Tag: ಸಂಸದ ವಿ ಉಗ್ರಪ್ಪ

  • ಶಾಸಕ ನಾಗೇಂದ್ರಗೆ ತಪ್ಪಿದ ಸಚಿವ ಸ್ಥಾನ- ಡಿಕೆಶಿ, ಉಗ್ರಪ್ಪರ ಮೇಲೆ ಬೆಂಬಲಿಗರ ಕಿಡಿ

    ಶಾಸಕ ನಾಗೇಂದ್ರಗೆ ತಪ್ಪಿದ ಸಚಿವ ಸ್ಥಾನ- ಡಿಕೆಶಿ, ಉಗ್ರಪ್ಪರ ಮೇಲೆ ಬೆಂಬಲಿಗರ ಕಿಡಿ

    ಬಳ್ಳಾರಿ: ಕೂಡ್ಲಿಗಿ ಶಾಸಕ ನಾಗೇಂದ್ರ ಅವರಿಗೆ ಸಚಿವ ಸ್ಥಾನ ಕೈತಪ್ಪಿದ್ದರಿಂದ ಆಕ್ರೋಶ ಹೊರಹಾಕಿದ ಬೆಂಬಲಿಗರು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ವಿ.ಉಗ್ರಪ್ಪ ಅವರ ಬ್ಯಾನರ್‍ಗೆ ಚಪ್ಪಲಿಯಿಂದ ಹೊಡೆದು ಆಕ್ರೋಶ ಹೊರಹಾಕಿದ್ದಾರೆ.

    ನಗರದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಡಿ.ಕೆ.ಶಿವಕುಮಾರ್ ಹಾಗೂ ಸಂಸದ ವಿ.ಉಗ್ರಪ್ಪ ಅವರ ಬ್ಯಾನರ್‍ಗೆ ಚಪ್ಪಲಿ ಹಾಕಿ ಮೆರವಣಿಗೆ ಮಾಡಿದರು. ಬಳಿಕ ರಾಯಲ್ ಸರ್ಕಲ್‍ನಲ್ಲಿ ಸೇರಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ, ನಾಯಕರ ಫೋಟೋಗೆ ಚಪ್ಪಲಿಯಿಂದ ಹೊಡೆದು ಆಕ್ರೋಶ ಹೊರಹಾಕಿದರು. ಅಷ್ಟೇ ಅಲ್ಲದೆ ಟಯರ್ ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ಮುಂದುವರಿಸಿದರು.

    ಪ್ರತಿಭಟನೆಯಿಂದಾಗಿ ರಾಯಲ್ ಸರ್ಕಲ್‍ನಲ್ಲಿ ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿ ನೂರಾರು ವಾಹನಗಳು ರಸ್ತೆಯಲ್ಲಿ ಸಾಲಾಗಿ ನಿಂತಿದ್ದವು. ಇತ್ತ ಶಾಸಕ ಭೀಮಾನಾಯ್ಕ್ ಅವರಿಗೂ ಸಚಿವ ಸ್ಥಾನ ಕೈತಪ್ಪಿದಕ್ಕೆ ಅವರ ಬೆಂಬಲಿಗರು ಹಾಗೂ ಕೈ ಕಾರ್ಯಕರ್ತರು ಹಗರಿಬೊಮ್ಮನಹಳ್ಳಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ, ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ಹೊರಹಾಕಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪರಮೇಶ್ವರ್ ಸಿಎಂ ಆದ್ರೆ ಖುಷಿ ಪಡೋ ಮೊದಲಿಗ ನಾನು: ಉಗ್ರಪ್ಪ

    ಪರಮೇಶ್ವರ್ ಸಿಎಂ ಆದ್ರೆ ಖುಷಿ ಪಡೋ ಮೊದಲಿಗ ನಾನು: ಉಗ್ರಪ್ಪ

    ತುಮಕೂರು: ಡಿಸಿಎಂ ಪರಮೇಶ್ವರ್ ಅವರು ರಾಜ್ಯದ ಮುಖ್ಯಮಂತ್ರಿ ಆಗುವ ಸಾಮಥ್ರ್ಯ, ಆರ್ಹತೆ ಎರಡನ್ನು ಹೊಂದಿದ್ದಾರೆ ಎಂದು ಬಳ್ಳಾರಿ ನೂತನ ಸಂಸದ ವಿ. ಉಗ್ರಪ್ಪ ತಿಳಿಸಿದ್ದಾರೆ.

    ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಉಗ್ರಪ್ಪ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಾಮಥ್ರ್ಯ ಇದ್ದವರಿಗೆ ಪಕ್ಷ ಹಾಗೂ ಶಾಸಕರು ತೀರ್ಮಾನ ಮಾಡಿದರೆ ಮುಖ್ಯಮಂತ್ರಿ ಆಗುವ ಅವಕಾಶ ಇದೆ. ಕಾಂಗ್ರೆಸ್ ಪಕ್ಷದಿಂದ ಪರಮೇಶ್ವರ್ ಅವರು ಸಿಎಂ ಆದರೆ ಖುಷಿ ಪಡುವ ಮೊದಲಿಗ ನಾನು. ತುಮಕೂರು ಜಿಲ್ಲೆಗೆ ಇದುವರೆಗೂ ಮುಖ್ಯಮಂತ್ರಿ ಸ್ಥಾನ ಲಭ್ಯ ಆಗಿಲ್ಲ. ಅದು ಪರಮೇಶ್ವರ ಅವರ ಮೂಲಕ ಈಡೇರಿದರೆ ನಮಗೆ ಖುಷಿ ಆಗುತ್ತದೆ. ಸಮಯ ಬಂದಾಗ ಇದನ್ನ ಪಕ್ಷ ತೀರ್ಮಾನ ಮಾಡುತ್ತದೆ ಎಂದು ತಿಳಿಸಿದರು.

    ಇದೇ ವೇಳೆ ಪಕ್ಷದಲ್ಲಿ ಹಿರಿಯ ಮುಖಂಡರದ ಮಲ್ಲಿಕಾರ್ಜುನ ಖರ್ಗೆ, ಸಚಿವ ಡಿಕೆ ಶಿವಕುಮಾರ್, ಮಾಜಿ ಸಚಿವ ದೇಶಪಾಂಡೆ ಸೇರಿದಂತೆ ಹಲವರು ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹರಾಗಿದ್ದಾರೆ. ಅಲ್ಲದೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸಿಎಂ ಆಗುವ ಅವಕಾಶವೂ ಇದೆ ಎಂದು ಹೇಳಿದರು.

    ಡಿಸಿಎಂ ಪರಮೇಶ್ವರ್ ಅವರು ಇಂದು ಬೆಳಗಾವಿ ನೀಡಿದ ಹೇಳಿಕೆ ರಾಜ್ಯ ರಾಜಕೀಯಲ್ಲಿ ಸಂಚಲನವನ್ನು ಉಂಟುಮಾಡಿದೆ. ಬೆಳಗಾವಿಯಲ್ಲಿ ಮಾತನಾಡಿದ ಪರಮೇಶ್ವರ್, ಹೈಕಮಾಂಡ್ ನೀಡಿದ ಜವಾಬ್ದಾರಿಯನ್ನು ಶಕ್ತಿ ಮೀರಿ ನಿರ್ವಹಣೆ ಮಾಡಿದ್ದೇನೆ. ಕೆಪಿಸಿಸಿ ಅಧ್ಯಕ್ಷರಾಗಿ 8 ವರ್ಷ ಕಾರ್ಯನಿರ್ವಹಿಸಿದ್ದು, ಎರಡು ಚುನಾವಣೆಗಳಲ್ಲಿ ನಾನು ಪಕ್ಷ ಕಟ್ಟುವ ಕಾರ್ಯ ಮಾಡಿದ್ದೇನೆ. ಈ ಬಾರಿ ನಮ್ಮ ಮೈತ್ರಿ ಸರ್ಕಾರ ರಚನೆ ಆಗಿದ್ದು, ನನಗೆ ಡಿಸಿಎಂ ಸ್ಥಾನ ನೀಡಿದ್ದಾರೆ. ಆದ್ದರಿಂದ ನಾನು ಈ ಜವಾಬ್ದಾರಿ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಯಾವುದೇ ಜವಾಬ್ದಾರಿ ನೀಡಿಲ್ಲವೆಂದರೂ ನಾನು ಸುಮ್ಮನೆ ಇರುತ್ತೇನೆ. ಕೆಲಸ ನೀಡುವುದು ಬಿಡುವುದು ಅವರ ತೀರ್ಮಾನಕ್ಕೆ ಬಿಟ್ಟ ವಿಚಾರ. ಅಂತೆಯೇ ಸಿಎಂ ಸ್ಥಾನವನ್ನು ನೀಡಿದರು ಸಮರ್ಥವಾಗಿ ನಿರ್ವಹಿಸುತ್ತೇನೆ ಎಂದು ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews