Tag: ಸಂಧಾನ ವಿಫಲ

  • ಅಯೋಧ್ಯೆ ಭೂ ವಿವಾದ ಪ್ರಕರಣ: ಸಂಧಾನ ಸಮಿತಿ ವಿಫಲ

    ಅಯೋಧ್ಯೆ ಭೂ ವಿವಾದ ಪ್ರಕರಣ: ಸಂಧಾನ ಸಮಿತಿ ವಿಫಲ

    – ಆಗಸ್ಟ್ 6 ರಿಂದ ಸುಪ್ರೀಂ ದಿನಪತ್ರಿ ವಿಚಾರಣೆ

    ನವದೆಹಲಿ: ರಾಮಜನ್ಮ ಭೂಮಿ ಅಯೋಧ್ಯೆ ಪ್ರಕರಣ ಸಂಬಂಧ ರಚನೆ ಮಾಡಲಾಗಿದ್ದ ಸಂಧಾನ ಸಮಿತಿ ವಿಫಲವಾಗಿದ್ದು, ಆಗಸ್ಟ್ 6 ರಿಂದ ಸುಪ್ರೀಂ ಕೋಟ್ ದಿನನಿತ್ಯ ವಿಚಾರಣೆಯನ್ನು ಆರಂಭ ಮಾಡಲಿದೆ.

    ಸುಪ್ರೀಂ ಕೋರ್ಟ್ ಅಯೋಧ್ಯೆ ವಿವಾದವನ್ನು ಪರಿಹಾರಿಸಿಕೊಳ್ಳಲು ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಫ್‍ಎಂಐ ಕಲಿಫುಲ್ಲಾ, ಧರ್ಮಗುರು ಹಾಗೂ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ರವಿಶಂಕರ್ ಗುರೂಜಿ ಹಾಗೂ ಹಿರಿಯ ವಕೀಲ ಶ್ರೀರಾಮ್ ಮಂಚು ಅವರನ್ನು ಒಳಗೊಂಡ ತ್ರಿಸದಸ್ಯ ಸಮಿತಿಯನ್ನು ರಚಿಸಿತ್ತು. ಆದರೆ ಈ ವಿವಾದವನ್ನು ಬಗೆಹರಿಸಲು ಸಮಿತಿ ವಿಫಲವಾಗಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ದಿನ ನಿತ್ಯ ವಿಚಾರಣೆ ನಡೆಸಲಿದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾ. ರಂಜನ್ ಗೊಗೊಯಿ ಹೇಳಿದ್ದಾರೆ. ಅಲ್ಲದೇ ಎರಡು ಕಡೆಯವರು ದಿನನಿತ್ಯದ ವಿಚಾರಣೆ ಬೇಕಾದ ಮಾಹಿತಿಯನ್ನು ಸಿದ್ಧಪಡಿಸಿಕೊಳ್ಳಲು ಸೂಚನೆಯನ್ನು ನ್ಯಾಯಪೀಠ ನೀಡಿದೆ.

    ಮಾರ್ಚ್ ತಿಂಗಳಿನಲ್ಲಿ ರಚನೆಯಾಗಿದ್ದ ಸಂಧಾನ ಸಮಿತಿ ರಚಿಸಿ 8 ವಾರಗಳ ಕಾಲಾವಕಾಶವನ್ನು ನೀಡಲಾಗಿತ್ತು. ಆದರೆ ಗುರುವಾರ ನ್ಯಾಯಾಲಯಕ್ಕೆ ತನ್ನ ವರದಿಯನ್ನು ಸಲ್ಲಿಕೆ ಮಾಡಿತ್ತು. ಈ ವರದಿಯಲ್ಲಿ ಎರಡು ಕಡೆಯವರು ಕೂಡ ಪರಿಹಾರ ಕಂಡುಕೊಳ್ಳುವಲ್ಲಿ ವಿಫಲರಾಗಿದ್ದರು ಎಂದು ತಿಳಿಸಿತ್ತು.

    2010 ರಲ್ಲಿ ಅಲಹಾಬಾದ್ ನ್ಯಾಯಾಲಯ ಅಯೋಧ್ಯೆ ಕುರಿತು ತೀರ್ಪು ನೀಡಿತ್ತು. ಈ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟಿನಲ್ಲಿ 14 ಮೇಲ್ಮನವಿ ಅರ್ಜಿಗಳು ಸಲ್ಲಿಕೆ ಮಾಡಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ ಸಂಧಾನ ಮೂಲಕವೇ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ಸೂಚನೆ ನೀಡಿತ್ತು. ಆದರೆ ಈ ಸಂದರ್ಭದಲ್ಲೇ ಹಿಂದೂ ಧರ್ಮದ ಸಂಘಟನೆಗಳು 1950 ರಿಂದಲೂ ತೀರ್ಪಿಗಾಗಿ ಕಾಯುತ್ತಿದ್ದು, ಸಂಧಾನದಿಂದ ಇದರ ಪರಿಹಾರ ಸಾಧ್ಯವಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದರು. ಇತ್ತ 2.7 ಎಕರೆ ಮಾತ್ರ ವಿವಾದಿತ ಪ್ರದೇಶ ಆಗಿರುವುದರಿಂದ ಮಧ್ಯಸ್ಥಿಕೆವೊಂದೇ ಪರಿಹಾರ ಮಾರ್ಗ ಎಂದು ವಕ್ರ್ಫ್ ಬೋರ್ಡ್ ಹೇಳಿತ್ತು.