Tag: ಸಂದೇಶ್‌ಖಾಲಿ

  • ಸಂದೇಶ್‌ಖಾಲಿಯಲ್ಲಿ ಸಿಬಿಐ ದಾಳಿ – ವಿದೇಶಿ ನಿರ್ಮಿತ ಗನ್‌, ಮದ್ದು-ಗುಂಡುಗಳು ಸೀಜ್‌

    ಸಂದೇಶ್‌ಖಾಲಿಯಲ್ಲಿ ಸಿಬಿಐ ದಾಳಿ – ವಿದೇಶಿ ನಿರ್ಮಿತ ಗನ್‌, ಮದ್ದು-ಗುಂಡುಗಳು ಸೀಜ್‌

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ (Sandeshkhali) ಕೇಂದ್ರೀಯ ತನಿಖಾ ದಳ (CBI) ನಡೆಸಿದ ಮಹತ್ವದ ದಾಳಿಯಲ್ಲಿ ವಿದೇಶಿ ನಿರ್ಮಿತ ಶಸ್ತ್ರಾಸ್ತ್ರಗಳು ಹಾಗೂ ಅಪಾರ ಪ್ರಮಾಣದ ಮದ್ದುಗುಂಡುಗಳನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.

    ಅಮಾನತುಗೊಂಡ ಟಿಎಂಸಿ ನಾಯಕ ಶೇಖ್‌ ಷಹಜಹಾನ್‌ (Sheikh Shahjahan) ಮತ್ತವರ ಸಹಚರರ ವಿರುದ್ಧ ಸುಲಿಗೆ, ಭೂಹಗರಣ ಮತ್ತು ಲೈಂಗಿಕ ದೌರ್ಜನ್ಯದ ಆರೋಪಗಳ ತನಿಖೆಯನ್ನು ಸಿಬಿಐಗೆ ವಹಿಸಿದ ನಂತರ ಈ ದಾಳಿ ನಡೆದಿದೆ. ಇದರೊಂದಿಗೆ ಕಳೆದ ಜನವರಿ 5 ರಂದು ಜಾರಿ ನಿರ್ದೇಶನಾಲಯದ (ED) ತಂಡದ ಮೇಲೆ ದಾಳಿ ನಡೆಸಿದವರಿಗೆ ಸಂಬಂಧಿಸಿದ ಅಡಗುತಾಣಗಳ ಮೇಲೂ ಸಿಬಿಐ ತಂಡ ದಾಳಿ ನಡೆಸಿದೆ.

    ಸಿಬಿಐ ದಾಳಿ ವೇಳೆ ವಿದೇಶಿ ನಿರ್ಮಿತವಾದ ಅತ್ಯಾಧುನಿಕ ಶಸ್ತ್ರಾಸ್ತ್ರಗಳು (Foreign Made Guns) ಹಾಗೂ ಅಪಾರ ಪ್ರಮಾಣದ ಮದ್ದು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಪಶ್ಚಿಮ ಬಂಗಾಳ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ನೀವು ಕಣ್ಣು ಮುಚ್ಚುವುದರಿಂದ ಜಗತ್ತು ಕತ್ತಲೆಯಾಗುವುದಿಲ್ಲ: ಮಮತಾ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

    ಸಂತ್ರಸ್ತರಿಗಾಗಿ ಸಹಾಯವಾಣಿ:
    ಈಗಾಗಲೇ ಶೇಖ್‌ ಷಹಜಹಾನ್‌ ಕುರಿತು ತನಿಖೆ ನಡೆಸುತ್ತಿರುವ ಸಿಬಿಐ ಸಂದೇಶ್‌ಖಾಲಿಯಲ್ಲಿ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ಹಾಗೂ ಭೂಮಿದಾರರಿಗಾಗಿ ಪ್ರತ್ಯೇಕ ಸಹಾಯವಾಣಿ ಮತ್ತು ಇಮೇಲ್‌ ವಿಳಾಸ ತೆರೆದಿದೆ. ಸಂತ್ರಸ್ತರು ತಮಗಾದ ಅನ್ಯಾಯ ಹೇಳಿಕೊಳ್ಳಬಹುದು, ಅವರ ಮಾಹಿತಿಗಳನ್ನು ಗೌಪ್ತವಾಗಿ ಇಡಲಾಗುತ್ತದೆ ಎಂದು ಸಿಬಿಐ ಹೇಳಿದೆ. ಈ ಬೆನ್ನಲ್ಲೇ ಒಂದೇ ದಿನ ಸುಮಾರು 50 ದೂರುಗಳು ಬಂದಿವೆ. ಶೇಖ್‌ ಷಹಜಹಾನ್‌ ಅವರಿಂದ ಭೂಕಬಳಿಕೆ ಸಂಬಂಧ ಹೆಚ್ಚಿನ ದೂರುಗಳು ಹೇಳಿಬಂದಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ನೋಟಾಗಿಂತ ಕಡಿಮೆ ಮತ ಪಡೆದ ಅಭ್ಯರ್ಥಿಗಳನ್ನು ನಿಷೇಧಿಸಿ, ಮರು ಚುನಾವಣೆಗೆ ನಿರ್ದೇಶನ ಕೋರಿ ಅರ್ಜಿ

    ಷೇಕ್‌ ಷಹಜಹಾನ್‌ ಸಿಕ್ಕಿಬಿದ್ದದ್ದು ಹೇಗೆ?
    ಜ.5 ರಂದು ಪಡಿತರ ಹಗರಣ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸಂದೇಶ್‍ಖಾಲಿಯಲ್ಲಿರುವ ಶೇಖ್ ಷಹಜಹಾನ್‍ನ ಮನೆಗೆ ಇಡಿ ಅಧಿಕಾರಿಗಳು ತೆರಳಿದ್ದರು. ಈ ವೇಳೆ ಜನರ ಗುಂಪು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿತ್ತು. ಇದಾದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ. ಬಳಿಕ ಹೈಕೋರ್ಟ್ ಸರ್ಕಾರಕ್ಕೆ ಚಾಟಿ ಬೀಸಿದ ಮೇಲೆ, ತಲೆಮರೆಸಿಕೊಂಡ 55 ದಿನಗಳ ಬಳಿಕ ಫೆ.29 ರಂದು ಆತನನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: 2nd Phase Voting: ಹೇಮ ಮಾಲಿನಿಗಿಂತಲೂ ಸ್ಟಾರ್‌ ಚಂದ್ರು ಅತ್ಯಂತ ಶ್ರೀಮಂತ ಅಭ್ಯರ್ಥಿ!

  • ನೀವು ಕಣ್ಣು ಮುಚ್ಚುವುದರಿಂದ ಜಗತ್ತು ಕತ್ತಲೆಯಾಗುವುದಿಲ್ಲ: ಮಮತಾ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

    ನೀವು ಕಣ್ಣು ಮುಚ್ಚುವುದರಿಂದ ಜಗತ್ತು ಕತ್ತಲೆಯಾಗುವುದಿಲ್ಲ: ಮಮತಾ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

    – ಸಂದೇಶ್‍ಖಾಲಿ ಪ್ರಕರಣ ಪಶ್ಚಿಮ ಬಂಗಾಳ ಮಹಿಳೆಯರಿಗೆ ಸುರಕ್ಷಿತ ಎಂದು ಹೇಳುತ್ತದೆಯೇ?

    ಕೋಲ್ಕತ್ತಾ: ಸಂದೇಶ್‍ಖಾಲಿ (Sandeshkhali) ಪ್ರಕರಣದ ವಿಚಾರವಾಗಿ ಮಮತಾ ಬ್ಯಾನರ್ಜಿ (Mamata Banerjee) ಸರ್ಕಾರವನ್ನು ಕಲ್ಕತ್ತಾ ಹೈಕೋರ್ಟ್ (Calcutta High Court) ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಈ ಪ್ರಕರಣದಲ್ಲಿ 100% ಜವಾಬ್ದಾರಿ ಆಡಳಿತ ಪಕ್ಷದ ಮೇಲಿದೆ. 55 ದಿನಗಳು ನೀವು ಕಣ್ಣಾಮುಚ್ಚಾಲೆ ಆಡಿದ್ದೀರಿ. ಅಲ್ಲದೇ ಅಸ್ಪಷ್ಟ ನಿಲುವು ತೆಗೆದುಕೊಂಡಿದ್ದೀರಿ. ನೀವು ಕಣ್ಣು ಮುಚ್ಚುವುದರಿಂದ ಜಗತ್ತು ಕತ್ತಲೆಯಾಗುವುದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಟಿಎಸ್ ಶಿವಜ್ಞಾನಂ ನೇತೃತ್ವದ ಪೀಠ ಸರ್ಕಾರದ ವಿರುದ್ಧ ಚಾಟಿ ಬೀಸಿದೆ.

    ಸಂದೇಶಖಾಲಿಯಲ್ಲಿ ನಡೆದ ಸುಲಿಗೆ, ಭೂಹಗರಣ ಮತ್ತು ಲೈಂಗಿಕ ದೌರ್ಜನ್ಯದ ಪ್ರಕರಣವನ್ನು ವಿಚಾರಣೆ ನಡೆಸುತ್ತಿರುವ ನ್ಯಾಯಾಲಯ, ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ. ಪ್ರಕರಣದಲ್ಲಿ ಒಂದು ಅಫಿಡವಿಟ್ ಸರಿಯಾಗಿದ್ದರೂ ಅದು ನಾಚಿಕೆಗೇಡಿನ ಸಂಗತಿ. ಒಂದು ಪರ್ಸೆಂಟ್ ನಿಜವಾಗಿದ್ದರೂ ಅದು ಸಂಪೂರ್ಣ ನಾಚಿಕೆಗೇಡಿನ ಸಂಗತಿ. ಇದು ಪಶ್ಚಿಮ ಬಂಗಾಳ ಮಹಿಳೆಯರಿಗೆ ಸುರಕ್ಷಿತ ಎಂದು ಹೇಳುತ್ತದೆಯೇ? ಇಡೀ ಜಿಲ್ಲಾಡಳಿತ ಮತ್ತು ಆಡಳಿತ ಪಕ್ಷ ಇದರ ನೈತಿಕ ಹೊಣೆಗಾರಿಕೆಯನ್ನು ಹೊಂದಿರುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಇದನ್ನೂ ಓದಿ: ಧರ್ಮಸ್ಥಳದ ಮಂಜುನಾಥನಂತೆ ಡಾ.ಮಂಜುನಾಥ್ – ಗುಣಗಾನ ಮಾಡಿದ ಮುನಿರತ್ನ

    ಇದೇ ವೇಳೆ ಶೇಖ್ ಷಹಜಹಾನ್‍ನನ್ನು (Shahjahan) ಪ್ರತಿನಿಧಿಸುವ ವಕೀಲರು ಹೈಕೋರ್ಟ್‍ನಿಂದ ಕಠಿಣ ವಾಗ್ದಂಡನೆಗೆ ಗುರಿಯಾದರು.

    ಜ.5 ರಂದು ಪಡಿತರ ಹಗರಣ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸಂದೇಶ್‍ಖಾಲಿಯಲ್ಲಿರುವ ಶೇಖ್ ಷಹಜಹಾನ್‍ನ ಮನೆಗೆ ಇಡಿ ಅಧಿಕಾರಿಗಳು ತೆರಳಿದ್ದರು. ಈ ವೇಳೆ ಜನರ ಗುಂಪು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿತ್ತು. ಇದಾದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ. ಬಳಿಕ ಹೈಕೋರ್ಟ್ ಸರ್ಕಾರಕ್ಕೆ ಚಾಟಿ ಬೀಸಿದ ಮೇಲೆ, ತಲೆಮರೆಸಿಕೊಂಡ 55 ದಿನಗಳ ಬಳಿಕ ಫೆ.29 ರಂದು ಆತನನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: ನಾನೇನು ತಪ್ಪು ಮಾಡಿಲ್ಲ, 10 ತಿಂಗ್ಳು ಅಜ್ಞಾತವಾಸ ಅನುಭವಿಸಿದ್ದೇನೆ: ಸುಧಾಕರ್ ಕಣ್ಣೀರು

  • 2011ರಿಂದ ನಾವು ವೋಟ್‌ ಮಾಡಿಲ್ಲ: ಸಂದೇಶ್‌ಖಾಲಿ ಸಂತ್ರಸ್ತೆ, ಬಿಜೆಪಿ ಅಭ್ಯರ್ಥಿಗೆ ಮೋದಿ ಕರೆ

    2011ರಿಂದ ನಾವು ವೋಟ್‌ ಮಾಡಿಲ್ಲ: ಸಂದೇಶ್‌ಖಾಲಿ ಸಂತ್ರಸ್ತೆ, ಬಿಜೆಪಿ ಅಭ್ಯರ್ಥಿಗೆ ಮೋದಿ ಕರೆ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi), ಅವರು ಇಂದು ಬಂಗಾಳದ ಸಂದೇಶ್‌ಖಾಲಿಯಿಂದ (Sandeshkhali Victim) ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆ, ಹಾಲಿ ಬಸಿರ್‌ಹತ್ ಲೋಕಸಭಾ ಕ್ಷೇತ್ರದ (Basirhat Lok Sabha Election) ಬಿಜೆಪಿ ಅಭ್ಯರ್ಥಿ ರೇಖಾ ಪಾತ್ರಾ (Rekha Patra) ಅವರಿಗೆ ಕರೆ ಮಾಡಿ ಚುನಾವಣಾ ಸಿದ್ಧತೆಗಳ ಬಗ್ಗೆ ಕೇಳಿದ್ದಾರೆ.

    ರೇಖಾ ಪಾತ್ರಾ ಅವರನ್ನು ಶಕ್ತಿ ಸ್ವರೂಪ ಎಂದು ಬಣ್ಣಿಸಿದ ಮೋದಿ ಸಂದೇಶಖಾಲಿಯ ಮಹಿಳೆಯರಿಗೆ ನೀವು ದೇವರಿದ್ದಂತೆ. ನಿಮ್ಮನ್ನು ಅಭ್ಯರ್ಥಿಯನ್ನಾಗಿ ಮಾಡುವ ಮೂಲಕ ಬಿಜೆಪಿ ಉತ್ತಮ ಕೆಲಸ ಮಾಡಿದೆ ಎಂದರು. ಇದನ್ನೂ ಓದಿ: ಮೋದಿ.. ಮೋದಿ ಎನ್ನುವವರ ಕಪಾಳಕ್ಕೆ ಹೊಡೆಯಿರಿ: ಕಾಂಗ್ರೆಸ್‌ ಸಚಿವರ ಹೇಳಿಕೆಗೆ ಬಿಜೆಪಿ ಕಿಡಿ

    ಟಿಎಂಸಿ (TMC) ಕಿರುಕುಳದ ಬಗ್ಗೆ ಮೋದಿ ಅವರಲ್ಲಿ ದೂರು ನೀಡಿದ ರೇಖಾ ಪಾತ್ರಾ, 2011 ರಿಂದ ನಾವು ಇಲ್ಲಿ ಮತದಾನ ಮಾಡಲು ಸಾಧ್ಯವಾಗಲಿಲ್ಲ. ತೃಣಮೂಲ ಕಾಂಗ್ರೆಸ್ ನಾಯಕರು ಕಿರುಕುಳ ನೀಡುತ್ತಿದ್ದಾರೆ. ನಮಗೆ ನಮ್ಮ ಮತಗಳನ್ನು ಚಲಾಯಿಸಲು ಸೂಕ್ತ ಭದ್ರತೆಯನ್ನು (Security) ನೀಡುವಂತೆ ನಾವು ಮನವಿ ಮಾಡುತ್ತೇವೆ ಎಂದು ಕೇಳಿಕೊಂಡರು. ಇದನ್ನೂ ಓದಿ: ತೆಲಂಗಾಣ ಮಾಜಿ ಸಿಎಂ ಪುತ್ರಿ ಕವಿತಾಗೆ 14 ದಿನ ಜೈಲು

    ನಾನು ಹಿಂದುಳಿದ ಕುಟುಂಬದಿಂದ ಬಂದಿದ್ದು ನನ್ನ ಪತಿ ಚೆನ್ನೈನಲ್ಲಿ ಕೆಲಸ ಮಾಡುತ್ತಾರೆ. ನಾವು ಜೀವನೋಪಾಯಕ್ಕಾಗಿ ಕಷ್ಟಪಡುತ್ತೇವೆ. ಜನರು ಇಲ್ಲಿ ಕೆಲಸ ಮಾಡುತ್ತಿದ್ದು ರಾಜ್ಯವನ್ನು ತೊರೆಯಬೇಕಾಗಿಲ್ಲ ಎಂದು ಖಚಿತಪಡಿಸಿಕೊಳ್ಳಲು ನಾನು ಏನನ್ನಾದರೂ ಮಾಡಲು ಬಯಸುತ್ತೇನೆ ಎಂದು ಅವರು ಹೇಳಿದರು.

