ಬೆಂಗಳೂರು: ಸಚಿವ ಸಂಪುಟ ಸಭೆಯಲ್ಲಿ (Cabinet Meeting) ಇವತ್ತು ಸಿಎಂ ಆಪ್ತ ಸಚಿವ ಹೆಚ್.ಸಿ ಮಹದೇವಪ್ಪ (HC Mahadevappa) ರೋಷಾವೇಶ ಜೋರಾಗಿತ್ತು ಎನ್ನಲಾಗಿದೆ. ಇಬ್ಬರು ಸಿಎಂ ಆಪ್ತ ಸಚಿವರ ನಡುವೆ ಕಾವೇರಿದ ಚಕಮಕಿ ಆಗಿದ್ದು, ಸಿಎಂ (Siddaramaiah) ಇಬ್ಬರನ್ನ ಸಮಾಧಾನಪಡಿಸಿದ್ರು ಎಂದು ಮೂಲಗಳಿಂದ ಗೊತ್ತಾಗಿದೆ.p
ಗಂಗಾ ಕಲ್ಯಾಣ ಯೋಜನೆಗೆ ಸಂಬಂಧಿಸಿದ ವಿಷಯದಲ್ಲಿ ಜಟಾಪಟಿ ನಡೆದಿದ್ದು, ನಾನು ಎದ್ದು ಹೊರಟೇ ಬಿಡುತ್ತೇನೆ ಎಂದು ಹೆಚ್.ಸಿ ಮಹದೇವಪ್ಪ ಕೂಗಾಡಿದ್ದಾರೆ. ಎಸ್‌ಸಿಪಿ, ಟಿಎಸ್‌ಪಿ ಹಣ ಸರಿಯಾಗಿ ಬಳಕೆ ಆಗುತ್ತಿಲ್ಲ, ಹಂಚಿಕೆ ಆದ ಹಣವನ್ನ ಬೇರೆ ಕಡೆ ಬಳಕೆ ಮಾಡುತ್ತಿದ್ದೀರಿ. ಸಮುದಾಯಕ್ಕೆ ಅನ್ಯಾಯ ಆಗುತ್ತಿದೆ. ಈಗ ಹಣ ಕೊಡಿ ಅಂದ್ರೆ ಅಂತಾ ಜೋರು ದ್ಚನಿಯಲ್ಲಿ ಆಕ್ರೋಶ ಹೊರಹಾಕಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: 1,545 ಕೋಟಿ ನೆರೆ ಪರಿಹಾರ ಕೇಳಲು ಕೇಂದ್ರಕ್ಕೆ ಮನವಿ: ಕ್ಯಾಬಿನೆಟ್ ಸಭೆ ನಿರ್ಧಾರ
ಸ್ವತಃ ಸಿಎಂ ಅವರ ಬಳಿಯೂ ಕೂಗಾಡಿದ್ದಾರೆ ಎನ್ನಲಾಗಿದೆ. ಏಕಾಏಕಿ ಮಹದೇವಪ್ಪ ಆಕ್ರೋಶ ಕಂಡು ಸಂಪುಟ ಸಹೋದ್ಯೋಗಿಗಳು ಕಕ್ಕಾಬಿಕ್ಕಿ ಆಗಿದ್ದರು. ಆದಾದ ಬಳಿಕ ಸಿಎಂ ಸಿದ್ದರಾಮಯ್ಯ ಮಧ್ಯಪ್ರವೇಶ ಮಾಡಿ ನಾವು ಮೂವರು ಕುಳಿತು ಮಾತಾಡೋಣ. ವಿದ್ಯುತ್ ಶುಲ್ಕ ಹೆಚ್ಚಳದ ಬಗ್ಗೆ ತೀರ್ಮಾನ ಮಾಡೋಣ ಎಂದು ಹೇಳಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಉಡುಪಿ ಸೇರಿ ಹಲವೆಡೆ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಸರ್ಕಾರಿ ಜಾಗ ಮಂಜೂರು: ಕ್ಯಾಬಿನೆಟ್ ಅಸ್ತು
ಬೆಂಗಳೂರು: ನಗರದಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಕ್ಯಾಬಿನೆಟ್‌ನಲ್ಲಿ (Cabinet) ಇಂದು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಬೆಂಗಳೂರಿಗೆ (Bengaluru) ಒಟ್ಟು 2,296 ಕೋಟಿ ಅನುದಾನಕ್ಕೆ ಒಪ್ಪಿಗೆ ಸಿಕ್ಕಿದೆ. ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಅನುದಾನ ಒದಗಿಸಲು ಕ್ಯಾಬಿನೆಟ್ ಒಪ್ಪಿಗೆ ನೀಡಿದೆ.
ಸಿಎಂ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದಲ್ಲಿಂದು ನಡೆದ ಸಚಿವ ಸಂಪುಟ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಅನುದಾನ ಬಿಡುಗಡೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿರುವ 5 ನಗರ ಪಾಲಿಕೆಗಳಲ್ಲಿನ ವಾರ್ಡ್‌ಗಳಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗಾಗಿ ಒಟ್ಟು 2,296 ಕೋಟಿ ಮಂಜೂರಿಗೆ ಅನುಮೋದನೆ ನೀಡಿದೆ. ಇದನ್ನೂ ಓದಿ: ಚಡ್ಡಿ ಹಾಕುತ್ತಿದ್ದಾಗ ಇದ್ದ RSS ಬಿಜೆಪಿ ಪುಡಾರಿಗಳು ಬಂದ ಮೇಲೆ ಬದಲಾವಣೆ ಆಗಿದೆ: ಬೇಳೂರು ಗೋಪಾಲಕೃಷ್ಣ
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ 5 ಬೆಂಗಳೂರು ನಗರ ಪಾಲಿಕೆಗಳ ವ್ಯಾಪ್ತಿಯ ವಾರ್ಡ್ ಅಭಿವೃದ್ಧಿ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಅನುಮೋದನೆ ಸಿಕ್ಕಿದ್ದು, 1,055 ಕೋಟಿ ರೂ. ಮೊತ್ತದಲ್ಲಿ ಕಾಮಗಾರಿಗಳನ್ನ ಕೈಗೊಳ್ಳುವ ಕ್ರಿಯಾಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಿದೆ.
ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯದವರಿಗೆ ಸರ್ಕಾರದಿಂದ ಮತ್ತೊಂದು ಬಂಪರ್ ಕೊಡುಗೆ ಸಿಕ್ಕಿದೆ. ಅಲ್ಪಸಂಖ್ಯಾತರು ವಾಸಿಸುವ ನಗರ ಪ್ರದೇಶದ ಹಿಂದುಳಿದ ಕಾಲೋನಿಗಳು (Backward Colonies Of Minorities) ಮಾದರಿ ಕಾಲೋನಿಯಾಗಿ ಅಭಿವೃದ್ಧಿಗೆ ಸರ್ಕಾರ ಮುಂದಾಗಿದೆ. 22 ವಿಧಾನಸಭಾ ಕ್ಷೇತ್ರಗಳಲ್ಲಿ ಮಾದರಿ ಕಾಲೋನಿ ನಿರ್ಮಾಣಕ್ಕೆ ಸರ್ಕಾರ ತಿರ್ಮಾನ ಮಾಡಿದ್ದು, 398 ಕೋಟಿ ರೂ. ಮೊತ್ತದ ಯೋಜನೆ ಜಾರಿಗೆ ಸಂಪುಟ ಸಭೆ (Cabinet Meeting) ಒಪ್ಪಿಗೆ ಕೊಟ್ಟಿದೆ.
ಅಲ್ಪಸಂಖ್ಯಾತರು ಇರುವ ಅತಿ ಹಿಂದುಳಿದ ಹಾಗೂ ಹಿಂದುಳಿದ ಕಾಲೋನಿಗಳನ್ನು ಮಾದರಿ ಕಾಲೋನಿಗಳಾಗಿ ಅಭಿವೃದ್ಧಿಪಡಿಸುವುದು ಉದ್ದೇಶ. ಇದಕ್ಕಾಗಿ ಈಗಾಗಲೇ 1,000 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ಮೀಸಲಿಟ್ಟಿದೆ. ಆ ಮೊತ್ತಕ್ಕೆ ಕ್ರಿಯಾ ಯೋಜನೆ ಸಿದ್ಧಪಡಿಸಿ ಹಂತಹಂತವಾಗಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ತೀರ್ಮಾನಿಸಲಾಗಿದೆ. ಅದರ ಭಾಗವಾಗಿ ಈಗ 398 ಕೋಟಿ ರೂ ವೆಚ್ಚದಲ್ಲಿ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿ ಕಾಮಗಾರಿಗಳನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕೈಗೊಳ್ಳಲಿದೆ. ಇದನ್ನೂ ಓದಿ: ಸಾಹಸಸಿಂಹ ವಿಷ್ಣುವರ್ಧನ್, ಬಿ.ಸರೋಜಾದೇವಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಣೆ
ಸರ್ಕಾರದ ಈ ನಡೆಗೆ ಬಿಜೆಪಿ ನಾಯಕರು ಮತ್ತೊಂದು ಓಲೈಕೆ ರಾಜಕೀಯ ಎಂದು ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಮುಸ್ಲಿಮರಲ್ಲಿ ಬಡವರಿದ್ದಾರೆ, ದಲಿತರಲ್ಲಿ ಬಡವರಿದ್ದಾರೆ. ಈ ಬಡವರನ್ನು ಮೇಲೆತ್ತಿ, ಅಲ್ಪಸಂಖ್ಯಾತರ ಕಾಲೋನಿಗಳನ್ನು ಅಭಿವೃದ್ಧಿ ಮಾಡೋದಲ್ಲ. ಈ ತರಹದ ಓಲೈಕೆ ಬಿಡಲಿ. ಕಾಂಗ್ರೆಸ್, ಧರ್ಮ-ಧರ್ಮಗಳ ನಡುವೆ ವಿಷ ಬೀಜ ಬಿತ್ತುತ್ತಿದ್ದಾರೆ. ಇದು ಸರ್ಕಾರದ ಓಲೈಕೆ ರಾಜಕಾರಣ. ಇದು ರಾಜ್ಯದ ಜನತೆಗೂ ಗೊತ್ತಿದೆ. ಓಲೈಕೆ ಮಾಡಿ ಜನರನ್ನು ದಾರಿ ತಪ್ಪಿಸುವ ಕೆಲಸ ಇದು ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಶಾಸಕ ಸತೀಶ್ ಸೈಲ್‌ಗೆ 7 ದಿನಗಳ ಮಧ್ಯಂತರ ಜಾಮೀನು ಮಂಜೂರು
ಚಾಮರಾಜನಗರ: ಪ್ರಸಿದ್ಧ ಯಾತ್ರಾಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ (Male Mahadeshwar) ಬೆಟ್ಟದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ವಿವಿಧ ಇಲಾಖೆಗಳ 3,647 ಕೋಟಿ ರೂ. ಅನುಮೋದನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದರು.
ಸಂಪುಟ ಸಭೆ ಆರಂಭಕ್ಕೂ ಮುನ್ನ ಉಗ್ರದಾಳಿಯಲ್ಲಿ ಬಲಿಯಾದವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದ (Jammu Kashmir) ಪಹಲ್ಗಾಮ್‌ನಲ್ಲಿ (Pahalgam) ಮುಗ್ಧ ನಾಗರಿಕರ ಮೇಲೆ ಉಗ್ರರು ನಡೆಸಿದ ದಾಳಿಯನ್ನು ನಮ್ಮ ಸರ್ಕಾರವು ತೀವ್ರವಾಗಿ ಖಂಡಿಸಿದೆ. ಎಲ್ಲ ರೀತಿಯ ಉಗ್ರವಾದವನ್ನು ಬುಡಸಮೇತ ಕಿತ್ತು ಹಾಕಲು ಇಡೀ ದೇಶ ಒಂದಾಗಿ ನಿಂತು ಶ್ರಮಿಸಬೇಕು. ಈ ಘಟನೆಗೆ ಕಾರಣವಾಗಿರುವ ವೈಫಲ್ಯಗಳ ಕುರಿತು ಸಮರ್ಥವಾಗಿ ಮತ್ತು ಸಮರ್ಪಕವಾಗಿ ತನಿಖೆ ನಡೆಸಬೇಕು ಎಂದು ಖಂಡನಾ ನಿರ್ಣಯ ಕೈಗೊಳ್ಳಲಾಯಿತು ಎಂದರು.ಇದನ್ನೂ ಓದಿ: ಡಾ.ರಾಜ್ ಕುಮಾರ್ ಕನ್ನಡದ ಸಂಸ್ಕೃತಿಯ ಪ್ರತೀಕ – ಶಾಸಕ ರಿಜ್ವಾನ್ ಅರ್ಷದ್
ಇನ್ನೂ ಈ ಸಂಪುಟ ಸಭೆಯಲ್ಲಿ 78 ವಿಚಾರಗಳ ಬಗ್ಗೆ ಚರ್ಚೆಯಾಗಿದ್ದು, 3647.62 ಕೋಟಿ ರೂ. ಅನುದಾನವನ್ನು ಸಂಪುಟ ಅನುಮೋದನೆ ನೀಡಿದೆ ಎಂದರು.
ಗಡಿಜಿಲ್ಲೆಯಲ್ಲಿ ಮಾನವ-ಆನೆ ಸಂಘರ್ಷ ತಡೆಗೆ 210 ಕೋಟಿ ರೂ., ಕುಡಿಯುವ ನೀರಿನ ಯೋಜನೆಗೆ 315 ಕೋಟಿ ರೂ., ಕೊಳ್ಳೇಗಾಲದಲ್ಲಿ ಉಪವಿಭಾಗ ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯಾಗಿ ಪರಿವರ್ತನೆ ಮಾಡಿ 250 ಹಾಸಿಗೆ ಆಸ್ಪತ್ರೆ ನಿರ್ಮಾಣ ಮಾಡಲು ನಿರ್ಣಯ, ಹನೂರಿನಲ್ಲಿ ತಾಲೂಕು ಆಸ್ಪತ್ರೆ ನಿರ್ಮಾಣ, ಚಿಕ್ಕಲ್ಲೂರಲ್ಲಿ ಮಂಟೇಸ್ವಾಮಿ, ರಾಚಪ್ಪಾಜಿ ಅಭಿವೃದ್ಧಿ ಪ್ರಾಧಿಕಾರ ಪ್ರಾರಂಭಿಸಲು ತೀರ್ಮಾನ ಮಾಡಿರುವುದಾಗಿ ತಿಳಿಸಿದರು.
ಮೈಸೂರಿನ ಇಲವಾಲದಲ್ಲಿ ಕ್ರಿಕೆಟ್ ಸ್ಟೇಡಿಯಂಗೆ ನಮ್ಮ ಸರ್ಕಾರ ಸ್ಥಳ ನೀಡಲಿದ್ದು, ಅಲ್ಲಿ ಕ್ರಿಕೆಟ್ ಸಂಸ್ಥೆಯಿಂದ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಆಗಲಿದೆ. ಬದನವಾಳು ಗ್ರಾಮದಲ್ಲಿ ಖಾದಿ ಗ್ರಾಮೋದ್ಯೋಗ ಅಭಿವೃದ್ಧಿಗೆ ಬದನವಾಳುವಿಗೆ 40 ಕೋಟಿ ರೂ. ಅನುದಾನ, ಮೈಸೂರು ವಿಮಾನ ನಿಲ್ದಾಣದ ರನ್ ವೇ ವಿಸ್ತರಣೆಗೆ ಜಾಗ ಖರೀದಿಸಿ ಕೊಡುವುದು, ಮೈಸೂರಿನ ಹಳೆಯ ಜಿಲ್ಲಾಧಿಕಾರಿ ಕಚೇರಿಯನ್ನು 37 ಕೋಟಿ ರೂ. ಖರ್ಚು ಮಾಡಿ ಮ್ಯೂಸಿಯಂ ಆಗಿ ಪರಿವರ್ತನೆ, ಚಾಮರಾಜನಗರದಲ್ಲಿ ನೂತನ ಪ್ರವಾಸಿ ಮಂದಿರ ಸ್ಥಾಪನೆ, ಚಾಮರಾಜನಗರ ಜಿಲ್ಲಾಕೇಂದ್ರಕ್ಕೆ ಒಳಚರಂಡಿ, ಕುಡಿಯುವ ನೀರಿನ ವ್ಯವಸ್ಥೆ, 15 ಕೋಟಿ ರೂ. ಅನುದಾನದಲ್ಲಿ ಚಾಮರಾಜನಗರ ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿ ಮಾಡಲು ಸಂಪುಟ ಒಪ್ಪಿಗೆ ಕೊಟ್ಟಿದೆ ಎಂದರು.ಇದನ್ನೂ ಓದಿ: ಕಾಶ್ಮೀರದ ಉಗ್ರರ ದಾಳಿ ಹೊಣೆಯನ್ನ ಕೇಂದ್ರ ಸರ್ಕಾರವೇ ಹೊರಬೇಕು: ಹೆಚ್.ಸಿ ಬಾಲಕೃಷ್ಣ
ಬಿಜೆಪಿಗೆ ತಿರುಗೇಟು:
ರಾಜ್ಯದ ನಾಲ್ಕು ಕಂದಾಯ ವಿಭಾಗದಲ್ಲಿ ಸಂಪುಟ ಸಭೆ ನಡೆಸಲು ಸರ್ಕಾರ ತೀರ್ಮಾನಿಸಿದ್ದು, ಈ ಹಿಂದೆ ಕಲಬುರಗಿಯಲ್ಲಿ ಕ್ಯಾಬಿನೆಟ್ ಮೀಟಿಂಗ್ ನಡೆದಿತ್ತು. ಇಂದು ಚಾಮರಾಜನಗರದಲ್ಲಿ ನಡೆಸಿದ್ದೇವೆ. ಬೆಳಗಾವಿ ವಿಭಾಗದಲ್ಲಿ ವಿಜಯಪುರ, ಬೆಂಗಳೂರು ವಿಭಾಗದ ಸಂಪುಟ ಸಭೆಯನ್ನು ನಂದಿಬೆಟ್ಟದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದರು. ಬಿಜೆಪಿ ಅವರು ಸರ್ಕಾರದಲ್ಲಿ ದುಡ್ಡಿಲ್ಲ ಎಂದು ಸುಳ್ಳು ಹೇಳುತ್ತಾರೆ, ಸರ್ಕಾರದ ವಿರುದ್ಧದ ದ್ವೇಷದಿಂದ ಈ ಸುಳ್ಳು ಹೇಳುತ್ತಿದ್ದು, ಸರ್ಕಾರದ ಬಳಿ ಹಣ ಇಲ್ಲದಿದ್ದರೇ 3,600 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಅನುಮೋದನೆ ಕೊಡಲು ಆಗುತ್ತಿತ್ತಾ ಎಂದು ಕಿಡಿಕಾರಿದರು.
ಕೃಷ್ಣದೇವರಾಯ ಸಮಾಧಿ ಅಭಿವೃದ್ಧಿ:
ವಿಜಯನಗರದ ಪ್ರಮುಖ ಚಕ್ರವರ್ತಿ ಕೃಷ್ಣದೇವರಾಯ ಅವರ ಸಮಾಧಿಯನ್ನು ಅಭಿವೃದ್ಧಿ ಮಾಡಲು ಸಂಪುಟ ಅನುಮೋದನೆ ನೀಡಿದ್ದು, ಪ್ರಸ್ತಾವನೆ ಸಲ್ಲಿಸುತ್ತಿದ್ದಂತೆ ಹಣವನ್ನು ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದರು.
ಉಳುವವನೆ ಭೂಮಿಯ ಒಡೆಯ:
ಚಾಮರಾಜನಗರದಲ್ಲಿ ತಮ್ಮ ಹೆಸರಿನ ಆಸ್ತಿಗಳನ್ನು ಖಾತೆ ಮಾಡಿಕೊಡುವಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರು ಪತ್ರ ಬರೆದಿದ್ದು, ರೈತರು ಆತಂಕಕ್ಕೆ ಒಳಗಾಗಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ, 60-70 ವರ್ಷಗಳಿಂದ ಅವರು ಉಳುಮೆ ಮಾಡುತ್ತಿದ್ದರೇ ಅವರೇ ಮಾಲೀಕರು, ಉಳುವವರೇ ಭೂಮಿ ಒಡೆಯರು, ಕಾನೂನಿನಡಿಯಲ್ಲೂ ಮಾಲೀಕತ್ವ ಬದಲಾವಣೆ ಮಾಡಲಾಗುವುದಿಲ್ಲ ಎಂದರು.
ಚಾಮರಾಜನಗರ-ಹೆಜ್ಜಾಲ ರೈಲು ಮಾರ್ಗಕ್ಕೆ ರಾಜ್ಯ ಸರ್ಕಾರ ಭೂಮಿ ಕೊಟ್ಟಿಲ್ಲ ಎಂಬ ಸೋಮಣ್ಣ ಹೇಳಿಕೆಗೆ ಪ್ರತಿಕ್ರಿಯಿಸಿ, ನಾವೇ ಭೂಮಿಯನ್ನು ಕೊಡುತ್ತೇವೆ, ಯೋಜನೆ ಕಾಮಗಾರಿ ಅರ್ಧ ಹಣವನ್ನು ಭರಿಸುತ್ತೇವೆ ಆದರೂ ಕೇಂದ್ರ ಸರ್ಕಾರ ಏನೂ ಮಾಡುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.
ಒಟ್ಟಿನಲ್ಲಿ ಶ್ರೀ ಕ್ಷೇತ್ರದಲ್ಲಿ ಸಂಪುಟ ಸಭೆ ಸುಗಮವಾಗಿ ನಡೆದಿದ್ದು, ಜಿಲ್ಲೆ ಸೇರಿದಂತೆ ಹಳೇ ಮೈಸೂರು ಭಾಗದ ಅಭಿವೃದ್ಧಿಗೆ ಹೊಸ ವೇಗ ಬಂದಿದೆ.ಇದನ್ನೂ ಓದಿ: ನವನಿರ್ದೇಶಕನ ಸಿನಿಮಾಗೆ ಕೈಜೋಡಿಸಿದ ಶಿವಣ್ಣ
ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟದಲ್ಲಿ (Malemahadeshwara Hills) ಇಂದು ಸಚಿವ ಸಂಪುಟ ಸಭೆ (Cabinet Meeting) ನಡೆಯಲಿದೆ. ಮಲೆಮಹದೇಶ್ವರದಲ್ಲಿ ಇದೇ ಮೊದಲ ಬಾರಿಗೆ ನಡೆಯಲಿರುವ ಸಚಿವ ಸಂಪುಟ ಸಭೆಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ಸಭೆ ನಡೆಸಲು ವಜ್ರಮಲೆ ವಸತಿ ಗೃಹದ ಎದುರಿನ ಆವರಣದಲ್ಲಿ ಜರ್ಮನ್ ಟೆಂಟ್ ಅಳವಡಿಸಲಾಗಿದೆ. ಇದರಿಂದ ಬಿಸಿಲು, ಮಳೆ ಬಂದರೂ ಸಭೆಗೆ ಯಾವುದೇ ಅಡ್ಡಿಯಾಗುವುದಿಲ್ಲ.
ಗಿರಿಜನರಿಗೆ ವಸತಿ, ಹಾಡಿಗಳಿಗೆ ವಿದ್ಯುತ್, ಪ್ರವಾಸೋದ್ಯಮ, ಕೆರೆ ನೀರು ತುಂಬಿಸುವ ಯೋಜನೆ ಸೇರಿದಂತೆ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ಸಿಗುವ ಸಾಧ್ಯತೆ ಇದೆ.
