Tag: ಸಂಸದ ತೇಜಸ್ವಿ ಸೂರ್ಯ

  • ಉಡುಪಿ ಭಾಷಣ ವಿವಾದ – ಹೇಳಿಕೆಯನ್ನು ಹಿಂಪಡೆದ ತೇಜಸ್ವಿ ಸೂರ್ಯ

    ಉಡುಪಿ ಭಾಷಣ ವಿವಾದ – ಹೇಳಿಕೆಯನ್ನು ಹಿಂಪಡೆದ ತೇಜಸ್ವಿ ಸೂರ್ಯ

    ಬೆಂಗಳೂರು: ಉಡುಪಿ ಮಾಡಿದ ಭಾಷಣ ವಿವಾದವಾಗುತ್ತಿದ್ದಂತೆ ಸಂಸದ ತೇಜಸ್ವಿ ಸೂರ್ಯ ತನ್ನ ಹೇಳಿಕೆಯನ್ನು ಹಿಂದಕ್ಕೆ ಪಡೆದಿದ್ದಾರೆ.

    ಈ ಬಗ್ಗೆ ತಮ್ಮ ಟ್ವೀಟ್ ಮಾಡಿದ ಅವರು, ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತದಲ್ಲಿ ಹಿಂದೂ ಪುನರುತ್ಥಾನ ಆಗಬೇಕು ಎನ್ನುವ ವಿಷಯದ ಕುರಿತು ಮಾತನಾಡಿದ್ದೆ. ಆದರೆ ನನ್ನ ಭಾಷಣದ ಕೆಲವು ಹೇಳಿಕೆಗಳು ವಿವಾದವನ್ನು ಸೃಷ್ಟಿಸಿವೆ. ಹಾಗಾಗಿ ಹೇಳಿಕೆಗಳನ್ನು ಹಿಂಪಡೆಯುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ಮುಸಲ್ಮಾನರೂ ಘರ್ ವಾಪಸಿ ಆಗಬೇಕು: ತೇಜಸ್ವಿ ಸೂರ್ಯ

    ಉಡುಪಿ ಕೃಷ್ಣ ಮಠದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ್ದ ಅವರು, ಹಿಂದೂ ಸಂಸ್ಕೃತಿ, ಸಮಾಜ, ಪರಂಪರೆ ಉಳಿಬೇಕಾದರೆ ಹಿಂದೂ ಧರ್ಮ ಉಳಿಯಬೇಕು. ಇದಕ್ಕಾಗಿ ಮತಾಂತರವಾಗಿ ಪಾಕಿಸ್ತಾನಕ್ಕೆ ಹೋದವರನ್ನು ಹಿಂದೂ ಧರ್ಮಕ್ಕೆ ಕರೆತರಬೇಕು. ಜೊತೆಗೆ ಚೀನಾ, ಜಪಾನಿಗೆ ಹೋಗಿ ಮತಾಂತರಗೊಂಡವರನ್ನು ಭಾರತಕ್ಕೆ ವಾಪಸ್ ಕರೆಸಿಕೊಳ್ಳಬೇಕು. ಮುಸ್ಲಿಮರು, ಕ್ರೈಸ್ತರನ್ನು ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ ಎಂದು ಹೇಳಿದ್ದರು. ಸಂಸದರ ಈ ಹೇಳಿಕೆಗಳು ವಿವಾದವನ್ನು ಸೃಷ್ಟಿಸಿತ್ತು. ಪ್ರತಿ ಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗಿತ್ತು. ಇದನ್ನೂ ಓದಿ:  ನ್ಯೂ ಇಯರ್ ಎಲ್ಲಾದ್ರೂ ಮಾಡ್ಲಿ, ಕೊರೊನಾ ನಿಯಮ ಪಾಲಿಸಲಿ: ಬೊಮ್ಮಾಯಿ

  • 3 ಲಕ್ಷ ಮಾತ್ರೆ, 10 ಸಾವಿರ ಮಾಸ್ಕ್, 2 ಸಾವಿರ ಸ್ಯಾನಿಟೈಸರ್ ಬಳಸಿ ಸಾಯಿಬಾಬಾ ದೇವಸ್ಥಾನಕ್ಕೆ ವಿಶೇಷ ಅಲಂಕಾರ

