Tag: ಸಂಸದರು

  • ಸಂಸದರ ಸಂಬಳ 24% ಏರಿಕೆ – ಈಗ ಎಷ್ಟಿದೆ? ಎಷ್ಟು ಏರಿಕೆಯಾಗಿದೆ?

    ಸಂಸದರ ಸಂಬಳ 24% ಏರಿಕೆ – ಈಗ ಎಷ್ಟಿದೆ? ಎಷ್ಟು ಏರಿಕೆಯಾಗಿದೆ?

    ನವದೆಹಲಿ: ಕೇಂದ್ರ ಸರ್ಕಾರ ಸಂಸದರ ಸಂಬಳವನ್ನು (Salary) 24% ಏರಿಕೆ ಮಾಡಿದೆ. ಏಪ್ರಿಲ್‌ 1 ರಿಂದ ಇದು ಜಾರಿಗೆ ಬರಲಿದೆ.

    ಸಂಸದೀಯ ವ್ಯವಹಾರಗಳ ಸಚಿವಾಲಯದ (Ministry of Parliamentary Affairs) ಸುತ್ತೋಲೆಯ ಪ್ರಕಾರ, ಸಂಸದರ ಮಾಸಿಕ ವೇತನವು 1,00,000 ರೂ.ಗಳಿಂದ 1,24,000 ರೂ.ಗಳಿಗೆ ಏರಿಕೆಯಾಗಿದೆ.  ದೈನಂದಿನ ಭತ್ಯೆ 2,000 ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲಾಗಿದೆ.

    ಸಂಸದರು ಮತ್ತು ಮಾಜಿ ಸಂಸದರ ಮಾಸಿಕ ಪಿಂಚಣಿಯನ್ನು 25,000 ರೂ.ಗಳಿಂದ 31,000 ರೂ.ಗಳಿಗೆ ಪರಿಷ್ಕರಿಸಲಾಗಿದೆ. ಹೆಚ್ಚುವರಿಯಾಗಿ ಮಾಜಿ ಸಂಸದರ ಹೆಚ್ಚುವರಿ ಪಿಂಚಣಿಯನ್ನು ವರ್ಷಕ್ಕೆ 2,000 ರೂ.ಗಳಿಂದ 2,500 ರೂ.ಗಳಿಗೆ ಏರಿಕೆ ಮಾಡಲಾಗಿದೆ.

    ಬೇರೆ ಏನೇನು ಸಿಗುತ್ತೆ?
    ಕ್ಷೇತ್ರದೊಳಗಿನ ತಿರುಗಾಟದ ಖರ್ಚಿಗಾಗಿ ಕ್ಷೇತ್ರದ ಭತ್ಯೆಯಾಗಿ ಪ್ರತಿ ತಿಂಗಳು 70,000 ರೂ. ಸಿಗುತ್ತದೆ. ಕಚೇರಿ ನಿರ್ವಹಣೆಗಾಗಿ ಪ್ರತಿ ತಿಂಗಳು 60,000 ರೂ. ಸಿಗುತ್ತದೆ

    ಸಂಸದರಿಗೆ ಪ್ರತಿವರ್ಷ ತಾವೂ ಸೇರಿದಂತೆ ಕುಟುಂಬ ಸದಸ್ಯರು 34 ಬಾರಿ ಉಚಿತವಾಗಿ ವಿಮಾನ ಪ್ರಯಾಣ ಕೈಗೊಳ್ಳಬಹುದು. ಅದೇ ರೀತಿ ವೈಯಕ್ತಿಕವಾಗಿ ಹಾಗೂ ಸಂಸದರ ಕಾರ್ಯಗಳಿಗಾಗಿ ಉಚಿತವಾಗಿ ಫಸ್ಟ್‌ ಕ್ಲಾಸ್‌ ರೈಲು ಪ್ರಯಾಣ ಮಾಡಬಹುದು. ಅಷ್ಟೇ ಅಲ್ಲ ತಮ್ಮ ಕ್ಷೇತ್ರ ಸುತ್ತಾಟಕ್ಕಾಗಿ ಮೈಲೇಜ್‌ ಭತ್ಯೆಯನ್ನು ಪಡೆಯಬಹುದಾಗಿದೆ.

     

  • ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ವಿರುದ್ಧ ದೆಹಲಿಯಲ್ಲಿ ಬಿಜೆಪಿ ಸಂಸದರ ಪ್ರತಿಭಟನೆ

    ಕರ್ನಾಟಕ ಕಾಂಗ್ರೆಸ್‌ ಸರ್ಕಾರದ ವಿರುದ್ಧ ದೆಹಲಿಯಲ್ಲಿ ಬಿಜೆಪಿ ಸಂಸದರ ಪ್ರತಿಭಟನೆ

    ನವದೆಹಲಿ: ವಾಲ್ಮೀಕಿ ನಿಗಮ, ಮುಡಾ ಹಗರಣ ಹಿನ್ನೆಲೆಯಲ್ಲಿ ಕರ್ನಾಟಕ ಕಾಂಗ್ರೆಸ್‌ (Congress) ಸರ್ಕಾರದ ವಿರುದ್ಧ ನವದೆಹಲಿಯಲ್ಲಿ ಬಿಜೆಪಿ (BJP Protest) ಸಂಸದ ಪ್ರತಿಭಟನೆ ನಡೆಸಿದ್ದಾರೆ.

    ರಾಜ್ಯದಿಂದ ಆಯ್ಕೆಯಾಗಿರುವ ಬಿಜೆಪಿ ಸಂಸದರು ದೆಹಲಿಯ ಸಂಸತ್‌ನ ಗಾಂಧಿ ಪ್ರತಿಮೆ ಎದುರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುವಲ್ಲಿ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಪಾಕ್ ದುಸ್ಸಾಹಸ ಮೆರೆದಾಗಲೆಲ್ಲಾ ಸೋಲು ಕಂಡಿದೆ: ಕಾರ್ಗಿಲ್‌ನಲ್ಲಿ ಮೋದಿ ಭಾಷಣ

    ಮುಡಾ ಹಾಗೂ ವಾಲ್ಮೀಕಿ ನಿಗಮದಲ್ಲಿ ಅಕ್ರಮ ನಡೆದಿದೆ. ಇದರ ಬಗ್ಗೆ ಸೂಕ್ತ ತನಿಖೆ ಅತ್ಯಗತ್ಯ. ವಾಲ್ಮೀಕಿ ನಿಗನ ಹಗರಣ ಮತ್ತು ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

