Tag: ಸಚಿನ್ ಪೈಲಟ್

  • ಬಿಜೆಪಿ ಅಭ್ಯರ್ಥಿ, ನಟಿ ಕಂಗನಾ ಪರ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಬ್ಯಾಟಿಂಗ್‌

    ಬಿಜೆಪಿ ಅಭ್ಯರ್ಥಿ, ನಟಿ ಕಂಗನಾ ಪರ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಬ್ಯಾಟಿಂಗ್‌

    ಜೈಪುರ: ನಟಿ ಹಾಗೂ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೂ ಆಗಿರುವ ಕಂಗನಾ ರಣಾವತ್ (Kangana Ranaut) ಪರ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಬ್ಯಾಟಿಂಗ್‌ ಮಾಡಿದ್ದಾರೆ. ನಟಿ ಕಂಗನಾ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮದ ಅಧ್ಯಕ್ಷೆ ಸುಪ್ರಿಯಾ ಶ್ರೀನಾಥೆ ತಾ (Supriya Shrinate) ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಸಚಿನ್‌ ಪೈಲಟ್‌ (Sachin Pilot) ಅವರು, ಯಾರಾದರೂ ತಪ್ಪು ಮಾಡಿದರೆ, ತಪ್ಪು ಹೇಳಿಕೆಗಳನ್ನು ನೀಡಿದರೆ, ಯಾವುದೇ ಪಕ್ಷದವರಾಗಿದ್ದರೂ ಸರಿ ಅದನ್ನು ನಾವು ಸಹಿಸಲ್ಲ. ರಾಜಕೀಯದಲ್ಲಿ ವಾದ-ಪ್ರತಿವಾದಗಳು ಇರಬೇಕು, ಆದ್ರೆ ಭಾಷೆ ಅಸಂಸದೀಯವಾಗಿರಬಾರದು ಎಂದು ಎಚ್ಚರಿಸಿದ್ದಾರೆ.

    ಇಂತಹ ದೊಡ್ಡ ಚುನಾವಣೆಯಲ್ಲಿ, ನಾವು ಸಮಸ್ಯೆಗಳತ್ತ ಗಮನ ಹರಿಸಬೇಕು. ಮತದಾರರು, ಸಾಮಾನ್ಯ ಜನರಿಗೆ ನೇರವಾಗಿ ಸಂಬಂಧಿಸಿದ ಸಮಸ್ಯೆಗಳನ್ನು ನಾವು ಒತ್ತಿಹೇಳಬೇಕು ಎಂದು ಅವರು ಕರೆ ಕೊಟ್ಟಿದ್ದಾರೆ. ಇದನ್ನೂ ಓದಿ: ಅಕ್ರಮ ಗೋಮಾಂಸ ಮಾರಾಟಕ್ಕೆ 60 ಕ್ಕೂ ಹೆಚ್ಚು ಗೋವುಗಳ ವಧೆ – 10 ಸಾವಿರ ಕೆಜಿ ಗೋಮಾಂಸ ಪೊಲೀಸರ ವಶಕ್ಕೆ

    ಟೀಕಿಸಿದ ಸುಪ್ರಿಯಾಗೆ ಟಿಕೆಟ್‌ ಮಿಸ್‌:
    ನಟಿ ಕಂಗನಾ ರಣಾವತ್ ಕುರಿತು ಆಕ್ಷೇಪಾರ್ಹ ಹೇಳಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮದ ಅಧ್ಯಕ್ಷೆ ಸುಪ್ರಿಯಾ ಶ್ರೀನಾಥೆ ಅವರನ್ನು ಉತ್ತರ ಪ್ರದೇಶದ ಮಹಾರಾಜ್‌ಗಂಜ್ ಕ್ಷೇತ್ರದಿಂದ ಕಣಕ್ಕಿಳಿಸದಿರಲು ಪಕ್ಷವು ನಿರ್ಧರಿಸಿದೆ. ಅವರ ಬದಲಿಗೆ ವೀರೇಂದ್ರ ಚೌಧರಿ ಅವರನ್ನು ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ. ಇದನ್ನೂ ಓದಿ: ದಕ್ಷಿಣ ಆಫ್ರಿಕಾದಲ್ಲಿ ಸೇತುವೆ ಮೇಲಿಂದ ಬಸ್‌ ಬಿದ್ದು  45 ಪ್ರಯಾಣಿಕರು ಸಾವು – 8 ವರ್ಷದ ಬಾಲಕಿ ಸೇಫ್‌

    ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ನಟಿ ಕಂಗನಾ ರಣಾವತ್ ಅವರನ್ನು ಘೋಷಿಸಿದ ನಂತರ ಸುಪ್ರಿಯಾ ಶ್ರೀನಾಥೆ ನೀಡಿದ ವಿವಾದಾತ್ಮಕ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದರು. ಸುಪ್ರಿಯಾ ತಮ್ಮ ಇನ್​​ಸ್ಟಾಗ್ರಾಮ್​​ನಲ್ಲಿ ಕಂಗನಾ ರಣಾವತ್ ಅವರ ಹಾಟ್ ಫೋಟೊವೊಂದನ್ನು ಪೋಸ್ಟ್ ಮಾಡಿ ʻಕ್ಯಾ ಭಾವ್ ಚಲ್ ರಹಾ ಹೈ ಮಂಡಿ ಮೆ ಕೋಯಿ ಬತಾಯೇಗಾ? (ಮಂಡಿಯಲ್ಲಿನ ಏನ್ ರೇಟ್ ಇದೆ ಎಂದು ಯಾರಾದರೂ ಹೇಳುತ್ತೀರಾ?)ʼ ಎಂದು ಬರೆದುಕೊಂಡಿದ್ದರು. ವ್ಯಾಪಕ ಜನಾಕ್ರೋಶದ ನಂತರ ಆ ಪೋಸ್ಟ್ ಡಿಲೀಟ್ ಮಾಡಿದ್ದರು. ಇದರಿಂದ ಬಿಜೆಪಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ದೂರನ್ನೂ ನೀಡಿತ್ತು. ಇದರಿಂದ ಎಚ್ಚೆತ್ತ ಕಾಂಗ್ರೆಸ್‌ ಲೋಕಸಭಾ ಚುನಾವಣಾ ಅಭ್ಯರ್ಥಿಗಳ ಪಟ್ಟಿಯಿಂದ ಸುಪ್ರಿಯಾ ಅವರನ್ನು ಕೈಬಿಟ್ಟಿತು ಎಂದು ಮೂಲಗಳು ತಿಳಿಸಿವೆ.

  • 20 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ – ಸಚಿನ್ ಪೈಲಟ್, ಸಾರಾ ಅಬ್ದುಲ್ಲಾ ವಿಚ್ಛೇದನ

    20 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ – ಸಚಿನ್ ಪೈಲಟ್, ಸಾರಾ ಅಬ್ದುಲ್ಲಾ ವಿಚ್ಛೇದನ

    ಜೈಪುರ: ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ (Sachin Pilot) ಮತ್ತು ಸಾರಾ ಅಬ್ದುಲ್ಲಾ (Sara Abdullah) ಸುಮಾರು 20 ವರ್ಷಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದಾರೆ. ಮುಂಬರುವ ರಾಜಸ್ಥಾನದ ಚುನಾವಣೆಯಲ್ಲಿ (Rajasthan Election) ಸ್ಪರ್ಧಿಸಲು ಪೈಲಟ್ ಅವರು ತಮ್ಮ ನಾಮಪತ್ರವನ್ನು ಸಲ್ಲಿಸಿದ್ದು, ಅದರಲ್ಲಿ ಅವರ ವಿಚ್ಛೇದನ ನೀಡಿರುವ ವಿಷಯ ಬಹಿರಂಗವಾಗಿದೆ.

    ಸಚಿನ್ ಪೈಲಟ್ ಅವರು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ (NC) ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಪುತ್ರಿ ಸಾರಾ ಅಬ್ದುಲ್ಲಾ ಅವರನ್ನು ಮದುವೆಯಾಗಿದ್ದರು. ಇದೀಗ ದಂಪತಿ ಬೇರ್ಪಟ್ಟಿರುವುದು ಮೊದಲ ಬಾರಿಗೆ ಬಹಿರಂಗವಾಗಿದೆ. ಟೋಂಕ್ ಕ್ಷೇತ್ರದಲ್ಲಿ ಸ್ಪರ್ಧಿಸಲು ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಸಂಗಾತಿಯ ವಿವರವನ್ನು ಕೋರಿದ ಅಂಕಣದಲ್ಲಿ ವಿಚ್ಛೇದಿತ ಎಂದು ಉಲ್ಲೇಖಿಸಿದ್ದಾರೆ.

    ಸಚಿನ್ ಪೈಲಟ್ ಮತ್ತು ಸಾರಾ ಅಬ್ದುಲ್ಲಾ 2004 ರಲ್ಲಿ ವಿವಾಹವಾಗಿದ್ದು, ಅವರಿಗೆ ಆರನ್ ಮತ್ತು ವೆಹಾನ್ ಎಂಬ ಇಬ್ಬರು ಗಂಡು ಮಕ್ಕಳಿದ್ದಾರೆ. ಪೈಲಟ್ ತಮ್ಮ ಅಫಿಡವಿಟ್‌ನಲ್ಲಿ ತಮ್ಮ ಇಬ್ಬರೂ ಪುತ್ರರು ತಮ್ಮ ಅವಲಂಬಿತರು ಎಂದು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಕೋವಿಡ್‌ನಿಂದ ಹೆಚ್ಚುತ್ತಿದ್ಯಾ ಹೃದಯಾಘಾತ?- ಹೃದ್ರೋಗ ತಜ್ಞರು ಹೇಳೋದು ಏನು?

    ಕಳೆದ 5 ವರ್ಷಗಳಲ್ಲಿ ಪೈಲಟ್ ಅವರ ಸಂಪತ್ತು ದ್ವಿಗುಣಗೊಂಡಿದೆ. 2018 ರಲ್ಲಿ ಅವರ ಒಟ್ಟು ಆಸ್ತಿಯ ಮೌಲ್ಯ ಸುಮಾರು 3.8 ಕೋಟಿ ರೂ. ಇದ್ದು, 2023ರ ವೇಳೆಗೆ ಅದು 7.5 ಕೋಟಿ ರೂ.ಗಳ ಅಂದಾಜು ಮೌಲ್ಯವನ್ನು ತಲುಪಿದೆ. ನವೆಂಬರ್ 25 ರಂದು ರಾಜಸ್ಥಾನ ವಿಧಾನಸಭೆ ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ: ಪಬ್ಲಿಕ್‌ ಹೀರೋ ಬಾದಾಮಿಯ ಶಿವ ರೆಡ್ಡಿ ವಾಸನ್‌ಗೆ ರಾಜ್ಯೋತ್ಸವ ಪ್ರಶಸ್ತಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಿಎಂ ಸ್ಥಾನ ಬಿಟ್ಟುಕೊಡಲು ಸಿದ್ಧ, ಆದರೆ ಕುರ್ಚಿ ಬಿಡ್ತಿಲ್ಲ: ಅಶೋಕ್ ಗೆಹ್ಲೋಟ್

    ಸಿಎಂ ಸ್ಥಾನ ಬಿಟ್ಟುಕೊಡಲು ಸಿದ್ಧ, ಆದರೆ ಕುರ್ಚಿ ಬಿಡ್ತಿಲ್ಲ: ಅಶೋಕ್ ಗೆಹ್ಲೋಟ್

    ನವದೆಹಲಿ: ಮುಖ್ಯಮಂತ್ರಿ ಉದ್ದೆಯನ್ನು ಬಿಟ್ಟು ಕೊಡಲು ನಾನು ತಯಾರಿದ್ದೇನೆ. ಆದರೆ ನನ್ನನ್ನು ಕುರ್ಚಿ ಬಿಡುತ್ತಿಲ್ಲ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ಹೇಳುವ ಮೂಲಕ ಸಚಿನ್ ಪೈಲಟ್‍ಗೆ (Sachin Pilot) ಟಾಂಗ್ ನೀಡಿದ್ದಾರೆ.

    ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಿಳಾ ಬೆಂಬಲಿಗರೊಬ್ಬರು ತಾನು 4ನೇ ಬಾರಿಗೆ ಮುಖ್ಯಮಂತ್ರಿಯಾಗಬೇಕು ಎಂದು ಬಯಸುವುದಾಗಿ ಹೇಳಿದ್ದರು. ಅದಕ್ಕೆ ನಾನು ಅವರಿಗೆ ಈ ರೀತಿ ಹೇಳಿದೆ. ನಾನು ಮುಖ್ಯಮಂತ್ರಿ ಸ್ಥಾನ ತೊರೆಯಲು ರೆಡಿಯಿದ್ದೇನೆ, ಆದರೆ ಈ ಹುದ್ದೆಯು ನನ್ನನ್ನು ಹೋಗಲು ಬಿಡುತ್ತಿಲ್ಲ ಎಂದು ಹೇಳಿದೆ ಅಂತ ತಿಳಿಸಿದರು.

    ಪಕ್ಷ ನನ್ನಲ್ಲಿರುವ ವಿಶೇಷತೆಗಳನ್ನು ಗುರುತಿಸಿ ಮೂರು ಬಾರಿ ರಾಜ್ಯವನ್ನು ಮುನ್ನಡೆಸಲು ಅವಕಾಶ ಮಾಡಿಕೊಟ್ಟಿದೆ. ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರ ಎಲ್ಲರಿಗೂ ಒಪ್ಪಿಗೆಯಾಗುತ್ತದೆ. ಬಿಜೆಪಿ ಕುತಂತ್ರ ರಾಜಕಾರಣದಿಂದಾಗಿ ಕಾಂಗ್ರೆಸ್‍ನಲ್ಲಿ ಒಳಜಗಳವಾಗುತ್ತಿದೆ ಹೊರತು ಬೇರೇನಿಲ್ಲ. ಕಾಂಗ್ರೆಸ್‍ನಲ್ಲಿ (Congress) ಒಗ್ಗಟ್ಟಿದ್ದು, ಅದನ್ನು ಮುರಿಯಲು ಯಾರಿಂದಲೂ ಸಾಧ್ಯವಿಲ್ಲ. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಅದು ಸಾಬೀತಾಗಲಿದೆ ಎಂದು ಹೇಳಿದರು. ಇದನ್ನೂ ಓದಿ: ದೇವೇಗೌಡರು ನನ್ನ ತಂದೆ ಸಮಾನ ಅಂದುಕೊಂಡಿದ್ದೆ, ನನ್ನನ್ನ ಕೆಣಕಿದ್ದೀರಿ ಪರಿಣಾಮ ಕಾದು ನೋಡಿ: ಇಬ್ರಾಹಿಂ ಎಚ್ಚರಿಕೆ

    ಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದಂತೆ ಅಶೋಕ್ ಗೆಹ್ಲೋಟ್ ಹಾಗೂ ಸಚಿನ್ ಪೈಲಟ್ ನಡುವೆ ಮುಸುಕಿನ ಗುದ್ದಾಟ ನಡೆದಿತ್ತು. ಈ ಗುದ್ದಾಟವು ಬಹುತೇಕ ರಾಜಸ್ಥಾನ ಸರ್ಕಾರವನ್ನು ಉರುಳಿಸುವ ಹಂತಕ್ಕೆ ಬಂದಿತ್ತು. ಈ ವೇಳೆ ಹೈಕಮಾಂಡ್ ಮಧ್ಯಪ್ರವೇಶ ಮಾಡಿದ್ದರಿಂದ ಸರ್ಕಾರ ಉಳಿದುಕೊಂಡಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 4ರ ಬಾಲಕಿ ಮೇಲೆ ಅತ್ಯಾಚಾರ: ಇದು ಮಾನವೀಯತೆ ಮೀರಿದ ಕ್ರೌರ್ಯ, ಕಾಮುಕರಿಗೆ ಕ್ಷಮೆಯಿಲ್ಲವೆಂದ ಸಚಿನ್‌ ಪೈಲಟ್‌

    4ರ ಬಾಲಕಿ ಮೇಲೆ ಅತ್ಯಾಚಾರ: ಇದು ಮಾನವೀಯತೆ ಮೀರಿದ ಕ್ರೌರ್ಯ, ಕಾಮುಕರಿಗೆ ಕ್ಷಮೆಯಿಲ್ಲವೆಂದ ಸಚಿನ್‌ ಪೈಲಟ್‌

    ಜೈಪುರ: ರಾಜಸ್ಥಾನದ ಬಿಲ್ವಾರದಲ್ಲಿ (Bhilwara) ಇತ್ತೀಚೆಗೆ ಬಾಲಕಿ ಮೇಲೆ ನಡೆದ ಅತ್ಯಾಚಾರ ಪ್ರಕರಣ ಭಾರೀ ಸಂಚಲನ ಸೃಷ್ಟಿಸಿದೆ. ಅತ್ಯಾಚಾರ ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್‌ ನಾಯಕ ಸಚಿನ್‌ ಪೈಲಟ್‌ (Sachin Pilot) ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

    ಬಿಲ್ವಾರಾದಲ್ಲಿ ಸಂತ್ರಸ್ತ ಕುಟುಂಬವನ್ನ ಭೇಟಿ ಮಾಡಿದ ಸಚಿನ್‌ ಪೈಲಟ್‌ ಸುದ್ದಿಗಾರರೊಂದಿಗೆ ಮಾತನಾಡಿ, ಅಪ್ರಾಪ್ತ ಬಾಲಕಿಯ ಮೇಲೆ ಈ ರೀತಿ ಕ್ರೌರ್ಯ ಮೆರೆದಿರುವುದನ್ನ ಯಾವುದೇ ನಾಗರಿಕ ಸಮಾಜ ಸಹಿಸಲು ಸಾಧ್ಯವಿಲ್ಲ. ಕೃತ್ಯ ಎಸಗಿದ ಕಿಡಿಗೇಡಿಗಳು ಮಾನವೀಯತೆಯ ಎಲ್ಲಾ ಮಿತಿಗಳನ್ನ ದಾಟಿದ್ದಾರೆ. ಅವರಿಗೆ ಯಾವುದೇ ಕಾರಣಕ್ಕೂ ಕ್ಷಮೆ ಎಂಬುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

    ನಾನು ಸಂತ್ರಸ್ತ ಕುಟುಂಬವನ್ನ ಭೇಟಿ ಮಾಡಿದ್ದೇನೆ. ಕೃತ್ಯದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನ ಬಂಧಿಸಲಾಗಿದೆ. ಇಬ್ಬರೂ ಅಪ್ರಾಪ್ತರನ್ನೂ ವಶಕ್ಕೆ ಪಡೆಯಲಾಗಿದೆ. ನ್ಯಾಯಾಲಯದಲ್ಲೂ ಈ ಬಗ್ಗೆ ವಿಚಾರಣೆ ನಡೆಯುತ್ತಿದೆ. ಸರ್ಕಾರ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಅತ್ಯಾಚಾರ ಆರೋಪಿಗಳಿಗೆ ಸರ್ಕಾರಿ ಉದ್ಯೋಗ ಕಟ್: ಅಶೋಕ್ ಗೆಹ್ಲೋಟ್

    ಇದೇ ಆಗಸ್ಟ್‌ 6 ರಂದು ಬಿಜೆಪಿ (BJP) ಮಹಿಳಾ ಸಂಸದೆ ಸೇರಿದಂತೆ ನಾಲ್ವರು ಸದಸ್ಯರನ್ನೊಳಗೊಂಡ ತಂಡ ಸಂತ್ರಸ್ತ ಕುಟುಂಬವನ್ನ ಭೇಟಿ ಮಾಡಿತ್ತು.  

    ಏನಿದು ಘಟನೆ..? 
    ಇದೇ ಆಗಸ್ಟ್ 2ರಂದು ಬಿಲ್ವಾರ ಜಿಲ್ಲೆಯಲ್ಲಿ 4 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿತ್ತು. ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಕಿಡಿಗೇಡಿಗಳು ಬಳಿಕ ಕಲ್ಲಿದ್ದಲು ಕುಲುಮೆಯಲ್ಲಿ ಸುಟ್ಟು ಹಾಕಿದ್ದರು. ತನಿಖೆಯಲ್ಲಿದ್ದ ಪೊಲೀಸರಿಗೆ ಕುಲುಮೆ ಬಳಿ ಬಾಲಕಿಯ ಬಟ್ಟೆ ಪತ್ತೆಯಾದ ನಂತರ ಪ್ರಕರಣ ಬೆಳಕಿಗೆ ಬಂದಿತ್ತು. ಈ ಪ್ರಕರಣ ಸಂಬಂಧ ಓರ್ವ ಮಹಿಳೆ ಸೇರಿ 7 ಜನರನ್ನ ಬಂಧಿಸಲಾಗಿದೆ. ಇದನ್ನೂ ಓದಿ: ಏಕರೂಪ ನಾಗರಿಕ ಸಂಹಿತೆಯನ್ನು ವಿರೋಧಿಸಿ ಕೇರಳ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗೆಹ್ಲೋಟ್ ಸರ್ಕಾರದ ವಿರುದ್ಧ ಸಚಿನ್ ಪೈಲಟ್ ಉಪವಾಸ ಸತ್ಯಾಗ್ರಹ – ಕಾಂಗ್ರೆಸ್ ಖಂಡನೆ

    ಗೆಹ್ಲೋಟ್ ಸರ್ಕಾರದ ವಿರುದ್ಧ ಸಚಿನ್ ಪೈಲಟ್ ಉಪವಾಸ ಸತ್ಯಾಗ್ರಹ – ಕಾಂಗ್ರೆಸ್ ಖಂಡನೆ

    ಜೈಪುರ: ಕಾಂಗ್ರೆಸ್ (Congress) ನಾಯಕ ಸಚಿನ್ ಪೈಲಟ್ (Sachin Pilot) ಮಂಗಳವಾರ ಜೈಪುರದಲ್ಲಿ (Jaipur) ಗೆಹ್ಲೋಟ್ ಸರ್ಕಾರವನ್ನು ಗುರಿಯಾಗಿಸಿಟ್ಟುಕೊಂಡು ಉಪವಾಸ ಸತ್ಯಾಗ್ರವನ್ನು (Fasting) ಪ್ರಾರಂಭಿಸಿದ್ದಾರೆ.

    ಬಿಜೆಪಿ ನಾಯಕಿ ಹಾಗೂ ಹಿಂದಿನ ಮುಖ್ಯಮಂತ್ರಿ ವಸುಂಧರಾ ರಾಜೇ ವಿರುದ್ಧ ಮಾಡಲಾಗಿರುವ ಭ್ರಷ್ಟಾಚಾರ ಆರೋಪಗಳ ಬಗ್ಗೆ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಸಚಿನ್ ಪೈಲಟ್ ಭಾನುವಾರ ಏಪ್ರಿಲ್ 11 ರಂದು 1 ದಿನದ ಉಪವಾಸ ಸತ್ಯಾಗ್ರಹವನ್ನು ನಡೆಸುವುದಾಗಿ ತಿಳಿಸಿದ್ದರು.

    ಸಚಿನ್ ಪೈಲಟ್ ಪಕ್ಷ ವಿರೋಧಿ ನಡೆಯನ್ನು ತೋರಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಹೇಳಿದ್ದು, ಉಪವಾಸ ಸತ್ಯಾಗ್ರಹವನ್ನು ಮಾಡದಂತೆ ಸೋಮವಾರ ಎಚ್ಚರಿಕೆಯನ್ನೂ ನೀಡಿತ್ತು. ಆದರೂ ಸಚಿನ್ ಪೈಲಟ್ ಜೈಪುರದ ಶಹೀದ್ ಸ್ಮಾರಕ ಸ್ಥಳದಲ್ಲಿ ಕುಳಿತುಕೊಂಡು ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ (Ashok Gehlot) ಅವರ ವಿರುದ್ಧ ಉಪವಾಸ ಸತ್ಯಾಗ್ರಹವನ್ನು ನಡೆಸುತ್ತಿದ್ದಾರೆ. ಇದನ್ನೂ ಓದಿ: Public TV Explainer – ಮೋದಿಯನ್ನು ಫಾಲೋ ಮಾಡಿದ ಮಸ್ಕ್‌: ಟೆಸ್ಲಾ ಕಾರು ಇನ್ನೂ ಭಾರತಕ್ಕೆ ಬಂದಿಲ್ಲ ಯಾಕೆ?

    2018ರಲ್ಲಿ ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಮುಖ್ಯಮಂತ್ರಿ ಪದವಿಗೆ ಸಂಬಂಧಿಸಿದಂತೆ ಗೆಹ್ಲೋಟ್ ಹಾಗೂ ಪೈಲಟ್ ನಡುವೆ ಭಿನ್ನಾಭಿಪ್ರಾಯಗಳು ಎದ್ದಿವೆ. ರಾಜ್ಯದಲ್ಲಿ ನಾಯಕತ್ವ ಬದಲಾಗಬೇಕು ಎಂದು 2022ರ ಜುಲೈನಲ್ಲಿ ಆಗ್ರಹಿಸಿ ಪೈಲಟ್ ಹಾಗೂ ಅವರ ಬೆಂಬಲಿಗ 18 ಶಾಸಕರು ಬಹಿರಂಗವಾಗಿಯೇ ಬಂಡಾಯವೆದ್ದಿದ್ದರು. ಇದು ರಾಜ್ಯದಲ್ಲಿ 1 ತಿಂಗಳ ಕಾಲ ರಾಜಕೀಯ ಬಿಕ್ಕಟ್ಟಿಗೆ ಕಾರಣವಾಗಿತ್ತು.

    ಪೈಲಟ್ ವಿರುದ್ಧ ವಾಗ್ದಾಳಿ ನಡೆಸಿದ್ದ ಗೆಹ್ಲೋಟ್, ನನ್ನ ಸರ್ಕಾರ ಉರುಳಿಸಲು ಪೈಲಟ್ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿದ್ದರು. ಕೆಲ ತಿಂಗಳುಗಳ ಹಿಂದೆಯೂ ಪೈಲಟ್ ನಂಬಿಕೆ ದ್ರೋಹಿ ಎಂದು ಗೆಹ್ಲೋಟ್ ಹೇಳಿಕೆ ನೀಡಿದ್ದರು. ಇದನ್ನೂ ಓದಿ: ನಂದಿನಿ ಹಾಲು ಖರೀದಿ ಮಾಡಿ ಹಂಚಿದ್ದ ಡಿಕೆಶಿಗೆ ನೀತಿ ಸಂಹಿತೆ ಉಲ್ಲಂಘನೆಯ ಬಿಸಿ

  • ಗೆಹ್ಲೋಟ್‌ ಹೊಗಳಿದ ಮೋದಿ – ಲಘುವಾಗಿ ಪರಿಗಣಿಸಬಾರದು ಎಂದು ಎಚ್ಚರಿಸಿದ ಪೈಲಟ್‌

    ಗೆಹ್ಲೋಟ್‌ ಹೊಗಳಿದ ಮೋದಿ – ಲಘುವಾಗಿ ಪರಿಗಣಿಸಬಾರದು ಎಂದು ಎಚ್ಚರಿಸಿದ ಪೈಲಟ್‌

    ಜೈಪುರ: ಕಾರ್ಯಕ್ರಮವೊಂದರಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ (Ashok Gehlot) ಅವರನ್ನು ಹೊಗಳಿರುವುದಕ್ಕೆ ಕಾಂಗ್ರೆಸ್‌ (Congress) ನಾಯಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಸಚಿನ್‌ ಪೈಲಟ್‌ (Sachin Pilot) ಅಚ್ಚರಿ ವ್ಯಕ್ತಪಡಿಸಿದ್ದಾರೆ. ಈ ಬೆಳವಣಿಗೆಯನ್ನು ಲಘುವಾಗಿ ಪರಿಗಣಿಸಬಾರದು ಎಂದು ಪಕ್ಷದ ಹಿರಿಯ ನಾಯಕರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

    ಪ್ರಧಾನಿ ಅವರು ಸಂಸತ್ತಿನಲ್ಲಿ ಗುಲಾಂ ನಬಿ ಆಜಾದ್ (Ghulam Nabi Azad) ಅವರನ್ನು ಇದೇ ರೀತಿ ಹೊಗಳಿದ್ದರು. ಅದರ ನಂತರ ಏನಾಯಿತು ಎಂದು ನಾವು ನೋಡಿದ್ದೇವೆ ಎಂದು ಪೈಲಟ್ ಮಾರ್ಮಿಕವಾಗಿ ನುಡಿದಿದ್ದಾರೆ. ಇದನ್ನೂ ಓದಿ: ಬಿಜೆಪಿ ಮಾಜಿ ಸಂಸದ ಚೌಹಾಣ್‌ ಕಾಂಗ್ರೆಸ್‌ ಸೇರ್ಪಡೆ

    ಸುದ್ದಿಗಾರರೊಂದಿಗೆ ಮಾತನಾಡಿದ ಸಚಿನ್ ಪೈಲಟ್, ಪ್ರಧಾನಿ ನರೇಂದ್ರ ಮೋದಿ ಅವರು ಮಂಗರ್ ಧಾಮಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನಾವೆಲ್ಲರೂ ಕಣ್ಣಾರೆ ಕಂಡಿದ್ದೇವೆ. ಈ ಹಿಂದೆ ರಾಜ್ಯಸಭೆಯಲ್ಲಿಯೂ ಮಾಜಿ ಸಂಸದ ಗುಲಾಂ ನಬಿ ಅವರನ್ನು ಪ್ರಧಾನಿ ಹೊಗಳಿದ್ದರು. ಆಜಾದ್ ಅವರು ಪಕ್ಷ ತೊರೆದ ದಿನ, ನಂತರ ಏನಾಯಿತು ಎಂಬುದು ಎಲ್ಲರಿಗೂ ತಿಳಿದಿದೆ. ನಿನ್ನೆ ನಡೆದದ್ದು ಕೂಡ ಆಸಕ್ತಿದಾಯಕ ಬೆಳವಣಿಗೆಯಾಗಿದ್ದು, ಅದನ್ನು ಲಘುವಾಗಿ ಪರಿಗಣಿಸಬಾರದು ಎಂದು ತಿಳಿಸಿದ್ದಾರೆ.

    ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ರಾಜಸ್ಥಾನದ ಮಂಗರ್ ಧಾಮಕ್ಕೆ ಭೇಟಿ ನೀಡಿದರು. ಇದೇ ವೇಳೆ ಸರ್ಕಾರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು. ಇದನ್ನೂ ಓದಿ: ರಷ್ಯಾ ಈಗ ಭಾರತದ ಅತಿ ದೊಡ್ಡ ತೈಲ ಪೂರೈಕೆದಾರ ದೇಶ

    ಸಮಾರಂಭದಲ್ಲಿ ಗೆಹ್ಲೋಟ್ ತಮ್ಮ ಭಾಷಣದಲ್ಲಿ, ಪ್ರಧಾನಿ ಮೋದಿ ವಿದೇಶಕ್ಕೆ ಹೋದಾಗ, ಪ್ರಜಾಪ್ರಭುತ್ವ ಆಳವಾಗಿ ಬೇರೂರಿರುವ ಗಾಂಧಿ ರಾಷ್ಟ್ರದ ಪ್ರಧಾನಿಯಾಗಿರುವುದರಿಂದ ಅವರಿಗೆ ಹೆಚ್ಚಿನ ಗೌರವ ಸಿಗುತ್ತದೆ. ಜಗತ್ತು ಇದನ್ನು ಅರಿತುಕೊಂಡಾಗ ಆ ದೇಶದ ಪ್ರಧಾನಿ ಎಂದು ಅವರು ಹೆಮ್ಮೆಪಡುತ್ತಾರೆ ಎಂದು ಬಣ್ಣಿಸಿದ್ದರು.

    ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಗುಜರಾತ್ ಮುಖ್ಯಮಂತ್ರಿಯಾಗಿದ್ದ ದಿನಗಳನ್ನು ನೆನಪಿಸಿಕೊಂಡರು. ಅಶೋಕ್ ಗೆಹ್ಲೋಟ್ ಜಿ ಮತ್ತು ನಾನು ಒಟ್ಟಿಗೆ ಸಿಎಂ ಆಗಿ ಕೆಲಸ ಮಾಡಿದ್ದೇವೆ. ಅವರು ನಮ್ಮ ಸಿಎಂಗಳಲ್ಲಿ ಅತ್ಯಂತ ಹಿರಿಯರಾಗಿದ್ದರು. ಈಗಲೂ ಸಹ ಅವರು ಅತ್ಯಂತ ಹಿರಿಯ ಸಿಎಂಗಳಲ್ಲಿ ಒಬ್ಬರು ಹಾಡಿಹೊಗಳಿದ್ದರು. ಇದನ್ನೂ ಓದಿ: 4 ದಿನದ ಛತ್ ಪೂಜೆಯಲ್ಲಿ 53 ಜನ ಸಾವು- ಆರ್ಥಿಕ ನೆರವು ಘೋಷಿಸಿದ ನಿತೀಶ್ ಕುಮಾರ್

    ಈ ಬೆಳವಣಿಗೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿನ್‌ ಪೈಲಟ್‌, ಶಿಸ್ತಿನ ವಿರುದ್ಧ ನಡೆದುಕೊಳ್ಳುವವರ ಮೇಲೆ ಕ್ರಮ ತೆಗೆದುಕೊಳ್ಳುವ ಸಮಯ ಬಂದಿದೆ. ರಾಜಸ್ಥಾನದ ತಪ್ಪಿತಸ್ಥ ಶಾಸಕರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

    ರಾಜಸ್ಥಾನಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 25 ರಂದು ಕರೆಯಲಾದ ಸಿಎಲ್‌ಪಿ ಸಭೆಯನ್ನು ನಡೆಸಲಾಗಲಿಲ್ಲ. ಎಐಸಿಸಿ ಇದನ್ನು ಅಶಿಸ್ತಿನ ವಿಷಯವೆಂದು ಪರಿಗಣಿಸಿದೆ. ನಿಯಮಗಳು ಎಲ್ಲರಿಗೂ ಒಂದೇ. ಆದ್ದರಿಂದ ಅಶಿಸ್ತು ತೋರಿದರೆ ಕ್ರಮ ತೆಗೆದುಕೊಳ್ಳಬೇಕು. ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ನಾನು ನಂಬುತ್ತೇನೆ. ನೋಟಿಸ್ ಜಾರಿ ಮಾಡಿರುವ ಶಾಸಕರಿಗೆ ಉತ್ತರ ನೀಡುವಂತೆ ತಿಳಿಸಬೇಕು. ಕಾಂಗ್ರೆಸ್ ಹಳೇ ಪಕ್ಷ. ಅಶಿಸ್ತು ವಿರುದ್ಧ ಕ್ರಮ ಕೈಗೊಳ್ಳುವಂತೆ ನೂತನ ಅಧ್ಯಕ್ಷರಿಗೆ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಾಜಸ್ಥಾನ ಕಾಂಗ್ರೆಸ್‍ನಲ್ಲಿ ರಾಜಕೀಯ ಬಿಕ್ಕಟ್ಟು – ಅಧಿಕಾರ ಹಿಡಿಯುತ್ತಾ ಬಿಜೆಪಿ?

    ರಾಜಸ್ಥಾನ ಕಾಂಗ್ರೆಸ್‍ನಲ್ಲಿ ರಾಜಕೀಯ ಬಿಕ್ಕಟ್ಟು – ಅಧಿಕಾರ ಹಿಡಿಯುತ್ತಾ ಬಿಜೆಪಿ?

    ಜೈಪುರ: ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot) ಕಾಂಗ್ರೆಸ್‍ನ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಲು ಮಂದಾಗುತ್ತಿದ್ದಂತೆ ರಾಜಸ್ಥಾನದಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ಶಾಸಕರ (MLAs) ಜೊತೆ ಸಂಧಾನ ಮಾತುಕತೆ ನಡೆಸಲು ಮುಂದಾಗಿದ್ದ ಕಾಂಗ್ರೆಸ್ ಹಿರಿಯ ನಾಯಕರು ಮರಳಿ ದೆಹಲಿಗೆ ವಾಪಸ್ ಆಗಿದ್ದಾರೆ. ಈ ಹೈಡ್ರಾಮಾದ ನಡುವೆ ರಾಜಸ್ಥಾನದಲ್ಲೂ ಬಿಜೆಪಿ (BJP) ಸರ್ಕಾರ ರಚಿಸಲು ಅವಕಾಶವೊಂದು ಕೂಡಿಬಂದಿದೆ.

    ಈ ಎಐಸಿಸಿ (AICC) ಅಧ್ಯಕ್ಷ ಹುದ್ದೆಗೆ ಗೆಹ್ಲೋಟ್ ಸ್ಪರ್ಧಿಸುತ್ತಿರುವ ಕಾರಣ ಮತ್ತು ಕಾಂಗ್ರೆಸ್‍ನಲ್ಲಿ ಒಬ್ಬರಿಗೆ ಒಂದೇ ಹುದ್ದೆ ನೀತಿ ಅನ್ವಯ ಸಿಎಂ ಹುದ್ದೆ ತ್ಯಜಿಸಲು ಗೆಹ್ಲೋಟ್ ಮುಂದಾಗಿದ್ದಾರೆ. ಗೆಹ್ಲೋಟ್ ಕಾಂಗ್ರೆಸ್ ಮುಖ್ಯಸ್ಥರಾಗಿ ಆಯ್ಕೆಯಾದರೆ ರಾಜಸ್ಥಾನದ ಮುಂದಿನ ಮುಖ್ಯಮಂತ್ರಿ ಸ್ಥಾನವನ್ನು ಹೊಸ ತಲೆಮಾರಿನವರಿಗೆ ಕೊಡಬೇಕೆಂದು ಹೇಳಿದ್ದರು. ಈ ಕಾರಣಕ್ಕೆ ಸಚಿನ್ ಪೈಲಟ್‍ಗೆ (Sachin Pilot) ಸಿಎಂ ಪಟ್ಟ ಸಿಗುವ ಸಾಧ್ಯತೆ ಇತ್ತು. ಜೊತೆಗೆ ಪೈಲಟ್ ಆಯ್ಕೆಗೆ ಹೈಕಮಾಂಡ್ ಕೂಡ ಒಲವು ತೋರಿತ್ತು. ಆದರೆ ಇದಕ್ಕೆ ವಿರೋಧ ವ್ಯಕ್ತವಾಗಿದ್ದು, ಗೆಹ್ಲೋಟ್ ಬಣದ ಶಾಸಕರು ಹೈಡ್ರಾಮಾ ನಡೆಸಿದ್ದಾರೆ. ಸಚಿನ್ ಪೈಲಟ್ ಅವರಿಗೆ ಸಿಎಂ ಸ್ಥಾನವನ್ನು ನೀಡುವ ಬದಲು ನಮ್ಮಲ್ಲಿಯೇ ಯಾರಾದರೂ ಅನುಭವಿ ರಾಜಕಾರಣಿಗಳಿಗೆ ಸಿಎಂ ಸ್ಥಾನ ನೀಡಿ ಎಂದು ಪಟ್ಟುಹಿಡಿದು ಗೆಹ್ಲೋಟ್ ಬಣದ 90 ಶಾಸಕರು ರಾಜೀನಾಮೆ ನೀಡುವ ಬೆದರಿಕೆ ಹಾಕಿದ್ದಾರೆ. ಇದನ್ನೂ ಓದಿ: ರಾಜಸ್ಥಾನದಲ್ಲಿ ಕಾಂಗ್ರೆಸ್ ಹೈಡ್ರಾಮಾ – ಗೆಹ್ಲೋಟ್ ಬಣದ 90ಕ್ಕೂ ಹೆಚ್ಚು ಶಾಸಕರಿಂದ ರಾಜೀನಾಮೆ ಎಚ್ಚರಿಕೆ

    ಪೈಲಟ್‍ಗೆ ಸಿಎಂ ಪಟ್ಟಕ್ಕೆ ಗೆಹೋಟ್ ಬಣ ವಿರೋಧ ವ್ಯಕ್ತಪಡಿಸಿದ್ದು, ಈಗಾಗಲೇ ನಿನ್ನೆಯಿಂದ ರಾಜಕೀಯ ಹೈಡ್ರಾಮಾ ನಡೆಯುತ್ತಿದೆ. ಗೆಹ್ಲೋಟ್ ಬಣದ 90 ಶಾಸಕರ ರಾಜೀನಾಮೆ ಬೆದರಿಕೆ ಹಾಕಿದ್ದು, ಕಾಂಗ್ರೆಸ್ ಶಾಸಕಾಂಗ ಸಭೆಗೂ ಗೈರಾಗಿದ್ದಾರೆ. ಭಾರೀ ಹೈಡ್ರಾಮಾದ ನಡುವೆಯೆ ಶಾಸಕರು ಕಾಂಗ್ರೆಸ್ ತೊರೆಯುವುದಾಗಿಯೂ ಹೈಕಮಾಂಡ್‍ಗೆ ಎಚ್ಚರಿಕೆ ನೀಡಿದ್ದಾರೆ. ಈ ನಡುವೆ ಕಾಂಗ್ರೆಸ್ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ಅಜಯ್ ಮಾಕೇನ್ ಡ್ಯಾಮೇಜ್ ಕಂಟ್ರೋಲ್‍ಗೆ ಬಂದಿದ್ದರು. ಆದರೆ ಈ ವೇಳೆ ಬಂಡಾಯ ಶಾಸಕರು ಮಾತುಕತೆಗೆ ಒಪ್ಪಿಲ್ಲ. ಮಾತುಕತೆಗೆ ಒಪ್ಪದ ಹಿನ್ನೆಲೆ ಖರ್ಗೆ, ಮಾಕೇನ್ ದೆಹಲಿಗೆ ವಾಪಸ್ ಆಗಿದ್ದು, ಇಂದು ವರಿಷ್ಠೆ ಸೋನಿಯಾಗಾಂಧಿ (Sonia Gandhi) ಭೇಟಿಯಾಗಿ ವರದಿ ಸಲ್ಲಿಕೆ ಮಾಡಲಿದ್ದಾರೆ. ಇದನ್ನೂ ಓದಿ: ಐಸಿಸ್ ಜೊತೆ ಸಂಪರ್ಕದ ಶಂಕೆ, ಮತ್ತೊಬ್ಬನ ಬಂಧನ – ಗಂಗಾವತಿಯಲ್ಲಿ ಖಾಕಿ ಕಣ್ಗಾವಲು

    ಮುಂದೇನು?
    ರಾಜಸ್ಥಾನದಲ್ಲಿ ಅಸೆಂಬ್ಲಿ ಹಾಲಿ ಸಂಖ್ಯಾ ಬಲ 200. ಬಹುಮತಕ್ಕೆ 101 ಶಾಸಕರ ಬಲ ಬೇಕು. 100 ಶಾಸಕರಿರುವ ರಾಜಸ್ಥಾನ ಕಾಂಗ್ರೆಸ್‍ಗೆ 6 ಬಿಎಸ್‍ಪಿ, 13 ಪಕ್ಷೇತರರ ಬೆಂಬಲ ನೀಡಿ ಸರ್ಕಾರ ರಚನೆಯಾಗಿತ್ತು. ಇದೀಗ ಗೆಹ್ಲೋಟ್ ಬಣದ 92 ಶಾಸಕರು ರಾಜೀನಾಮೆ ನೀಡಿದರೆ ಕಾಂಗ್ರೆಸ್ ಬಲ 8ಕ್ಕೆ ಕುಸಿತ ಕಾಣಲಿದೆ. ಆಗ ಸದನದ ಬಲ 108ಕ್ಕೆ ಇಳಿಕೆಯಾಗುತ್ತದೆ. ಬಹುಮತಕ್ಕೆ 55 ಸಂಖ್ಯಾ ಬಲವಾಗಿರುತ್ತದೆ. ಹಾಗಾದಲ್ಲಿ 70 ಶಾಸಕರಿರುವ ಬಿಜೆಪಿಗೆ ಅಧಿಕಾರಕ್ಕೇರುವ ಅವಕಾಶ ಇದೆ.

    Live Tv
    [brid partner=56869869 player=32851 video=960834 autoplay=true]

  • ರಾಜಸ್ಥಾನದಲ್ಲಿ ಕಾಂಗ್ರೆಸ್ ಹೈಡ್ರಾಮಾ – ಗೆಹ್ಲೋಟ್ ಬಣದ 90ಕ್ಕೂ ಹೆಚ್ಚು ಶಾಸಕರಿಂದ ರಾಜೀನಾಮೆ ಎಚ್ಚರಿಕೆ

    ರಾಜಸ್ಥಾನದಲ್ಲಿ ಕಾಂಗ್ರೆಸ್ ಹೈಡ್ರಾಮಾ – ಗೆಹ್ಲೋಟ್ ಬಣದ 90ಕ್ಕೂ ಹೆಚ್ಚು ಶಾಸಕರಿಂದ ರಾಜೀನಾಮೆ ಎಚ್ಚರಿಕೆ

    ಜೈಪುರ: ರಾಜಸ್ಥಾನದ ಮುಖ್ಯಮಂತ್ರಿ (Rajasthan CM) ಅಶೋಕ್ ಗೆಹ್ಲೋಟ್ (Ashok Gehlot) ಅವರು ಕಾಂಗ್ರೆಸ್‌ನ ಅಧ್ಯಕ್ಷೀಯ ಚುನಾವಣೆಗೆ ನಿಲ್ಲುವುದಾಗಿ ತಿಳಿಸಿರುವುದರೊಂದಿಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಬಗ್ಗೆಯೂ ಸುಳಿವು ನೀಡಿದ್ದಾರೆ. ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಪಕ್ಷದಲ್ಲಿ ಭಾರೀ ಬಿಕ್ಕಟ್ಟು ಉಂಟಾಗಿದ್ದು, ಗೆಹ್ಲೋಟ್ ಬಣದ 90ಕ್ಕೂ ಹೆಚ್ಚು ಶಾಸಕರು (MLA) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೈಡ್ರಾಮಾ ಪ್ರಾರಂಭಿಸಿದ್ದಾರೆ.

    ಅಶೋಕ್ ಗೆಹ್ಲೋಟ್ ಅವರು ಕಾಂಗ್ರೆಸ್ ಮುಖ್ಯಸ್ಥರಾಗಿ ಆಯ್ಕೆಯಾದರೆ ರಾಜಸ್ಥಾನದ ಮುಂದಿನ ಮುಖ್ಯಮಂತ್ರಿ ಸ್ಥಾನವನ್ನು ಹೊಸ ತಲೆಮಾರಿನವರಿಗೆ ಕೊಡಬೇಕೆಂದು ಹೇಳಿದ್ದರು. ಈ ಕಾರಣಕ್ಕೆ ಸಚಿನ್ ಪೈಲಟ್ (Sachin Pilot) ಅವರಿಗೆ ಸಿಎಂ ಪಟ್ಟ ಸಿಗುವ ಸಾಧ್ಯತೆ ಇತ್ತು.

    ಇದನ್ನೂ ಓದಿ: ಹೊಸ ತಲೆಮಾರಿಗೆ ಅವಕಾಶ ಸಿಗಬೇಕು: ಸಿಎಂ ಸ್ಥಾನಕ್ಕೆ ರಾಜೀನಾಮೆ ಸುಳಿವು ನೀಡಿದ ಗೆಹ್ಲೋಟ್‌?

    ಸಚಿನ್ ಪೈಲಟ್ ಅವರಿಗೆ ಸಿಎಂ ಸ್ಥಾನ ನೀಡುವುದನ್ನು ಧಿಕ್ಕರಿಸಿ ಇದೀಗ ಗೆಹ್ಲೋಟ್ ಬಣದ ಶಾಸಕರು ಹೈಡ್ರಾಮಾ ನಡೆಸಿದ್ದಾರೆ. ಸಚಿನ್ ಪೈಲಟ್ ಅವರಿಗೆ ಸಿಎಂ ಸ್ಥಾನವನ್ನು ನೀಡುವ ಬದಲು ನಮ್ಮಲ್ಲಿಯೇ ಯಾರಾದರೂ ಅನುಭವಿ ರಾಜಕಾರಣಿಗಳಿಗೆ ಸಿಎಂ ಸ್ಥಾನ ನೀಡಿ ಎಂದು ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಇದಾಗದೇ ಹೋದಲ್ಲಿ ಹಲವು ಶಾಸಕರು ಕಾಂಗ್ರೆಸ್ ತೊರೆಯುವುದಾಗಿಯೂ ಹೈಕಮಾಂಡ್‌ಗೆ ಎಚ್ಚರಿಕೆ ನೀಡಿದ್ದಾರೆ.

    ರಾಜಸ್ಥಾನದ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆ ನಡೆಸಲು ನಿರ್ಣಾಯಕ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯನ್ನು ಹೈಕಮಾಂಡ್ ಕರೆಸಿತ್ತು. ಆದರೆ ಇದೀಗ ಶಾಸಕರು ನಡೆಸುತ್ತಿರುವ ಹೈಡ್ರಾಮಾದ ಹಿನ್ನೆಲೆ ಸಭೆಯನ್ನೇ ರದ್ದುಗೊಳಿಸಲಾಗಿದೆ. ಇದನ್ನೂ ಓದಿ: 108 ಅಂಬುಲೆನ್ಸ್ ಕರೆ ಸ್ವೀಕಾರ ಸೇವೆ ಪುನರಾರಂಭಗೊಂಡಿದೆ: ಆರೋಗ್ಯ ಇಲಾಖೆ ಸ್ಪಷ್ಟನೆ

    Live Tv
    [brid partner=56869869 player=32851 video=960834 autoplay=true]

  • ಹೊಸ ತಲೆಮಾರಿಗೆ ಅವಕಾಶ ಸಿಗಬೇಕು: ಸಿಎಂ ಸ್ಥಾನಕ್ಕೆ ರಾಜೀನಾಮೆ ಸುಳಿವು ನೀಡಿದ ಗೆಹ್ಲೋಟ್‌?

    ಹೊಸ ತಲೆಮಾರಿಗೆ ಅವಕಾಶ ಸಿಗಬೇಕು: ಸಿಎಂ ಸ್ಥಾನಕ್ಕೆ ರಾಜೀನಾಮೆ ಸುಳಿವು ನೀಡಿದ ಗೆಹ್ಲೋಟ್‌?

    ಜೈಪುರ: ರಾಜ್ಯದಲ್ಲಿ ಪಕ್ಷ ಹಾಗೂ ಸರ್ಕಾರವನ್ನು ಮುನ್ನಡೆಸಲು ಹೊಸ ಪೀಳಿಗೆಗೆ ಅವಕಾಶ ನೀಡಬೇಕು ಎಂದು ರಾಜಸ್ಥಾನ ಮುಖ್ಯಮಂತ್ರಿ (Rajasthan Chief Minister) ಅಶೋಕ್‌ ಗೆಹ್ಲೋಟ್‌ (Ashok Gehlot) ಹೇಳಿದ್ದಾರೆ. ಆ ಮೂಲಕ ಸಿಎಂ ಸ್ಥಾನಕ್ಕೆ ರಾಜೀನಾಮೆ (Resignation) ನೀಡುವ ಸುಳಿವು ನೀಡಿದ್ದಾರೆ.

    ಜೈಪುರದಲ್ಲಿ ಭಾನುವಾರ ನಡೆಯಲಿರುವ ನಿರ್ಣಾಯಕ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಗೆ ಮುನ್ನ ಮಾತನಾಡಿದ ಅವರು, ನಾನು NSUI ಯಿಂದ ಕಳೆದ 50 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. 40 ವರ್ಷಗಳಿಂದ ಕೆಲವು ಸಾಂವಿಧಾನಿಕ ಹುದ್ದೆಯಲ್ಲಿದ್ದೇನೆ. ಒಬ್ಬ ವ್ಯಕ್ತಿಯು ಇನ್ನೇನು ಕೇಳಬಹುದು? ನಾನು ಮೂರು ಬಾರಿ ಸಿಎಂ, ಶಾಸಕ, ಸಂಸದ, ಕೇಂದ್ರ ಸಚಿವ ಮತ್ತು ರಾಜ್ಯ ಪಕ್ಷದ ಮುಖ್ಯಸ್ಥನಾಗಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 108 ಅಂಬುಲೆನ್ಸ್ ಕರೆ ಸ್ವೀಕಾರ ಸೇವೆ ಪುನರಾರಂಭಗೊಂಡಿದೆ: ಆರೋಗ್ಯ ಇಲಾಖೆ ಸ್ಪಷ್ಟನೆ

    ಯಾವುದೇ ನಾಯಕರ ಹೆಸರು ಉಲ್ಲೇಖಿಸದೇ ಮಾತನಾಡಿದ ಗೆಹ್ಲೋಟ್, ಹೊಸ ತಲೆಮಾರಿಗೆ ಅವಕಾಶ ನೀಡಬೇಕು. ಎಲ್ಲರೂ ಒಟ್ಟಾಗಿ ದೇಶಕ್ಕೆ ನಾಯಕತ್ವವನ್ನು ನೀಡಬೇಕು ಎಂದು ನಾನು ಆಶಿಸುತ್ತೇನೆ ಎಂದಿದ್ದಾರೆ.

    ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಾಗಿ ಗೆಹ್ಲೋಟ್‌ ಸ್ಪಷ್ಟಪಡಿಸಿದ್ದರು. ಹೀಗಾಗಿ ರಾಜಸ್ಥಾನದ ಮುಂದಿನ ಸಿಎಂ ಯಾರಾಗಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಇದನ್ನೂ ಓದಿ: ತಿರುಪತಿ: ಸಾಮಾನ್ಯ ಯಾತ್ರಿಗಳಿಗೆ ಗುಡ್ ‌ನ್ಯೂಸ್‌ ನೀಡಿದ ಟಿಟಿಡಿ

    Live Tv
    [brid partner=56869869 player=32851 video=960834 autoplay=true]

  • ಗೆಹ್ಲೋಟ್ ಸರ್ಕಾರದ ಸಚಿವ ಸಂಪುಟ ಪುನಾರಚನೆ – 15 ಮಂದಿ ಸಂಪುಟ ಸೇರ್ಪಡೆ

    ಗೆಹ್ಲೋಟ್ ಸರ್ಕಾರದ ಸಚಿವ ಸಂಪುಟ ಪುನಾರಚನೆ – 15 ಮಂದಿ ಸಂಪುಟ ಸೇರ್ಪಡೆ

    ಜೈಪುರ: ರಾಜಸ್ಥಾನದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ಪುನಾರಚನೆಯಾಗಿದೆ. ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸರ್ಕಾರದ 15 ಮಂದಿ ಸಚಿವರು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

    ನಿನ್ನೆ ಸಂಪುಟ ಪುನಾರಚನೆ ಹಿನ್ನೆಲೆ ಅಶೋಕ್ ಗೆಹ್ಲೋಟ್ ತಮ್ಮ ಸರ್ಕಾರದ ಎಲ್ಲಾ ಸಚಿವರ ರಾಜೀನಾಮೆಯನ್ನು ಪಡೆದಿದ್ದರು. ಇಂದು 15 ಮಂದಿಯನ್ನು ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಿ ಪ್ರಮಾಣ ವಚನ ಕಾರ್ಯಕ್ರಮ ನಡೆಯಿತು. ಇದನ್ನೂ ಓದಿ: ರಾಜಸ್ಥಾನ : ಎಲ್ಲ ಸಚಿವರಿಂದ ರಾಜೀನಾಮೆ ಪಡೆದ ಗೆಹ್ಲೋಟ್‌

    ಕೆಲದಿನಗಳಿಂದ ಸಚಿನ್ ಪೈಲಟ್ ಬಣ ಸಿಎಂ ತಮ್ಮ ಬಣದ ಶಾಸಕರನ್ನು ಕಡೆಗಣಿಸುತ್ತಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿತ್ತು. ನಂತರ ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಮತ್ತು ಹಿರಿಯ ನಾಯಕರ ನಡುವೆ ಹಲವು ಸುತ್ತಿನ ಸಭೆಯ ಬಳಿಕ ಸಂಪುಟ ಪುನಾರಚನೆ ಆಗಿದೆ. ಗೆಹ್ಲೋಟ್ ಅವರು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಸೇರಿದಂತೆ ಪಕ್ಷದ ನಾಯಕರನ್ನು ಭೇಟಿಯಾದ ಬಳಿಕ ಈ ನಿರ್ಧಾರ ಕೈಗೊಂಡು ಇಂದು ಪ್ರಮಾಣ ವಚನ ಕಾರ್ಯಕ್ರಮ ನಡೆದಿದೆ. ಇದನ್ನೂ ಓದಿ: ರಾಜಕೀಯ ನಾಯಕರಿಗೆ ಕೈ ಮುಗಿದ ಜೂನಿಯರ್ ಎನ್‍ಟಿಆರ್

    ರಾಜಸ್ಥಾನ ಸರ್ಕಾರ ರಚನೆಯಾದ ಬಳಿಕ ತಮ್ಮ ಬೆಂಬಲಿಗರನ್ನು ಗೆಹ್ಲೋಟ್ ಕಡೆಗಣಿಸುತ್ತಿದ್ದಾರೆ ಎಂದು ಸಚಿನ್ ಪೈಲಟ್ ಹೈಕಮಾಂಡ್‍ಗೆ ನಿರಂತರ ದೂರು ನೀಡಿದ್ದರು. ಹೀಗಾಗಿ ಈ ಬಾರಿ ಪುನಾರಚನೆಯಲ್ಲಿ 5 ಮಂದಿ ಸಚಿನ್ ಪೈಲಟ್ ಬೆಂಬಲಿಗರಿಗೆ ಮಂತ್ರಿಸ್ಥಾನ ಕೊಡಲಾಗಿದೆ. 11 ಜನ ಕ್ಯಾಬಿನೆಟ್ ಸಚಿವರು ಸರ್ಕಾರದಲ್ಲಿ ಇದ್ದಾರೆ. ಈ ಹಿಂದೆ ಸಚಿವರಾಗಿದ್ದವರ ಪೈಕಿ 3 ಜನ ಗೋವಿಂದ್ ಸಿಂಗ್ ದೋತಸ್ರಾ, ಹರೀಶ್ ಚೌಧರಿ ಮತ್ತು ರಘು ಶರ್ಮಾ ಅವರನ್ನು ಕೈ ಬಿಟ್ಟು ಉಳಿದಂತೆ ಈ ಹಿಂದೆ ಇದ್ದ ಸಚಿವರಿಗೆ ಮತ್ತೆ ಸಚಿವ ಸ್ಥಾನ ಕೊಡಲಾಗಿದೆ. ಇದನ್ನೂ ಓದಿ:  ರಾಜ್ಯದಲ್ಲಿ ಅಕಾಲಿಕ ಮಳೆಗೆ ಜನಜೀವನ ಅಸ್ತವ್ಯಸ್ತ – ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಕಟ್ಟೆಚ್ಚರ