ಈಗಾಗಲೇ ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವ ಹೆಚ್.ಸಿ ಮಹದೇವಪ್ಪ, ಕೆ ವೆಂಕಟೇಶ್ , ಲಕ್ಷ್ಮಿ ಹೆಬ್ಬಾಳ್ಕರ್ ಬೆಟ್ಟದಲ್ಲಿ ವಾಸ್ತವ್ಯ ಹೂಡಿದ್ದಾರೆ. ಬೆಳಗ್ಗೆ 11:30 ಕ್ಕೆ ಹೆಲಿಕಾಪ್ಟರ್ ಮೂಲಕ ಮಹದೇಶ್ವರ ಬೆಟ್ಟಕ್ಕೆ ಸಿಎಂ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಬಳಿಕ ಮಹದೇಶ್ವರರ ಇತಿಹಾಸ ಸಾರುವ ಮ್ಯೂಸಿಯಂ, 376 ಕೊಠಡಿಗಳ ವಸತಿ ಗೃಹ, 1 ಮೆಗಾ ವ್ಯಾಟ್ ಸೋಲಾರ್ ಪ್ಲಾಂಟ್ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಲಿದೆ.
ಮಧ್ಯಾಹ್ನ 12:00 ಗಂಟೆಗೆ ಸಚಿವ ಸಂಪುಟ ಸಭೆ ಆರಂಭಗೊಳ್ಳಲಿದ್ದು, ಬಳಿಕ ಪತ್ರಿಕಾಗೋಷ್ಠಿ ನಡೆಯಲಿದೆ. ಸಂಜೆ 4:00 ಗಂಟೆಗೆ ಸಿಎಂ ಅಧ್ಯಕ್ಷತೆಯಲ್ಲಿ ಮಲೆಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಸಭೆ ನಡೆಯಲಿದೆ. ಬಳಿಕ ಮಹದೇಶ್ವರ ಬೆಟ್ಟದಲ್ಲಿ ಸಿಎಂ ವಾಸ್ತವ್ಯ ಹೂಡಲಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ ನರಮೇಧ – ಬೆಂಗಳೂರಿಗೆ ಆಗಮಿಸಿದ ಮೃತದೇಹ, ಕುಟುಂಬಸ್ಥರಿಗೆ ಹಸ್ತಾಂತರ
ಬೆಂಗಳೂರು: ಅರಮನೆ ಆಸ್ತಿ (Bengaluru Palace Property) ವಿಚಾರದಲ್ಲಿ ಸುಗ್ರೀವಾಜ್ಞೆ ಹೊರಡಿಸಲು ಇಂದಿನ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ ಪಾಟೀಲ್ (HK Patil) ಹೇಳಿದರು.
ಅರಮನೆ ಆಸ್ತಿ ವಿಚಾರದಲ್ಲಿ ಸುಗ್ರೀವಾಜ್ಞೆ (Ordinance) ಹೊರಡಿಸಲು ಇಂದಿನ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. 1996 ರಲ್ಲಿ ಬೆಂಗಳೂರು ಅರಮನೆ ವ್ಯಾಪ್ತಿಯ 472 ಎಕರೆ ಭೂಮಿಯನ್ನ ಸರ್ಕಾರ ವಶಕ್ಕೆ ಪಡೆಯಲು ಒಟ್ಟು 11 ಕೋಟಿ ರೂ. ನಿಗದಿ ಪಡಿಸಿತ್ತು. ಅಂದು ಎಕರೆಗೆ 2.30 ಲಕ್ಷ ರೂ.ನಂತೆ ದರ ನಿಗದಿ ಮಾಡಲಾಗಿತ್ತು. ಆದ್ರೆ ರಾಜಮನೆತನ ಇದನ್ನ ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿತ್ತು ಎಂದು ಸಚಿವರು ತಿಳಿಸಿದರು. ಇದನ್ನೂ ಓದಿ: ವಿಧಾನಸೌಧದಲ್ಲಿ ಪುಸ್ತಕ ಮೇಳ, ಸಾಹಿತ್ಯ ಹಬ್ಬ – ಸಾರ್ವಜನಿಕರಿಗೆ ಎಂಟ್ರಿ: ಯು.ಟಿ ಖಾದರ್
ಇಂದಿನ ಮಾರುಕಟ್ಟೆ ದರ ಎಕರೆಗೆ 200 ಕೋಟಿ ರೂ. ಆಗುತ್ತದೆ. ರಸ್ತೆ ಅಗಲಿಕರಣಕ್ಕೆ ಬೇಕಾದ 15 ಎಕರೆ 36 ಗುಂಟೆ ಜಾಗವನ್ನೇ ವಶಕ್ಕೆ ಪಡೆಯುವುದಾದರೆ ಎಕರೆಗೆ 200 ಕೋಟಿ ಬೆಲೆ ಆಗುತ್ತದೆ. ಒಟ್ಟು 3,000 ಕೋಟಿ ರೂ. ಆಗಲಿದೆ. ಇದು ಅಭಿವೃದ್ಧಿ ದೃಷ್ಟಿಯಿಂದ ಕಾರ್ಯ ಸಾಧುವಲ್ಲ. ರಾಜ್ಯ ಸರ್ಕಾರ ಅರಮನೆಯ ಭೂಮಿಯನ್ನು ವಶಕ್ಕೆ ಪಡೆಯುವುದಾದರೆ ಟಿಡಿಆರ್ ಕೊಡಲು ಸಾಧ್ಯವಿಲ್ಲ. ಹಾಗಾಗಿ ಸುಗ್ರೀವಾಜ್ಞೆ ಮೂಲಕ ಜಾಗವನ್ನ ವಶಕ್ಕೆ ಪಡೆಯುವ ಮುಕ್ತ ಅವಕಾಶ ಸರ್ಕಾರ ಇಟ್ಟುಕೊಂಡಿದೆ. ಅದಕ್ಕಾಗಿ ಸುಪ್ರೀಂ ಕೋರ್ಟ್‌ನಲ್ಲಿ ನಾವು ಅಫಿಡವಿಟ್ ಹಾಕಬೇಕಿದೆ ಎಂದು ವಿವರಿಸಿದರು.
