Tag: ಸಚಿನ್ ವಾಜಿ

  • ಅಂಬಾನಿ ಮನೆ ಮುಂದೆ ಸ್ಫೋಟಕ ಪತ್ತೆ ಪ್ರಕರಣ – ಎನ್‍ಕೌಂಟರ್ ಸ್ಪೆಷಲಿಸ್ಟ್ ಸಚಿನ್ ವಾಜೆ ಅಮಾನತು

    ಅಂಬಾನಿ ಮನೆ ಮುಂದೆ ಸ್ಫೋಟಕ ಪತ್ತೆ ಪ್ರಕರಣ – ಎನ್‍ಕೌಂಟರ್ ಸ್ಪೆಷಲಿಸ್ಟ್ ಸಚಿನ್ ವಾಜೆ ಅಮಾನತು

    ಮುಂಬೈ: ಉದ್ಯಮಿ ಮುಖೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಕೌಂಟರ್ ಸ್ಪೆಷಲಿಸ್ಟ್ ಸಚಿನ್ ವಾಜೆ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‍ಐಎ) ಬಂಧನ ನಡೆಸಿದ ಬೆನ್ನಲ್ಲೇ ಮುಂಬೈ ಪೊಲೀಸ್ ಇಲಾಖೆಯಿಂದ ಸಚಿನ್ ವಾಜೆ ಅವರನ್ನು ಅಮಾನತು ಗೊಳಿಸಲಾಗಿದೆ.

    ಅಂಬಾನಿ ಮನೆ ಬಳಿ ಫೆಬ್ರವರಿ 25 ರಂದು ಸ್ಕಾರ್ಪಿಯೋ ಕಾರಿನಲ್ಲಿ ಜಿಲೆಟಿನ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಐಎ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರನ್ನು ಎನ್‍ಐಎ ವಶಕ್ಕೆ ಪಡೆದು 12 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿ ನಂತರ ನ್ಯಾಯಾಲಯಕ್ಕೆ ಹಾಜರು ಪಡಿಸಿತ್ತು. ನ್ಯಾಯಾಲಯದ ಆದೇಶದಂತೆ ಸಚಿನ್ ವಾಜೆ ಅವರನ್ನು ವಿಚಾರಣೆಗಾಗಿ ಮಾರ್ಚ್ 25ರ ವರೆಗೆ ಎನ್‍ಐಎ ವಶಕ್ಕೆ ಪಡೆದುಕೊಂಡಿದೆ. ಈ ನಿರ್ಧಾರದ ಬೆನ್ನಲ್ಲೇ ಮುಂಬೈ ಪೊಲೀಸ್ ಇಲಾಖೆ ಸಚಿನ್ ವಾಜೆ ಅವರನ್ನು ಅಮಾನತುಗೊಳಿಸಿ ಆದೇಶ ಪ್ರಕಟಿಸಿದೆ. ಇದನ್ನು ಓದಿ ಅಂಬಾನಿ ಮನೆ ಮುಂದೆ ಸ್ಫೋಟಕ ಪತ್ತೆ ಪ್ರಕರಣ – ಎನ್‍ಕೌಂಟರ್ ಸ್ಪೆಷಲಿಸ್ಟ್ ಸಚಿನ್ ವಾಜಿ ಅಮಾನತು

    ಸಚಿನ್ ವಾಜೆ ಅವರನ್ನು ಎನ್‍ಐಎ ಬಂಧನ ಮಾಡುತ್ತಿದ್ದಂತೆ, ಶಿವಸೇನೆಯ ಸಂಸದ ಸಂಜಯ್ ರಾವತ್ ಟ್ವೀಟ್ ಮಾಡಿ ಸಚಿನ್ ವಾಜೆ ದಕ್ಷ ಹಾಗೂ ಪ್ರಾಮಾಣಿಕ ಪೊಲೀಸ್ ಅಧಿಕಾರಿ ಆದರೆ ಇದೀಗ ಜಿಲೆಟಿನ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿದ್ದಾರೆ. ಈ ಪ್ರಕರಣ ಸರಿಯಾದ ರೀತಿಯಲ್ಲಿ ತನಿಖೆಯಾಗಬೇಕು. ನಾವು ಎನ್‍ಐಎ ತನಿಖಾ ತಂಡವನ್ನು ಗೌರವಿಸುತ್ತೇವೆ ಆದರೆ ಮುಂಬೈ ಪೊಲೀಸರು ಈ ರೀತಿ ಮಾಡಲು ಸಾಧ್ಯವಿಲ್ಲ. ಇದು ಮುಂಬೈ ಪೊಲೀಸ್ ಇಲಾಖೆ ಮತ್ತು ಆಡಳಿತದ ಮೇಲೆ ಹೆಚ್ಚಿನ ಒತ್ತಡ ಹಾಕಿದೆ ಎಂದು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದರು. ಇದನ್ನು ಓದಿ -ಅಂಬಾನಿ ಮನೆ ಬಳಿ ಜಿಲೆಟಿನ್ ಪತ್ತೆ- ಸಾವಿಗೂ ಮುನ್ನ ಬೆದರಿಕೆ ಹಾಕಿದ್ರು, ಸಿಎಂಗೆ ಮನ್ಸುಕ್ ಪತ್ರ