    ಈ ವೇಳೆ ಮೋದಿ ನಿಮಗೆ ಗೆಲುವು ಸಿಗುವ ವಿಶ್ವಾಸವಿದೆ. ನೀವು ಶಕ್ತಿ ಸ್ವರೂಪ, ನೀವು ಅಂತಹ ಶಕ್ತಿಶಾಲಿಗಳನ್ನು ಜೈಲಿಗೆ ಕಳುಹಿಸಿದ್ದೀರಿ. ಮಹಿಳೆಯರ ಗೌರವಕ್ಕಾಗಿ ನಾವು ಒಟ್ಟಾಗಿ ಹೋರಾಡುತ್ತೇವೆ, ಬಸಿರ್‌ಹತ್‌ನಲ್ಲಿ ಮಾತ್ರವಲ್ಲ ಬಂಗಾಳದಾದ್ಯಂತ ನಿಮಗೆ ಬೆಂಬಲವಿದೆ ಎಂದು ತಿಳಿಸಿದರು.

    ಬಂಗಾಳ ದುರ್ಗಾಪೂಜೆಯ ನಾಡು ಮತ್ತು ನೀವು ಆ ಶಕ್ತಿಯ ಸಾಕಾರವಾಗಿದ್ದೀರಿ. ಸಂದೇಶಖಾಲಿ ಮಹಿಳೆಯರ ಧ್ವನಿ ಎತ್ತುವುದು ಸುಲಭವಲ್ಲ, ಬಂಗಾಳದ ನಾರಿ ಶಕ್ತಿಯು ಈ ಬಾರಿ ನಮ್ಮನ್ನು ಆಶೀರ್ವದಿಸುತ್ತದೆ ಎಂದು ನಾನು ಭಾವಿಸುತ್ತೇವೆ. ತೃಣಮೂಲ ಕಾಂಗ್ರೆಸ್‌ನಿಂದ ಜನರು ಕಂಗಾಲಾಗಿದ್ದು, ನಿಮಗೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಮೋದಿ ಹೇಳಿದರು.

     

    ಸಂದೇಶ್‌ಖಾಲಿಯಲ್ಲಿ ಇಡಿ ಅಧಿಕಾರಿಗಳ ಮೇಲೆ ದಾಳಿ, ಬುಡಕಟ್ಟು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ, ರೈತರ ಕೃಷಿ ಜಮೀನು ಅತಿಕ್ರಮಣ ಸೇರಿ ಹಲವು ಪ್ರಕರಣಗಳಲ್ಲಿ ಟಿಎಂಸಿ ನಾಯಕ ಶೇಖ್ ಶಹಜಹಾನ್‌ನನ್ನು ಈಗ ಬಂಧಿಸಲಾಗಿದೆ. ಶಹಜಹಾನ್ ಶೇಖ್‌ಗೆ ಸಂಬಂಧಿಸಿದ 12.78 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಲಾಗಿದೆ. ಸಂದೇಶ್‌ಖಾಲಿಯಲ್ಲಿರುವ ಕೃಷಿ ಭೂಮಿ, ಕೋಲ್ಕತ್ತಾದಲ್ಲಿರುವ ಅಪಾರ್ಟ್ಮೆಂಟ್, ಬ್ಯಾಂಕ್ ಠೇವಣಿ ಸೇರಿ ಹಲವು ಆಸ್ತಿಗಳನ್ನು ಇಡಿ ಜಪ್ತಿ ಮಾಡಿದೆ. ಆತನಿಂದ ದೌರ್ಜನ್ಯ ಅನುಭವಿಸಿದ ರೇಖಾ ಪಾತ್ರಾ ಅವರನ್ನು ಬಿಜೆಪಿ ಈಗ ಕಣಕ್ಕೆ ಇಳಿಸಿದೆ.

     

  • ಸಂದೇಶ್‍ಖಾಲಿ ಹಿಂಸಾಚಾರ ಪ್ರಕರಣ – ಶೇಖ್ ಷಹಜಹಾನ್‍ಗೆ ಸಿಬಿಐ ಕಸ್ಟಡಿ ವಿಸ್ತರಣೆ

    ಸಂದೇಶ್‍ಖಾಲಿ ಹಿಂಸಾಚಾರ ಪ್ರಕರಣ – ಶೇಖ್ ಷಹಜಹಾನ್‍ಗೆ ಸಿಬಿಐ ಕಸ್ಟಡಿ ವಿಸ್ತರಣೆ

    ಕೋಲ್ಕತ್ತಾ: ಸಂದೇಶ್‍ಖಾಲಿಯಲ್ಲಿ (Sandeshkhali) ಇಡಿ ಅಧಿಕಾರಿಗಳ ಮೇಲೆ ದಾಳಿ ನಡೆಸಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ತೃಣಮೂಲ ಕಾಂಗ್ರೆಸ್‍ನಿಂದ (TMC) ಅಮಾನತಾಗಿರುವ ಆರೋಪಿ ಶೇಖ್ ಷಹಜಹಾನ್‍ನ (Sheikh Shahjahan) ಕೇಂದ್ರೀಯ ತನಿಖಾ ದಳದ (CBI) ಕಸ್ಟಡಿಯನ್ನು ಮತ್ತೆ ನಾಲ್ಕು ದಿನಗಳವರೆಗೆ ನ್ಯಾಯಾಲಯ (Court) ವಿಸ್ತರಿಸಿದೆ.

    ಪಶ್ಚಿಮ ಬಂಗಾಳದ (West Bengal) ಬಸಿರ್‍ಹತ್‍ನ ನ್ಯಾಯಾಲಯ ಕೇಂದ್ರೀಯ ಸಂಸ್ಥೆಯ ಅರ್ಜಿಯ ಆಧಾರದ ಮೇಲೆ ಈ ಆದೇಶ ನೀಡಿದೆ. ಕೋಲ್ಕತ್ತಾ ಹೈಕೋರ್ಟ್‍ನ ಆದೇಶದ ಮೇರೆಗೆ ತನಿಖೆಯ ವರ್ಗಾವಣೆಯೊಂದಿಗೆ ಮಾರ್ಚ್ 6 ರಂದು ಸಿಬಿಐ ಶೇಖ್ ಷಹಜಹಾನ್‍ನನ್ನು ಕಸ್ಟಡಿಗೆ ಪಡೆದುಕೊಂಡಿತ್ತು. ಇದೀಗ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಪರಿಗಣಿಸಿ ನಾಲ್ಕು ದಿನಗಳ ಕಾಲ ಕಸ್ಟಡಿಯನ್ನು ವಿಸ್ತರಿಸಿದೆ. ಅಲ್ಲದೇ ಮಾ.14 ರಂದು ವಿಚಾರಣೆಗೆ ಹಾಜರುಪಡಿಸುವಂತೆ ನ್ಯಾಯಾಲಯ ಸೂಚಿಸಿದೆ. ಇದನ್ನೂ ಓದಿ: ಮಸೀದಿ, ಮದರಸಾಗಳಲ್ಲಿ ಎನ್‍ಐಎ ದಾಳಿ ನಡೆಸಿದ್ರೆ ರಾಮೇಶ್ವರಂ ಕೆಫೆ ಸ್ಫೋಟ ಆರೋಪಿ ಪತ್ತೆಯಾಗಬಹುದು: ಶರಣ್ ಪಂಪ್‍ವೆಲ್

    ಜ.5 ರಂದು ಪಡಿತರ ಹಗರಣ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಸಂದೇಶ್‍ಖಾಲಿಯಲ್ಲಿರುವ ಶೇಖ್ ಷಹಜಹಾನ್‍ನ ಮನೆಗೆ ಇಡಿ ಅಧಿಕಾರಿಗಳು ತೆರಳಿದ್ದರು. ಈ ವೇಳೆ ಜನರ ಗುಂಪು ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿತ್ತು. ಇದಾದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ. ಬಳಿಕ ಹೈಕೋರ್ಟ್ ಸರ್ಕಾರಕ್ಕೆ ಚಾಟಿ ಬೀಸಿದ ಮೇಲೆ, ತಲೆಮರೆಸಿಕೊಂಡ 55 ದಿನಗಳ ಬಳಿಕ ಫೆ.29 ರಂದು ಆತನನ್ನು ಬಂಧಿಸಲಾಗಿತ್ತು. ಇದನ್ನೂ ಓದಿ: ಯೋಗಿ ಆದಿತ್ಯನಾಥ್ ಡೀಪ್‍ಫೇಕ್ ವೀಡಿಯೋ ವೈರಲ್

  • ಶೇಖ್ ಷಹಜಹಾನ್‍ನ 43 ಪ್ರಕರಣಗಳು ನಿಮ್ಮನ್ನು 10 ವರ್ಷ ಬ್ಯುಸಿಯಾಗಿಡಲಿದೆ: ವಕೀಲರಿಗೆ ಕೋರ್ಟ್ ಚಾಟಿ

    ಶೇಖ್ ಷಹಜಹಾನ್‍ನ 43 ಪ್ರಕರಣಗಳು ನಿಮ್ಮನ್ನು 10 ವರ್ಷ ಬ್ಯುಸಿಯಾಗಿಡಲಿದೆ: ವಕೀಲರಿಗೆ ಕೋರ್ಟ್ ಚಾಟಿ

    ಕೋಲ್ಕತ್ತಾ: ಸಂದೇಶ್‍ಖಾಲಿ (Sandeshkhali) ಪ್ರಕರಣದ ಆರೋಪಿ ಶೇಖ್ ಷಹಜಹಾನ್ (Sheikh Shahjahan) ಪರ ವಕೀಲರಿಗೆ ಕೋಲ್ಕತ್ತಾ ಹೈಕೋರ್ಟ್ (Calcutta High Court) ಚಾಟಿ ಬೀಸಿದೆ. ಆರೋಪಿ ವಿರುದ್ಧದ ಜಾಮೀನು ಅರ್ಜಿ ವಿಚಾರಣೆ ವೇಳೆ, 43 ಪ್ರಕರಣಗಳು ನಿಮ್ಮನ್ನು 10 ವರ್ಷಗಳ ಕಾಲ ಬ್ಯುಸಿಯಾಗಿಡಲಿದೆ ಎಂದು ನ್ಯಾಯಾಲಯ ಹೇಳಿದೆ.

    ಆರೋಪಿ ಪರ ವಕೀಲ, ಜಾಮೀನು ಅರ್ಜಿ ವಿಚಾರಣೆಯನ್ನು ತ್ವರಿತವಾಗಿ ನಡೆಸಬೇಕು ಎಂದು ನ್ಯಾಯಾಲಯದ ಮುಂದೆ ಮನವಿ ಮಾಡಿದ್ದರು. ಈ ವೇಳೆ ಮುಖ್ಯ ನ್ಯಾಯಮೂರ್ತಿ ಟಿಎಸ್ ಶಿವಜ್ಞಾನಂ, ಆರೋಪಿ ವಿರುದ್ಧ ಸುಮಾರು 43 ಪ್ರಕರಣಗಳಿವೆ. ಈಗ ಮುಂದಿನ 10 ವರ್ಷಗಳವರೆಗೆ ಈ ವ್ಯಕ್ತಿ ನಿಮ್ಮನ್ನು ಕಾರ್ಯನಿರತವಾಗಿರಿಸಿಕೊಳ್ಳುತ್ತಾನೆ. ಮುಂದಿನ 10 ವರ್ಷಗಳವರೆಗೆ ನೀವು ಆತನ ಎಲ್ಲಾ ಪ್ರಕರಣಗಳನ್ನು ನಿಭಾಯಿಸಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

    ನ್ಯಾಯಾಲಯ ಆರೋಪಿಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದು, ಆರೋಪಿ ಬಗ್ಗೆ ಯಾವುದೇ ಸಹಾನುಭೂತಿಯನ್ನು ಹೊಂದಿಲ್ಲ. ನೀವು ಸೋಮವಾರ ಬನ್ನಿ ಎಂದು ವಕೀಲರಿಗೆ ಸೂಚಿಸಿದೆ.

    ಪ್ರಕರಣದ ವಿಚಾರವಾಗಿ ಬುಧವಾರ ನ್ಯಾಯಾಲಯವು, 50 ದಿನಗಳಿಗಿಂತ ಹೆಚ್ಚು ಕಾಲ ಷಹಜಹಾನ್‍ನನ್ನು ಬಂಧಿಸಲು ವಿಫಲವಾಗಿದ್ದಕ್ಕೆ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಇಷ್ಟು ದಿನ ಪರಾರಿಯಾಗಿರುವ ವ್ಯಕ್ತಿಯನ್ನು ಬಂಧಿಸದೇ ರಾಜ್ಯವು ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುವಂತಿಲ್ಲ ಎಂದು ಪೀಠ ಎಚ್ಚರಿಸಿತ್ತು.

    ಸಂದೇಶ್‍ಖಾಲಿ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಲೈಂಗಿಕ ದೌರ್ಜನ್ಯ ಮತ್ತು ಭೂಕಬಳಿಕೆ ಆರೋಪದ ಮೇಲೆ ಪಶ್ಚಿಮ ಬಂಗಾಳ ಪೊಲೀಸರು ತೃಣಮೂಲ ಕಾಂಗ್ರೆಸ್ (Trinamool Congress) ನಾಯಕ ಶೇಖ್ ಷಹಜಹಾನ್‍ನನ್ನು ಬುಧವಾರ ಮಧ್ಯರಾತ್ರಿ ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಯನ್ನು 10 ದಿನಗಳ ಕಸ್ಟಡಿಗೆ ನೀಡಲಾಗಿದೆ.

  • ಶೇಖ್ ಷಹಜಹಾನ್ 6 ವರ್ಷ ಪಕ್ಷದಿಂದ ಅಮಾನತು – ಬ್ರಿಜ್ ಭೂಷಣ್ ವಿರುದ್ಧ ಕ್ರಮ ಯಾವಾಗ ಬಿಜೆಪಿಗೆ ಟಿಎಂಸಿ ಪ್ರಶ್ನೆ

    ಶೇಖ್ ಷಹಜಹಾನ್ 6 ವರ್ಷ ಪಕ್ಷದಿಂದ ಅಮಾನತು – ಬ್ರಿಜ್ ಭೂಷಣ್ ವಿರುದ್ಧ ಕ್ರಮ ಯಾವಾಗ ಬಿಜೆಪಿಗೆ ಟಿಎಂಸಿ ಪ್ರಶ್ನೆ

    ಕೋಲ್ಕತ್ತಾ: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಅವರ ಭೂಮಿಯನ್ನು ಕಬಳಿಸಿದ ಸಂದೇಶ್‍ಖಾಲಿ ಪ್ರಕರಣದ ಪ್ರಮುಖ ಆರೋಪಿ ಶೇಖ್ ಷಹಜಹಾನ್‍ನನ್ನು (Sheikh Shahjahan) ತೃಣಮೂಲ ಕಾಂಗ್ರೆಸ್ (Trinamool Congress) ಅಮಾನತುಗೊಳಿಸಿದೆ. ಪಶ್ಚಿಮ ಬಂಗಾಳ ಪೊಲೀಸರು ಆತನನ್ನು ಬಂಧಿಸಿದ ಕೆಲವೇ ಗಂಟೆಗಳಲ್ಲಿ ಪಕ್ಷವು ಷಹಜಹಾನ್‍ನನ್ನು ಆರು ವರ್ಷಗಳ ಕಾಲ ಪಕ್ಷದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

    ಟಿಎಂಸಿ ನಾಯಕ ಡೆರೆಕ್ ಓಬ್ರೇನ್, ಪಶ್ಚಿಮ ಬಂಗಾಳದ (West Bengal) ಸಚಿವ ಬ್ರತ್ಯಾ ಬಸು ಅವರು ಈ ನಿರ್ಧಾರವನ್ನು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಅಲ್ಲದೇ, ಬಿಜೆಪಿ ಸಂದೇಶ್‍ಖಾಲಿ ವಿಷಯದಲ್ಲಿ ಪ್ರತಿಭಟಿಸಿದ್ದು, ನಮ್ಮ ಸರ್ಕಾರ ಕಾನೂನನ್ನು ಎತ್ತಿಹಿಡಿಯಲು ಬದ್ಧವಾಗಿದೆ. ಇನ್ನೂ ಬಿಜೆಪಿಯ ಕಳಂಕಿತ ನಾಯಕ, ಭಾರತದ ಮಾಜಿ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ವಿರುದ್ಧ ಯಾವಾಗ ಕ್ರಮ ಕೈಗೊಳ್ಳುತ್ತೀರಿ ಎಂದು ಟಿಎಂಸಿ ನಾಯಕರು ಬಿಜೆಪಿಗೆ ಸವಾಲು ಹಾಕಿದ್ದಾರೆ. ಇದನ್ನೂ ಓದಿ: 55 ದಿನಗಳಿಂದ ತಲೆಮರೆಸಿಕೊಂಡಿದ್ದ ಟಿಎಂಸಿ ನಾಯಕ ಅರೆಸ್ಟ್‌

