Tag: ಸಂವಿಧಾನಿಕ ತಿದ್ದುಪಡಿ

  • ಲೋಕಸಭಾ ಚುನಾವಣೆಗೂ ಮುನ್ನ ಸಾಮಾನ್ಯ ವರ್ಗದ ಬಡವರಿಗೆ ಕೇಂದ್ರದಿಂದ ಗುಡ್‍ನ್ಯೂಸ್

    ಲೋಕಸಭಾ ಚುನಾವಣೆಗೂ ಮುನ್ನ ಸಾಮಾನ್ಯ ವರ್ಗದ ಬಡವರಿಗೆ ಕೇಂದ್ರದಿಂದ ಗುಡ್‍ನ್ಯೂಸ್

    ನವದೆಹಲಿ: ಲೋಕಸಭಾ ಚುನಾವಣೆಗೂ ಮುನ್ನ ಮೇಲ್ವರ್ಗದವರಿಗೆ ಬಿಗ್ ಗಿಫ್ಟ್ ನೀಡಲು ಪ್ರಧಾನಿ ಮೋದಿ ಮುಂದಾಗಿದ್ದಾರೆ. ಮೇಲ್ವರ್ಗದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ.10 ರಷ್ಟು ಮೀಸಲಾತಿ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.

    ಮೀಸಲಾತಿ ಸಂಬಂಧ ಸಂವಿಧಾನಕ್ಕೆ ತಿದ್ದುಪಡಿ ತರಲು ಸೋಮವಾರ ನಡೆದ ಕೇಂದ್ರ ಕ್ಯಾಬಿನೆಟ್ ಒಪ್ಪಿಗೆ ನೀಡಿದ್ದು, ತಿದ್ದುಪಡಿಯಾದಲ್ಲಿ ಸರ್ಕಾರಿ ಶಿಕ್ಷಣ, ಉದ್ಯೋಗದಲ್ಲಿ ಹಾಲಿ ಶೇ.50 ರಷ್ಟು ಇರುವ ಮೀಸಲಾತಿ ಪ್ರಮಾಣ ಶೇ.60ಕ್ಕೆ ಏರಿಕೆಯಾಗಲಿದೆ.

    ಈ ಮೀಸಲಾತಿಗಾಗಿ ಸಂವಿಧಾನಕ್ಕೆ ತಿದ್ದುಪಡಿ ಮಾಡಲು ಸಿದ್ಧಗೊಂಡಿರುವ ಮಸೂದೆ ಮಂಗಳವಾರ ಲೋಕಸಭೆಯಲ್ಲಿ ಮಂಡನೆಯಾಗುವ ಸಾಧ್ಯತೆಯಿದೆ. ಮೀಸಲಾತಿ ಜಾರಿಯಾದಲ್ಲಿ 8 ಲಕ್ಷ ರೂ. ವಾರ್ಷಿಕ ಆದಾಯ ಹೊಂದಿರುವ ಸಾಮಾನ್ಯ ವರ್ಗದ ಕುಟುಂಬದ ಸದಸ್ಯರಿಗೆ ಉದ್ಯೋಗ ಸಿಗಲಿದೆ.

    ಆರ್ಥಿಕವಾಗಿ ಹಿಂದುಳಿದಿದ್ದರೂ ಪ್ರಸ್ತುತ ಉದ್ಯೋಗದಿಂದ ವಂಚಿತರಾಗಿರುವ ಸಾಮಾನ್ಯ ವರ್ಗದವರಿಗೂ ಉದ್ಯೋಗ ನೀಡಲು ಸಂವಿಧಾನಕ್ಕೆ ತಿದ್ದುಪಡಿ ಮಾಡಿ ಮೀಸಲಾತಿ ಜಾರಿಗೆ ತರಲು ಸರ್ಕಾರ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

    ಕೇಂದ್ರ ಸರ್ಕಾರದ ಈ ನಿರ್ಧಾರದ ಬಗ್ಗೆ ನಿಮ್ಮ ಅಭಿಪ್ರಾಯ ಏನು? ಕಮೆಂಟ್ ಮಾಡಿ ತಿಳಿಸಿ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv