Tag: ಸಂಸತ್

  • ಸಂಸತ್ ಆವರಣದಲ್ಲಿ ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಆಚರಣೆ

    ಸಂಸತ್ ಆವರಣದಲ್ಲಿ ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಆಚರಣೆ

    – ಚೆನ್ಮಮ್ಮ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಿ: ಸೋಮಣ್ಣ

    ನವದೆಹಲಿ: ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮನವರ (Kittur Rani Chennamma) 201ನೇ ವಿಜಯೋತ್ಸವ ಹಾಗೂ ಜನ್ಮದಿನೋತ್ಸವವನ್ನು ಸಂಸತ್ ಆವರಣದಲ್ಲಿ ಆಚರಿಸಲಾಯಿತು. ಸಂಸತ್ (Parliament) ಆವರಣದ ಪ್ರೇರಣಾ ಸ್ಥಳದಲ್ಲಿರುವ ಚೆನ್ನಮ್ಮ ಪ್ರತಿಮೆಗೆ ತುಮಕೂರು ಲೋಕಸಭಾ ಸದಸ್ಯ ಹಾಗೂ ಕೇಂದ್ರ ಸಚಿವ ವಿ. ಸೋಮಣ್ಣ (V Somanna) ಪುಷ್ಪನಮನ ಸಲ್ಲಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಸೋಮಣ್ಣ, ರಾಣಿ ಚೆನ್ನಮ್ಮನವರ ಪುತ್ಥಳಿಯನ್ನು ಸಂಸತ್ತಿನ ಆವರಣದಲ್ಲಿ 2007ರಲ್ಲಿ ಸ್ಥಾಪಿಸಲಾಗಿದೆ. ಕಳೆದ ವರ್ಷ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬೆಂಬಲ ಮತ್ತು ಲೋಕಸಭಾ ಅಧ್ಯಕ್ಷ ಓಂ ಬಿರ್ಲಾ ಅವರ ಸಹಕಾರದಿಂದ 200ನೇ ರಾಣಿ ಚೆನ್ನಮ್ಮನವರ ವಿಜಯೋತ್ಸವ ಮತ್ತು ಜನ್ಮದಿನೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗಿತ್ತು. ಅದೇ ರೀತಿ ಈ ವರ್ಷವೂ ಸಹ ರಾಣಿ ಚೆನ್ಮಮ್ಮನವರ 201ನೇ ವಿಜಯೋತ್ಸವ ಮತ್ತು ಜನ್ಮದಿನೋತ್ಸವ ಆಚರಣೆಯನ್ನು ಸಂಸತ್ತಿನ ಅವರಣದ ಪ್ರೇರಣಾ ಸ್ಥಳದಲ್ಲಿ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: 17 ವರ್ಷಗಳ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಕೆಟ್ಟ ಸಾಧನೆ ಬರೆದ ಕೊಹ್ಲಿ

    ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಕರ್ನಾಟಕದ ಸಂಸ್ಕೃತಿ, ಈ ದೇಶಕ್ಕೆ ಕೊಡುಗೆ ನೀಡಿದ ಕನ್ನಡದ ಮಹನೀಯರನ್ನು, ಸ್ವಾತಂತ್ರ‍್ಯ ಹೋರಾಟಗಾರರನ್ನು, ವೀರವನಿತೆಯರನ್ನು ನೆನಪಿಸುವ ಮತ್ತು ಅವರನ್ನು ಗೌರವಿಸುವ ಕೆಲಸ ಮಾಡುವಲ್ಲಿ ಸದಾ ಸನ್ನದ್ಧವಾಗಿದೆ. ಇದಕ್ಕೆ ಪೂರಕವಾಗಿಯೇ ನಾಳೆ ಸಿರಿಪೋರ್ಟ ಆಡಿಟೋರಿಯಂನಲ್ಲಿ ನಡೆಯಲಿರುವ ಕಿತ್ತೂರು ರಾಣಿ ಚೆನ್ನಮ್ಮನವರ 201ನೇ ವಿಜಯೋತ್ಸವ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ವೀರರಾಣಿ ಚೆನ್ಮಮ್ಮನವರ ವಿಶೇಷ ಅಂಚೆ ಚೀಟಿ ಬಿಡುಗಡೆ ಮಾಡಲಿದ್ದಾರೆ ಎಂದರು. ಇದನ್ನೂ ಓದಿ: ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ವಾಪಸ್ – ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ

    ಸ್ವಾತಂತ್ರ‍್ಯ ಹೋರಾಟಗಾರ್ತಿ ರಾಣಿ ಚೆನ್ನಮ್ಮನವರ ಸಾಧನೆ ಮತ್ತು ಕಿತ್ತೂರಿನ ಇತಿಹಾಸವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸವನ್ನು ಕರ್ನಾಟಕ ರಾಜ್ಯ ಸರ್ಕಾರ ಹೆಚ್ಚಿನ ಮುತುವರ್ಜಿಯಿಂದ ನಿರ್ವಹಿಸಬೇಕಾದ ಅವಶ್ಯಕತೆ ಇದೆ. ಇದಕ್ಕೆ ಪೂರಕವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಕಿತ್ತೂರು ಸಂಸ್ಥಾನದ ಕೋಟೆ ಕೊತ್ತಲೆಗಳಲ್ಲಿ ಸಮರ್ಪಕ ನಿರ್ವಹಣೆ ಇಲ್ಲದಿರುವುದನ್ನು ಸಾರ್ವಜನಿಕರು ಮನಗಂಡಿದ್ದು, ಈ ಬಗ್ಗೆ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅಧಿಕಾರ ನೀಡಬೇಕಾಗಿದೆ. ಬೈಲಹೊಂಗಲದಲ್ಲಿರುವ ರಾಣಿ ಚೆನ್ಮಮ್ಮನವರ ಸಮಾಧಿಯನ್ನು ಅಭಿವೃದ್ಧಿಗೊಳಿಸಿ, ಅದನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಬೇಕು. ವೀರ ರಾಣಿ ಚೆನ್ಮಮ್ಮನವರ ಜೀವನ ಮತ್ತು ಸಾಧನೆ ಕುರಿತು ಭಾರತೀಯ ಎಲ್ಲಾ ಭಾಷೆಗಳಲ್ಲೂ ಪುಸ್ತಕವನ್ನು ಹೊರತರಬೇಕೆಂದು ಮನವಿ ಮಾಡಿದೆ ಎಂದು ನುಡಿದರು. ಇದನ್ನೂ ಓದಿ: ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಚುರುಕು – ನದಿ ಪಾತ್ರದ ಜನರಿಗೆ ಅಲರ್ಟ್

    ಈ ಸಂದರ್ಭದಲ್ಲಿ ಬೆಳಗಾವಿ ಸಂಸದರು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ರಾಜ್ಯ ಸಭಾ ಸದಸ್ಯೆ ಡಾ. ಸುಧಾಮೂರ್ತಿಯವರು, ಜಯಮೃತ್ಯುಂಜಯ ಸ್ವಾಮಿಜೀ, ಶ್ರೀ ವಚನಾನಂದ ಸ್ವಾಮಿಗಳು, ಜನಪ್ರತಿನಿಧಿಗಳು, ದೆಹಲಿ ಕನ್ನಡ ಸಂಘದ ಅಧ್ಯಕ್ಷ ಸಿಎಂ ನಾಗರಾಜ್ ಹಾಗೂ ದೆಹಲಿ ಕನ್ನಡಿಗರು ಉಪಸ್ಥಿತರಿದ್ದರು. ಇದನ್ನೂ ಓದಿ: ನಮ್ದೇನಿದ್ದರೂ 2028ಕ್ಕೆ ಸಿಎಂ ಕ್ಲೈಮ್‌, ಯತೀಂದ್ರ ಹೇಳಿಕೆ ಅದು ವೈಯಕ್ತಿಕ: ಸತೀಶ್‌ ಜಾರಕಿಹೊಳಿ

  • ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಮಹಾಭಿಯೋಗಕ್ಕೆ ವಿಪಕ್ಷಗಳ ಸಿದ್ಧತೆ

    ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಮಹಾಭಿಯೋಗಕ್ಕೆ ವಿಪಕ್ಷಗಳ ಸಿದ್ಧತೆ

    – ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾನ ಚರ್ಚೆ ಬಹಿಷ್ಕಾರಕ್ಕೂ ನಿರ್ಧಾರ

    ನವದೆಹಲಿ: ಮತ ಕಳ್ಳತನ ಆರೋಪದ ಮೇಲೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ (Gyanesh Kumar) ವಿರುದ್ಧ ಸಂಸತ್ತಿನಲ್ಲಿ ಮಹಾಭಿಯೋಗ (Impeachment) ಪ್ರಸ್ತಾವನೆ ಮಂಡಿಸಲು ವಿರೋಧ ಪಕ್ಷಗಳ ಇಂಡಿಯಾ (INDIA) ಮೈತ್ರಿಕೂಟ ಸಿದ್ಧತೆ ಮಾಡಿಕೊಳ್ಳುತ್ತಿವೆ.

    ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಮತ್ತು ಮತ ಕಳ್ಳತನದ (Vote Theft) ವಿರುದ್ಧ ವಿರೋಧ ಪಕ್ಷಗಳು ಪ್ರತಿಭಟನೆಯನ್ನು ತೀವ್ರಗೊಳಿಸುತ್ತಿದೆ. ಈ ಮಧ್ಯೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ದೋಷಾರೋಪಣೆ ಮಾಡಲು ಇಂಡಿಯಾ ಮೈತ್ರಿಕೂಟ ನಿರ್ಧರಿಸಿದೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ನಾಯಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. ಇದನ್ನೂ ಓದಿ:  ಸಿಎಂ ವಿರುದ್ಧ 24 ಕೊಲೆಗಳ ಆರೋಪ – ಯಾವುದೇ ಕ್ಷಣದಲ್ಲಿ ತಿಮರೋಡಿ ಬಂಧನ ಸಾಧ್ಯತೆ

    ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿರೋಧ ಪಕ್ಷದ ನಾಯಕರೊಬ್ಬರು, ಇಂಡಿಯಾ ಮೈತ್ರಿಕೂಟದ ಎಲ್ಲಾ ಸದಸ್ಯರು ಈ ಪ್ರಸ್ತಾಪವನೆಗೆ ಒಪ್ಪಿಗೆ ಸೂಚಿಸಿದ್ದಾರೆ. ಕಾನೂನು ವಿಧಾನಗಳ ಕುರಿತು ಶೀಘ್ರದಲ್ಲೇ ಚರ್ಚೆ ನಡೆಯಲಿದೆ. ಈ ಪ್ರಕ್ರಿಯೆಯು ನ್ಯಾಯಾಧೀಶರ ಮಹಾಭಿಯೋಗದಂತೆಯೇ ಇರಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರೈಲು ಪ್ರಯಾಣಿಕರ ಗಮನಕ್ಕೆ; ಆ.24ರಂದು ಈ ರೈಲುಗಳ ಸಂಚಾರ ರದ್ದು

    ಈ ನಡುವೆ ಗಗನಯಾತ್ರಿ ಶುಭಾಂಶು ಶುಕ್ಲಾ ಅವರ ಬಾಹ್ಯಾಕಾಶ ಯಾನ, ಪರಿಣಾಮದ ಕುರಿತು ಲೋಕಸಭೆಯಲ್ಲಿ 2 ದಿನಗಳ ಕಾಲ ವಿಶೇಷ ಚರ್ಚೆ ನಡೆಯಲಿದ್ದು, ಈ ವಿಶೇಷ ಚರ್ಚೆಯಲ್ಲಿ ಸರ್ಕಾರದೊಂದಿಗೆ ಸಹಕರಿಸದಿರಲು ವಿರೋಧ ಪಕ್ಷಗಳು ನಿರ್ಧರಿಸಿವೆ. ವಿಶೇಷ ಚರ್ಚೆಯಲ್ಲಿ ಭಾಗವಹಿಸದಿರಲು ಮತ್ತು ಪ್ರತಿಭಟನೆಗಳನ್ನು ಮುಂದುವರಿಸಲು ನಿರ್ಧರಿಸಿದ್ದೇವೆಂದು ವಿಪಕ್ಷಗಳ ನಾಯಕರು ತಿಳಿಸಿದ್ದಾರೆ. ಇದನ್ನೂ ಓದಿ: ಯೆಲ್ಲೋ ಮೆಟ್ರೋ ಸವಾರರಿಗೆ ಗುಡ್‌ನ್ಯೂಸ್ – ಶೀಘ್ರವೇ 15 ನಿಮಿಷಕ್ಕೊಂದು ರೈಲು ಸಂಚಾರ

  • ನ್ಯಾ.ವರ್ಮಾ ವಾಗ್ದಂಡನೆ ಪ್ರಕ್ರಿಯೆಗೆ 200 ಹೆಚ್ಚು ಸಂಸದರ ಸಹಿ – ವಜಾ ಹೇಗೆ ಮಾಡಲಾಗುತ್ತೆ?

    ನ್ಯಾ.ವರ್ಮಾ ವಾಗ್ದಂಡನೆ ಪ್ರಕ್ರಿಯೆಗೆ 200 ಹೆಚ್ಚು ಸಂಸದರ ಸಹಿ – ವಜಾ ಹೇಗೆ ಮಾಡಲಾಗುತ್ತೆ?

    ನವದೆಹಲಿ: ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ (Justice Yashwant Varma) ವಿರುದ್ಧ ವಾಗ್ದಂಡನೆ (Impeachment) ಪ್ರಸ್ತಾವನೆಯ ಪ್ರಕ್ರಿಯೆಗೆ ಸಂಸತ್ತಿನಲ್ಲಿ ಅಧಿಕೃತ ಚಾಲನೆ ಸಿಕ್ಕಿದೆ. ನಗದು ಪತ್ತೆ ಪ್ರಕರಣದಲ್ಲಿ ನ್ಯಾಯಮೂರ್ತಿ ವರ್ಮಾರನ್ನು ಪದಚ್ಯುತಗೊಳಿಸುವಂತೆ ಕೋರಿ ಪಕ್ಷಾತೀತವಾಗಿ 200ಕ್ಕೂ ಹೆಚ್ಚು ಸಂಸದರು ಅಂಕಿತ ಹಾಕಿದ್ದಾರೆ.

    ಲೋಕಸಭೆಯ (Loksabha) 145 ಮತ್ತು ರಾಜ್ಯಸಭೆಯ 63 ಸಂಸದರು ಯಶವಂತ್ ವರ್ಮಾ ವಿರುದ್ಧ ವಾಗ್ದಂಡನೆ ಕೋರಿ ಲೋಕಸಭೆಯ ಸ್ಪೀಕರ್ ಮತ್ತು ರಾಜ್ಯಸಭೆಯ ಸಭಾಧ್ಯಕ್ಷರಿಗೆ ನೋಟಿಸ್ ನೀಡಿದ್ದಾರೆ. ರಾಜ್ಯಸಭೆಯ ಸ್ಪೀಕರ್ ಜಗದೀಪ್ ಧನಕರ್ ಅವರಿಗೆ ಸಲ್ಲಿಕೆಯಾದ ಪತ್ರಕ್ಕೆ ಆಪ್ ಮತ್ತು ಇಂಡಿಯಾ ಕೂಟದ ನಾಯಕರು ಸೇರಿದಂತೆ 63 ರಾಜ್ಯಸಭಾ ಸದಸ್ಯರು ಅಂಕಿತ ಹಾಕಿದ್ದಾರೆ.

    ಸಂವಿಧಾನದ 124, 217 ಮತ್ತು 218ನೇ ವಿಧಿಗಳ ಅಡಿಯಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾಗೆ ನೋಟಿಸ್ ಸಲ್ಲಿಸಲಾಗಿದೆ. ಈ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.  ಇದನ್ನೂ ಓದಿ: ಜಗದೀಪ್ ಧನಕರ್ ರಾಜೀನಾಮೆ ಸುತ್ತ ಅನುಮಾನದ ಹುತ್ತ- ದಿಢೀರ್‌ ರಿಸೈನ್‌ ಮಾಡಿದ್ದು ಯಾಕೆ?

    ವಾಗ್ದಂಡನೆ ಪ್ರಕ್ರಿಯೆ ಮುಂದೇನು?
    ವಾಗ್ದಂಡನೆ ಎಂದರೆ ನ್ಯಾಯಾಧೀಶರ ಪದಚ್ಯುತ ಪ್ರಕ್ರಿಯೆ. ಪದಚ್ಯುತಗೊಳಿಸಲು ಲೋಕಸಭೆಯಲ್ಲಿ ಕನಿಷ್ಠ 100 ಸದಸ್ಯರು ಮತ್ತು ರಾಜ್ಯಸಭೆಯಲ್ಲಿ ಕನಿಷ್ಠ 50 ಸದಸ್ಯರು ಸಹಿ ಹಾಕಬೇಕಾಗುತ್ತದೆ.

