Tag: ಸಂಸತ್ ಭವನ

  • ಸಂಸತ್‌ ಭವನದಲ್ಲಿ ಮತ್ತೆ ಭದ್ರತಾ ವೈಫಲ್ಯ – ಗೋಡೆ ಹಾರಿ ಆವರಣಕ್ಕೆ ಎಂಟ್ರಿ

    ಸಂಸತ್‌ ಭವನದಲ್ಲಿ ಮತ್ತೆ ಭದ್ರತಾ ವೈಫಲ್ಯ – ಗೋಡೆ ಹಾರಿ ಆವರಣಕ್ಕೆ ಎಂಟ್ರಿ

    ನವದೆಹಲಿ: ದೆಹಲಿಯಲ್ಲಿರುವ ಸಂಸತ್‌ ಭವನದಲ್ಲಿ (Parliament) ಮತ್ತೊಮ್ಮೆ ಭದ್ರತಾ ಉಲ್ಲಂಘನೆಯಾಗಿದೆ. ಶುಕ್ರವಾರ ಬೆಳಗ್ಗೆ ವ್ಯಕ್ತಿಯೊಬ್ಬ ಮರವನ್ನು ಹತ್ತಿ ಗೋಡೆ ಏರುವ ಮೂಲಕ ಸಂಸತ್ತಿನ ಭವನದ ಆವರಣವನ್ನು (Security Breach) ಪ್ರವೇಶಿಸಿದ್ದಾನೆ.

    ಈ ಘಟನೆ ಬೆಳಿಗ್ಗೆ 6:30 ರ ಸುಮಾರಿಗೆ ನಡೆದಿದೆ. ರೈಲ್ ಭವನದ ಕಡೆಯಿಂದ ಗೋಡೆ ಮೇಲೆ ಹಾರಿದ್ದ ವ್ಯಕ್ತಿ ಹೊಸ ಸಂಸತ್ತಿನ ಕಟ್ಟಡದ ಗರುಡ ಗೇಟ್ ಅನ್ನು ತಲುಪಿದ್ದ.

    ಒಳನುಗ್ಗಿದ ವ್ಯಕ್ತಿಯನ್ನು ಭದ್ರತಾ ಸಿಬ್ಬಂದಿ ಬಂಧಿಸಿದ್ದಾರೆ. ಆತನನ್ನು ಈಗ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಇದೇ 28 ರಂದು ಬೆಂಗಳೂರಿನಲ್ಲಿ ಮದುವೆಯಾಗಲಿದ್ದಾರೆ ಅನುಶ್ರೀ

     

    ಸಂಸತ್ತಿನ ಮಳೆಗಾಲದ ಅಧಿವೇಶನ ಗುರುವಾರ ಮುಕ್ತಾಯವಾಗಿತ್ತು. ಅಧಿವೇಶನ ಮುಕ್ತಾಯವಾದ ಒಂದು ದಿನದ ನಂತರ ಭದ್ರತಾ ಉಲ್ಲಂಘನೆಯಾಗಿದೆ. ಆಗಾಗ್ಗೆ ಅಡ್ಡಿಪಡಿಸುವಿಕೆಗಳೊಂದಿಗೆ ಮುಕ್ತಾಯಗೊಂಡ ಒಂದು ದಿನದ ನಂತರ ಈ ಘಟನೆ ನಡೆದಿದೆ. ಇದನ್ನೂ ಓದಿ: ನನ್ನ ಬಾಹ್ಯಾಕಾಶ ಯಾತ್ರೆಯೂ ಇಡೀ ದೇಶದ ಧ್ಯೇಯವಾಗಿತ್ತು ಧನ್ಯವಾದ ತಿಳಿಸಿದ ಶುಭಾಂಶು ಶುಕ್ಲಾ

    ಕಳೆದ ವರ್ಷ 20 ರ ಹರೆಯದ ವ್ಯಕ್ತಿಯೊಬ್ಬ ಸಂಸತ್ತಿನ ಗೋಡೆಯನ್ನು ಹತ್ತಿ ಅನೆಕ್ಸ್ ಕಟ್ಟಡದ ಆವರಣದೊಳಗೆ ಹಾರಿದಾಗ ಇದೇ ರೀತಿಯ ಭದ್ರತಾ ಉಲ್ಲಂಘನೆಯ ಘಟನೆ ಸಂಭವಿಸಿತ್ತು.

    2023 ರಲ್ಲಿ ಲೋಕಸಭೆಯಲ್ಲಿ ಕಲಾಪ ನಡೆಯುತ್ತಿದ್ದಾಗಲೇ ಸಾಗರ್ ಶರ್ಮಾ ಮತ್ತು ಮನೋರಂಜನ್ ಡಿ ಸಾರ್ವಜನಿಕ ಗ್ಯಾಲರಿಯಿಂದ ಕೆಳಗೆ ಧುಮುಕಿದ್ದರು. ಇನ್ನಿಬ್ಬರು ಸಂಸತಿನ ಹೊರಗಿನ ಆವರಣದಲ್ಲಿ ಸ್ಮೋಕ್‌ ಬಾಂಬ್‌ ಸಿಡಿಸಿದ್ದರು. ಈ ನಾಲ್ವರನ್ನೂ ನಂತರ ಭದ್ರತಾ ಸಿಬ್ಬಂದಿ ಬಂಧಿಸಿದ್ದರು.

  • `SIR’ ಅಭಿಯಾನ ಚರ್ಚೆಗೆ ಒತ್ತಾಯಿಸಿ ವಿಪಕ್ಷಗಳ ಪ್ರತಿಭಟನೆ – ಲೋಕಸಭೆ, ರಾಜ್ಯಸಭೆಯ ಕಲಾಪ ಮುಂದೂಡಿಕೆ

    `SIR’ ಅಭಿಯಾನ ಚರ್ಚೆಗೆ ಒತ್ತಾಯಿಸಿ ವಿಪಕ್ಷಗಳ ಪ್ರತಿಭಟನೆ – ಲೋಕಸಭೆ, ರಾಜ್ಯಸಭೆಯ ಕಲಾಪ ಮುಂದೂಡಿಕೆ

    – ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ವಿರೋಧಿಸಿ ಸಂಸತ್ತಿನ ಮಕರದ್ವಾರದಲ್ಲಿ ಟಿ-ಶರ್ಟ್‌ ಪ್ರತಿಭಟನೆ

    ನವದೆಹಲಿ: ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR – ಸರ್‌) ವಿಚಾರವಾಗಿ ವಿರೋಧ ಪಕ್ಷಗಳು ಪ್ರತಿಭಟನೆ ಮುಂದುವರಿಸಿದ್ದರಿಂದ ಇಂದು ಸಹ ಲೋಕಸಭೆ (Lok Sabha) ಮತ್ತು ರಾಜ್ಯಸಭೆಯ (Rajya Sabha) ಕಲಾಪವನ್ನ ಮುಂದೂಡಲಾಯಿತು.

    ಮತಗಳವು, ಬಿಹಾರದ ಎಸ್‌ಐಆರ್ ವಿರೋಧಿಸಿ ಸಂಸತ್ ಭವನದ ಸಂಕೀರ್ಣದಲ್ಲಿ INDIA ಒಕ್ಕೂಟದ ಪಕ್ಷಗಳ ಸಂಸದರು ‘ಟಿ-ಶರ್ಟ್ ಪ್ರತಿಭಟನೆ’ ನಡೆಸಿದರು. ಬಿಹಾರ ಮತದಾರರ ಪಟ್ಟಿಯಲ್ಲಿದ್ದಾರೆ ಎನ್ನಲಾದ 124 ವರ್ಷ ವಯಸ್ಸಿನ ಮತದಾರ ಮಹಿಳೆಯ ಹೆಸರು ಹೊಂದಿರುವ ಬಿಳಿ ಟಿ-ಶರ್ಟ್‌ಗನ್ನು (T Shirt) ಧರಿಸಿ ಪ್ರತಿಪಕ್ಷಗಳು ಸಂಸದರು, ಪ್ರತಿಭಟನೆ (Protest) ನಡೆಸಿದರು. ಇದನ್ನೂ ಓದಿ: ಬೀದಿ ನಾಯಿಗಳ ಸ್ಥಳಾಂತರ; ಸುಪ್ರೀಂ ಆದೇಶಕ್ಕೆ ರಾಹುಲ್ ಗಾಂಧಿ ಆಕ್ಷೇಪ  

    ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ಎನ್‌ಸಿಪಿಯ ಸುಪ್ರಿಯಾ ಸುಳೆ, ಟಿಎಂಸಿಯ ಒಬ್ರೇನ್, ಡಿಎಂಕೆಯ ಟಾರ್ ಬಾಲು, ಎಡ ಪಕ್ಷಗಳ ಇತರ ವಿರೋಧ ಪಕ್ಷದ ಸಂಸದರು ಸಂಸತ್ತಿನ ಮಕರ ದ್ವಾರದ ಬಳಿ ಜಮಾಯಿಸಿ ಪ್ರತಿಭಟನೆಮಾಡಿದರು. ರಾಜೀವ್ ಕುಮಾರ್ ಮತ್ತು ಜ್ಞಾನೇಶ್ ಕುಮಾರ್ ನೇತೃತ್ವದ ಚುನಾವಣಾ ಆಯೋಗವು ಬಿಜೆಪಿಯ ಇಲಾಖೆಯಾಗಿದೆ ಎಂದು ಕಾಂಗ್ರೆಸ್‌ನ ಮಾಣಿಕಮ್ ಟ್ಯಾಗೋರ್ ಆರೋಪಿಸಿದರು. 2018ರ ಅಸೆಂಬ್ಲಿ ಚುನಾವಣೆಯಲ್ಲಿ ಸಿದ್ದರಾಮಯ್ಯ ಗೆಲುವಿಗಾಗಿ 3 ಸಾವಿರ ಮತ ಖರೀದಿಸಲಾಗಿತ್ತು ಎಂಬ ಸಿಎಂ ಇಬ್ರಾಹಿಂ ಹೇಳಿಕೆ ಆಧರಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ರಾಜ್ಯಸಭಾ ಬಿಜೆಪಿ ಸಂಸದ ಲೇಹರ್ ಸಿಂಗ್ ದೂರು ನೀಡಿದ್ದಾರೆ.

    ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇತ್ತ, ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಪ್ರಸನ್ನಾ ಎಂಬ ಮಹಿಳೆಯೊಬ್ಬರು ತಮ್ಮ ವಿಳಾಸ ಬಳಸಿಕೊಂಡು ತಮಗೆ ತಿಳಿಯದೇ 9 ನಕಲಿ ಮತಗಳನ್ನು ನೋಂದಾಯಿಸಲಾಗಿದೆ ಎಂದು ಆರೋಪಿಸಿ ಡಿಸಿಗೆ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಏನ್‌ ಮಾಡ್ತಿದ್ದೀರಿ… ಸೆಲ್ಫಿ ಕ್ಲಿಕ್ಕಿಸಿಕೊಳ್ತಿದ್ದ ವ್ಯಕ್ತಿಯನ್ನ ಗದರಿಸಿ ದೂರ ತಳ್ಳಿದ ಜಯಾ ಬಚ್ಚನ್‌

  • ಸಂಸತ್‌ ಭವನ ಪಕ್ಕದ ಮಸೀದಿಯಲ್ಲಿ ಎಸ್ಪಿ ಸಂಸದರೊಟ್ಟಿಗೆ ಅಖಿಲೇಶ್‌ ಯಾದವ್‌ ಸಭೆ – ಕೆರಳಿದ ಬಿಜೆಪಿ

    ಸಂಸತ್‌ ಭವನ ಪಕ್ಕದ ಮಸೀದಿಯಲ್ಲಿ ಎಸ್ಪಿ ಸಂಸದರೊಟ್ಟಿಗೆ ಅಖಿಲೇಶ್‌ ಯಾದವ್‌ ಸಭೆ – ಕೆರಳಿದ ಬಿಜೆಪಿ

    – ಬಿಜೆಪಿ ವಿಭಜನೆ ಮಾಡೋದನ್ನೇ ನೋಡ್ತಿದೆ ಅಂತ ಎಸ್ಪಿ ಮುಖ್ಯಸ್ಥ ತಿರುಗೇಟು
    – ಅಖಿಲೇಶ್‌ ಕ್ಷಮೆಯಾಚಿಸುವಂತೆ ವಕ್ಫ್‌ ಮಂಡಳಿ ಪಟ್ಟು

    ನವದೆಹಲಿ: ಮುಂಗಾರು ಅಧಿವೇಶನ ನಡೆಯುತ್ತಿರುವ ಹೊತ್ತಿನಲ್ಲೇ ಸಮಾಜವಾದಿ ಪಕ್ಷದ (SP) ಮುಖ್ಯಸ್ಥ ಅಖಿಲೇಶ್‌ ಯಾದವ್‌ (Akhilesh Yadav) ಸಂಸತ್‌ ಭವನದ ಪಕ್ಕದ ಮಸೀದಿಯಲ್ಲಿ ಸಭೆ ನಡೆಸಿರುವುದು ಚರ್ಚೆಗೆ ಗ್ರಾಸವಾಗಿದೆ.

    ಎಸ್ಪಿ ಸಂಸದರೊಟ್ಟಿಗೆ ಅಖಿಲೇಶ್‌ ಯಾದವ್‌ ಸಭೆ ನಡೆಸಿರುವುದನ್ನು ಬಿಜೆಪಿ (BJP) ತೀವ್ರವಾಗಿ ಖಂಡಿಸಿದೆ. ಮಸೀದಿಯನ್ನು ನಿಮ್ಮ ಸಮಾಜವಾದಿ ಪಕ್ಷದ ಕಚೇರಿಯಾಗಿ ಬದಲಾವಣೆ ಮಾಡ್ಕೊಂಡಿದ್ದೀರಾ? ಅಂತ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಪ್ರಶ್ನಿಸಿದೆ. ಇದನ್ನೂ ಓದಿ: ಮಂಗಳೂರಿನಲ್ಲಿ ವೀರರಾಣಿ ಅಬ್ಬಕ್ಕ ಹೆಸರಿನ ಮೆರಿಟೈಮ್ ವಿವಿ ಸ್ಥಾಪನೆಗೆ ಕ್ಯಾ.ಚೌಟ ಮನವಿ

    ಇದಕ್ಕೆ ಇರುಗೇಟು ನೀಡಿರುವ ಅಖಿಲೇಶ್‌ ಯಾದವ್‌, ಮದೀಸಿಗೆ ನನ್ನ ಭೇಟಿಯ ಬಗ್ಗೆ ಬಿಜೆಪಿ ವಿವಾದ ಸೃಷಿಸುತ್ತಿದೆ. ನಮಗೆ ಎಲ್ಲಾ ಧರ್ಮಗಳಲ್ಲಿಯೂ ನಂಬಿಕೆ ಇದೆ. ನಾವು ಒಗ್ಗಟ್ಟಾಗುತ್ತೇವೆ ಅನ್ನೋ ನಂಬಿಕೆ ನಮಗಿದೆ. ಆದ್ರೆ ಬಿಜೆಪಿ ವಿಭಜನೆಯಾಗಿಯೇ ಉಳಿಯಬೇಕೆಂದು ಬಯಸುತ್ತದೆ ಅಂತ ತಿರುಗೇಟು ನೀಡಿದ್ದಾರೆ.

    ಮುಂದುವರಿದು.. ಯಾವುದೇ ಧರ್ಮದಲ್ಲಿ ನಂಬಿಕೆಯಿದ್ದರೆ, ಅದು ಎಲ್ಲರನ್ನೂ ಒಗ್ಗೂಗೂಡಿಸುತ್ತದೆ. ಆದ್ರೆ ಬಿಜೆಪಿ ಜನರ ನಡುವಿನ ಅಂತರವನ್ನೇ ನೋಡಲು ಬಯಸುತ್ತೆ. ಬಿಜೆಪಿಯ ತಂತ್ರಗಳ ಬಗ್ಗೆ ಈಗ ಜನಕ್ಕೆ ಅರ್ಥವಾಗಿದೆ. ʻಧರ್ಮʼ ಅನ್ನೋದನ್ನೇ ಬಿಜೆಪಿ ಅಸ್ತ್ರವಾಗಿ ಮಾಡಿಕೊಂಡಿದೆ ಎಂದು ತಿವಿದಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಗಳಲ್ಲಿ ನವಜಾತ ಶಿಶು ಕಳ್ಳತನ ತಡೆಯಲು ಹೊಸ ಕ್ರಮ – ಏನಿದು ಕೋಡ್‌ ಪಿಂಕ್‌?