     

    ಎನ್‍ಐಎ ವಕ್ತಾರರ ಪ್ರಕಾರ, “ಫೆಬ್ರವರಿ 25 ರಂದು ಕಾರ್ಮೈಕಲ್ ರಸ್ತೆ ಬಳಿ ಸ್ಫೋಟಕಗಳಿಂದ ತುಂಬಿದ್ದ ವಾಹನವನ್ನು ಇರಿಸುವಲ್ಲಿ ಸಚಿನ್ ವಾಜೆರವರ ಪಾತ್ರವಿರುವುದರಿಂದ ಸೆಕ್ಷನ್ 286 (ಸ್ಫೋಟಕ ವಸ್ತುವಿಗೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ವರ್ತನೆ), 465(ಖೋಟಾ ಶಿಕ್ಷೆ), 473 (ನಕಲಿ ಮುದ್ರೆಯನ್ನು ತಯಾರಿಸುವುದು ಅಥವಾ ಹೊಂದಿರುವುದು), 502 (2)(ಕ್ರಿಮಿನಲ್ ಬೆದರಿಕೆ), 120 ಬಿ ಅಡಿಯಲ್ಲಿ ಸಚಿನ್ ವಾಜೆರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

    ಅಂಬಾನಿ ನಿವಾಸದ ಬಳಿ ಪತ್ತೆಯಾಗಿದ್ದ ಸ್ಕಾರ್ಪಿಯೋ ಕಾರಿನ ಮಾಲೀಕ ಥಾಣೆ ಉದ್ಯಮಿ ಮನ್ಸುಖ್ ಹಿರಾನ್ ಸಾವಿಗೆ ಸಂಬಂಧಿಸಿದಂತೆ ಸಚಿನ್ ವಾಜೆ ಅವರ ಪಾತ್ರವಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಈ ಕುರಿತಂತೆ ತನಿಖೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.

    ಸಚಿನ್ ವಾಜೆ 1990ರಲ್ಲಿ ಮಹಾರಾಷ್ಟ್ರ ಪೊಲೀಸ್ ಇಲಾಖೆಗೆ ಸಬ್ ಇನ್ಸ್‍ಪೆಕ್ಟರ್ ಆಗಿ ಸೇರ್ಪಡೆಗೊಂಡಿದ್ದರು. ನಂತರ 2002ರಲ್ಲಿ ಘಾಟ್ಕೋಪರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಖವಾಜಾ ಯೂನುಸ್ ಲಾಕಪ್ ಡೆತ್ ಪ್ರಕರಣದಲ್ಲಿ ಆರೋಪಿಯಾಗಿದ್ದರು. ನಂತರ 2007ರಲ್ಲಿ ಪೊಲೀಸ್ ಇಲಾಖೆಗೆ ರಾಜಿನಾಮೆ ನೀಡಿ ಶಿವಸೇನೆ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಬಳಿಕ 2020ರ ಜೂನ್ 4 ರಂದು ಮತ್ತೆ ಮುಂಬೈ ಪೊಲೀಸ್ ಇಲಾಖೆಗೆ ಸಚಿನ್ ವಾಜೆ ಮರು ನೇಮಕಗೊಂಡಿದ್ದರು.