    ಈ ಪ್ರಸ್ತಾವನೆಯನ್ನು ಸ್ಪೀಕರ್ ಅಂಗೀಕರಿಸಬಹುದು/ತಿರಸ್ಕರಿಸಬಹುದು. ಆರೋಪ ಪರಿಶೀಲಿಸಲು ಸ್ಪೀಕರ್ ಅಥವಾ ಅಧ್ಯಕ್ಷರು ಸಮಿತಿ ರಚಿಸುತ್ತಾರೆ. ಉಭಯ ಸದನಗಳಲ್ಲಿ ಪ್ರಸ್ತಾವನೆ ಅಂಗೀಕರಿಸಬೇಕು. ಇದನ್ನೂ ಓದಿ: ತಲಾ ಆದಾಯ ಶೇ.93.6ರಷ್ಟು ಹೆಚ್ಚಳ ದೇಶದಲ್ಲೇ ಅಗ್ರ ಸ್ಥಾನಕ್ಕೇರಿದ ಕರ್ನಾಟಕ

    ಸಮಿತಿಯಲ್ಲಿ ಸುಪ್ರೀಂ ಕೋರ್ಟ್‌ನ ಹಿರಿಯ ನ್ಯಾಯಮೂರ್ತಿಗಳು. ಹೈಕೋರ್ಟ್‌ನ ಹಾಲಿ ಮುಖ್ಯ ನ್ಯಾಯಮೂರ್ತಿ, ನ್ಯಾಯಶಾಸ್ತ್ರಜ್ಞರು ಮೂರು ತಿಂಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗುತ್ತದೆ. ತನಿಖಾ ವರದಿಯನ್ನು ಸಂಸತ್ತಿನಲ್ಲಿ ಮಂಡಿಸಲಾಗುತ್ತದೆ.

    ಎರಡೂ ಸದನಗಳಲ್ಲಿ ವರದಿ ಮೇಲೆ ಚರ್ಚೆ ನಡೆದ ಬಳಿಕ ಪದಚ್ಯುತಗೊಳಿಸುವ ಪ್ರಸ್ತಾವನೆಯ ಮೇಲೆ ಮತದಾನ ಮಾಡಲಾಗುತ್ತದೆ. 2/3ರಷ್ಟು ಬಹುಮತ ದೊರೆತರೆ ವರ್ಮಾರ ವಾಗ್ದಂಡನೆ ಆಗಲಿದೆ. ಬಳಿಕ ಸಂಸತ್ ಶಿಫಾರಸಿನಂತೆ ರಾಷ್ಟ್ರಪತಿಗಳು ವಜಾ ಮಾಡುತ್ತಾರೆ.

  • ನಾಳೆಯಿಂದ ಸಂಸತ್‌ನ ಮುಂಗಾರು ಅಧಿವೇಶನ ಆರಂಭ

    ನಾಳೆಯಿಂದ ಸಂಸತ್‌ನ ಮುಂಗಾರು ಅಧಿವೇಶನ ಆರಂಭ

    – ಎನ್‌ಡಿಎ, ಇಂಡಿಯಾ ಒಕ್ಕೂಟಗಳ ನಡುವೆ ವಾಕ್ಸಮರ, ಜಟಾಪಟಿಗೆ ವೇದಿಕೆ ಸಜ್ಜು

    ನವದೆಹಲಿ: ನಾಳೆಯಿಂದ ಸಂಸತ್‌ನ ಮುಂಗಾರು ಅಧಿವೇಶನ (Parliament Mansoon Session) ಆರಂಭವಾಗಲಿದೆ. ಆಡಳಿತ ಮತ್ತು ವಿಪಕ್ಷಗಳ ನಡುವಿನ ಮಾತಿನ ಸಮರಕ್ಕೆ ಅಖಾಡ ಸಜ್ಜಾಗಿದೆ. ಬಿಹಾರ ವಿಧಾನಸಭಾ ಚುನಾವಣೆ ಸಮೀಪದಲ್ಲಿಯೇ ನಡೆಯಲಿರುವ ಈ ಸಂಸತ್ ಅಧಿವೇಶನ ರಾಜಕೀಯ ಸಭೆಗೆ ವೇದಿಕೆಯಾಗಲಿದೆ.

    ಬಿಹಾರ ವಿಧಾನಸಭಾ ಚುನಾವಣೆ ಅಕ್ಟೋಬರ್- ನವೆಂಬರ್‌ನಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ, ಈ ಅಧಿವೇಶನವು ರಾಜಕೀಯ ಶಕ್ತಿಪ್ರದರ್ಶನಕ್ಕೆ ವೇದಿಕೆಯಾಗಲಿದೆ. ಇಂಡಿಯಾ ಒಕ್ಕೂಟದ ವಿರೋಧ ಪಕ್ಷಗಳಾದ ಕಾಂಗ್ರೆಸ್, ಆರ್‌ಜೆಡಿ, ಮತ್ತು ಟಿಎಂಸಿ, ಬಿಹಾರದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ, ಆಪರೇಷನ್ ಸಿಂಧೂರ, ಅಹಮದಾಬಾದ್‌ನ ಏರ್ ಇಂಡಿಯಾ ವಿಮಾನ ದುರಂತ, ಮತ್ತು ಭಾರತ-ಪಾಕಿಸ್ತಾನ ಕದನ ವಿರಾಮದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ಮಧ್ಯಸ್ಥಿಕೆಯ ಬಗ್ಗೆ ಆಡಳಿತ ಪಕ್ಷವನ್ನು ತೀವ್ರವಾಗಿ ಪ್ರಶ್ನಿಸಲು ಸಿದ್ಧವಾಗಿವೆ. ಇದರ ಜೊತೆಗೆ, ಪಹಲ್ಗಾಮ್‌ನ ಭಯೋತ್ಪಾದಕ ದಾಳಿ ಮತ್ತು ವಿದೇಶಾಂಗ ನೀತಿಯಂತಹ ವಿಷಯಗಳನ್ನು ಎತ್ತಿಹಿಡಿಯಲು ವಿರೋಧ ಪಕ್ಷಗಳು ತಯಾರಿ ನಡೆಸಿವೆ. ಇದನ್ನೂ ಓದಿ: ಕಾವೇರಿ ಹಿನ್ನೀರಿನಲ್ಲಿ ಮೂವರು ವಿದ್ಯಾರ್ಥಿಗಳು ನೀರುಪಾಲು

    ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟವು ಈ ಆರೋಪಗಳಿಗೆ ತಿರುಗೇಟು ನೀಡಲು ಸಿದ್ಧವಾಗಿದ್ದು, ತನ್ನ ಸಾಧನೆಗಳನ್ನು ಮಂಡಿಸಿ ವಿರೋಧ ಪಕ್ಷಗಳ ವಿಮರ್ಶೆಗೆ ಉತ್ತರ ನೀಡಲು ಕಾರ್ಯತಂತ್ರ ರೂಪಿಸಿದೆ. ಈ ನಡುವೆ ಕೇಂದ್ರ ಸರ್ಕಾರ ಎಂಟು ಮಸೂದೆಗಳನ್ನು ಮಂಡಿಸುವ ಲೆಕ್ಕಚಾರದಲ್ಲಿದೆ. ಆದಾಯ ತೆರಿಗೆ ಮಸೂದೆ 2025 ಕೂಡ ಲೋಕಸಭೆಯಲ್ಲಿ ಮಂಡನೆಯಾಗಲಿದ್ದು, ಇದನ್ನು ಫೆಬ್ರವರಿಯಲ್ಲಿ ಲೋಕಸಭೆಯ ಆಯ್ದ ಸಮಿತಿಗೆ ಕಳುಹಿಸಲಾಗಿತ್ತು. ಈ ವರದಿಯನ್ನು ಇಂದು ಲೋಕಸಭೆಯಲ್ಲಿ ಮಂಡಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ಮುಂಗಾರು ಅಧಿವೇಶನದಲ್ಲಿ ಆಪರೇಷನ್‌ ಸಿಂಧೂರ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧ: ಕಿರಣ್‌ ರಿಜಿಜು

    ಮಣಿಪುರದಲ್ಲಿ ಫೆಬ್ರವರಿ 13ರಂದು ಜಾರಿಗೊಂಡ ರಾಷ್ಟ್ರಪತಿ ಆಳ್ವಿಕೆಯ ವಿಸ್ತರಣೆಗೆ ಸಂಸತ್‌ನ ಅನುಮೋದನೆಯನ್ನು ಸರ್ಕಾರ ಕೋರಲಿದೆ. ಈ ವಿಷಯವು ವಿರೋಧ ಪಕ್ಷಗಳಿಂದ ತೀವ್ರ ಚರ್ಚೆಗೆ ಕಾರಣವಾಗಲಿದೆ. ಸಂಸತ್‌ನ ಈ ಮುಂಗಾರು ಅಧಿವೇಶನವು ಒಟ್ಟು 21 ಕಲಾಪಗಳನ್ನು ಒಳಗೊಂಡಿದ್ದು, ಆಗಸ್ಟ್ 12ರಿಂದ 18ರವರೆಗೆ ರಕ್ಷಾಬಂಧನ ಮತ್ತು ಸ್ವಾತಂತ್ರ‍್ಯ ದಿನಾಚರಣೆಗಾಗಿ ವಿರಾಮ ಘೋಷಿಸಲಾಗಿದೆ. ಈ ಅವಧಿಯಲ್ಲಿ, ಗೋವಾದ ಶಾಸಕಾಂಗ ಕ್ಷೇತ್ರಗಳಲ್ಲಿ ಪರಿಶಿಷ್ಟ ಜಾತಿಗಳ ಪ್ರಾತಿನಿಧ್ಯದ ಮರುಹೊಂದಾಣಿಕೆ ಮಸೂದೆ 2024, ವಾಣಿಜ್ಯ ನೌಕಾಯಾನ ಮಸೂದೆ 2024, ಮತ್ತು ಭಾರತೀಯ ಬಂದರು ಮಸೂದೆ 2025 ಕೂಡ ಲೋಕಸಭೆಯಲ್ಲಿ ಅನುಮೋದನೆಗೆ ಕಾಯುತ್ತಿವೆ. ಇದನ್ನೂ ಓದಿ: ಜಿಎಸ್‌ಟಿ ಮಾಡಿರೋದು ಕೇಂದ್ರ ಸರ್ಕಾರ – ಸಣ್ಣ ವ್ಯಾಪಾರಿಗಳಿಗೆ ಟ್ಯಾಕ್ಸ್‌ ನೋಟಿಸ್‌ ವಿಚಾರಕ್ಕೆ ಸಿಎಂ ರಿಯಾಕ್ಷನ್‌

    ಪ್ರಮುಖ ಮಸೂದೆಗಳು:
    *ಮಣಿಪುರ ಸರಕು ಮತ್ತು ಸೇವಾ ತೆರಿಗೆ (ತಿದ್ದುಪಡಿ) ಮಸೂದೆ, 2025: ರಾಜ್ಯದ ಜಿಎಸ್‌ಟಿ ಕಾನೂನನ್ನು ಕೇಂದ್ರ ಕಾನೂನಿಗೆ ಸಮನ್ವಯಗೊಳಿಸುವ ಗುರಿ.
    *ಜನ ವಿಶ್ವಾಸ (ನಿಬಂಧನೆಗಳ ತಿದ್ದುಪಡಿ) ಮಸೂದೆ, 2025: ವ್ಯಾಪಾರ ಸುಗಮಗೊಳಿಸುವಿಕೆ ಮತ್ತು ನಿಯಂತ್ರಣ ಅನುಸರಣೆಯನ್ನು ಸುಧಾರಿಸುವ ಉದ್ದೇಶ.
    *ಭಾರತೀಯ ನಿರ್ವಹಣಾ ಸಂಸ್ಥೆ (ತಿದ್ದುಪಡಿ) ಮಸೂದೆ, 2025: ಐಐಎಂ ಗುವಾಹಟಿಯನ್ನು ಐಐಎಂ ಕಾಯ್ದೆಯ ಅಡಿಯಲ್ಲಿ ಔಪಚಾರಿಕವಾಗಿ ಒಳಗೊಳ್ಳುವ ಗುರಿ.
    *ತೆರಿಗೆ ಕಾನೂನುಗಳ (ತಿದ್ದುಪಡಿ) ಮಸೂದೆ, 2025: ತೆರಿಗೆ ಕಾನೂನುಗಳ ಸರಳೀಕರಣಕ್ಕೆ ಒತ್ತು.
    *ಭೂ ಪರಂಪರೆ ತಾಣಗಳು ಮತ್ತು ಭೂಅವಶೇಷಗಳ (ಸಂರಕ್ಷಣೆ ಮತ್ತು ನಿರ್ವಹಣೆ) ಮಸೂದೆ; ಭೂವೈಜ್ಞಾನಿಕ ತಾಣಗಳ ಸಂರಕ್ಷಣೆ.
    *ಕಲ್ಲುಗಣಿ (ಅಭಿವೃದ್ಧಿ ಮತ್ತು ನಿಯಂತ್ರಣ) ತಿದ್ದುಪಡಿ ಮಸೂದೆ: ಗಣಿಗಾರಿಕೆ ಕ್ಷೇತ್ರದಲ್ಲಿ ಸುಧಾರಣೆ.
    *ರಾಷ್ಟ್ರೀಯ ಕ್ರೀಡಾ ಆಡಳಿತ ಮಸೂದೆ: ಕ್ರೀಡಾ ಆಡಳಿತದಲ್ಲಿ ಸುಧಾರಣೆಗೆ ಒತ್ತು.
    *ರಾಷ್ಟ್ರೀಯ ಡೋಪಿಂಗ್ ವಿರೋಧಿ (ತಿದ್ದುಪಡಿ) ಮಸೂದೆ: ಕ್ರೀಡೆಯಲ್ಲಿ ಡೋಪಿಂಗ್ ನಿಯಂತ್ರಣಕ್ಕೆ ಕ್ರಮ

  • ಸಂಸತ್‌ನಲ್ಲಿ ಮತದಾರರ ಪಟ್ಟಿಯಲ್ಲಿನ ದೋಷಗಳ ಚರ್ಚೆಗೆ ವಿಪಕ್ಷಗಳ ಆಗ್ರಹ

    ಸಂಸತ್‌ನಲ್ಲಿ ಮತದಾರರ ಪಟ್ಟಿಯಲ್ಲಿನ ದೋಷಗಳ ಚರ್ಚೆಗೆ ವಿಪಕ್ಷಗಳ ಆಗ್ರಹ

    ನವದೆಹಲಿ: ಮತದಾರರ ಪಟ್ಟಿಯಲ್ಲಿನ ದೋಷಗಳ ವಿಚಾರಗಳ ಬಗ್ಗೆ ಚರ್ಚೆಗೆ ಅವಕಾಶ ನೀಡಬೇಕು ಎಂದು ವಿರೋಧ ಪಕ್ಷಗಳು ಸಂಸದರು ಆಗ್ರಹಿಸಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಮಾತನಾಡಿದ ಸಂಸದರು, ಈ ಬಗ್ಗೆ ಚರ್ಚೆಗೆ ಅವಕಾಶ ನೀಡಲು ಒತ್ತಾಯಿಸಿ ಗದ್ದಲ ನಡೆಸಿದರು.

    ಲೋಕಸಭೆಯಲ್ಲಿ ಮಾತನಾಡಿದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಸರ್ಕಾರ ಮತದಾರರ ಪಟ್ಟಿಗಳನ್ನು ಸಿದ್ಧಪಡಿಸುವುದಿಲ್ಲ ಎಂಬ ನಿಮ್ಮ ಹೇಳಿಕೆಯನ್ನು ನಾವು ಸ್ವೀಕರಿಸುತ್ತೇವೆ. ಆದರೆ ಈ ವಿಷಯದ ಬಗ್ಗೆ ಚರ್ಚೆ ನಡೆಯಬೇಕೆಂದು ಮಹಾರಾಷ್ಟ್ರ ಸೇರಿದಂತೆ ಪ್ರತಿಯೊಂದು ರಾಜ್ಯದಲ್ಲೂ ವಿರೋಧ ಪಕ್ಷಗಳು ಒಂದೇ ಧ್ವನಿಯಲ್ಲಿ ಪ್ರಶ್ನೆಗಳನ್ನು ಎತ್ತಿವೆ. ಹೀಗಾಗಿ ಈ ಬಗ್ಗೆ ಚರ್ಚೆಯಾಗಬೇಕು ಎಂದರು. ಇದನ್ನೂ ಓದಿ: ನಟಿ ರನ್ಯಾಗೆ ಸಿದ್ದರಾಮಯ್ಯರಿಂದ ಪರಮೇಶ್ವರ್‌ವರೆಗೆ ಯಾರೂ ಸಪೋರ್ಟ್ ಮಾಡಿಲ್ಲ: ಚಲುವರಾಯಸ್ವಾಮಿ

    ಈ ವಿಷಯದಲ್ಲಿ ರಾಜ್ಯಸಭೆಯಲ್ಲಿ ಮಾತನಾಡಿದ ಸಂಸದ ಕಪಿಲ್ ಸಿಬಲ್, ಚುನಾವಣಾ ಆಯೋಗವು ಸರ್ಕಾರದ ಕೈಯಲ್ಲಿದೆ. ಪ್ರಜಾಪ್ರಭುತ್ವ ಹೀಗೆಯೇ ಮುಂದುವರಿದರೆ ಮತ್ತು ಚುನಾವಣಾ ಆಯೋಗವು ಸರ್ಕಾರಕ್ಕಾಗಿ ಲಾಬಿ ಮಾಡುತ್ತಲೇ ಇದ್ದರೆ ಬರುವ ಫಲಿತಾಂಶಗಳು ನಿಮ್ಮ ಮುಂದೆ ಇವೆ. ಈ ವ್ಯವಸ್ಥೆ ಮುಂದುವರಿದರೆ ಇದು ಪ್ರಜಾಪ್ರಭುತ್ವವಲ್ಲ. ನಾವು ಹಲವು ವರ್ಷಗಳಿಂದ ಅನುಮಾನದಿಂದ ಇದ್ದೇವೆ. ನೆಲದ ಮೇಲೆ ಏನಾಗುತ್ತದೆ ಎಂದು ಎಲ್ಲರಿಗೂ ತಿಳಿದಿದೆ, ಆದರೆ ಕೇಳಲು ಯಾರೂ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆ – ನ್ಯೂಯಾರ್ಕ್‌ಗೆ ಹೊರಟಿದ್ದ ವಿಮಾನ ಮುಂಬೈಗೆ ವಾಪಸ್‌

    ತೃಣಮೂಲ ಕಾಂಗ್ರೆಸ್ ಸದಸ್ಯ ಸೌಗತ ರಾಯ್ ಮಾತನಾಡಿ, ಮತದಾರರ ಪಟ್ಟಿಯಲ್ಲಿ ಕೆಲವು ದೋಷಗಳಿವೆ. ಪಶ್ಚಿಮ ಬಂಗಾಳ ಮುರ್ಷಿದಾಬಾದ್ ಮತ್ತು ಬುರ್ದ್ವಾನ್ ಸಂಸದೀಯ ಕ್ಷೇತ್ರಗಳು ಮತ್ತು ಹರಿಯಾಣದಲ್ಲಿ ಒಂದೇ ರೀತಿಯ ಇಪಿಐಸಿ (ಚುನಾವಣಾ ಫೋಟೋ ಗುರುತಿನ ಚೀಟಿ) ಸಂಖ್ಯೆಯನ್ನು ಹೊಂದಿರುವ ಮತದಾರರಿದ್ದಾರೆ ಎಂದು ನುಡಿದರು. ಇದನ್ನೂ ಓದಿ: ಗೋಲ್ಡ್ ಸ್ಮಗ್ಲಿಂಗ್ ರನ್ಯಾ ಕೇಸ್: ಯಾವ ಸಚಿವರು? – ಎಂ.ಬಿ ಪಾಟೀಲ್‌ ಪ್ರಶ್ನೆ

    ಮಹಾರಾಷ್ಟ್ರದ ವಿಷಯದಲ್ಲಿಯೂ ಇದನ್ನು ಹೇಳಲಾಗಿದೆ. ಹರಿಯಾಣದಲ್ಲೂ ಈ ವಿಷಯದ ಬಗ್ಗೆ ಗಮನ ಸೆಳೆಯಲಾಯಿತು. ಈಗ ಅವರು ಮುಂದಿನ ವರ್ಷ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳ ಮತ್ತು ಅಸ್ಸಾಂಗೂ ಪ್ರವೇಶಿಸಲು ಪ್ರಯತ್ನಿಸುತ್ತಿದ್ದಾರೆ. ಇಡೀ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ಆಗಬೇಕು. ಪಟ್ಟಿಗಳಲ್ಲಿ ಕೆಲವು ತಪ್ಪುಗಳು ಏಕೆ ಸಂಭವಿಸಿವೆ ಎಂಬುದಕ್ಕೆ ಚುನಾವಣಾ ಆಯೋಗ ದೇಶಕ್ಕೆ ಉತ್ತರಿಸಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಎಫ್‌ಬಿಐ ಮೋಸ್ಟ್ ವಾಂಟೆಡ್ ಲಿಸ್ಟ್‌ನಲ್ಲಿದ್ದ ಡ್ರಗ್ ಡೀಲರ್ ಪಂಜಾಬ್ ಪೊಲೀಸರ ವಶಕ್ಕೆ

  • ಸಂವಿಧಾನ ಪುಸ್ತಕ ಹಿಡಿದು ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣವಚನ ಸ್ವೀಕಾರ

    ಸಂವಿಧಾನ ಪುಸ್ತಕ ಹಿಡಿದು ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣವಚನ ಸ್ವೀಕಾರ

    ನವದೆಹಲಿ: ಕೈಯಲ್ಲಿ ಸಂವಿಧಾನ ಪುಸ್ತಕ ಹಿಡಿದು ಲೋಕಸಭಾ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ (Priyanka Gandhi) ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.

    ಪ್ರಿಯಾಂಕಾ ಗಾಂಧಿ ಅವರು ಈಗ ಸಂಸತ್‌ ಪ್ರವೇಶಿಸಿದ ಗಾಂಧಿ ಕುಟುಂಬದ ಮೂರನೇ ಸದಸ್ಯರಾಗಿದ್ದಾರೆ. ಅವರ ತಾಯಿ ಸೋನಿಯಾ ಗಾಂಧಿ ರಾಜಸ್ಥಾನದಿಂದ ಪಕ್ಷದ ರಾಜ್ಯಸಭಾ ಸಂಸದರಾಗಿದ್ದಾರೆ. ಇದನ್ನೂ ಓದಿ: ಸಂಸತ್‌ನಲ್ಲಿ ಅಮ್ಮ-ಅಣ್ಣ-ತಂಗಿ; ಇಂದು ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ ಸ್ವೀಕಾರ

    ನ.23 ರಂದು ನಡೆದ ಮತ ಎಣಿಕೆಯಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ವಯನಾಡ್‌ನಿಂದ ಭಾರಿ ಅಂತರದ ಗೆಲುವು ದಾಖಲಿಸಿದರು. ಅವರು 6.22 ಲಕ್ಷ ಮತಗಳನ್ನು ಪಡೆದರು. ಎರಡನೇ ಸ್ಥಾನದಲ್ಲಿರುವ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ ಸತ್ಯನ್ ಮೊಕೇರಿಗಿಂತ ನಾಲ್ಕು ಲಕ್ಷಕ್ಕಿಂತ ಹೆಚ್ಚು ಮತ್ತು ಬಿಜೆಪಿಯ ನವ್ಯಾ ಹರಿದಾಸ್‌ಗಿಂತ 5.12 ಲಕ್ಷ ಹೆಚ್ಚು ಮತಗಳ ಅಂತರದಿಂದ ಗೆದ್ದು ದಾಖಲೆ ಬರೆದಿದ್ದಾರೆ.

    ಲೋಕಸಭಾ ಚುನಾವಣೆಯಲ್ಲಿ ರಾಹುಲ್‌ ಗಾಂಧಿ ವಯನಾಡ್‌ ಮತ್ತು ರಾಯ್‌ಬರೇಲಿ ಕ್ಷೇತ್ರಗಳಿಂದ ಸ್ಪರ್ಥಿಸಿ ಗೆದ್ದಿದ್ದರು. ಕೊನೆಗೆ ವಯನಾಡ್‌ ಕ್ಷೇತ್ರವನ್ನು ಬಿಟ್ಟರು. ಅವರಿಂದ ತೆರವಾದ ಸ್ಥಾನಕ್ಕೆ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿದ್ದರು. ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದಾರೆ. ಇದನ್ನೂ ಓದಿ: 4ನೇ ಬಾರಿಗೆ ಜಾರ್ಖಂಡ್‌ ಸಿಎಂ ಆಗಿ ಇಂದು ಹೇಮಂತ್‌ ಸೊರೆನ್‌ ಪ್ರಮಾಣ ವಚನ ಸ್ವೀಕಾರ

  • ಶಿರೂರು ಗುಡ್ಡ ಕುಸಿತ ಪ್ರಕರಣ; ಸಂಸತ್‌ನಲ್ಲಿ ಧ್ವನಿ ಎತ್ತಿದ ಕಾಗೇರಿ

    ಶಿರೂರು ಗುಡ್ಡ ಕುಸಿತ ಪ್ರಕರಣ; ಸಂಸತ್‌ನಲ್ಲಿ ಧ್ವನಿ ಎತ್ತಿದ ಕಾಗೇರಿ

    ಕಾರವಾರ/ನವದೆಹಲಿ: ಶಿರೂರು ಗುಡ್ಡ ಕುಸಿತ (Shirur Landslide) ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwara Hegde Kageri) ಸಂಸತ್‌ನಲ್ಲಿ ಧ್ವನಿ ಎತ್ತಿದ್ದಾರೆ.

    ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರು ಭೂಕುಸಿತವಾಗಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅವೈಜ್ಞಾನಿಕ ಕಾಮಗಾರಿಯೇ ಕಾರಣ. ಶಿರೂರು ಭೂಕುಸಿತದಲ್ಲಿ ಮೃತರಾದವರಿಗೆ ಪ್ರಧಾನಮಂತ್ರಿ ಪರಿಹಾರ ನಿಧಿಯಡಿ ಪರಿಹಾರ ನೀಡಬೇಕು. NDRFನ ಮತ್ತೊಂದು ತಂಡವನ್ನು ಶಿರೂರಿಗೆ ಶೋಧ ಕಾರ್ಯ ನಡೆಸಲು ಕಳುಹಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: Shirur Landslide; ನಾಪತ್ತೆಯಾದವರ ಕುಟುಂಬಸ್ಥರ ಕಣ್ಣೀರು ನೋಡಿ ಮತ್ತೆ ಕಾರ್ಯಾಚರಣೆ ನಿರ್ಧಾರ: ಈಶ್ವರ್ ಮಲ್ಪೆ

    ವಯನಾಡಿನಲ್ಲಿ ಆಗಿರುವಂತೆ ಶಿರೂರಿನಲ್ಲಿ ಸಹ ಗುಡ್ಡ ಕುಸಿತವಾಗಿದೆ. ಅಭಿವೃದ್ಧಿ ಆಗಬೇಕು. ಅಭಿವೃದ್ಧಿ ಮಾಡುವಾಗ ವೈಜ್ಞಾನಿಕ ಅಧ್ಯಯನದ ವರದಿ ಮೂಲಕ ಅಭಿವೃದ್ಧಿ ಮಾಡಬೇಕು. ಪಶ್ಚಿಮಘಟ್ಟ ಬಹಳ ಸೂಕ್ಷ್ಮ ಪ್ರದೇಶವಾಗಿರುವುದರಿಂದ ಅದರ ಕ್ಯಾರಿಂಗ್ ಕ್ಯಪಾಸಿಟಿ ಅಧ್ಯಯನ ಆಗುವ ಅಗತ್ಯವಿದೆ ಎಂದು ತಿಳಿಸಿದ್ದಾರೆ.

    ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಡುತ್ತಿರುವ ಕೆಲಸ ಅವೈಜ್ಞಾನಿಕವಾಗಿದೆ. ಅವೈಜ್ಞಾನಿಕವಾಗಿರುವುದರಿಂದಲೇ ಗುಡ್ಡ ಕುಸಿದಿದೆ ಎಂಬುದಾಗಿ ಹೇಳಲಾಗುತ್ತಿದೆ ಎಂದು ಸಂಸತ್‌ನಲ್ಲಿ ಗಮನ ಸೆಳೆದಿದ್ದಾರೆ. ಇದನ್ನೂ ಓದಿ: Landslide In Karnataka: ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ತಪ್ಪಿದ ಭಾರೀ ಅನಾಹುತ

    ಮುಂದಿನ ದಿನಗಳಲ್ಲಿಯಾದರೂ ಕಾಮಗಾರಿ ಮಾಡುವಾಗ ವೈಜ್ಞಾನಿಕ ರೀತಿಯಲ್ಲಿ ಅಧ್ಯಯನ ಆಗಬೇಕು ಎಂದು ಸಂಸತ್‌ನಲ್ಲಿ ಕಾಗೇರಿ, ಜಿಲ್ಲೆಯ ಸಮಸ್ಯೆ ಕುರಿತು ಸಂಸತ್ ಗಮನಕ್ಕೆ ತಂದಿದ್ದಾರೆ.

  • UK General Elections 2024: ಸೋಲಿನತ್ತ ರಿಷಿ ಸುನಕ್‌ ಪಕ್ಷ, ಭರ್ಜರಿ ಜಯದತ್ತ ಲೇಬರ್‌ ಪಾರ್ಟಿ

    UK General Elections 2024: ಸೋಲಿನತ್ತ ರಿಷಿ ಸುನಕ್‌ ಪಕ್ಷ, ಭರ್ಜರಿ ಜಯದತ್ತ ಲೇಬರ್‌ ಪಾರ್ಟಿ

    ಲಂಡನ್‌: ಬ್ರಿಟನ್‌ ಸಂಸತ್ತಿಗೆ ನಡೆಯುತ್ತಿರುವ ಚುನಾವಣೆಯಲ್ಲಿ (UK General Elections) ವಿರೋಧ ಪಕ್ಷವಾದ ಲೇಬರ್‌ ಪಾರ್ಟಿಗೆ (Labour Party) ಭರ್ಜರಿ ಜಯ ಸಿಗುವ ಆರಂಭಿಕ ಲಕ್ಷಣಗಳು ಕಾಣಿಸುತ್ತಿದ್ದು, ಪ್ರಧಾನಿ ರಿಷಿ ಸುನಕ್‌ (Rishi Sunak) ಅವರ ಕನ್ಸರ್ವೇಟಿವ್‌ ಪಕ್ಷಕ್ಕೆ (Conservative Party)ಹೀನಾಯ ಸೋಲಾಗುವ ಸಾಧ್ಯತೆಯಿದೆ.

    ಸಂಸತ್ತಿನ 650 ಸ್ಥಾನಗಳಿಗೆ ಗುರುವಾರ ಮತಪತ್ರಗಳ ಮೂಲಕ ಚುನಾವಣೆ ನಡೆದಿದ್ದು ಮತ ಎಣಿಕೆ ಆರಂಭವಾಗಿದೆ. ಇಂದು ಸಂಜೆಯ ವೇಳೆಗೆ ಫಲಿತಾಂಶ ಪ್ರಕಟವಾಗಲಿದ್ದು ಚುನಾವಣಾ ಸಮೀಕ್ಷೆಗಳು 13 ವರ್ಷಗಳಿಂದ ಅಧಿಕಾರದಲ್ಲಿರುವ ಕನ್ಸರ್ವೇಟಿವ್‌ ಪಕ್ಷಕ್ಕೆ ಹೀನಾಯ ಸೋಲಾಗಬಹುದು ಎಂದು ಭವಿಷ್ಯ ನುಡಿದೆ.

    ಮತದಾನ ನಡೆಸಿ ಹೊರ ಬರುತ್ತಿರುವ ಲೇಬರ್‌ ಪಾರ್ಟಿ ನಾಯಕ ಕೀರ್ ಸ್ಟಾರ್ಮರ್ಸ್
    ಮತದಾನ ನಡೆಸಿ ಹೊರ ಬರುತ್ತಿರುವ ಲೇಬರ್‌ ಪಾರ್ಟಿ ನಾಯಕ ಕೀರ್ ಸ್ಟಾರ್ಮರ್ಸ್

    ಮತ ಎಣಿಕೆ ಟ್ರೆಂಡ್‌ ಪ್ರಕಾರ 14 ವರ್ಷಗಳ ಬಳಿಕ ಭರ್ಜರಿ ಜಯದೊಂದಿಗೆ ಲೇಬರ್ ಪಾರ್ಟಿ ಅಧಿಕಾರಕ್ಕೆ ಮರಳುವ ಸಾಧ್ಯತೆಯಿದೆ. ಕೀರ್ ಸ್ಟಾರ್ಮರ್ ನೇತೃತ್ವದ ಲೇಬರ್ ಪಕ್ಷವು ಪ್ರಸ್ತುತ 60 ಸ್ಥಾನಗಳಲ್ಲಿ ಮುಂದಿದೆ, ಆದರೆ ರಿಷಿ ಸುನಕ್ ಅವರ ಪಕ್ಷವು ಕೇವಲ 4 ಸ್ಥಾನಗಳನ್ನು ಗೆದ್ದಿದೆ. 650 ಸದಸ್ಯರ ಹೌಸ್ ಆಫ್ ಕಾಮನ್ಸ್‌ನಲ್ಲಿ ಬಹುಮತಕ್ಕೆ 326 ಸ್ಥಾನಗಳನ್ನು ಗೆಲ್ಲುವ ಅಗತ್ಯವಿದೆ. ಇದನ್ನೂ ಓದಿ: ರೈತರಿಗೆ ಕೋಚಿಮುಲ್ ಬಿಗ್ ಶಾಕ್ – ಹಾಲು ಉತ್ಪಾದಕರಿಗೆ 2 ರೂ. ಕಡಿತ

    ಚುನಾವಣೋತ್ತರ ಸಮೀಕ್ಷೆಗಳು ಲೇಬರ್‌ ಪಕ್ಷ 410 ಸ್ಥಾನಗಳನ್ನು ಗೆಲ್ಲಬಹುದು ಎಂದು ಭವಿಷ್ಯ ನುಡಿದಿವೆ. ಇನ್ನೂ ಆರು ತಿಂಗಳು ಅಧಿಕಾರವಧಿ ಇದ್ದರೂ ಅವಧಿಪೂರ್ವ ಚುನಾವಣೆಗೆ ಹೋಗುವ ಮೂಲಕ ರಿಷಿ ಸುನಕ್ ಅಚ್ಚರಿ ನಿರ್ಧಾರ ಕೈಗೊಂಡಿದ್ದರು.

     

  • 8,500 ರೂ. ಬಂದಿದ್ಯಾ ಇಲ್ವಾ ಅಂತಾ ಜನ ಬ್ಯಾಂಕ್ ಖಾತೆ ಚೆಕ್ ಮಾಡ್ತಿದ್ದಾರೆ- ರಾಗಾಗೆ ಮೋದಿ ಟಾಂಗ್

    8,500 ರೂ. ಬಂದಿದ್ಯಾ ಇಲ್ವಾ ಅಂತಾ ಜನ ಬ್ಯಾಂಕ್ ಖಾತೆ ಚೆಕ್ ಮಾಡ್ತಿದ್ದಾರೆ- ರಾಗಾಗೆ ಮೋದಿ ಟಾಂಗ್

    ನವದೆಹಲಿ: ಜುಲೈ 1 ರಂದು ಜನರು 8,500 ರೂ. ಬಂದಿದ್ಯಾ ಇಲ್ವ ಅಂತಾ ಬ್ಯಾಂಕ್ ಖಾತೆ ಚೆಕ್ ಮಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಟಾಂಗ್ ನೀಡಿದರು.

    ರಾಷ್ಟ್ರಪತಿಗಳಿಗೆ ವಂದನಾ ನಿರ್ಣಯದ ಮೇಲೆ ಮಾತನಾಡಿದ ಪ್ರಧಾನಿ, ಇದು ಕಾಂಗ್ರೆಸ್‍ನ ಸುಳ್ಳಿಗೆ ದೊಡ್ಡ ಉದಾಹರಣೆ. ಈ ಸುಳ್ಳಿನಿಂದ ಮಹಿಳೆಯರಿಗೆ ನೋವಾಗಿದೆ, ಅವರು ಪಾಠ ಕಲಿಸಲಿದ್ದಾರೆ. ಇವಿಎಂ, ಸಂವಿಧಾನ, ಮೀಸಲಾತಿ ಎಲ್ಲದರಲ್ಲೂ ಸುಳ್ಳು. ಇದಕ್ಕೂ ಮೊದಲು ಎಲ್‍ಐಸಿ, ಬಿಇಎಲ್, ರಫೇಲ್ ವಿಚಾರದಲ್ಲೂ ಸುಳ್ಳು ಹೇಳಿದರು. ಸೋಮವಾರ ಅಗ್ನಿವೀರ್ ವಿಚಾರದಲ್ಲಿ ಸದನದಲ್ಲಿ ಸುಳ್ಳು ಹೇಳಲಾಯಿತು. ಕನಿಷ್ಠ ಬೆಂಬಲ ಬೆಲೆ (MSP) ನೀಡುತ್ತಿಲ್ಲ ಎಂದು ಹೇಳಿದ್ದಾರೆ. ಸದನದಲ್ಲಿ ಹೇಳುವ ಸುಳ್ಳು, ಅದರ ಗೌರವಕ್ಕೆ ಧಕ್ಕೆ ತಂದಿದೆ ಎಂದು ರಾಹುಲ್ ಗಾಂಧಿಯನ್ನು (Rahul Gandhi) ಟಾರ್ಗೆಟ್ ಮಾಡಿದರು.

    ತುರ್ತು ಪರಿಸ್ಥಿತಿಯ ಐವತ್ತನೇ ವರ್ಷ. ಅಧಿಕಾರಕ್ಕಾಗಿ ಸರ್ವಾಧಿಕಾರಿ ಶಾಸನ ಹೇರಲಾಯಿತು. ಕಾಂಗ್ರೆಸ್ (Congress) ಕ್ರೂರತೆಯ ಎಲ್ಲೆ ಮೀರಿತ್ತು. ಸರ್ಕಾರ ಬೀಳಿಸುವುದು, ಮಾಧ್ಯಮ ನಿಯಂತ್ರಣ ಮೂಲಕ ಸಂವಿಧಾನದ ವಿರುದ್ಧ ಕಾಂಗ್ರೆಸ್ ನಡೆದುಕೊಂಡಿದೆ. ದಲಿತರು, ಹಿಂದುಳಿದ ಜನರಿಗೆ ಕಾಂಗ್ರೆಸ್ ಅನ್ಯಾಯ ಮಾಡಿದೆ. ಇದೇ ಕಾರಣಕ್ಕಾಗಿ ಅಂಬೇಡ್ಕರ್, ನೆಹರು ಸಂಪುಟದಿಂದ ರಾಜೀನಾಮೆ ನೀಡಿ ಹೊರ ಬಂದರು. ಅಂಬೇಡ್ಕರ್ ರಾಜೀನಾಮೆ ನೀಡುವ ವೇಳೆ ಕಾರಣ ನೀಡಿದ್ದರು. ಆ ಕಾರಣ ಕಾಂಗ್ರೆಸ್ ಚರಿತ್ರೆ ಹೇಳುತ್ತದೆ. ಎಸ್‍ಸಿ, ಎಸ್ಟಿ ಜನರ ಮೇಲಿನ ದೌರ್ಜನ್ಯ ನೋಡಲು ಸಾಧ್ಯವಾಗುತ್ತಿಲ್ಲ ಎಂದು ಅಂಬೇಡ್ಕರ್ ಹೇಳಿದ್ದರು. ಬಳಿಕ ನೆಹರು ಅಂಬೇಡ್ಕರ್ ರಾಜಕೀಯ ಜೀವನ ಮುಗಿಸಲು ಎಲ್ಲ ಪ್ರಯತ್ನ ಮಾಡಿದರು. ಷಡ್ಯಂತ್ರ ಮಾಡಿ ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದರು. ಆ ಸೋಲಿಯ ವಿಜಯೋತ್ಸವ ಮಾಡಲಾಯಿತು, ಇದು ಒಂದು ಪತ್ರದಲ್ಲಿ ದಾಖಲಾಗಿದೆ ಎಂದು ಹೇಳಿದರು.

    ಬಾಬು ಜಗಜೀವನ್ ರಾವ್ ಅವರಿಗೆ ಅವರ ಹಕ್ಕು ನೀಡಲಿಲ್ಲ. ತುರ್ತು ಪರಿಸ್ಥಿತಿ ಬಳಿಕ ಜಗಜೀವನ್ ರಾವ್ ಪ್ರಧಾನಿಯಾಗಬೇಕಿತ್ತು. ಯಾವುದೇ ಕಾರಣಕ್ಕೆ ರಾವ್ ಪ್ರಧಾನಿಯಾಗಬಾರದು ಎಂದು ಇಂದಿರಾಗಾಂಧಿ ಹೇಳಿದ್ದರು. ಚೌಧರಿ ಚರಣ್ ಸಿಂಗ್ ವಿಚಾರದಲ್ಲಿ ಹೀಗೆ ಅನ್ಯಾಯವಾಗಿದೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಚುನಾವಣೆಯಲ್ಲಿ 3ನೇ ಬಾರಿಯೂ ಸೋತಿದ್ದಕ್ಕೆ ಕೆಲವರಿಗೆ ನೋವಾಗಿದೆ: ವಿಪಕ್ಷಗಳಿಗೆ ಮೋದಿ ತಿರುಗೇಟು

    ಕಾಂಗ್ರೆಸ್ ಮೀಸಲಾತಿ ವಿರೋಧಿಯಾಗಿತ್ತು. ಸಿಎಂಗಳಿಗೆ ಪತ್ರ ಬರೆದು ನೆಹರು ಮೀಸಲಾತಿ ವಿರೋಧಿಸಿದ್ದರು. ಮಂಡಲ ಕಮಿಷನ್ ವರದಿ ತಡೆ ಹಿಡಿಯಲಾಯಿತು. ರಾಜೀವ್ ಗಾಂಧಿ ವಿರೋಧ ಪಕ್ಷದಲ್ಲಿದ್ದಾಗ ಮೀಸಲಾತಿ ವಿರುದ್ಧ ಮಾತನಾಡಿದ್ದರು. ಸಂಸತ್ ನ ರೆಕಾರ್ಡ್ ನಲ್ಲಿ ಈಗಲೂ ಈ ದಾಖಲೆ ಇದೆ ಎಂದರು.

    ಸೋಮವಾರ ಸದನದಲ್ಲಿ ನಡೆದ ಬೆಳವಣಿಗೆಯನ್ನು ಜನರು ಎಂದಿಗೂ ಕ್ಷಮಿಸುವುದಿಲ್ಲ. 131 ವರ್ಷ ಹಿಂದೆ ಸ್ವಾಮಿ ವಿವೇಕಾನಂದ ಹೇಳಿದ್ದರು. ಇಡೀ ವಿಶ್ವಕ್ಕೆ ಸಹಿಷ್ಣುತೆ ಕಲಿಸಿದ ಧರ್ಮ ನನ್ನದು ಎಂದು ಹೇಳಿದ್ದರು. ಹಿಂದೂ ಸಹಿಷ್ಣುತೆಯ ಧರ್ಮ, ಎಲ್ಲರೂ ತನ್ನವರು ಎಂದು ಜೀವಿಸುವ ಧರ್ಮ ಅದಕ್ಕಾಗಿ ಭಾರತ ವೈವಿಧ್ಯಮಯವಾಗಿದೆ. ಆದರೆ ಹಿಂದೂಗಳ ಮೇಲೆ ಸುಳ್ಳು ಆರೋಪ ಮಾಡಲಾಗುತ್ತಿದೆ, ಗಂಭೀರ ಷಡ್ಯಂತ್ರ ಮಾಡಲಾಗುತ್ತಿದೆ. ಹಿಂದೂ ಹಿಂಸಕರು ಎಂದು ಹೇಳಿದ್ದಾರೆ. ಇದು ನಿಮ್ಮ ಆಲೋಚನೆಯಾ?. ಈ ದೇಶ ಇದನ್ನು ಎಂದಿಗೂ ಮರೆಯುವುದಿಲ್ಲ. ಶಕ್ತಿಯ ವಿನಾಶದ ಬಗ್ಗೆ ಮಾತನಾಡುತ್ತಾರೆ. ಹಿಂದೂ ಆತಂಕವಾದ ಶಬ್ದ ಬಳಕೆಯ ಪ್ರಯತ್ನ ಮಾಡಲಾಗಿದೆ ಎಂದು ತಿಳಿಸಿದರು.

    ಈಶ್ವರದ ಪ್ರತಿ ರೂಪ ದರ್ಶನಕ್ಕಾಗಿದೆ. ಈಶ್ವರನ ಯಾವ ರೂಪ ಸ್ವಾರ್ಥ ಪ್ರದರ್ಶನಕ್ಕಾಗಿಲ್ಲ. ದೇವಾನುದೇವತೆಗಳ ಅಪಮಾನ ದೇಶದ ಜನರಿಗೆ ನೋವು ಮಾಡಿದೆ. ದೇಶದ ಜನರು ಇದನ್ನು ಕ್ಷಮಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

  • ಪ್ರಧಾನಿ ಭಾಷಣದ ವೇಳೆ ವಿಪಕ್ಷ ನಾಯಕರ ಗದ್ದಲ- ಸ್ಪೀಕರ್‌ ತರಾಟೆ

    ಪ್ರಧಾನಿ ಭಾಷಣದ ವೇಳೆ ವಿಪಕ್ಷ ನಾಯಕರ ಗದ್ದಲ- ಸ್ಪೀಕರ್‌ ತರಾಟೆ

    ನವದೆಹಲಿ: ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ (Om Birla) ಮಂಗಳವಾರ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರನ್ನು ತರಾಟೆಗೆ ತೆಗೆದುಕೊಂಡರು.

    ಇಂದು ಸಂಸತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು (Narendra Modi) ರಾಷ್ಟ್ರಪತಿಗಳಿಗೆ ವಂದನಾ ನಿರ್ಣಯದ ಮೇಲೆ ಮಾತನಾಡಿದರು. ಪ್ರದಾನಿಯವರು ಭಾಷಣ ಪ್ರಾರಂಭ ಮಾಡುತ್ತಿದ್ದಂತೆಯೇ ವಿಪಕ್ಷ ನಾಯಕರು ಸಿಡಿದೆದ್ದರು. ಅಲ್ಲದೇ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸುವಂತೆ ರಾಹುಲ್ ಗಾಂಧಿಯವರು ತಮ್ಮ ನಾಯಕರಿಗೆ ಸೂಚಿಸಿದ್ದಾರೆ. ಈ ಮೂಲಕ ಪ್ರಧಾನಿ ಭಾಷಣಕ್ಕೆ ತಡೆಯೊಡ್ಡಲು ಮುಂದಾದರು.

    ಈ ವೇಳೆ ಸ್ಪೀಕರ್‌ ಓಂ ಬಿರ್ಲಾ ಅವರು, ರಾಹುಲ್ ಗಾಂಧಿ ಅವರನ್ನು ತರಾಟೆಗೆ ತೆಗೆದುಕೊಂಡರು. ಸದನದಲ್ಲಿ ಮಾತನಾಡಲು ಸಾಕಷ್ಟು ಅವಕಾಶ ಮತ್ತು ಸಮಯವನ್ನು ನೀಡಲಾಗಿದೆ ಎಂದು ಹೇಳಿದರು. ಅಲ್ಲದೇ ಸಂಸತ್ತಿನ ಘನತೆಯನ್ನು ಕಾಪಾಡಿಕೊಳ್ಳುವಂತೆ ರಾಗಾಗೆ ಸ್ಪೀಕರ್‌ ತಿಳಿಸಿದರು. ಇದನ್ನೂ ಓದಿ: ಚುನಾವಣೆಯಲ್ಲಿ 3ನೇ ಬಾರಿಯೂ ಸೋತಿದ್ದಕ್ಕೆ ಕೆಲವರಿಗೆ ನೋವಾಗಿದೆ: ವಿಪಕ್ಷಗಳಿಗೆ ಮೋದಿ ತಿರುಗೇಟು

    ಸ್ಪೀಕರ್‌ ಹೇಳಿದ್ದೇನು..?: ಆತ್ಮೀಯ ವಿರೋಧ ಪಕ್ಷದ ನಾಯಕರೇ, ಇದು ನಿಮಗೆ ಸರಿಹೊಂದುವುದಿಲ್ಲ. ನಿಮಗೆ ಸಾಕಷ್ಟು ಅವಕಾಶಗಳು ಮತ್ತು ಸಮಯವನ್ನು ನೀಡಲಾಗಿದೆ. ಸಭಾನಾಯಕರು ಮಾತನಾಡುವಾಗ ಸದನದಲ್ಲಿ ನಿರ್ದೇಶನ ನೀಡುತ್ತಿರುವುದು ನಿಮಗೆ ಶೋಭೆ ತರಲ್ಲ. ಸಂಸತ್ತಿನ ಸಂಪ್ರದಾಯಗಳ ಪ್ರಕಾರ ಇದು ಸೂಕ್ತವಲ್ಲ. ಸಂಸತ್ತಿನ ಘನತೆ ಕಾಪಾಡಿ. ಸದಸ್ಯರನ್ನು ಸದನದ ಬಾವಿಗೆ ಬರುವಂತೆ ನಿರ್ದೇಶಿಸುತ್ತಿದ್ದೀರಾ? ಇದಕ್ಕಾಗಿ ನೀವು ವಿರೋಧ ಪಕ್ಷದ ನಾಯಕರಾಗಿದ್ದೀರೇ? ಬಿರ್ಲಾ ಅವರು ರಾಹುಲ್ ಗಾಂಧಿಗೆ ಛೀಮಾರಿ ಹಾಕಿದರು. ‌