    ಶೇಖ್ ಷಹಜಹಾನ್ ಪ್ರಕರಣದಲ್ಲಿ ಏನೇನಾಯ್ತು?
    ಜನವರಿ 5ರಂದು ಇಡಿ ತಂಡ ಷಹಜಹಾನ್ ಮನೆ ಮೇಲೆ ದಾಳಿ ಮಾಡಲು ತೆರಳಿದ್ದಾಗ, ಆತನ ಬೆಂಬಲಿಗರಿಂದ ಅಧಿಕಾರಿಗಳ ಮೇಲೆ ದಾಳಿಯಾಗಿತ್ತು. ಬಳಿಕ ಶೇಖ್ ಷಹಜಹಾನ್ ಸಂದೇಶ್‍ಖಾಲಿಯಿಂದ ತಪ್ಪಿಸಿಕೊಂಡಿದ್ದ. ಜನವರಿ 8ರಂದು ಶೇಖ್ ಷಹಜಹಾನ್ ವಿರುದ್ಧ ಪ್ರತಿಭಟನೆಗಳು ಪ್ರಾರಂಭವಾದವು. ಸಂದೇಶ್‍ಖಾಲಿಯಲ್ಲಿ ಶೇಖ್ ಷಹಜಹಾನ್ ಮತ್ತು ಆತನ ಬೆಂಬಲಿಗರು ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿ ಆತನನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದ್ದರು. ಫೆಬ್ರವರಿ 18 ರಂದು ಸಂದೇಶ್‍ಖಾಲಿಯಲ್ಲಿ ಪ್ರತಿಭಟನೆಗಳು ತೀವ್ರಗೊಂಡವು. ಫೆಬ್ರವರಿ 18 ರಂದು ಶೇಖ್ ಷಹಜಹಾನ್ ಅವರ ಸಹಾಯಕ ಶಿಬು ಹಜ್ರಾನನ್ನು ಬಂಧಿಸಲಾಯಿತು.

    ಫೆಬ್ರವರಿ 25ರಂದು ಶೇಖ್ ಷಹಜಹಾನ್ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ ಎಂದು ತೃಣಮೂಲ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಹೇಳಿಕೆ ನೀಡಿದ್ದರು. ಫೆಬ್ರವರಿ 26ರಂದು ಯಾವುದೇ ತಡೆಯಾಜ್ಞೆ ಇಲ್ಲ ಮತ್ತು ಷಹಜಹಾನ್‍ನನ್ನು ಬಂಧಿಸಬೇಕು ಎಂದು ಹೈಕೋರ್ಟ್ ಸ್ಪಷ್ಟಪಡಿಸಿತ್ತು. ಇಂದು (ಫೆ.29) ಶೇಖ್ ಷಹಜಹಾನ್‍ನನ್ನು ಪಶ್ಚಿಮ ಬಂಗಾಳ ಪೊಲೀಸರು ಬಂಧಿಸಿದ್ದಾರೆ. ಆತನನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಸಿಐಡಿ ಪ್ರಕರಣವನ್ನು ಕೈಗೆತ್ತಿಕೊಂಡಿದೆ. ಇದನ್ನೂ ಓದಿ: 1993ರ ಸರಣಿ ಬಾಂಬ್‌ಬ್ಲಾಸ್ಟ್ ಪ್ರಕರಣದ ಮಾಸ್ಟರ್ ಮೈಂಡ್ `ಡಾ. ಬಾಂಬ್’ ಖುಲಾಸೆ

  • ಸಂದೇಶ್‌ಖಾಲಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ – ಸ್ಥಳ ಪರಿಶೀಲನೆಗೆ ವಿಶೇಷ ತಂಡ ಕಳುಹಿಸಲು ನಿರ್ಧಾರ

    ಸಂದೇಶ್‌ಖಾಲಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ – ಸ್ಥಳ ಪರಿಶೀಲನೆಗೆ ವಿಶೇಷ ತಂಡ ಕಳುಹಿಸಲು ನಿರ್ಧಾರ

    – NHRC ಯಿಂದ ಪ.ಬಂಗಾಳ ಡಿಜಿಪಿಗೆ ನೋಟಿಸ್

    ನವದೆಹಲಿ: ಪಶ್ಚಿಮ ಬಂಗಾಳದ (West Bengal) ಸಂದೇಶ್‌ಖಾಲಿಯಲ್ಲಿ (Sandeshkhali) ತೃಣಮೂಲ ಕಾಂಗ್ರೆಸ್‌ನ ಪ್ರಬಲ ವ್ಯಕ್ತಿಯಿಂದ ಮಹಿಳೆಯರ ಮೇಲಿನ ಶೋಷಣೆಯ ಬಗ್ಗೆ ಆರೋಪಗಳು ಕೇಳಿಬಂದ ಬೆನ್ನಲ್ಲೇ ಪರಿಸ್ಥಿತಿ ಉದ್ವಿಗ್ನ ರೂಪಕ್ಕೆ ತಿರುಗಿದೆ. ಈ ನಡುವೆ ‘ಮಾನವ ಹಕ್ಕುಗಳ ಉಲ್ಲಂಘನೆ’ (Violation Of Human Rights)  ಆರೋಪ ಕೇಳಿಬಂದಿದ್ದು, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಪಶ್ಚಿಮ ಬಂಗಾಳ ಸರ್ಕಾರ ಮತ್ತು ರಾಜ್ಯದ ಪೊಲೀಸ್ ಮುಖ್ಯಸ್ಥರಿಗೆ ನೋಟಿಸ್ ಜಾರಿ ಮಾಡಿದೆ.

    ಉತ್ತರ 24 ಪರಗಣ ಜಿಲ್ಲೆಯಲ್ಲಿರುವ ಸಂದೇಶ್‌ಖಾಲಿಯಲ್ಲಿ ‘ಮಾನವ ಹಕ್ಕುಗಳ ಉಲ್ಲಂಘನೆ’ ಯಾಗಿದೆ ಎನ್ನಲಾಗಿದೆ. ಆದ್ದರಿಂದ ಪ್ರಕರಣದ ಸುತ್ತಲಿನ ಸತ್ಯಾಸತ್ಯತೆಗಳನ್ನು ಕಂಡುಹಿಡಿಯಲು ‘ಸ್ಥಳೀಯ ವಿಚಾರಣೆ’ ನಡೆಸಲು ಎನ್‌ಹೆಚ್‌ಆರ್‌ಸಿ ವಿಶೇಷ ತಂಡವನ್ನು ಕಳುಹಿಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

    ಎನ್‌ಎಚ್‌ಆರ್‌ಸಿ ಸದಸ್ಯರ ನೇತೃತ್ವ ಮತ್ತು ಪ್ಯಾನಲ್ ಅಧಿಕಾರಿಗಳ ಬೆಂಬಲದೊಂದಿಗೆ ತಂಡವು ಮಾನವ ಹಕ್ಕುಗಳ ಉಲ್ಲಂಘನೆಯ ಬಗ್ಗೆ ತನಿಖೆ ನಡೆಸುತ್ತದೆ. ತನಿಖೆಯ ಪ್ರಾಥಮಿಕ ಆಧಾರವಾಗಿ ಮಾಧ್ಯಮ ವರದಿಗಳನ್ನೂ ಪರಿಗಣಿಸಿದೆ.

    ಪಶ್ಚಿಮ ಬಂಗಾಳದ ಸಂದೇಶ್‌ಖಾಲಿಯಲ್ಲಿ ಮುಗ್ಧ ಮತ್ತು ಬಡ ಮಹಿಳೆಯ ಮೇಲೆ ಸ್ಥಳೀಯ ರಾಜಕೀಯ ಪ್ರಭಾವಿಯ ಗ್ಯಾಂಗ್‌ನಿಂದ ಕಿರುಕುಳ ಮತ್ತು ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂಬ ಪತ್ರಿಕೆ ಮತ್ತು ಡಿಜಿಟಲ್ ಮಾಧ್ಯಮ ವರದಿಗಳನ್ನು ಎನ್‌ಎಚ್‌ಆರ್‌ಸಿ ಸ್ವಯಂಪ್ರೇರಿತವಾಗಿ ಸ್ವೀಕರಿಸಿದೆ. ಘೋರ ಕೃತ್ಯ ಎಸಗಿದ ಕಿಡಿಗೇಡಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಸ್ಥಳೀಯ ಗ್ರಾಮಸ್ಥರು ಪ್ರತಿಭಟನೆ ಆರಂಭಿಸಿದ್ದಾರೆ. ಸ್ಥಳೀಯ ಆಡಳಿತವು ಅಪರಾಧ ಎಸಗಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿದೆ ಎಂದು ಮಾನವ ಹಕ್ಕುಗಳ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

    1993ರ ಪಿಹೆಚ್‌ಆರ್ ಕಾಯ್ದೆಯ ಸೆಕ್ಷನ್ 12 (ಎ) ಅಡಿಯಲ್ಲಿ ತನ್ನ ನ್ಯಾಯವ್ಯಾಪ್ತಿಯನ್ನು ಚಲಾಯಿಸುವುದಾಗಿ ಎನ್‌ಹೆಚ್‌ಆರ್‌ಸಿ ಹೇಳಿದೆ. ಈ ನಿಬಂಧನೆಯು ಮಾನವ ಹಕ್ಕುಗಳನ್ನು ಸಂರಕ್ಷಿಸಲು ಮತ್ತು ಉತ್ತೇಜಿಸಲು ಎನ್‌ಹೆಚ್‌ಆರ್‌ಸಿಗೆ ಅಧಿಕಾರ ನೀಡುತ್ತದೆ.

    ಸದ್ಯ ಇನ್ನೂ ನಾಲ್ಕು ವಾರಗಳಲ್ಲಿ ಘಟನೆಯ ಸಂಪೂರ್ಣ ವರದಿ ನೀಡುವಂತೆ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ನೋಟಿಸ್ ನೀಡಲಾಗಿದೆ. ಜೊತೆಗೆ ಸಂತ್ರಸ್ತರಿಗೆ ಪರಿಹಾರ ಒದಗಿಸಲಾಗಿದೆಯೇ ಅಥವಾ ಪರಿಹಾರ ಸೂಚಿಸಲು ಕ್ರಮ ಕೈಗೊಳ್ಳಲಾಗಿದೆಯೇ ಎಂಬುದನ್ನು ಅಧಿಕಾರಿಗಳು ಸ್ಪಷ್ಟಪಡಿಸುವಂತೆ ಎನ್‌ಹೆಚ್‌ಆರ್‌ಸಿ ಕೇಳಿದೆ.