1996 ರಿಂದ ಇಲ್ಲಿಯವರೆಗೆ ಹಲವು ವರ್ಷ ಗತಿಸಿವೆ. 1996ರ ನವೆಂಬರ್ 15 ರಂದು ಮೊದಲು ಭೂಮಿ ಸ್ವಾಧೀನಕ್ಕೆ ಕಾನೂನು ಮಾಡಲಾಗಿತ್ತು. ಹೈಕೋರ್ಟ್ ನಲ್ಲಿ ಪ್ರಶ್ನಿಸಿದಾಗಲೂ ಕೋರ್ಟ್ ಈ ಕಾನೂನನ್ನ ಎತ್ತಿ ಹಿಡಿದಿತ್ತು. ಇದನ್ನು ಪ್ರಶ್ನಿಸಿ ರಾಜವಂಶಸ್ಥರು 1997ರಲ್ಲಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈಗಾಗಲೇ 27 ವರ್ಷಗಳು ಮುಗಿದು ಹೋಗಿವೆ. ರಸ್ತೆ ಅಗಲೀಕರಣ ವಿಚಾರದಲ್ಲೇ ಟಿಡಿಆರ್ ವ್ಯವಸ್ಥೆ ಬಂದ ಮೇಲೆ ಮತ್ತೆ ಈ ವ್ಯಾಜ್ಯ ಮುನ್ನೆಲೆಗೆ ಬಂದಿದೆ. ಅಂದು ಪೂರ್ತಿ ಭೂಮಿ ಸ್ವಾಧೀನಪಡಿಸಿಕೊಳ್ಳಲು 11 ಕೋಟಿ ರೂ. ಗಳಿಗೆ ಲೆಕ್ಕಾ ಹಾಕಿದ್ದೆವು. ಅಂದು ಪ್ರತಿ ಎಕರೆಗೆ 2.30 ಲಕ್ಷ ರೂ. ಆಗುತ್ತಿತ್ತು. ಆದ್ರೆ ಈಗ ಪ್ರತಿ ಎಕರೆಗೆ 200 ಕೋಟಿ ರೂ. ಆಗುತ್ತದೆ ಎಂದು ಸಚಿವರು ತಿಳಿಸಿದರು.
ಮುಂದುವರಿದು… ಇಲ್ಲಿಯವರೆಗೆ ಹೈಕೋರ್ಟ್ ತೀರ್ಪಿಗೆ ತಡೆ ಇರಲಿಲ್ಲ. 2024ರ ಡಿ.10 ರಂದು ಸುಪ್ರೀಂ ಕೋರ್ಟ್ ತೀರ್ಪು ಬಂದ ನಂತರ ರಸ್ತೆ ಅಗಲೀಕರಣ ಉದ್ದೇಶಕ್ಕೆ ಟಿಡಿಆರ್ ಅನ್ನ ಮೌಲ್ವೀಕರಿಸಲಾಯಿತು. 15.36 ಎಕರೆ ಭೂಮಿಗೆ ಟಿಡಿಆರ್ ಒಪ್ಪಂದವಾಗಿ, ಪ್ರತಿ ಎಕರೆಗೆ 200 ಕೋಟಿ ರೂ. ವ್ಯಾಲ್ಯೂ ಬಂತು. ಹಾಗಾಗಿ 3,016 ಕೋಟಿ ನಾವು ಟಿಡಿಆರ್ ಕೊಡಬೇಕಿತ್ತು. ಇದರಿಂದ ಅಭಿವೃದ್ಧಿಗೆ ಗಂಡಾಂತರವಾಗುತ್ತದೆ. ಹಾಗಾಗಿ ಸುಗ್ರೀವಾಜ್ಞೆ ಹೊರಡಿಸಲು ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಮಹಾರಾಷ್ಟ್ರ ಮಿಲಿಟರಿ ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿ ಭಾರೀ ಸ್ಫೋಟ – 8 ಮಂದಿ ಸಾವು
ದಿನಾಂಕ, ಸ್ಥಳದಲ್ಲಿ ಯಾವುದೇ ಬದಲಾವಣೆ ಇಲ್ಲ: ಸರ್ಕಾರ ಸ್ಪಷ್ಟನೆ
ಬೆಂಗಳೂರು: ಈಗಾಗಲೇ ರಾಜ್ಯ ಸರ್ಕಾರ ನಿರ್ಧರಿಸಿದಂತೆ ಬರುವ ಫೆ.15 ರಂದು ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಲ್ಲಿ ರಾಜ್ಯದ ಸಚಿವ ಸಂಪುಟ ಸಭೆ ಜರುಗಲಿದೆ. ಇದರಲ್ಲಿ ಯಾವುದೇ ಬದಲಾವಣೆಗಳು ಆಗಿಲ್ಲ ಎಂದು ಸರ್ಕಾರದ ಅಪರ ಕಾರ್ಯದರ್ಶಿ (ಸಚಿವ ಸಂಪುಟ) ಆರ್.ಚಂದ್ರಶೇಖರ್ ತಿಳಿಸಿದ್ದಾರೆ.
ಕೆಲವು ಮಾಧ್ಯಮಗಳಲ್ಲಿ ಸಚಿವ ಸಂಪುಟ ಸಭೆಯು ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಬೆಟ್ಟಕ್ಕೆ ಸ್ಥಳಾಂತರಿಸಲಾಗಿದೆ ಎಂದು ಸುದ್ದಿ ಪ್ರಕಟವಾಗಿದೆ. ಆದರೆ ಯಾವುದೇ ಬದಲಾವಣೆಗಳಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪೂರ್ವ ನಿರ್ಧಾರದಂತೆ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿಯೇ ಸಚಿವ ಸಂಪುಟ ಸಭೆ ಜರುಗಲಿದೆ ಎಂದು ಅವರು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಇದೇ ಮೊದಲ ಬಾರಿಗೆ ಗಡಿ ಜಿಲ್ಲೆಯಲ್ಲಿ ಸಂಪುಟ ಸಭೆ ನಡೆಯುತ್ತಿದೆ. ಬೆಳಗಾವಿ, ಕಲಬುರಗಿ ನಂತರ ಇದೀಗಾ ಚಾಮರಾಜನಗರ ಜಿಲ್ಲೆಯಲ್ಲಿ ಕ್ಯಾಬಿನೆಟ್ ಮೀಟಿಂಗ್ ನಿಕ್ಕಿಯಾಗಿದೆ. ಗಿರಿಜನರಿಗೆ ವಸತಿ ಸೇರಿದಂತೆ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆ ಸಾಧ್ಯತೆ ಇದೆ.
