Tag: ಸಂಸದ ಸ್ಥಾನ

  • ಸಂಸದ ಸ್ಥಾನದಿಂದ ಅನರ್ಹ – ಪ್ರಜ್ವಲ್ ರೇವಣ್ಣ ಮೇಲಿನ ಆರೋಪಗಳೇನು?

    ಸಂಸದ ಸ್ಥಾನದಿಂದ ಅನರ್ಹ – ಪ್ರಜ್ವಲ್ ರೇವಣ್ಣ ಮೇಲಿನ ಆರೋಪಗಳೇನು?

    ಬೆಂಗಳೂರು: ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗ ಜೆಡಿಎಸ್‌ಗೆ ಬಿಗ್ ಶಾಕ್ ತಗುಲಿದೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಸಲ್ಲಿಸಿದ ಅಫಿಡವಿಟ್‌ನಲ್ಲಿ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ಕಾರಣಕ್ಕೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಸಂಸತ್ ಸದಸ್ಯತ್ವವನ್ನು ಹೈಕೋರ್ಟ್ ರದ್ದುಗೊಳಿಸಿದೆ.

    ಆದ್ದರಿಂದ ಪ್ರಜ್ವಲ್ ರೇವಣ್ಣ ಅವರ ಮುಂದಿನ ನಡೆ ಏನು ಎಂಬುದು ಕುತೂಹಲ ಕೆರಳಿಸಿದೆ. ಪ್ರಜ್ವಲ್ ರೇವಣ್ಣ ಅವರಿಗೆ ಒಂದು ತಿಂಗಳು ಕಾಲವಕಾಶವಿದ್ದು, ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಬಹುದಾಗಿದೆ. ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ನಿಂದ ತಡೆ ತರಬಹುದು. ಒಂದು ವೇಳೆ ತಡೆಯಾಜ್ಞೆ ನೀಡದಿದ್ದರೆ ಆಯ್ಕೆ ಅಸಿಂಧು ಆಗಲಿದೆ. ಇದನ್ನೂ ಓದಿ: Exclusive: ಅನರ್ಹಗೊಂಡ ಬಳಿಕ ಫಸ್ಟ್ ರಿಯಾಕ್ಷನ್ – ಇದೆಲ್ಲ ದೇವರ ಪರೀಕ್ಷೆ ಎಂದ ಪ್ರಜ್ವಲ್ ರೇವಣ್ಣ

    ಪ್ರಜ್ವಲ್ ಮೇಲಿನ ಆರೋಪಗಳೇನು?
    ನೆಲಮಂಗಲ ಬಳಿಯ 265 ಎಕರೆ ಜಮೀನು ಘೋಷಣೆ ಮಾಡಿಲ್ಲ. ಬೇನಾಮಿ ಆಸ್ತಿ ಹೊಂದಿದ್ದಾರೆ, ಆದಾಯ ಮುಚ್ಚಿಟ್ಟಿದ್ದಾರೆ. ಚುನಾವಣೆಯಲ್ಲಿ ಗೆಲ್ಲಲು ಅಕ್ರಮ ಮತದಾನ ಮಾಡಿಸಿದ್ದಾರೆ. ಬೂತ್‌ನಲ್ಲಿ ಕುಳಿತು ಮತ ಹಾಕಿಸಿದ್ದಾರೆ ಎಂದು ಆರೋಪಿಸಿ ಅರ್ಜಿದಾರರು ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿಯನ್ನು ಸುದೀರ್ಘ 4 ವರ್ಷ ವಿಚಾರಣೆ ನಡೆಸಿದ ಹೈಕೋರ್ಟ್ ಈಗ ತೀರ್ಪು ನೀಡಿದೆ. ಈ ಬಗ್ಗೆ ಶಾಸಕ ಎ ಎಂಜು ಮತ್ತು ದೇವರಾಜೇಗೌಡ ಸಂತಸ ವ್ಯಕ್ತಪಡಿಸಿದ್ದಾರೆ. ಯಾರು ಸುಳ್ಳು ಮಾಹಿತಿ ಕೊಡಬಾರದು ಎಂದಿದ್ದಾರೆ. ಕಾನೂನಿಗೆ ತಲೆಬಾಗೋದಾಗಿ ಪ್ರಜ್ವಲ್ ರೇವಣ್ಣ ಮತ್ತು ಶಾಸಕ ಹೆಚ್.ಡಿ ರೇವಣ್ಣ ಅಭಿಪ್ರಾಯಪಟ್ಟಿದ್ದಾರೆ. ಇದೀಗ ಅನರ್ಹ ಸಂಸದ ಪ್ರಜ್ವಲ್ ರೇವಣ್ಣ ಮುಂದಿನ ಕಾನೂನು ಹೋರಾಟಕ್ಕೆ ಆಣಿಯಾಗ್ತಿದ್ದಾರೆ.

    ಲೋಕಸಮರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಪರಾಜಿತರಾಗಿದ್ದ ಹಾಲಿ ಜೆಡಿಎಸ್ ಶಾಸಕ ಎ ಮಂಜು ಮತ್ತು ದೇವರಾಜೇಗೌಡ ಅರ್ಜಿಯನ್ನ ನ್ಯಾ.ನಟರಾಜನ್ ಪೀಠ ಭಾಗಶಃ ಪುರಸ್ಕರಿಸಿದೆ. ಮೇಲ್ಮನವಿಗೆ ತಿಂಗಳ ಸಮಯ ನೀಡಿದೆ. ಇನ್ನು ಪ್ರಜ್ವಲ್ ಚುನಾವಣಾ ಅಕ್ರಮದಲ್ಲಿ ಭಾಗಿಯಾಗಿರುವ ಕಾರಣ ತನ್ನನ್ನು ವಿಜೇತರನ್ನಾಗಿ ಘೋಷಿಸಬೇಕು ಎಂಬ ಎ.ಮಂಜು ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಇದನ್ನೂ ಓದಿ: ಹೆಚ್‌.ಡಿ. ರೇವಣ್ಣ ಕುಟುಂಬವನ್ನ ರಾಜಕೀಯದಿಂದ ಶಾಶ್ವತವಾಗಿ ತೆಗೆಯುವುದೇ ನನ್ನ ಗುರಿ: ದೂರುದಾರ ದೇವರಾಜೇಗೌಡ

    ಅಲ್ಲದೇ, ಚುನಾವಣಾ ಅಕ್ರಮದಲ್ಲಿ ಭಾಗಿಯಾದ ಆರೋಪದ ಮೇಲೆ ಹೆಚ್.ಡಿ ರೇವಣ್ಣ, ಎಂಎಲ್‌ಸಿ ಸೂರಜ್ ರೇವಣ್ಣ, ದೂರುದಾರ ಎ ಮಂಜುಗೆ ನೋಟಿಸ್ ಜಾರಿ ಮಾಡಿದೆ. ಪ್ರಜ್ವಲ್ ರೇವಣ್ಣ ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Exclusive: ಅನರ್ಹಗೊಂಡ ಬಳಿಕ ಫಸ್ಟ್ ರಿಯಾಕ್ಷನ್ – ಇದೆಲ್ಲ ದೇವರ ಪರೀಕ್ಷೆ ಎಂದ ಪ್ರಜ್ವಲ್ ರೇವಣ್ಣ

    Exclusive: ಅನರ್ಹಗೊಂಡ ಬಳಿಕ ಫಸ್ಟ್ ರಿಯಾಕ್ಷನ್ – ಇದೆಲ್ಲ ದೇವರ ಪರೀಕ್ಷೆ ಎಂದ ಪ್ರಜ್ವಲ್ ರೇವಣ್ಣ

    ಹಾಸನ: ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಹೈಕೋರ್ಟ್ (HighCourt) ಆದೇಶ ಹೊರಡಿಸಿದ ಬಳಿಕ ಪ್ರಜ್ಚಲ್ ರೇವಣ್ಣ (Prajwal Revanna) ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

    ಹೊಳೆನರಸೀಪುರದಲ್ಲಿಂದು `ಪಬ್ಲಿಕ್ ಟಿವಿ’ಯೊಂದಿಗೆ ಮಾತನಾಡಿದ ಅವರು, ಇದೆಲ್ಲ ದೇವರ ಪರೀಕ್ಷೆ ಅಷ್ಟೇ. ವಕೀಲರೊಂದಿಗೆ (Lawyer) ಚರ್ಚಿಸಿ ಮುಂದಿನ ಕಾನೂನು ಹೋರಾಟದ ಬಗ್ಗೆ ತೀರ್ಮಾನ ಮಾಡ್ತೀವಿ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ದಾರೆ. ಇದನ್ನೂ ಓದಿ: ಹೆಚ್‌.ಡಿ. ರೇವಣ್ಣ ಕುಟುಂಬವನ್ನ ರಾಜಕೀಯದಿಂದ ಶಾಶ್ವತವಾಗಿ ತೆಗೆಯುವುದೇ ನನ್ನ ಗುರಿ: ದೂರುದಾರ ದೇವರಾಜೇಗೌಡ

    ಕೋರ್ಟ್ ತೀರ್ಪಿನ ಬಗ್ಗೆ ಮಧ್ಯಾಹ್ನ ಗೊತ್ತಾಯ್ತು, ಕೋರ್ಟ್ ತೀರ್ಪಿಗೆ ಎಲ್ಲರೂ ತಲೆ ಬಾಗಲೇಬೇಕು. ಹಾಗಾಗಿ ಮುಂದೇನು ಮಾಡಬೇಕು ಎಂದು ನನ್ನ ತಂದೆ ಹಾಗೂ ದೇವೇಗೌಡರ (HD Devegowda) ಜೊತೆ ಚರ್ಚೆ ಮಾಡುತ್ತೇನೆ. ಹಲವು ಕಾರಣ ನೀಡಿ ದೂರು ನೀಡಲಾಗಿತ್ತು ಹಾಗಾಗಿ ಯಾವ ಆಧಾರದಲ್ಲಿ ತೀರ್ಪು ಬಂದಿದೆ ನೋಡಬೇಕಾಗುತ್ತೆ. ಈ ಬಗ್ಗೆ ವಕೀಲರ ಜೊತೆಗೂ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಕಾನೂನಾತ್ಮಕವಾಗಿ ಏನು ಮಾಡಬೇಕೋ ಮಾಡೇ ಮಾಡ್ತೇವೆ ಎಂದು ಹೇಳಿದ್ದಾರೆ.

    ಹಾಸನ ಚುನಾವಣೆ (Election) ವೇಳೆಯಲ್ಲಿ ಎಲ್ಲ ದಾಖಲೆಗಳನ್ನು ನೀಡಿದ್ದೆವು. ಚುನಾವಣೆ ನಾಮಪತ್ರ ಸಲ್ಲಿಕೆ ನಮಗೆ ಹೊಸದಲ್ಲ. ಹಲವು ಬಾರಿ ಅರ್ಜಿ ಹಾಕಿದ್ದೇವೆ, ಎಲ್ಲ ದಾಖಲೆ ಕೊಟ್ಟಿದ್ದೇವೆ ಎಂದು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ನಾಮಪತ್ರದಲ್ಲಿ ಸುಳ್ಳು ಮಾಹಿತಿ – ಸಂಸದ ಸ್ಥಾನದಿಂದ ಪ್ರಜ್ವಲ್‌ ರೇವಣ್ಣ ಅನರ್ಹ

    ಮುಂದಿನ 6 ವರ್ಷ ಚುನಾವಣೆಗೆ ನಿಲ್ಲುವ ಹಾಗಿಲ್ಲ ಎಂಬ ಚರ್ಚೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಇಂತಹ ಆದೇಶ ಎಲ್ಲಿ ಬಂದಿದೆ? ಕೇವಲ ಸದಸ್ಯತ್ವ ಅಸಿಂಧುಗೊಳಿಸಲಾಗಿದೆ ಅಷ್ಟೇ. ಮುಂದೆ ಎಲ್ಲೆಲ್ಲಿ ಹೋಗಿ ವಕೀಲರ ಭೇಟಿ ಮಾಡಬೇಕೊ ಮಾಡ್ತಿವಿ. 6 ವರ್ಷ ನಿಲ್ಲುವ ಹಾಗಿಲ್ಲ ಎಂದು ಎಲ್ಲಿ ಹೇಳಿದ್ದಾರೆ? ಇದೆಲ್ಲವೂ ಊಹಾಪೋಹ. ವಕೀಲರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ. ಇದೆಲ್ಲಾ ದೇವರ ಪರೀಕ್ಷೆ ಅಷ್ಟೇ, ಮುಂದೆ ಏನೇನಾಗುತ್ತೆ ನೋಡೋಣ ಯಾಕೆ ತಲೆಕೆಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.

    ಹೈಕೋರ್ಟ್ ತೀರ್ಪಿನಲ್ಲಿ ಏನಿದೆ ಎಂಬುದನ್ನ ನಮ್ಮ ವಕೀಲರು ಹಾಗೂ ನಮ್ಮ ವರಿಷ್ಠರು ದೇವೇಗೌಡರು ಮತ್ತು ರೇವಣ್ಣ ಅವರೊಂದಿಗೆ ಇಂದು ಚರ್ಚೆ ಮಾಡಿ ಮುಂದಿನ ಕಾನೂನು ಹೋರಾಟಕ್ಕೆ ತೀರ್ಮಾನ ಮಾಡುತ್ತೇವೆ. ಈ ತಿರ್ಪೀನಿಂದ ನಾನು ಕ್ಷೇತ್ರದಲ್ಲಿ ಎಂದಿನಂತೆ ಕೆಲಸ ಮಾಡಬಹುದು. ಬೆಂಬಲಿಗರು, ಕ್ಷೇತ್ರದ ಜನರು ಅತಂಕ ಪಡುವ ಅವಶ್ಯಕತೆಯಿಲ್ಲ. ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಪ್ರತಿಕ್ರಿಯಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ – ಎದುರಾಳಿಗಳಿಗೆ ಇದೊಂದು ಪಾಠ ಎಂದ ಪ್ರತಾಪ್ ಸಿಂಹ

    ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ – ಎದುರಾಳಿಗಳಿಗೆ ಇದೊಂದು ಪಾಠ ಎಂದ ಪ್ರತಾಪ್ ಸಿಂಹ

    ಬೆಳಗಾವಿ: ರಾಹುಲ್ ಗಾಂಧಿ (Rahul Gandhi) ಅವರನ್ನ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಯಾರೊಬ್ಬರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುವ ರಾಜಕೀಯ ಎದುರಾಳಿಗಳಿಗೆ ಇದೊಂದು ಪಾಠ ಎಂದು ಸಂಸದ ಪ್ರತಾಪ್ ಸಿಂಹ (Pratap Simha) ಎಚ್ಚರಿದ್ದಾರೆ.

    ಸಂಸದ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ ವಿಚಾರಕ್ಕೆ ಗೋಕಾಕ್‌ನಲ್ಲಿ ಮಾತನಾಡಿದ ಅವರು, ಇನ್ಮುಂದೆ ರಾಜಕೀಯ ಎದುರಾಳಿಗಳು ಯಾರೊಬ್ಬರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡುವುದು, ಅವಹೇಳನಕಾರಿಯಾಗಿ ಟೀಕಿಸುವಂತಹ ಬೆಳವಣಿಗೆಗಳಿಗೆ ಕಡಿವಾಣ ಹಾಕುವ ಗಟ್ಟಿಯಾದ ಸಂದೇಶ ಸಾರಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಂಸದ ಸ್ಥಾನದಿಂದ ರಾಹುಲ್‌ ಗಾಂಧಿ ಅನರ್ಹ

    ರಾಜಕೀಯ ಏನೇ ಇರಲಿ ತಂದೆ, ತಾಯಿ ಬಗ್ಗೆ ಮಾತನಾಡುವಂತಹದ್ದು, ಇನ್ನೊಬ್ಬರನ್ನ ಅವಹೇಳನ ಮಾಡುವುದು, ಕುಟುಂಬವನ್ನು ಅವಮಾನ ಮಾಡುವಂತಹ ಪ್ರಯತ್ನ ಮಾಡುವುದು ಇಂತಹ ರಾಜಕೀಯ ದುರ್ನಡತೆಗಳಿಗೆ ಇನ್ಮುಂದೆ ಕಡಿವಾಣ ಬೀಳಬೇಕು. ರಾಹುಲ್ ಗಾಂಧಿಯನ್ನ ವ್ಯಕ್ತಿಗತವಾಗಿ ನೋಡುತ್ತಿಲ್ಲ. ಈ ರೀತಿ ಮಾಡುವ ಎಲ್ಲರಿಗೂ ಇದರೊಂದು ಎಚ್ಚರಿಕೆಯ ಗಂಟೆ ಎಂದು ಕುಟುಕಿದ್ದಾರೆ. ಇದನ್ನೂ ಓದಿ: ಕೇಂದ್ರೀಯ ತನಿಖಾ ಸಂಸ್ಥೆಗಳ ದುರುಪಯೋಗ ಆರೋಪ – ಸುಪ್ರೀಂಕೋರ್ಟ್ ಮೆಟ್ಟಿಲೇರಿದ ವಿಪಕ್ಷಗಳು

  • ಸಂಸದ ಸ್ಥಾನಕ್ಕೆ ಅಖಿಲೇಶ್ ಯಾದವ್ ರಾಜೀನಾಮೆ

    ಸಂಸದ ಸ್ಥಾನಕ್ಕೆ ಅಖಿಲೇಶ್ ಯಾದವ್ ರಾಜೀನಾಮೆ

    ಲಕ್ನೋ: ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

    ಅಖಿಲೇಶ್ ಯಾದವ್ ಅವರ ಈ ನಡೆ ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತು ಯೋಗಿ ಆದಿತ್ಯನಾಥ್ ವಿರುದ್ಧ ಅವರು ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ಸಿದ್ಧತೆಯಲ್ಲಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದೆ. ಇದನ್ನೂ ಓದಿ: ದೆಹಲಿ ರಿಮೋಟ್ ಕಂಟ್ರೋಲ್‍ಗೆ ಹೊಸ ಬ್ಯಾಟರಿಗಳು ಸೇರ್ಪಡೆ: ಸಿಧು

    ಈ ಮುನ್ನ 2019ರ ರಾಷ್ಟ್ರೀಯ ಚುನಾವಣೆಯಲ್ಲಿ ಸಮಾಜವಾದಿ ಪಕ್ಷ ಐದು ಲೋಕಸಭಾ ಸ್ಥಾನಗಳನ್ನು ಗೆದ್ದಿತ್ತು. ಅಖಿಲೇಶ್ ಯಾದವ್ ಅವರು ಪೂರ್ವ ಉತ್ತರ ಪ್ರದೇಶದ ಅಜಂಗಢದಿಂದ ಸಂಸದರಾಗಿದ್ದರು. ಆದರೆ ಇತ್ತೀಚೆಗೆ ಮಾರ್ಚ್‌ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಅಖಿಲೇಶ್ ಯಾದವ್ ಅವರು ತಮ್ಮ ಕುಟುಂಬದ ಭದ್ರಕೋಟೆಯಾದ ಕರ್ಹಾಲ್‍ನಿಂದ ಸ್ಪರ್ಧಿಸಿದರು. 2027ರ ಯುಪಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಯುಪಿ ವಿಧಾನಸಭೆಯಲ್ಲಿ ಬಿಜೆಪಿಯನ್ನು ಎದುರಿಸಲು ಯೋಜಿಸುತ್ತಿದ್ದಾರೆ ಎಂದು ಸೂಚಿಸುತ್ತದೆ. ಇದನ್ನೂ ಓದಿ: ಬಿಜೆಪಿ ಸರ್ಕಾರದಿಂದ ಜನರಿಗೆ ಹಣದುಬ್ಬರದ ಗೀಫ್ಟ್: ಅಖಿಲೇಶ್ ಯಾದವ್

    ಈ ಬಾರಿ ನಡೆದ ಉತ್ತರ ಪ್ರದೇಶ ಚುನಾವಣೆಯಲ್ಲಿ ಅಖಿಲೇಶ್ ಯಾದವ್ ಅವರು ಬಿಜೆಪಿಯ ನೇರ ಪ್ರತಿಸ್ಪರ್ಧಿಯಾಗಿದ್ದರು. ಆದರೆ ಸಮಾಜವಾದಿ ಪಕ್ಷ 403 ಸ್ಥಾನಗಳ ಪೈಕಿ, 111 ಸ್ಥಾನಗಳನ್ನು ಪಡೆದು ಎರಡನೇ ಸ್ಥಾನವನ್ನು ಗಳಿಸಿತು. ಬಿಜೆಪಿ 255 ಸ್ಥಾನಗಳನ್ನು ಪಡೆದು ಮತ್ತೆ ಸರ್ಕಾರ ರಚಿಸಲು ಸಿದ್ಧವಾಗಿದೆ. ಮಿತ್ರಪಕ್ಷಗಳೊಂದಿಗೆ ಬಿಜೆಪಿ 273 ಸ್ಥಾನಗಳನ್ನು ಗಳಿಸಿದೆ.