ಬೆಂಗಳೂರು: ಸಂಸತ್ ಕಲಾಪವಿರುವ ಕಾರಣ ಬೆಂಗಳೂರಿನಲ್ಲಿ ನಡೆಯುತ್ತಿರುವ ಹೂಡಿಕೆದಾರರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (HD Kumaraswamy) ಹೇಳಿದರು.ಇದನ್ನೂ ಓದಿ: ಶಾಸಕರ ಪುತ್ರ ಬಸವೇಶ್‌ನನ್ನು ಕೂಡಲೇ ಬಂಧಿಸಿ: ಎನ್.ರವಿಕುಮಾರ್ ಆಗ್ರಹ
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸಂಸತ್ತಿನ ಅಧಿವೇಶನ ನಡೆಯುತ್ತಿರುವುದರಿಂದ ಬೆಂಗಳೂರಿನಲ್ಲಿ ಆರಂಭವಾಗಿರುವ ಕರ್ನಾಟಕ ಹೂಡಿಕೆದಾರರ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ನಮ್ಮ ಸರ್ಕಾರವು ಆತ್ಮನಿರ್ಭರ ಭಾರತ ಪರಿಕಲ್ಪನೆಯ ಮೂಲಕ ವಿಕಸಿತ ಭಾರತ 2047ರ ಗುರಿ ಮುಟ್ಟುವ ನಿಟ್ಟಿನಲ್ಲಿ ಹೂಡಿಕೆಗಳಿಗೆ ಉತ್ತೇಜನ ನೀಡುವುದಕ್ಕೆ ಬದ್ಧವಾಗಿದೆ ಎಂದು ಹೇಳಿದರು.
ಶೃಂಗಸಭೆಯಲ್ಲಿ ಭಾಗವಹಿಸಿರುವ ಎಲ್ಲರಿಗೂ ನನ್ನ ಹಾರ್ದಿಕ ಶುಭಾಶಯಗಳು. ಆವಿಷ್ಕಾರ, ನಾವೀನ್ಯತೆ ಮತ್ತು ಉದ್ಯಮಶೀಲತೆಯ ಮಹತ್ವದ ಕೇಂದ್ರವಾಗಿರುವ ಕರ್ನಾಟಕವು ಭಾರತದ ಆರ್ಥಿಕ ಮತ್ತು ಕೈಗಾರಿಕಾ ಬೆಳವಣಿಗೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವುದನ್ನು ಮುಂದುವರಿಸುತ್ತದೆ. ಈ ಸಮಾವೇಶವು ಯಶಸ್ವಿಯಾಗಲಿ ಎಂದು ಹಾರೈಸುತ್ತೇನೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಇದನ್ನೂ ಓದಿ: ಸಂಗಮೇಶ್ ಪುತ್ರನ ಬಂಧನ ಇನ್ನೂ ಯಾಕಾಗಿಲ್ಲ? ಶಾಸಕರ ಮಕ್ಕಳು ಏನು ಬೇಕಾದರೂ ಮಾಡಬಹುದಾ – ಛಲವಾದಿ ಪ್ರಶ್ನೆ
ನವದೆಹಲಿ: ಚಳಿಗಾಲದ ಅಧಿವೇಶನದ ಮೊದಲ ದಿನವಾದ ಸೋಮವಾರ ಶಿವಸೇನಾ ಸಂಸದೆ ಪ್ರಿಯಾಂಕಾ ಚತುರ್ವೇದಿ ಮತ್ತು ತೃಣಮೂಲ ಸಂಸದ ಡೋಲಾ ಸೇನ್ ಸೇರಿದಂತೆ 12 ರಾಜ್ಯಸಭೆಯ ಸದಸ್ಯರನ್ನು ಪ್ರಸಕ್ತ ಅಧಿವೇಶನದಿಂದ ಅಮಾನತುಗೊಳಿಸಲಾಗಿದೆ.
ಮುಂಗಾರು ಅಧಿವೇಶನದ ಕೊನೆಯ ದಿನದಂದು ಮೇಲ್ಮನೆಯಲ್ಲಿ ಗದ್ದಲ ಸೃಷ್ಟಿಸಿ ಅಶಿಸ್ತು ತೋರಿದ್ದಕ್ಕೆ ಅವರ ವಿರುದ್ಧ ಶಿಸ್ತು ಕ್ರಮವನ್ನು ಕೈಗೊಳ್ಳಲಾಗಿದೆ.
ಅಮಾನತು ನೋಟಿಸ್‌ನಲ್ಲಿ ಏನಿದೆ?
ಮುಂಗಾರು ಅಧಿವೇಶನದ ಕೊನೆಯ ದಿನವಾದ ಆಗಸ್ಟ್ 11 ರಂದು ಸಂಸದರು ಭದ್ರತಾ ಸಿಬ್ಬಂದಿಯ ಮೇಲೆ ಉದ್ದೇಶಪೂರ್ವಕವಾಗಿ ದುರ್ನಡತೆ, ಅವಹೇಳನಕಾರಿ, ಅಶಿಸ್ತಿನ ಮತ್ತು ಹಿಂಸಾತ್ಮಕ ನಡವಳಿಕೆ ತೋರಿದ್ದಾರೆ. ಈ ಮೂಲಕ ಸದನದ ಘನತೆಯನ್ನು ಕಡಿಮೆಗೊಳಿಸಿ ಅಪಖ್ಯಾತಿ ತಂದಿದ್ದಾರೆ. ಈ ಕಾರಣದಿಂದ ಈ ಸದಸ್ಯರನ್ನು 255ನೇ ಅಧಿವೇಶನದ ಉಳಿದ ಅವಧಿಗೆ ಸದನದ ಸೇವೆಯಿಂದ ರಾಜ್ಯಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮಗಳ ನಿಯಮ 256 ರ ಅಡಿಯಲ್ಲಿ ಅಮಾನತುಗೊಳಿಸಲಾಗಿದೆ. ಇದನ್ನೂ ಓದಿ: ಚರ್ಚೆಯಿಲ್ಲದೆ ಉಭಯ ಸದನಗಳಲ್ಲಿ ಕೃಷಿ ಕಾಯ್ದೆ ರದ್ದುಗೊಳಿಸಿರುವುದು ದುರಾದೃಷ್ಟಕರ ಸಂಗತಿ: ರಾಹುಲ್ ಗಾಂಧಿ
If you see the CCTV footage it has been recorded how male marshals were jostling female MPs. All of this on one side & your decision on the other? What kind of unparliamentary behaviour is this?: Shiv Sena MP Priyanka Chaturvedi – one of the 12 RS MPs suspended for this session pic.twitter.com/qwkCVvUsse
ನಡೆದಿದ್ದು ಏನು?
ಆಗಸ್ಟ್ 11 ರಂದು ಸಂಜೆ ಪೆಗಾಸಸ್ ವಿಚಾರ ಮತ್ತು ವಿಮಾ ಖಾಸಗೀಕರಣ ಮಸೂದೆ ಅಂಗೀಕಾರದ ಸಮಯದಲ್ಲಿ ಪ್ರತಿಪಕ್ಷಗಳ ತೀವ್ರ ಆಕ್ರೋಶ ವ್ಯಕ್ತಪಡಿಸಿ ಬಾವಿಗಿಳಿದು ಧರಣಿ, ಗದ್ದಲ ಎಬ್ಬಿಸಿದ್ದರು. ಈ ವೇಳೆ ವಿಪಕ್ಷಗಳ ಸದಸ್ಯರು ಹಾಗೂ ಮಾರ್ಷಲ್‌ಗಳ ನಡುವೆ ಘರ್ಷಣೆ ನಡೆದಿತ್ತು. ಇದನ್ನೂ ಓದಿ: ಮುಂದಿನ ತಿಂಗಳು ಗೋರಖ್‍ಪುರದಲ್ಲಿ AIIMS ಉದ್ಘಾಟನೆ: ಯೋಗಿ ಆದಿತ್ಯನಾಥ್
ಹೊರಗಿನವರನ್ನು ಕರೆಸಿ ಸ್ತ್ರೀಯರ ಮೇಲೆ ಹಲ್ಲೆ ಮಾಡಿದ್ದಾರೆ ವಿಪಕ್ಷ ಆರೋಪಿಸಿದ್ದವು. ಆದರೆ ಕೇಂದ್ರ ಸರ್ಕಾರ ಆರೋಪವನ್ನು ನಿರಾಕರಿಸಿ ವಿಪಕ್ಷದವರೇ ದಾಳಿ ನಡೆಸಿದ್ದಾರೆಂದು ಕಿಡಿ ಕಾರಿ ಕಲಾಪದ ವಿಡಿಯೋವನ್ನು ರಿಲೀಸ್ ಮಾಡಿತ್ತು.
Here is EXACTLY what happened in the RS on 11th August 2021 when India's democracy, India's values and India's culture was strangulated and sought to be murdered by the Congress.
ನವದೆಹಲಿ: ಐಎನ್‍ಎಕ್ಸ್ ಮೀಡಿಯಾ ಪ್ರಕರಣದಲ್ಲಿ ನಿನ್ನೆಯಷ್ಟೇ ಸುಪ್ರೀಂ ಕೋರ್ಟಿನಿಂದ ಜಾಮೀನು ಪಡೆದಿದ್ದ ಕಾಂಗ್ರೆಸ್ ನಾಯಕ, ರಾಜ್ಯಸಭಾ ಸದಸ್ಯರಾದ ಪಿ.ಚಿದಂಬರಂ ಇಂದು ಸಂಸತ್ ಕಲಾಪಕ್ಕೆ ಹಾಜರಾದರು.
ದೆಹಲಿಯ ತಿಹಾರ್ ಜೈಲಿನಲ್ಲಿ ಬರೋಬ್ಬರಿ 105 ದಿನಗಳ ಕಾಲ ಇದ್ದ ಚಿದಂಬರಂ ಅವರನ್ನು ಆಗಸ್ಟ್ 21 ರಂದು ಸಿಬಿಐ ಬಂಧನ ಮಾಡಿತ್ತು. 2007 ರಲ್ಲಿ ಐಎನ್‍ಎಕ್ಸ್ ಮೀಡಿಯಾ ಸಂಸ್ಥೆಗೆ ವಿದೇಶಿ ಬಂಡವಾಳ ಹೂಡಿಕೆ ಪ್ರೋತ್ಸಾಹಕಾ ಮಂಡಳಿಯಿಂದ ದೊರೆತ ಅನುಮೋದನೆಯನ್ನು ಪುತ್ರ ಕಾರ್ತಿ ಚಿದಂಬರಂ ಅವರ ಶಿಫಾರಸಿನ ಮೇಲೆ ದೊರಕಿಸಿಕೊಟ್ಟಿದ್ದರು ಎಂಬ ಆರೋಪ ಅವರ ಮೇಲೆ ಕೇಳಿ ಬಂದಿತ್ತು.
Delhi: Congress leader & Rajya Sabha MP, P. Chidambaram arrives at Parliament. P Chidambaram was yesterday granted bail by Supreme Court in the INX Media money laundering case registered by the Enforcement Directorate. pic.twitter.com/yyOl6ToNlz
ನ್ಯಾ. ಆರ್ ಭಾನುಮತಿ ನೇತೃತ್ವದ ತ್ರಿ ಸದಸ್ಯ ಪೀಠ ಚಿದಂಬರಂ ಡಿ.4 ರಂದು ಷರತ್ತುಬದ್ಧ ಜಾಮೀನು ನೀಡಿತ್ತು. ಈ ಮೂಲಕ ಸುಮಾರು 105 ದಿನಗಳ ಕಾಲ ತಿಹಾರ್ ಜೈಲಿನಲ್ಲಿದ್ದ ಕೇಂದ್ರದ ಮಾಜಿ ಸಚಿವರಿಗೆ ಬುಧವಾರ ಬಿಡುಗಡೆಯ ಭಾಗ್ಯ ದೊರೆತಿತ್ತು. 2 ಲಕ್ಷ ಬಾಂಡ್ ಹಾಗೂ ಇಬ್ಬರು ಶ್ಯೂರಿಟಿ ಸೇರಿದಂತೆ, ಅನುಮತಿಯಿಲ್ಲದೆ ದೇಶ ಬಿಡುವಂತಿಲ್ಲ ಎಂದು ಷರತ್ತು ವಿಧಿಸಿ ಜಾಮೀನು ನೀಡಲಾಗಿದೆ.
ಪ್ರಕರಣದ ಹಿನ್ನೆಲೆಯಲ್ಲಿ ಕೇಂದ್ರ ಮಾಜಿ ಸಚಿವರು ಸಾರ್ವಜನಿಕ ಹೇಳಿಕೆ ಹಾಗೂ ಯಾವುದೇ ಮಾಧ್ಯಮಗಳಿಗೆ ಸಂದರ್ಶನ ನೀಡಬಾರದು ಎಂದು ಕೋರ್ಟ್ ಸೂಚಿಸಿತ್ತು. ನವೆಂಬರ್ 15ರಂದು ಪ್ರಕರಣ ಸಂಬಂಧ ಅರ್ಜಿ ವಿಚಾರಣೆ ನಡೆಸಿ ದೆಹಲಿ ಹೈಕೋರ್ಟ್ ಜಾಮೀನು ನಿರಾಕರಿಸಿತ್ತು. ಐಎನ್ ಎಕ್ಸ್ ಪ್ರಕರಣದಲ್ಲಿ ಚಿದಂಬರಂ ಅವರದ್ದು ಪ್ರಮುಖ ಪಾತ್ರವಿದ್ದು, ಅವರಿಗೆ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಹೇಳಿತ್ತು.
I WILL ADDRESS THE MEDIA LATER TODAY (DEC 5th) AT 12.30 pm at AICC.
ಏನಿದು ಪ್ರಕರಣ?
ಚಿದಂಬರಂ ಅವರು 2007ರಲ್ಲಿ ಕೇಂದ್ರ ಹಣಕಾಸು ಸಚಿವರಾಗಿದ್ದಾಗ ಐಎನ್‍ಎಕ್ಸ್ ಮೀಡಿಯಾ ಸಂಸ್ಥೆಗೆ ವಿದೇಶ ಬಂಡವಾಳ ಹೂಡಿಕೆ ಪ್ರೋತ್ಸಾಹಕಾ ಮಂಡಳಿ (ಎಫ್‍ಐಪಿಬಿ)ಯ ಅನುಮೋದನೆ ಸಿಕ್ಕಿತ್ತು. ಈ ಮೂಲಕ ಐಎನ್‍ಎಕ್ಸ್ ಮೀಡಿಯಾ ಸಂಸ್ಥೆಗೆ 305 ಕೋಟಿ ರೂ. ಮೊತ್ತದಷ್ಟು ವಿದೇಶಿ ಬಂಡವಾಳ ಹೂಡಿಕೆ ಲಭ್ಯವಾಗಿತ್ತು. ಆದರೆ ಪುತ್ರ ಕಾರ್ತಿ ಚಿದಂಬರಂ ಶಿಫಾರಸಿನ ಮೇಲೆ ಈ ಅನುಮೋದನೆಯನ್ನು ಚಿದಂಬರಂ ಕೊಟ್ಟಿದ್ದರು ಎಂಬ ಆರೋಪ ಕೇಳಿ ಬಂದಿತ್ತು.
ಈ ಪ್ರಕರಣ ಬಯಲಿಗೆ ಬರುತ್ತಿದ್ದಂತೆ ಕಂದಾಯ ಸಚಿವಾಲಯ ವಿಚಾರಣೆಗೆ ಆದೇಶಿಸಿತ್ತು. ಈ ಸಂದರ್ಭದಲ್ಲಿ ಪಿ ಚಿದಂಬರಂ ಅವರ ಮಗ ಕಾರ್ತಿ ಚಿದಂಬರಂ ಅವರು ಮಧ್ಯಸ್ಥಿಕೆ ವಹಿಸಿ, ತಂದೆಯ ಪ್ರಭಾವವನ್ನು ಬಳಸಿಕೊಂಡು ವಿಚಾರಣೆಯನ್ನು ತಪ್ಪಿಸಲು ತಮ್ಮ ಕಂಪನಿಯ ಮೂಲಕ 10 ಕೋಟಿ ರೂಪಾಯಿ ಲಂಚ ಪಡೆದಿದ್ದಾರೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಸಿಬಿಐ, 2017ರಲ್ಲಿ ಐಎನ್‍ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಚಿದಂಬರಂ ಮತ್ತಿತರರ ವಿರುದ್ಧ ಎಫ್‍ಐಆರ್ ದಾಖಲಿಸಿ ಬಂಧಿಸಿತ್ತು. ಇದನ್ನೂ ಓದಿ: ಬಂಧನಕ್ಕೊಳಗಾದ ನಂತರ ಚಿದಂಬರಂ ತೂಕ 8-9 ಕೆಜಿ ಕಡಿಮೆಯಾಗಿದೆ – ಕುಟುಂಬಸ್ಥರ ಬೇಸರ
ನವದೆಹಲಿ: ಜಾತ್ಯತೀತ ಮತ್ತು ಸಂವಿಧಾನ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿರುವ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳು ಆಗ್ರಹಿಸಿವೆ.
ಕಾಂಗ್ರೆಸ್ ನಾಯಕ ಗುಲಾಂ ನಬಿ ಅಜಾದ್ ಮಾತನಾಡಿ, ಸಂವಿಧಾನದಲ್ಲಿ ಯಾರಿಗೆ ನಂಬಿಕೆ ಇಲ್ಲವೋ ಅವರು ಸಂಸತ್ತಿನಲ್ಲಿ ಇರಲು ಯಾವುದೇ ಹಕ್ಕಿಲ್ಲ ಎಂದು ಹೇಳಿದರು. ಇದೇ ವೇಳೆ ಚಯರ್‍ಮನ್ ಆಗಿರುವ ವೆಂಕಯ್ಯ ನಾಯ್ಡು ಅವರ ಮುಂಭಾಗ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅನಂತ್ ಕುಮಾರ್ ಹೆಗ್ಡೆ ಅವಮಾನ ಮಾಡಿದ್ದಾರೆ ಎಂದು ಘೋಷಣೆ ಕೂಗಿ ಪ್ರತಿಭಟಿಸಿದರು.
ಪ್ರತಿಪಕ್ಷಗಳ ಪ್ರತಿಭಟನೆಯಿಂದ ಲೋಕಸಭಾ ಕಲಾಪವನ್ನು ಒಂದು ಗಂಟೆಗಳ ಕಾಲ ಮುಂದೂಡಲಾಯಿತು. ರಾಜ್ಯಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವ ವಿಜಯ್ ಗೋಯಲ್ ಅನಂತ್ ಕುಮಾರ್ ಹೆಗ್ಡೆ ಹೇಳಿಕೆ ಸರ್ಕಾರದ ಹೇಳಿಕೆಯಲ್ಲ ಎಂದು ಸಮಜಾಯಿಷಿ ನೀಡಿದರು.
ಸಾಧಾರಣವಾಗಿ ಪ್ರಧಾನಿ ನರೇಂದ್ರ ಮೋದಿ ಬುಧವಾರದ ಲೋಕಸಭಾ ಕಲಾಪಕ್ಕೆ ಹಾಜರಾಗುತ್ತಿರುತ್ತಾರೆ. ಆದರೆ ಇಂದು ಜೈರಾಮ್ ಠಾಕೂರ್ ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಕಾರ್ಯಕ್ರಮಕ್ಕೆ ತೆರಳಿದ್ದರಿಂದ ಗೈರಾಗಿದ್ದರು.
ಹೆಗ್ಡೆ ಹೇಳಿದ್ದು ಏನು?
ಕೊಪ್ಪಳದ ಯಲಬುರ್ಗಾ ತಾಲೂಕಿನ ಕೊಕನೂರಿನಲ್ಲಿ ಬ್ರಾಹ್ಮಣ ಯುವ ಪರಿಷತ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅನಂತ್ ಕುಮಾರ್ ಹೆಗ್ಡೆ, ಇತ್ತೀಚೆಗೆ ಹೊಸದೊಂದು ಸಂಪ್ರದಾಯ ಬಂದುಬಿಟ್ಟಿದೆ. ಅದ್ಯಾವುದೆಂದರೆ ಜಾತ್ಯತೀತರು. ನಾನೊಬ್ಬ ಹಿಂದೂ ಅಥವಾ ಮುಸ್ಲಿಂ ಅಥವಾ ಕ್ರೈಸ್ತ, ಲಿಂಗಾಯತ ಅಂತಾ ಯಾರದ್ರೂ ತಮ್ಮ ಧರ್ಮವನ್ನು ಹೆಮ್ಮೆಯಿಂದ ಹೇಳಿಕೊಂಡರೆ ನನಗೆ ಖುಷಿ ಅನಿಸುತ್ತೆ. ಯಾಕಂದ್ರೆ ಅವರಿಗೆ ಅವರ ರಕ್ತದ ಅರಿವಿದೆ ಎಂದರ್ಥ. ಆದ್ರೆ ಈ ಜಾತ್ಯತೀತರು ಅಂತ ಕರೆದುಕೊಳ್ಳುತ್ತಾರೆ ಅಲ್ವ. ಅಂಥವರು ಅಪ್ಪ-ಅಮ್ಮನ ಗುರುತು ಇಲ್ಲದೇ ಇರುವ ರಕ್ತವನ್ನು ಹೊಂದಿರುವವರು ಜಾತ್ಯತೀತರು ಅಂತ ಕರೆದುಕೊಳ್ಳುತ್ತಾರೆ ಎಂದು ಲೇವಡಿ ಮಾಡಿದ್ದರು.
ಜಾತ್ಯತೀತರಿಗೆ ತಮ್ಮ ಗುರುತೇ ತಮಗಿರುವುದಿಲ್ಲ. ಮಾತು ಎತ್ತಿದ್ರೆ ದೊಡ್ಡ ವಿಚಾರವಾದಿಗಳು. ಅಪ್ಪ-ಅಮ್ಮನ ಪರಿಚಯ ಇಲ್ಲದೇ ಇರೋ ಇವರುಗಳು ದೊಡ್ಡ ವಿಚಾರವಾದಿಗಳು. ಇವರನ್ನು ಜಾತಿಯ ಜೊತೆ ಕೂರಿಸಿಕೊಳ್ಳುತ್ತಿರೋ ಅಥವಾ ನಿಮ್ಮ ಕುಲದ ಜೊತೆ ಕೂರಿಸಿಕೊಳ್ಳುತ್ತಿರೋ ಗುರುತಿಸಿಕೊಳ್ಳಿ ಸ್ವಾಮಿ. ನಿಮಗೆ ನಿಮ್ಮ ರಕ್ತದ ಪರಿಚಯ ಇದ್ದಿದ್ದೇ ಆದ್ರೆ ನಿಮ್ಮ ಕಾಲು ಮುಟ್ಟಿ ನಮಸ್ಕರಿಸುತ್ತೇನೆ. ಆದ್ರೆ ಜಾತ್ಯತೀತರು ಅಂತ ಹೇಳಿದ್ರೆ ಮಾತ್ರ ಸ್ವಲ್ಪ ನೀವು ಯಾರು ಅಂತ ಸಂಶಯ ಬರುತ್ತೆ ಅಂತ ಹೇಳಿದ್ದರು. ಇದನ್ನೂ ಓದಿ: ಕೌಶಲ್ಯಾಭಿವೃದ್ಧಿ ಸಚಿವಾಲಯ ನೀರಿಲ್ಲದ ಬಾವಿ ಇದ್ದಂತೆ: ಅನಂತ್ ಕುಮಾರ್ ಹೆಗ್ಡೆ
ಹೌದು. ಸಂವಿಧಾನ ಜಾತ್ಯತೀತರು ಅಂತ ಹೇಳಿದೆ. ನಾವು ಸಂವಿಧಾನಕ್ಕೆ ಗೌರವ ಕೊಡುತ್ತೇವೆ. ಆದ್ರೆ ಸಂವಿಧಾನ ಕಾಲಕ್ಕೆ ತಕ್ಕಂತೆ ಅದೆಷ್ಟೋ ಬಾರಿ ಬದಲಾಗಿದೆ. ಮುಂದಿನ ದಿನಗಳಲ್ಲೂ ಬದಲಾಗುತ್ತೆ. ನಿಮಗೆ ಸಂಪ್ರದಾಯ, ಪರಂಪರೆ, ಸಂಸ್ಕೃತಿ ಇದರ ಐತಿಹಾಸಿಕ ಹೆಜ್ಜೆಯ ಗುರುತುಗಳೇ ನಿಮಗೆ ಗೊತ್ತಿಲ್ಲ. ನೀವು ಮೂರ್ಖರು. ಜಗತ್ತಿನ ಭೂಪಟಗಳು, ಸಾಮಾಜಿಕ ಚಿತ್ರಣ ಬದಲಾಗಿ ಹೋಗಿದೆ. ಹೀಗಾಗಿ ನಾವು ಸಂವಿಧಾನವನ್ನು ಬದಲಿಸುತ್ತೇವೆ ಎಂದು ಹೇಳಿಕೆ ನೀಡಿದ್ದರು.
ಯಾರಿಗೆ ಸಭ್ಯತೆಯ ಅರಿವಿದೆ ಅಂತವರು ಸಂಸ್ಕಾರ ಎಂಬ ಶಬ್ಧವನ್ನು ಒಪ್ಪಿಕೊಳ್ಳಲೇ ಬೇಕು. ಆದ್ರೆ ಯಾರಿಗೆ ಈ ಶಬ್ಧ ಪರಿಚಯ ಇಲ್ಲವೋ ಅಥವಾ ಒಳ್ಳೆದು ಮತ್ತು ಕೆಟ್ಟದರ ಮಧ್ಯೆ ಇರೋ ಕಂದಕ ಗೊತ್ತಿಲ್ಲವೋ ಅಂತವರು ಶಿಕ್ಷಣವೇ ಸಂಸ್ಕಾರ ಅಂದುಕೊಂಡಿರುತ್ತಾರೆ. ಅಂತಹ ಮೂಢಮತಿಗಳ ಬಗ್ಗೆ ನಾನೇನೂ ಹೇಳುವುದಿಲ್ಲ ಎಂದು ಹೇಳಿದ್ದರು.