ಮೈಸೂರು: ಚಾಮುಂಡಿಬೆಟ್ಟದ ಅಪಾಯಕಾರಿ ಸ್ಥಳಗಳಲ್ಲಿ ಶೀಘ್ರವೇ ಶಾಶ್ವತ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಚಾಮುಂಡಿಬೆಟ್ಟದ ನಂದಿ ಮಾರ್ಗದಲ್ಲಿ ಕಳೆದ ವಾರ ಭೂಕುಸಿತವಾಗಿದ್ದ ಸ್ಥಳಕ್ಕೆ ಸಚಿವರು ಸೋಮವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭೂಕುಸಿತದ ಕುರಿತು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಅವರ ಜೊತೆ ಮಾತನಾಡಲಾಗಿದೆ. ದೀಪಾವಳಿ ನಂತರ ಅವರು ಸಹ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ವಸ್ತುಸ್ಥಿತಿ ತಿಳಿದುಕೊಳ್ಳಲು ಇಂದು ನಾನು ಭೇಟಿ ನೀಡಿದ್ದೇನೆ. ಹೆಚ್ಚು ಹಾನಿಯಾಗಿದ್ದು ಈ ಕೂಡಲೇ ಪರಿಹಾರ ಕಾರ್ಯಕೈಗೊಳ್ಳುವಂತೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.
ಇದಕ್ಕೂ ಮೊದಲು ಮಳೆ ಹಾನಿ ಕುರಿತಂತೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಲು ಜಿಪಂ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಮಾತನಾಡಿದ ಸಚಿವರು, ಮೈಸೂರು ನಗರ ಮತ್ತು ಜಿಲ್ಲೆಯಲ್ಲಿ ಮಳೆ ಹಾನಿ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಜಿಲ್ಲೆಯ ಎಲ್ಲಾ ಶಾಸಕರು ಕೂಡ ಒಟ್ಟಾಗಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮಳೆ ಹಾನಿ ಕುರಿತು ಅವರ ಗಮನಕ್ಕೆ ತರೋಣ ಎಂದರು. ಇದನ್ನೂ ಓದಿ: ಇನ್‍ಸ್ಟಾದಿಂದ ಮದುವೆ ಫೋಟೋ ಡಿಲೀಟ್ ಮಾಡಿದ ಸಮಂತಾ
147.96 ಎಕರೆ ಬೆಳೆ ಹಾನಿ, 214.97 ಎಕರೆ ತೋಟಗಾರಿಕೆ ಬೆಳೆ ಹಾನಿಯಾಗಿದ್ದರೆ ಅಂದಾಜು 700 ಕಿ.ಮೀ.ನಷ್ಟು ರಸ್ತೆ ಹಾಳಾಗಿದೆ. 67 ಪ್ರಾಥಮಿಕ ಶಾಲೆಗಳು, 33 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾನಿಗೊಳಗಾಗಿವೆ ಎಂದು ಅಧಿಕಾರಿಗಳು ತಿಳಿಸಿದರು. ಇದನ್ನೂ ಓದಿ:ಮುಂದಿನ ವರ್ಷ ಜಿಲ್ಲಾ, ರಾಜ್ಯೋತ್ಸವ ಪ್ರಶಸ್ತಿಗೆ ಏಕರೂಪ ನಿಯಮ: ಸುನಿಲ್ ಕುಮಾರ್
ಈ ಸಂದರ್ಭದಲ್ಲಿ ಶಾಸಕ ಜಿ.ಟಿ.ದೇವೇಗೌಡ, ಮೂಡಾ ಅಧ್ಯಕ್ಷ ರಾಜೀವ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ, ಡಿಸಿಪಿ ಗೀತಾ ಪ್ರಸನ್ನ ಸೇರಿದಂತೆ ಹಲವು ಅಧಿಕಾರಿಗಳು ಹಾಜರಿದ್ದರು.
ಮೈಸೂರು: ಈ ಬಾರಿಯ ದಸರಾ ಮಹೋತ್ಸವಕ್ಕೆ ಸರ್ಕಾರ 6 ಕೋಟಿ ಅನುದಾನ ಬಿಡುಗಡೆ ಮಾಡಿತ್ತು. ಇದರಲ್ಲಿ 5,42,07,679 ರೂ. ಖರ್ಚಾಗಿದ್ದು, 57 ಲಕ್ಷ ರೂ.ಗೂ ಹೆಚ್ಚು ಹಣ ಉಳಿತಾಯವಾಗಿದೆ ಎಂದು ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಖರ್ಚುವೆಚ್ಚಗಳ ಮಾಹಿತಿ ಬಿಡುಗಡೆ ಮಾಡಿದರು.
ಮೈಸೂರು ದಸರಾಗೆ 4,22,07,679 ರೂ., ಖರ್ಚಾಗಿದೆ. ಶ್ರೀರಂಗಪಟ್ಟಣ, ಚಾಮರಾಜನಗರ ದಸರಾ ಆಚರಣೆಗೆ ತಲಾ 50 ಲಕ್ಷ ರೂ., ಅರಕಲಗೂಡು ದಸರಾಗೆ 20 ಲಕ್ಷ ರೂ. ಬಿಡುಗಡೆ ಮಾಡಿದ್ದು ಒಟ್ಟು 5,42,07,679 ರೂ. ಹಣ ಖರ್ಚಾಗಿದೆ ಎಂದು ವಿವರಿಸಿದರು.