    3 ಲಕ್ಷ ಮಾತ್ರೆ, 10 ಸಾವಿರ ಮಾಸ್ಕ್, 2 ಸಾವಿರ ಸ್ಯಾನಿಟೈಸರ್ ಬಳಸಿ ಸಾಯಿಬಾಬಾ ದೇವಸ್ಥಾನಕ್ಕೆ ವಿಶೇಷ ಅಲಂಕಾರ

    – ಗುರುಪೂರ್ಣಿಮೆ ಅಂಗವಾಗಿ ಜೆಪಿನಗರದ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದಲ್ಲಿ ವಿಶೇಷ ಅಲಂಕಾರ
    – ಭಕ್ತಾದಿಗಳಿಗೆ ವಿಶೇಷ ಸುರಕ್ಷೆ ನೀಡಲು ಕರೋನಾ ಕಿಲ್ಲರ್ ಯಂತ್ರ ಅಳವಡಿಕೆ
    – ಒಂದು ವಾರದ ಬಳಿಕ ಒಂದು ಲಕ್ಷ ಕುಟುಂಬಕ್ಕೆ ಹಂಚುವ ನಿರ್ಧಾರ
    – ಸಂಸದ ತೇಜಸ್ವೀ ಸೂರ್ಯ ಅವರಿಂದ ಶ್ಲಾಘನೆ

    ಬೆಂಗಳೂರು: ಗುರುಪೂರ್ಣಿಮೆ ಅಂಗವಾಗಿ ಇಂದು ಜೆಪಿ ನಗರದ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದಲ್ಲಿ 3 ಲಕ್ಷ ಮಾತ್ರೆ, 10 ಸಾವಿರ ಮಾಸ್ಕ್, 2 ಸಾವಿರ ಸ್ಯಾನಿಟೈಸರ್ ಬಳಸಿ ವಿಶೇಷ ಅಲಂಕಾರ ಮಾಡಿರುವುದನ್ನ ಕಂಡು ಭಕ್ತಾದಿಗಳು ಪುಳಕಿತರಾದರು.

    ಕೊರೊನಾ ಮೂರನೇ ಅಲೆಯ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸುವುದು ಹಾಗೂ ವಿಶೇಷ ವಾದ ಆಲಂಕಾರದಿಂದ ಜನರಿಗೆ ಉಪಯೋಗವಾಗಬೇಕು ಎನ್ನುವ ಉದ್ದೇಶದಿಂದ ಮಾತ್ರೆಗಳನ್ನು ಬಳಸಿಕ ಆಲಂಕಾರ ಮಾಡುವ ಯೋಜನೆಯನ್ನು ಕೈಗೆತ್ತುಕೊಳ್ಳಲಾಯಿತು. 3 ಲಕ್ಷ ಮಾತ್ರೆ, 10 ಸಾವಿರ ಮಾಸ್ಕ್, 2 ಸಾವಿರ ಸ್ಯಾನಿಟೈಸರ್ ಹಾಗೂ ರೇಷನ್ ಕಿಟ್ ನಲ್ಲಿ ಇರುವಂತಹ ಪದಾರ್ಥಗಳಿಂದ ಆಲಂಕಾರ ಮಾಡಿದ್ದೇವೆ. ಸುಮಾರು 4 ದಿನಗಳ ಕಾಲ ತಯಾರಿ ನಡೆಸಿದ್ದು, ಒಂದು ವಾರಗಳ ನಂತರ ಇಲ್ಲಿ ಬಳಸಲಾಗಿರುವ ಎಲ್ಲಾ ರೀತಿಯ ವಸ್ತುಗಳನ್ನು ಅಗತ್ಯವಿರುವ ಜನರಿಗೆ ನೀಡಲಿದ್ದೇವೆ ಎಂದು ಕಾರ್ಯಕ್ರಮದ ವ್ಯವಸ್ಥಾಪಕರು ಹಾಗೂ ಶ್ರೀ ಸತ್ಯ ಸಾಯಿ ಗಣಪತಿ ದೇವಸ್ಥಾನದ ಟ್ರಸ್ಟಿ ರಾಮ ಮೋಹನ ರಾಜ್ ತಿಳಿಸಿದರು.

    ಈ ವಿಶೇಷ ಅಲಂಕಾರವನ್ನು ಕಂಡು ಸಂಸದ ತೇಜಸ್ವೀ ಸೂರ್ಯ ಶ್ಲಾಘಿಸಿದರು. ಲಕ್ಷಾಂತರ ರೂಪಾಯಿಗಳನ್ನು ಖರ್ಚುಗೊಳಿಸಿ ಹಾಳಾಗುವಂತಹ ವಸ್ತುಗಳನ್ನು ಬಳಸಿ ಆಲಂಕಾರ ಮಾಡಿದರೆ ಅದರಿಂದ ಉಪಯೋಗವಾಗುವುದಿಲ್ಲ. ಇಂತಹ ವಿಭಿನ್ನ ಆಲೋಚನೆಯಿಂದಾಗಿ ಆಲಂಕಾರವೂ ಆಗುತ್ತದೆ ಹಾಗೆಯೇ ನಂತರ ಅದರ ಸದುಯೋಗವೂ ಆಗುತ್ತದೆ. ಈ ನಿಟ್ಟಿನಲ್ಲಿ ವಿಭಿನ್ನ ಆಲೋಚನೆ ಮಾಡಿರುವ ಮಾಜಿ ಉಪಮಹಾಪೌರರಾದ ರಾಮ ಮೋಹನ ರಾಜ್ ಅವರ ಕಾರ್ಯ ಶ್ಲಾಘನೀಯ ಎಂದರು. ಇದನ್ನೂ ಓದಿ: ದೊಡ್ಮನೆಯಲ್ಲಿ ಮತ್ತೊಮ್ಮೆ ಅರವಿಂದ್‍ಗೆ ಸಿಕ್ತು ಬಿಗ್‍ಬಾಸ್ ಪಟ್ಟ

    ದೇವಸ್ಥಾನಕ್ಕೆ ಆಗಮಿಸಿದ್ದ ಭಕ್ತೆ ಕವಿತಾ ಮಾತನಾಡಿ, ಲಾಕ್‍ಡೌನ್ ನಲ್ಲಿ ಮನೆಯಿಂದ ಹೊರಗೆ ಹೋಗದೆ ಬಹಳಷ್ಟು ಬೇಸರಕ್ಕೀಡಾಗಿದ್ದೇವು. ಲಾಕ್‍ಡೌನ್ ಸಡಲಿಕೆಗೊಂಡ ನಂತರ ಇಂತಹ ವಿಭಿನ್ನ ಆಲೋಚನೆಯ ಆಲಂಕಾರ ಮಾಡಿರುವ ದೇವಸ್ಥಾನಕ್ಕೆ ಭೇಟಿ ನೀಡದ್ದು ಸಂತಸವಾಯಿತು ಎಂದು ಹೇಳಿದರು. ಇದನ್ನೂ ಓದಿ: RRR ಆಡಿಯೋ ರೈಟ್ಸ್ ಲಹರಿ ಪಾಲು

  • ಎಲ್ಲೇ ಸಿಎಎ ವಿರುದ್ಧ ಗಲಾಟೆಯಾದ್ರೂ ಎಸ್‍ಡಿಪಿಐ ಹೆಸರು ಹೇಳ್ತಾರೆ: ಮುಜಾಹೀದ್ದಿನ್ ಪಾಷ

    ಎಲ್ಲೇ ಸಿಎಎ ವಿರುದ್ಧ ಗಲಾಟೆಯಾದ್ರೂ ಎಸ್‍ಡಿಪಿಐ ಹೆಸರು ಹೇಳ್ತಾರೆ: ಮುಜಾಹೀದ್ದಿನ್ ಪಾಷ

    ಬೆಂಗಳೂರು: ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿ ಸೂರ್ಯ ಕೊಲೆಗೆ ಸ್ಕೆಚ್ ಹಾಕಿದ್ದ ಆರೋಪಿಗಳು ಎಸ್‍ಡಿಪಿಐ ಕಾರ್ಯಕರ್ತರು ಎಂಬ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಅವರು ಯಾರಾದರೂ ಕಾನೂನಿನ ರೀತಿಯ ಕ್ರಮ ಕೈಗೊಳ್ಳಬೇಕು. ಆದರೆ ಸಿಎಎ ಹಾಗೂ ಎನ್.ಸಿ.ಆರ್ ವಿಚಾರವಾಗಿ ಎಲ್ಲೇ ಗಲಾಟೆ ನಡೆದರೂ ಅದು ಎಸ್‍ಡಿಪಿಐ ಅವರು ಮಾಡಿದ್ದು ಎಂದು ಹೇಳುತ್ತಾರೆ ಎಂದು ಎಸ್‍ಡಿಪಿಐ ಪಕ್ಷದ ಬಿಬಿಎಂಪಿ ಸದಸ್ಯ ಮುಜಾಹೀದ್ದಿನ್ ಪಾಷ ಬೇಸರ ವ್ಯಕ್ತಪಡಿಸಿದ್ದಾರೆ.

    ಇದು ರಾಜಕೀಯ, ನಮ್ಮ ಪಕ್ಷದವರು, ಸಂಘಟನೆಯವರು ಈ ರೀತಿ ಯಾವುದೇ ಕೆಲಸದಲ್ಲಿ ಭಾಗಿಯಾಗಿಲ್ಲ. ವರುಣ್ ಎಂಬ ಯುವಕನ ಮೇಲೆ ಹಲ್ಲೆ ಮಾಡಿರುವುದು ಯಾರು ಎಂದು ನಮಗೆ ಗೊತ್ತಿಲ್ಲ. ಈಗಾಗಲೇ ನಾನು ಅವರು ನಮ್ಮ ಸಂಘಟನೆಯ ಕಾರ್ಯಕರ್ತರಾ, ಅಲ್ವಾ ಎಂದು ಹೇಳಲು ಆಗುವುದಿಲ್ಲ. ನನಗೆ ಅವರ ಬಗ್ಗೆ ಸದ್ಯಕ್ಕೆ ಯಾವುದೇ ಮಾಹಿತಿ ಇಲ್ಲ. ಬಿಜೆಪಿ ಮತ್ತು ಆರ್.ಎಸ್.ಎಸ್ ಅವರು ಸ್ವಾತಂತ್ರ್ಯ ಬಂದಾಗಿನಿಂದ ಯಾವೆಲ್ಲಾ ಒಳ್ಳೆಯ ಕೆಲಸ ಮಾಡಿದ್ದಾರೆ ಎಂಬುವುದು ಜನರಿಗೆ ತಿಳಿದಿದೆ ಎಂದು ಹೇಳಿದರು.

    ನಮ್ಮ ಪಕ್ಷದ ಮೇಲೆ ಬೇಕು ಎಂದೇ ಷಡ್ಯಂತ್ರ ಮಾಡುತ್ತಿದ್ದಾರೆ. ನಾವೂ ಯಾರಿಗೂ ಸಮಾಜ ದ್ರೋಹಿ ಕೆಲಸಕ್ಕೆ ತರಬೇತಿ ನೀಡಿಲ್ಲ. ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ಯಾರೇ ತಪ್ಪು ಮಾಡಿದರೂ ಅವರಿಗೆ ಶಿಕ್ಷೆಯಾಗಬೇಕು ಎಂದರು. ಇದನ್ನು ಓದಿ: ಒಬ್ಬ ಹಿಂದೂ ಆಗಿ ಸಾಯೋದಕ್ಕೆ ಹೆದರಿ ಬದುಕುವ ಜೀವ ನನ್ನದಲ್ಲ: ಸೂಲಿಬೆಲೆ

  • ಎದೆ ಸೀಳಿದರೆ ಎರಡಕ್ಷರ ಇಲ್ಲದವರು ಜಾಗೃತಿ ಸಭೆಗೆ ಬಂದಿಲ್ಲ: ತೇಜಸ್ವಿ ಸೂರ್ಯ

    ಎದೆ ಸೀಳಿದರೆ ಎರಡಕ್ಷರ ಇಲ್ಲದವರು ಜಾಗೃತಿ ಸಭೆಗೆ ಬಂದಿಲ್ಲ: ತೇಜಸ್ವಿ ಸೂರ್ಯ

    ಬೆಂಗಳೂರು: ಎದೆ ಸೀಳಿದರೆ ಎರಡಕ್ಷರ ಇಲ್ಲದಂತಹ ಪಂಕ್ಚರ್ ಅಂಗಡಿ ಹಾಕಿಕೊಂಡಿರುವಂತವರು ಈ ಕಾರ್ಯಕ್ರಮಕ್ಕೆ ಸೇರಿಲ್ಲ ಎಂದು ಹೇಳುವ ಮೂಲಕ ಸಂಸದ ತೇಜಸ್ವಿ ಸೂರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಟೌನ್ ಹಾಲ್ ಮುಂಭಾಗ ನಡೆದ ಜನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಟೀಕೆ ಮಾಡುವ ಭರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಜಾಗೃತಿ ಸಭೆಗೆ ಸೇರಿದವರೆಲ್ಲರೂ ಐಟಿ ಕಂಪನಿಗಳ ಉದ್ಯೋಗಿಗಳು, ವೈದ್ಯರು, ವಕೀಲರು, ಆಟೋ ಚಾಲಕರು ಸೇರಿದಂತೆ ವಿವಿಧ ವಲಯಗಳಲ್ಲಿ ಕೆಲಸ ಮಾಡುತ್ತಿರುವ ಹಾಗೂ ದೇಶದ ಆರ್ಥಿಕತೆಗೆ ತಮ್ಮದೇಯಾದ ಕೊಡುಗೆ ನೀಡುತ್ತಿರುವ ವಿದ್ಯಾವಂತರು. ನಮ್ಮ ಪ್ರತಿಭಟನೆಯಲ್ಲಿ ಎದೆ ಸೀಳಿದರೆ ಎರಡಕ್ಷರ ಇಲ್ಲದಂತಹ ಅನಕ್ಷರಸ್ಥರು, ಪಂಕ್ಚರ್ ಅಂಗಡಿ ಹಾಕಿಕೊಂಡಿರುವಂತಹವರು ಯಾರೂ ಸೇರಿಲ್ಲ ಎಂದು ಕಿಡಿ ಕಾರಿದ್ದಾರೆ.

    ಬೆಂಗಳೂರು ಪ್ರಪಂಚದಲ್ಲೇ ಪ್ರಸಿದ್ಧಿ ಪಡೆದಿರುವ ನಗರ, ಇಂತಹ ನಗರದಲ್ಲಿ ಹಿಂಸಾಚಾರ ನಡೆಸಿದ್ದಾರೆ. ಆದರೆ ಇಂದು ನಾವು ಶಾಂತಿಯುತವಾಗಿ ಹೋರಾಟ ಮಾಡುವುದು ಹೇಗೆ ಎಂಬುದನ್ನು ತೋರಿಸಿಕೊಟ್ಟಿದ್ದೇವೆ. ಹಿಂಸಾತ್ಮಕವಾಗಿ ಪ್ರತಿಭಟನೆ ಮಾಡಿದವರಿಗೆ ಅವರು ಯಾಕೆ ಪ್ರತಿಭಟನೆ ಮಾಡುತ್ತಿದ್ದರು ಎಂಬುದೇ ತಿಳಿದಿರಲಿಲ್ಲ. ಕೆಲವರು ಜಿಎಸ್‍ಟಿ ವಿರೋಧಿಸಿ, ಇನ್ನೂ ಕೆಲವು ಈರುಳ್ಳಿ, ಬೆಳ್ಳುಳ್ಳಿ ಬೆಲೆ ಹೆಚ್ಚಾಗಿದೆ ಹೀಗಾಗಿ ಹೋರಾಟ ಮಾಡುತ್ತಿದ್ದೇವೆ ಎಂದಿದ್ದರು ಎಂದು ತಿಳಿಸಿದರು.

    ಅವರಲ್ಲಿ ಬಹುತೇಕರಿಗೆ ಈ ಕಾನೂನಿನ ಉದ್ದೇಶವೇನು, ಇದರ ಉಪಯೋಗವೇನು, ಇದನ್ನು ಯಾಕೆ ಜಾರಿಗೆ ತಂದಿದ್ದಾರೆ, ಇದಾವುದನ್ನೂ ಪ್ರತಿಭಟನಾಕಾರರಿಗೆ ತಿಳಿದಿರಲಿಲ್ಲ. ನಿಮ್ಮನ್ನು ಪಾಕಿಸ್ತಾನಕ್ಕೆ ಓಡಿಸಿ ಬಿಡುತ್ತಾರಂತೆ ಎಂದು ಸುಳ್ಳು ಹೇಳಿ ಕರೆ ತಂದಿದ್ದಾರೆ. ಈ ಮೂಲಕ ಇಡೀ ದೇಶಕ್ಕೆ ಬೆಂಕಿ ಹಚ್ಚುವಂತಹ ಕೆಲಸವನ್ನು ಕಾಂಗ್ರೆಸ್ ಮಾಡಿದೆ. ಏನೂ ತಿಳಿಯದ ಮುಸ್ಲಿಂ ಯುವಕರಿಗೆ ತಪ್ಪು ಮಾಹಿತಿ ನೀಡಿ ಹಿಂಸಾಚಾರಕ್ಕೆ ತಳ್ಳಿದ್ದಾರೆ ಎಂದು ಕಿಡಿ ಕಾರಿದ್ದಾರೆ.

    ಮಂಗಳೂರಿನಲ್ಲಿ ಇಬ್ಬರ ಸಾವಿಗೆ ಮಾಜಿ ಸಚಿವ ಯುಟಿ ಖಾದರೇ ಕಾರಣ. ಯುವಕರ ಜೀವನದ ಜೊತೆ ಚೆಲ್ಲಾಟವಾಡಬೇಡಿ, ಹೊರದೇಶದಿಂದ ಭಾರತಕ್ಕೆ ವಲಸೆ ಬರುವ ಮುಸ್ಲಿಮರನ್ನು ರಾಷ್ಟ್ರದೊಳಗೆ ಬಿಟ್ಟುಕೊಳ್ಳುವುದಿಲ್ಲ ಎಂದರೆ ಇವರಿಗೇನು ಸಮಸ್ಯೆ? ಪಾಕಿಸ್ತಾನದ ಇಮ್ರಾನ್ ಖಾನ್, ಕಾಂಗ್ರೆಸ್ ನ ರಾಹುಲ್ ಗಾಂಧಿ ಒಂದೇ ಭಾಷಣ ಮಾಡುತ್ತಾರೆ. ಈ ಕಾನೂನು, ಭಾರತೀಯ ಹಿಂದೂಗಳು, ಹಿಂದೂ ಮುಸ್ಲಿಮರನ್ನು ಒಂದೇ ರೀತಿಯಾಗಿ ನೋಡುತ್ತದೆ. ನಮ್ಮ ದೇಶ ಭಾರತ, ಮನಸ್ಸೋ ಇಚ್ಚೆ ಇರುವ ಧರ್ಮಕ್ಷೇತ್ರ ಭಾರತವಲ್ಲ ಎಂದು ಕಿಡಿಕಾರಿದರು.

    ಅಲ್ಲದೆ ಕಾಂಗ್ರೆಸ್ಸಿನವರದ್ದು, ಉಸರವಳ್ಳಿ ಮಾತುಗಳು. ಬಾಂಗ್ಲಾದೇಶ, ಅಫ್ಘಾನಿಸ್ತಾನ, ಪಾಕಿಸ್ತಾನದ ಮುಸ್ಲಿಮೇತರರಿಗೆ ಪೌರತ್ವ ನೀಡುವುದು ತಪ್ಪು ಎಂದಾದರೆ, ಈ ಹಿಂದೆ ಇವರೇ ಹುಡುಕಿ ವೋಟರ್ ಐಡಿ, ಆಧಾರ್ ಮಾಡಿಕೊಟ್ಟಿದ್ದಾರಲ್ಲ. ಇದು ಸೆಕ್ಯೂಲರಾ ಹಾಗಾದರೆ ಎಂದು ಪ್ರಶ್ನಿಸಿದರು.

  • ಜಯನಗರ ಲೈಬ್ರರಿ ಆವರಣದಲ್ಲಿ ಎಂಪಿ ಆಫೀಸ್ – ಇದು ಸರಿಯೇ ತೇಜಸ್ವಿ ಸೂರ್ಯ?

    ಜಯನಗರ ಲೈಬ್ರರಿ ಆವರಣದಲ್ಲಿ ಎಂಪಿ ಆಫೀಸ್ – ಇದು ಸರಿಯೇ ತೇಜಸ್ವಿ ಸೂರ್ಯ?

    ಬೆಂಗಳೂರು: ಯುವ ಸಂಸದ ತೇಜಸ್ವಿ ಸೂರ್ಯ ತನ್ನ ರಾಜಕೀಯ ಗುರುವಿಗೆ ತಿರುಮಂತ್ರ ಹೊಡೆದ್ರಾ ಎನ್ನುವ ಪ್ರಶ್ನೆ ಈಗ ಚರ್ಚೆಯಾಗುತ್ತಿದೆ.

    ಹೌದು. ಸಂಸದ ಅನಂತ ಕುಮಾರ್ ಉದ್ಘಾಟಿಸಿದ, ಶಾಸಕ ವಿಜಯ ಕುಮಾರ್ ಪಾಠ ಹೇಳಿದ್ದ ಲೈಬ್ರರಿ ಜಾಗಕ್ಕೆ ತೇಜಸ್ವಿ ಕಾಲಿಟ್ಟಿದ್ದು ಈಗ ವಿವಾದಕ್ಕೆ ಕಾರಣವಾಗಿದೆ.

    ಸಂಸದರಾಗಿ ಆಯ್ಕೆಯಾದ ಬಳಿ ಸಂಸದರ ಕಚೇರಿ ಕೊಡಿ ಎಂದು ತೇಜಸ್ವಿ ಸೂರ್ಯ ಬಿಬಿಎಂಪಿಗೆ ಮನವಿ ಮಾಡಿದ್ದರು. ಈ ವೇಳೆ ಅನಂತಕುಮಾರ್ ಅವರ ಕಚೇರಿಯನ್ನು ಬಳಕೆ ಮಾಡಲು ನಿರಾಕರಿಸಿದ ಪರಿಣಾಮ ಅವರಿಗೆ ಜಯನಗರದ ಸಾರ್ವಜನಿಕ ಲೈಬ್ರರಿ ಆವರಣದಲ್ಲಿ ಕಚೇರಿ ತೆರೆಯಲು ಅನುಮತಿ ನೀಡಲಾಗಿದೆ.

    ಇದು ಸರಿಯೇ?
    ಸಿಎ, ಐಎಎಸ್, ಐಪಿಎಸ್ ಅಧಿಕಾರಿಗಳಾಗಲು ಈ ಲೈಬ್ರರಿಯಲ್ಲಿ ವಿದ್ಯಾರ್ಥಿಗಳು ನಿತ್ಯ ಓದುತ್ತಾರೆ. ಸದ್ಯ ಸಂಸದರ ಕಚೇರಿ ಇಲ್ಲಿ ತೆರೆದರೆ ಪಕ್ಷದ ಕಾರ್ಯಕರ್ತರು, ಸಾರ್ವಜನಿಕರು ಸಂಸದರನ್ನು ನೋಡಲು ನಿತ್ಯ ಬರುತ್ತಾರೆ. ಈ ವೇಳೆ ವಾಹನಗಳ ಸಂಖ್ಯೆ ಹೆಚ್ಚಾಗುತ್ತದೆ. ಅಲ್ಲದೇ ಜೊತೆಗೆ ಮುಖ್ಯ ರಸ್ತೆ ಆಗಿರುವುದರಿಂದ ಪಾರ್ಕಿಂಗ್ ಸಮಸ್ಯೆಯೂ ಹೆಚ್ಚಾಗಲಿದೆ. ಇದರಿಂದ ಲೈಬ್ರರಿಗೆ ಬರುವ ವಿದ್ಯಾರ್ಥಿಗಳಿಗೆ ಓದಲು ಸಮಸ್ಯೆಯಾಗುತ್ತದೆ. ಈ ವಿಚಾರ ತಿಳಿದಿದ್ದರೂ ತೇಜಸ್ವಿ ಸೂರ್ಯ ಅವರು ಇಲ್ಲೇ ಕಚೇರಿ ಮಾಡುತ್ತಿರುವುದು ಎಷ್ಟು ಸರಿ ಎಂದು ವಿದ್ಯಾರ್ಥಿಗಳು ಪ್ರಶ್ನೆ ಮಾಡುತ್ತಿದ್ದಾರೆ.

    ಈ ಸ್ಥಳವನ್ನು ಕೆಲ ಸಂಘ ಸಂಸ್ಥೆಗಳು ಬಡ ಮಕ್ಕಳಿಗೆ ಟ್ಯೂಷನ್ ನೀಡಲು ಬಳಸುತ್ತಿದ್ದವು. ಈ ಎಲ್ಲಾ ಮಾಹಿತಿ ಸಂಸದರಿಗೆ ಗೊತ್ತಾಗಲಿಲ್ಲವೇ ಎಂಬ ಪ್ರಶ್ನೆ ಸಾರ್ವಜನಿಕರದಲ್ಲಿ ಮೂಡಿದೆ.

    ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ಸಂಸದ ತೇಜಸ್ವಿ ಸೂರ್ಯ ಅವರು, ಸಂಸದರ ಕಚೇರಿ ನಿರ್ಮಾಣವಾಗುತ್ತಿರುವುದು ಜಯನಗರದ ಸಾರ್ವಜನಿಕ ಲೈಬ್ರರಿ ಇರುವ ಕಟ್ಟದ ಗ್ರೌಂಡ್ ಫ್ಲೋರಿನಲ್ಲಿ. ಈ ಕಟ್ಟಡ ಮೊದಲ ಫ್ಲೋರಿನಲ್ಲಿ ಲೈಬ್ರರಿ ಇದೆ. ಅದರ ಕೆಳಗೆ ಇರುವ ಟ್ರಸ್ಟ್ ಕಚೇರಿಯನ್ನು ಸಂಸದರ ಕಚೇರಿಯಾಗಿ ಮಾಡುತ್ತಿದ್ದೇವೆ. ಈ ವಿಚಾರದಲ್ಲಿ ವಿದ್ಯಾರ್ಥಿಗಳು ನನ್ನ ಪರವಿದ್ದಾರೆ. ಕೆಲವರು ಇದನ್ನೇ ದುರುಪಯೋಗ ಪಡಿಸಿಕೊಂಡು ಅಪಪ್ರಚಾರ ಮಾಡುತ್ತಿದ್ದಾರೆ ಅಷ್ಟೇ. ಕೆಲವರು ಮೊದಲು ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ಟ್ರಸ್ಟನ್ನು ಅಲ್ಲಿಂದ ಖಾಲಿ ಮಾಡಿಸಿ ಬೇರೆಯವರಿಗೆ ನೀಡಲು ತೀರ್ಮಾನ ಮಾಡಿದ್ದರು. ಸದ್ಯ ಬಿಬಿಎಂಪಿ ಸಂಸದರ ಕಚೇರಿಗೆ ನೀಡಿದೆ ಎಂದರು.