  • ಅಂಬಾನಿ ಮನೆ ಮುಂದೆ ಸ್ಫೋಟಕ ಪತ್ತೆ ಪ್ರಕರಣ – ಎನ್‍ಕೌಂಟರ್ ಸ್ಪೆಷಲಿಸ್ಟ್ ಸಚಿನ್ ವಾಜಿ ಅರೆಸ್ಟ್

    ಅಂಬಾನಿ ಮನೆ ಮುಂದೆ ಸ್ಫೋಟಕ ಪತ್ತೆ ಪ್ರಕರಣ – ಎನ್‍ಕೌಂಟರ್ ಸ್ಪೆಷಲಿಸ್ಟ್ ಸಚಿನ್ ವಾಜಿ ಅರೆಸ್ಟ್

    ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಕೌಂಟರ್ ಸ್ಪೆಷಲಿಸ್ಟ್ ಸಚಿನ್ ವಾಜಿರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಸಂಸ್ಥೆ 12 ಗಂಟೆಗಳ ಕಾಲ ವಿಚಾರಣೆ ನಡೆಸಿದೆ.

    ಕೈಗಾರಿಕೋದ್ಯಮಿ ಮುಕೇಶ್ ಅಂಬಾನಿ ಮನೆ ಬಳಿ ಸ್ಕಾರ್ಪಿಯೋ ಕಾರಿನಲ್ಲಿ ಜಿಲೆಟಿನ್ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಐಎ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ¸ ವಾಜಿರನ್ನು ವಶಪಡೆದು 12 ಗಂಟೆಗಳ ಕಾಲ ವಿಚಾರಣೆ ನಡೆಸಿ ನಂತರ ಶನಿವಾರ ರಾತ್ರಿ 11.50ಕ್ಕೆ ಬಂಧಿಸಿದ್ದಾರೆ. ಅಲ್ಲದೆ ಭಾನುವಾರ ಸಚಿನ್ ವಾಜಿರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುತ್ತದೆ.

    ಫೆಬ್ರವರಿ 25 ರಂದು ಮುಕೇಶ್ ಅಂಬಾನಿ ನಿವಾಸದ ಬಳಿ ಜಿಲೆಟಿನ್ ಕಡ್ಡಿಗಳನ್ನು ತುಂಬಿದ್ದ ಕಾರು ಹಾಗೂ ಬೆದರಿಕೆ ಪತ್ರವೊಂದು ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು ಸಚಿನ್ ವಾಜಿರವರಿಗೆ ತನಿಖೆ ನಡೆಸಲು ಸೂಚಿಸಲಾಗಿತ್ತು, ಆದರೆ ಬಳಿಕ ಅವರನ್ನು ತೆಗೆದು ಹಾಕಿ ಪ್ರಕರಣ ಕುರಿತಂತೆ ತನಿಖೆ ನಡೆಸಲು ಎನ್‍ಐಎ ಮುಂದಾಗಿದೆ.

    ಎನ್‍ಐಎ ವಕ್ತಾರರ ಪ್ರಕಾರ, “ಫೆಬ್ರವರಿ 25 ರಂದು ಕಾರ್ಮೈಕಲ್ ರಸ್ತೆ ಬಳಿ ಸ್ಫೋಟಕಗಳಿಂದ ತುಂಬಿದ್ದ ವಾಹನವನ್ನು ಇರಿಸುವಲ್ಲಿ ಸಚಿನ್ ವಾಜಿರವರ ಪಾತ್ರವಿರುವುದರಿಂದ ಸೆಕ್ಷನ್ 286 ( ಸ್ಫೋಟಕ ವಸ್ತುವಿಗೆ ಸಂಬಂಧಿಸಿದಂತೆ ನಿರ್ಲಕ್ಷ್ಯದ ವರ್ತನೆ), 465(ಖೋಟಾ ಶಿಕ್ಷೆ), 473 (ನಕಲಿ ಮುದ್ರೆಯನ್ನು ತಯಾರಿಸುವುದು ಅಥವಾ ಹೊಂದಿರುವುದು ಇತ್ಯಾದಿ), 502 (2)(ಕ್ರಿಮಿನಲ್ ಬೆದರಿಕೆ), 120 ಬಿ ಅಡಿಯಲ್ಲಿ ಸಚಿನ್ ವಾಜಿರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

    ಅಂಬಾನಿ ನಿವಾಸದ ಬಳಿ ಪತ್ತೆಯಾಗಿದ್ದ ಸ್ಕಾರ್ಪಿಯೋ ಕಾರಿನ ಮಾಲೀಕ ಥಾಣೆ ಉದ್ಯಮಿ ಮನ್ಸುಖ್ ಹಿರಾನ್ ಸಾವಿಗೆ ಸಂಬಂಧಿಸಿದಂತೆ ಸಚಿನ್ ವಾಜಿ ಅವರ ಪಾತ್ರವಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಈ ಕುರಿತಂತೆ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದರು.