Tag: ಸಂಸತ್‌ ಭವನ ದಾಳಿ

  • ಸಂಸತ್‌ ಭವನ ಮೇಲಿನ ದಾಳಿಗೆ 23 ವರ್ಷ – ಹುತಾತ್ಮಕರಿಗೆ ಮೋದಿ ಸೇರಿ ಗಣ್ಯರಿಂದ ನಮನ

    ಸಂಸತ್‌ ಭವನ ಮೇಲಿನ ದಾಳಿಗೆ 23 ವರ್ಷ – ಹುತಾತ್ಮಕರಿಗೆ ಮೋದಿ ಸೇರಿ ಗಣ್ಯರಿಂದ ನಮನ

    ನವದೆಹಲಿ: ಸಂಸತ್‌ ಮೇಲಿನ (Parliament Attack) ದಾಳಿಗೆ ಇಂದಿಗೆ 23 ವರ್ಷಗಳು ತುಂಬಿವೆ. ದಾಳಿಯಲ್ಲಿ ಹುತಾತ್ಮರಾದ ಗಣ್ಯರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಸೇರಿದಂತೆ ಅನೇಕ ನಾಯಕರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

    2001 ರಲ್ಲಿ ಸಂಸತ್ತಿನ ದಾಳಿಯಲ್ಲಿ ಹುತಾತ್ಮರಾದವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದೇವೆ. ಅವರ ತ್ಯಾಗವು ನಮ್ಮ ರಾಷ್ಟ್ರವನ್ನು ಸದಾ ಪ್ರೇರೇಪಿಸುತ್ತದೆ. ಅವರ ಧೈರ್ಯ ಮತ್ತು ಸಮರ್ಪಣೆಗಾಗಿ ನಾವು ಕೃತಜ್ಞರಾಗಿರುತ್ತೇವೆ” ಎಂದು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ರಷ್ಯನ್ ಭಾಷೆಯಲ್ಲಿ ಆರ್‌ಬಿಐಗೆ ಬಾಂಬ್ ಬೆದರಿಕೆ

    ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಭಯೋತ್ಪಾದನೆ ವಿರುದ್ಧ ಇಡೀ ದೇಶ ನಿಂತಿದೆ. ರಾಷ್ಟ್ರಕ್ಕಾಗಿ ಅಮರರಾದ ಹುತಾತ್ಮರಿಗೆ ಗೌರವಪೂರ್ವಕ ಶ್ರದ್ಧಾಂಜಲಿ. ಸಂಸತ್ ಭವನದ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಭಾರತ ಮಾತೆಯ ಹೆಮ್ಮೆಯ ಪುತ್ರರನ್ನು ಇಂದು ನಾವು ಸ್ಮರಿಸುತ್ತೇವೆ. ಇಡೀ ದೇಶವೇ ಭಯೋತ್ಪಾದನೆ ವಿರುದ್ಧ ಒಗ್ಗಟ್ಟಾಗಿದೆ ಎಂದು ತಿಳಿಸಿದ್ದಾರೆ.

    ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಕೂಡ ಹುತಾತ್ಮರಿಗೆ ನಮನ ಸಲ್ಲಿಸಿದ್ದಾರೆ. ಇಂದಿನ ದಿನವು ಸಂಸತ್ ಭವನದ ಮೇಲಿನ ಭಯೋತ್ಪಾದಕ ದಾಳಿಯ ಸಂದರ್ಭದಲ್ಲಿ ದೇಶ ಮತ್ತು ನಮ್ಮ ಪ್ರಜಾಪ್ರಭುತ್ವದ ದೇವಾಲಯವನ್ನು ರಕ್ಷಿಸಲು ತಮ್ಮ ಪ್ರಾಣವನ್ನು ತ್ಯಾಗ ಮಾಡಿದವರನ್ನು ನೆನಪಿಸುತ್ತದೆ. ಅಮರ ಹುತಾತ್ಮರಿಗೆ ಕೋಟಿ ನಮನಗಳು ಎಂದಿದ್ದಾರೆ. ಇದನ್ನೂ ಓದಿ: ವಾಯುಭಾರ ಕುಸಿತದ ಎಫೆಕ್ಟ್; ತಮಿಳುನಾಡಿನಾದ್ಯಂತ ಭಾರೀ ಮಳೆ, ಪ್ರವಾಹ ಮುನ್ಸೂಚನೆ!

    2021ರ ಡಿ.13 ರಂದು ನಡೆದ ಸಂಸತ್‌ ಭವನದ ಮೇಲಿನ ದಾಳಿಗೆ ಜಗದೀಶ್, ಮತ್ಬರ್, ಕಮಲೇಶ್ ಕುಮಾರಿ; ನಾನಕ್ ಚಂದ್ ಮತ್ತು ರಾಂಪಾಲ್, ಓಂ ಪ್ರಕಾಶ್, ಬಿಜೇಂದರ್ ಸಿಂಗ್ ಮತ್ತು ಘನಶ್ಯಾಮ್, ದೇಶರಾಜ್, ತೋಟಗಾರ ಹುತಾತ್ಮರಾಗಿದ್ದರು.

