Tag: ಸಂಸದರು

  • ಎಂಪಿ, ಎಂಎಎಲ್‍ಎಗಳ ಬಾಕಿ ಪ್ರಕರಣಗಳ ತ್ವರಿತ ವಿಲೇವಾರಿಗೆ ಸುಪ್ರೀಂ ಸೂಚನೆ

    ಎಂಪಿ, ಎಂಎಎಲ್‍ಎಗಳ ಬಾಕಿ ಪ್ರಕರಣಗಳ ತ್ವರಿತ ವಿಲೇವಾರಿಗೆ ಸುಪ್ರೀಂ ಸೂಚನೆ

    ನವದೆಹಲಿ: ಸಂಸದರು (MP) ಮತ್ತು ಶಾಸಕರ (MLA) ವಿರುದ್ಧ ಬಾಕಿ ಉಳಿದಿರುವ ಪ್ರಕರಣಗಳ ಮೇಲೆ ನಿಗಾ ಇಡಲು ವಿಶೇಷ ಪೀಠ ರಚನೆ ಮಾಡುವಂತೆ ಹಾಗೂ ಪೀಠದ ನೇತೃತ್ವವನ್ನು ಹೈಕೋರ್ಟ್ (High Court) ಮುಖ್ಯ ನ್ಯಾಯಮೂರ್ತಿಗಳು ವಹಿಸಿಕೊಳ್ಳುವಂತೆ ಸುಪ್ರೀಂಕೋರ್ಟ್ (Supreme Court) ಸೂಚನೆ ನೀಡಿದೆ.

    ಸಂಸದರು ಮತ್ತು ಶಾಸಕರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳ ತ್ವರಿತ ವಿಲೇವಾರಿಗಾಗಿ ನಿರ್ದೇಶನ ನೀಡಬೇಕು. ಆರು ವರ್ಷಗಳ ನಿಷೇಧಕ್ಕೆ ವಿರುದ್ಧವಾಗಿ ಹಾಲಿ ಶಾಸಕರು ಸೇರಿದಂತೆ ಅಪರಾಧಿ ರಾಜಕಾರಣಿಗಳನ್ನು ಚುನಾವಣೆಯಲ್ಲಿ ಸ್ಪರ್ಧಿಸದಂತೆ ಜೀವಮಾನದ ನಿಷೇಧವನ್ನು ಹೇರುವಂತೆ ವಕೀಲ ಹಾಗೂ ಬಿಜೆಪಿ ನಾಯಕ ಅಶ್ವಿನಿ ಉಪಾಧ್ಯಾಯ ಸಲ್ಲಿಸಿದ್ದ ಅರ್ಜಿಯನ್ನು ಸಿಜೆಐ ನೇತೃತ್ವದ ಪೀಠ ವಿಚಾರಣೆ ನಡೆಸಿತು. ಇದನ್ನೂ ಓದಿ: ಗ್ರಾಹಕರಿಗೆ ರಶೀದಿ ನೀಡದೆ 1.62 ಕೋಟಿ ರೂ. ವಂಚನೆ – ಬ್ಯಾಂಕ್ ಮ್ಯಾನೇಜರ್ ಅರೆಸ್ಟ್

    ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಪೀಠವು ಮುಖ್ಯವಾಗಿ ಸಂಸದರು ಅಥವಾ ಶಾಸಕರ ವಿರುದ್ಧ ಮರಣದಂಡನೆ ವಿಧಿಸಬಹುದಾದ ಪ್ರಕರಣಗಳಿಗೆ ಇತರ ಪ್ರಕರಣಗಳಿಗಿಂತ ಹೆಚ್ಚಿನ ಆದ್ಯತೆ ನೀಡಬೇಕು. ಇಂತಹ ಪ್ರಕರಣಗಳ ತ್ವರಿತ ವಿಲೇವಾರಿ ಮಾಡುವಂತೆ ಕೋರ್ಟ್ ನಿರ್ದೇಶಿಸಿದೆ. ಸಂಬಂಧಪಟ್ಟ ಪ್ರಧಾನ ಸೆಷನ್ಸ್ ನ್ಯಾಯಾಧೀಶರು ಅಂತಹ ಪ್ರಕರಣಗಳ ವಿಚಾರಣೆಗೆ ಸಾಕಷ್ಟು ಮೂಲಸೌಕರ್ಯ ಸೌಲಭ್ಯಗಳು ಲಭ್ಯವಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಇದೇ ವೇಳೆ ಹೇಳಿದೆ.

    ಉಪಾಧ್ಯಾಯ ಅವರು ಕಳೆದ ಏಪ್ರಿಲ್‍ನಲ್ಲಿ ಗಂಭೀರ ಅಪರಾಧಗಳಿಗಾಗಿ ಚಾರ್ಜ್‍ಶೀಟ್ ಮಾಡಿದ ವ್ಯಕ್ತಿಗಳನ್ನು ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಲು ಸಾಧ್ಯವಿಲ್ಲ ಎಂದು ಮನವಿ ಮಾಡಿದ್ದರು. ಇದು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಟೀಕಿಸಿತ್ತು. ಇದನ್ನೂ ಓದಿ: 2023ರ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಆರ್‌ಡಿ ಪಾಟೀಲ್ – ಪ್ರಚಾರಕ್ಕೆ ಬಂದಿದ್ರು ಅಖಿಲೇಶ್ ಯಾದವ್

  • ಹಳೆ ಸಂಸತ್‌ ಭವನದಲ್ಲಿ ಸಂಸದರ ಮೆಗಾ ಫೋಟೋಶೂಟ್‌ – ಸುಂದರ ನೆನಪುಗಳೊಂದಿಗೆ ವಿದಾಯ

    ಹಳೆ ಸಂಸತ್‌ ಭವನದಲ್ಲಿ ಸಂಸದರ ಮೆಗಾ ಫೋಟೋಶೂಟ್‌ – ಸುಂದರ ನೆನಪುಗಳೊಂದಿಗೆ ವಿದಾಯ

    – ಇಂದಿನಿಂದ ಹೊಸ ಸಂಸತ್‌ ಭವನದಲ್ಲಿ ಅಧಿವೇಶನ

    ನವದೆಹಲಿ: ಸುಂದರ ನೆನಪುಗಳೊಂದಿಗೆ ಹಳೆ ಸಂಸತ್‌ ಭವನಕ್ಕೆ (Old Parliament Building) ಸಂಸದರು ಇಂದು (ಮಂಗಳವಾರ) ವಿದಾಯ ಹೇಳಿದರು. ಪ್ರಧಾನಿ ಮೋದಿ (Narendra Modi) ಸೇರಿದಂತೆ ಎಲ್ಲಾ ಸಂಸತ್‌ ಸದಸ್ಯರು ಒಟ್ಟಾಗಿ ಸೇರಿ ಮೆಗಾ ಫೋಟೋಶೂಟ್‌ ಮಾಡಿಸಿದರು.

    ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧನಕರ್‌, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ಇತರ ಸಂಸದರು ಇಂದಿನ ಸಂಸತ್ತಿನ ಅಧಿವೇಶನದ ಮೊದಲು ಜಂಟಿ ಫೋಟೋ ಸೆಷನ್‌ಗಾಗಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ಹಳೆ ಸಂಸತ್‌ ಭವನಕ್ಕೆ ಬೀಳ್ಕೊಡುಗೆ – ನೆಹರೂ ಸ್ಮರಿಸಿದ ಪ್ರಧಾನಿ ಮೋದಿ

    ಬಿಜೆಪಿ ಸಂಸದ ನರಹರಿ ಅಮೀನ್ ಅವರು ಸಂಸದರ ಗ್ರೂಪ್ ಫೋಟೋಶೂಟ್‌ ವೇಳೆ ಪ್ರಜ್ಞೆ ತಪ್ಪಿ ಬಿದ್ದಿದ್ದರು. ಸ್ವಲ್ಪ ಹೊತ್ತು ಸುಧಾರಿಸಿಕೊಂಡು ನಂತರ ಮತ್ತೆ ಫೋಟೋಶೂಟ್‌ನಲ್ಲಿ ಸೇರಿದರು.

    ಕಾಂಗ್ರೆಸ್‌ನ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಸೇರಿದಂತೆ ಸಂಸತ್‌ ಸದಸ್ಯರೂ ಆಗಿರುವ ವಿಪಕ್ಷಗಳ ನಾಯಕರು ಸಹ ಫೋಟೋಶೂಟ್‌ನಲ್ಲಿ ಪಾಲ್ಗೊಂಡರು. ಇಂದಿನಿಂದ ನೂತನ ಸಂಸತ್ ಭವನದಲ್ಲಿ ಸದನದ ಕಲಾಪ ನಡೆಯಲಿದೆ.

    ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ವಿಶೇಷ ಅಧಿವೇಶನದಲ್ಲಿ ಹಳೆ ಸಂಸತ್‌ ಭವನಕ್ಕೆ ವಿದಾಯದ ಭಾಷಣ ಮಾಡಿದ್ದರು. ಈ ವೇಳೆ ದೇಶದ ಮೊದಲ ಪ್ರಧಾನಿ ಜವಾಹರ್‌ಲಾಲ್‌ ನೆಹರೂ ಅವರನ್ನು ಸ್ಮರಿಸಿದ್ದರು. ಇದನ್ನೂ ಓದಿ: ಮಹಿಳಾ ಮೀಸಲಾತಿ ಮಸೂದೆಗೆ ಕೇಂದ್ರ ಸಂಪುಟ ಅನುಮೋದನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಲೋಕಸಭೆಯಲ್ಲಿ ಮೋದಿ ಭಾಷಣದ ಮಧ್ಯೆ ಸಭಾತ್ಯಾಗ ಮಾಡಿದ ವಿಪಕ್ಷಗಳ ಸಂಸದರು

    ಲೋಕಸಭೆಯಲ್ಲಿ ಮೋದಿ ಭಾಷಣದ ಮಧ್ಯೆ ಸಭಾತ್ಯಾಗ ಮಾಡಿದ ವಿಪಕ್ಷಗಳ ಸಂಸದರು

    ನವದೆಹಲಿ: ಲೋಕಸಭೆಯಲ್ಲಿ (Lok Sabha) ಅವಿಶ್ವಾಸ ನಿರ್ಣಯದ ಕುರಿತು ಪ್ರಧಾನಿ ನರೇಂದ್ರ ಮೋದಿ (Narendra Modi) ಭಾಷಣ ಮಾಡುತ್ತಿದ್ದ ಮಧ್ಯೆಯೇ ವಿಪಕ್ಷಗಳ ಸಂಸದರು ಸಭಾತ್ಯಾಗ ಮಾಡಿದರು.

    ವಿಪಕ್ಷಗಳ ಅವಿಶ್ವಾಸ ನಿರ್ಣಯ ಕುರಿತು ಕಳೆದ ಮೂರು ದಿನಗಳಿಂದ ಚರ್ಚೆ ನಡೆಯಿತು. ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಿ, ತಮ್ಮ ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡರು. ಮೋದಿ ಭಾಷಣದ ಮಧ್ಯೆ ವಿಪಕ್ಷಗಳ ಹತ್ತಾರು ಸಂಸದರು ಲೋಕಸಭೆಯಿಂದ ಹೊರನಡೆದರು. ಇದನ್ನೂ ಓದಿ: ವಿಪಕ್ಷಗಳ ನೋ ಬಾಲ್‌ಗೆ ನಮ್ಮವರಿಂದ ಸಿಕ್ಸರ್‌, ಬೌಂಡರಿ, ಕೊನೆಗೆ ಸೆಂಚುರಿ: ನರೇಂದ್ರ ಮೋದಿ

    ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ವಿಪಕ್ಷಗಳ ಒಕ್ಕೂಟ, ಕಾಂಗ್ರೆಸ್‌, ರಾಹುಲ್‌ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು. 2028 ರಲ್ಲಿ ಅವಿಶ್ವಾಸ ನಿರ್ಣಯ ಮಂಡಿಸುವಾಗ ಸ್ವಲ್ಪ ತಯಾರಾಗಿ ಬನ್ನಿ ಎಂದು ವಿಪಕ್ಷಗಳಿಗೆ ಮೋದಿ ವ್ಯಂಗ್ಯ ಮಾಡಿದರು. ಆ ಮೂಲಕ ಮುಂದಿನ ಬಾರಿಯೂ ಲೋಕಸಭೆ ಚುನಾವಣೆಯಲ್ಲಿ ಎನ್‌ಡಿಎ ಅಧಿಕಾರಕ್ಕೆ ಬರುತ್ತೆ ಆಶಯವನ್ನು ವ್ಯಕ್ತಪಡಿಸಿದರು.

    ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯ ಬಗ್ಗೆ ಬುಧವಾರ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮಾತನಾಡುವಾಗ, ಮೋದಿ ಸರ್ಕಾರವು ಇಡೀ ದೇಶವನ್ನು ಸುಡಲು ಸಜ್ಜಾಗಿದೆ ಎಂದು ವಾಗ್ದಾಳಿ ನಡೆಸಿದ್ದರು. ಇದನ್ನೂ ಓದಿ: ಪ್ರಧಾನಿ ಪರಮಾತ್ಮನಲ್ಲ, ಮೋದಿ ದೇವರಲ್ಲ, ಸದನಕ್ಕೆ ಬಂದು ಮಾತನಾಡಲಿ: ಖರ್ಗೆ ಕೆಂಡ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬಿಜೆಪಿಯೇತರ ಆಡಳಿತದ ರಾಜ್ಯಗಳಲ್ಲಿ ಜನರಿಗೆ ಕೇಂದ್ರದ ಯೋಜನೆ ತಲುಪಿಸಿ: ಎನ್‌ಡಿಎ ಸಂಸದರಿಗೆ ಮೋದಿ ಕರೆ

    ಬಿಜೆಪಿಯೇತರ ಆಡಳಿತದ ರಾಜ್ಯಗಳಲ್ಲಿ ಜನರಿಗೆ ಕೇಂದ್ರದ ಯೋಜನೆ ತಲುಪಿಸಿ: ಎನ್‌ಡಿಎ ಸಂಸದರಿಗೆ ಮೋದಿ ಕರೆ

    ನವದೆಹಲಿ: ಕೇಂದ್ರ ಸರ್ಕಾರವು ಜನಸಾಮಾನ್ಯರಿಗಾಗಿ ಅನೇಕ ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿದೆ. ಬಿಜೆಪಿಯೇತರ ಆಡಳಿತವಿರುವ ಜನತೆ ಹೆಚ್ಚಿನ ಪ್ರಮಾಣದಲ್ಲಿ ಈ ಯೋಜನೆ ಲಾಭ ಪಡೆದುಕೊಳ್ಳುವ ನಿಟ್ಟಿನಲ್ಲಿ ಸಂಸದರು ಕೆಲಸ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಸಲಹೆ ನೀಡಿದ್ದಾರೆ.

    ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಕರ್ನಾಟಕ, ಕೇರಳ, ಪುದುಚೇರಿ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಮತ್ತು ಲಕ್ಷದ್ವೀಪದ 48 ಸಂಸದರೊಂದಿಗೆ ಪ್ರಧಾನಿ ಮೋದಿ ಬುಧವಾರ ಕ್ಲಸ್ಟರ್-4 ಸಭೆ ನಡೆಸಿದರು. ಸಭೆ ಸುಮಾರು ಒಂದು ಗಂಟೆಗಳ ಕಾಲ ನಡೆಯಿತು. ಇದನ್ನೂ ಓದಿ: ಕರ್ನಾಟಕದಲ್ಲಿ 25 ಲೋಕಸಭೆ ಸ್ಥಾನ ಗೆಲ್ಲಬೇಕು- ಕೈ ನಾಯಕರಿಗೆ ಹೈಕಮಾಂಡ್ ಬಿಗ್ ಟಾಸ್ಕ್

    ಕೇರಳ, ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣದಂತಹ ಬಿಜೆಪಿಯೇತರ ರಾಜ್ಯಗಳ ಜನರೊಂದಿಗೆ ಸಂಪರ್ಕ ಸಾಧಿಸಲು ಹೆಚ್ಚು ಗಮನಹರಿಸಿ. ಎಲ್ಲಾ ಧಾರ್ಮಿಕ ಹಬ್ಬಗಳನ್ನು ಸಾರ್ವಜನಿಕರೊಂದಿಗೆ ಆಚರಿಸಿ ಮತ್ತು ಒಗ್ಗಟ್ಟಾಗಿರಿ. ಮುಂಬರುವ 2024 ರ ಲೋಕಸಭಾ ಚುನಾವಣೆಗೆ (Lok Sabha Election) ಎಲ್ಲರೂ ಸಿದ್ಧರಾಗಿ ಎಂದು ಸಂಸದರಿಗೆ ತಿಳಿಸಿದ್ದಾರೆ.

    ಸಭೆಯಲ್ಲಿ ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಆತಿಥೇಯ ಸಚಿವರಾದ ಪ್ರಹ್ಲಾದ್ ಜೋಶಿ ಮತ್ತು ವಿ. ಮುರಳೀಧರನ್, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಶೋಭಾ ಕರಂದ್ಲಾಜೆ, ಡಾ.ಕೆ.ಲಕ್ಷ್ಮಣ್, ಕೇಂದ್ರ ಸಚಿವ ಜಿ.ಕಿಶನ್ ರೆಡ್ಡಿ, ವನತಿ ಶ್ರೀನಿವಾಸನ್ ಮತ್ತು ಇತರ ಎನ್‌ಡಿಎ ಸಂಸದರು ಸಭೆಯಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಫಾಕ್ಸ್‌ಕಾನ್‌ನಿಂದ ರಾಜ್ಯದಲ್ಲಿ 5,000 ಕೋಟಿ ರೂ. ಹೂಡಿಕೆ- 13,000 ಉದ್ಯೋಗ ಸೃಷ್ಟಿ

    2024 ರ ಲೋಕಸಭೆ ಚುನಾವಣೆಗೆ ಬಿಜೆಪಿಯ ಸಿದ್ಧತೆಗಳ ಭಾಗವಾಗಿ ಸೋಮವಾರ ಪಿಎಂ ಮೋದಿ ಉತ್ತರ ಪ್ರದೇಶ, ಬುಂದೇಲ್‌ಖಂಡ್ ಮತ್ತು ಬ್ರಜ್ ಪ್ರದೇಶದ ಎನ್‌ಡಿಎ ಸಂಸದರೊಂದಿಗೆ ಸಭೆ ನಡೆಸಿದ್ದರು. ತಳಮಟ್ಟದಲ್ಲಿ ಪ್ರಭಾವ ಬೀರುವ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ ಎಂದು ಕಿವಿಮಾತು ಹೇಳಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ಮೌನ, ನಿರ್ಲಜ್ಜ ಉದಾಸೀನಕ್ಕೆ ಸಾಕ್ಷಿ: INDIA ಒಕ್ಕೂಟದ ಸಂಸದರ ಟೀಕೆ

    ಮಣಿಪುರ ಹಿಂಸಾಚಾರದ ಬಗ್ಗೆ ಪ್ರಧಾನಿ ಮೌನ, ನಿರ್ಲಜ್ಜ ಉದಾಸೀನಕ್ಕೆ ಸಾಕ್ಷಿ: INDIA ಒಕ್ಕೂಟದ ಸಂಸದರ ಟೀಕೆ

    – ಸಂಘರ್ಷ ಪೀಡಿತ ಮಣಿಪುರಕ್ಕೆ INDIA ಒಕ್ಕೂಟದ 21 ಸಂಸದರ ನಿಯೋಗ ಭೇಟಿ; ರಾಜ್ಯಪಾಲರಿಗೆ ಜ್ಞಾಪನಾ ಪತ್ರ ಸಲ್ಲಿಕೆ

    ಇಂಫಾಲ್: ಮಣಿಪುರ ಹಿಂಸಾಚಾರ (Manipur Violence) ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಿರುವ ವಿಪಕ್ಷಗಳ INDIA ಒಕ್ಕೂಟ ಈಗ ಮಣಿಪುರಕ್ಕೆ ಭೇಟಿ ನೀಡಿದೆ. INDIA ಒಕ್ಕೂಟದ 21 ಸಂಸದರ ನಿಯೋಗವು ಭಾನುವಾರ ಮಣಿಪುರದ ಪರಿಸ್ಥಿತಿಯನ್ನು ಅವಲೋಕಿಸಿತು.

    ಮಣಿಪುರ ರಾಜ್ಯಪಾಲರಾದ ಅನುಸೂಯಾ ಉಯ್ಕೆ (Anusuiya Uikey) ಅವರನ್ನು ಭೇಟಿಯಾಗಿ ಕಾನೂನು ಸುವ್ಯವಸ್ಥೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ಸಂಘರ್ಷದ ಕುರಿತು ತಮ್ಮ ಜ್ಞಾಪನಾ ಪತ್ರವನ್ನು ಸಹ ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಪರಿಹಾರ ಶಿಬಿರಗಳಿಗೆ ಭೇಟಿ ನೀಡಿ, ಮೇ ಆರಂಭದಿಂದ ರಾಜ್ಯವನ್ನು ಆವರಿಸಿರುವ ಜನಾಂಗೀಯ ಹಿಂಸಾಚಾರದಿಂದ ನೊಂದಿರುವ ಸಂತ್ರಸ್ತರೊಂದಿಗೆ ಸಂವಾದ ನಡೆಸಿದ್ದಾರೆ. ಇದನ್ನೂ ಓದಿ:

    ನಿಯೋಗವು ಚುರಾಚಂದ್‌ಪುರ, ಇಂಫಾಲ್ ಮತ್ತು ಮೊಯಿರಾಂಗ್‌ನಲ್ಲಿನ ಪರಿಹಾರ ಶಿಬಿರಗಳಿಗೆ ಭೇಟಿ ನೀಡಿದೆ. ‘ಸಂಘರ್ಷದ ಆರಂಭದಿಂದಲೂ ಎರಡೂ ಕಡೆಯವರು ಬಿಚ್ಚಿಟ್ಟ ಹಿಂಸಾಚಾರದ ಕರಾಳ ಸನ್ನಿವೇಶಗಳು, ಸಂತ್ರಸ್ತರ ಆತಂಕ, ಅನಿಶ್ಚಿತತೆ, ನೋವು ಮತ್ತು ದುಃಖದ ಕಥೆಗಳನ್ನು ಕೇಳಿ ನಾವು ನಿಜವಾಗಿಯೂ ಆಘಾತಕ್ಕೊಳಗಾಗಿದ್ದೇವೆ. ಎಲ್ಲಾ ಸಮುದಾಯಗಳಲ್ಲಿ ಕೋಪ ಮತ್ತು ಪರಕೀಯತೆಯ ಭಾವನೆ ಇದೆ. ಇದನ್ನು ತಡ ಮಾಡದೇ ಪರಿಹರಿಸಬೇಕು’ ಎಂದು ನಿಯೋಗವು ಜ್ಞಾಪನಾ ಪತ್ರದಲ್ಲಿ ಒತ್ತಾಯಿಸಿದೆ.

    ಮಣಿಪುರ ಸಂಘರ್ಷದಲ್ಲಿ ಇದುವರೆಗೂ 140 ಕ್ಕೂ ಹೆಚ್ಚು ಸಾವು, 500 ಕ್ಕೂ ಹೆಚ್ಚು ಮಂದಿಗೆ ಗಾಯ, 5,000 ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ಹಚ್ಚಿದ ಅಂಕಿಅಂಶಗಳಿವೆ. ಎರಡು ಸಮುದಾಯಗಳ ಜನರ ಜೀವ ಮತ್ತು ಆಸ್ತಿಯನ್ನು ರಕ್ಷಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವೈಫಲ್ಯವಾಗಿರುವುದು ಅಂಕಿಅಂಶಗಳಿಂದ ಸ್ಪಷ್ಟವಾಗಿದೆ. ಇದುವರೆಗೂ 60,000 ಕ್ಕಿಂತ ಹೆಚ್ಚು ಜನರ ತಮ್ಮ ನೆಲವನ್ನು ಬಿಟ್ಟು ಬೇರೆಡೆಗೆ ಸ್ಥಳಾಂತರ ಆಗಿದ್ದಾರೆ ಎಂದು ಪತ್ರದಲ್ಲಿ ಒಕ್ಕೂಟ ಹೇಳಿದೆ.

    ಆದ್ಯತೆಯ ಆಧಾರದ ಮೇಲೆ ಮಕ್ಕಳ ಬಗ್ಗೆ ವಿಶೇಷ ಕಾಳಜಿ ತೆಗೆದುಕೊಳ್ಳಬೇಕು. ವಿವಿಧ ಸ್ಟ್ರೀಮ್‌ಗಳ ವಿದ್ಯಾರ್ಥಿಗಳು ಅನಿಶ್ಚಿತ ಭವಿಷ್ಯವನ್ನು ಎದುರಿಸುತ್ತಿದ್ದಾರೆ. ಇದು ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಆದ್ಯತೆಯಾಗಿರಬೇಕು ಎಂದು ನಿಯೋಗವು ಪತ್ರದ ಮೂಲಕ ಸಲಹೆ ನೀಡಿದೆ.

    ಕಳೆದ ಮೂರು ತಿಂಗಳಿನಿಂದ ಮುಂದುವರಿದ ಇಂಟರ್ನೆಟ್ ನಿಷೇಧವು ಆಧಾರರಹಿತ ವದಂತಿಗಳನ್ನು ಹೆಚ್ಚಿಸುತ್ತಿದೆ. ಇದು ಅಸ್ತಿತ್ವದಲ್ಲಿರುವ ಅಪನಂಬಿಕೆಯನ್ನು ಹೆಚ್ಚಿಸುತ್ತದೆ. ಗೌರವಾನ್ವಿತ ಪ್ರಧಾನಿಯವರ ಮೌನವು ಮಣಿಪುರದ ಹಿಂಸಾಚಾರದ ಬಗ್ಗೆ ಅವರ ನಿರ್ಲಜ್ಜ ಉದಾಸೀನತೆಯನ್ನು ತೋರಿಸುತ್ತದೆ ಎಂದು ನಿಯೋಗ ತರಾಟೆಗೆ ತೆಗೆದುಕೊಂಡಿದೆ.

    ಸಂಘರ್ಷ ಪೀಡಿತ ಮಣಿಪುರಕ್ಕೆ INDIA ಒಕ್ಕೂಟದ 21 ಸಂಸದರ ನಿಯೋಗವು ಎರಡು ದಿನಗಳ ಭೇಟಿ ಕೈಗೊಂಡಿದೆ. ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಸಂಘರ್ಷ ಭಾರತದ ಪ್ರತಿಷ್ಠೆಗೆ ಧಕ್ಕೆ ತಂದಿರುವ ಹಿನ್ನೆಲೆಯಲ್ಲಿ ರಾಜಕೀಯ ಮಾಡಲು ನಾವು ರಾಜ್ಯದಲ್ಲಿಲ್ಲ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಸ್ಪಷ್ಟಪಡಿಸಿದ್ದಾರೆ. ‘ನಾವು ಜನಾಂಗೀಯ ಘರ್ಷಣೆಯ ಸಂತ್ರಸ್ತರನ್ನು ಭೇಟಿ ಮಾಡಲು ಮತ್ತು ಸಮಸ್ಯೆ ತಿಳಿಯಲು ಇಲ್ಲಿಗೆ ಬಂದಿದ್ದೇವೆ. ಹಿಂಸಾಚಾರದ ಅಂತ್ಯ ಮತ್ತು ಶಾಂತಿಯ ಮರುಸ್ಥಾಪನೆಯನ್ನು ನಾವು ಬಯಸುತ್ತೇವೆ. ಮಣಿಪುರದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಇಡೀ ಜಗತ್ತು ಗಮನಿಸುತ್ತಿದೆ’ ಎಂದು ಮಾತನಾಡಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಂಸದರಿಗೆ, ಸರಕಾರಿ ಅಧಿಕಾರಿಗಳಿಗಾಗಿ ‘ವಿಕ್ರಾಂತ್ ರೋಣ’ ಸ್ಪೆಷಲ್ ಶೋ

    ಸಂಸದರಿಗೆ, ಸರಕಾರಿ ಅಧಿಕಾರಿಗಳಿಗಾಗಿ ‘ವಿಕ್ರಾಂತ್ ರೋಣ’ ಸ್ಪೆಷಲ್ ಶೋ

    ಕಿಚ್ಚ ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾ ಇದೇ ಶುಕ್ರವಾರ ವಿಶ್ವದಾದ್ಯಂತ ರಿಲೀಸ್ ಆಗುತ್ತಿದೆ. ಅದಕ್ಕೂ ಮುನ್ನ ಕೆಲವು ಕಡೆ ಸ್ಪೆಷಲ್ ಶೋ ಅನ್ನು ಆಯೋಜನೆ ಮಾಡಿದೆ ಚಿತ್ರತಂಡ. ನವ ದೆಹಲಿಯಲ್ಲಿ ಸಂಸದರಿಗೆ ಮತ್ತು ಸರಕಾರಿ ಅಧಿಕಾರಿಗಳಿಗೆ ಸ್ಪೆಷಲ್ ಶೋ ಆಯೋಜನೆ ಮಾಡಿದ್ದು, ಈ ಕುರಿತು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಟ್ವಿಟ್ ಮಾಡಿದ್ದಾರೆ. ಸಿನಿಮಾ ನೋಡುವುದಕ್ಕಾಗಿ ಕುತೂಹಲದಿಂದ ಕಾಯುತ್ತಿರುವುದಾಗಿ ಬರೆದುಕೊಂಡಿದ್ದಾರೆ.

    ವಿಕ್ರಾಂತ್ ರೋಣ ಸಿನಿಮಾ ಪ್ರಪಂಚದ 27ದೇಶಗಳಲ್ಲಿ ಪ್ರಿವ್ಯೂ ಆಗುತ್ತಿದೆ. ಜೊತೆಗೆ ದುಬೈನಲ್ಲಿ 5 ಭಾಷೆಯಲ್ಲೂ ಪ್ರದರ್ಶನವಾಗಲಿದೆ. ನೇಪಾಳ, ಪಾಕಿಸ್ತಾನದಲ್ಲೂ ವಿಕ್ರಾಂತ್‌ ರೋಣ ರಿಲೀಸಾಗುವ ಸಾಧ್ಯತೆಯಿದೆ. ಪ್ರಪಂಚದಾದ್ಯಂತ 3200ರಿಂದ 3500 ಚಿತ್ರಮಂದಿಗಳಲ್ಲಿ ವಿಕ್ರಾಂತ್ ರೋಣ ರಿಲೀಸಾಗುತ್ತಿದ್ದು, ಕರ್ನಾಟಕದಲ್ಲೇ 400ರಿಂದ 420 ಥೇಟರ್‌ಗಳಲ್ಲಿ ಬಿಡುಗಡೆಯಾಗುತ್ತಿರುವುದು ವಿಶೇಷ. ಇದನ್ನೂ ಓದಿ:`ವಿಕ್ರಾಂತ್ ರೋಣ’ ಚಿತ್ರದ ನಂತರ ಹೊಸ ಸಿನಿಮಾಗೆ ಕಿಚ್ಚ ಸುದೀಪ್ ಗ್ರೀನ್ ಸಿಗ್ನಲ್

    ಕರ್ನಾಟಕಕ್ಕಿಂತ ತೆಲುಗು ರಾಜ್ಯಗಳಲ್ಲಿ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ನಿರ್ಮಾಪಕ ಜಾಕ್ ಮಂಜು ಹೇಳಿದ್ದು, ಈಗಾಗಲೇ ಬಹುತೇಕ ಕಡೆಗಳಲ್ಲಿ ಅಡ್ವಾನ್ಸ್ ಬುಕ್ಕಿಂಗ್ ಶುರುವಾಗಿದ್ದು, ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ. ಬಾಲಿವುಡ್‌ನಲ್ಲಿ 900 ಚಿತ್ರಮಂದಿರ, ಟಾಲಿವುಡ್‌ನಲ್ಲಿ 350ಕ್ಕೂ ಹೆಚ್ಚು ಥಿಯೇಟರ್ ಅಲ್ಲದೆ ವಿದೇಶಗಳಲ್ಲಿ 800ಕ್ಕೂ ಅಧಿಕ ಸ್ಕ್ರೀನ್‌ಗಳಲ್ಲಿ ವಿಕ್ರಾಂತ್‌ರೋಣ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಮತ್ತೆ 19 ರಾಜ್ಯಸಭಾ ಸಂಸದರು ಅಮಾನತು

    ಮತ್ತೆ 19 ರಾಜ್ಯಸಭಾ ಸಂಸದರು ಅಮಾನತು

    ನವದೆಹಲಿ: ಮಂಗಳವಾರದ ರಾಜ್ಯಸಭಾ ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆ 19 ವಿರೋಧಪಕ್ಷದ ಸಂಸದರನ್ನು ರಾಜ್ಯಸಭೆಯಿಂದ 1 ವಾರದವರೆಗೆ ಅಮಾನತುಗೊಳಿಸಲಾಗಿದೆ.

    ಸೋಮವಾರವಷ್ಟೇ 4 ಕಾಂಗ್ರೆಸ್ ಸಂಸದರು ಸದನದೊಳಗೆ ಭಿತ್ತಿಪತ್ರಗಳನ್ನು ಹಿಡಿದಕ್ಕಾಗಿ ಆಗಸ್ಟ್ 12ರ ವರೆಗೆ ಅಮಾನತುಗೊಂಡಿದ್ದರು. ಇದರ ಬೆನ್ನಲ್ಲೇ ಇಂದು 19 ಸಂಸದರನ್ನು ಅಮಾನತುಗೊಳಿಸಲಾಗಿದೆ.

    ಇಂದು ಅಮಾನತುಗೊಂಡ ಸಂಸದರು ಸದನವನ್ನು ಬಿಡದೇ ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆಯಲ್ಲಿ 1 ಗಂಟೆಯ ಕಾಲ ಸದನವನ್ನು ಮುಂದೂಡಲಾಗಿತ್ತು. ತೃಣಮೂಲ ಕಾಂಗ್ರೆಸ್‌ನ ಸುಶ್ಮಿತಾ ದೇವ್, ಮೌಸಮ್ ನೂರ್, ಶಾಂತಾ ಛೆಟ್ರಿ, ದೋಲಾ ಸೇನ್, ಸಂತಾನು ಸೇನ್, ಅಭಿ ರಂಜನ್ ಬಿಸ್ವರ್, ಎಂ.ಡಿ ನಾದಿಮುಲ್ ಹಕ್ ಅಮಾನತುಗೊಂಡಿದ್ದಾರೆ. ಇದನ್ನೂ ಓದಿ: ನನ್ನ ಫೋನ್ ಟ್ಯಾಪ್ ಮಾಡುತ್ತಿದ್ದಾನೆ ದೊಡ್ಡಣ್ಣ – ಮಾರ್ಗರೇಟ್ ಆಳ್ವ ಟ್ಟೀಟ್ ಮಾಡಿ ಆರೋಪ

    ಟಿಆರ್‌ಎಸ್‌ನ ಎಂ ಹಮಮದ್ ಅಬ್ದುಲ್ಲಾ, ಡಿಎಂಕೆಯ ಎಸ್ ಕಲ್ಯಾಣಸುಂದರಂ, ಆರ್ ಗಿರಂಜನ್, ಎನ್.ಆರ್ ಇಲಾಂಗೋ, ಎಂ ಷಣ್ಮುಗಂ, ಕನಿಮೊಳಿ ಎನ್.ವಿ.ಎನ್ ಸೋಮು, ಸಿಪಿಐ ಪಕ್ಷ ಬಿ ಲಿಂಗಯ್ಯ ಯಾದವ್, ರವಿಹಂದ್ರ ವಡ್ಡಿರಾಜು, ದಾಮೋದರ ರಾವ್ ದಿವಕೊಂಡ – ಎ.ಎ ರಹೀಮ್, ವಿ ಶಿವದಾಸನ್, ಸಂತೋಷ್ ಕುಮಾರ್ ಪಿ ಅಮಾನತುಗೊಂಡಿದ್ದಾರೆ.

    rajya sabha

    ರಾಜ್ಯಸಭೆಯಲ್ಲಿ ಪ್ರತಿಪಕ್ಷದ ಸಂಸದರು ಕಳೆದ ಹಲವು ದಿನಗಳಿಂದ ಬೆಲೆ ಏರಿಕೆ ಹಾಗೂ ಜಿಎಸ್‌ಟಿ ಹೆಚ್ಚಳದಂತಹ ವಿಷಯಗಳ ಕುರಿತು ತುರ್ತು ಚರ್ಚೆಗೆ ಒತ್ತಾಯಿಸುತ್ತಿದ್ದಾರೆ. ಇದನ್ನೂ ಓದಿ: ಏಷ್ಯಾದಲ್ಲಿ ಭಾರತ ಹೊರತುಪಡಿಸಿ 13 ದೇಶಗಳಲ್ಲಿ ಆರ್ಥಿಕ ಹಿಂಜರಿತ ಸಾಧ್ಯತೆ

    Live Tv
    [brid partner=56869869 player=32851 video=960834 autoplay=true]

  • ಯುಪಿ ಸಂಸದರು, ಐಎಎಸ್ ಅಧಿಕಾರಿಗಳಿಗೆ ಆಸ್ತಿ ವಿವರ ಬಹಿರಂಗಪಡಿಸುವಂತೆ ಯೋಗಿ ಆದೇಶ

    ಯುಪಿ ಸಂಸದರು, ಐಎಎಸ್ ಅಧಿಕಾರಿಗಳಿಗೆ ಆಸ್ತಿ ವಿವರ ಬಹಿರಂಗಪಡಿಸುವಂತೆ ಯೋಗಿ ಆದೇಶ

    ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ಸಂಪುಟದ ಸಚಿವರು ಹಾಗೂ ಅವರ ಕುಟುಂಬದವರ ಎಲ್ಲಾ ಆಸ್ತಿಯ ವಿವರಗಳನ್ನು 3 ತಿಂಗಳುಗಳ ಒಳಗಾಗಿ ಬಹಿರಂಗ ಪಡಿಸುವಂತೆ ಆದೇಶ ನೀಡಿದ್ದಾರೆ.

    ಯುಪಿ ಸಿಎಂ ತಮ್ಮ ಸಂಪುಟದ ಸದಸ್ಯರೊಂದಿಗೆ, ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳಿಗೂ ತಮ್ಮ ಆಸ್ತಿಯ ವಿವರಗಳನ್ನು ಆನ್‌ಲೈನ್‌ನಲ್ಲಿ ಬಹಿರಂಗ ಪಡಿಸುವಂತೆ ತಿಳಿಸಿದ್ದಾರೆ. ಇದರೊಂದಿಗೆ ಸರ್ಕಾರಿ ಕೆಲಸಗಳಲ್ಲಿ ಸಂಸದರ ಸಂಬಧಿಕರು ಮಧ್ಯ ಪ್ರವೇಶಿಸಬಾರದು ಎಂದು ಆದಿತ್ಯನಾಥ್ ಸೂಚಿಸಿದ್ದಾರೆ. ಇದನ್ನೂ ಓದಿ: ಓಮಿಕ್ರಾನ್ ಉಪ-ತಳಿಗಳು ಅಪಾಯವನ್ನುಂಟು ಮಾಡುತ್ತವೆ: ಮೋದಿ ಎಚ್ಚರಿಕೆ

    yogi adithyanath

    ಸಂಪುಟ ಸಭೆಯ ಬಳಿಕ ವಿಶೇಷ ಸಭೆಯನ್ನುದ್ದೇಶಿಸಿ ಮಾತನಾಡಿದ ಯೋಗಿ, ಐಎಎಸ್, ಐಪಿಎಸ್ ಹಾಗೂ ಪ್ರಾಂತೀಯ ನಾಗರಿಕ ಸೇವಾ ಅಧಿಕಾರಿಗಳು ತಮ್ಮ ಹಾಗೂ ಕುಟುಂಬ ಸದಸ್ಯರ ಆಸ್ತಿಯನ್ನು ಘೋಷಿಸಬೇಕು. ಅದನ್ನು ಜನರು ನೋಡುವಂತೆ, ಆನ್‌ಲೈನ್ ಪೋರ್ಟಲ್‌ನಲ್ಲಿ ಲಭ್ಯವಾಗುವಂತೆ ಮಾಡಬೇಕು ಎಂದು ಹೇಳಿದರು. ಇದನ್ನೂ ಓದಿ: YSRP ಪೋಸ್ಟರ್‌ಗಳಿಗೆ ಹಾನಿ – 3, 4ನೇ ತರಗತಿಯ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದ ಪೊಲೀಸ್ರು

    ಪ್ರಜಾಪ್ರಭುತ್ವದ ಒಳಿತಿಗಾಗಿ, ಸಾರ್ವಜನಿಕ ಪ್ರತಿನಿಧಿಗಳ ನಡವಳಿಕೆ ಬಹಳ ಮುಖ್ಯವಾದುದು. ಹೀಗಾಗಿ ಎಲ್ಲಾ ಮಂತ್ರಿಗಳು ತಮ್ಮ ಹಾಗೂ ಕುಟುಂಬದ ಸದಸ್ಯರ ಎಲ್ಲಾ ಚರ ಮತ್ತು ಸ್ಥಿರ ಆಸ್ತಿಯನ್ನು ಮುಂದಿನ 3 ತಿಂಗಳ ಒಳಗಾಗಿ ಸಾರ್ವಜನಿಕವಾಗಿ ಘೋಷಣೆ ಮಾಡಬೇಕು ಎಂದರು.

  • MES ಪುಂಡರ ವಿರುದ್ಧ ಕನ್ನಡಿಗರ ಸಮರ- ಕರ್ನಾಟಕದ ಪರ ಧ್ವನಿ ಎತ್ತದೆ ಸಂಸದರು ಸೈಲೆಂಟ್!

    MES ಪುಂಡರ ವಿರುದ್ಧ ಕನ್ನಡಿಗರ ಸಮರ- ಕರ್ನಾಟಕದ ಪರ ಧ್ವನಿ ಎತ್ತದೆ ಸಂಸದರು ಸೈಲೆಂಟ್!

    ನವದೆಹಲಿ: ಬೆಳಗಾವಿಯಲ್ಲಿ ಗಡಿ ವಿವಾದ ಭುಗಿಲೆದ್ದಿದ್ದು, ಮರಾಠಿ ಪುಂಡರು ಕನ್ನಡದ ಅಸ್ಮಿತೆಗೆ ಸವಾಲೊಡ್ಡಲು ಯತ್ನಿಸಿದ್ದಾರೆ. ಈ ಸಂಕಷ್ಟದಲ್ಲೂ ಸಂಸದರು ಕರ್ನಾಟಕದ ಪರ ನಿಲ್ಲಲಿಲ್ಲ. ಈವರೆಗೂ ಸಂಸತ್‍ನಲ್ಲಿ ಯಾವೊಬ್ಬ ಸಂಸದ ಕೂಡ ತುಟಿ ಬಿಚ್ಚಿಲ್ಲ.

    28 ಮಂದಿ ಎಂಪಿಗಳು, 11 ಮಂದಿ ರಾಜ್ಯಸಭೆ ಸದಸ್ಯರು, ಮೂವರು ಕೇಂದ್ರ ಸಚಿವರು ಹಾಗೂ ಓರ್ವ ವಿಪಕ್ಷ ನಾಯಕರಿದ್ರೂ ವ್ಯರ್ಥವಾದಂತಿದೆ. ಪ್ರಭಾವಿ ಹುದ್ದೆಯಲ್ಲಿದ್ದರೂ ನಾಯಕರು ಮಾತ್ರ ಈ ಬಗ್ಗೆ ಧ್ವನಿ ಎತ್ತುತ್ತಿಲ್ಲ. ಕನ್ನಡ ಧ್ವಜ ಸುಟ್ಟರೂ, ರಾಯಣ್ಣ ಪ್ರತಿಮೆ ಒಡೆದರೂ ಮೌನಕ್ಕೆ ಶರಣಾಗಿದ್ದಾರೆ. ಈ ಮೂಲಕ ನಮಗೆ ಸಂಬಂಧವೇ ಇಲ್ಲ ಅನ್ನೋವಂತೆ ಸಂಸದರು ವರ್ತಿಸುತ್ತಿದ್ದಾರೆ. ಇದನ್ನೂ ಓದಿ: ಹಿಂದಿಯನ್ನು ವಿರೋಧಿಸುವವರು, ಉರ್ದುವನ್ನು ವಿರೋಧಿಸಲ್ಲ ಯಾಕೆ: ಯತ್ನಾಳ್

    ಸಂಸದರು ಸೈಲೆಂಟ್ ಇರಲು ಕಾರಣವೇನು..?
    ಕನ್ನಡದ ಅಸ್ಮಿತೆಗಿಂತ ಸಂಸದರಿಗೆ ರಾಜಕಾರಣವೇ ಹೆಚ್ಚಾಯ್ತಾ ಎಂಬ ಪ್ರಶ್ನೆ ಎದ್ದಿದೆ. ಬೆಳಗಾವಿಯಲ್ಲಿರೋ ಮರಾಠಿ ವೋಟ್‍ಗಳ ಮೇಲೆ ಬಿಜೆಪಿಗೆ ಪ್ರೀತಿ ಇದ್ದಂತಿದೆ. ಹೀಗಾಗಿ ಮರಾಠಿಗರನ್ನು ಎದುರು ಹಾಕಿಕೊಂಡರೆ ಬಿಜೆಪಿಗೆ ಸೋಲುವ ಆತಂಕ ಎದುರಾಗಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆ ಜೊತೆಗೆ ಕಾಂಗ್ರೆಸ್ ಮೈತ್ರಿ ಹಿನ್ನೆಲೆಯಲ್ಲಿ ಎಂಇಎಸ್ ವಿರುದ್ಧ ರಾಷ್ಟ್ರೀಯ ಪಕ್ಷಗಳು ಸಾಫ್ಟ್ ಕಾರ್ನರ್ ಆಗಿವೆ ಎಂಬ ಮಾಹಿತಿ ಲಭ್ಯವಾಗಿದೆ.

    ಶಿವಾಜಿ ಪ್ರತಿಮೆಗೆ ಮಸಿ ಬಳಿದವರ ವಿರುದ್ಧ ಕ್ರಮಕ್ಕೆ ಶಿವಸೇನೆ ಪಟ್ಟು ಹಿಡಿದಿದೆ. ದೇಶದ್ರೋಹ ಕಾನೂನಿನ ಅಡಿ ಶಿಕ್ಷಿಸಲು ಅಮಿತ್ ಶಾಗೆ ಮನವಿ ಮಾಡಿದ್ದಾರೆ. ಆದರೆ ರಾಜ್ಯದ ಸಂಸದರು ಇದುವರೆಗೂ ಏನೂ ಮಾತಾಡದೆ ಮೌನವಹಿಸಿದ್ದಾರೆ. ಗೃಹ ಇಲಾಖೆಯ ಗಮನ ಸೆಳೆಯದೆ ರಾಜ್ಯದ ಸಂಸದರು ಸೈಲೆಂಟ್ ಆಗಿರುವುದು ತೀವವ್ರ ಕುತೂಹಲಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಮತಾಂತರ ತಡೆ ಮಸೂದೆಗೆ ವಿರೋಧ ಇದೆ: ಸಿದ್ದರಾಮಯ್ಯ

  • ಕರಾವಳಿ ಸಂಪೂರ್ಣ ದೇಶದ್ರೋಹಿಗಳ ಆಡಂಬರವಾಗುತ್ತಿದೆ: ಅನಂತಕುಮಾರ್ ಹೆಗಡೆ

    ಕರಾವಳಿ ಸಂಪೂರ್ಣ ದೇಶದ್ರೋಹಿಗಳ ಆಡಂಬರವಾಗುತ್ತಿದೆ: ಅನಂತಕುಮಾರ್ ಹೆಗಡೆ

    ಕಾರವಾರ: ಕರಾವಳಿ ಸಂಪೂರ್ಣ ದೇಶದ್ರೋಹಿಗಳ ಆಡಂಬರವಾಗುತ್ತಿದೆ ಎಂದು ಸಂಸದ ಅನಂತಕುಮಾರ್‌ ಹೆಗಡೆ ಅಭಿಪ್ರಾಯಪಟ್ಟಿದ್ದಾರೆ.

    ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಮಂಗಳವಾರ ನಡೆದ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಮಾತನಾಡಿದ ಅವರು, ಇಲ್ಲಿನ ಅಭಿವೃದ್ಧಿಯ ಲಾಭವನ್ನು ದೇಶದ್ರೋಹಿಗಳು ಪಡೆದುಕೊಳ್ಳುತ್ತಾರೆ. ಮಂಗಳೂರು ಸಂಪೂರ್ಣ ನಮ್ಮ ಕೈ ತಪ್ಪಿ ಹೋಗುತ್ತಿದೆ. ಕರಾವಳಿ ಸಂಪೂರ್ಣ ದೇಶದ್ರೋಹಿಗಳ ಆಡಂಬರವಾಗುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 46 ವರ್ಷಕ್ಕೆ ನನ್ನ ತಮ್ಮ ದೇವರಿಗೆ ತುಂಬಾ ಇಷ್ಟ ಆಗ್ಬಿಟ್ಟ: ಶಿವಣ್ಣ

    ಅಭಿವೃದ್ಧಿಯ ಹೆಸರಿನಲ್ಲಿ ಮಂಗಳೂರಿಗೆ ತಲೆನೋವಾಗಿರುವುದು ಮಂಗಳೂರಿನ ಮೂಲ ನಿವಾಸಿಗಳಲ್ಲ, ಕೇರಳದವರು. ನಮ್ಮ ಊರಿನ ಅಭಿವೃದ್ಧಿ ಲಾಭವನ್ನು ನಾವೇ ಪಡೆದುಕೊಳ್ಳಬೇಕು. ಮಂಗಳೂರಿನ ಅಭಿವೃದ್ಧಿ ಲಾಭವನ್ನು ಕೇರಳದವರು ಪಡೆದುಕೊಳ್ಳುತಿದ್ದಾರೆ. ನಾವು ಬೇರೆಡೆ ಹೋಗಿ ಅಲ್ಪ ಸಂಬಳಕ್ಕೆ ಚಾಕರಿ ಮಾಡುತ್ತಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಹಿಂದುಸ್ತಾನ್ ಆರ್ಟ್ ಅಂಡ್ ಕ್ರಾಫ್ಟ್ ಮೇಳಕ್ಕೆ ನ.12 ರಂದು ಚಾಲನೆ

    ಇಷ್ಟು ದಿನ ಅಭಿವೃದ್ಧಿ ಬಗ್ಗೆ ಹೇಳುತ್ತಿದ್ದೆವು. ಆದರೇ ಆ ದಿಕ್ಕಿನೆಡೆಗೆ ದಾಪುಗಾಲು ಹಾಕಿರಲಿಲ್ಲ. ಉತ್ತರ ಕನ್ನಡ ಜಿಲ್ಲೆ ಅಭಿವೃದ್ಧಿಯೆಡೆಗೆ ದಾಪುಗಾಲು ಹಾಕುತ್ತಿದೆ. ಜಿಲ್ಲೆಯಲ್ಲಿ ಮಂಗಳೂರಿಗಿಂತ ಅತೀ ದೊಡ್ಡ ಬಂದರನ್ನು ನಿರ್ಮಿಸುತ್ತಿದ್ದೇವೆ. ಏರ್‌ಪೋರ್ಟ ಕೂಡ ಬರಲಿದೆ. ಇಲ್ಲಿ ಅಭಿವೃದ್ಧಿ ಮಾಡಿಯೇ ನಾನು ವಿಶ್ರಮಿಸುತ್ತೇನೆ ಎಂದರು.