Tag: ಸಚಿವ ನಾರಾಯಣ ಗೌಡ

  • ಸಚಿವ ನಾರಾಯಣಗೌಡಗೆ ಕೊರೊನಾ ಪಾಸಿಟಿವ್

    ಸಚಿವ ನಾರಾಯಣಗೌಡಗೆ ಕೊರೊನಾ ಪಾಸಿಟಿವ್

    ಬೆಂಗಳೂರು: ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಈ ಬಗ್ಗೆ ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿದ್ದಾರೆ. ಇತ್ತೀಚೆಗೆ ತಮ್ಮ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಚಿವರು ಮನವಿ ಮಾಡಿದ್ದಾರೆ. ಕೊರೋನಾ ಹೆಚ್ಚಾದ ಹಿನ್ನೆಲೆ ಹಲವಾರು ಕೋವಿಡ್ ಕೇಂದ್ರಗಳಿಗೆ ಭೇಟಿ ನೀಡಿದ್ದೆ. ದಿನದ ನಂತರ ಜ್ವರ ಬಾಧಿಸಿತ್ತು. ಕೋವಿಡ್ ಪರೀಕ್ಷೆ ಮಾಡಿಸಿದಾಗ ಪಾಸಿಟಿವ್ ಎಂದು ಬಂದಿದೆ. ಈ ಹಿನ್ನೆಲೆ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಎಲ್ಲರೂ ಸುರಕ್ಷಿತವಾಗಿರಿ ಎಂದು ಹೇಳಿದ್ದಾರೆ.

    ಟ್ವಿಟ್ಟರ್ ನಲ್ಲಿ ಏನಿದೆ?: ನನಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಮುಂಜಾಗ್ರತೆ ವಹಿಸಿ, ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಈ ಮೂಲಕ ಮನವಿ ಮಾಡುತ್ತಿದ್ದೇನೆ. ಇದನ್ನೂ ಓದಿ:  ಮಲ್ಲಿಕಾರ್ಜುನ ಖರ್ಗೆಗೆ ಕೊರೊನಾ ಪಾಸಿಟಿವ್

    ಇತ್ತೀಚೆಗಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಮಾಧುಸ್ವಾಮಿ ಹಾಗೂ ಆರ್. ಅಶೋಕ್‍ಗೆ ಕೊರೊನಾ ಸೋಂಕು ದೃಢವಾಗಿತ್ತು. ಈ ಬಗ್ಗೆ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದರು. ಇದನ್ನೂ ಓದಿ:  ಶಿವರಾಜ್ ಪಾಟೀಲ್, ಶರಣಗೌಡ ಬಯ್ಯಾಪುರಗೆ ಕೊರೊನಾ ದೃಢ