    ಮುಡಾ ಆಸ್ತಿಯನ್ನು ಕಾಂಗ್ರೆಸ್ ಲೂಟಿ ಮಾಡಿದೆ. ಕೋಟಿಗಟ್ಟಲೆ ಲಾಭ ಮಾಡಿಕೊಂಡಿದೆ. ಇದೆಲ್ಲವೂ ಸಿಎಂ ಸಿದ್ದರಾಮಯ್ಯ ಅವರ ಹೆಸರಿನಲ್ಲಿ ನಡೆದಿದೆ. ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಪ್ರತಿಭಟಿಸಿ ಸತ್ಯವನ್ನು ಜನರ ಮುಂದೆ ತರುವುದು ನಮ್ಮ ಕರ್ತವ್ಯ ಎಂದು ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಭಾರೀ ಮಳೆಗೆ ಪ್ರವಾಹ ಪರಿಸ್ಥಿತಿ; ಪುಣೆಯಲ್ಲಿ 6 ಮಂದಿ ಬಲಿ

    ಪ್ರತಿಭಟನೆಯಲ್ಲಿ ಬಿಜೆಪಿ ನಾಯಕರಾದ ಜಗದೀಶ್ ಶೆಟ್ಟರ್, ಗೋವಿಂದ್ ಕಾರಜೋಳ, ಪಿಸಿ ಮೋಹನ್, ಬಿ.ವೈ ರಾಘವೇಂದ್ರ, ವಿಶ್ವೇಶ್ವರ ಹೆಗಡೆ ಕಾಗೇರಿ, ಯದುವೀರ್‌ ಒಡೆಯರ್‌, ಜಗ್ಗೇಶ್, ಈರಣ್ಣ ಕಡಾಡಿ, ನಾರಾಯಣ ಸಾ ಬಾಂಡಗೆ, ಲೇಹರ್ ಸಿಂಗ್, ಪಿಸಿ ಗದ್ದಿಗೌಡರ್, ಡಾ. ಮಂಜುನಾಥ್, ಮಲ್ಲೇಶ್ ಬಾಬು, ಕ್ಯಾ. ಬ್ರಿಜೇಶ್ ಚೌಟಾ, ರಮೇಶ್ ಜಿಗಜಿಣಗಿ ಭಾಗಿಯಾಗಿದ್ದರು.

  • ಲಂಚ ಪ್ರಕರಣದಲ್ಲಿ ಕಾನೂನು ಕ್ರಮದಿಂದ ಜನಪ್ರತಿನಿಧಿಗಳಿಗೆ ವಿನಾಯಿತಿ ಇಲ್ಲ – ಸುಪ್ರೀಂ ಕೋರ್ಟ್

    ನವದೆಹಲಿ: ಸಂಸತ್ತಿನ ಸದಸ್ಯರು (MPs) ಮತ್ತು ವಿಧಾನಸಭೆಗಳ ಸದಸ್ಯರು (MLAs) ಲಂಚ ಪಡೆದ ಆರೋಪ ಬಂದಾಗ ಸಂವಿಧಾನದ 105 ಮತ್ತು 194ನೇ ವಿಧಿಯ ಅಡಿಯಲ್ಲಿ ಕಾನೂನು ಕ್ರಮದಿಂದ ಯಾವುದೇ ವಿನಾಯಿತಿ ಪಡೆಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ನ (Supreme Court) ಏಳು ಮಂದಿ ನ್ಯಾಯಧೀಶರ ಸಾಂವಿಧಾನಿಕ ಪೀಠ ತೀರ್ಪು ಪ್ರಕಟಿಸಿದೆ.

    ಸಂವಿಧಾನದ (Constitution) ಪರಿಚ್ಛೇದ 105 (2) ಮತ್ತು 194 (2)ರ ಅಡಿಯಲ್ಲಿ ಶಾಸಕರ ಕಾನೂನು ವಿನಾಯಿತಿಯು ಲಂಚ ಪಡೆದ ಆರೋಪಗಳಿಂದ ಅವರನ್ನು ರಕ್ಷಿಸುತ್ತದೆಯೇ ಎಂದು ಪ್ರಶ್ನಿಸಿ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಸೊಸೆ ಸೀತಾ ಸೊರೆನ್ ಅವರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಸಾಂವಿಧಾನಿಕ ಪೀಠವು ತೀರ್ಪು ನೀಡಿದೆ.

    ಸೋಮವಾರ (ಮಾ.4) ಈ ಬಗ್ಗೆ ತೀರ್ಪು ನೀಡಿದ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ (DY Chandrachud), ನ್ಯಾ. ಎ.ಎಸ್ ಬೋಪಣ್ಣ, ಎಂ.ಎಂ ಸುಂದ್ರೇಶ್, ಪಿ.ಎಸ್ ನರಸಿಂಹ, ಜೆ.ಬಿ ಪರ್ದಿವಾಲಾ, ಪಿ.ವಿ ಸಂಜಯ್ ಕುಮಾರ್ ಮತ್ತು ಮನೋಜ್ ಮಿಶ್ರಾ ಅವರಿದ್ದ ಸಾಂವಿಧಾನಿಕ ಪೀಠವು, ಸಂಸತ್ತಿನಲ್ಲಿ ಅಥವಾ ಶಾಸಕಾಂಗ ಸಭೆಯಲ್ಲಿ ಹೇಳುವ ಅಥವಾ ಮಾಡಿದ ಯಾವುದೇ ವಿಷಯಕ್ಕೆ ಸಂಬಂಧಿಸಿದಂತೆ 105 (2) ಮತ್ತು 194 (2) ವಿಧಿಗಳ ಅಡಿಯಲ್ಲಿ ಶಾಸಕರಿಗೆ ನೀಡಲಾದ ವಿನಾಯಿತಿಯು ಶಾಸಕಾಂಗ ಸದನದ ಸಾಮೂಹಿಕ ಕಾರ್ಯನಿರ್ವಹಣೆಗೆ ಸಂಬಂಧಿಸಿದೆ ಎಂದು ಹೇಳಿದೆ. ಇದನ್ನೂ ಓದಿ: ಮಮತಾ ಸವಾಲು ಸ್ವೀಕಾರ – ಸಕ್ರೀಯ ರಾಜಕಾರಣಕ್ಕೆ ಇಳಿದ ಕೋಲ್ಕತ್ತಾ ಹೈಕೋರ್ಟ್‌ ಜಡ್ಜ್‌ ಗಂಗೋಪಾಧ್ಯಾಯ

    ಮುಕ್ತ ಚರ್ಚೆಗಳಿಗೆ ಅನುಕೂಲವಾಗುವ ವಾತಾವರಣವನ್ನು ಉಳಿಸಿಕೊಳ್ಳಲು ಜನಪ್ರತಿನಿಧಿಗಳಿಗೆ ಮಾತನಾಡಲು ಅವಕಾಶ ನೀಡಿದೆ. ಆದರೆ, ಸದಸ್ಯರಿಗೆ ಭಾಷಣ ಮಾಡಲು ಲಂಚ ನೀಡಿದರೆ, ಅಂತಹ ವಾತಾವರಣ ಹಾಳಾಗುತ್ತದೆ. ಆದ್ದರಿಂದ, ನ್ಯಾಯಾಲಯವು ಸಂವಿಧಾನದ ವಿಧಿ 105 (2) ಅಥವಾ 194ರ ಅಡಿಯಲ್ಲಿ ವಿನಾಯಿತಿ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿತು. ಇದನ್ನೂ ಓದಿ: ವಿವಾದಾತ್ಮಕ ಹೇಳಿಕೆಯಿಂದಲೇ ಸದ್ದು ಮಾಡ್ತಿದ್ದ ಮೂವರು ಸಂಸದರಿಗೆ ಬಿಜೆಪಿ ಟಿಕೆಟ್‌ ನಿರಾಕರಣೆ

    ಲಂಚದ ಕಾರಣದಿಂದ ಒಂದು ನಿರ್ದಿಷ್ಟ ರೀತಿಯಲ್ಲಿ ಮತ ಚಲಾಯಿಸಲು ಸದಸ್ಯನನ್ನು ಪ್ರೇರೇಪಿಸಿದಾಗ ಮತ್ತು ಅದು ಭಾರತೀಯ ಸಾಂವಿಧಾನಿಕ ಪ್ರಜಾಪ್ರಭುತ್ವದ ಅಡಿಪಾಯವನ್ನು ನಾಶಪಡಿಸಿದಂತಾಗುತ್ತದೆ. ಲಂಚ ಪಡೆಯುವ ಕಾರ್ಯವು ಶಾಸಕರನ್ನು ಕ್ರಿಮಿನಲ್ ಆರೋಪಗಳಿಗೆ ಒಡ್ಡಬಹುದು ಮತ್ತು ಲಂಚ ಸ್ವೀಕರಿಸುವ ಶಾಸಕರು ಲಂಚಕ್ಕೆ ಪ್ರತಿಕ್ರಿಯೆಯಾಗಿ ಅಧಿಕಾರ ದುರ್ಬಳಕೆ ಮಾಡಬಹುದು. ಲಂಚವು ಸಾರ್ವಜನಿಕ ಜೀವನದಲ್ಲಿ ನಿಷ್ಠೆಯನ್ನು ಕಳೆದುಕೊಳ್ಳುತ್ತದೆ ಎಂದು ಕೋರ್ಟ್‌ ಹೇಳಿದೆ.

    ಇದೇ ವೇಳೆ ಪಿ.ವಿ.ನರಸಿಂಹರಾವ್ ಅವರ ಹಳೆ ಪ್ರಕರಣವನ್ನು ಉಲ್ಲೇಖಿಸಿದ ಕೋರ್ಟ್‌ 1998ರ ಜನಪ್ರತಿನಿಧಿಗಳ ವಿನಾಯಿತಿಯ ತೀರ್ಪನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದೆ. ಇದನ್ನೂ ಓದಿ: ನೌಕಾಪಡೆಗೆ ಎಂಹೆಚ್ 60ಆರ್ ಸೀಹಾಕ್ ಹೆಲಿಕಾಪ್ಟರ್ ನಿಯೋಜನೆಗೆ ಸಿದ್ಧತೆ – ಭಾರತಕ್ಕೆ ಭೀಮ ಬಲ

  • ಇಂದು ಮತ್ತಿಬ್ಬರು ಅಮಾನತು- ಸಂಸದರ ಸಸ್ಪೆಂಡ್ ಸಂಖ್ಯೆ 143ಕ್ಕೆ ಏರಿಕೆ

    ಇಂದು ಮತ್ತಿಬ್ಬರು ಅಮಾನತು- ಸಂಸದರ ಸಸ್ಪೆಂಡ್ ಸಂಖ್ಯೆ 143ಕ್ಕೆ ಏರಿಕೆ

    ನವದೆಹಲಿ: ಸಂಸತ್ತಿನಲ್ಲಿ (Parliament) ಅಶಿಸ್ತು ತೋರಿದವರನ್ನು ಅಮಾನತು ಮಾಡುವ ಪ್ರಕ್ರಿಯೆ ಮುಂದುವರಿದಿದ್ದು, ಇಂದು ಮತ್ತೆ ಇಬ್ಬರು ಸಂಸದರನ್ನು ಅಮಾನತು ಮಾಡಲಾಗಿದೆ.

    ಕೇರಳದ ಥಾಮಸ್ ಚಾಜಿಕಾಡನ್ (Thomas Chazhikadan) ಮತ್ತು ಎಎಮ್ ಆರಿಫ್ (AM Ariff) ಅಮಾನತಾದ ಸಂಸದರು. ಚಾಜಿಕಡನ್ ಕೇರಳ ಕಾಂಗ್ರೆಸ್ (ಎಂ) ಮತ್ತು ಆರಿಫ್ ಸಿಪಿಎಂ (CPM) ಪಕ್ಷದವರಾಗಿದ್ದಾರೆ. ಪ್ಲೇಕಾರ್ಡ್‍ಗಳನ್ನು ಪ್ರದರ್ಶಿಸಿದ ಮತ್ತು ಸದನದ ಬಾವಿಗೆ ಪ್ರವೇಶಿಸಿದ್ದಕ್ಕಾಗಿ ಈ ಇಬ್ಬರನ್ನೂ ಅಮಾನತುಗೊಳಿಸಲಾಗಿದೆ.

    ಚಳಿಗಾಲದ ಅಧಿವೇಶನ (Winter Session) ಶುಕ್ರವಾರ (ಡಿಸೆಂಬರ್ 22)ದಂದು ಕೊನೆಗೊಳ್ಳಲಿದೆ. ಇಲ್ಲಿಯವರೆಗೆ ಒಟ್ಟು 143 ಮಂದಿ ಸಂಸದರನ್ನು ಸಂಸತ್ತಿನಿಂದ ಅಮಾನತುಗೊಳಿಸಲಾಗಿದೆ. ಡಿಸೆಂಬರ್ 4 ರಂದು ಆರಂಭವಾದ ಅಧಿವೇಶನದಲ್ಲಿ ಡಿಸೆಂಬರ್ 14 ರಂದು 14 ಸಂಸದರು, ಸೋಮವಾರ 78, ಮಂಗಳವಾರ 49 ಮತ್ತು ಇಂದು ಇನ್ನೂ ಇಬ್ಬರನ್ನು ಅಮಾನತುಗೊಳಿಸಲಾಗಿದೆ. ಇದನ್ನೂ ಓದಿ: ಅಮಾನತಾದ ಸಂಸದರು ಸಂಸತ್ತಿನ ಮೊಗಸಾಲೆ, ಗ್ಯಾಲರಿಗೆ ಬರುವಂತಿಲ್ಲ: ಸುತ್ತೋಲೆ

    ಡಿಸೆಂಬರ್ 13 ರಂದು ಸಂಸತ್ತಿನ ಭದ್ರತಾ ಉಲ್ಲಂಘನೆಯ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದ ಹೇಳಿಕೆ ನೀಡುವಂತೆ ಒತ್ತಾಯಿಸಿ ಲೋಕಸಭೆ ಮತ್ತು ರಾಜ್ಯಸಭೆಯ ಎರಡೂ ಕಲಾಪಕ್ಕೆ ಅಡ್ಡಿಪಡಿಸಿದ ಮತ್ತು ಘೋಷಣೆಗಳನ್ನು ಎಬ್ಬಿಸಿದ ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸಲಾಯಿತು. ಮತ್ತೊಂದೆಡೆ ಸದನಗಳಲ್ಲಿ ಅಧ್ಯಕ್ಷರ ನಿರ್ದೇಶನಗಳನ್ನು ಉಲ್ಲಂಘಿಸಿದ್ದಕ್ಕಾಗಿ ಸಂಸದರನ್ನು ಅಮಾನತುಗೊಳಿಸಲಾಗಿದೆ.

  • ಮೋದಿ ಸರ್ಕಾರ ಪ್ರಜಾಪ್ರಭುತ್ವದ ಕತ್ತು ಹಿಸುಕಿದೆ: 141 ಸಂಸದರ ಅಮಾನತಿಗೆ ಸೋನಿಯಾ ಗಾಂಧಿ ಕಿಡಿ

    ಮೋದಿ ಸರ್ಕಾರ ಪ್ರಜಾಪ್ರಭುತ್ವದ ಕತ್ತು ಹಿಸುಕಿದೆ: 141 ಸಂಸದರ ಅಮಾನತಿಗೆ ಸೋನಿಯಾ ಗಾಂಧಿ ಕಿಡಿ

    ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ (Winter Parliament Session) ಅಶಿಸ್ತಿನ ನಡವಳಿಕೆ ಹಿನ್ನೆಲೆ 141 ಸಂಸದರನ್ನು (MP) ಅಮಾನತುಗೊಳಿಸಿದ ಕುರಿತು ಕಾಂಗ್ರೆಸ್ ಸಂಸದೀಯ ಪಕ್ಷದ (CPP) ಮುಖ್ಯಸ್ಥೆ ಸೋನಿಯಾ ಗಾಂಧಿ (Sonia Gandhi) ಪ್ರತಿಕ್ರಿಯಿಸಿದ್ದು, ನರೇಂದ್ರ ಮೋದಿ (Narendra Modi) ಸರ್ಕಾರ ಪ್ರಜಾಪ್ರಭುತ್ವದ ಕತ್ತು ಹಿಸುಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ವಿರೋಧ ಪಕ್ಷದ 141 ಸಂಸದರನ್ನು ಸರ್ಕಾರ ಅಮಾನತುಗೊಳಿಸಿರುವುದನ್ನು ಖಂಡಿಸಿದ ಅವರು, ಸಂಪೂರ್ಣವಾಗಿ ಸಮಂಜಸವಾದ ಮತ್ತು ನ್ಯಾಯಸಮ್ಮತವಾದ ಬೇಡಿಕೆಗೆ ಒತ್ತಾಯಿಸಿದ್ದಕ್ಕಾಗಿ ಹಿಂದೆಂದೂ ಇಷ್ಟು ವಿರೋಧ ಪಕ್ಷದ ಸಂಸದರನ್ನು ಸದನದಿಂದ ಅಮಾನತುಗೊಳಿಸಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ:ಉಪರಾಷ್ಟ್ರಪತಿಗೆ ಅವಮಾನಿಸಿದ್ದನ್ನು ನೋಡಿ ದಿಗ್ಭ್ರಮೆಗೊಂಡಿದ್ದೇನೆ: ಮುರ್ಮು ಬೇಸರ

    ಡಿಸೆಂಬರ್ 13ರಂದು ಸಂಸತ್ ಭವನದಲ್ಲಿ ನಡೆದ ಭದ್ರತಾ ಉಲ್ಲಂಘನೆ (Security Breach) ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah)ಅವರಿಂದ ಹೇಳಿಕೆ ನೀಡುವಂತೆ ವಿಪಕ್ಷ ನಾಯಕರು ಒತ್ತಾಯಿಸಿದ್ದಾರೆ. ಭದ್ರತಾ ಲೋಪದ ಕುರಿತು ಅಮಿತ್ ಶಾ ಹೇಳಿಕೆ ಕೊಡಬೇಕಾಗಿತ್ತು ಎಂದು ಸಂಸದರನ್ನು ಬೆಂಬಲಿಸಿದರು. ಇದನ್ನೂ ಓದಿ: ಇವಿಎಂ ಬಗ್ಗೆ ಮತ್ತೆ ವಿಪಕ್ಷಗಳಿಗೆ ಅನುಮಾನ – ವಿವಿಪ್ಯಾಟ್‌ ಸ್ಲಿಪ್‌ ಮತದಾರರ ಕೈಗೆ ನೀಡಬೇಕು

  • ಬಿಜೆಪಿಗೆ ಅಧಿಕಾರ ನೆತ್ತಿಗೇರಿದೆ, ಅದಕ್ಕೆ ಸಂಸದರನ್ನ ಅಮಾನತು ಮಾಡಿದೆ: ಈಶ್ವರ್ ಖಂಡ್ರೆ

    ಬಿಜೆಪಿಗೆ ಅಧಿಕಾರ ನೆತ್ತಿಗೇರಿದೆ, ಅದಕ್ಕೆ ಸಂಸದರನ್ನ ಅಮಾನತು ಮಾಡಿದೆ: ಈಶ್ವರ್ ಖಂಡ್ರೆ

    ಬೆಂಗಳೂರು: ಬಿಜೆಪಿಯವರಿಗೆ (BJP) ಅಧಿಕಾರ ನೆತ್ತಿಗೆ ಏರಿದೆ. ಅದಕ್ಕೆ ಸಂಸತ್‌ನಲ್ಲಿ (Parliament) ಸಂಸದರನ್ನು ಅಮಾನತು ಮಾಡಿದೆ ಎಂದು ಬಿಜೆಪಿ ವಿರುದ್ಧ ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwar Khandre) ಕಿಡಿಕಾರಿದ್ದಾರೆ.

    ಸಂಸತ್‌ನಲ್ಲಿ ವಿಪಕ್ಷ ಸಂಸದರ ಅಮಾನತು ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿಗೆ ಅಧಿಕಾರ ನೆತ್ತಿಗೆ ಏರಿದೆ. 3 ರಾಜ್ಯ ಹೇಗೋ ಮಾಡಿ ಗೆದ್ದಿದ್ದೇವೆ ಎಂದು ಹೀಗೆ ಮಾಡುತ್ತಿದ್ದಾರೆ. ಪ್ರಜಾಪ್ರಭುತ್ವದ ಕಗ್ಗೊಲೆ ಆಗುತ್ತಿದೆ. ಇದನ್ನು ಎಲ್ಲರೂ ಖಂಡಿಸಬೇಕು ಎಂದರು. ಇದನ್ನೂ ಓದಿ: ಕಾರಜೋಳರ ಮೇಲೆ ಹಲ್ಲೆ ಯತ್ನದ ಹಿಂದೆ ಡಾ.ಮಹದೇವಪ್ಪ, ಪ್ರಿಯಾಂಕ್ ಖರ್ಗೆ ಕೈವಾಡ- ಪಿ.ರಾಜೀವ್ ಆರೋಪ

    ಸಂಸತ್ ಮೇಲಿನ ದಾಳಿ ಬಗ್ಗೆ ಚರ್ಚೆ ಬೇಡ ಅಂದರೆ ಹೇಗೆ? ಬಿಜೆಪಿಯವರು ಸರ್ವಾಧಿಕಾರಿ ಧೋರಣೆ ಮಾಡುತ್ತಿದ್ದಾರೆ. ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಅಂದುಕೊಂಡು ಹೀಗೆ ಮಾಡುತ್ತಿದ್ದಾರೆ. ಮೋದಿ, ಅಮಿತ್ ಶಾ ಅಧಿವೇಶನಕ್ಕೆ ಬರಲ್ಲ. ಹಾಗಾದರೆ ಅಧಿವೇಶನ ಯಾಕೆ ನಡೆಯಬೇಕು? ಕಾಂಗ್ರೆಸ್ ಅವರು ಹಿಂದೆ ಮಾಡಿದ್ರು ನಾವೂ ಮಾಡ್ತೀವಿ ಅಂದರೆ ಹೇಗೆ? ಅದನ್ನು ಅವರು ಜನರ ಮುಂದೆ ಹೇಳಲಿ. ಬಿಜೆಪಿಯವರು ದೇಶವನ್ನು ಹಾಗೆ ಮಾಡ್ತೀವಿ, ಹೀಗೆ ಮಾಡ್ತೀವಿ ಅಂದರು. ಆದರೆ ಅವರು ಹೇಳಿದ್ದು ಏನೂ ಮಾಡಿಲ್ಲ. ಇದಕ್ಕೆ ಬಿಜೆಪಿ ಅವರು ಉತ್ತರ ಕೊಡಬೇಕು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ತಾಳಿ ಒಬ್ಬರ ಹತ್ತಿರ ಕಟ್ಟಿಸಿಕೊಂಡು ಸಂಸಾರ ಇನ್ನೊಬ್ಬರ ಜೊತೆ ಮಾಡ್ಬಾರ್ದು: ಈಶ್ವರಪ್ಪ ಕಿಡಿ

  • ಲೋಕಸಭೆಯಿಂದ ಮತ್ತೆ 31 ಸಂಸದರು ಅಮಾನತು

    ಲೋಕಸಭೆಯಿಂದ ಮತ್ತೆ 31 ಸಂಸದರು ಅಮಾನತು

    ನವದೆಹಲಿ: ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ ಕಾಂಗ್ರೆಸ್‌ನ ಅಧೀರ್ ರಂಜನ್ ಚೌಧರಿ (Adhir Ranjan Chowdhury) ಸೇರಿದಂತೆ ವಿಪಕ್ಷಗಳ 31 ಸಂಸದರನ್ನು ಲೋಕಸಭೆಯಿಂದ (Lok Sabha) ಅಮಾನತುಗೊಳಿಸಲಾಗಿದೆ.

    ಕಳೆದ ವಾರ ಆಗಿದ್ದ ಲೋಕಸಭಾ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿ ವಿಪಕ್ಷಗಳು ಪ್ರತಿಭಟಿಸಿದ್ದವು. ಇದನ್ನೂ ಓದಿ: ಕೇಂದ್ರದಲ್ಲಿ ಬೇರೆ ಪಕ್ಷ ಇರ್ತಿದ್ರೆ ಬಿಜೆಪಿ ಇಡೀ ದೆಹಲಿ ಬಂದ್ ಮಾಡ್ತಿತ್ತು: ಸಂಜಯ್ ರಾವತ್

    ಕಲಾಪಕ್ಕೆ ಅಡ್ಡಿಪಡಿಸಿದ್ದರಿಂದ ಪ್ರತಿಪಕ್ಷಗಳ ಸಂಸದರನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಲೋಕಸಭೆಯಿಂದ ಅಮಾನತುಗೊಳಿಸಲಾಯಿತು.

    ಗೃಹ ಸಚಿವರ ಹೇಳಿಕೆಗೆ ಒತ್ತಾಯಿಸಿ ಕಳೆದ ವಾರ ವಿಪಕ್ಷಗಳ 13 ಸಂಸದರು ಅಮಾನತುಗೊಂಡಿದ್ದರು. ಈಗ ಮತ್ತೊಂದು ಸುತ್ತಿನಲ್ಲಿ 31 ಸಂಸದರು ಅಮಾನತುಗೊಂಡಿದ್ದಾರೆ. ಇದಲ್ಲದೇ ಇನ್ನೂ ಮೂವರು ಸಂಸದರನ್ನು ವಿಶೇಷಾಧಿಕಾರ ಸಮಿತಿ ವರದಿ ಬರುವವರೆಗೆ ಅಮಾನತುಗೊಳಿಸಲಾಗಿದೆ. ಇದರರ್ಥ ಒಟ್ಟು 46 ಸಂಸದರನ್ನು ಅಮಾನತುಗೊಳಿಸಲಾಗಿದೆ. ಅವರಲ್ಲಿ 43 ಮಂದಿ ಭದ್ರತಾ ಲೋಪದ ಬಗ್ಗೆ ಗೃಹ ಸಚಿವರ ಹೇಳಿಕೆಗೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸಂಸತ್‌ ಮೇಲಿನ ದಾಳಿ ಗಂಭೀರವಾದದ್ದು; ಚರ್ಚೆ ಬೇಡ, ವಿಸ್ತೃತ ತನಿಖೆಯಾಗಲಿ: ಪ್ರಧಾನಿ ಮೋದಿ ಮೊದಲ ಪ್ರತಿಕ್ರಿಯೆ

    ಅಮಾನತುಗೊಂಡ ಸಂಸದರಲ್ಲಿ ಲೋಕಸಭೆಯಲ್ಲಿ ಕಾಂಗ್ರೆಸ್‌ನ ನಾಯಕ ಅಧೀರ್ ರಂಜನ್ ಚೌಧರಿ ಮತ್ತು ಸದನದಲ್ಲಿ ಪಕ್ಷದ ಉಪನಾಯಕ ಗೌರವ್ ಗೊಗೊಯ್ ಸೇರಿದ್ದಾರೆ.

  • ಅಶಿಸ್ತಿನ ವರ್ತನೆ – ಲೋಕಸಭೆಯ 14 ಸಂಸದರು ಸಸ್ಪೆಂಡ್‌

    ಅಶಿಸ್ತಿನ ವರ್ತನೆ – ಲೋಕಸಭೆಯ 14 ಸಂಸದರು ಸಸ್ಪೆಂಡ್‌

    ನವದೆಹಲಿ: ಸಂಸತ್ತಿನಲ್ಲಿ ಅಶಿಸ್ತಿನ ವರ್ತನೆ ತೋರಿದ್ದಕ್ಕಾಗಿ ರಾಜ್ಯಸಭೆಯ ಒಬ್ಬರು ಹಾಗೂ ಲೋಕಸಭೆಯ (Lok Sabha) 14 ಸಂಸದರನ್ನು ಅಮಾನತುಗೊಳಿಸಲಾಗಿದೆ.

    ಮಾಣಿಕಂ ಠಾಗೋರ್ (Manickam Tagore), ಕನಿಮೋಳಿ, ಪಿ.ಆರ್ ನಟರಾಜನ್, ವಿ.ಕೆ ಶ್ರೀಕಾಂತಂ, ಬೇನಿ ಬಹನ್, ಕೆ ಸುಬ್ರಹ್ಮಣ್ಯಂ, ಎಸ್‌.ಆರ್ ಪ್ರತಿಬನ್, ಎಸ್ ವೆಂಕಟೇಶನ್ ಮತ್ತು ಮೊಹಮ್ಮದ್ ಜಾವೇದ್, ಟಿ.ಎನ್ ಪ್ರತಾಪನ್ (TN Prathapan), ಹೈಬಿ ಈಡನ್, ಜ್ಯೋತಿಮಣಿ, ರಮ್ಯಾ ಹರಿದಾಸ್ ಮತ್ತು ಡೀನ್ ಕುರಿಯಾಕೋಸ್ ಕುರ್ಯಾಕಸ್ ಅಮಾನತುಗೊಂಡ ಸಂಸದರು.

    ಇದಕ್ಕೂ ಮುನ್ನವೇ ಲೋಕಸಭೆಯು ಐವರು ಕಾಂಗ್ರೆಸ್‌ ಸಂಸದರನ್ನು (Congress MPs) ಉಳಿದ ಅವಧಿಗೆ ಅಮಾನತುಗೊಳಿಸುವ ನಿರ್ಣಯ ಅಂಗೀಕರಿಸಿತ್ತು. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಐವರನ್ನು ಅಮಾನತುಗೊಳಿಸುವ ನಿರ್ಣಯ ಮಂಡಿಸಿದರು. ಇದನ್ನೂ ಓದಿ: ಸಿಕ್ಕಿಂನಲ್ಲಿ ಹಿಮಪಾತ – ಸಿಲುಕಿಕೊಂಡಿದ್ದ 800 ಪ್ರವಾಸಿಗರನ್ನು ರಕ್ಷಿಸಿದ ಸೇನೆ

    ಸದನದಲ್ಲಿ ಕಲಾಪಕ್ಕೆ ಅಡ್ಡಿಪಡಿಸಿದ ಕಾರಣಕ್ಕಾಗಿ ಪ್ರತಿಪಕ್ಷಗಳ 15 ಸದಸ್ಯರನ್ನು ಅಧಿವೇಶನದ ಉಳಿದ ಅವಧಿಯಿಂದ ಅಮಾನತುಗೊಳಿಸುವ ನಿರ್ಣಯ ತೆಗೆದುಕೊಳ್ಳಲಾಯಿತು. 15 ಸದಸ್ಯರ ಪೈಕಿ ಐವರು ಕಾಂಗ್ರೆಸ್‌ ಸಂಸದರಾಗಿದ್ದಾರೆ.

    ಸಂಸತ್ತಿನಲ್ಲಿ ಆದ ಭದ್ರತಾ ಲೋಪವನ್ನು (Security Breach in LokSabha) ಖಂಡಿಸಿ ಪ್ರತಿಪಕ್ಷದ ಸದಸ್ಯರು ಗದ್ದಲ ಎಬ್ಬಿಸಿದ್ದರು. ಇದರಿಂದ ಶಿಸ್ತು ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್ ರಾಜ್ಯಸಭೆಯಿಂದ ಅಮಾನತು

  • Security Breach in LokSabha- ಸಂಸತ್ ಒಳಗೆ, ಹೊರಗೆ ಇಂದು ಏನೇನಾಯ್ತು?

    Security Breach in LokSabha- ಸಂಸತ್ ಒಳಗೆ, ಹೊರಗೆ ಇಂದು ಏನೇನಾಯ್ತು?

    – ವೈಫಲ್ಯದ ಹೊಣೆ ಹೊತ್ತ ಸ್ಪೀಕರ್

    ನವದೆಹಲಿ: ಸಂಸತ್ ಭವನದ ಮೇಲೆ ಭಯೋತ್ಪಾದಕ ದಾಳಿ ನಡೆದ ಕರಾಳ ನೆನಪಿಗೆ ಇಂದು ಭರ್ತಿ 22 ವರ್ಷ. ಇದೇ ದಿನವೇ ಸಂಸತ್ (Parliament)  ಭವನದಲ್ಲಿ ಭಾರೀ ಭದ್ರತಾ ಲೋಪ (Security Breach in LokSabha) ನಡೆದಿದ್ದು, ದಾಳಿ ಪ್ರಯತ್ನ ನಡೆದಿದೆ.

    ಲೋಕಸಭೆ (Loksabha) ಕಲಾಪ ನೋಡುವ ನೆಪದಲ್ಲಿ ವೀಕ್ಷಕರ ಗ್ಯಾಲರಿಗೆ ಬಂದಿದ್ದ ಇಬ್ಬರು ಕಿಡಿಗೇಡಿಗಳು ಮತ್ತು ಸಂಸತ್‍ನ ಟ್ರಾನ್ಸ್ ಪೋರ್ಟ್ ಭವನದ ಬಳಿ ಮತ್ತಿಬ್ಬರು ಕಿಡಿಗೆಡಿಗಳು ಹಲಚಲ್ ಸೃಷ್ಟಿಸಿದ್ದಾರೆ. ಲೋಕಸಭೆಯಲ್ಲಿ ಝೀರೋ ಹವರ್ ನಡೆಯತ್ತಿದ್ದ ಸಂದರ್ಭದಲ್ಲಿ ವೀಕ್ಷಕರ ಗ್ಯಾಲರಿಯಲ್ಲಿದ್ದ ಇಬ್ಬರು ಕಿಡಿಗೇಡಿಗಳ ಪೈಕಿ ಒಬ್ಬ ಏಕಾಏಕಿ ಸಂಸದರತ್ತ ಹಾರಿದ್ರೆ, ಮತ್ತೊಬ್ಬ ತನ್ನ ಶೂನಲ್ಲಿದ್ದ `ಸ್ಮೋಕ್ ಬಾಂಬ್’ ಸಿಡಿಸಿದ. ಇದನ್ನು ನಿರೀಕ್ಷೆ ಮಾಡದ ಸಂಸದರು ಕೂಡ್ಲೇ ಗಾಬರಿಗೊಂಡಿ ಓಡಿದ್ರು.

    ಕೆಲವರು ಧೈರ್ಯ ಮಾಡಿ ಇಬ್ಬರನ್ನು ಹಿಡಿದು ಸಖತ್ತಾಗಿ ಬಾರಿಸಿದ್ರು. ಭದ್ರತಾ ಸಿಬ್ಬಂದಿ ಇಬ್ಬರನ್ನು ವಶಕ್ಕೆ ಪಡೆದರು. ಕೂಡಲೇ ಸ್ಪೀಕರ್ ಕಲಾಪವನ್ನು ಎರಡು ಗಂಟೆಗೆ ಮುಂದೂಡಿದರು. ಲೋಕಸಭೆಯಲ್ಲಿ ಹಲಚಲ್ ಸೃಷ್ಟಿಸಿದವರನ್ನು ಮೈಸೂರಿನ ಮನೋರಂಜನ್ ಮತ್ತು ಬೆಂಗಳೂರಿನ ಎಂಜಿನಿಯರಿಂಗ್ ವಿದ್ಯಾರ್ಥಿ ಸಾಗರ್ ಶರ್ಮಾ ಎಂದು ಗುರುತಿಸಲಾಗಿದೆ. ವಿಶೇಷ ಅಂದ್ರೆ ಈ ಇಬ್ಬರು ಬಿಜೆಪಿ ಸಂಸದ ಪ್ರತಾಪ್ ಸಿಂಹ ಕಚೇರಿಯಿಂದ ವಿಸಿಟರ್ಸ್ ಪಾಸ್ ಪಡೆದು ಸಂಸತ್‍ಗೆ ಬಂದಿದ್ರು. ಈ ಹೊತ್ತಲ್ಲಿ ಪ್ರಧಾನಿ ಮೋದಿಯಾಗ್ಲಿ (Narendra Modi), ಗೃಹ ಸಚಿವರಾಗ್ಲಿ ಇರಲಿಲ್ಲ.

    ಇದೇ ಹೊತ್ತಲ್ಲಿ ಸಂಸತ್ ಭವನದ ಹೊರಗೆ ಕೂಡ ಇಬ್ಬರು, ಕೇಂದ್ರದ ವಿರುದ್ಧ ಘೋಷಣೆ ಕೂಗುತ್ತಾ, ಸ್ಮೋಕ್ ಬಾಂಬ್ ಸಿಡಿಸಿದರು. ಇದು ಕೂಡ ಗಾಬರಿಗೆ ಕಾರಣವಾಯ್ತು. ಕೂಡಲೇ ಭದ್ರತಾ ಸಿಬ್ಬಂದಿ ಇಬ್ಬರನ್ನು ವಶಕ್ಕೆ ಪಡೆದರು. ನಾಲ್ವರಲ್ಲದೆ, ಪರಾರಿಯಾಗಿದ್ದ ಇನ್ನಿಬ್ಬರನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ಅದೃಷ್ಟವಶಾತ್ ಯಾರ ಬಳಿಯೂ ಯಾವುದೇ ಶಸ್ತಾಸ್ತ್ರ ಇರಲಿಲ್ಲ. ಅವರು ಬಿಡುಗಡೆ ಮಾಡಿದ ಗ್ಯಾಸ್ ಕೂಡ ಅಪಾಯಕಾರಿ ಆಗಿರಲಿಲ್ಲ. ಇನ್ನೂ, ಸರ್ವಪಕ್ಷಗಳ ಸಭೆ ನಡೆಸಿದ ಸ್ಪೀಕರ್, ಸದ್ಯಕ್ಕೆ ವಿಸಿಟರ್ಸ್ ಪಾಸ್ ನೀಡಿಕೆಯನ್ನು ರದ್ದು ಮಾಡಿದ್ದಾರೆ. ಸಮಗ್ರ ತನಿಖೆಗೆ ಸ್ಪೀಕರ್ ಆದೇಶ ನೀಡಿದ್ದಾರೆ. ಈ ವೈಫಲ್ಯದ ಹೊಣೆ ನನ್ನದೇ ಎಂದು ಸ್ಪೀಕರ್ ತಿಳಿಸಿದ್ದಾರೆ.

  • ಬಿಜೆಪಿಯ 10 ಸಂಸದರಿಂದ ಸಂಸತ್ ಸ್ಥಾನಕ್ಕೆ ರಾಜೀನಾಮೆ

    ಬಿಜೆಪಿಯ 10 ಸಂಸದರಿಂದ ಸಂಸತ್ ಸ್ಥಾನಕ್ಕೆ ರಾಜೀನಾಮೆ

    ನವದೆಹಲಿ: ಇತ್ತೀಚಿಗಷ್ಟೆ ಪಂಚರಾಜ್ಯಗಳ ವಿಧಾನಸಭಾ ಚುನಾವಣೆ (Assembly Election) ಫಲಿತಾಂಶ ಹೊರಬಿದ್ದಿದ್ದು, ಅದರಲ್ಲಿ ಗೆದ್ದು ಶಾಸಕರಾಗಿ ಆಯ್ಕೆಯಾದ 10 ಮಂದಿ ಬಿಜೆಪಿ ಸಂಸದರು (MP) ಬುಧವಾರ ತಮ್ಮ ಸಂಸತ್ ಸ್ಥಾನಗಳಿಗೆ ರಾಜೀನಾಮೆ (Resignation) ನೀಡಿದ್ದಾರೆ.

    ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ (JP Nadda) ಅವರ ನೇತೃತ್ವದಲ್ಲಿ ಸಂಸದರು ಸ್ಪೀಕರ್ ಅವರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸಿದ್ದು, ಶಾಸಕರಾಗಿ ಮುಂದುವರೆಯಲಿದ್ದಾರೆ. ಮಧ್ಯಪ್ರದೇಶದಿಂದ (Madhya Pradesh)  ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್, ಪ್ರಹ್ಲಾದ್ ಪಟೇಲ್, ರಿತಿ ಪಾಠಕ್, ರಾಕೇಶ್ ಸಿಂಗ್, ಉದಯ್ ಪ್ರತಾಪ್ ಸಿಂಗ್ ರಾಜೀನಾಮೆ ಸಲ್ಲಿಸಿದ್ದಾರೆ. ರಾಜಸ್ಥಾನದಿಂದ (Rajasthan) ರಾಜ್ಯವರ್ಧನ್ ರಾಥೋಡ್, ಕಿರೋಡಿ ಲಾಲ್ ಮೀನಾ ಮತ್ತು ದಿಯಾ ಕುಮಾರಿ ರಾಜೀನಾಮೆ ನೀಡಿದ್ದಾರೆ. ಇನ್ನೂ ಛತ್ತೀಸ್‌ಗಢದಿಂದ (Chattisgarh) ಅರುಣ್ ಸಾವೊ ಮತ್ತು ಗೋಮತಿ ಸಾಯಿ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಇದನ್ನೂ ಓದಿ: ಪ್ಯಾಕಿಂಗ್ ಆಹಾರ ಉತ್ಪನ್ನಗಳಿಂದ ಜೀರ್ಣಾಂಗಕ್ಕೆ ಹಾನಿ- ಏಮ್ಸ್ ವೈದ್ಯರಿಂದ ಹೊಸ ವರದಿ

    ಬಾಬಾ ಬಾಲಕನಾಥ್ ಮತ್ತು ರೇಣುಕಾ ಸಿಂಗ್ ಇನ್ನೂ ರಾಜೀನಾಮೆ ಸಲ್ಲಿಸಿಲ್ಲ. ಇವರಿಬ್ಬರು ಶೀಘ್ರದಲ್ಲೇ ರಾಜೀನಾಮೆ ಸಲ್ಲಿಕೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ವಿಧಾನಸಭಾ ಚುನಾವಣೆಯಲ್ಲಿ ಛತ್ತೀಸ್‌ಗಢ, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಬಿಜೆಪಿ ಬಹುಮತಗಳನ್ನು ಪಡೆದು ಕಾಂಗ್ರೆಸ್ ಅನ್ನು ಮಣಿಸಿ ಸರ್ಕಾರ ರಚಿಸಲು ಸಿದ್ಧವಾಗಿದೆ. ಈ ರಾಜ್ಯಗಳಲ್ಲಿ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಈ ನಡುವೆಯೇ ಸಂಸದರು ರಾಜೀನಾಮೆ ನೀಡಿದ್ದಾರೆ. ರಾಜಸ್ಥಾನ, ಛತ್ತೀಸ್‌ಗಢ ಮತ್ತು ತೆಲಂಗಾಣ (Telangana) ಮುಖ್ಯಮಂತ್ರಿಗಳು ತಮ್ಮ ರಾಜ್ಯಪಾಲರಿಗೆ ರಾಜೀನಾಮೆ ಪತ್ರವನ್ನು ನೀಡಿದ್ದಾರೆ. ಇದನ್ನೂ ಓದಿ: ABVPಯಿಂದ ತೆಲಂಗಾಣ ಸಿಎಂ ಹುದ್ದೆಯವರೆಗೆ – ರೇವಂತ್ ರೆಡ್ಡಿ ಹಿನ್ನೆಲೆ ಏನು?