    ಇನ್ನೂ ಸಮಾಜವಾದಿ ಪಕ್ಷದ ಸಂಸದ ರಾಜೀವ್ ರೈ ಮಾತನಾಡಿ, ನಾವು ಈಗ ದೇವಸ್ಥಾನ ಮತ್ತು ಮಸೀದಿಗೆ ಹೋಗಲು ಬಿಜೆಪಿಯಿಂದ ಲೈಸೆನ್ಸ್‌ ಪಡೆಯಬೇಕೇ? ಅಂತ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಬಾಹ್ಯಾಕಾಶದಲ್ಲಿ 18 ದಿನ – ಭೂಮಿಯಲ್ಲಿ ಮತ್ತೆ ನಡೆಯುವುದನ್ನ ಕಲಿಯುತ್ತಿದ್ದಾರೆ ಶುಭಾಂಶು ಶುಕ್ಲಾ

    ಮತ್ತೊಂದೆಡೆ ಅಖಿಲೇಶ್‌ ಯಾದವ್‌ ಮಸೀದಿಗೆ ಭೇಟಿ ನೀಡಿದ ವಿಚಾರಕ್ಕೆ ಉತ್ತರಾಖಂಡ್ ವಕ್ಫ್ ಮಂಡಳಿ ಕೂಡ ಅಸಮಾಧಾನ ಹೊರಹಾಕಿದೆ. ಮಸೀದಿಯೊಳಗೆ ನಡೆದ ರಾಜಕೀಯ ಸಭೆಯು ಮುಸ್ಲಿಮರ ಭಾವನೆಗಳಿಗೆ ನೋವುಂಟು ಮಾಡಿದೆ. ಅಖಿಲೇಶ್‌ ಕ್ಷಮೆಯಾಚಿಸಬೇಕೆಂದು ವಕ್ಫ್‌ ಮಂಡಳಿಯ ಅಧ್ಯಕ್ಷ ಶಾದಾಬ್ ಶಮ್ಸ್ ಒತ್ತಾಯಿಸಿದ್ದಾರೆ.

  • ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ಪ್ರಕರಣ – ಇಬ್ಬರು ಆರೋಪಿಗಳಿಗೆ ಜಾಮೀನು

    ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ಪ್ರಕರಣ – ಇಬ್ಬರು ಆರೋಪಿಗಳಿಗೆ ಜಾಮೀನು

    – ದಾಳಿಯ ಮಾಸ್ಟರ್‌ ಮೈಂಡ್‌ ಮೈಸೂರಿನ ಮನೋರಂಜನ್‌ಗೆ ಸಿಗದ ಬೇಲ್‌

    ನವದೆಹಲಿ: 2023ರ ಡಿಸೆಂಬರ್‌ 13ರಂದು ನಡೆದಿದ್ದ ಸಂಸತ್ತಿನ ಭದ್ರತಾ ಲೋಪ ಪ್ರಕರಣದ (Parliament Security Breach Case) ಇಬ್ಬರು ಆರೋಪಿಗಳಿಗೆ ದೆಹಲಿ ಹೈಕೋರ್ಟ್ (Delhi High Court) ಬುಧವಾರ ಷರತ್ತುಬದ್ಧ ಜಾಮೀನು ನೀಡಿದೆ.

    ನ್ಯಾಯಮೂರ್ತಿಗಳಾದ ಸುಬ್ರಮೋನಿಯಂ ಪ್ರಸಾದ್ ಮತ್ತು ಹರೀಶ್ ವೈದ್ಯನಾಥನ್ ಶಂಕರ್ ಅವರಿದ್ದ ದ್ವಿಸದಸ್ಯ ಪೀಠವು ನೀಲಂ ಆಜಾದ್, ಮಹೇಶ್ ಕುಮಾವತ್‌ಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಆರೋಪಿಗಳಿಗೆ ತಲಾ 50,000 ರೂ. ಬಾಂಡ್ ಮತ್ತು ಇಬ್ಬರು ಶ್ಯೂರಿಟಿ ಸಲ್ಲಿಸುವಂತೆ ನಿರ್ದೇಶಿಸಿದೆ. ಇದನ್ನೂ ಓದಿ: ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ದಾಳಿಯ ಮಾಸ್ಟರ್‌ ಮೈಂಡ್‌ ಮೈಸೂರಿಗ ಮನೋರಂಜನ್‌: ದೆಹಲಿ ಪೊಲೀಸರು

    Security breach in Lok Sabha

    ಪ್ರಕರಣ ಮುಗಿಯುವವರೆಗೆ ದೆಹಲಿ ಬಿಟ್ಟು ಹೋಗದಂತೆ ಸೂಚಿಸಿರುವ ಕೋರ್ಟ್‌ ಪ್ರತಿ ಸೋಮವಾರ, ಬುಧವಾರ ಮತ್ತು ಶುಕ್ರವಾರ ಬೆಳಗ್ಗೆ 10 ಗಂಟೆ ವೇಳೆಗೆ ಗೊತ್ತುಪಡಿಸಿದ ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿದೆ. ಇದಕ್ಕೂ ಮುನ್ನ ವಿಚಾರಣೆ ನಡೆಸಿದ್ದ ಪಟಿಯಾಲ ಹೌಸ್ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ (ASJ) ಹರ್ದೀಪ್ ಕೌರ್ ಆಜಾದ್ ಜಾಮೀಜು ಅರ್ಜಿಯನ್ನು ತಿರಸ್ಕರಿಸಿದ್ದರು. ಇದನ್ನೂ ಓದಿ: Tamil Nadu Custodial Death | ಕೊಲೆಗಾರರು ಹೀಗೆ ದಾಳಿ ಮಾಡಲ್ಲ – ಹೈಕೋರ್ಟ್‌ ಛೀಮಾರಿ; ಐವರು ಪೊಲೀಸರು ಅರೆಸ್ಟ್‌

    ಮೈಸೂರಿನ ಮನೋರಂಜನ್‌ಗೆ ಸಿಗದ ಜಾಮೀನು
    ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿರುವ ಕೋರ್ಟ್‌ ಮಾಸ್ಟರ್‌ ಮೈಂಡ್‌ಗಳಾದ ಸಾಗರ್ ಶರ್ಮಾ ಮತ್ತು ಮನೋರಂಜನ್‌ಗೆ ಜಾಮೀನು ನಿರಾಕರಿಸಿದೆ. ಮೈಸೂರು ಮೂಲದ ಮನೋರಂಜನ್‌ ಅಂದಿನ ಸಂಸದ ಪ್ರತಾಪ್‌ ಸಿಂಹ ಅವರ ಮೂಲಕ ಪಾಸ್‌ ಪಡೆದು ಸಂಸತ್‌ ಪ್ರವೇಶಿಸಿದ್ದರು. ಇದನ್ನೂ ಓದಿ: ಓಲಾ, ಊಬರ್ ಬಳಕೆದಾರರಿಗೆ ಶಾಕ್ – ಪೀಕ್ ಅವರ್‌ನಲ್ಲಿ ದುಪ್ಪಟ್ಟು ದರ ವಿಧಿಸಲು ಕೇಂದ್ರ ಒಪ್ಪಿಗೆ

    Manoranjan

    ಏನಿದು ಪ್ರಕರಣ?
    2023ರ ಡಿಸೆಂಬರ್ 13 ರಂದು ಸಂಸತ್‌ ಭವನದಲ್ಲಿ ಅಧಿವೇಶನ ನಡೆಯುತ್ತಿದ್ದಾಗ ಕೆಲವು ವ್ಯಕ್ತಿಗಳು ಸದನಕ್ಕೆ ನುಗ್ಗಿ ಸ್ಮೋಕ್‌ ಬಾಂಬ್‌ ಎಸೆದಿದ್ದರು. ಸಾಗರ್‌ ಶರ್ಮಾ ಮತ್ತು ಮನೋರಂಜನ್ ಎಂಬ ಇಬ್ಬರು ವ್ಯಕ್ತಿಗಳು ಸಂದರ್ಶಕರ ಗ್ಯಾಲರಿಯಿಂದ ಬಂದು ಸ್ಮೋಕ್‌ ಬಾಂಬ್‌ ಎಸೆದಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದ ದೆಹಲಿ ಪೊಲೀಸರು ಮಾಸ್ಟರ್ ಮೈಂಡ್, ಲಲಿತ್ ಝಾ ಮತ್ತು ಸಹ-ಆರೋಪಿ ಮಹೇಶ್ ಕುಮಾವತ್ ಸೇರಿ ಕೆಲವು ಆರೋಪಿಗಳನ್ನ ಬಂಧಿಸಿದ್ದರು. ಇದನ್ನೂ ಓದಿ: ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ಪ್ರಕರಣ – ಮಾಸ್ಟರ್‌ಮೈಂಡ್‌ ಲಲಿತ್‌ ಬಂಧನ

  • ಮೈಗೆ ಬೆಂಕಿ ಹಚ್ಚಿಕೊಂಡು ಸಂಸತ್‌ ಭವನದ ಕಡೆ ಓಡಿದ ವ್ಯಕ್ತಿ – ದೇಹದ 95% ಭಾಗ ಸುಟ್ಟು ಆಸ್ಪತ್ರೆಗೆ ದಾಖಲು

    ಮೈಗೆ ಬೆಂಕಿ ಹಚ್ಚಿಕೊಂಡು ಸಂಸತ್‌ ಭವನದ ಕಡೆ ಓಡಿದ ವ್ಯಕ್ತಿ – ದೇಹದ 95% ಭಾಗ ಸುಟ್ಟು ಆಸ್ಪತ್ರೆಗೆ ದಾಖಲು

    ನವದೆಹಲಿ: ಹೊಸ ಸಂಸತ್‌ ಭವನದ ಬಳಿ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

    ಕೂಡಲೇ ಸ್ಥಳೀಯ ಹಾಗೂ ರೈಲ್ವೆ ಪೊಲೀಸರು ಕೆಲ ನಾಗರಿಕರೊಂದಿಗೆ ಸೇರಿ ಬೆಂಕಿ ನಂದಿಸಿದ್ದಾರೆ. ಆ ವ್ಯಕ್ತಿಗೆ ಶೇ.95ರಷ್ಟು ಸುಟ್ಟ ಗಾಯಗಳಾಗಿವೆ. ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯ ಕಟ್ಟಡದ ಬಳಿ ನಿಯೋಜಿಸಲಾಗಿದ್ದ ಭದ್ರತಾ ಸಿಬ್ಬಂದಿ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಸ್ಥಳದಲ್ಲಿ ಭಾಗಶಃ ಸುಟ್ಟ ಎರಡು ಪುಟಗಳ ನೋಟ್‌ ಪತ್ತೆಯಾಗಿದೆ. ಜಿತೇಂದ್ರ ಅವರ ದೇಹದ ಮೇಲೆ ಶೇಕಡಾ 95 ರಷ್ಟು ಸುಟ್ಟ ಗಾಯಗಳಾಗಿವೆ. ಅವರನ್ನು ಬರ್ನ್ಸ್ ಐಸಿಯುನಲ್ಲಿ ಪ್ರತ್ಯೇಕ ಹಾಸಿಗೆಯಲ್ಲಿ ಇರಿಸಲಾಗಿದೆ. ಪ್ರಸ್ತುತ, ವೈದ್ಯರ ತಂಡವು ಆತನನ್ನು ಮೇಲ್ವಿಚಾರಣೆ ಮಾಡುತ್ತಿದೆ ಎಂದು ಆಸ್ಪತ್ರೆ ತಿಳಿಸಿದೆ.

    ಉತ್ತರ ಪ್ರದೇಶದ ಬಾಗ್‌ಪತ್‌ನ ಜಿತೇಂದ್ರ ಎಂದು ಗುರುತಿಸಲಾದ ವ್ಯಕ್ತಿ, ರೈಲ್ವೆ ಭವನದ ಬಳಿಯ ಉದ್ಯಾನವನದಲ್ಲಿ ಬೆಂಕಿ ಹಚ್ಚಿಕೊಂಡು ನಂತರ ಸಂಸತ್ ಭವನದ ಕಡೆಗೆ ಓಡಿದ ಎಂದು ಪೊಲೀಸರು ತಿಳಿಸಿದ್ದಾರೆ. ರೈಲ್ವೆ ಭವನ ಸಂಸತ್ತಿನ ಕಟ್ಟಡದ ಎದುರು ಇದೆ.

    ‘ಬಾಗ್‌ಪತ್‌ನಲ್ಲಿ ಮತ್ತೊಂದು ಕುಟುಂಬದ ಜೊತೆ ವ್ಯಕ್ತಿಯೊಬ್ಬನ ಕುಟುಂಬ ಜಗಳವಾಗಿದ್ದು, ಎರಡೂ ಕಡೆಯ ಜನರು ಜೈಲು ಪಾಲಾಗಿದ್ದರು. ಇದರಿಂದ ಮನನೊಂದ ಜಿತೇಂದ್ರ, ಇಂದು ಬೆಳಗ್ಗೆ ರೈಲಿನಲ್ಲಿ ದೆಹಲಿಗೆ ಬಂದಿದ್ದ. ರೈಲ್ವೇ ಭವನದ ವೃತ್ತಕ್ಕೆ ಬಂದು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಸಂಸತ್‌ ಭವನ ಆವರಣದಲ್ಲಿ ಹೈಡ್ರಾಮಾ – ರಾಹುಲ್‌ ತಳ್ಳಿದ್ರಿಂದ ನಾನು ಬಿದ್ದೆ ಎಂದ ಬಿಜೆಪಿ ಸಂಸದ

    ಸಂಸತ್‌ ಭವನ ಆವರಣದಲ್ಲಿ ಹೈಡ್ರಾಮಾ – ರಾಹುಲ್‌ ತಳ್ಳಿದ್ರಿಂದ ನಾನು ಬಿದ್ದೆ ಎಂದ ಬಿಜೆಪಿ ಸಂಸದ

    -ಪ್ರತಾಪ್‌ ಸಾರಂಗಿಯ ತಳ್ಳಿದ ರಾಹುಲ್‌ ಗಾಂಧಿ, ಚಿಕಿತ್ಸೆ ನೀಡಿದ ಡಾ. ಸಿಎನ್‌ ಮಂಜುನಾಥ್‌!

    ನವದೆಹಲಿ: ಅಂಬೇಡ್ಕರ್‌ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ನೀಡಿದ ಹೇಳಿಕೆ ಬಿಜೆಪಿ-ಕಾಂಗ್ರೆಸ್‌ ನಡುವೆ ಕಿಚ್ಚುಹೊತ್ತಿಸಿದೆ. ಉಭಯ ಪಕ್ಷಗಳು ಸಂಸತ್‌ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಭಾರೀ ಹೈಡ್ರಾಮಾ ನಡೆದಿದೆ. ಬಿಜೆಪಿ ಸಂಸದ ಪ್ರತಾಪ್‌ ಸಾರಂಗಿ (Pratap Chandra Sarangi) ಕುಸಿದುಬಿದ್ದಿದ್ದು, ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

    ಕಾಂಗ್ರೆಸ್‌ ಪ್ರತಿಭಟನೆ ವಿರೋಧಿಸಿ ಬಿಜೆಪಿ ಸದಸ್ಯರು ಪ್ರತಿಭಟಿಸುತ್ತಿದ್ದ (BJP MPs Protest) ವೇಳೆ ಪ್ರತಾಪ್‌ ಸಾರಂಗಿ ಅವರನ್ನು ರಾಹುಲ್‌ ಗಾಂಧಿ ತಳ್ಳಿದ್ದು, ಸಾರಂಗಿ ಕುಸಿದು ಬಿದ್ದಿದ್ದಾರೆ ಎಂದು ಆರೋಪಿಸಿದ್ದಾರೆ. ಸದ್ಯ ಪ್ರತಿಭಟನೆ ವೇಳೆ ಗಾಯಗೊಂಡ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ ಅವರಿಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ. ಸಿ.ಎನ್‌ ಮಂಜುನಾಥ್‌ ಅವರು ಚಿಕಿತ್ಸೆ ನೀಡಿದ್ದಾರೆ. ಬಳಿಕ ಅವರನ್ನ ದೆಹಲಿಯ ಆರ್‌ಎಂಎಲ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ನಾವು ಎಂದಿಗೂ ಅಂಬೇಡ್ಕರ್‌ರನ್ನ ಅವಮಾನಿಸುವುದಿಲ್ಲ.. ನನ್ನ ಹೇಳಿಕೆ ತಿರುಚಲಾಗಿದೆ: ಅಮಿತ್ ಶಾ

    ಬಿಜೆಪಿ vs ಕಾಂಗ್ರೆಸ್‌ ಪ್ರೊಟೆಸ್ಟ್‌:
    ಚಳಿಗಾಲದ ಅಧಿವೇಶನದಲ್ಲಿ ʻಸಂವಿಧಾನʼ ಕುರಿತ ಚರ್ಚೆ ವೇಳೆ ರಾಜ್ಯಸಭೆಯಲ್ಲಿ ಅಮಿತ್‌ ಶಾ ಅವರು ಮಾತನಾಡುತ್ತಾ, ʻಅಂಬೇಡ್ಕರ್‌ ಅಂಬೇಡ್ಕರ್‌ ಅಂಬೇಡ್ಕರ್‌ ಇದೊಂದು ಫ್ಯಾಷನ್‌ ಆಗಿಬಿಟ್ಟಿದೆ. ಇಷ್ಟು ಬಾರಿ ದೇವರ ಹೆಸರು ಹೇಳಿದ್ದರೆ ಅವರಿಗೆ ಸ್ವರ್ಗದಲ್ಲಿ ಸ್ಥಾನವಾದರೂ ಸಿಗುತ್ತಿತ್ತುʼ ಎಂದು ಹೇಳಿದ್ದರು. ಈ ಕುರಿತ ವೀಡಿಯೋಗಳನ್ನು ವಿಕ್ಷ ನಾಯಕರು ತಮ್ಮ ಸೋಷಿಯಲ್‌ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಕೇಂದ್ರ ಗೃಹ ಸಚಿವರು ರಾಜೀನಾಮೇ ನೀಡಬೇಕು, ಅಂಬೇಡ್ಕರ್‌ ವಿರುದ್ಧದ ಟೀಕೆಗೆ ಕ್ಷಮೆಯಾಚಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಈ ನಡುವೆ ಕಾಂಗ್ರೆಸ್‌ ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.

    ಮತ್ತೊಂದೆಡೆ ಕಾಂಗ್ರೆಸ್ ನಿಂದ ಅಂಬೇಡ್ಕರ್‌ಗೆ ಅನ್ಯಾಯವಾಗಿದೆ ಎನ್ನುವ ಪ್ಲೆ ಕಾರ್ಡ್ ಹಿಡಿದು ಬಿಜೆಪಿ ಸದಸ್ಯರು ಪ್ರತಿಭಟನೆಗಿಳಿದಿದ್ದಾರೆ. ಇತ್ತ ಬಿಜೆಪಿ ಸಂಸದರಿಂದಲೂ ಸಂಸತ್ ಆವರಣದಲ್ಲಿ ʻಕಾಂಗ್ರೆಸ್ ನಿಂದ ಅಂಬೇಡ್ಕರ್‌ಗೆ ಅನ್ಯಾಯವಾಗಿದೆʼ ಅನ್ನೋ ಪ್ಲೆ ಕಾರ್ಡ್ ಹಿಡಿದು ಪ್ರತಿಭಟನೆಗಿಳಿದಿದ್ದಾರೆ. ಪ್ರತಿಭಟನೆಯಲ್ಲಿ ಕರ್ನಾಟಕದ ಬಿಜೆಪಿ ಸಂಸದರಾದ ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಜಗ್ಗೇಶ್ ಭಾಗಿಯಾಗಿದ್ದಾರೆ. ಇದನ್ನೂ ಓದಿ: ʼಒಂದು ದೇಶ, ಒಂದು ಚುನಾವಣೆʼ ಪರಿಶೀಲನೆಗೆ JPC ರಚನೆ – ಸಮಿತಿಯಲ್ಲಿ ಪ್ರಿಯಾಂಕಾ ಗಾಂಧಿ

    ಮೋದಿ ತಿರುಗೇಟು:
    ಇನ್ನೂ ಅಮಿತ್‌ ಶಾ ಅವರ ಹೇಳಿಕೆಗೆ ಬೆಂಬಲ ವ್ಯಕ್ತಪಡಿಸಿ ಮಾತನಾಡಿದ್ದ ಪ್ರಧಾನಿ ಮೋದಿ, ಕಾಂಗ್ರೆಸ್‌ ಅಂಬೇಡ್ಕರ್‌ ಏನೇನು ಕೊಟ್ಟಿದೆ ಚುನಾವಣೆಯಲ್ಲಿ ಸೋಲಿಸಿದ್ದು ಕಾಂಗ್ರೆಸ್‌ ಎಂದು ಹೇಳಿದ್ದರು. ಅಮಿತ್‌ ಶಾ ಅವರು ಸಂವಿಧಾನ ಶಿಲ್ಪಿ ಡಾ ಬಿ.ಆರ್‌ ಅಂಬೇಡ್ಕರ್‌ರನ್ನು ಕನಸಿನಲ್ಲಿಯೂ ಅವಮಾನಿಸಲು ಸಾಧ್ಯವಿಲ್ಲದ ಪಕ್ಷದಿಂದ ಬಂದವರು. ಕಾಂಗ್ರೆಸ್‌ ಅವರ ಹೇಳಿಕೆಯನ್ನು ತಿರುಚಿದೆ ಎಂದು ಹೇಳಿದ್ದಾರೆ.

    ಇನ್ನೂ ಸಿಎಂ ಸಿದ್ದರಾಮಯ್ಯ ಕೂಡ ಪತ್ರದ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಅಂಬೇಡ್ಕರ್‌ರಂತಹ ಮಹಾನ್‌ ವ್ಯಕ್ತಿ ಈ ಭೂಮಿಯಲ್ಲಿ ಹುಟ್ಟದಿದ್ದರೆ ನಾನು ಊರಿನಲ್ಲಿ ಕುರಿ ಮೇಯಿಸಿಕೊಂಡು ಇರುತ್ತಿದ್ದೆ, ಅಮಿತ್‌ ಶಾ ಅವರು ಕೂಡ ಗುಜರಿ ವ್ಯಾಪಾರ ಮಾಡಿಕೊಂಡು ಇರಬೇಕಾಗಿತ್ತು ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: Mumbai Boat Accident | ಸ್ಪೀಡ್‌ ಬೋಟ್‌ ಫೆರ್ರಿಗೆ ಡಿಕ್ಕಿ ಹೊಡೆಯಲು ಕಾರಣ ಏನು? ದುರಂತ ಹೇಗಾಯ್ತು?

  • ಗೋಧ್ರಾ ದುರಂತ ಆಧರಿತ ಸಿನಿಮಾ ‘ದಿ ಸಾಬರಮತಿ ರಿಪೋರ್ಟ್’ ವೀಕ್ಷಿಸಲಿದ್ದಾರೆ ಮೋದಿ

    ಗೋಧ್ರಾ ದುರಂತ ಆಧರಿತ ಸಿನಿಮಾ ‘ದಿ ಸಾಬರಮತಿ ರಿಪೋರ್ಟ್’ ವೀಕ್ಷಿಸಲಿದ್ದಾರೆ ಮೋದಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ದೆಹಲಿಯ ಸಂಸತ್‌ ಸಂಕೀರ್ಣದಲ್ಲಿರುವ ಗ್ರಂಥಾಲಯದ ಬಾಲಯೋಗಿ ಆಡಿಟೋರಿಯಂ ಹಿಂದಿ ಚಲನಚಿತ್ರ ʻದಿ ಸಾಬರಮತಿ ರಿಪೋರ್ಟ್‌ʼ (The Sabarmati Report) ವೀಕ್ಷಿಸಲಿದ್ದಾರೆ. ಮೋದಿ ಅವರೊಂದಿಗೆ ಚಿತ್ರನಟ ವಿಕ್ರಾಂತ್‌ ಮಾಸ್ಸೆ, ಚಿತ್ರದ ನಿರ್ಮಾಪಕಿ ಏಕ್ತಾ ಕಪೂರ್ ಚಲನಚಿತ್ರವನ್ನು ವೀಕ್ಷಿಸಲಿದ್ದಾರೆ.

    2002ರ ಫೆಬ್ರವರಿ 27ರಂದು ನಡೆದ ಗೋಧ್ರಾ ರೈಲು ದುರಂತವನ್ನಾಧರಿಸಿದ (Godhra train tragedy) ಚಿತ್ರ ಇದಾಗಿದೆ. ವಿಕ್ರಾಂತ್ ಮಾಸ್ಸೆ, ರಿಧಿ ಡೋಗ್ರಾ ಮತ್ತು ರಾಶಿ ಖನ್ನಾ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ. 2002ರ ಸಂದರ್ಭದಲ್ಲಿ ನರೇಂದ್ರ ಮೋದಿ ಅವರು ಗುಜರಾತ್‌ ಮುಖ್ಯಮಂತ್ರಿ ಆಗಿದ್ದರು. ಕಳೆದ ತಿಂಗಳಷ್ಟೇ ಮೋದಿ ಚಿತ್ರತಂಡವನ್ನು ಶ್ಲಾಘಿಸಿದ್ದರು. ಘಟನೆಯ ಹಿಂದಿನ ಸತ್ಯವನ್ನು ಬಹಿರಂಗಪಡಿಸಿದ್ದಕ್ಕಾಗಿ ಧನ್ಯವಾದಗಳು ಎಂದು ಹೊಗಳಿದ್ದರು. ಇದನ್ನೂ ಓದಿ: ಇಂದು ರೈತರ ಪ್ರತಿಭಟನೆ: ದೆಹಲಿ–ನೋಯ್ಡಾ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್

    ಏನಿದು ಗೋಧ್ರಾ ರೈಲು ದುರಂತ?
    ಬಿಹಾರದ ಮುಜಾಫರ್‌ಪುರದಿಂದ ಗುಜರಾತ್‌ನ ಅಹಮದಾಬಾದ್‌ಗೆ ಹೊರಟಿದ್ದ ಸಾಬರಮತಿ ಎಕ್ಸ್‌ಪ್ರೆಸ್ ರೈಲು 2002ರ ಫೆ.27,ರ ಬೆಳಗ್ಗೆ ತನ್ನ ನಿಗದಿತ ಸಮಯಕ್ಕೆ ಗುಜರಾತ್‌ನ ಗೋಧ್ರಾ ರೈಲು ನಿಲ್ದಾಣಕ್ಕೆ ತೆರಳಿತ್ತು. ಇದರಲ್ಲಿ ಕರಸೇವಕರು, ಹಿಂದೂ ಸ್ವಯಂಸೇವಕರು ಅಯೋಧ್ಯೆಯಲ್ಲಿ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡು ಹಿಂದಿರುಗುತ್ತಿದ್ದರು. ರೈಲಿಗೆ ಸುಮಾರು 2,000 ಜನರಿದ್ದ ಗುಂಪು ಕಲ್ಲು ತೂರಿ ನಾಲ್ಕು ಕೋಚ್‌ಗಳಿಗೆ ಬೆಂಕಿ ಹಚ್ಚಿತ್ತು.

    GODHRA

    ಈ ದುರಂತದಲ್ಲಿ 27 ಮಹಿಳೆಯರು ಮತ್ತು 10 ಮಕ್ಕಳು ಸೇರಿದಂತೆ 59 ಜನರು ಸಾವನ್ನಪ್ಪಿದ್ದರು. ದಾಳಿಯಲ್ಲಿ 48 ಪ್ರಯಾಣಿಕರು ಗಾಯಗೊಂಡಿದ್ದರು. ಇದರಿಂದ ಆದ ಗಲಭೆ ಮೂರು ತಿಂಗಳವರೆಗೆ ಮುಂದುವರೆದಿತ್ತು. ಈ ಗಲಭೆಗೆ ಆಗಿನ ಸಿಎಂ ಆಗಿದ್ದ ಮೋದಿ ಕಾರಣ ಎಂಬ ಆರೋಪ ಕೇಳಿಬಂದಿತ್ತು. ಈ ದುರಂತದ ತನಿಖೆ ನಡೆಸಿದ್ದ ಸುಪ್ರೀಂ ಕೋರ್ಟ್ ನೇಮಿಸಿದ್ದ ತನಿಖಾ ತಂಡ, ವರದಿಯಲ್ಲಿ ಈ ಬಗ್ಗೆ ಯಾವುದೇ ಪುರಾವೆಗಳು ಇಲ್ಲ ಎಂದು ಉಲ್ಲೇಖಿಸಿತ್ತು. ಇದನ್ನೂ ಓದಿ: Uttar Pradesh| ಮಹಾ ಕುಂಭಮೇಳ ನಡೆಯುವ ಪ್ರದೇಶ ಹೊಸ ಜಿಲ್ಲೆಯಾಗಿ ಘೋಷಣೆ

    ಧೀರಜ್ ಸರ್ನಾ ನಿರ್ದೇಶನದ ‘ದಿ ಸಾಬರಮತಿ ರಿಪೋರ್ಟ್’ ಚಿತ್ರವು ನ.15 ರಂದು ಬಿಡುಗಡೆ ಆಗಿತ್ತು.‌ ಈ ಚಿತ್ರದಲ್ಲಿ ವಿಕ್ರಾಂತ್ ಮಾಸ್ಸೆ, ರಾಶಿ ಖನ್ನಾ ಮತ್ತು ರಿಧಿ ಡೋಗ್ರಾ ಸೇರಿದಂತೆ ಇತರರು ನಟಿಸಿದ್ದಾರೆ. ಇದನ್ನೂ ಓದಿ: ಸಮುದಾಯ ಉಳಿಯಬೇಕಾದ್ರೆ ಕನಿಷ್ಠ 3 ಮಕ್ಕಳನ್ನಾದರೂ ಪಡೆಯಬೇಕು: RSS ಮುಖ್ಯಸ್ಥ ಮೋಹನ್‌ ಭಾಗವತ್‌

  • ನೀಟ್‌ ಚರ್ಚೆಗೆ ಅವಕಾಶ ಮಾಡಿಕೊಡಿ – ಪ್ರಧಾನಿ ಮೋದಿಗೆ ರಾಹುಲ್‌ ಗಾಂಧಿ ಪತ್ರ!

    ನೀಟ್‌ ಚರ್ಚೆಗೆ ಅವಕಾಶ ಮಾಡಿಕೊಡಿ – ಪ್ರಧಾನಿ ಮೋದಿಗೆ ರಾಹುಲ್‌ ಗಾಂಧಿ ಪತ್ರ!

    ನವದೆಹಲಿ: ʻನೀಟ್‌ʼ ಪರೀಕ್ಷಾ ಅಕ್ರಮದ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸಲು ಅವಕಾಶ ಮಾಡಿಕೊಡುವಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಖುದ್ದು ಪತ್ರ ಬರೆದಿದ್ದಾರೆ. ಈ ಪತ್ರವನ್ನು ತಮ್ಮ ಸೋಷಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲೂ ಹಂಚಿಕೊಂಡಿದ್ದಾರೆ.

    ಜುಲೈ 1ರಂದು ರಾಷ್ಟ್ರಪತಿಗಳ (President Of India) ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡಿದ್ದ ರಾಹುಲ್‌ ಗಾಂಧಿ ನೀಟ್‌ ಕುರಿತು ಚರ್ಚೆಗೆ (NEET Debate) ಅವಕಾಶ ಕೋರಿದ್ದರು. ಆದರೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸದನದ ನಿಯಮಗಳು ಮತ್ತು ಕಾರ್ಯವಿಧಾನಗಳನ್ನು ಉಲ್ಲೇಖಿಸಿ ಚರ್ಚೆಗೆ ಅವಕಾಶ ನಿರಾಕರಿಸಿದ್ದರು. ಇದಾದ ಮರುದಿನವೇ ರಾಹುಲ್‌ ಗಾಂಧಿ ಅವರು ಪತ್ರ ಬರೆದಿದ್ದಾರೆ.

    ರಾಹುಲ್‌ ಗಾಂಧಿ ಬರೆದ ಪತ್ರದಲ್ಲಿ ಏನಿದೆ?
    ಈ ಪತ್ರವು ನಿಮ್ಮನ್ನು ಚೆನ್ನಾಗಿ ಕಂಡುಕೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ. NEET ಕುರಿತು ಸಂಸತ್ತಿನಲ್ಲಿ ಚರ್ಚೆಗೆ ಮನವಿ ಮಾಡುವಂತೆ ಕೋರಿ ಪತ್ರ ಬರೆಯುತ್ತಿದ್ದೇನೆ. ಜೂನ್‌ 28ರಂದು ಸಂಸತ್ತಿನ ಉಭಯ ಸದನಗಳಲ್ಲಿ ನೋಟ್‌ ಕುರಿತು ಚರ್ಚೆ ನಡೆಸಬೇಕು ಎಂಬ ವಿರೋಧ ಪಕ್ಷಗಳ ಮನವಿಯನ್ನು ನಿರಾಕರಿಸಲಾಯಿತು. ಜೂನ್‌ 30 ರಂದು ಸಹ ವಿಪಕ್ಷಗಳು ಮತ್ತೊಮೆ ಚರ್ಚೆಗೆ ಮನವಿ ಮಾಡಿದೆ. ಆದ್ರೆ ಲೋಕಸಭೆಯ ಗೌರವಾನ್ವಿತ ಸ್ಪೀಕರ್‌ ಅವರು ಈ ಬಗ್ಗೆ ಸರ್ಕಾರದ ಜೊತೆ ಚರ್ಚಿಸುವುದಾಗಿ ಭರವಸೆ ನೀಡಿದ್ದರು. ಆದ್ದರಿಂದ ಮುಂದಿನ ದಾರಿ ಕಂಡುಕೊಳ್ಳಲು ರಚನಾತ್ಮಕವಾಗಿ ತೊಡಗಿಸಿಕೊಳ್ಳುವುದು ನಮ್ಮ ಗುರಿಯಾಗಿದೆ.

    ಈ ಕ್ಷಣದಲ್ಲಿ ದೇಶಾದ್ಯಂತ ಸುಮಾರು 24 ಲಕ್ಷ ನೀಟ್‌ ಆಕಾಂಕ್ಷಿಗಳ ರಕ್ಷಣೆ ಮಾಡುವುದು ಮಾತ್ರ ನಮ್ಮ ಕಾಳಜಿಯಾಗಿದೆ. ಲಕ್ಷಾಂತರ ಕುಟುಂಬಗಳು ತಮ್ಮ ಮಕ್ಕಳಿಗಳಿಗೆ ಅನೇಕ ತ್ಯಾಗ ಮಾಡಿದ್ದಾರೆ. ಆದ್ರೆ ಪ್ರಶ್ನೆ ಪತ್ರಿಕೆ ಸೋರಿಕೆ ಎಷ್ಟೋ ಜನರ ಜೀವನದ ಕನಸನ್ನೇ ನುಚ್ಚುನೂರು ಮಾಡಿದೆ. ಈ ನಿಟ್ಟಿನಲ್ಲಿ ನೊಂದ ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬದವರು ಜನಪ್ರತಿನಿಧಿಗಳಾದ ನಮ್ಮ ಮೇಲೆ ನಂಬಿಕೆಯಿಟ್ಟಿದ್ದಾರೆ. ನಾವು ಏನು ಕ್ರಮ ಕೈಗೊಳ್ಳುತ್ತೇವೆ ಎಂಬುದನ್ನು ಎದುರು ನೋಡುತ್ತಿದ್ದಾರೆ.

    ನೀಟ್‌ ಪರೀಕ್ಷಾ ಅಕ್ರಮವು ಉನ್ನತ ಶಿಕ್ಷಣ ವ್ಯವಸ್ಥೆಯಲ್ಲಿನ ಹುಳುಕನ್ನು ಬಹಿರಂಗಪಡಿಸಿದ್ದು, ತಕ್ಷಣದ ಚರ್ಚೆಗೆ ಅರ್ಹವಾದ ವಿಚಾರವಾಗಿದೆ. ಕಳೆದ 7 ವರ್ಷಗಳಲ್ಲಿ 70ಕ್ಕೂ ಹೆಚ್ಚು ಪೇಪರ್‌ ಸೋರಿಕೆಯಾಗಿದ್ದು, 2 ಕೋಟಿಗೂ ಹೆಚ್ಚು ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಿದೆ. ಆದ್ರೆ ಇತರ ಪರೀಕ್ಷೆಗಳನ್ನು ಮುಂದೂಡುವುದು, ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ (ಎನ್‌ಟಿಎ) ಮಹಾನಿರ್ದೇಶಕರನ್ನು ಬದಲಾಯಿಸುವ ಸರ್ಕಾರದ ಕ್ರಮ ಕೇವಲ ಕ್ರಮವನ್ನು ಮುಚ್ಚಿಹಾಕುವ ಪ್ರಯತ್ನದ ಭಾಗವಾಗಿದೆ.

    ನಮ್ಮ ವಿದ್ಯಾರ್ಥಿಗಳು ಈ ಸಮಸ್ಯೆಗಳಿಗೆ ಸರ್ಕಾರದಿಂದ ಸೂಕ್ತ ಉತ್ತರ ಕಂಡುಕೊಳ್ಳಲು ಅರ್ಹರಾಗಿದ್ದಾರೆ. ಸಂಸತ್ತಿನ ಚರ್ಚೆಯು ಅವರ ನಂಬಿಕೆಯನ್ನು ಮರುಸ್ಥಾಪಿಸಲು ಮೊದಲ ಹೆಜ್ಜೆಯಾಗಿದೆ. ಆದ್ದರಿಂದ ನೀಟ್‌ ವಿಚಾರವನ್ನು ತುರ್ತು ವಿಷಯವನ್ನಾಗಿ ಪರಿಗಣಿಸಿ ಚರ್ಚೆಗೆ ಅವಕಾಶ ಮಾಡಿಕೊಡಬೇಕೆಂದು ಸರ್ಕಾರಕ್ಕೆ ಮನವಿ ಮಾಡುತ್ತೇನೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನೀವು ಈ ಚರ್ಚೆಯನ್ನು ಮುನ್ನಡೆಸಿದರೆ ಅದು ಸೂಕ್ತವಾಗಿರುತ್ತದೆ ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

  • ಲೋಕಸಭೆಯಲ್ಲಿ ಸ್ಮೋಕ್ ಬಾಂಬ್ ಸ್ಫೋಟ ಪ್ರಕರಣ – ಸಂಸತ್ ಭವನಕ್ಕೆ CISFನಿಂದ ಭದ್ರತೆ?

    ಲೋಕಸಭೆಯಲ್ಲಿ ಸ್ಮೋಕ್ ಬಾಂಬ್ ಸ್ಫೋಟ ಪ್ರಕರಣ – ಸಂಸತ್ ಭವನಕ್ಕೆ CISFನಿಂದ ಭದ್ರತೆ?

    ನವದೆಹಲಿ: ಸಂಸತ್ ಭವನದಲ್ಲಿ ಭದ್ರತಾ ನಿಯಮಗಳ ಉಲ್ಲಂಘನೆ (Parliament Security Breach) ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸರ್ಕಾರ ಸಂಸತ್ತಿನ ಕಟ್ಟಡ ಸಂಕೀರ್ಣದ ಸಮಗ್ರ ಭದ್ರತೆಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆಗೆ (CISF) ಹಸ್ತಾಂತರಿಸಲು ನಿರ್ಧರಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

    CISF ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ (CAPF) ಆಗಿದ್ದು, ಇದು ಪ್ರಸ್ತುತ ದೆಹಲಿಯಲ್ಲಿನ ಅನೇಕ ಕೇಂದ್ರ ಸರ್ಕಾರದ ಸಚಿವಾಲಯದ ಕಟ್ಟಡಗಳಾದ ಪರಮಾಣು ಮತ್ತು ಏರೋಸ್ಪೇಸ್ ಡೊಮೇನ್, ಸಿವಿಲ್ ಏರ್‌ಪೋರ್ಟ್‌ಗಳು (Civil Airports) ಮತ್ತು ದೆಹಲಿ ಮೆಟ್ರೋ ನಿಲ್ದಾಣಗಳಿಗೆ (Metro Stations) ಭದ್ರತೆ ನೀಡುತ್ತಿದೆ. ಇದನ್ನೂ ಓದಿ: ಅಜಿತ್ ಪವಾರ್, ಶಿಂಧೆಯ ಪೈಕಿ ಯಾರು ಮೊದಲು ಬರುತ್ತಾರೋ ಕಾದುನೋಡಿ – ಕರ್ನಾಟಕ ಕಾಂಗ್ರೆಸ್‌ ಬಗ್ಗೆ ಹೆಚ್‌ಡಿಕೆ ಬಾಂಬ್‌

    ಕೇಂದ್ರ ಗೃಹಸಚಿವಾಲಯವು ಸಂಸತ್ತಿನ ಕಟ್ಟಡ ಸಂಕೀರ್ಣದ ಸಮೀಕ್ಷೆಗೆ ಬುಧವಾರ ನಿರ್ದೇಶನ ನೀಡಿದ್ದು, ಸಂಸತ್‌ನಲ್ಲಿ ಸಿಐಎಸ್‌ಎಫ್ ಭದ್ರತೆ ಮತ್ತು ಅಗ್ನಿಶಾಮಕ ವಿಭಾಗವನ್ನು ಸಮಗ್ರ ಮಾದರಿಯಲ್ಲಿ ನಿಯೋಜನೆ ಮಾಡಬಹುದಾಗಿದೆ ಎಂದು ಮೂಲಗಳು ತಿಳಿಸಿವೆ. ಸಿಐಎಸ್‌ಎಫ್‌ನ ತಜ್ಞರು, ಸಂಸತ್ತಿನ ಭದ್ರತಾ ತಂಡದ ಅಧಿಕಾರಿಗಳೊಂದಿಗೆ ಈ ವಾರದ ಕೊನೆಯಲ್ಲಿ ಸಂಸತ್‌‌ನ ಸಮೀಕ್ಷೆ ಕೈಗೊಳ್ಳಲಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ ಬರಗಾಲ ಪರಿಹಾರ ಬಿಡುಗಡೆ ವಿಚಾರವಾಗಿ ಡಿ.23ಕ್ಕೆ ಕೇಂದ್ರದ ಸಭೆ: ಕೃಷ್ಣಬೈರೇಗೌಡ

    ಹೊಸ ಮತ್ತು ಹಳೆಯ ಸಂಸತ್ತಿನ ಸಂಕೀರ್ಣ ಮತ್ತು ಅದರ ಮಿತ್ರ ಕಟ್ಟಡಗಳನ್ನು ಸಿಐಎಸ್‌ಎಫ್‌ನ ಸಮಗ್ರ ಭದ್ರತೆಯ ಅಡಿಯಲ್ಲಿ ತರಲಾಗುವುದು, ಸಂಸತ್ತಿನ ಭದ್ರತಾ ಸೇವೆ (ಪಿಎಸ್‌ಎಸ್), ದೆಹಲಿ ಪೊಲೀಸ್ ಮತ್ತು ಪಾರ್ಲಿಮೆಂಟ್ ಡ್ಯೂಟಿ ಗ್ರೂಪ್ (PDG) ಭದ್ರತೆಯಲ್ಲಿ ಮುಂದುವರಿಯಲಿದೆ. ಡಿಸೆಂಬರ್ 13 ರಂದು ಲೋಕಸಭೆಯಲ್ಲಿ ಮೈಸೂರು ಮೂಲದ ಮನೋರಂಜರ್ ಮತ್ತು ಸಾಗರ್ ಶರ್ಮಾ ಹೆಸರಿನ ಇಬ್ಬರು ಯುವಕರು ಭದ್ರತಾ ನಿಯಮ ಉಲ್ಲಂಘಿಸಿ ಸ್ಮೋಕ್‌ ಬಾಂಬ್ ಸ್ಫೋಟಿಸಿದ್ದರು. ಇದನ್ನೂ ಓದಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ; ಬೆಂಗಳೂರು, ನೀರಾವರಿ ಯೋಜನೆಗಳಿಗೆ ಅನುಮತಿ & ಹಣಕಾಸು ನೆರವು ಕೋರಿದ ಡಿಸಿಎಂ

  • ಅಮಾನತಾದ ಸಂಸದರು ಸಂಸತ್ತಿನ ಮೊಗಸಾಲೆ, ಗ್ಯಾಲರಿಗೆ ಬರುವಂತಿಲ್ಲ: ಸುತ್ತೋಲೆ

    ಅಮಾನತಾದ ಸಂಸದರು ಸಂಸತ್ತಿನ ಮೊಗಸಾಲೆ, ಗ್ಯಾಲರಿಗೆ ಬರುವಂತಿಲ್ಲ: ಸುತ್ತೋಲೆ

    ನವದೆಹಲಿ: ಅಮಾನತಾಗಿರುವ ಲೋಕಸಭೆಯ (Loksabha) 95 ಹಾಗೂ ರಾಜ್ಯಸಭೆಯ (Rajyasabha) 46 ಒಟ್ಟು 141 ಮಂದಿ ಸಂಸದರು ಸಂಸತ್ತಿನ ಚೇಂಬರ್, ಲಾಬಿ ಹಾಗೂ ಗ್ಯಾಲರಿಗೆ ಪ್ರವೇಶಿಸುವಂತಿಲ್ಲ ಎಂದು ಲೋಕಸಭಾ ಕಚೇರಿಯಿಂದ (Loksabha Office) ಸುತ್ತೋಲೆ ಹೊರಡಿಸಲಾಗಿದೆ.

    ಸಂಸತ್ ಭವನದಲ್ಲಿ ಉಂಟಾದ ಭದ್ರತಾ ಲೋಪ (Security breach in Lok Sabha) ಕುರಿತ ಚರ್ಚೆಗೆ ಒತ್ತಾಯಿಸಿ ಉಭಯ ಸದನಗಳಲ್ಲಿ ಅಶಿಸ್ತಿನ ವರ್ತನೆ ತೋರಲಾಗಿತ್ತು. ಈ ಹಿನ್ನೆಲೆಯಲ್ಲಿ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿನ ವಿವಿಧ ಪಕ್ಷಗಳ ಸದಸ್ಯರನ್ನು ಅಮಾನತುಗೊಳಿಸಲಾಗಿತ್ತು. ಈ ಬೆನ್ನಲ್ಲೇ ಲೋಕಸಭೆಯ ಸಚಿವಾಲಯ ಈ ಸುತ್ತೋಲೆ ಹೊರಡಿಸಿದೆ. ಇದನ್ನೂ ಓದಿ: ಅಶಿಸ್ತಿನ ವರ್ತನೆ, 49 ಸಂಸದರ ಅಮಾನತು – ಇಲ್ಲಿಯವರೆಗೆ 149 ಮಂದಿ ಸಸ್ಪೆಂಡ್‌

    ಸುತ್ತೋಲೆಯಲ್ಲಿ ಏನಿದೆ..?: ಅಮಾನತುಗೊಂಡ ಎಲ್ಲಾ ಸಂಸದರಿಗೆ ಸಂಸತ್ತಿನ ಮೊಗಸಾಲೆ, ಕೋಣೆ ಹಾಗೂ ಗ್ಯಾಲರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಯಾವುದೇ ಸಂಸದೀಯ ಸಮಿತಿಯ ಸಭೆಗೆ ಹಾಜರಾಗಲು ಅವರಿಗೆ ಅವಕಾಶವಿರಲ್ಲ. ಅಮಾನತು ಅವಧಿಯಲ್ಲಿ ಯಾವುದೇ ಸೂಚನೆಗಳನ್ನು ನೀಡುವಂತಿಲ್ಲ, ಸಮಿತಿಗಳಿಗೆ ನಡೆಯುವ ಯಾವುದೇ ಚುನಾವಣೆಯಲ್ಲಿ ಮತ ಚಲಾಯಿಸುವಂತಿಲ್ಲ. ಅಧಿವೇಶನದ ಉಳಿದ ಅವಧಿಗೆ ಅವರನ್ನು ಸದನದ ಸೇವೆಯಿಂದ ಅಮಾನತುಗೊಳಿಸಿದರೆ, ಅವರು ಅಮಾನತು ಅವಧಿಯಲ್ಲಿ ದೈನಂದಿನ ವೇತನದ ಭತ್ಯೆಗೂ ಅರ್ಹರಾಗಿರುವುದಿಲ್ಲ ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಇತಿಹಾಸದಲ್ಲೇ ಮೊದಲ ಬಾರಿಗೆ ಅತಿ ಹೆಚ್ಚು ಸಂಸದರ ಅಮಾನತು – ಯಾವ್ಯಾವ ಅವಧಿಯಲ್ಲಿ ಎಷ್ಟು ಮಂದಿ ಸಸ್ಪೆಂಡ್‌?

    ಡಿಸೆಂಬರ್ 13ರಂದು ಸಂಸತ್ ಭವನದಲ್ಲಿ ಸಂಭವಿಸಿದ್ದ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಉತ್ತರಕ್ಕೆ ಒತ್ತಾಯಿಸಿ, ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕೆ ವಿಪಕ್ಷಗಳ 49 ಸದಸ್ಯರನ್ನ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮಂಗಳವಾರ ಅಮಾನತುಗೊಳಿಸಿದ್ದರು. ಈ ಮೂಲಕ ಇದುವರೆಗೆ ಚಳಿಗಾಲದ ಅಧಿವೇಶನದಲ್ಲಿ ಒಟ್ಟು 141 ಮಂದಿ ಸಂಸರು ಅಮಾನತುಗೊಂಡಿದ್ದಾರೆ.