Tag: ಸಚಿವರು

  • ಮಾಜಿ ರಾಜ್ಯಪಾಲರು, ಮಾಜಿ ಸಿಎಂ, ಅಧಿಕಾರಿಗಳ ಸ್ಕ್ಯಾಂಡಲ್ – 40 ಕಾಲ್ ಗರ್ಲ್ಸ್‌ಗಳಿಂದ ಹನಿಟ್ರ್ಯಾಪ್

    ಮಾಜಿ ರಾಜ್ಯಪಾಲರು, ಮಾಜಿ ಸಿಎಂ, ಅಧಿಕಾರಿಗಳ ಸ್ಕ್ಯಾಂಡಲ್ – 40 ಕಾಲ್ ಗರ್ಲ್ಸ್‌ಗಳಿಂದ ಹನಿಟ್ರ್ಯಾಪ್

    – ಕೃತ್ಯದಲ್ಲಿ ಬಿ ಗ್ರೇಡ್ ಬಾಲಿವುಡ್ ನಟಿಯರೂ ಭಾಗಿ
    – ಸಹಕರಿಸಿದ್ದಕ್ಕೆ ಎನ್‍ಜಿಒಗಳಿಗೆ ಸರ್ಕಾರದ ಗುತ್ತಿಗೆ

    ಭೋಪಾಲ್: ಮಧ್ಯಪ್ರದೇಶದ ಮಾಜಿ ರಾಜ್ಯಪಾಲರು, ರಾಜಕಾರಣಿಗಳು ಹಾಗೂ ಉನ್ನತ ಅಧಿಕಾರಿಗಳು, ಗಣ್ಯ ವ್ಯಕ್ತಿಗಳನ್ನು ಬಾಲಿವುಡ್‍ನ ಕೆಲವು ಬಿ-ಗ್ರೇಡ್ ನಟಿಯರು ಸೇರಿದಂತೆ 40ಕ್ಕೂ ಅಧಿಕ ಕಾಲ್ ಗರ್ಲ್ಸ್‌ ಸೇರಿ ಹನಿಟ್ರ್ಯಾಪ್ ಎಸಗಿದ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ.

    ಈ ಕೃತ್ಯಕ್ಕೆ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ರಾಜ್ಯ ರಾಜ್ಯಪಾಲರು ಸೇರಿದಂತೆ ಹಲವು ಅಧಿಕಾರಿಗಳು ಗಣ್ಯ ವ್ಯಕ್ತಿಗಳು ಬಲಿಪಶುಗಳಾಗಿದ್ದಾರೆ. ಅಧಿಕಾರಿಗಳು ಹಾಗೂ ರಾಜಕಾರಣಿಗಳು ರಾಜಿ ಮಾಡಿಕೊಳ್ಳುವ ವೇಳೆ ಹಾಗೂ ಸೆಕ್ಸ್ ನಡೆಸುವ ವೇಳೆ ಚಿತ್ರೀಕರಿಸಿರುವ 92 ಎಚ್‍ಡಿ ವಿಡಿಯೋಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ, ಈವರೆಗೆ ಎರಡು ಲ್ಯಾಪ್‍ಟಾಪ್‍ಗಳು ಮತ್ತು ಹಲವಾರು ಮೊಬೈಲ್‍ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಬ್ಲ್ಯಾಕ್‍ಮೇಲ್ ಹಾಗೂ ಸುಲಿಗೆ ದಂಧೆ ಆರೋಪದ ಮೇಲೆ ಐವರು ಮಹಿಳೆಯರನ್ನು ಬಂಧಿಸಲಾಗಿದೆ.

    ಮಧ್ಯಪ್ರದೇಶದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ(ಎಡಿಜಿಪಿ) ಸಂಜೀವ್ ಶಮಿ ನೇತೃತ್ವದ ಪೊಲೀಸರ ವಿಶೇಷ ತನಿಖಾ ತಂಡ(ಎಸ್‍ಐಟಿ)ವು ಕಾಲ್ ಗರ್ಲ್ಸ್‌ ಚಿತ್ರೀಕರಿಸಿದ ಸ್ಥಳದಲ್ಲಿ ವಿಡಿಯೋಗಳನ್ನು ಹೊಂದಿರುವ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿದೆ. ಈ ಪ್ರಕರಣದ ತನಿಖೆ ನಡೆಸಲು ಡಿ.ಶ್ರೀನಿವಾಸ್ ಅವರ ಜಾಗಕ್ಕೆ ಸಂಜೀವ್ ಶಮಿಯವರನ್ನು ನೇಮಿಸಲಾಗಿದೆ. ಈ ಕುರಿತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯ್‍ವರ್ಗಿಯಾ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಸರ್ಕಾರವು ಬಿಜೆಪಿ ನಾಯಕರನ್ನು ಗುರಿಯಾಗಿಸಿಕೊಂಡು ತನಿಖೆ ನಡೆಸುತ್ತಿದೆ. ಈ ಕುರಿತು ಸಿಬಿಐನಂತಹ ಸ್ವತಂತ್ರ ಸಂಸ್ಥೆಯಿಂದ ತನಿಖೆ ನಡೆಯಲಿ ಎಂದು ಒತ್ತಾಯಿಸಿದ್ದಾರೆ.

    ಹನಿಟ್ರ್ಯಾಪ್ ಹೇಗೆ?
    ಈ ಹನಿಟ್ರ್ಯಾಪ್ ಕಿಂಗ್‍ಪಿನ್ ಶ್ವೇತಾ ಸ್ವಾಪ್ನಿಲ್ ಜೈನ್ ಆಗಿದ್ದು, ಈಕೆ ಉನ್ನತ ಅಧಿಕಾರಿಗಳು, ಮಂತ್ರಿಗಳು ಹಾಗೂ ರಾಜಕಾರಣಿಗಳನ್ನು ಟಾರ್ಗೆಟ್ ಮಾಡಿ, ಆರಂಭದ ಸಂವಾದದ ನಂತರ ಅವರನ್ನು ಲೈಂಗಿಕತೆಗೆ ಆಹ್ವಾನಿಸುತ್ತಿದ್ದಳು. ಇದಕ್ಕಾಗಿ ಅಥಿತಿ ಗೃಹ ಅಥವಾ 5 ಸ್ಟಾರ್ ಹೋಟೆಲ್‍ಗಳಿಗೆ ಆಹ್ವಾನಿಸುತ್ತಾಳೆ. ವ್ಯಕ್ತಿಯು ಒಂದು ಬಾರಿ ಲೈಂಗಿಕತೆ ನಡೆಸಿದ ನಂತರ ಆ ವಿಡಿಯೋವನ್ನು ಮೊಬೈಲ್ ಅಥವಾ ಸೀಕ್ರೆಟ್ ಕ್ಯಾಮರಾ ಮೂಲಕ ಚಿತ್ರೀಕರಿಸಲಾಗುತ್ತದೆ. ಈ ಕುರಿತು ಶ್ವೇತಾಳ ಪತಿ ಸ್ವಾಪ್ನಿಲ್ ಜೈನ್ ನಿಂದ 6 ಹಾರ್ಡ್ ಡಿಸ್ಕ್ ಗಳನ್ನುವಶಪಡಿಸಿಕೊಳ್ಳಲಾಗಿದೆ ಎಂದು ಎಸ್‍ಐಟಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

    ಅಲ್ಲದೆ, ಕೆಲವು ಬಾರಿ ಅಧಿಕಾರಿಗಳು ಹಾಗೂ ರಾಜಕಾರಣಿಗಳು ಮುಂಬೈ ಅಥವಾ ದೆಹಲಿಗೆ ಅಧಿಕೃತ ಪ್ರವಾಸಕ್ಕೆಂದು ತೆರಳಿದಾಗ ಅವರನ್ನು ಟಾರ್ಗೆಟ್ ಮಾಡಿ ಅವರ ಬೇಡಿಕೆಗೆ ಅನುಗುಣವಾಗಿ ಕೆಲ ಮಾಡೆಲ್ ಹುಡುಗಿಯರು ಹಾಗೂ ಬಾಲಿವುಡ್ ನಟಿಯರನ್ನು ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಕುರಿತು ಎಸ್‍ಐಟಿ ಅಧಿಕಾರಿಗಳು ಇಂತಹ ವಿಡಿಯೋಗಳನ್ನು ವಶಪಡಿಸಿಕೊಂಡ ನಂತರ ಯಾವ ನಟಿ ಎಂದು ಬಹಿರಂಗವಾಗಲಿದೆ.

    ವಿಚಾರಣೆಯ ಸಮಯದಲ್ಲಿ ಶ್ವೇತಾ ಈ ಕುರಿತು ಮಾಹಿತಿ ನೀಡಿ, ಒಮ್ಮೆ ಮಂತ್ರಿ ಅಥವಾ ಕಾರ್ಯದರ್ಶಿ ಹನಿ ಟ್ರ್ಯಾಪ್‍ನಲ್ಲಿ ಸಿಕ್ಕಿಬಿದ್ದಾಗ ನಾನು ನಡೆಸುತ್ತಿರುವ ಎನ್‍ಜಿಓಗೆ ಸರ್ಕಾರದ ಕಾಂಟ್ರ್ಯಾಕ್ಟ್ ಕೊಡಿಸುವ ಪ್ರಯತ್ನ ನಡೆಸಿದ್ದೆ. ಪತಿ ನಡೆಸುತ್ತಿರುವ ಎನ್‍ಜಿಓಗೆ ಭೋಪಾಲ್ ಮುನ್ಸಿಪಲ್ ಕಾರ್ಪೋರೇಶನ್‍ನಿಂದ 8 ಕೋಟಿ ರೂ.ಗಳ ಗುತ್ತಿಗೆ ನೀಡಲಾಗಿದೆ ಎಂದು ಶ್ವೇತಾ ಒಪ್ಪಿಕೊಂಡಿದ್ದಾಳೆ. ಪಿಡಬ್ಲ್ಯೂಡಿ, ವಸತಿ, ಸಮಾಜ ಕಲ್ಯಾಣ ಸೇರಿದಂತೆ ಸರ್ಕಾರದ ಇತರೆ ಇಲಾಖೆಗಳ ಗುತ್ತಿಗೆಗಳನ್ನು ನೀಡಲಾಗಿದೆ. ಅಲ್ಲದೆ, ಮಾಜಿ ಮುಖ್ಯಮಂತ್ರಿಯೊಬ್ಬರು ಪೋಶ್ ಭೋಪಾಲ್‍ನ ಮಿನಾಲ್ ರೆಸಿಡೆನ್ಸಿಯಲ್ಲಿ ಒಂದು ಬಂಗಲೆಯನ್ನು ಉಡುಗೊರೆಯಾಗಿ ನೀಡಿದ್ದಾರೆ ಎಂದು ತಿಳಿಸಿದ್ದಾಳೆ.

    ಶ್ವೇತಾ ಜೈನ್ ಜೊತೆಗೆ ಎಸ್‍ಐಟಿ ಬಂಧಿಸಲ್ಪಟ್ಟ ಮತ್ತೊಬ್ಬ ಮಹಿಳೆ ಆರತಿ ದಯಾಳ್ ವಿಚಾರಣೆ ವೇಳೆ ಇನ್ನಷ್ಟು ಮಾಹಿತಿ ಬಹಿರಂಗಪಡಿಸಿದ್ದು, ನಾನೂ ಸಹ ಹಿರಿಯ ಐಎಎಸ್ ಅಧಿಕಾರಿಯೊಬ್ಬರ ಸಂಪರ್ಕದಲ್ಲಿದ್ದೆ ಎಂದು ಒಪ್ಪಿಕೊಂಡಿದ್ದಾಳೆ. ಈ ಅಧಿಕಾರಿಗಳು ನನಗೆ ಒಂದು ಫ್ಲ್ಯಾಟ್‍ನ ವ್ಯವಸ್ಥೆ ಸಹ ಮಾಡಿದ್ದರು ಎಂದು ಸಹ ಒಪ್ಪಿಕೊಂಡಿದ್ದಾಳೆ. ಆರತಿ ಈ ಫ್ಲ್ಯಾಟ್ ಆಕ್ರಮಿಸಿಕೊಂಡ ನಂತರ ಅದನ್ನೇ ಅಕ್ರಮಗಳ ಅಡ್ಡ ಮಾಡಿಕೊಂಡಿದ್ದಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ರಾಜಕಾರಣಿಗಳು, ಅಧಿಕಾರಿಗಳು ಮತ್ತು ಸರ್ಕಾರದ ಉನ್ನತ ಎಂಜಿನಿಯರ್‍ಗಳು ರಾಜಿ ಮಾಡಿಕೊಳ್ಳುತ್ತಿದ್ದ ಸಂದರ್ಭದಲ್ಲಿನ ಫ್ಲ್ಯಾಟ್‍ನ ಕೋಣೆಗಳಲ್ಲಿ ಸಹ ರಹಸ್ಯ ಕ್ಯಾಮರಾಗಳನ್ನು ಅಳವಡಿಸುತ್ತಿದ್ದೆವು. ಸ್ಟಿಂಗ್ ಆಪರೇಷನ್ ನಡೆಸಲು ಕಾಲ್ ಗಲ್ರ್ಸ್ ನೇಮಿಸಿಕೊಳ್ಳುತ್ತಿದ್ದೆವು. ಮಂತ್ರಿಗಳನ್ನು ಸೆಳೆಯಲು ಕೆಲವು ಸಂದರ್ಭಗಳಲ್ಲಿ ಬಿ ಗ್ರೇಡ್ ಬಾಲಿವುಡ್ ನಾಯಕಿಯರು ಹಾಗೂ ಮಾಡೆಲ್‍ಗಳನ್ನು ತೊಡಗಿಸಿಕೊಳ್ಳುತ್ತಿದ್ದೆವು ಎಂದು ಮಾಹಿತಿ ಬಹಿರಂಗಪಡಿಸಿದ್ದಾರೆ.

    ದಂಧೆಯ ಮಾಸ್ಟರ್ ಮೈಂಡ್ ಶ್ವೇತಾಳಂತೆಯೇ ಆರತಿ ಸಹ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಮಂತ್ರಿಗಳಿಂದ ಹೆಚ್ಚು ಹಣ ಪಡೆಯಲು ಎನ್‍ಜಿಓವನ್ನು ಸ್ಥಾಪಿಸಿದ್ದಳು. ವಿರಳ ಸಂದರ್ಭಗಳಲ್ಲಿ ಮಾತ್ರ ಸ್ಪೈ ಕ್ಯಾಮರಾ ಬಳಸುತ್ತಿದ್ದೆವು, ಹೆಚ್ಚಿನ ಸಂದರ್ಭಗಳಲ್ಲಿ ಎನ್‍ಜಿಓ ಮೂಲಕ ಸರ್ಕಾರದ ಹಣವನ್ನು ಸುಲಭವಾಗಿ ವರ್ಗಾಯಿಸುವಾಗ ಕ್ಯಾಮರಾ ಬಳಸುತ್ತಿದ್ದೆವು ಎಂದು ಇಬ್ಬರು ತಿಳಿಸಿದ್ದಾರೆ.

    ಲ್ಯಾಬ್‍ಗಳಲ್ಲಿ ವಿಡಿಯೋಗಳನ್ನು ಪರೀಕ್ಷಿಸಿದ ನಂತರ, ಬ್ಲ್ಯಾಕ್‍ಮೇಲ್ ಮಾಡಿದ ವ್ಯಕ್ತಿಗಳನ್ನು ಗುರುತಿಸಲಾಗಿದೆ. ಗಣ್ಯ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಬಹುದಾಗಿದೆ. ಈ ಪ್ರಕರಣವೀಗ ರಾಜಕೀಯ ತಿರುವು ಪಡೆದುಕೊಂಡಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರಲ್ಲಿ ಪರ ವಿರೋಧದ ಚರ್ಚೆಗಳು ನಡೆಯುತ್ತಿವೆ. ಅಚ್ಚರಿಯ ಸಂಗತಿ ಎಂದರೆ ಈ ಹನಿ ಟ್ರ್ಯಾಪ್ ಪ್ರಕರಣದ ಸೂತ್ರಧಾರೆ ಶ್ವೇತಾ ಜೈನ್ 2013 ಮತ್ತು 2018ರ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ನಡೆಸಿದ್ದಳು.

  • ಶ್ರೀ ನಿರ್ಮಲಾನಂದ ಸ್ವಾಮೀಜಿಯ ಆಶೀರ್ವಾದ ಪಡೆದ ಸಿಎಂ ಬಿಎಸ್‍ವೈ

    ಶ್ರೀ ನಿರ್ಮಲಾನಂದ ಸ್ವಾಮೀಜಿಯ ಆಶೀರ್ವಾದ ಪಡೆದ ಸಿಎಂ ಬಿಎಸ್‍ವೈ

    ಬೆಂಗಳೂರು: ಸಿಎಂ ಯಡಿಯೂರಪ್ಪ ಅವರು ಇಂದು ಶ್ರೀ ನಿರ್ಮಲಾನಂದ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.

    ಇಂದು ನಗರದ ವಿಜಯನಗರದಲ್ಲಿರುವ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಬಿಎಸ್‍ವೈ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದರು. ಸಿಎಂಗೆ ಸಚಿವರಾದ ಆರ್. ಅಶೋಕ್, ವಿ.ಸೋಮಣ್ಣ, ಬಸವರಾಜ ಬೊಮ್ಮಾಯಿ ಮತ್ತು ಡಾ: ಸಿ.ಎನ್.ಅಶ್ವಥನಾರಾಯಣ ಸಾಥ್ ನೀಡಿದರು.

    ಬಿಎಸ್‍ವೈ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರ ಮಾಡಿದರು ಸಚಿವ ಸಂಪುಟ ರಚನೆ ಮಾಡಲು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡದ ಕಾರಣ ಸಂಪುಟ ರಚನೆ ಆಗಿರಲಿಲ್ಲ. ಕೇಂದ್ರ ಸಚಿವ ಅಮಿತ್ ಶಾ ಅವರ ಸಂಪುಟ ರಚನೆ ಮಾಡುವಂತೆ ಸೂಚಿಸಿದ ನಂತರ ಮಂಗಳವಾರ 17 ಜನ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

  • ಬೆಳಗಾವಿಯಿಂದ ಬಂಡಾಯ ಆರಂಭ, ಸರ್ಕಾರ ಕೇವಲ 6 ತಿಂಗಳು ಮಾತ್ರ ಇರುತ್ತೆ- ಶಾಸಕ ಅಮರೇಗೌಡ

    ಬೆಳಗಾವಿಯಿಂದ ಬಂಡಾಯ ಆರಂಭ, ಸರ್ಕಾರ ಕೇವಲ 6 ತಿಂಗಳು ಮಾತ್ರ ಇರುತ್ತೆ- ಶಾಸಕ ಅಮರೇಗೌಡ

    ಕೊಪ್ಪಳ: ಬಿಜೆಪಿ ಸರ್ಕಾರ ಕೇವಲ ಆರು ತಿಂಗಳು ಮಾತ್ರ ಇರುತ್ತದೆ ಎಂದು ಕುಷ್ಟಗಿಯ ಕಾಂಗ್ರೆಸ್ ಶಾಸಕ ಅಮರೇಗೌಡ ಬಯ್ಯಪುರ ಭವಿಷ್ಯ ನುಡಿದಿದ್ದಾರೆ.

    ಈ ಕುರಿತು ಕೊಪ್ಪಳದಲ್ಲಿ ಮಾತನಾಡಿದ ಅವರು, ಇಂದು ಬಿಜೆಪಿ ಕ್ಯಾಬಿನೆಟ್ ವಿಸ್ತರಿಸಿದ್ದಾರೆ. ಆದರೆ, ಇದು ಹೆಚ್ಚು ಕಾಲ ಉಳಿಯುವದಿಲ್ಲ. ಬೆಜೆಪಿ ಸರ್ಕಾರ ಆರು ತಿಂಗಳ ಮೇಲೆ ಆಡಳಿತದಲ್ಲಿರುವುದಿಲ್ಲ. ಸರ್ಕಾರ ಬಿದ್ದು ಹೋಗಲಿದೆ. ಹಾಗಂತ ನಾವು ಬಿದ್ದು ಹೋಗಲಿ ಎಂದು ಹೇಳುವುದಿಲ್ಲ. ಆದರೆ, ಪರಿಸ್ಥಿತಿ ಹಾಗಿದೆ. ಹೀಗಾಗಿ ಯಡಿಯೂರಪ್ಪನವರ ಸರ್ಕಾರ 6 ತಿಂಗಳಿಗೂ ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ತಿಳಿಸಿದ್ದಾರೆ.

    ಎಲ್ಲವನ್ನೂ ಲೂಟಿ ಮಾಡಿ ಮನೆಗೆ ಹೋಗುತ್ತಾರೆ. ಇಲ್ಲವೆ ಬಡಿದಾಡಿ ಮನೆಗೆ ಹೋಗುತ್ತಾರೆ. ಪ್ರಮಾಣ ವಚನ ಸ್ವೀಕರಿಸಿದ ಎಲ್ಲರಿಗೂ ಒಳ್ಳೆಯದು ಆಗಲಿ. ಒಳ್ಳೆ ಆಡಳಿತ ಕೊಡಲಿ ಎಂದು ನಾವೆಲ್ಲ ಬೇಡಿಕೊಳ್ಳೋಣ. ಅವರ ಸರ್ಕಾರ ಬಿದ್ದು ಹೋಗಲಿ ಎನ್ನುವುದು ನಮ್ಮ ಮನಸ್ಸಿನಲ್ಲಿಲ್ಲ. ಆದರೆ, ಬೆಳಗಾವಿಯವರು ಸರ್ಕಾರ ಕೆಡವಲು ಈಗಾಗಲೇ ಆರಂಭ ಮಾಡಿದ್ದಾರೆ. ಇಂದು ಸಂಜೆಯೊಳಗೆ ಏನೆಲ್ಲಾ ಆಗತ್ತದೆ ಎನ್ನುವುದನ್ನು ಕಾದು ನೋಡಿ ಎಂದರು.

    ಶಾಸಕ ಬಾಲಚಂದ್ರ ಜಾರಕಿಹೊಳಿಯವರಿಗೆ ಸಚಿವ ಸ್ಥಾನ ತಪ್ಪಿದ್ದಕ್ಕೆ ಬೆಳಗಾವಿಯಲ್ಲಿ ಅವರ ಬೆಂಬಲಿಗರು ದಾಂಧಲೆ ಎಬ್ಬಿಸಿದ್ದರು. ಅಲ್ಲದೆ, ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಅತೃಪ್ತ ಶಾಸಕರು ಗೈರಾಗಿದ್ದಾರೆ. ರೇಣುಕಾಚಾರ್ಯ, ಬಾಲಚಂದ್ರ ಜಾರಕಿಹೊಳಿ, ಉಮೇಶ್ ಕತ್ತಿ, ತಿಪ್ಪಾರೆಡ್ಡಿ, ಬಸನಗೌಡ ಪಾಟೀಲ್ ಯತ್ನಾಳ್, ಮುರುಗೇಶ್ ನಿರಾಣಿ, ರಾಮದಾಸ್, ಶಿವನಗೌಡ ನಾಯಕ್, ಕೆ.ಜಿ.ಬೋಪಯ್ಯ ಸೇರಿದಂತೆ ಹಲವರು ಪ್ರಮಾಣ ವಚನ ಕಾರ್ಯಕ್ರಮಕ್ಕೆ ಗೈರಾಗಿದ್ದರು.

    ಪಕ್ಷಕ್ಕೆ ನಿಷ್ಠೆಯಿಂದ ಇದ್ದವರು ತಮಗೆ ಸಚಿವ ಸ್ಥಾನ ಸಿಗುತ್ತದೆ ಎಂಬ ಭರವಸೆಯಲ್ಲಿದ್ದರು. ಆದರೆ ಅವರಿಗೆ ಯಾವುದೇ ಸ್ಥಾನ ಸಿಗಲಿಲ್ಲ. ಹೀಗಾಗಿ ಬಿಜೆಪಿಯಲ್ಲಿ ಬಂಡಾಯ ಎದ್ದಿದ್ದು, ಅತೃಪ್ತರು ಸಭೆ ಮಾಡಬೇಕು ಎಂದು ನಿರ್ಧಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

    ಶಾಸಕ ತಿಪ್ಪಾರೆಡ್ಡಿ ಅವರಿಗೆ ಸಚಿವ ಸ್ಥಾನ ತಪ್ಪಿದ ಹಿನ್ನೆಲೆಯಲ್ಲಿ ಚಿತ್ರದುರ್ಗದ ಸರ್ಕಲ್‍ನಲ್ಲಿ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಜಿಲ್ಲಾ ಪಂಚಾಯತ್ ಸದಸ್ಯರು, ನಗರಸಭೆ ಸದಸ್ಯರು ಸೇರಿದಂತೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ನಡು ರಸ್ತೆಯಲ್ಲಿ ಸ್ಕೂಟಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಮುಸ್ಲಿಂ ಶಾಸಕನಿಗೆ ಬಿಜೆಪಿ ಸಚಿವ ಒತ್ತಾಯ – ವಿಡಿಯೋ ವೈರಲ್

    ಜೈ ಶ್ರೀರಾಮ್ ಘೋಷಣೆ ಕೂಗುವಂತೆ ಮುಸ್ಲಿಂ ಶಾಸಕನಿಗೆ ಬಿಜೆಪಿ ಸಚಿವ ಒತ್ತಾಯ – ವಿಡಿಯೋ ವೈರಲ್

    ರಾಂಚಿ: ಜಾರ್ಖಂಡ್‍ನ ಬಿಜೆಪಿ ಮಂತ್ರಿಯೊಬ್ಬರು ಕಾಂಗ್ರೆಸ್‍ನ ಮುಸ್ಲಿಂ ಶಾಸಕನಿಗೆ ‘ಜೈ ಶ್ರೀರಾಮ್’ ಘೋಷಣೆ ಕೂಗುವಂತೆ ಒತ್ತಾಯಿಸಿರುವ ಘಟನೆ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

    ಜಾರ್ಖಂಡ್ ವಿಧಾನಸಭೆ ಕಟ್ಟಡದ ಮುಂಭಾಗವೇ ಈ ಘಟನೆ ನಡೆಸದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧದ ಟೀಕೆ ವ್ಯಕ್ತವಾಗುತ್ತಿದೆ. ‘ಸಹೋದರ ಇರ್ಫಾನ್ ನಾನು ಹೇಳಿದಂತೆ ಜೈ ಶ್ರೀರಾಮ್ ಎಂದು ಜೋರಾಗಿ ಹೇಳು’ವಂತೆ ಬಿಜೆಪಿ ಸಚಿವ ಸಿ.ಪಿ.ಸಿಂಗ್ ಅವರು ಕಾಂಗ್ರೆಸ್ ಶಾಸಕ ಇರ್ಫಾನ್ ಅನ್ಸಾರಿ ಅವರಿಗೆ ಹೇಳಿಕೊಡುತ್ತಿದ್ದು, ಅಲ್ಲದೆ ಶಾಸಕರ ಕೈಯನ್ನು ಗಟ್ಟಿಯಾಗಿ ಹಿಡಿದುಕೊಂಡು ಒತ್ತಾಯಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

    ಬಿಜೆಪಿ ಸಚಿವರು ಮುಂದುವರಿದು, ಅವನ ಪೂರ್ವಜರು ರಾಮ್ ವಾಲೆ(ಹಿಂದೂಗಳು)ಯೇ ಹೊರತು ಬಾಬರ್ ವಾಲೆ(ಮುಸ್ಲಿಂ)ಯಲ್ಲ ಎಂದು ಶಾಸಕರಿಗೆ ಸ್ಪಷ್ಟಪಡಿಸುತ್ತಾರೆ. ಇದಕ್ಕೆ ಶಾಸಕ ಅನ್ಸಾರಿ ಪ್ರತಿಕ್ರಿಯಿಸಿ, ನೀವು ರಾಮನ ಹೆಸರನ್ನು ಬೆದರಿಸಲು ಬಳಸುತ್ತೀರಿ, ಈ ಮೂಲಕ ರಾಮನ ಹೆಸರಿಗೆ ಅವಮಾನ ಮಾಡುತ್ತೀರಿ. ಇಂತಹ ವಿಷಯಗಳಿಗೆ ಸಮಯ ನೀಡುವ ಬದಲು ಉದ್ಯೋಗ ಸೃಷ್ಟಿ, ವಿದ್ಯುತ್, ನೀರು, ಒಳಚರಂಡಿ ವ್ಯವಸ್ಥೆ ಸೇರಿದಂತೆ ಊರಿಗೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲು ಸಮಯ ನೀಡಿ ಎಂದು ತಿರುಗೇಟು ನೀಡಿದ್ದಾರೆ.

    ನಾನು ನಿಮ್ಮನ್ನು ಹೆದರಿಸಲು ಈ ಮಾತನ್ನು ಹೇಳುತ್ತಿಲ್ಲ. ಬದಲಿಗೆ ನಿಮ್ಮ ಪೂರ್ವಜರು ‘ಜೈ ಶ್ರೀರಾಮ್’ ಎಂದು ಜಪಿಸುತ್ತಿದ್ದುದನ್ನು ಮರೆಯಬೇಡಿ. ತೈಮೂರ್, ಬಾಬರ್, ಘಜ್ನಿ ನಿಮ್ಮ ಪೂರ್ವಜರಲ್ಲ. ನಿಮ್ಮ ಪೂರ್ವಜರು ಶ್ರೀರಾಮನ ಅನುಯಾಯಿಗಳು ಎಂದು ಸಚಿವ ಸಿಂಗ್ ಹೇಳಿದ್ದಾರೆ.

    ಸಿ.ಪಿ.ಸಿಂಗ್ ಜಾರ್ಖಂಡ್‍ನ ಬಿಜೆಪಿ ಸರ್ಕಾರದ ನಗರಾಭಿವೃದ್ಧಿ, ವಸತಿ ಹಾಗೂ ಸಾರಿಗೆ ಸಚಿವರಾಗಿದ್ದು, ಇರ್ಫಾನ್ ಅನ್ಸಾರಿ ಜಮ್ತಾರಾ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದಾರೆ. ಈ ಕುರಿತು ರಾಜ್ಯ ಬಿಜೆಪಿ ನಾಯಕರು ಸ್ಪಷ್ಟನೆ ನೀಡಿದ್ದು, ಈ ಘಟನೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ತಿಳಿಸಿದ್ದಾರೆ.

    ಕಳೆದ ತಿಂಗಳು ಜಾರ್ಖಂಡ್‍ನಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ‘ಜೈ ಶ್ರೀರಾಮ್’ ಘೋಷಣೆ ಕೂಗುವಂತೆ ಹಿಂಸಿಸಲಾಗಿತ್ತು. ಅಲ್ಲದೆ, ಗಂಟೆಗಟ್ಟಲೇ ಆತನನ್ನು ಥಳಿಸಲಾಗಿತ್ತು. ಹಲ್ಲೆ ಮಾಡಿದ್ದರಿಂದ ವ್ಯಕ್ತಿ ಸಾವನ್ನಪ್ಪಿದ್ದ. ಆದರೆ, ಸಾವನ್ನಪ್ಪಿದ 24 ಯುವಕ ಬೈಕ್ ಕದಿಯಲು ಯತ್ನಿಸಿದ್ದ ಎಂದು ಆರೋಪ ಕೇಳಿ ಬಂದಿತ್ತು.

  • ರಾಜ್ಯಪಾಲರ ಆದೇಶಕ್ಕೆ ಡೋಂಟ್ ಕೇರ್ – ರಾತ್ರೋ ರಾತ್ರಿ ಕಡತ ವಿಲೇವಾರಿ

    ರಾಜ್ಯಪಾಲರ ಆದೇಶಕ್ಕೆ ಡೋಂಟ್ ಕೇರ್ – ರಾತ್ರೋ ರಾತ್ರಿ ಕಡತ ವಿಲೇವಾರಿ

    – ಬಡ್ತಿ, ನೇಮಕಾತಿ, ವರ್ಗಾವಣೆಯಲ್ಲಿ ಸರ್ಕಾರ ಬ್ಯುಸಿ

    ಬೆಂಗಳೂರು: ರಾಜ್ಯಪಾಲರ ಆದೇಶಕ್ಕೂ ಡೋಂಟ್ ಕೇರ್ ಎನ್ನದ ಮೈತ್ರಿ ಸರ್ಕಾರದ ಸಿಎಂ ಮತ್ತು ಸಚಿವರು ರಾತ್ರೋ ರಾತ್ರಿ ಕಡತಗಳನ್ನು ವಿಲೇವಾರಿ ಮಾಡುತ್ತಿದ್ದಾರೆ.

    ಶಾಸಕರ ರಾಜೀನಾಮೆ ಪರ್ವದ ಹಿನ್ನೆಲೆ ಪತನದ ಹಾದಿಯಲ್ಲಿರುವ ಮೈತ್ರಿ ಸರ್ಕಾರ ಯಾವುದೇ ಮಹತ್ತರ ನಿರ್ಧಾರವನ್ನು ಕೈಗೊಳ್ಳಬೇಡಿ ಎಂದು ರಾಜ್ಯಪಾಲರು ಆದೇಶ ನೀಡಿದ್ದರು. ಈ ಆದೇಶವನ್ನು ಲೆಕ್ಕಿಸದ ಸರ್ಕಾರದ ರಾತ್ರಿ 10 ಗಂಟೆಯ ಸಮಯದಲ್ಲೂ ಕೆಲಸ ಮಾಡುತ್ತಿರುವುದು ಕಂಡು ಬಂದಿದೆ.

    ತಡ ರಾತ್ರಿ ಶಕ್ತಿ ಭವನದ ಮುಂದೆ ಆಧಿಕಾರಿಗಳು ಫೈಲ್ ಹಿಡಿದುಕೊಂಡು ಓಡಾಡುತ್ತಿರುವುದು ಕಂಡು ಬಂದಿದೆ. ಬಹುಮತ ಸಾಬೀತು ಪಡಿಸುವ ಒತ್ತಡ ನಡುವೆಯೂ ಮೈತ್ರಿ ಸರ್ಕಾರ ಕಡತ ವಿಲೇವಾರಿಯಲ್ಲಿ ಬ್ಯುಸಿಯಾಗಿರುವುದು ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

    ಬಡ್ತಿ, ನೇಮಕಾತಿ, ವರ್ಗಾವಣೆ ಮತ್ತು ಅನುದಾನ ಬಿಡುಗಡೆಯಲ್ಲಿ ತೊಡಗಿರುವ ಸರ್ಕಾರ, ಹಳೆಯ ದಿನಾಂಕವನ್ನು ಹಾಕಿ ಕಡತ ವಿಲೇವಾರಿ ಮಾಡಲಾಗುತ್ತಿದೆ ಎಂದು ಬಿಜೆಪಿ ಶಾಸಕ ಬಸವರಾಜು ಬೊಮ್ಮಯಿ ಆರೋಪ ಮಾಡಿದ್ದರು. ಅವರು ಆರೋಪಕ್ಕೆ ಈಗ ನಡೆಯುತ್ತಿರುವ ದೃಶ್ಯಗಳು ಪುಷ್ಠಿ ನೀಡಿದ್ದಂತೆ ಆಗಿದೆ.

  • ಯಾವ ಆತಂಕವೂ ಬೇಡ, ಕ್ಯಾಬಿನೆಟ್‍ಗೆ ಬನ್ನಿ ಎಲ್ಲವೂ ಸರಿ ಆಗುತ್ತೆ: ಸಿಎಂ ಮಾತಿಗೆ ಸಚಿವರು ಅಚ್ಚರಿ

    ಯಾವ ಆತಂಕವೂ ಬೇಡ, ಕ್ಯಾಬಿನೆಟ್‍ಗೆ ಬನ್ನಿ ಎಲ್ಲವೂ ಸರಿ ಆಗುತ್ತೆ: ಸಿಎಂ ಮಾತಿಗೆ ಸಚಿವರು ಅಚ್ಚರಿ

    ಬೆಂಗಳೂರು: 15 ಶಾಸಕರು ಈಗಾಗಲೇ ರಾಜೀನಾಮೆ ನೀಡಿದ್ದರೂ ಸಹ ಸಿಎಂ ಕೂಲ್ ಆಗಿಯೇ ಸಚಿವರಿಗೆ ಖುದ್ದು ಕರೆ ಮಾಡಿ ಮಾತನಾಡಿದ್ದಾರೆ ಎಂಬುದು ಮೂಲಗಳಿಂದ ತಿಳಿದು ಬಂದಿದೆ.

    ಮುಖ್ಯಮಂತ್ರಿ ಖುದ್ದಾಗಿ ಸಚಿವರಿಗೆ ಕರೆ ಮಾಡಿ, ಯಾವ ಆತಂಕವೂ ಬೇಡ, ಕ್ಯಾಬಿನೆಟ್‍ಗೆ ಬನ್ನಿ ಎಲ್ಲವೂ ಸರಿ ಆಗುತ್ತೆ ಎಂದು ವಿಶ್ವಾಸದಿಂದ ಮಾತನಾಡಿದ್ದಾರೆ. ಸಿಎಂ ವಿಶ್ವಾಸದಿಂದ ಮಾತನಾಡಿದ್ದನ್ನು ನೋಡಿ ಸಚಿವರು ಅಚ್ಚರಿಗೊಂಡಿದ್ದಾರೆ.

    ಸಿಎಂ ಕರೆ ಬಂದಾಗ ಮಹತ್ವದ ವಿಚಾರ ಹೇಳ್ತಾರೇನೋ ಎಂದು ಸಚಿವರು ಎಂದುಕೊಂಡಿದ್ದರು. ಆದರೆ ಸಿಎಂ ಈ ರೀತಿ ಮಾತನಾಡಿದ್ದನ್ನು ನೋಡಿ ಸಚಿವರು ಶಾಕ್ ಆಗಿದ್ದಾರೆ. ಸಿಎಂ ಅವರ ಈ ವಿಶ್ವಾಸಕ್ಕೆ ಕಾರಣ ಯಾರು ಎಂಬ ಪ್ರಶ್ನೆ ಈಗ ಮೂಡಿದೆ.

    ಮೈತ್ರಿ ಸರ್ಕಾರ ಉಳಿಸಿಕೊಳ್ಳಲು ಸಿಎಂ ಕೊನೆಯ ಪ್ರಯತ್ನಕ್ಕೆ ಮುಂದಾದಂತೆ ಕಾಣುತ್ತಿದೆ. ಇಂದು ಬೆಳಗ್ಗೆ 11 ಗಂಟೆಗೆ ಸಂಪುಟ ಸಭೆ ಕರೆದಿರುವ ಮುಖ್ಯಮಂತ್ರಿಗಳು, ಎರಡೂ ಪಕ್ಷಗಳ ಸಚಿವರೊಂದಿಗೆ ಸರ್ಕಾರದ ಅಳಿವು-ಉಳಿವಿನ ಬಗ್ಗೆ ಚರ್ಚಿಸಲಿದ್ದಾರೆ. ಈಗಾಗಲೇ ಅಲ್ಪಮತಕ್ಕೆ ಕುಸಿದಿರುವ ಮೈತ್ರಿ ಸರ್ಕಾರಕ್ಕೆ ಅತೃಪ್ತ ಶಾಸಕರು ಶಾಕ್ ಮೇಲೆ ಶಾಕ್ ನೀಡುತ್ತಿದ್ದಾರೆ.

  • ಕಾಂಗ್ರೆಸ್‍ನ ಎಲ್ಲ ಸಚಿವರ ರಾಜೀನಾಮೆ ಪಡೆದ ಸಿದ್ದರಾಮಯ್ಯ

    ಕಾಂಗ್ರೆಸ್‍ನ ಎಲ್ಲ ಸಚಿವರ ರಾಜೀನಾಮೆ ಪಡೆದ ಸಿದ್ದರಾಮಯ್ಯ

    ಬೆಂಗಳೂರು: ಅತೃಪ್ತ ಶಾಸಕರನ್ನು ಮನವೊಲಿಸಲು ಉಪಹಾರ ಕೂಟಕ್ಕೆ ಬಂದ ಎಲ್ಲ ಕಾಂಗ್ರೆಸ್ ಸಚಿವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಸಚಿವರು ತಮ್ಮ ರಾಜೀನಾಮೆ ಪತ್ರವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೊಟ್ಟಿದ್ದರು. ಇಂದು ಬೆಳಗ್ಗೆಯೇ ಸಿದ್ದರಾಮಯ್ಯ ಉಪಹಾರ ಕೂಟಕ್ಕೆ ಬರುವಾಗಲೇ ನೀವು ರಾಜೀನಾಮೆ ಕೊಡಬೇಕು ಎಂದು ಕಾಂಗ್ರೆಸ್ ಸಚಿವರಿಗೆ ಸಂದೇಶ ರವಾನಿಸಿದ್ದರು. ಅದರಂತೆಯೇ ಉಪಹಾರ ಕೂಟಕ್ಕೆ ಬಂದ ಕೈ ಶಾಸಕರು ಬೇಸರದಿಂದಲೇ ರಾಜೀನಾಮೆ ನೀಡಿದ್ದಾರೆ.

    ಸಿದ್ದರಾಮಯ್ಯ ತಮ್ಮ ಸಚಿವರ ರಾಜೀನಾಮೆಯನ್ನು ಪಡೆದುಕೊಂಡಿದ್ದಾರೆ. ಇನ್ನು ಜೆಡಿಎಸ್ ಸಚಿವರು 12 ಗಂಟೆಗೆ ತನ್ನ ರಾಜೀನಾಮೆ ಸಲ್ಲಿಸಲಿದ್ದಾರೆ. ಸಿಎಂ ಸದ್ಯಕ್ಕೆ ತಾಜ್‍ವೆಸ್ಟೆಂಡ್ ಹೋಟೆಲ್‍ಗೆ ಹೋಗಿದ್ದಾರೆ.

    10 ಜೆಡಿಎಸ್ ಸಚಿವರ ರಾಜೀನಾಮೆಗೆ ಸಿಎಂ ಸೂಚನೆ ಕೊಟ್ಟಿದ್ದಾರೆ. ಹೀಗಾಗಿ ಅವರೆಲ್ಲರನ್ನೂ ತಾಜ್ ವೆಸ್ಟೆಂಡ್ ಹೋಟೆಲ್‍ಗೆ ಬರುವಂತೆ ಸೂಚನೆ ನೀಡಿದ್ದಾರೆ. ಹೀಗಾಗಿ ಜೆಡಿಎಸ್ ಸಚಿವರು ಹೋಟೆಲ್‍ಗೆ ಬರುತ್ತಾರೆ.

    ಕಳೆದ ದಿನವೇ ಕಾಂಗ್ರೆಸ್ ಮತ್ತು ಜೆಡಿಎಸ್ ಸಚಿವರ ಬಳಿ ರಾಜೀನಾಮೆ ಪಡೆದುಕೊಳ್ಳುವ ಬಗ್ಗೆ ಚೆರ್ಚೆ ಮಾಡಲಾಗಿತ್ತು. ಆದ್ದರಿಂದ ಸಚಿವರಿಂದ ರಾಜೀನಾಮೆ ಪಡೆದುಕೊಳ್ಳುತ್ತಿದ್ದಾರೆ. ಎಲ್ಲ ಸಚಿವ ಸ್ಥಾನವನ್ನು ಖಾಲಿ ಇಟ್ಟುಕೊಂಡು ಬಳಿಕ ರಾಜೀನಾಮೆ ಕೊಟ್ಟಿರುವ ಅತೃಪ್ತ ಶಾಸಕರಿಗೆ ಸಚಿವ ಸ್ಥಾನ ಕೊಡುವಂತೆ ಮನವೊಲಿಸುವ ಪ್ರಯತ್ನವನ್ನು ಕೈ-ದಳದ ನಾಯಕರು ಮಾಡುತ್ತಿದ್ದಾರೆ. ಇತ್ತ ಮುಳುಬಾಗಿನಿಂದ ಪಕ್ಷೇತರ ಶಾಸಕನಾಗಿ ಆಯ್ಕೆಯಾಗಿ ಬಳಿಕ ಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದ ನಾಗೇಶ್ ಈಗಾಗಲೇ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಅತೃಪ್ತರ ಜೊತೆ ಸೇರಿಕೊಳ್ಳಲು ಮುಂಬೈಗೆ ತೆರಳಿದ್ದಾರತೆ ಎಂಬ ಮಾಹಿತಿ ಲಭ್ಯವಾಗಿದೆ.

  • ಉಪಾಹಾರ ಕೂಟದಲ್ಲೇ ಸಚಿವರ ರಾಜೀನಾಮೆ?

    ಉಪಾಹಾರ ಕೂಟದಲ್ಲೇ ಸಚಿವರ ರಾಜೀನಾಮೆ?

    ಬೆಂಗಳೂರು: ಮೈತ್ರಿ ಸರ್ಕಾರದ ಉಳಿವಿಗಾಗಿ ಹೈಕಮಾಂಡ್ ಬಂಡಾಯ ಶಾಸಕರ ಮನವೊಲಿಕೆಗೆ ಹಿರಿಯ ಸಚಿವರ ರಾಜೀನಾಮೆಗೆ ಸೂಚನೆ ನೀಡಿತ್ತು. ಇದೀಗ ಉಪಾಹಾರ ಕೂಟದಲ್ಲೇ ಸಚಿವರು ರಾಜೀನಾಮೆ ಕೊಡುವ ಸಾಧ್ಯತೆ ಇದೆ.

    ಉಪಮುಖ್ಯಮಂತ್ರಿ ಪರಮೇಶ್ವರ್ ನಿವಾಸದಲ್ಲಿ ಸಂಪುಟದಲ್ಲಿರುವ ಕಾಂಗ್ರೆಸ್ ಸಚಿವರಿಗೆ ಉಪಹಾರ ಕೂಟವನ್ನು ಆಯೋಜಿಸಲಾಗಿದೆ. ಉಪಹಾರ ಕೂಟಕ್ಕೆ ಬರುವ ಸಚಿವರಿಂದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಪತ್ರ ಪಡೆಯಲಿದ್ದಾರೆ. ಹೀಗಾಗಿ ಈಗಾಗಲೇ ರಾಜೀನಾಮೆ ಪತ್ರದೊಂದಿಗೆ ಬರುವಂತೆ ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

    ಇಂದು ಉಪಹಾರಕ್ಕೆ ಬರುವ ಸಚಿವರ ಪಟ್ಟಿಯನ್ನು ಸಿದ್ದರಾಮಯ್ಯ ಅವರು ಮಾಡಿದ್ದಾರೆ. ಅದರಂತೆಯೇ ಯಾರೆಲ್ಲಾ ರಾಜೀನಾಮೆ ಕೊಡಬೇಕು ಎಂದು ಸೂಚನೆ ಕೊಟ್ಟಿದ್ದಾರೆ. ಅದರಂತೆ ಹಿರಿಯ ಸಚಿವರು ಉಪಹಾರ ಕೂಟಕ್ಕೆ ಬರುವಾಗಲೇ ರಾಜೀನಾಮೆ ಕೊಡಬೇಕು ಎಂದು ಸಿದ್ದರಾಮಯ್ಯ ಅವರು ಸಂದೇಶವನ್ನು ರವಾನಿಸಿದ್ದಾರೆ ಎನ್ನಲಾಗಿದೆ.

    ಸಚಿವರು ರಾಜೀನಾಮೆ ಕೊಡುತ್ತಿರುವುದರಿಂದ ಇದಕ್ಕೂ ಸ್ಪೀಕರ್ ಗೂ ಸಂಬಂಧ ಇರುವುದಿಲ್ಲ. ಮೊದಲಿಗೆ ಸಿದ್ದರಾಮಯ್ಯ ರಾಜೀನಾಮೆ ಪಡೆದುಕೊಂಡು ನಂತರ ಅದನ್ನು ಸಿಎಂಗೆ ಹಸ್ತಾಂತರಿಸಲಾಗುತ್ತದೆ.

    ಬಂಡಾಯ ಶಾಸಕರ ಮನವೊಲಿಕೆಗೆ ಕಾಂಗ್ರೆಸ್ ಹೈಕಮಾಂಡ್ ಕೈ ಪಕ್ಷದ ಹಿರಿಯ ಶಾಸಕರಾದ ಯು.ಟಿ.ಖಾದರ್, ಕೃಷ್ಣ ಬೈರೇಗೌಡ, ಕೆಜೆ ಜಾರ್ಜ್, ದೇಶಪಾಂಡೆ, ಡಿ.ಕೆ.ಶಿವಕುಮಾರ್ ಅವರ ರಾಜೀನಾಮೆ ನೀಡುವಂತೆ ಸೂಚನೆ ನೀಡಿತ್ತು. ಹಿರಿಯ ಸಚಿವರಿಂದ ರಾಜೀನಾಮೆ ಪಡೆದು ಈ ಸ್ಥಾನಗಳನ್ನು ಅತೃಪ್ತರಿಗೆ ನೀಡಲು ಹೈಕಮಾಂಡ್ ಚಿಂತನೆ ನಡೆಸಿದೆ.

  • ಮೈತ್ರಿ ಸರ್ಕಾರ ಉಳಿಸಲು ಕೊನೆಯ ಅಸ್ತ್ರ ಪ್ರಯೋಗಕ್ಕೆ ಮುಂದಾದ ಹೈಕಮಾಂಡ್

    ಮೈತ್ರಿ ಸರ್ಕಾರ ಉಳಿಸಲು ಕೊನೆಯ ಅಸ್ತ್ರ ಪ್ರಯೋಗಕ್ಕೆ ಮುಂದಾದ ಹೈಕಮಾಂಡ್

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಮೈತ್ರಿ ಸರ್ಕಾರದ 11 ಶಾಸಕರು ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಸರ್ಕಾರದ ಉಳಿವಿಗೆ ಪ್ರಯತ್ನ ನಡೆಸುತ್ತಿರುವ ಹೈಕಮಾಂಡ್ ಬಂಡಾಯ ಶಾಸಕರ ಮನವೊಲಿಕೆಗೆ ಹಿರಿಯ ಸಚಿವರ ರಾಜೀನಾಮೆಗೆ ಸೂಚನೆ ನೀಡಿದೆ ಎನ್ನಲಾಗಿದೆ.

    ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರಾದ ಯು.ಟಿ.ಖಾದರ್, ಕೃಷ್ಣ ಬೈರೇಗೌಡ, ಕೆಜೆ ಜಾರ್ಜ್, ದೇಶಪಾಂಡೆ, ಡಿ.ಕೆ.ಶಿವಕುಮಾರ್ ಅವರ ರಾಜೀನಾಮೆ ಹೈಕಮಾಂಡ್ ಸೂಚನೆ ನೀಡಿದೆ ಎನ್ನಲಾಗಿದೆ. ಹಿರಿಯ ಸಚಿವರಿಂದ ರಾಜೀನಾಮೆ ಪಡೆದು ಈ ಸ್ಥಾನಗಳನ್ನು ಅತೃಪ್ತರಿಗೆ ನೀಡಲು ಹೈಕಮಾಂಡ್ ಚಿಂತನೆ ನಡೆಸಿದೆ.

    ಸರ್ಕಾರ ಉಳಿಸಿಕೊಳ್ಳುವುದ್ದಕ್ಕೆ ಯಾವುದೇ ತ್ಯಾಗಕ್ಕೂ ಸಿದ್ಧವಾಗಿರುವ ರಾಜ್ಯ ಉಸ್ತುವಾರಿ ವೇಣುಗೋಪಾಲ ಅವರು ಹಿರಿಯ ಸಚಿವರ ರಾಜೀನಾಮೆಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಇದರಿಂದ ತೆರವಾಗುವ ಸ್ಥಾನಗಳನ್ನು ಬಂಡಾಯ ನಾಯಕರಾಗಿರುವ ರಾಮಲಿಂಗಾರೆಡ್ಡಿ, ರಮೇಶ್ ಜಾರಕಿಹೊಳಿ, ಬಿ.ಸಿ ಪಾಟೀಲ್ ಹಾಗೂ ಎಚ್ ವಿಶ್ವನಾಥ್ ಅವರಿಗೆ ನೀಡಲು ಚಿಂತನೆ ನಡೆಸಲಾಗಿದೆ.

    ಜಲಸಂಪ್ಮೂಲ ಸಚಿವ ಡಿಕೆ ಶಿವಕುಮಾರ್ ಅವರು ವಿಧಾನಸೌಧದ ಸ್ಪೀಕರ್ ಕಚೇರಿಯಲ್ಲೇ ಬಂಡಾಯ ಶಾಸಕ ಮನವೊಲಿಕೆ ಮುಂದಾಗಿದ್ದರು. ಅಲ್ಲದೇ ರಾಜೀನಾಮೆ ಬಳಿಕ ಕಾಂಗ್ರೆಸ್ ಶಾಸಕರಾದ ರಾಮಲಿಂಗಾ ರೆಡ್ಡಿ, ಮುನಿರತ್ನ ಸೇರಿದಂತೆ ಮತ್ತೆ ಇಬ್ಬರು ಶಾಸಕರು ಡಿಕೆ ಶಿವಕುಮಾರ್ ಅವರೊಂದಿಗೆ ತೆರಳಿದ್ದಾರೆ. ಈಗಾಗಲೇ ಸ್ಪೀಕರ್ ಅವರು ರಾಜೀನಾಮೆ ಪರಿಶೀಲನೆಗೆ 3 ದಿನಗಳ ಅವಧಿ ಕೇಳಿರುವುದರಿಂದ ಕಾಂಗ್ರೆಸ್ ಹೈಕಮಾಂಡ್‍ಗೆ ಹೆಚ್ಚಿನ ಸಮಯವೇ ಸಿಕ್ಕಿದೆ. ಈ ಹಿನ್ನೆಲೆಯಲ್ಲಿಯೇ ಹಿರಿಯ ಸಚಿವರ ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.

    ಇತ್ತ ಮಾಧ್ಯಮಗಳೊಂದಿಗೆ ಸಚಿವರ ರಾಜೀನಾಮೆ ಕುರಿತು ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅವರು, ಸರ್ಕಾರ ಉಳಿಸಿಕೊಳ್ಳಲು ನಮ್ಮ ಮುಂದೆ ಎಲ್ಲಾ ಅವಕಾಶಗಳು ಇದೆ. ಈಗಾಗಲೇ ಹೈಕಮಾಂಡ್‍ಗೆ ಮಾಹಿತಿ ನೀಡಿದ್ದು, ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರು ತಮ್ಮ ನಿರ್ಧಾರವನ್ನು ಕೈಗೊಳ್ಳಲಿದ್ದಾರೆ. ಮುಂದಿನ ಅವಧಿಯಲ್ಲಿ ಎಲ್ಲವೂ ಸ್ಪಷ್ಟವಾಗಲಿದೆ. ಸರ್ಕಾರಕ್ಕೆ ಯಾವುದೇ ತೊಂದರೆ ಆಗುವುದಿಲ್ಲ. ಸಮ್ಮಿಶ್ರ ಸರ್ಕಾರ ಮುಂದುವರಿಯುತ್ತದೆ ಎಂದರು.