗಿ ಎಂದೂ ಭೇಟಿಯಾಗಿಲ್ಲ. ಅವರ ಆತ್ಮಹತ್ಯೆ ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದೇನೆ. ಆದರೆ ಸಂತೋಷ್ ಆತ್ಮಹತ್ಯೆಯ ದುರಂತ ಮಾಡಿಕೊಳ್ಳಬಾರದಿತ್ತು. ಆರ್ಡಿಪಿಆರ್ ಇಲಾಖೆಯಿಂದ ಬಂದಿರುವ ರಿಸೀವ್ ಕಾಪಿನೂ ನನಗೆ ಸಿಕ್ಕಿಲ್ಲ ಎಂದರು. ಇದನ್ನೂ ಓದಿ: ಸಂತೋಷ್‌ ಪಾಟೀಲ್‌ ಕೇಸ್‌ಗೆ ಟ್ವಿಸ್ಟ್‌ – 2021ರಲ್ಲಿ ಬೆಳಗಾವಿ ZP ಅಧ್ಯಕ್ಷೆ ಬರೆದ ಪತ್ರ ಔಟ್‌

    ಜಿ.ಪಂ. ಅಧಿಕಾರಿಗಳು ಅದನ್ನು ಕಡತದಲ್ಲಿ ಇಟ್ಟಿರುತ್ತಾರೆ. ಕಾಮಗಾರಿಗಳ ಮಂಜೂರಾತಿಗೆ ನನ್ನ ಬಳಿ ಹಿಂಡಲಗಾ ಗ್ರಾ.ಪಂ. ಸದಸ್ಯರು ಬಂದಿದ್ದರು. ಕೆಲಸ ಆದ ಬಗ್ಗೆ ನನಗೇನೂ ಮಾಹಿತಿ ನೀಡಿಲ್ಲ. ಆ ಬಗ್ಗೆ ಗೊತ್ತೂ ಇಲ್ಲ. ನನ್ನ ಪತ್ರಕ್ಕೆ ಅನುಮೋದನೆ ನೀಡಿರುವ ಪತ್ರವೂ ಇವತ್ತಷ್ಟೇ ಸಿಕ್ಕಿದೆ. 17.ಫೆ.2021ಕ್ಕೆ ಅನುಮೋದನೆ ಆಗಿರುವುದು ಪತ್ರದಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಿಶಾಲ್‌, ನನ್ನ ಮದ್ವೆ ಫಿಕ್ಸ್ ಆಗಿದೆ ಓಡೋಗೋಣ ಬಾ- 10 ರೂ. ನೋಟಲ್ಲಿನ ಲವ್ವರ್ ಸಂದೇಶ ವೈರಲ್

    ಸಂತೋಷ್ ಪಾಟೀಲ್ ನನಗೆ ಗೊತ್ತೇ ಎಂಬ ಈಶ್ವರಪ್ಪ ಹೇಳಿಕೆ ವಿಚಾರಕ್ಕೆ, ಈ ಬಗ್ಗೆ ತನಿಖಾಧಿಕಾರಿಗಳು ಡೀಪ್ ಸ್ಟಡಿ ಮಾಡಬೇಕು. ನಾನು ಕೊಟ್ಟಿರುವ ಲೆಟರ್ ಬಗ್ಗೆ ಮೇಲಾಧಿಕಾರಿಗಳಿಗೆ ಎಷ್ಟು ಮಾಹಿತಿ ಇದೆ ಎಂಬುದು ನನಗೆ ಗೊತ್ತಿಲ್ಲ. ಆದರೆ ನಾನು ಪತ್ರ ಬರೆದಿದ್ದು ನಿಜ ಎಂದು ಬೆಳಗಾವಿಯಲ್ಲಿ ನಿಕಟಪೂರ್ವ ಜಿಪಂ ಅಧ್ಯಕ್ಷೆ ಆಶಾ ಐಹೊಳೆ ಮಾಹಿತಿ ನೀಡಿದ್ದಾರೆ.