ಜಿಲ್ಲಾಡಳಿತದಿಂದ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಕ್ಯಾಬಿನೆಟ್ ಮೀಟಿಂಗ್‌ಗೆ ಜಿಲ್ಲಾಡಳಿತದಿಂದ ಸಿದ್ದತೆ ಆರಂಭವಾಗಿದೆ. ಹನೂರು ಶಾಸಕ ಮಂಜುನಾಥ್ ಅವರು ಸ್ಥಳ ಪರಿಶೀಲನೆ ಮಾಡಿದ್ದಾರೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ತಿಳಿಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದಲ್ಲಿ ಯಾರನ್ನು ಯಾವಾಗ ಏನ್ ಬೇಕಾದ್ರು ಮಾಡ್ತಾರೆ: ಹೆಚ್‌ಡಿಕೆ
– 2025ರ ಇನ್ವೆಸ್ಟ್ ಕರ್ನಾಟಕಕ್ಕೆ 85 ಕೋಟಿ ಮೀಸಲು – ದರ್ಶನ್ ಪ್ರಕರಣದಲ್ಲಿ ಹಸ್ತಕ್ಷೇಪ ಮಾಡದಂತೆ ಸಿಎಂ ಖಡಕ್ ಸೂಚನೆ
ಬೆಂಗಳೂರು: ಲೋಕಸಭಾ ಚುನಾವಣೆ ಬಳಿಕ ಗುರುವಾರ ಸಿಎಂ ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿಂದು ಮೊದಲ ಸಂಪುಟ ಸಭೆ (Cabinet Meeting) ನಡೆಯಿತು. ಸಂಪುಟ ಸಭೆಯಲ್ಲಿ ಏಳನೇ ವೇತನ ಆಯೋಗದ (7th Pay Commission) ಶಿಫಾರಸುಗಳ ಜಾರಿ ವಿಚಾರವಾಗಿ ಚರ್ಚೆ ನಡೆದಿದೆ. ಆದರೆ ಯಾವುದೇ ನಿರ್ಣಯ ಹೊರಬೀಳಲಿಲ್ಲ.
ಇನ್ನು, ತುರ್ತು ಕಾಮಗಾರಿಗಳಿಗೆ ಸಂಬಂಧಿಸಿ ಆಡಳಿತಾತ್ಮಕ ಅನುಮೋದನೆ ನೀಡಿದ್ದ 147 ಟೆಂಡರ್ ಪೈಕಿ 53ಕ್ಕೆ ಇನ್ನೂ ಟೆಂಡರ್ ಕರೆಯದಿರುವುದನ್ನು ಸಂಪುಟ ಗಂಭೀರವಾಗಿ ಪರಿಗಣಿಸಿದೆ. ಮುಂದಿನ ತಿಂಗಳಲ್ಲಿ ಕಾಮಗಾರಿ ಆರಂಭಿಸಲು ಸಿಎಂ ಸೂಚನೆ ನೀಡಿದ್ದಾರೆ. ಫೆ.12ರಿಂದ 14ರ ವರೆಗೆ ಬೆಂಗಳೂರಿನಲ್ಲಿ `ಇನ್ವೆಸ್ಟ್ ಕರ್ನಾಟಕ’ ಆಯೋಜಿಸಲು ಸಂಪುಟ ಒಪ್ಪಿಗೆ ಸೂಚಿಸಿದ್ದು, ಇದಕ್ಕೆ 85 ಕೋಟಿ ಮೀಸಲಿರಿಸಿದೆ. ಕಲ್ಯಾಣ ಕರ್ನಾಟಕ ಹಾಗೂ ವಾಯುವ್ಯ ಸಾರಿಗೆ ನಿಗಮಕ್ಕೆ 112 ವೇಗದೂತ ಬಸ್ ನೀಡಲು ಒಪ್ಪಿಗೆ ಸೂಚಿಸಿದೆ. ಇದನ್ನೂ ಓದಿ: Exclusive: ವಾಲ್ಮೀಕಿ ನಿಗಮದ ಹಗರಣ ಕೇಸ್: ಎಂಡಿ ಪದ್ಮನಾಭ್ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ!
ಲೋಕಸಭಾ ಚುನಾವಣೆ ನಂತರದ ಮೊದಲ ಕ್ಯಾಬಿನೆಟ್ ಸಭೆ ಇದಾಗಿದ್ದು, ಹಲವು ಮಹತ್ವದ ವಿಷಯಗಳ ಚರ್ಚೆ ನಡೆದಿದೆ. ಮುಂಗಾರು ಪ್ರಾರಂಭವಾಗಿರುವ ಹಿನ್ನೆಲೆ ಕೆಲವು ಭಾಗಗಳಲ್ಲಿ ಅತಿವೃಷ್ಠಿಯಿಂದ ಪ್ರವಾಸ ಸಾಧ್ಯತೆಯ ಬಗ್ಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಈ ಕುರಿತು ಮುಂಜಾಗ್ರತೆಗಳ ಬಗ್ಗೆಯೂ ಸಚಿವರೊಟ್ಟಿಗೆ ಮಾತುಕತೆ ನಡೆಸಿದ್ದಾರೆ. ಅಷ್ಟೇ ಅಲ್ಲದೇ ರೈತರ ಬಿತ್ತನೆ ಬೀಜ, ರಸಗೊಬ್ಬರ ದಾಸ್ತಾನು ಬಗ್ಗೆಯೂ ಚರ್ಚೆ ನಡೆದಿದೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಕೇಸ್‌ನ 8ನೇ ಆರೋಪಿ ಶರಣಾಗತಿ – ದರ್ಶನ್‌ಗೆ ಕಾರು ಕೊಟ್ಟಿದ್ದವರಿಗೂ ಸಂಕಷ್ಟ!
ಇನ್ನು ಸಚಿವ ಸಂಪುಟ ಸಭೆಯಲ್ಲಿ ತಮ್ಮ ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಎಚ್ಚರಿಕೆ ನೀಡಿದ್ದಾರೆ. ದರ್ಶನ್ ವಿಚಾರದಲ್ಲಿ ಯಾರು ಇಂಟರ್‌ಫಿಯರ್ ಆಗಬೇಡಿ. ಯಾರ ಹೆಸರು ಕೇಳಿ ಬರದಂತೆ ನೋಡಿಕೊಳ್ಳಿ ಎಂದು ಸಚಿವರಿಗೆ ಸಿಎಂ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಅವನು ಮಾಡಿದ್ದು ಅವನು ಅನುಭವಿಸುತ್ತಾನೆ ಎಂದಿದ್ದಾರೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದ ಎಲ್ಲಾ ಶಾಲೆಗಳಲ್ಲಿ ಇನ್ಮುಂದೆ ರಾಷ್ಟ್ರಗೀತೆ ಕಡ್ಡಾಯ!
ಬೆಂಗಳೂರು: ಸರ್ಕಾರದ ಹೈವೋಲ್ಟೇಜ್ ಸಚಿವ ಸಂಪುಟ ಸಭೆ ಇಂದು (ಶುಕ್ರವಾರ) ನಡೆಯಲಿದೆ. ಭಾರೀ ಕುತೂಹಲ ಮೂಡಿಸಿರುವ ಸಂಪುಟ ಸಭೆಯಲ್ಲಿ ಸರ್ಕಾರ ತನ್ನ ಭರವಸೆಯ ಗ್ಯಾರಂಟಿಗಳ ಜಾರಿಯ ಘೋಷಣೆ ಮಾಡುವ ಸಾಧ್ಯತೆ ಇದೆ. ಅದು ಐದು ಗ್ಯಾರಂಟಿಗಳ ಘೋಷಣೆನಾ ಅಥವಾ ಮೂರು ಗ್ಯಾರಂಟಿಗಳ ಜಾರಿನಾ ಎಂಬ ಪ್ರಶ್ನೆ ಜೊತೆಗೆ ಯಾವ ಕಂಡೀಶನ್ ಹಾಕಬಹುದು ಎಂಬ ಕುತೂಹಲವು ಮೂಡಿದೆ.
ಚುನಾವಣೆ ವೇಳೆ ಕಾಂಗ್ರೆಸ್ ಕೊಟ್ಟ ಮಾತಿನಂತೆ ಇಂದು ಗ್ಯಾರಂಟಿಗಳ ಜಾರಿಗೆ ಆದೇಶ ಹೊರಡಿಸುತ್ತಾ? ಜನತೆಗೆ `ಪಂಚ’ ಕಜ್ಜಾಯ ಕೊಡುತ್ತಾ ಅನ್ನೋ ಕುತೂಹಲ ಹೆಚ್ಚಾಗಿದೆ. ಯಾಕೆಂದರೆ ಇಂದು ಸಿದ್ದರಾಮಯ್ಯ ಸರ್ಕಾರದ ಬಹುನಿರೀಕ್ಷಿತ ಹೈವೋಲ್ಟೇಜ್ ಸಚಿವ ಸಂಪುಟ ಸಭೆ ನಡೆಯಲಿದೆ.
ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ. ಸಭೆಗೂ ಮುನ್ನ ವಿಧಾನಸೌಧದಲ್ಲಿ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಪೂರ್ವಭಾವಿ ಸಭೆ ನಡೆಸಲಿದ್ದಾರೆ. ಅಧಿಕಾರಿಗಳ ಜೊತೆಗಿನ ಸಭೆ ಬಳಿಕ ಕ್ಯಾಬಿನೆಟ್ ಮೀಟಿಂಗ್ ನಡೆಯಲಿದೆ.
ಕ್ಯಾಬಿನೆಟ್ ಸಭೆಯಲ್ಲಿಯೇ ಗ್ಯಾರಂಟಿ ಘೋಷಣೆಗಳ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ಸಚಿವ ಸಂಪುಟ ಸಭೆ ಬಳಿಕ ಮುಖ್ಯಮಂತ್ರಿಗಳಿಂದ ಮಹತ್ವದ ಸುದ್ದಿಗೋಷ್ಢಿ ನಡೆಯಲಿದೆ. ಸುದ್ದಿಗೋಷ್ಟಿಯಲ್ಲಿ ಡಿಸಿಎಂ ಡಿಕೆಶಿ ಹಾಗೂ ಸಚಿವರು ಪಾಲ್ಗೊಳ್ಳಲಿದ್ದಾರೆ.
5 ಗ್ಯಾರಂಟಿಗಳಲ್ಲಿ ಎಷ್ಟು ಗ್ಯಾರಂಟಿ ಘೋಷಣೆ ಅನ್ನೋದೇ ಸದ್ಯಕ್ಕೆ ಇರುವ ಕುತೂಹಲ. 5 ರ ಪೈಕಿ ಮೂರು ಗ್ಯಾರಂಟಿಗಳ ಘೋಷಣೆ ಸಾಧ್ಯತೆ ಇದೆ. ಉಚಿತ ವಿದ್ಯುತ್, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಹಾಗೂ ಬಿಪಿಎಲ್ ಪಡಿತರದಾರರಿಗೆ ತಲಾ 10 ಕೆಜಿ ಅಕ್ಕಿ ಗ್ಯಾರಂಟಿ ಘೋಷಣೆ ಸಾಧ್ಯತೆ ಇದೆ. ಉಳಿದ ಗೃಹಲಕ್ಷ್ಮಿ ಹಾಗೂ ಯುವನಿಧಿ ಗ್ಯಾರಂಟಿ ಸ್ವಲ್ಪ ದಿನಗಳ ನಂತರ ಘೋಷಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಗೃಹಜ್ಯೋತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಯುವನಿಧಿ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಗ್ಯಾರಂಟಿಗಳನ್ನು ಘೋಷಿಸಿತ್ತು. ಈಗ ಪೂರ್ಣ ಬಹುಮತದೊಂದಿಗೆ ಕಾಂಗ್ರೆಸ್ ಸರ್ಕಾರ ರಚನೆಯಾಗಿದ್ದು, ಗ್ಯಾರಂಟಿಗಳ ನಿರೀಕ್ಷೆಯಲ್ಲಿ ಜನ ಕಾಯುತ್ತಿದ್ದಾರೆ.