Tag: ಸಚಿವ ಸೋಮಣ್ಣ

  • ವಿಜಯೇಂದ್ರ ಏನಾದ್ರೂ ಮಾತಾಡಲಿ, ಅವರಿಗೆ ದೇವರು ಒಳ್ಳೆಯದನ್ನೇ ಮಾಡಲಿ: ಸೋಮಣ್ಣ

    ವಿಜಯೇಂದ್ರ ಏನಾದ್ರೂ ಮಾತಾಡಲಿ, ಅವರಿಗೆ ದೇವರು ಒಳ್ಳೆಯದನ್ನೇ ಮಾಡಲಿ: ಸೋಮಣ್ಣ

    ಬೆಂಗಳೂರು: ಬಿ.ವೈ ವಿಜಯೇಂದ್ರ (B.Y.Vijayendra) ಏನಾದರೂ ಮಾತಾಡಲಿ ಅವರಿಗೆ ದೇವರು ಒಳ್ಳೆಯದನ್ನೇ ಮಾಡಲಿ ಎಂದು ಸಚಿವ ಸೋಮಣ್ಣ (V.Somanna)ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ (B.S.Yediyurappa) ನಮ್ಮೆಲ್ಲರಿಗೂ ನಾಯಕರು. ಕೇವಲ ವಿಜಯೇಂದ್ರ ಒಬ್ಬರಿಗೆ ಅವರು ನಾಯಕರಲ್ಲ. ವಿಜಯೇಂದ್ರ ಏನು ಹೇಳಿದ್ದಾರೆ ಎಂಬುದು ನನ್ನ ಗಮನಕ್ಕೆ ಬಂದಿಲ್ಲ. ನಾನು ಕಾಂಗ್ರೆಸ್‍ಗೆ (Congress) ಹೋಗುತ್ತೇನೆ ಎಂದು ಎಲ್ಲೂ ಹೇಳಿಲ್ಲ. ಪಕ್ಷ ತೊರೆಯುವ ಅವಶ್ಯಕತೆ ನನಗಿಲ್ಲ ಎಂದು ಅವರು ತಿಳಿಸಿದ್ದಾರೆ.

    ಯಡಿಯೂರಪ್ಪರ ಹೋರಾಟ ಬೇರೆ. ನನ್ನ ಹೋರಾಟ ಬೇರೆ. ಆದರೆ ವಿಜಯೇಂದ್ರ ಅವರ ಬೆಳವಣಿಗೆಗೆ ಅವರು ಏನು ಮಾಡುತ್ತಾರೆ ಎಂಬುದನ್ನು ಹೇಳಿಕೊಂಡರೆ ಉತ್ತಮ. ನನಗೆ 72 ವರ್ಷ, ವಿಜಯೇಂದ್ರ ಅವರಿಗಿಂತ ದೊಡ್ಡ ಮಗ ಇದ್ದಾನೆ ಎಂದು ನಾನು ಹೇಳಿದ್ದೆ. ಯಡಿಯೂರಪ್ಪ ಹೆಸರು ಬಿಟ್ಟು ತಮ್ಮ ದೂರ ದೃಷ್ಟಿ ಏನು ಎಂದು ವಿಜಯೇಂದ್ರ ಬಹಿರಂಗಪಡಿಸಲಿ ಎಂದಿದ್ದಾರೆ. ಇದನ್ನೂ ಓದಿ: ಡ್ರಮ್‍ನಲ್ಲಿ ಮಹಿಳಾ ಶವ ಪತ್ತೆ ಪ್ರಕರಣ- ಮೂವರ ಬಂಧನ

    ಪಕ್ಷದ ವರಿಷ್ಠರೊಂದಿಗೆ ಮಾತಾಡಿದ್ದೇನೆ. ಎಲ್ಲಾ ಗೊಂದಲಗಳು ಬಗೆಹರಿದಿವೆ. ನಮ್ಮೊಳಗಿನ ಆಂತರಿಕ ಕಲಹಗಳಿಗೆ ತೆರೆ ಎಳೆದು ಪಕ್ಷ ಕಟ್ಟುವಂತೆ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪತನದ ಭೀತಿಯಲ್ಲಿ ಮತ್ತೊಂದು ಬ್ಯಾಂಕ್ – ಕ್ರೆಡಿಟ್ ಸ್ಯೂಸಿ ಸಹಾಯಕ್ಕೆ ನಿಂತ ಸ್ವಿಸ್ ಬ್ಯಾಂಕ್

  • ಬೆಂಗಳೂರು ನಗರ ಜಿಲ್ಲೆಯಲ್ಲಿ ಬಡವರ ಮನೆ ನಿರ್ಮಾಣ: ಸೋಮಣ್ಣ

    ಬೆಂಗಳೂರು ನಗರ ಜಿಲ್ಲೆಯಲ್ಲಿ ಬಡವರ ಮನೆ ನಿರ್ಮಾಣ: ಸೋಮಣ್ಣ

    – 445 ಎಕರೆ ಸರ್ಕಾರಿ ಭೂಮಿ ಹಸ್ತಾಂತರ ಮಾತುಕತೆ

    ಬೆಂಗಳೂರು: ಜಿಲ್ಲೆಯಲ್ಲಿ ಲಭ್ಯವಿರುವ ಸೇರಿದ 445 ಎಕರೆ ಸರ್ಕಾರಿ ಭೂಮಿಯನ್ನು ಪ್ರಧಾನಮಂತ್ರಿ ವಸತಿ ಯೋಜನೆಯನ್ನು ಕಾರ್ಯರೂಪಕ್ಕೆ ತರುವ ಸಲುವಾಗಿ ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಹಸ್ತಾಂತರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಾಯಿತು ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.

    ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಕೈಗೆತ್ತಿಕೊಳ್ಳಲಾಗಿರುವ `1 ಲಕ್ಷ ಬಹುಮಹಡಿ ವಸತಿ ಯೋಜನೆ’ಗೆ ಸರ್ಕಾರದ ಜಮೀನು ಹಸ್ತಾಂತರ ಕುರಿತಂತೆ ಇಂದು ನಡೆದ ಅಧಿಕಾರಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ನಗರ ಜಿಲ್ಲೆಯಲ್ಲಿ ಪ್ರಧಾನಮಂತ್ರಿಗಳು ಎಲ್ಲರಿಗೂ ಸೂರು ಆಶಯದಂತೆ ನಿರ್ಮಾಣ ಮಾಡಲು ಹೊರಟಿರುವ 1 ಲಕ್ಷ ಬಹು ಮಹಡಿ ವಸತಿ ಯೋಜನೆಯಡಿ 316 ಎಕರೆಯಲ್ಲಿ 46,000 ಮನೆಗಳ ನಿರ್ಮಾಣ ವಿವಿಧ ಹಂತಗಳಲ್ಲಿದೆ, ಆಗಸ್ಟ್ 15 ರಂದು ಮುಖ್ಯಮಂತ್ರಿಗಳು 5,000 ಮನೆಗಳನ್ನು ಬಡವರಿಗೆ ವಿತರಿಸಲಿದ್ದಾರೆ ಎಂದು ಪ್ರಕಟಿಸಿದರು.

    ಬೆಂಗಳೂರು ನಗರ ಜಿಲ್ಲೆಯಲ್ಲಿ ಪಕ್ಷ ಬೇಧ ಬಿಟ್ಟು ಎಲ್ಲ ಶಾಸಕರಿಗೂ ತಮ್ಮ ವ್ಯಾಪ್ತಿಯಲ್ಲಿ ಶೇ.50ರಷ್ಟು ಮನೆಗಳನ್ನು ಬಡವರಿಗೆ ವಿತರಿಸಲು ಅವಕಾಶ ಮಾಡಿಕೊಡಲಾಗುವುದು, ಆದರೆ ಅರ್ಹರಿಗೆ ಮಾತ್ರ ಮನೆಗಳನ್ನು ಹಂಚಬೇಕು. ಬಡವರಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಮನೆಗಳನ್ನು ನೀಡಲಾಗುತ್ತಿದೆ, ತಲಾ 7 ಲಕ್ಷ ರೂ ನಿಗದಿ ಪಡಿಸಿದ್ದ ದರಗಳನ್ನು 5 ಲಕ್ಷ ರೂ.ಗಳಿಗೆ ತಗ್ಗಿಸಲಾಗಿದೆ. ಪರಿಶಿಷ್ಟ ಜಾತಿ ಹಾಗೂ ವರ್ಗದವರಿಗೆ 4.20 ಲಕ್ಷ ರೂ. ನಿಗದಿ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

    ಬಡವರಿಗೆ ಸೂರು ಒದಗಿಸುವ ಕೆಲಸದಲ್ಲಿ ಯಾವುದೇ ಅಧಿಕಾರಿಗಳು ವಿಳಂಬ, ಕರ್ತವ್ಯಲೋಪ ಮಾಡಿದರೆ ಕಠಿಣ ಕ್ರಮ ಎದುರಿಸಬೇಕಾಗುವುದು ಎಂದು ಸಚಿವ ಸೋಮಣ್ಣ ಎಚ್ಚರಿಕೆ ನೀಡಿದರು.

    ಕೊಳಚೆ ಅಭಿವೃದ್ಧಿ ಮಂಡಳಿ ಮೂಲಕ 1.80 ಲಕ್ಷ ಮನೆ ನಿರ್ಮಾಣ ಮಾಡುವ ಕೆಲಸ ಆರಂಭವಾಗಿದ್ದು, ವಿವಿಧ ಹಂತದಲ್ಲಿ ಕಾಮಗಾರಿಗಳು ಪ್ರಗತಿಯಲ್ಲಿದೆ. ಒಂದು ವರ್ಷದ ಅವಧಿಯಲ್ಲಿ ಈ ಮನೆಗಳ ನಿರ್ಮಾಣ ಬಹತೇಕ ಮುಗಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು ಮತ್ತು ರಾಜ್ಯದ ವಿವಿಧ ಸ್ಥಳೀಯ ಸಂಸ್ಥೆಗಳು 70,000 ಮನೆಗಳನ್ನು ನಿರ್ಮಿಸುವ ಜವಾಬ್ದಾರಿ ಹೊತ್ತಿವೆ ಎಂದು ಹೇಳಿದರು.

    ಸಭೆಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್, ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಆರ್.ಮಂಜುನಾಥ್, ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮಂಜುನಾಥಪ್ರಸಾದ್, ವಸತಿ ಇಲಾಖೆಯ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ, ರಾಜೀವ್ ಗಾಂಧಿ ವಸತಿ ನಿಗಮದ ಆಯುಕ್ತ ಬಸವರಾಜ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ಹಾಗೂ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ, ಭೂಮಾಪನ ಹಾಗೂ ಭೂ ದಾಖಲೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ತಾಲೂಕುಗಳ ತಹಶೀಲ್ದಾರರು ಉಪಸ್ಥಿತರಿದ್ದರು.

  • ಕತ್ತೆ ಕಾಯಲು ಸಭೆಗೆ ಬರುತ್ತೀರಾ? – ಎಡಿಸಿ ವಿರುದ್ಧ ಸೋಮಣ್ಣ ಗರಂ

    ಕತ್ತೆ ಕಾಯಲು ಸಭೆಗೆ ಬರುತ್ತೀರಾ? – ಎಡಿಸಿ ವಿರುದ್ಧ ಸೋಮಣ್ಣ ಗರಂ

    – ಕೊಡಗು ಎಡಿಸಿಯನ್ನು ತರಟೆಗೆ ತೆಗೆದುಕೊಂಡ ಸೋಮಣ್ಣ

    ಮಡಿಕೇರಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ನಡೆಯುತ್ತಿರುವ ಸಭೆಯಲ್ಲಿ ಕೊಡಗು ಎಡಿಸಿಯನ್ನು ಉಸ್ತುವಾರಿ ಸಚಿವ ಸೋಮಣ್ಣ ತರಟೆಗೆ ತೆಗೆದುಕೊಂಡಿದ್ದಾರೆ.

    ಇಂದು ಕೊಡಗು ಜಿಲ್ಲಾ ಪಂಚಾಯ್ತಿಯಲ್ಲಿ ನಡೆಯುತ್ತಿರುವ ಟಾಸ್ಕ್ ಪೋಸ್೯ ಸಭೆಯಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಅವರ ಅಧ್ಯಕ್ಷತೆ ನಡೆಯುತ್ತಿತ್ತು. ಈ ಸಭೆಯಲ್ಲಿ ಈ ಹಿಂದೆ ನಡೆಸಿದ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಪ್ರೋಸಿಡಿಂಗ್ ಮಾಡದ ಹಿನ್ನೆಲೆಯಲ್ಲಿ ಕೊಡಗು ಎಡಿಸಿ ರಾಜು ಮೊಘವೀರ್ ಅವರವನ್ನು ಸಚಿವರು ಸಭೆಯಲ್ಲಿ ತರಾಟೆಗೆ ತೆಗೆದುಕೊಂಡರು. ಎಡಿಸಿಯಾಗಿ ನಿಮ್ಮ ಕೆಲಸ ಏನು? ನೀವು ಮಾಡುವ ಕೆಲಸ ಎನ್ನಿರುತ್ತೆ..? ಎಂದು ಪ್ರಶ್ನಿಸಿದ್ದಾರೆ.

    ಸರಿಯಾದ ಉತ್ತರ ನೀಡದ ಎಡಿಸಿ ವಿರುದ್ಧ ಗರಂ ಆದರು. ಕೆಲಸ ಮಾಡದೇ ಸುಮ್ಮನೆ ಇರೋದು. ಇಂತಹ ಕೆಲಸ ಮಾಡಲು ಯಾಕೆ ಬರ್ತೀರಾ? ಕತ್ತೆ ಕಾಯಲು ಸಭೆಗೆ ಬರುತ್ತೀರಾ.. ಇನ್ಮುಂದೆ ಸಭೆಯನ್ನು ಲಘುವಾಗಿ ಭಾವಿಸಿದರೆ ಕಟ್ಟುನಿಟ್ಟಿನ ಕ್ರಮ ಕೈಗೋಳ್ಳಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

  • ಮಾತಾಡೋ ಮುನ್ನ ಯೋಚನೆ ಮಾಡಬೇಕು- ಡಿಕೆಶಿ ವಿರುದ್ಧ ಸಚಿವ ಸೋಮಣ್ಣ ಕಿಡಿ

    ಮಾತಾಡೋ ಮುನ್ನ ಯೋಚನೆ ಮಾಡಬೇಕು- ಡಿಕೆಶಿ ವಿರುದ್ಧ ಸಚಿವ ಸೋಮಣ್ಣ ಕಿಡಿ

    – ಸಿಟಿ ರವಿ ಬುದ್ಧಿವಂತ, ಭಾರೀ ಕಿಲಾಡಿ ಇದ್ದಾನೆ

    ಮಡಿಕೇರಿ: ಮೂಳೆ ಇಲ್ಲದ ನಾಲಿಗೆ ಅಂತ ಏನು ಬೇಕಾದರೂ ಮಾತನಾಡಬಹುದು. ಆದರೆ ಹಾಗೆ ಮಾತನಾಡುವುದು ಎಷ್ಟು ಸರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಒಮ್ಮೆ ಯೋಚನೆ ಮಾಡಬೇಕಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಕಿಡಿಕಾತಿದ್ದಾರೆ.

    ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ದಿವಂಗತ ಸುರೇಶ್ ಅಂಗಡಿ ಅವರ ಮೃತದೇಹವನ್ನು ಬಿಜೆಪಿಯವರಿಗೆ ಬೆಳಗಾವಿಗೆ ತರಲು ಆಗಲಿಲ್ಲ ಎಂಬ ಡಿಕೆ ಶಿವಕುಮಾರ್ ಅವರ ಹೇಳಿಕೆಗೆ ತಿರುಗೇಟು ನೀಡಿದರು. ಸುರೇಶ್ ಅಂಗಡಿ ಅವರ ಬಗ್ಗೆ ನನಗೂ ಸಹ ವಿಶೇಷ ಗೌರವವಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೂ ಅವರ ಮೇಲೆ ಅಪಾರ ಗೌರವವಿದೆ. ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ರಾಷ್ಟ್ರ ಕಂಡ ಅಪರೂಪದ ವ್ಯಕ್ತಿತ್ವದವರು. ಅವರು ಮೃತಪಟ್ಟಾಗಲೇ ಅವರ ಮೃತದೇಹವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಲಿಲ್ಲ. ಇದನ್ನೂ ಓದಿ: ನಟಿಯರನ್ನು ಬಿಟ್ಟು ಬೇರೆ ಯಾರೂ ಡ್ರಗ್ಸ್ ತಗೊಂಡಿಲ್ವಾ – ಡಿಕೆಶಿ ಪ್ರಶ್ನೆ

    ಇತಂಹ ಸಂದರ್ಭದಲ್ಲಿ ಸುರೇಶ್ ಅಂಗಡಿ ಅವರ ಮೃತದೇಹವನ್ನು ಹೇಗೆ ತರಬೇಕಿತ್ತು. ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ ಆಗಿದ್ದು, ಅದನ್ನು ರಾಜ್ಯ, ಕೇಂದ್ರ ಸರ್ಕಾರಗಳು ಕಟ್ಟುನಿಟ್ಟಾಗಿ ಪಾಲಿಸಿವೆ. ಇದನ್ನು ಡಿಕೆಶಿ ಆಗಲಿ ಯಾರೇ ಆಗಲಿ ಅರ್ಥ ಮಾಡಿಕೊಳ್ಳಬೇಕು ಎಂದರು.

    ಸಚಿವ ಸಿ.ಟಿ.ರವಿ ಅವರು ಸಚಿವ ಸ್ಥಾನ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ಎರಡನ್ನು ನಿಭಾಯಿಸುತ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸಿ.ಟಿ.ರವಿ ನನಗಿಂತ ಬುದ್ಧಿವಂತ ಮತ್ತು ಬಹಳ ಕಿಲಾಡಿ ಇದ್ದಾನೆ. ಎರಡು ಸ್ಥಾನ ಅಷ್ಟೇ ಅಲ್ಲ ನಾಲ್ಕು ಸ್ಥಾನಗಳನ್ನು ಕೊಟ್ಟರು ನಿಭಾಯಿಸುತ್ತಾರೆ. ರವಿ ಇನ್ನೂ ಎತ್ತರಕ್ಕೆ ಬೆಳೆಯಲಿ ಎಂದು ಆಶಿಸುತ್ತೇನೆ ಎಂದರು. ಇದನ್ನೂ ಓದಿ: ಅಂಗಡಿ ಓರ್ವ ಮಂತ್ರಿಯಾಗಿದ್ರೂ ಬೆಳಗಾವಿಗೆ ತಂದು ಗೌರವ ಸಲ್ಲಿಸಲು ಸರ್ಕಾರಕ್ಕೆ ಆಗಿಲ್ಲ: ಡಿಕೆಶಿ

  • ಜ.2ರಂದು ತುಮಕೂರಿಗೆ ಪ್ರಧಾನಿ ಮೋದಿ: ಡಿಸಿಎಂ ಲಕ್ಷ್ಮಣ ಸವದಿ

    ಜ.2ರಂದು ತುಮಕೂರಿಗೆ ಪ್ರಧಾನಿ ಮೋದಿ: ಡಿಸಿಎಂ ಲಕ್ಷ್ಮಣ ಸವದಿ

    – ಪರಿಹಾರ ಕೊಟ್ಟು ಗಲಭೆಗೆ ಮಮತಾ ಬ್ಯಾನರ್ಜಿ ಪ್ರಚೋದನೆ

    ತುಮಕೂರು: ಮಂಗಳೂರು ಗೋಲಿಬಾರಿನಲ್ಲಿ ಮೃತಪಟ್ಟವರಿಗೆ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಪರಿಹಾರ ಕೊಟ್ಟಿರುವುದನ್ನು ಡಿಸಿಎಂ ಲಕ್ಷ್ಮಣ ಸವದಿ ಕಟುವಾಗಿ ಟೀಕಿಸಿದ್ದು, ಜನರು ಗಲಭೆ ಮಾಡಿಕೊಂಡು ಸತ್ತರೂ ಪರಿಹಾರ ಕೊಡುತ್ತೇವೆ ಎಂದು ಮಮತಾ ಬ್ಯಾನರ್ಜಿ ಪ್ರಚೋದನೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

    ನಗರದಲ್ಲಿ ಮಾತನಾಡಿದ ಲಕ್ಷ್ಮಣ ಸವದಿ ಅವರು, ಪಶ್ಚಿಮ ಬಂಗಾಳದ ಸಿಎಂಗೆ ಕರ್ನಾಟಕದಲ್ಲಿ ಪರಿಹಾರ ನೀಡುವ ಆಸಕ್ತಿಯೇನು? ಈ ಬಗ್ಗೆ ಆಲೋಚಿಸಬೇಕಾಗಿದೆ. ಕೋಮುಗಲಭೆ ಉಂಟುಮಾಡಲು ಎಲ್ಲಾ ಪಕ್ಷಗಳು ಹುನ್ನಾರ ಮಾಡುತ್ತಿವೆ ಎಂಬುವುದು ಸ್ಪಷ್ಟವಾಗಿದೆ. ಜನರು ಗಲಭೆ ಮಾಡಿಕೊಂಡು ಸತ್ತರು ಪರಿಹಾರ ಕೊಡುತ್ತೇವೆ ಎಂದು ಪ್ರಚೋದಿಸುತ್ತಿದ್ದಾರೆ ಎಂದು ಕಿಡಿಕಾರಿದರು.

    ಗಲಭೆಕೋರರಿಗೆ ದಂಡ ಹಾಕುವ ನಿಟ್ಟಿನಲ್ಲಿ ಉತ್ತರ ಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಅವರು ಆಲೋಚಿಸಿದ ರೀತಿಯಲ್ಲಿ ನಾವು ಆಲೋಚನೆ ಮಾಡುತ್ತಿದ್ದೇವೆ. ಗಲಭೆ ಮಾಡಿ ಸಾರ್ವಜನಿಕ ಆಸ್ತಿ ಹಾಳು ಮಾಡುವುದಕ್ಕೆ ದಂಡ ವಸೂಲಿ ಜಾರಿ ಮಾಡಲು ಚಿಂತನೆ ನಡೆದಿದೆ. ದಂಡ ನೀಡದಿದ್ದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವ ಕಠಿಣ ಕಾನೂನಿಗೆ ಚಿಂತನೆ ಮಾಡಿದ್ದೇವೆ ಎಂದು ಸ್ಪಷ್ಟಪಡಿಸಿದರು.

    ತುಮಕೂರಿಗೆ ಮೋದಿ: ಜನವರಿ 2 ರಂದು ಪ್ರಧಾನಿ ಮೋದಿ ಅವರು ತುಮಕೂರಿಗೆ ಭೇಟಿ ನೀಡಲಿದ್ದು, ಕಾರ್ಯಕ್ರಮ ನಡೆಯುವ ಸ್ಥಳವನ್ನು ಡಿಸಿಎಂ ಲಕ್ಷ್ಮಣ್ ಸವದಿ ಹಾಗೂ ಸಚಿವ ವಿ.ಸೋಮಣ್ಣ ಪರಿಶೀಲಿಸಿದರು. ಕಿಸಾನ್ ಸಮ್ಮಾನ್ ಯೋಜನೆಯ 2ನೇ ಹಂತ ಲೋಕಾರ್ಪಣೆ ಕಾರ್ಯಕ್ರಮ ಜನವರಿ 2ರಂದು ನಡೆಯಲಿದ್ದು, ಸುಮಾರು ಒಂದು ಲಕ್ಷ ರೈತರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು ಸೋಮಣ್ಣ ತಿಳಿಸಿದರು.

    ಜನವರಿ 2ರ ಸಂಜೆ 4ಗಂಟೆ ವೇಳೆಗೆ ಪ್ರಧಾನಿಗಳು ಆಗಮಿಸಲಿದ್ದು, ಮೊದಲು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿದ್ದಾರೆ. ಶಿವಕುಮಾರ ಶ್ರೀ ಗಳ ಗದ್ದುಗೆ ದರ್ಶನ ಪಡೆದು ಬಳಿಕ ಸಿದ್ದಲಿಂಗಸ್ವಾಮಿಗಳ ಆಶೀರ್ವಾದ ಪಡೆಯಲಿದ್ದಾರೆ. ಮಠದ ಮಕ್ಕಳೊಂದಿಗೆ ಹತ್ತು ನಿಮಿಷಗಳ ಕಾಲ ಸಂವಾದ ನಡೆಸಲಿದ್ದಾರೆ. ಸುಮಾರು 40 ನಿಮಿಷಗಳ ಕಾಲ ಸಿದ್ದಗಂಗಾ ಮಠದಲ್ಲಿಯೇ ಮೋದಿ ಇರಲಿದ್ದು, ಬಳಿಕ ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

    ರಾಜ್ಯಾದ್ಯಂತ ಒಂದು ಸಾವಿರ ಕೆಎಸ್‍ಆರ್ ಟಿಸಿ ಬಸ್‍ಗಳ ವ್ಯವಸ್ಥೆ ಮಾಡಲಾಗಿದ್ದು. ದೇಶದ ಆಯ್ದ 40 ಪ್ರಗತಿಪರ ರೈತರಿಗೆ ಮೋದಿ ಸನ್ಮಾನಿಸಲಿದ್ದಾರೆ. ಬಳಿಕ 5.30ಕ್ಕೆ ಬೆಂಗಳೂರಿಗೆ ಮೋದಿ ಪ್ರಯಾಣ ಬೆಳೆಸಲಿದ್ದಾರೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ಮಾಹಿತಿ ನೀಡಿದರು.