  • ಸಂಸತ್ ಭವನದ ಮೇಲೆ ದಾಳಿ ಪ್ರಕರಣ – 6 ಆರೋಪಿಗಳ ವಿರುದ್ಧ 1,000 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ

    ಸಂಸತ್ ಭವನದ ಮೇಲೆ ದಾಳಿ ಪ್ರಕರಣ – 6 ಆರೋಪಿಗಳ ವಿರುದ್ಧ 1,000 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ

    ನವದೆಹಲಿ: ಸಂಸತ್‌ ಭವನದ ಮೇಲೆ ದಾಳಿ (Parliament Security Breach) ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟಿಯಾಲ ಹೌಸ್‌ ಕೋರ್ಟ್‌ಗೆ 1,000 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ.

    2023 ರ ಡಿಸೆಂಬರ್ 13 ರಂದು ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದ ತನಿಖೆಯಲ್ಲಿ ದೆಹಲಿ ಪೊಲೀಸರ ವಿಶೇಷ ತಂಡವು ಶುಕ್ರವಾರ ತನ್ನ ಮೊದಲ ಚಾರ್ಜ್‌ಶೀಟ್ (Charge Sheet) ಅನ್ನು ಇಲ್ಲಿನ ನ್ಯಾಯಾಲಯಕ್ಕೆ ಸಲ್ಲಿಸಿದೆ. ಇದನ್ನೂ ಓದಿ: ನಕಲಿ ಆಧಾರ್‌ ಕಾರ್ಡ್‌ ಬಳಸಿ ಸಂಸತ್‌ ಪ್ರವೇಶಿಸಲು ಯತ್ನಿಸಿದ ಮೂವರ ಬಂಧನ

    ಯುಎಪಿಎ ಕಾಯ್ದೆ ಅಡಿ ಪ್ರಕರಣ ದಾಖಲಾಗಿತ್ತು. ಆರೋಪಿಗಳಾದ ಡಿ.ಮನರಂಜನ್, ಲಲಿತಾ ಝಾ, ಅಮೋಲ್ ಶಿಂಧೆ, ಮಹೇಶ್ ಕುಮವತ್, ಸಾಗರ್ ಶರ್ಮಾ, ನೀಲಂ ಅಜಾದ್ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಕೆ ಆಗಿದೆ. ಸದ್ಯ ಎಲ್ಲರೂ ನ್ಯಾಯಾಂಗ ಬಂಧನದಲ್ಲಿದ್ದಾರೆ.

    ಮೇ 24 ರಂದು ನ್ಯಾಯಾಲಯವು ತನಿಖೆಯನ್ನು ಪೂರ್ಣಗೊಳಿಸಲು ಪೊಲೀಸರಿಗೆ 13 ದಿನಗಳ ಕಾಲಾವಕಾಶವನ್ನು ನೀಡಿತ್ತು. 1,000 ಪುಟಗಳ ಚಾರ್ಜ್‌ಶೀಟ್ ಅನ್ನು ಪಟಿಯಾಲ ಹೌಸ್ ಕೋರ್ಟ್‌ನಲ್ಲಿ ಸಲ್ಲಿಸಲಾಗಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಹರ್ದೀಪ್ ಕೌರ್ ಅವರು ಪ್ರಕರಣದ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಕೆಲವು ವರದಿಗಳನ್ನು ನಿರೀಕ್ಷಿಸಲಾಗಿದೆ. ಡಿಜಿಟಲ್ ಡೇಟಾ ದೊಡ್ಡದಾಗಿದೆ ಎಂದು ಪೊಲೀಸರು ಹೇಳಿಕೊಂಡ ನಂತರ ಕಳೆದ ಬಾರಿ ವಿಸ್ತರಣೆಯನ್ನು ನೀಡಿದ್ದರು. ಇದನ್ನೂ ಓದಿ: ಸಂಸತ್‌ನಲ್ಲಿ ಸ್ಮೋಕ್‌ ಬಾಂಬ್‌ ದಾಳಿಯ ಮಾಸ್ಟರ್‌ ಮೈಂಡ್‌ ಮೈಸೂರಿಗ ಮನೋರಂಜನ್‌: ದೆಹಲಿ ಪೊಲೀಸರು

    ಪಾರ್ಲಿಮೆಂಟ್‌ಗೆ ಎಂಟ್ರಿ ಕೊಟ್ಟಿದ್ದ ಕೆಲವರು ಒಳಗಡೆ ನುಗ್ಗಿ ಭದ್ರತಾ ನಿಯಮ ಉಲ್ಲಂಗಿದ್ದರು. ಸಂಸತ್‌ ಒಳಗೆ ಸ್ಮೋಕ್‌ ಬಾಂಬ್‌ ಸಿಡಿಸಿ ಗದ್ದಲ ಸೃಷ್ಟಿಸಿದ್ದರು. ಒಳಗಿದ್ದ ಸಂಸದರು ಭಯಭೀತರಾಗಿದ್ದರು.

    ಆಜಾದ್ ಮತ್ತು ಶಿಂಧೆ ಸಂಸತ್ತಿನ ಹೊರಗೆ ಸ್ಮೋಕ್‌ ಬಾಂಬ್ ಸಿಡಿಸಿ ಘೋಷಣೆಗಳನ್ನು ಕೂಗಿದರು. ಝಾ ಸಂಪೂರ್ಣ ಯೋಜನೆಯ ಮಾಸ್ಟರ್ ಮೈಂಡ್ ಎನ್ನಲಾಗಿದೆ. ಇತರ ನಾಲ್ವರು ಆರೋಪಿಗಳ ಮೊಬೈಲ್ ಫೋನ್‌ಗಳೊಂದಿಗೆ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ. ಕುಮಾವತ್ ಕೂಡ ಆರೋಪಿಗಳ ಜತೆ ನಂಟು ಹೊಂದಿದ್ದರು.