ಮೈಸೂರು ದಸರಾ ಆಮಂತ್ರಣ ಪತ್ರಿಕೆ ಮುದ್ರಣ ಇತ್ಯಾದಿಗಳಿಗೆ 5,91,960 ರೂ. ಖರ್ಚಾಗಿದ್ದರೆ, ಗಣ್ಯರು ಮತ್ತು ಕಲಾವಿದರ ಸಾರಿಗೆ ವ್ಯವಸ್ಥೆಗೆ 29,16,416 ರೂ. ಖರ್ಚಾಗಿದೆ. ಜಂಬೂಸವಾರಿ ಮೆರವಣಿಗೆಗೆ 37,50,772 ರೂ., ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಕಲಾವಿದರ ಸಂಭಾವನೆಗೆ 1,03,64,272 ರೂ. ಖರ್ಚಾಗಿದೆ. ಸ್ತಬ್ಧ ಚಿತ್ರ ನಿರ್ಮಾಣಕ್ಕೆ 18,85,102 ರೂ., ಆನೆಗಳ ನಿರ್ವಹಣೆಗೆ 50 ಲಕ್ಷ ರೂ., ದಸರಾ ಕಾರ್ಯಕ್ರಮಗಳ ವೇದಿಕೆ ಮತ್ತು ವಿದ್ಯುತ್ ಕಾಮಗಾರಿಗಳ ವ್ಯವಸ್ಥೆಗಾಗಿ 93,80,000 ರೂ., ವೆಬ್ ಕ್ಯಾಸ್ಟಿಂಗ್ ಗೆ 11,09,200 ರೂ. ವೆಚ್ಚವಾಗಿದೆ. ಅರಮನೆಗೆ ಗೌರವ ಸಂಭಾವನೆಯಾಗಿ 40 ಲಕ್ಷ ರೂ., ದೂರದರ್ಶನದಲ್ಲಿ ಜಂಬೂಸವಾರಿ ನೇರಪ್ರಸಾರ ಮಾಡಿದ್ದಕ್ಕೆ 6,22,513 ರೂ., ದಸರಾ ಆನೆಗಳು ಹಾಗೂ ಕಾವಾಡಿಗರ ವಿಮೆಗೆ 24 ಸಾವಿರ ರೂ. ಭರಿಸಲಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ಚಾಮರಾಜನಗರ ಜಿಲ್ಲಾ ಉಸ್ತುವಾರಿ ಕೊಟ್ರೆ ಮಾಡೋಣ: ವಿ ಸೋಮಣ್ಣ
ದಸರಾ ಸಂಬಂಧ ಉಪ ಸಮಿತಿ ಸಭೆಗೆ ಲೇಖನ ಸಾಮಾಗ್ರಿಗೆ 3245 ರೂ., ಉನ್ನತ ಮಟ್ಟದ ಸಮಿತಿ ಸಭೆ ಶಿಷ್ಟಾಚಾರಕ್ಕೆ ಹೋಟೆಲ್ ಮತ್ತು ಇತರೆ ವೆಚ್ಚಗಳಿಗೆ 47250 ರೂ., ದಸರಾ ಸಂಬಂಧ ನಡೆದ ವಿವಿಧ ಸಭೆಗಳಿಗೆ ಕಾಫಿ, ಟೀ, ಸ್ಮ್ಯಾಕ್ಸ್ ಗೆ 40,878 ರೂ., ಬಿಎಸ್‌ಎನ್‌ಎಲ್‌ಗೆ 78,668 ರೂ., ಉನ್ನತ ಮಟ್ಟದ ಸಭೆಗೆ ಮತ್ತು ವಿಶೇಷಾಧಿಕಾರಿಗಳ ಕಚೇರಿಗೆ ಲೇಖನ ಸಾಮಾಗ್ರಿ ಖರೀದಿಗೆ 90,919 ರೂ., ಜಂಬೂ ಸವಾರಿ ನೇರ ವೀಕ್ಷಣೆ ವಿವರಣೆ ಬಿತ್ತರಿಸಲು ಆಕಾಶವಾಣಿಗೆ 67 ಸಾವಿರ ರೂ. ಪಾವತಿಸಲಾಗಿದೆ. ದಸರಾ ಕಾರ್ಯಕ್ರಮಗಳ ಫೋಟೋ, ವೀಡಿಯೋಗ್ರಾಫಿಗೆ 95 ಸಾವಿರ ರೂ., ಸ್ವಚ್ಛತೆ ನಿರ್ವಹಣೆಗೆ 10, 76,072 ರೂ., ವಾರ್ತಾ ಇಲಾಖೆಗೆ 64,412 ರೂ., ದಸರಾ ರಂಗೋತ್ಸವ ಕಾರ್ಯಕ್ರಮಕ್ಕೆ ಅಂದಾಜು 10 ಲಕ್ಷ ರೂ. ವೆಚ್ಚವಾಗಿದೆ ಎಂದು ಸಚಿವರು ಮಾಹಿತಿ ಬಿಡುಗಡೆ ಮಾಡಿದರು.
ಚಾಮರಾಜನಗರ: ಕೊರೊನಾ ನೆಗೆಟಿವ್ ವರದಿ ಇಲ್ಲದೆ ಒಂದು ವಾಹನವನ್ನು ಜಿಲ್ಲೆಯೊಳಗೆ ಬಿಟ್ಟರೂ ಸಸ್ಪೆಂಡ್ ಮಾಡಬೇಕಾಗುತ್ತೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಅಧಿಕಾರಿಗಳಿಗೆ ಎಚ್ಚರಿಸಿದ್ದಾರೆ.
ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ತಮಿಳುನಾಡು-ಕರ್ನಾಟಕ ಚೆಕ್ ಪೋಸ್ಟ್ ಗೆ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ ನೀಡಿದರು. ಈ ವೇಳೆ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ಕರ್ನಾಟಕ-ತಮಿಳುನಾಡು ಗಡಿ ಭಾಗದ ಕೆಕ್ಕನಹಳ್ಳ ಚೆಕ್ ಪೋಸ್ಟ್ ಗೆ ಭೇಟಿ ನೀಡಿದ್ದ ಸಚಿವ ಸೋಮಶೇಖರ್ ಕೊರೊನಾ ನೆಗೆಟಿವ್ ವರದಿ ಇಲ್ಲದಿದ್ದರೆ ಗಡಿಯಿಂದ ವಾಪಸ್ ಕಳುಹಿಸಿ ಎಂದು ತಿಳಿಸಿದರು.
ನಾನು ಯಾವ ಸಮಯದಲ್ಲಿ ಬೇಕಾದರೂ ಬಂದು ಪರಿಶೀಲನೆ ನಡೆಸುತ್ತೇನೆ. ಚೆಕ್ ಪೋಸ್ಟ್ ದಾಟಿ ಬಂದ ವಾಹನವನ್ನು ಪರಿಶೀಲಿಸಿದಾಗ ನೆಗೆಟಿವ್ ವರದಿ ಇಲ್ಲದಿದ್ದರೆ ನೀವೇ ಜವಾಬ್ದಾರರು. ಬಹಳ ಗಂಭೀರವಾಗಿ ತೆಗೆದುಕೊಳ್ಳಬೇಕು. ಕಟ್ಟುನಿಟ್ಟಿನ ಬಂದೋಬಸ್ತ್ ಮಾಡಬೇಕು ಎಂದು ಸಚಿವ ಸೋಮಶೇಖರ್ ಖಡಕ್ ಸೂಚನೆ ನೀಡಿದರು.
ಬೆಂಗಳೂರು/ಮೈಸೂರು: ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ಪೂರ್ವಾಶ್ರಮದ ಮಾತೃಶ್ರೀ ಶಿವನಾಗಮ್ಮ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವ ಎಸ್.ಟಿ ಸೋಮಶೇಖರ್, ಮುರುಗೇಶ್ ನಿರಾಣಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಧ್ಯಾತ್ಮಿಕ ಸಾಧನೆಯಲ್ಲಿ ಶಿವವನಾಗಮ್ಮ ಅವರು ಗಾಢ ಪ್ರಭಾವ ಬೀರಿದ್ದರು. ಸಾಹಿತ್ಯ, ಸಂಸ್ಕೃತಿ, ಆಧ್ಯಾತ್ಮಿಕ ವಿಷಯಗಳ ಬಗ್ಗೆ ಆಳವಾದ ಜ್ಞಾನವನ್ನು ಹೊಂದಿದ್ದ ಅವರು ತಮ್ಮ ಮಕ್ಕಳು ಸನ್ಮಾರ್ಗದಲ್ಲಿ ನಡೆಯಲು ಪ್ರೇರೇಪಿಸಿದ್ದರು. ಮತೃರ ಆತ್ಮಕ್ಕೆ ಸದ್ಗತಿ ದೊರೆಯಲಿ ಹಾಗೂ ಅವರ ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ಪೂರ್ವಾಶ್ರಮದ ಮಾತೃಶೀ ಶ್ರೀಮತಿ ಶಿವನಾಗಮ್ಮನವರ ನಿಧನಕ್ಕೆ ಮುಖ್ಯಮಂತ್ರಿ @BSYBJP ರವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮೃತರ ಆತ್ಮಕ್ಕೆ ಸದ್ಗತಿಯನ್ನು ಹಾಗೂ ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಮುಖ್ಯಮಂತ್ರಿಗಳು ಪ್ರಾರ್ಥಿಸಿದ್ದಾರೆ.
ಸೋಮಶೇಖರ್ ಸಂತಾಪ:
ಸುತ್ತೂರು ಶ್ರೀಗಳ ಪೂರ್ವಶ್ರಮದ ಮಾತೃಶ್ರೀ ಶಿವನಾಗಮ್ಮನವರು ಲಿಂಗೈಕ್ಯರಾದದ್ದು ತುಂಬಾ ನೋವಿನ ಸಂಗತಿ. ಸುಮಾರು 90 ವರ್ಷಗಳು ಸಾರ್ಥಕವಾಗಿ ಬದುಕಿ ಬಾಳಿದವರು ಅವರು. ವಕೀಲರಾಗಿದ್ದ ದಿವಂಗತ ಎಸ್.ಎಂ. ಪ್ರಭುಸ್ವಾಮಿಯವರ ಶ್ರೀಮತಿಯಾಗಿ ತಮ್ಮ 6 ಜನ ಮಕ್ಕಳಿಗೆ ಬಾಲ್ಯದಲ್ಲಿ ಒಳ್ಳೆಯ ಶಿಕ್ಷಣ ಮತ್ತು ಸಂಸ್ಕಾರವನ್ನು ಕೊಟ್ಟು ಸಮಾಜಕ್ಕೆ ಆಸ್ತಿಯಾಗಿ ಬೆಳೆಸಿದರು. ಶಿವನಾಗಮ್ಮ ಅವರ ಲಿಂಗೈಕ್ಯದಿಂದ ಉಂಟಾಗಿರುವ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ದಯಪಾಲಿಸಲಿ ಎಂದು ಪ್ರಾರ್ಥಿಸುವುದಾಗಿ ಎಸ್‍ಟಿ ಸೋಮಶೇಖರ್ ತಿಳಿಸಿದ್ದಾರೆ. ಇದನ್ನೂ ಓದಿ: ಕಲಬುರಗಿ ಕೇಂದ್ರೀಯ ವಿವಿಯ ವಿಶ್ರಾಂತ ಕುಲಪತಿ ಪ್ರೊ.ಮಹೇಶ್ವರಯ್ಯ ನಿಧನ
ಮುರುಗೇಶ್ ನಿರಾಣಿ ಸಂತಾಪ:
ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರು ತಮ್ಮ ಪೂರ್ವಾಶ್ರಮದ ಮಾತೃಶೀ ಶ್ರೀಮತಿ ಶಿವನಾಗಮ್ಮ ಅವರಿಂದ ಪ್ರೇರೇಪಣೆ ಪಡೆದು ಧಾರ್ಮಿಕ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಕಾರಣೀಭೂತರಾಗಿದ್ದರು ಎಂದು ಸ್ಮರಿಸಿದ್ದಾರೆ. ಸುತ್ತೂರು ಶ್ರೀಗಳು ಶಿಕ್ಷಣ, ಅನ್ನದಾಸೋಹ, ಆರೋಗ್ಯ, ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಮಾಡಿರುವ ಸಾಧನೆಗೆ ಶಿವವನಾಗಮ್ಮ ಅವರ ಮಾರ್ಗದರ್ಶನ ಕಾರಣವಾಗಿತ್ತು. ಸಾಹಿತ್ಯ, ಸಂಸ್ಕೃತಿ, ಆಧ್ಯಾತ್ಮಿಕ ವಿಷಯಗಳ ಬಗ್ಗೆ ಆಳವಾದ ಜ್ಞಾನವನ್ನು ಹೊಂದಿದ್ದ ಅವರು ಶ್ರೀಗಳನ್ನು ಸನ್ಮಾರ್ಗದಲ್ಲಿ ನಡೆಯಲು ಪ್ರೇರೇಪಿಸಿದ್ದ ಅಪರೂಪದ ಮಹಾನ್ ತಾಯಿ ಎಂದು ಬಣ್ಣಿಸಿದ್ದಾರೆ. ಮತೃರ ಆತ್ಮಕ್ಕೆ ಸದ್ಗತಿ ದೊರೆಯಲಿ ಹಾಗೂ ಅವರ ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಗಣಿ ಮತ್ತು ಭೂವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ನಿರಾಣಿ ಅವರು ತಮ್ಮ ಶೋಕ ಸಂದೇಶದಲ್ಲಿ ಪ್ರಾರ್ಥಿಸಿದ್ದಾರೆ.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಸುತ್ತೂರು ಶ್ರೀಗಳ ಪೂರ್ವಾಶ್ರಮದ ತಾಯಿ ಶಿವನಾಗಮ್ಮ(90) ಇಂದು ಮುಂಜಾನೆ ಮೈಸೂರಿನ JSS ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಅಂತ್ಯಕ್ರಿಯೆ ನಡೆಯಲಿದೆ.
ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ವ್ಯಾಕ್ಸಿನೇಶನ್ ಪ್ರಕ್ರಿಯೆಗೆ ಕಾರ್ಯಯೋಜನೆಯನ್ನು ರೂಪಿಸಿದ್ದು, ಜೂನ್ ಮಾಸಾಂತ್ಯದೊಳಗೆ ವ್ಯಾಕ್ಸಿನೇಶನ್ ಕಾರ್ಯವು ಒಂದು ಹಂತಕ್ಕೆ ಬರಲಿದೆ. ಜುಲೈ ಮಾಸಾಂತ್ಯದೊಳಗೆ ಯಶವಂತಪುರ ಕ್ಷೇತ್ರವು ಶೇಕಡಾ ನೂರು ವ್ಯಾಕ್ಸಿನೇಶನ್ ಪಡೆದ ಕ್ಷೇತ್ರವಾಗಲಿದೆ ಎಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ತರಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋವಿಡ್‌ನಿಂದ ಮೃತಪಟ್ಟ ಕುಟುಂಬದವರಿಗೆ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರಿಂದ ವೈಯಕ್ತಿಕವಾಗಿ ಕೊಡಮಾಡುವ 1 ಲಕ್ಷ ರೂಪಾಯಿ ಸಹಾಯಧನವನ್ನು ನೀಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ವ್ಯಾಕ್ಸಿನೇಶನ್‌ಗೆ ಸಂಬಂಧಪಟ್ಟಂತೆ ಗೊಂದಲಗಳು ಬಗೆಹರಿದಿವೆ. ಕೆಲವರು ವೃಥಾ ಆರೋಪಗಳನ್ನು ಮಾಡಿದರು, ಕೊರತೆ ಇದೆ ಎಂದೆಲ್ಲ ಹೇಳಿದರು. ಆದರೆ, ಎಲ್ಲವೂ ಸರಿ ಇದ್ದು, ನಾಳೆಯಿಂದಲೇ 1 ವಾರ್ಡ್ ಗೆ 1 ಸಾವಿರ ಜನರಿಗೆ ವ್ಯಾಕ್ಸಿನೇಶನ್ ಮಾಡುವ ಕಾರ್ಯಕ್ಕೆ ಚಾಲನೆ ದೊರೆಯಲಿದೆ. 18ರಿಂದ 45 ವರ್ಷದವರಿಗೂ ಲಸಿಕೆ ಲಭ್ಯವಾಗಲಿದೆ ಎಂದರು.
ವ್ಯಾಕ್ಸಿನೇಶನ್ ಬಗ್ಗೆಯ ತಪ್ಪು ಕಲ್ಪನೆ ದೂರ ಮಾಡಿಕೊಳ್ಳಿ: ವ್ಯಾಕ್ಸಿನೇಶನ್ ಬಗ್ಗೆ ಅನೇಕ ಗೊಂದಲಗಳು, ತಪ್ಪು ಕಲ್ಪನೆಗಳು ಮೂಡಿದ್ದು, ಇದನ್ನು ಎಲ್ಲರೂ ದೂರ ಮಾಡಿಕೊಳ್ಳಬೇಕು. ಜ್ವರ ಬರಲಿದೆ, ತಲೆನೋವು ಬರಲಿದೆ ಹೀಗೆ ಏನೆಲ್ಲ ಹೇಳಲಾಗುತ್ತದೆ. ಆದರೆ, ಇದು ಎಲ್ಲರಿಗೂ ಆಗುವುದಿಲ್ಲ. ಒಂದು ವೇಳೆ ಜ್ವರ ಬಂದರೂ ಸಹ ಅದಕ್ಕೆ ವೈದ್ಯರು ಮಾತ್ರೆಯನ್ನು ಕೊಟ್ಟು ಕಳುಹಿಸುತ್ತಾರೆ. ಇಂದು ದೇಶದಲ್ಲಿ ಕೋಟ್ಯಂತರ ಜನ ವ್ಯಾಕ್ಸಿನೇಶನ್ ಪಡೆದಿದ್ದಾರೆ. ಹಾಗಾಗಿ ಭಯ ಬೇಡ. ಇನ್ನು ವ್ಯಾಕ್ಸಿನೇಶನ್ ಸಿಗದು ಎಂಬ ಭಯ, ಆತಂಕ ಯಾರಿಗೂ ಬೇಡ ಎಂದು ಸಚಿವರಾದ ಸೋಮಶೇಖರ್ ತಿಳಿಸಿದರು. ಇದನ್ನೂ ಓದಿ: ‘ನುಡಿದಂತೆ ನಡೆದವನ ಅಡಿಗೆನ್ನ ನಮನ’ ವಾಕ್ಯ ಸೋಮಶೇಖರ್ಗೆ ಅನ್ವರ್ಥ: ಕಟೀಲ್
ಚಿಕಿತ್ಸೆ ಪಡೆಯುವುದೊಂದೇ ಇದಕ್ಕೆ ಪರಿಹಾರ: ಕೊರೋನಾ ಎರಡನೇ ಅಲೆ ವಿಪರೀತವಾಗಿದೆ. ಇದರಿಂದ ಸಾವು-ನೋವಿನ ಪ್ರಮಾಣ ಹೆಚ್ಚಿವೆ. ಏನೆಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡರೂ ಸಹ ನಿಯಂತ್ರಣ ಕಷ್ಟವಾಗಿದೆ. ನನ್ನ ಕ್ಷೇತ್ರದಲ್ಲಿಯೇ ಸುಮಾರು ಏಳೂವರೆ ಸಾವಿರ ಸೋಂಕು ಪ್ರಕರಣಗಳು ದಾಖಲಾಗಿದ್ದವು. ಅವರಲ್ಲಿ ಆರೂವರೆ ಸಾವಿರಕ್ಕೂ ಹೆಚ್ಚು ಮಂದಿ ಗುಣಮುಖರಾಗಿದ್ದಾರೆ. ಹೀಗಾಗಿ ಯಾರೂ ಧೈರ್ಯಗೆಡಬಾರದು ಚಿಕಿತ್ಸೆ ಪಡೆಯುವುದೊಂದೇ ಇದಕ್ಕೆ ಪರಿಹಾರ ಎಂದರು.
ಸೋಂಕಿನ ಲಕ್ಷಣಗಳು ಕಂಡಕೂಡಲೇ ವೈದ್ಯರ ಬಳಿ ಚಿಕಿತ್ಸೆ ಪಡೆದು, ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕು. ಸೋಂಕು ತಗುಲಿದ್ದರೆ, ಕೂಡಲೇ ಟ್ರಯಾಜ್ ಸೆಂಟರ್ ಗಳಿಗೆ ಭೇಟಿ ಕೊಟ್ಟರೆ, ಅಲ್ಲಿರುವ ವೈದ್ಯರು ಸೋಂಕಿನ ತೀವ್ರತೆ, ಯಾವ ರೀತಿಯ ಚಿಕಿತ್ಸೆ ಅವಶ್ಯಕತೆ ಇದೆ, ಮನೆಯಲ್ಲಿದ್ದರೆ ಸಾಕೇ? ಕೋವಿಡ್ ಕೇರ್ ಸೆಂಟರ್‌ಗೆ ಬರಬೇಕೇ? ಆಕ್ಸಿಜನ್ ಬೆಡ್ ಅವಶ್ಯಕತೆ ಇದೆಯೇ? ಎಂಬಿತ್ಯಾದಿ ಮಾಹಿತಿಯನ್ನು ಕೊಡುತ್ತಾರೆ ಎಂದು ಸಚಿವರು ಮಾಹಿತಿ ನೀಡಿದರು.
ಮನೆಯತ್ತ ವೈದ್ಯರು: ಕೋವಿಡ್ ನಿಯಂತ್ರಣ ಮಾಡಲೇಬೇಕೆಂಬ ನಿಟ್ಟಿನಲ್ಲಿ ನಮ್ಮ ಕ್ಷೇತ್ರದಲ್ಲಿ ವೈದ್ಯರ ತಂಡದೊಂದಿಗೆ ಸಾಕಷ್ಟು ಶ್ರಮಿಸಲಾಗುತ್ತಿದೆ. ಹೀಗಾಗಿ ಇನ್ನೂ ಒಂದು ಹೆಜ್ಜೆ ಮುಂದಕ್ಕೆ ಹೋಗಿದ್ದು, ಹಳ್ಳಿಗಳ ಮನೆ ಮನೆಗೆ ಭೇಟಿ ನೀಡುತ್ತಿದ್ದು, ಲಕ್ಷಣಗಳು ಕಂಡು ಬಂದರೆ ಅಲ್ಲಿಯೇ ಟೆಸ್ಟ್ ಮಾಡಿ, ಚಿಕಿತ್ಸೆ ಕೊಡಿಸುವ ಕೆಲಸವನ್ನೂ ಮಾಡಲಾಗುತ್ತಿದೆ ಎಂದರು.
ಸೋಂಕಿತರ ಸಂಖ್ಯೆ ಇಳಿಮುಖ: ಯಶವಂತಪುರ ಕ್ಷೇತ್ರದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಮುಖ ಕಂಡಿದೆ. ಸಾವಿನ ಪ್ರಮಾಣದಲ್ಲೂ ಕಡಿಮೆಯಾಗುತ್ತಿದೆ. ಹೀಗಾಗಿ ಚಿಕಿತ್ಸೆ ಪಡೆದು ಎಲ್ಲರೂ ಗುಣಮುಖರಾಗಬೇಕು. ಜೊತೆಗೆ ವ್ಯಾಕ್ಸಿನೇಶನ್ ಪಡೆದುಕೊಳ್ಳಬೇಕು ಎಂದು ಸಚಿವ ಎಸ್.ಟಿ.ಸೋಮಶೇಖರ್ ಕಿವಿಮಾತು ಹೇಳಿದರು. ಬಿಬಿಎಂಪಿ ಮಾಜಿ ಸದಸ್ಯರಾದ ಆರ್ಯ ಶ್ರೀನಿವಾಸ್ ಸೇರಿದಂತೆ ಮತ್ತಿತರ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಬಿಜೆಪಿ ಸೇರ್ಪಡೆಗೊಂಡ ಅರುಣ್ ಕುಮಾರ್: ಹೆಮ್ಮಿಗೆಪುರ ವಾರ್ಡ್ 198ರ ತಲಘಟ್ಟಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರಾದ ಅರುಣ್ ಕುಮಾರ್ ಅವರು ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು. ಇದೇ ವೇಳೆ ಸಚಿವರಾದ ಎಸ್.ಟಿ.ಸೋಮಶೇಖರ್ ಅವರಿಂದ 198 ಹೆಮ್ಮಿಗೆಪುರ ವಾರ್ಡ್ ಪಡಿತರ ಕಿಟ್ ವಿತರಣೆಗೆ ಚಾಲನೆ ನೀಡಲಾಯ್ತು.
24 ಕುಟುಂಬಗಳಿಗೆ 1 ಲಕ್ಷ ರೂ. ಸಹಾಯಧನ ವಿತರಣೆ: ಕೊರೋನಾ ಮಹಾಮಾರಿಯಿಂದ ಮೃತಪಟ್ಟ ಆರ್ಥಿಕವಾಗಿ ಹಿಂದುಳಿದ ಕುಟುಂಬದವರಿಗೆ ಸಚಿವರಾದ ಸೋಮಶೇಖರ್ ಅವರು 1 ಲಕ್ಷ ರೂಪಾಯಿಗಳ ವೈಯಕ್ತಿಕ ಧನಸಹಾಯವನ್ನು ಇಂದು ಯಶವಂತಪುರ ವಿಧಾನಸಭಾ ಕ್ಷೇತ್ರದ ವಿವಿಧೆಡೆ ವಿತರಣೆ ಮಾಡಿದರು. ತರಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 10 ಮಂದಿಗೆ, ಸೋಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 6 ಮಂದಿ ಹಾಗೂ ನೆಲಗುಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 8 ಮಂದಿಯ ಆರ್ಥಿಕವಾಗಿ ಹಿಂದುಳಿದವರ ಕುಟುಂಬ ವರ್ಗದವರಿಗೆ ಸಹಾಯಧನವನ್ನು ಸಚಿವರು ವಿತರಿಸಿದರು. ಈ ಮೂಲಕ ಒಟ್ಟು 24 ಕುಟುಂಬಗಳಿಗೆ ಭಾನುವಾರ ವೈಯಕ್ತಿಕವಾಗಿ 1 ಲಕ್ಷ ರೂಪಾಯಿಗಳ ಸಹಾಯಧನವನ್ನು ಸಚಿವರು ವಿತರಣೆ ಮಾಡಿದರು.
ಕೊರೋನಾ ವಾರಿಯರ್ಸ್ ಗಳಿಗೆ ಪ್ರೋತ್ಸಾಹಧನ ವಿತರಣೆ: ಸೋಮನಹಳ್ಳಿ, ತರಳು, ನೆಲಗುಳಿ ಗ್ರಾಮ ಪಂಚಾಯಿತಿಗಳ ಅಂಗನವಾಡಿ, ಆಶಾ ಕಾರ್ಯಕರ್ತರಿಗೆ ಹಾಗೂ ವಾಟರ್ ಮನ್ ಗಳಿಗೆ ಆಯಾ ಗ್ರಾಮ ಪಂಚಾಯಿತಿ ವತಿಯಿಂದ ಪ್ರೋತ್ಸಾಹಧನ ಮತ್ತು ಪಡಿತರ ಕಿಟ್ ವಿತರಣೆ ಮಾಡಲಾಯಿತು. ಕಗ್ಗಲಿಪುರ ಗ್ರಾಮ ಪಂಚಾಯಿತಿ ವತಿಯಿಂದ ಕೊರೋನಾ ವಾರಿಯರ್ಸ್‌ಗಳಾದ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರು, ಆಸ್ಪತ್ರೆ ಸಿಬ್ಬಂದಿಗೆ 5 ಸಾವಿರ ರೂಪಾಯಿ ಪ್ರೋತ್ಸಾಹಧನ, ರೇಷನ್ ಕಿಟ್‌ಗಳನ್ನು ವಿತರಿಸಲಾಯಿತು.
ಪಟ್ಟರೆಡ್ಡಿಪಾಳ್ಯದಲ್ಲಿ ಮಕ್ಕಳಿಗೆ ಪ್ರೋತ್ಸಾಹಧನ: ಪಟ್ಟರೆಡ್ಡಿಪಾಳ್ಯದ ಬೆಂಗಳೂರು ಸಹಕಾರ ಹಾಲು ಒಕ್ಕೂಟದ ವತಿಯಿಂದ ಬೆಂಗಳೂರು ದಕ್ಷಿಣ ಕ್ಷೇತ್ರ ಶಿಬಿರ ಕಚೇರಿಯಲ್ಲಿ ಯಶವಂತಪುರ ಕ್ಷೇತ್ರ ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರ ಮಕ್ಕಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು. ಇದೇ ವೇಳೆ, ಸದಸ್ಯರಿಗೆ ನಂದಿನಿ ತುಪ್ಪವನ್ನು ವಿತರಣೆ ಮಾಡಲಾಯಿತು.
ಬೆಂಗಳೂರು: ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಪದವಿ ಪಡೆಯುವವರಿಗೆ ಗ್ರಾಮೀಣ ಸೇವೆ ಕಡ್ಡಾಯ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಚಿವ ಎಸ್.ಟಿ.ಸೋಮಶೇಖರ್ ಪತ್ರ ಬರೆದಿದ್ದಾರೆ.
ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಪದವಿ ಪಡೆಯುವವರಿಗೆ ಕನಿಷ್ಟ 5 ವರ್ಷಗಳ ಕಾಲ ಗ್ರಾಮೀಣ ಸೇವೆ ಕಡ್ಡಾಯ ಮಾಡಬೇಕು ಎಂದು ಎಸ್.ಟಿ.ಸೋಮಶೇಖರ್ ಒತ್ತಾಯಿಸಿದ್ದಾರೆ.
ಈ ಹಿಂದೆ ಸಹ ಈ ಬಗ್ಗೆ ಸಾಕಷ್ಟು ಚರ್ಚೆ ನಡೆದಿತ್ತು. ಸರ್ಕಾರಿ ವೈದ್ಯರು ಗ್ರಾಮೀಣ ಭಾಗದಲ್ಲಿ ಸೇವೆ ಮಾಡಲು ಹಿಂಜರಿಯುತ್ತಿದ್ದಾರೆ. ಹೀಗಾಗಿ ವೈದ್ಯಕೀಯ ಪದವಿ ಪಡೆಯುವವರಿಗೆ ಇಂಟರ್ನ್‍ಶಿಪ್ ಅಥವಾ ಇಂತಿಷ್ಟು ವರ್ಷಗಳ ಕಾಲ ಗ್ರಾಮೀಣ ಸೇವೆ ಕಡ್ಡಾಯ ಮಾಡಬೇಕು ಎಂದು ಹಲವರು ಧ್ವನಿ ಎತ್ತಿದ್ದರು. ಇದಕ್ಕೆ ಕೆಲವರು ವಿರೋಧ ಸಹ ವ್ಯಕ್ತಪಡಿಸಿದ್ದರು. ಇದೀಗ ಸಚಿವ ಎಸ್.ಟಿ.ಸೋಮಶೇಖರ್ ಅವರು ಸಿಎಂಗೆ ಪತ್ರ ಬರೆಯುವ ಮೂಲಕ ಮತ್ತೆ ಗಮನ ಸೆಳೆದಿದ್ದಾರೆ.
ಪತ್ರದಲ್ಲಿ ಏನಿದೆ?
ನಮ್ಮ ರಾಜ್ಯದಲ್ಲಿ ಪ್ರತಿಭಾವಂತರಿಗೇನೂ ಕೊರತೆ ಇಲ್ಲ. ಹಾಗೇ ರಾಜ್ಯ ಸರ್ಕಾರ ಸಹ ಪ್ರತಿಭಾವಂತರಿಗೆ ಪ್ರತಿಭಾ ಪುರಸ್ಕಾರ ಹಾಗೂ ಆರ್ಥಿಕ ಸಹಕಾರವನ್ನು ನೀಡುತ್ತಾ ಬಂದಿದೆ. ಇದಕ್ಕೆ ವೈದ್ಯಕೀಯ ಶಿಕ್ಷಣ ರಂಗವೂ ಹೊರತಾಗಿಲ್ಲ. ಪ್ರತಿ ವರ್ಷ ವೈದ್ಯಕೀಯ ಶಿಕ್ಷಣಕ್ಕೆ ಸರ್ಕಾರ ಅಗಾಧವಾಗಿ ಖರ್ಚು ಮಾಡುತ್ತಾ ಬಂದಿದೆ. ಸರ್ಕಾರಿ ಕೋಟಾದಲ್ಲಿ ಓದುವ ಒಬ್ಬ ವೈದ್ಯಕೀಯ ವಿದ್ಯಾರ್ಥಿ ವಿದ್ಯಾಭ್ಯಾಸ ಅವಧಿಯನ್ನು ಮುಗಿಸುವ ಹೊತ್ತಿಗೆ ಸರ್ಕಾರದಿಂದ 40 ರಿಂದ 50 ಲಕ್ಷ ರೂ. ವೆಚ್ಚ ಮಾಡಲಾಗುತ್ತಿದೆ. ಸರ್ಕಾರ ಇಷ್ಟೆಲ್ಲಾ ವೆಚ್ಚ ಮಾಡಿದರೂ ನಮ್ಮ ಪ್ರತಿಭೆಗಳು ನಮಗೆ ದಕ್ಕುತ್ತಿಲ್ಲ. ಕೆಲವು ವೈದ್ಯರು ನಮ್ಮ ಸೌಲಭ್ಯವನ್ನು ಪಡೆದು, ಕಲಿತು ವಿದೇಶಗಳಿಗೆ ಹೋಗಿ ಅಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಹೀಗಾಗಿ ನಮ್ಮ ರಾಜ್ಯದಲ್ಲಿ ವೈದ್ಯರ ಕೊರತೆ ಹೆಚ್ಚಾಗುತ್ತಿದೆ. ತಮ್ಮ ಕಾಲಾವಧಿಯಲ್ಲಿ ಇಂಥದ್ದೊಂದು ಪ್ರಕ್ರಿಯೆಗೆ ಕಡಿವಾಣ ಬೀಳಬೇಕಿದೆ. ನಮ್ಮ ಪ್ರತಿಭೆಗಳು ನಮ್ಮಲ್ಲಿಯೇ ಸೇವೆ ಸಲ್ಲಿಸುವಂತಾಗಬೇಕು. ಪ್ರತಿಭಾ ಪಲಾಯನ ನಿಲ್ಲುವಂತಾಗಬೇಕು.
ಸರ್ಕಾರಿ ಕೋಟಾದಲ್ಲಿ ಕಲಿತ ವೈದ್ಯರು ಕನಿಷ್ಠ ನಮ್ಮ ರಾಜ್ಯದಲ್ಲಿ 5 ವರ್ಷಗಳ ಕಾಲ ಸೇವೆ ಸಲ್ಲಿಸಬೇಕು. ಈ ಮೂಲಕ ನಮ್ಮ ರಾಜ್ಯದ ಹಳ್ಳಿ ಹಳ್ಳಿಗಳಲ್ಲೂ ಸಹ ನುರಿತ ತಜ್ಞ ವೈದ್ಯರ ಸೇವೆ ಲಭಿಸಬೇಕು. ಇಂದು ಹಳ್ಳಿ ಎಂದರೆ ಮೂಗು ಮುರಿಯುವ ಮನೋಭಾವ ಹೆಚ್ಚಾಗುತ್ತಿದೆ. ಆದರೆ ಹಳ್ಳಿ ಸಶಕ್ತವಾಗಿದ್ದರೆ, ಆರೋಗ್ಯವಾಗಿದ್ದರೆ ದೇಶದ ಅಭಿವೃದ್ಧಿ ಎಂಬುದನ್ನು ಎಲ್ಲರಿಗೂ ಮನವರಿಕೆ ಮಾಡಿಕೊಡಬೇಕಿದೆ. ಹಳ್ಳಿಗಳಲ್ಲಿ ಕೆಲಸ ಮಾಡುವ ಮನೋಭಾವಕ್ಕೆ ನಾವು ಪ್ರೋತ್ಸಾಹ ನೀಡಬೇಕಿದ್ದು, ಇದಕ್ಕೊಂದು ಸೂಕ್ತ ಕಾನೂನು ಚೌಕಟ್ಟು ನಿರ್ಮಾಣ ಮಾಡುವುದು ಮುಖ್ಯವಾಗುತ್ತದೆ.
ಹೀಗಾಗಿ ನಮ್ಮ ರಾಜ್ಯದ ಸಕಲ ಸೌಕರ್ಯವನ್ನು ಪಡೆದು ವೈದ್ಯರಾಗಿ ಹೊರ ಬರುವ ಪ್ರತಿಯೊಬ್ಬರೂ ಸಹ ರಾಜ್ಯದಲ್ಲಿ 5 ವರ್ಷ ಕಡ್ಡಾಯವಾಗಿ ವೃತ್ತಿಯನ್ನು ಸಲ್ಲಿಸಬೇಕು ಎಂಬ ನಿಟ್ಟಿನಲ್ಲಿ ಕಾನೂನೊಂದನ್ನು ತಾವು ರೂಪಿಸಬೇಕು. ಈಗಾಗಲೇ ಹೀಗೆ ಸೇವೆ ಮಾಡುವ ವೈದ್ಯರಿಗೆ ಅತಿ ಹೆಚ್ಚಿನ ವೇತನವನ್ನು ನೀಡುತ್ತೇವೆ. ಸೌಲಭ್ಯಗಳನ್ನು ಕೊಡುತ್ತೇವೆಂದರೂ ವೈದ್ಯರು ಮುಂದೆ ಬರುತ್ತಿಲ್ಲ. ಹೀಗಾಗಿ ಈ ಕ್ಷೇತ್ರಕ್ಕೆ ಇನ್ನೂ ಹೆಚ್ಚಿನ ಅನುದಾನವನ್ನು ಕಲ್ಪಿಸಿಕೊಡುವ ಮೂಲಕ ಹಳ್ಳಿಗಳಿಗೂ ಉತ್ತಮ ವೈದ್ಯಕೀಯ ಸೇವೆ ಲಭಿಸುವಂತೆ ಮಾಡಬೇಕಿದೆ. ಈ ಮೂಲಕ ನಮ್ಮ ರಾಜ್ಯದ ಹಣವನ್ನು ಬಳಸಿ ವೈದ್ಯರಾದವರ ಸೇವೆಯನ್ನು ನಮ್ಮ ರಾಜ್ಯದ ನಾಗರಿಕರಿಗೇ ಲಭಿಸುವಂತಾಗಬೇಕು.
ಈಗ ಕೊರೊನಾ ಸಂಕಷ್ಟ ಕಾಲವಾಗಿರುವುದರಿಂದ ಇಂಥದ್ದೊಂದು ನಿಲುವಿನ ಅಗತ್ಯವಿದೆ. ಜೊತೆಗೆ ಸರ್ಕಾರಿ ಸೌಲಭ್ಯ ಪಡೆಯುವ ಪ್ರತಿಯೊಬ್ಬರಲ್ಲೂ ಇಂತಹ ಮನೋಭಾವ ಬರಬೇಕಿದೆ. ಇಂತಹ ಸಂದಿಗ್ದ ಸಂದರ್ಭದಲ್ಲಿ ಜನಸಾಮಾನ್ಯರಿಗೆ ವೈದ್ಯಕೀಯ ನೆರವು ಸಿಗಬೇಕೆಂದರೆ ಕಠಿಣವಾದ ನಿರ್ಧಾರವನ್ನು ಸಚಿವ ಸಂಪುಟದಲ್ಲಿ ಚರ್ಚಿಸಿ, ಸದನದಲ್ಲಿ ಮಂಡಿಸಿ ಜಾರಿಗೊಳಿಸಬೇಕಾಗಿ ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ಈ ಮೂಲಕ ಪ್ರತಿಭಾ ಪಲಾಯನಕ್ಕೆ ತಡೆ ಹಾಕಬೇಕಿದೆ.
ಕರ್ನಾಟಕದಲ್ಲಿ ಕಾರ್ಯ ನಿರ್ವಹಿಸುವ ಬಗ್ಗೆ ಕಟ್ಟುನಿಟ್ಟಿನ ನೀತಿಯನ್ನು ಸರ್ಕಾರದಿಂದ ರಚಿಸಬೇಕಿದ್ದು, ವೈದ್ಯಕೀಯ ಶಿಕ್ಷಣ ಓದಿಗೆ ಅವರು ಮುಂದಾಗುವಾಗಲೇ ಸರ್ಕಾರಿ ಕೋಟಾದ ಲಾಭ ಪಡೆಯಬೇಕೆಂದಿದ್ದರೆ, ಅವರ ಮೆರಿಟ್ ಆಧಾರದ ಜೊತೆಗೆ ರಾಜ್ಯದಲ್ಲಿ 5 ವರ್ಷ ಸೇವೆ ಸಲ್ಲಿಸುತ್ತೇವೆಂಬ ಕರಾರಿಗೆ ಮೊದಲೇ ಸಹಿ ಹಾಕಿಸಿಕೊಳ್ಳುವಂತಹ ನಿಟ್ಟಿನಲ್ಲಿ ಕಾನೂನು ರೂಪಿಸಿದರೆ ಪರಿಹಾರ ದೊರಕಬಹುದು ಎಂಬುದು ನನ್ನ ಅಭಿಪ್ರಾಯವಾಗಿದೆ. ಈ ನಿಟ್ಟಿನಲ್ಲಿ ತಾವುಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಸಂಪುಟದಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳುವಂತೆ ಮತ್ತೊಮ್ಮೆ ತಮ್ಮಲ್ಲಿ ಮನವಿ ಮಾಡುತ್ತೇನೆ.
ಮಂಡ್ಯ: ಬೆಂಗಳೂರಿನಲ್ಲಿ ಲಾಕ್‍ಡೌನ್ ಹೆಚ್ಚಿಸುವ ಸಂದರ್ಭ ಬರಬಹುದು ಎಂದು ತೋಟಗಾರಿಕಾ ಸಚಿವ ಕೆ.ಸಿ.ನಾರಾಯಣಗೌಡ ಭವಿಷ್ಯ ನುಡಿದಿದ್ದಾರೆ.
ಲಾಕ್‍ಡೌನ್ ಕುರಿತು ನಗರದಲ್ಲಿ ಮಾತನಾಡಿದ ಅವರು, ಮುಂಬೈ, ಮದ್ರಾಸ್ ಹಾಗೂ ಇತರೆಡೆಗಳಿಂದ ಹೆಚ್ಚಿನ ಜನ ಬರ್ತಿದ್ದಾರೆ. ಹೊರಗಿಂದ ಹೆಚ್ಚು ಜನ ಬಂದಿದ್ದರಿಂದಲೇ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚು ಹರಡುತ್ತಿದೆ. ಬೆಂಗಳೂರಿನಲ್ಲಿ ಕೊರೊನಾ ನಿಯಂತ್ರಿಸಲು ಸಿಎಂ ತೀರ್ಮಾನ ತೆಗೆದುಕೊಂಡು ಸದ್ಯ ಒಂದು ವಾರಗಳ ಕಾಲ ಸರ್ಕಾರ ಲಾಕ್‍ಡೌನ್ ಮಾಡುವ ಆದೇಶ ನೀಡಿದ್ದಾರೆ. ಲಾಕ್‍ಡೌನ್ ಇನ್ನೂ ಹೆಚ್ಚಿಸುವ ಸಂದರ್ಭ ಬರಬಹುದು ಎಂದು ತಿಳಿಸಿದ್ದಾರೆ.
ಕೊರೊನಾ ಯಾರ ಕೈಯಲ್ಲೂ ಕಂಟ್ರೋಲ್ ಇಲ್ಲ. ದೇಶಾದ್ಯಂತ ಸೋಂಕು ವ್ಯಾಪಕವಾಗಿ ಹರಡಿದೆ. ಅದೇ ರೀತಿ ರಾಜ್ಯದಲ್ಲೂ ಹೆಚ್ಚಿದೆ. ಕೊರೊನಾ ನಿಯಂತ್ರಣಕ್ಕೆ ಬಾರದಿದ್ದರೆ ಲಾಕ್‍ಡೌನ್ ಅವಧಿ ಹೆಚ್ಚಿಸುವ ಸಂದರ್ಭ ಬರಬಹುದು ಎಂದು ತಿಳಿಸಿದ್ದಾರೆ.
ಇದಕ್ಕೆ ಪ್ರತಿಯಾಗಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಮಾತನಾಡಿದ್ದು, ರಾಜ್ಯದಲ್ಲಿ ಎಲ್ಲೂ ಕೂಡ ಲಾಕ್‍ಡೌನ್ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಈ ಮೂಲಕ ಇಬ್ಬರು ಸಚಿವರು ಬೇರೆ ಬೇರೆ ಹೇಳಿಕೆ ನೀಡುವ ಮೂಲಕ ಗೊಂದಲವನ್ನುಂಟು ಮಾಡಿದ್ದಾರೆ. ಒಬ್ಬರು ಲಾಕ್‍ಡೌನ್ ಮುಂದುವರೆಯುತ್ತೆ ಎಂದರೆ, ಇನ್ನೊಬ್ಬರು ಇಲ್ಲ ಎನ್ನುತ್ತಿದ್ದಾರೆ. ಈ ಮೂಲಕ ದ್ವಂದ್ವ ಹೇಳಿಕೆ ನೀಡಿದ್ದಾರೆ.
ಸಚಿವ ನಾರಾಯಣಗೌಡರ ಹೇಳಿಕೆಗೆ ಪ್ರತಿಯಾಗಿ ಸಚಿವ ಸೋಮಶೇಖರ್ ಪ್ರತಿಕ್ರಿಯಿಸಿದ್ದು, ಲಾಕ್‍ಡೌನ್ ವಿಚಾರ ಪ್ರಸ್ತಾಪವಾಗಿಲ್ಲ. ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಮಾಡುವುದಿಲ್ಲ. ರಾಜ್ಯದಲ್ಲಿ ಎಲ್ಲೂ ಕೂಡ ಲಾಕ್‍ಡೌನ್ ಇಲ್ಲ. ಸೋಂಕಿತರು ಇರುವ ಕಡೆ ಸೀಲ್‍ಡೌನ್ ಮಾಡಬಹುದು ಅಷ್ಟೆ. ಬೆಂಗಳೂರಿನಲ್ಲಿ ಲಾಕ್‍ಡೌನ್ ಮುಂದುವರೆಯಲ್ಲ. ಈಗ ಎಷ್ಟು ದಿನ ಲಾಕ್‍ಡೌನ್ ಇದೆಯೋ ಅಷ್ಟೆ, ಲಾಕ್‍ಡೌನ್ ಮತ್ತೆ ಆಗುವುದಿಲ್ಲ ಎಂದಿದ್ದಾರೆ.
ಚಿಕ್ಕೋಡಿ: ಲಾಕ್‍ಡೌನ್ ವಿಚಾರದಲ್ಲಿ ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸಹಕಾರಿ ಸಚಿವ ಎಸ್.ಟಿ.ಸೋಮಶೇಖರ್ ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆ ಹಾಗೂ ಸಹಕಾರಿ ಇಲಾಖೆ ವತಿಯಿಂದ ಆಶಾ ಕಾರ್ಯಕರ್ತರಿಗೆ ಚೆಕ್ ವಿತರಣೆ ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲಾಕ್‍ಡೌನ್ ಮಾಡುವ ನಿರ್ಧಾರ ಕೈಗೊಳ್ಳಲು ಆಯಾ ಜಿಲ್ಲಾಡಿಳತಕ್ಕೆ ಬಿಡಲಾಗಿದೆ. ಬೆಂಗಳೂರಿನಲ್ಲಿ ಜನರಿಗೆ ತೊಂದರೆಯಾಗುತ್ತದೆ ಎಂಬ ಕಾರಣಕ್ಕೆ ಲಾಕ್‍ಡೌನ್ ಮಾಡಲಾಗಿದೆ ಎಂದರು.
ಬೆಂಗಳೂರು ಲಾಕ್‍ಡೌನ್ ಮಾಡುವದರ ಬಗ್ಗೆ ಸಿಎಂ ನಿರ್ಣಯ ತೆಗೆದುಕೊಂಡಿದ್ದಾರೆ. ಸಿಎಂ ಯಡಿಯೂರಪ್ಪನವರು ಕೋವಿಡ್-19 ಸಂದರ್ಭದಲ್ಲಿ 18ರ ಯುವಕರಂತೆ ಕಾರ್ಯನಿರ್ವಹಿಸುತ್ತಿದ್ದಾರೆ. ನಿದ್ದೆಯಿಲ್ಲದೆ ಮುಖ್ಯಮಂತ್ರಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಕಾರ್ಯ ವೈಖರಿ ಬಗ್ಗೆ ಯಾರೂ ಮಾತನಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಹಾಡಿ ಹೊಗಳಿದರು. ಅಲ್ಲದೆ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣಾ ವಿಚಾರದಲ್ಲಿ ಬಿಜೆಪಿಯಲ್ಲಿ ಯಾವುದೇ ಬಣ ಇಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.
ಇದಕ್ಕೂ ಮೊದಲು ಜೊಲ್ಲೆ ಉದ್ಯೋಗ ಸಮೂಗ ಸಂಸ್ಥೆಯ ಬಿರೇಶ್ವರ ಸಹಕಾರಿ ಬ್ಯಾಂಕ್ ಹಾಗೂ ಸಹಕಾರಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಸಮಾರಂಭದಲ್ಲಿ 1485 ಆಶಾ ಕಾರ್ಯಕರ್ತರಿಗೆ ಒಬ್ಬರಿಗೆ 3 ಸಾವಿರ ರೂ.ಗಳಂತೆ 44.40 ಲಕ್ಷ ರೂ.ಗಳ ಚೆಕ್ ಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಡಿಸಿಎಂ ಲಕ್ಷ್ಮಣ ಸವದಿ, ಸಚಿವೆ ಶಶಿಕಲಾ ಜೊಲ್ಲೆ, ಸಂಸದ ಅಣ್ಣಾಸಾಹೇಬ ಜೊಲ್ಲೆ ಇದ್ದರು.
ಗದಗ: ಮಾಜಿ ಸಚಿವ ಎಚ್.ವಿಶ್ವನಾಥ್ ಅನಾಥರಲ್ಲ, ನಮ್ಮ ಜೊತೆಯಲ್ಲೇ ಇದ್ದಾರೆ. ಬಿಜೆಪಿಗೆ ಬಂದವರಿಗೆ ಒಂದೊಂದು ಅವಕಾಶ ಆಗಿದೆ. ಅದೇ ರೀತಿ ಮುಂದಿನ ದಿನಗಳಲ್ಲಿ ವಿಶ್ವನಾಥ ಅವರಿಗೂ ಅವಕಾಶ ಸಿಗುತ್ತದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಳ್ಳಿಹಕ್ಕಿ ಎಚ್.ವಿಶ್ವನಾಥ್ ಅನಾಥರಲ್ಲ, ಜೊತೆಯಲ್ಲೇ ಇದ್ದಾರೆ. ಬಂದವರಿಗೆ ಒಂದೊಂದು ಅವಕಾಶ ಆಗಿದೆ. ಅದೇ ರೀತಿ ಮುಂದಿನ ದಿನಗಳಲ್ಲಿ ವಿಶ್ವನಾಥ್ ಅವರಿಗೂ ಅವಕಾಶ ಸಿಗುತ್ತದೆ. ನಮಗೆ ಹತ್ತೂ ಜನರಿಗೆ ಒಂದು ಬಾರಿ ಅವಕಾಶ ಆಯಿತು. ಇದೀಗ ಎಂಟಿಬಿ ನಾಗರಾಜ್ ಹಾಗೂ ಆರ್.ಶಂಕರಗೆ ಸ್ಥಾನ ನೀಡಲಾಗಿದೆ. ಮುನಿರತ್ನ ಹಾಗೂ ಪ್ರತಾಪ್‍ಗೌಡ ಪಾಟೀಲ್ ಅವರಿಗೆ ಮುಂದಿನ ತಿಂಗಳು ಚುನಾವಣೆ ನಿಗದಿಯಾಗುತ್ತದೆ. ಎಲ್ಲರಿಗೂ ಹಂತ ಹಂತವಾಗಿ ಸ್ಥಾನ ಸಿಗುತ್ತದೆ ಎಂದು ಹೇಳಿದರು.
ವಿಶ್ವನಾಥ್ ಅವರಿಗೂ ಮುಖ್ಯಮಂತ್ರಿ ಯಡಿಯೂರಪ್ಪ ಎಂಎಲ್‍ಸಿ ಸ್ಥಾನದ ಆಶ್ವಾಸನೆ ನೀಡಿದ್ದಾರೆ. ಯಾರಿಗೂ ಇಲ್ಲ ಎನ್ನುವ ಪ್ರಶ್ನೆಯೇ ಇಲ್ಲ. ಮುಖ್ಯಮಂತ್ರಿಗಳು ನುಡಿದಂತೆ ನಡೆದಿದ್ದಾರೆ. ವಿಶ್ವನಾಥ್ ಸಮೇತ ಮುಖ್ಯಮಂತ್ರಿಗಳ ಭೇಟಿ ಮಾಡಿ, ಈ ಬಗ್ಗೆ ಚರ್ಚಿಸಿದ್ದೇವೆ. ಮುಂದಿನ ಬಾರಿ ಅವಕಾಶ ಕೊಡುವುದಾಗಿ ಹೇಳಿದ್ದಾರೆ. ಇದಕ್ಕೆ ವಿಶ್ವನಾಥ್ ಸಹ ಒಪ್ಪಿಕೊಂಡಿದ್ದಾರೆ ಎಂದರು.
ವಿಶ್ವನಾಥ್ ಅವರಿಗೆ ಅವಕಾಶ ತಪ್ಪಲು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಕುಮಾರಸ್ವಾಮಿ ಕಾರಣ ಎಂಬ ಕುರಿತು ಪ್ರತಿಕ್ರಿಯಿಸಿದ ಅವರು, ಇದು ಅವರ ವೈಯಕ್ತಿಕ ಅಭಿಪ್ರಾಯ. ಬಿಜೆಪಿ ಸರ್ಕಾರ ಯಾವಾಗಲೂ ವಿಶ್ವನಾಥ್ ಅವರ ಜೊತೆಗಿರುತ್ತದೆ ಎಂದು ತಿಳಿಸಿದರು.