ಹಾವೇರಿ: ಕೋವಿಡ್ ಕಾರಣಕ್ಕೆ ಮುಂದೂಡಲಾಗಿದ್ದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲೇ ನಡೆಸಲಾಗುವುದು. ಈ ಬಗ್ಗೆ ಸಿಎಂ ಜೊತೆ ಚರ್ಚಿಸಿ ನಿರ್ಧಾರ ಪ್ರಕಟಿಸಲಾಗುವುದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ಹಾವೇರಿಯಲ್ಲಿ ಸೋಮವಾರ ಮಾತನಾಡಿದ ಅವರು, ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಲಾಗುವುದು. ಹಾವೇರಿಯಲ್ಲೇ ಕನ್ನಡ ಸಾಹಿತ್ಯ ಸಮ್ಮೇಳನ ಮಾಡಲಾಗುವುದು. ಬೆಂಗಳೂರಿಗೆ ಹೋದ ನಂತರ ಈ ಬಗ್ಗೆ ಸಿಎಂ ಜೊತೆ ಚರ್ಚೆ ಮಾಡಿ ನಿರ್ಧಾರ ಪ್ರಕಟಿಸಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಗಡಿ ಜಿಲ್ಲೆ ಯಾದಗಿರಿಯಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ
ಈಗಾಗಲೆ ಸಿಎಂ ಬೆಳಗಾವಿಯಲ್ಲಿ ಅಧಿವೇಶನ ಮಾಡುವ ಬಗ್ಗೆ ಹೇಳಿದ್ದಾರೆ. ಈ ವೇಳೆ ಸಮ್ಮೇಳನದ ವಿಚಾರ ಪ್ರಸ್ತಾಪಿಸಲಾಗುವುದು ಎಂದರು.
ವಿಜಯನಗರ: ಹಾಯ್, ಹಲೋ ಎಂದು ಮಾತುಕತೆ ಆರಂಭಿಸುವ ಬದಲು ಸ್ವಚ್ಛ ಭಾರತ ಎಂದು ಶುರು ಮಾಡಿ ಎಂದು ವಿದ್ಯಾರ್ಥಿಗಳು, ಯುವ ಜನತೆಗೆ ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವ ನಾರಾಯಣಗೌಡ ಕರೆ ನೀಡಿದರು.
ವಿಶ್ವಪ್ರಸಿದ್ಧ ಹಂಪಿಯ ವಿರೂಪಾಕ್ಷ ದೇವಸ್ಥಾನದ ಬಳಿ ಕ್ಲೀನ್ ಇಂಡಿಯಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿದರು. ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ನೆಹರು ಯುವ ಕೇಂದ್ರ ಸಂಘಟನೆ, ಎನ್‍ಎಸ್‍ಎಸ್ ಮತ್ತು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಯೋಗದೊಂದಿಗೆ ಕ್ಲೀನ್ ಇಂಡಿಯಾ ಅಭಿಯಾನ ನಡೆಯುತ್ತಿದ್ದು, ವಿಶ್ವಪ್ರಸಿದ್ಧ ಹಂಪಿಯಲ್ಲಿ ಸ್ವಚ್ಛ ಭಾರತ ಹಾಗೂ ಸ್ವಚ್ಛ ಹಂಪಿ ಕಾರ್ಯಕ್ರಮವನ್ನು ಸಚಿವರು ಉದ್ಘಾಟಿಸಿದರು. ಇದನ್ನೂ ಓದಿ: ಸ್ಕೂಟರ್‌ನಲ್ಲಿ ಶಾಲೆಗೆ ತೆರಳುತ್ತಿದ್ದಾಗ ದೊಡ್ಡ ರಸ್ತೆ ಗುಂಡಿಗೆ ಬಿದ್ದ ವಿದ್ಯಾರ್ಥಿನಿಯರು!
ಹಂಪಿ ವಿಶ್ವಪ್ರಸಿದ್ಧ ಸ್ಥಳ. ಇಲ್ಲಿಗೆ ದೇಶ-ವಿದೇಶಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಇಲ್ಲಿ ಸ್ವಚ್ಛತೆ ಕಾಪಾಡುವ ಮೂಲಕ ದೇಶಕ್ಕೆ ಹೆಸರು ತರಬೇಕು. 100 ಜನರಿಂದ ಸಾವಿರ ಜನ, ಸಾವಿರ ಜನರಿಂದ ಹತ್ತು ಸಾವಿರ ಜನರು ಹೀಗೆ ಎಲ್ಲರೂ ಕೈಗೂಡಿಸುವುದರಿಂದ ಸ್ವಚ್ಛತಾ ಕಾರ್ಯಕ್ರಮ ಯಶಸ್ವಿ ಆಗಲಿದೆ. ನಮ್ಮ ಕಸವನ್ನು ನಾವೇ ಸಂಗ್ರಹಿಸಬೇಕು. ಆದರೆ ನಮ್ಮಲ್ಲಿ ಎಲ್ಲೆಂದರಲ್ಲಿ ಬಿಸಾಡಲಾಗುತ್ತದೆ. ಬೇರೆ ಬೇರೆ ದೇಶಗಳಲ್ಲಿ ಎಲ್ಲೆಂದರಲ್ಲಿ ಒಂದು ಟಿಶ್ಯೂ ಪೇಪರ್ ಕೂಡ ಹಾಕುವಂತಿಲ್ಲ. ಒಂದು ವೇಳೆ ಯಾರಾದ್ರೂ ಕಸ ಹಾಕಿದ್ರೇ ದಂಡ ಇಲ್ಲ, ಜೈಲಿಗೆ ಹಾಕುತ್ತಾರೆ. ಆದರೆ ನಮ್ಮದು ಪ್ರಜಾಪ್ರಭುತ್ವ ದೇಶ. ನಮ್ಮಲ್ಲಿ ಆ ಮಟ್ಟಕ್ಕೆ ಹೋಗುವುದು ಬೇಡ, ನಮ್ಮ ಕೆಲಸವನ್ನು ನಾವೇ ಮಾಡಬೇಕು ಎಂದು ಅವರು ಕರೆ ನೀಡಿದರು.
ಹಿಂದೆ ನಮ್ಮ ಊರುಗಳಲ್ಲಿ ಪ್ರತಿ ಸೋಮವಾರದಂದು ಗದ್ದೆಯಲ್ಲಿ, ತೋಟದಲ್ಲಿ ಕೆಲಸ ಮಾಡುತ್ತಿರಲಿಲ್ಲ. ಎಲ್ಲರೂ ಮನೆ ಅಥವಾ ಊರುಗಳನ್ನು ಸ್ವಚ್ವತೆಗೊಳಿಸುವ ಕೆಲಸದಲ್ಲಿ ತೊಡಗಿಸಿಕೊಳ್ಳುತ್ತಿದ್ವಿ. ಸ್ವಯಂ ಪ್ರೇರಿತವಾಗಿ ಸ್ವಚ್ಚತಾ ಕಾರ್ಯಕ್ರಮದಲ್ಲಿ ತೊಡಗಿಸಿಕೊಳ್ಳಬೇಕು, ಶಿಕ್ಷಣದ ಸ್ವಚ್ಚತೆಗೆ ಆದ್ಯತೆ ಕೊಡಬೇಕು. ಶಾಲೆ-ಕಾಲೇಜುಗಳು ಸೇರಿದಂತೆ ನಮ್ಮ ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಪ್ರತಿಯೊಬ್ಬರಲ್ಲೂ ನಮ್ಮ ದೇಶ ಎಂದು ಕಾಳಜಿ ಬರಬೇಕು. ನನ್ನನ್ನೂ ಸೇರಿದಂತೆ ಪ್ರತಿಯೊಬ್ಬರು ಸುಧಾರಣೆ ಮಾಡಿಕೊಂಡರೇ ಸ್ವಚ್ಛ ಭಾರತ ಯಶಸ್ವಿ ಆಗಲಿದೆ ಎಂದು ಅವರು ಹೇಳಿದರು. ಇದನ್ನೂ ಓದಿ: ಸೌಂದರ್ಯ ಜಗದೀಶ್ ಕುಟುಂಬದಿಂದ ಹಲ್ಲೆ ಪ್ರಕರಣ – ಇಬ್ಬರ ಹೆಸರು ಕೈಬಿಡುವಂತೆ ದೂರುದಾರೆ ಮನವಿ
ದೇಶದ 744 ಜಿಲ್ಲೆಗಳಲ್ಲಿ ಅಕ್ಟೋಬರ್ 1 ರಿಂದ 31 ರವರೆಗೆ ಕ್ಲೀನ್ ಇಂಡಿಯಾ ಕ್ಯಾಂಪೇನ್ ಹಮ್ಮಿಕೊಳ್ಳಲಾಗಿದೆ. ಒಂದು ತಿಂಗಳ ಅವಧಿಯಲ್ಲಿ 75 ಲಕ್ಷ ಕೆಜಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹದ ಗುರಿ ಹೊಂದಲಾಗಿದೆ. ಕರ್ನಾಟಕದಲ್ಲಿ ಐದೂವರೆ ಲಕ್ಷ ಕೆಜಿ ಕೆಜಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹದ ಗುರಿ ಹೊಂದಲಾಗಿದ್ದು, ಕರ್ನಾಟಕದಲ್ಲಿ ಉತ್ತಮ ಸ್ಪಂದನೆ ಸಿಕ್ಕಿರುವುದಕ್ಕೆ ಸಚಿವರು ಸಂತಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಡಿಕೆ ಶಿವಕುಮಾರ್ ಆಪ್ತನ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ
ಇದೇ ವೇಳೆ ಸಿಗರೇಟ್ ಪ್ಯಾಕ್ ಮೇಲೆ ಹಾಕುವಂತೆ ಪ್ಲಾಸ್ಟಿಕ್ ಬಾಟಲ್‍ಗಳ ಮೇಲೂ, ಜಾಗೃತಿ ಸಂದೇಶವನ್ನು ಹಾಕುವಂತೆ ಸಚಿವ ನಾರಾಯಣಗೌಡ ಅವರು ತಿಳಿಸಿದರು. ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಪ್ರತಿನಿಧಿ ಪ್ರಕಾಶ್ ವೈದ್ಯ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಆಯುಕ್ತ ಗೋಪಾಲಕೃಷ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹೈದರಾಬಾದ್: ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರೂ ಕಸ ಗುಡಿಸುವ ಕೆಲಸ ಮಾಡುತ್ತಿದ್ದ ಮಹಿಳೆಗೆ ತೆಲಂಗಾಣದ ಪೌರಾಡಳಿತ ಸಚಿವ ಕೆ.ಟಿ. ರಾಮರಾವ್ ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೋರೇಷನ್(ಜೆಎಚ್‍ಎಂಸಿ)ನಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಸಹಾಯಕ ಕೀಟಶಾಸ್ತ್ರಜ್ಞರ ಕೆಲಸ ನೀಡಿದ್ದಾರೆ.
ಎಂಎಸ್‍ಸಿ(ಸಾವಯವ ರಸಾಯನ ಶಾಸ್ತ್ರ) ಮಾಡಿದ ಎ.ರಜನಿ, ಜಿಎಚ್‍ಎಂಸಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕಸ ಗುಡಿಸುವ ಕೆಲಸ ಮಾಡುತ್ತಿದ್ದರು. ತೆಲುಗಿನ ದಿನಪತ್ರಿಕೆಯೊಂದರಲ್ಲಿ ಮಹಿಳೆ ಬಗ್ಗೆ ಪ್ರಕಟವಾದ ವರದಿಗೆ ಪ್ರತಿಕ್ರಿಯಿಸಿದ ಸಚಿವರು, ಆಕೆಯ ವಿದ್ಯಾರ್ಹತೆಗೆ ಅನುಗುಣವಾಗಿ ಕೆಲಸ ನೀಡಿದ್ದಾರೆ.
ರಜನಿ ಅವರನ್ನು ಸಚಿವರ ಬಳಿ ನಗರಾಭಿವೃದ್ಧಿಯ ವಿಶೇಷ ಮುಖ್ಯ ಕಾರ್ಯದರ್ಶಿಯಾಗಿರುವ ಅರವಿಂದ್ ಕುಮಾರ್‌ರವರು ಕರೆದುಕೊಂಡು ಹೋಗಿ ಕೆಲಸ ಕೊಡಿಸಿರುವುದಾಗಿ ತಿಳಿಸಿದ್ದಾರೆ. ರುಜುವಾತುಗಳನ್ನು ಪರಿಶೀಲಿಸಿದ ಬಳಿಕ ರಜನಿಗೆ ಕೆಲಸ ನೀಡಲು ಆದೇಶಿಸಲಾಯಿತು ಎಂದು ಅರವಿಂದ್ ಕುಮಾರ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ತಿಳಿಸಿದ್ದಾರೆ. ಇಬ್ಬರು ಹೆಣ್ಣು ಮಕ್ಕಳಿರುವ ರಜನಿಗೆ ಸಚಿವರು ಕರೆದು ಕೀಟಶಾಸ್ತ್ರ ವಿಭಾಗದಲ್ಲಿ ಸಹಾಯಕ ಕೀಟಶಾಸ್ತ್ರಜ್ಞರಾಗಿ ಕೆಲಸ ಕೊಟ್ಟು, ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದಾಗಭಾವುಕರಾಗಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಹೆಮ್ಮೆಯಿಂದ ಬದುಕಿದ್ದು, ಅವಮಾನದಿಂದ ಬದುಕಲು ಸಾಧ್ಯವಾಗ್ತಿಲ್ಲ: ಗಿರಿ ಡೆತ್‍ನೋಟ್
ವಾರಂಗಲ್ ಜಿಲ್ಲೆಯವರಾಗಿದ್ದು, ಕೃಷಿ ಕಾರ್ಮಿಕರ ಕುಟುಂಬದಲ್ಲಿ ಜನಿಸಿದ್ದಾರೆ. ಹಣಕಾಸಿ ಸಮಸ್ಯೆ ಇದ್ದರೂ ಕೂಡ ಅವರ ಪೋಷಕರ ಬೆಂಬಲದಿಂದಾಗಿ ತಮ್ಮ ವಿದ್ಯಾಭ್ಯಾಸವನು ಮುಂದುವರಿಸಿದರು ಮತ್ತು 2013ರಲ್ಲಿ ಪ್ರಥಮ ದರ್ಜೆ ಜೊತೆಗೆ ಎಂಎಸ್‍ಸಿ(ಸಾವಯವ ರಸಾಯನ ಶಾಸ್ತ್ರ)ಯಲ್ಲಿ ಉತ್ತೀರ್ಣರಾದರು. ಅಲ್ಲದೇ ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಪಿಎಚ್‍ಡಿ ಅರ್ಹತೆ ಪಡೆದರು. ಆದರೆ ಈ ಮಧ್ಯೆ ವಕೀಲರೊಬ್ಬರು ವಿವಾಹವಾಗಿ ಹೈದರಾಬಾದ್‍ಗೆ ಸ್ಥಳಾಂತರಗೊಂಡಿದ್ದಾಗಿ ತಿಳಿಸಿದ್ದಾರೆ.
ರಜನಿಗೆ ಎರಡು ಮಕ್ಕಳ ತಾಯೊಯಾದ ನಂತರ ಕೂಡ ಉದ್ಯೋಗಕ್ಕಾಗಿ ಹಲವಾರು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವುದನ್ನು ಮುಂದುವರಿಸಿದ್ದರು. ಆದರೆ ಅವರ ಪತಿ ಹೃದಯ ಸಮಸ್ಯೆಯಿಂದ ಹಾಸಿಗೆ ಹಿಡಿದಿದ್ದರಿಂದ ಕುಟುಂಬ ಇಕ್ಕಟ್ಟಿನ ಸ್ಥಿತಿಗೆ ಸಿಲುಕಿತು. ನಂತರ ಕುಟುಂಬವನ್ನು ನಡೆಸಲು ಆಕೆಯ ಅತ್ತೆ ಸೇರಿದಂತೆ ಐವರು ತರಕಾರಿ ಮಾರಾಟ ಮಾಡಲು ಆರಂಭಿಸಿದರು. ಇದರಿಂದ ಗಳಿಸಿದ ಹಣದಿಂದಾಗಿ ರಜನಿ ಜಿಎಚ್‍ಎಂಸಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಸ ಗುಡಿಸುವ ಕೆಲಸ ಪಡೆದು ತಿಂಗಳಿಗೆ 10,000ರೂ, ಸಂಬಳ ತೆಗೆದುಕೊಳ್ಳುತ್ತಿರುವುದಾಗಿ ಹೇಳಿಕೊಂಡಿದ್ದಾರೆ. ಇದನ್ನೂ ಓದಿ:ಪಾಕ್ ಗೂಢಾಚಾರಿ ಜಿತೇಂದರ್ ಸಿಂಗ್ ಕಾಟನ್ ಪೇಟೆಯನ್ನೇ ಆಯ್ಕೆ ಮಾಡ್ಕೊಂಡಿದ್ದೇಕೆ..?
ಬೆಂಗಳೂರು: ಪ್ರತಿಷ್ಠಿತ ರಾಷ್ಟ್ರೀಯ ಸೇವಾ ಯೋಜನೆಯ(NSS) ರಾಷ್ಟ್ರೀಯ ಪ್ರಶಸ್ತಿಗೆ ರಾಜ್ಯದ ನಾಲ್ವರು ಆಯ್ಕೆಯಾಗಿದ್ದಾರೆ. ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ನಾಲ್ವರು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ. 6 ವರ್ಷಗಳ ಬಳಿಕ ರಾಜ್ಯಕ್ಕೆ ಈ ಪ್ರಶಸ್ತಿ ಒಲಿದುಬಂದಿದೆ. ಗೌರವಕ್ಕೆ ಭಾಜನರಾಗಿರುವವರನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಅವರು ಅಭಿನಂದಿಸಿದ್ದಾರೆ.
ವಿಶ್ವವಿದ್ಯಾಲಯ ಮಟ್ಟದ ರಾಷ್ಟ್ರೀಯ ಪ್ರಶಸ್ತಿಗೆ ರಾಜ್ಯ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕಾರ್ಯಕ್ರಮ ಸಂಯೋಜಕ ಡಾ. ಬಿ. ವಸಂತ ಶೆಟ್ಟಿ, ಕಾಲೇಜು ಮಟ್ಟದ ಅಧಿಕಾರಿಗಳಿಗೆ ನೀಡಲಾಗುವ ರಾಷ್ಟ್ರೀಯ ಪ್ರಶಸ್ತಿಗೆ ಧಾರವಾಡದ ಜೆಎಸ್‍ಎಸ್ ಬನಶಂಕರಿ ಕಲಾ ಮತ್ತು ವಾಣಿಜ್ಯ ಕಾಲೇಜಿನ ಕಾರ್ಯಕ್ರಮ ಅಧಿಕಾರಿ ಸುರೇಶಪ್ಪ ಕೆ. ಸಜ್ಜನ, ರಾಷ್ಟ್ರಮಟ್ಟದಲ್ಲಿ ಕಾರ್ಯ ನಿರ್ವಹಿಸಿದ ಸ್ವಯಂಸೇವಕರ ವಿಭಾಗದಲ್ಲಿ ಬೆಂಗಳೂರಿನ ಕೆ.ಎಸ್.ಇನ್‍ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸ್ವಯಂ ಸೇವಕ ಸಿರೀಶ್ ಗೋವರ್ಧನ್ ಮತ್ತು ಮಂಗಳೂರು ಸೂರತ್ಕಲ್‍ನ ಗೋವಿಂದ ದಾಸ್ ಕಾಲೇಜಿನ ಸ್ವಯಂ ಸೇವಕಿ ಬಿಂದಿಯಾ ಶೆಟ್ಟಿ ಅವರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಭಾರತ ಸರ್ಕಾರವು @_NSSIndia ಮುಖಾಂತರ “ರಾಷ್ಟ್ರ ಪ್ರಶಸ್ತಿ"ಗಳನ್ನು ಪ್ರಕಟಿಸಿದ್ದು, ಕರ್ನಾಟಕದ ನಾಲ್ವರು ಈ ಗೌರವಕ್ಕೆ ಪಾತ್ರವಾಗಿರುವುದು ಹೆಮ್ಮೆಯ ಸಂಗತಿಯಾಗಿದೆ. ಅಲ್ಲದೆ, ಕಳೆದ 6 ವರ್ಷದಲ್ಲಿ ಕರ್ನಾಟಕಕ್ಕೆ ಯಾವುದೇ ಪ್ರಶಸ್ತಿ ಒಲಿದಿರಲಿಲ್ಲ. ಸಾಧಕರಿಗೆ ಅಭಿನಂದನೆಗಳು.@CMofKarnataka 2/2 pic.twitter.com/PgHJwjJ7w5
— Dr. Narayana Gowda / ಡಾ.ನಾರಾಯಣ ಗೌಡ (@narayanagowdakc) September 17, 2021
ಕಳೆದ 6 ವರ್ಷಗಳಲ್ಲಿ ಎನ್‍ಎಸ್‍ಎಸ್ ರಾಷ್ಟ್ರೀಯ ಪ್ರಶಸ್ತಿಗೆ ರಾಜ್ಯದಿಂದ ಯಾರೂ ಆಯ್ಕೆಯಾಗಿರಲಿಲ್ಲ. ಈ ಬಾರಿ 4 ಜನ ಸಾಧಕರು ನಮ್ಮ ರಾಜ್ಯದಿಂದ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯ. ಸೆಪ್ಟಂಬರ್ 24 ರಂದು ರಾಷ್ಟ್ರೀಯ ಸೇವಾ ಯೋಜನೆ ಸಂಸ್ಥಾಪನಾ ದಿನದ ಅಂಗವಾಗಿ ರಾಷ್ಟ್ರಪತಿ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು ಈ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ. ರಾಜ್ಯದ ಕೀರ್ತಿಯನ್ನು ಹೆಚ್ಚಿಸಿದ ಪ್ರಶಸ್ತಿ ಪುರಸ್ಕೃತರಿಗೆ ಸಚಿವ ಡಾ. ನಾರಾಯಣಗೌಡ ಅಭಿನಂದನೆ ಸಲ್ಲಿಸಿದ್ದಾರೆ.
-ಉದ್ಯಮಿಗಳಿಗೆ ಸರ್ಕಾರದಿಂದ ಅಗತ್ಯ ನೆರವು -ಕಲಬುರಗಿ ಮತ್ತು ಕನಕಪುರದಲ್ಲಿ ಜ್ಯುವೆಲ್ಲರಿ ಪಾರ್ಕ್ ಸ್ಥಾಪನೆ
ಬೆಂಗಳೂರು: ರಾಜ್ಯದಲ್ಲಿ ಆಭರಣ ವಲಯದಲ್ಲಿ ಬಂಡವಾಳ ಹೂಡಲು ಮುಂದೆ ಬರುವ ಉದ್ಯಮಿಗಳಿಗೆ ರಾಜ್ಯ ಸರ್ಕಾರದ ವತಿಯಿಂದ ಸಂಪೂರ್ಣ ಸಹಕಾರ ಹಾಗೂ ತೆರಿಗೆ ವಿನಾಯ್ತಿಯನ್ನು ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ತಿಳಿಸಿದ್ದಾರೆ.
ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಆರಂಭವಾಗಿರುವ ಅಂತಾರಾಷ್ಟ್ರೀಯ ವಸ್ತುಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಆಭರಣ ವಲಯದಲ್ಲಿ ಯಾರೇ ಉದ್ಯಮಿಗಳು ಬಂಡವಾಳ ಹೂಡಲು ಮುಂದೆ ಬಂದರೆ ನಮ್ಮ ಸರ್ಕಾರ ಸಂಪೂರ್ಣವಾಗಿ ಸಹಕಾರ ಕೊಡಲಿದೆ. ಅಗತ್ಯವಾದ ನೆರವು ಜೊತೆಗೆ ರಿಯಾಯ್ತಿಯನ್ನು ನೀಡಲಾಗುವುದು ಎಂದು ಘೋಷಿಸಿದರು. ರಫ್ತು ಗುರಿ ಸಾಧಿಸುವಲ್ಲಿ ರತ್ನಗಳು ಮತ್ತು ಆಭರಣ ವಲಯವು ಪ್ರಮುಖ ಪಾತ್ರವನ್ನು ವಹಿಸುತ್ತವೆ. ಬಂಡವಾಳ ಹೂಡಲು ಬರುವ ಉದ್ಯಮಿಗಳಿಗೆ ನಾವು ಮುಕ್ತ ಸ್ವಾಗತಕೋರಿ ಕೆಂಪು ರತ್ನಗಂಬಳಿ ಹಾಕುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಇಲಿ ವಿಷದಿಂದ ಹಲ್ಲುಜ್ಜಿ ಪ್ರಾಣ ಬಿಟ್ಟ 18ರ ಯವತಿ
ಬೆಂಗಳೂರಿನಲ್ಲಿ ಮೊದಲ ಬಾರಿಗೆ ಇಂಡಿಯಾ ಇಂಟರ್ ನ್ಯಾಷನಲ್ ಜ್ಯುವೆಲ್ಲರಿ ಶೋ(ಐಐಜೆಎಸ್) ಪ್ರೀಮಿಯರ್ 2021 ಆಯೋಜಿಸಿದ್ದಕ್ಕಾಗಿ ಸಂಘಟಕರಿಗೆ ಧನ್ಯವಾದ ಸಲ್ಲಿಸಿದ ನಿರಾಣಿ, ರಫ್ತು ಗುರಿ ಸಾಧಿಸುವಲ್ಲಿ ಜೆಮ್ಸ್ ಮತ್ತು ಆಭರಣ ವಲಯವು ಪ್ರಮುಖ ಪಾತ್ರ ವಹಿಸಿದೆ. ಈ ಪ್ರತಿಷ್ಠಿತ ಕಾರ್ಯಕ್ರಮವನ್ನು ವಿಶ್ವದ ಪ್ರಮುಖ ನಗರಗಳಲ್ಲಿ ಒಂದಾದ ಬೆಂಗಳೂರುನಲ್ಲಿ ಆಯೋಜಿಸಿದ್ದಕ್ಕಾಗಿ ನಾನು ಸಂಘಟಕರಿಗೆ ಧನ್ಯವಾದ ಅರ್ಪಿಸುತ್ತೇನೆ. ಮುಂಬೈನ ಹೊರಗೆ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು ಇದೇ ಮೊದಲು. ಕರ್ನಾಟಕಕ್ಕೆ ಈ ಅದ್ಭುತ ಅವಕಾಶ ಒದಗಿಸಿರುವುದಕ್ಕೆ ನನಗೆ ಅತೀವ ಸಂತೋಷವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದು 37 ನೇ ಐಐಜೆಎಸ್ ಕಾರ್ಯಕ್ರಮವಾಗಿದ್ದು, ಈ ಹಿಂದೆ 36 ಕಾರ್ಯಕ್ರಮಗಳು ಮುಂಬೈನಲ್ಲಿ ನಡೆದಿವೆ. ಮುಂದಿನ ವರ್ಷವೂ ಬೆಂಗಳೂರಿನಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲು ಸಚಿವರು ಸಂಘಟಕರನ್ನು ಆಹ್ವಾನಿಸಿದರು.
ಪ್ರಸಕ್ತ ಹಣಕಾಸು ವರ್ಷದಲ್ಲಿ 400 ಬಿಲಿಯನ್ ಡಾಲರ್ ಸರಕು ರಫ್ತು ಮಾಡುವ ಗುರಿಯನ್ನು ಸಾಧಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದೂರದೃಷ್ಟಿಗೆ ಕರ್ನಾಟಕ ಬದ್ಧವಾಗಿದೆ ಮತ್ತು ಈ ಪ್ರಯತ್ನದಲ್ಲಿ ರತ್ನಗಳು ಮತ್ತು ಆಭರಣ ವಲಯವು ನಿರ್ಣಾಯಕ ಪಾತ್ರ ವಹಿಸುವ ಸಾಮರ್ಥ್ಯ ಹೊಂದಿದೆ ಎಂದು ನಾನು ನಂಬುತ್ತೇನೆ. ವಸ್ತುಪ್ರದರ್ಶನದಲ್ಲಿ 2,500 ಕ್ಕೂ ಹೆಚ್ಚು ಸ್ಟಾಲ್‍ಗಳನ್ನು ಸ್ಥಾಪಿಸಲಾಗಿದೆ, 1300 ಪ್ರದರ್ಶಕರು ಮತ್ತು 10,000 ಕಂಪನಿಗಳು ಭಾಗವಹಿಸಲು ನೋಂದಾಯಿಸಿವೆ. 20,000 ಕ್ಕೂ ಹೆಚ್ಚು ಜನರು ಪ್ರದರ್ಶನಕ್ಕೆ ಭೇಟಿ ನೀಡಿದ್ದು, ಸಚಿವರು ಹಲವಾರು ಮಳಿಗೆಗಳಿಗೆ ಭೇಟಿ ನೀಡಿ, ವ್ಯಾಪಾರ ಮುಖಂಡರು ಮತ್ತು ವೃತ್ತಿಪರರೊಂದಿಗೆ ಸಂವಾದ ನಡೆಸಿದರು. ಉದ್ಯಮಿಗಳಾಗುವಂತೆ ಪ್ರೋತ್ಸಾಹಿಸಿ ಉದ್ಯೋಗ ಹುಡುಕುವವರ ಬದಲಿಗೆ ಉದ್ಯೋಗ ಒದಗಿಸುವವರ ಕಡೆಗೆ ಗಮನಹರಿಸುವಂತೆ ಮಾಡುವುದು ನಮ್ಮ ಗುರಿಯಾಗಿದೆ ಎಂದರು. ಇದನ್ನೂ ಓದಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪಟಾಕಿ ಸಂಪೂರ್ಣ ನಿಷೇಧ
ವಿಧಾನಪರಿಷತ್ ಸದಸ್ಯ ಲೆಹರ್ ಸಿಂಗ್, ವಾಣಿಜ್ಯ ಮತ್ತು ಕೈಗಾರಿಕಾ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ ರಮಣ ರೆಡ್ಡಿ, ಭಾರತ ಸರ್ಕಾರದ ಜಂಟಿ ಕಾರ್ಯದರ್ಶಿ ಸಿ.ಐ ಎಲ್ ಸುರೇಶ್ ಕುಮಾರ್,ಜಿಜೆಇಪಿಸಿ ಅಧ್ಯಕ್ಷ ಕಾಲಿನ್ ಶಾ ಉಪಸ್ಥಿತರಿದ್ದರು.
– ಶೀಘ್ರದಲ್ಲೇ ಮುಖ್ಯಮಂತ್ರಿಗಳ ಜೊತೆ ಸಭೆ
– ರೈತರ ಹಿತ ಕಾಪಾಡಲು ಬದ್ಧ
– ತಮ್ಮ ಮೇಲಿನ ಆರೋಪಕ್ಕೆ ಸಚಿವ ಭಾವುಕ
ಬೆಂಗಳೂರು: ಮಂಡ್ಯ ಜಿಲ್ಲೆ ಮೈಸೂರು ಸಕ್ಕರೆ ಕಾರ್ಖಾನೆಯನ್ನು ಪುನಶ್ಚೇತನಗೊಳಿಸುವ ಸಂಬಂಧ ಅಧಿವೇಶನ ಮುಗಿದ ಬಳಿಕ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಆ ಭಾಗದ ಜನಪ್ರತಿನಿಧಿಗಳು ಹಾಗೂ ರೈತರ ಸಭೆ ಕರೆದು ಸೂಕ್ತವಾದ ತೀರ್ಮಾನವನ್ನು ಕೈಗೊಳ್ಳಲಾಗುವುದೆಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರು ವಿಧಾನಪರಿಷತ್ ನಲ್ಲಿ ಹೇಳಿದರು.
ಮಂಗಳವಾರ ನಿಯಮ 330 ರ ಅಡಿ ಸದಸ್ಯರು ಪಾಂಡವಪುರ ಸಕ್ಕರೆ ಕಾರ್ಖಾನೆ ಕುರಿತಾಗಿ ಪ್ರಸ್ತಾಪಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಪರವಾಗಿ ಸುಧೀರ್ಘ ಉತ್ತರ ನೀಡಿದ ನಿರಾಣಿ, ಅಧಿವೇಶನ ಮುಗಿದ ಬಳಿಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಸಭೆ ಕರೆದು ಸೂಕ್ತವಾದ ನಿರ್ಧಾರವನ್ನು ಸರ್ಕಾರ ತೆಗೆದುಕೊಳ್ಳಲಿದೆ ಎಂದು ಸದನಕ್ಕೆ ಆಶ್ವಾಸನೆ ನೀಡಿದರು.
ಒಂದು ಹಂತದಲ್ಲಿ ತಮ್ಮ ಮೇಲೆ ಕೇಳಿ ಬಂದ ಆರೋಪಗಳಿಗೆ ಸದನದಲ್ಲಿ ಭಾವುಕರಾದ ನಿರಾಣಿ ಅವರು, ನಾನು ರೈತರಿಗೆ ಅನುಕೂಲವಾಗಲಿ ಎಂಬ ಕಾರಣಕ್ಕಾಗಿ ಪಾಂಡವಪುರ ಸಕ್ಕರೆ ಕಾರ್ಖಾನೆಯನ್ನು ಭೋಗ್ಯಕ್ಕೆ ಪಡೆದು ಪುನಾರಂಭ ಮಾಡಿದೆವು. ಇದರಲ್ಲೂ ನನಗೆ ‘ಕಹಿಅನುಭವ’ ಆಗಿದೆ ಎಂದು ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.
ನಾನು ನೂರಕ್ಕೆ ನೂರರಷ್ಟು ಈ ಸದನದಿಂದಲೇ ಸ್ಪಷ್ಟಪಡಿಸುವುದು ಏನೆಂದರೆ, ಯಾವುದೇ ಕಾರಣಕ್ಕೂ ಮೈ ಶುಗರ್ ಫ್ಯಾಕ್ಟರಿ ಬಿಡ್ ಮಾಡುವುದಿಲ್ಲ. ಈ ಬಗ್ಗೆ ಯಾರಿಗೂ ಯಾವುದೇ ರೀತಿಯ ಅನುಮಾನ ಬೇಡ ಎಂದು ಸ್ಪಷ್ಟಪಡಿಸಿದರು. ಮೈ ಶುಗರ್ ಕಾರ್ಖಾನೆಯನ್ನು ನಾನು ಪಡೆಯುವ ಸಲುವಾಗಿ ಇಲ್ಲಿ ಸಮರ್ಥನೆ ಮಾಡಿಕೊಳ್ಳುತ್ತಿಲ್ಲ. ಕೋವಿಡ್ ಸಂದರ್ಭದಲ್ಲಿ ಯಾರೂ ಹೊರಗೆ ಹೋಗದ ಕಾಲದಲ್ಲಿ ನಾನು ಪಾಂಡವಪುರ ಕಾರ್ಖಾನೆಯನ್ನು ಪ್ರಾರಂಭ ಮಾಡಿದೆವು. ಆದರೂ ನಮಗೆ ಆಪಾದನೆಗಳು ನಿಂತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಇದುವರೆಗೆ ನನಗೆ ಬೋಗ್ಯದ ದಾಖಲಾತಿಗಳು ಆಗಿಯೇ ಇಲ್ಲ. ನಂಬಿಕೆಯಿಂದ ನಾನು ಪಾಂಡವಪುರ ಶುಗರ್ ಫ್ಯಾಕ್ಟರಿ ಮೇಲೆ 50 ಕೋಟಿ ರೂ. ವೆಚ್ಚ ಮಾಡಿದ್ದೇನೆ. ಲೀಸ್ ಡೀಡ್ ಇಲ್ಲದೆಯೂ ರೈತರಿಗೆ ಅನ್ಯಾಯ ಆಗಬಾರದು ಎಂದು ಕಾರ್ಖಾನೆಯನ್ನು 90 ದಿನಗಳಲ್ಲಿ ಪ್ರಾರಂಭ ಮಾಡಿದೆವು. ಆದರೆ ಪಾಂಡವಪುರಕ್ಕೆ ನಾನು ಬಂದಾಗ ಹಲವರು ನನ್ನ ಮೇಲೆ ಆಪಾದನೆ ಮಾಡಿದರು ಎಂದು ಭಾವುಕರಾದರು.
ನಾನು ಪಾಂಡವಪುರ ಸಕ್ಕರೆ ಕಾರ್ಖಾನೆಯನ್ನು ಪ್ರಾರಂಭ ಮಾಡಿದಾಗ ಇದರಿಂದ ಬಂದ ಲಾಭವನ್ನು ಇಲ್ಲಿಯ ಲಾಭಕ್ಕಾಗಿ ಬಳಸಿಕೊಳ್ಳಲು ನಿರ್ಧಾರ ಮಾಡಲಾಗಿತ್ತು. ನಾಡದೇವತೆ ಚಾಮುಂಡೇಶ್ವರಿ ಮೇಲೆ ಆಣೆ. ಇಲ್ಲಿಂದ ಬಂದ ಲಾಭವನ್ನು ಉತ್ತರ ಕರ್ನಾಟಕಕ್ಕೆ ತೆಗೆದುಕೊಂಡು ಹೋಗುವುದಿಲ್ಲ. ಕೆಲವರು ಸುಖಾಸುಮ್ಮನೆ ಆರೋಪ ಮಾಡುತ್ತಿದ್ದಾರೆ ಎಂದು ಹೇಳಿದರು.
ರಾಜ್ಯದ ಅನೇಕ ಸಕ್ಕರೆ ಕಾರ್ಖಾನೆಗಳು ಇಂದು ನಷ್ಟದಲ್ಲಿದ್ದು ಬೀಗ ಹಾಕುವ ಹಂತಕ್ಕೆ ಬಂದಿವೆ. ಎಂ.ಕೆ.ಹುಬ್ಬಳ್ಳಿ, ಸಂಕೇಶ್ವರ, ರನ್ನ, ಸೇರಿದಂತೆ ಮತ್ತಿತರ ಕಾರ್ಖಾನೆಗಳು ‘ಕೋಮ’ ಸ್ಥಿತಿಗೆ ಬಂದಿವೆ. ಇದಕ್ಕೆಲ್ಲ ಯಾರು ಕಾರಣ ಎಂದು ಪ್ರಶ್ನೆ ಮಾಡಿದರು. ಹೊರಗಡೆ ಮಾತನಾಡುವುದಕ್ಕೂ ಒಂದು ಕಾರ್ಖಾನೆ ನಡೆಸುವುದಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಪಾಂಡವಪುರ ಹಾಗೂ ಮೈಶುಗರ್ ಕಾರ್ಖಾನೆಯ ಉದ್ದೇಶವೇ ರೈತರ ಹಿತ ಕಾಪಾಡುವುದು ಎಂದು ತಿಳಿಸಿದರು. ಇದನ್ನೂ ಓದಿ: ಅರುಣ್ ಸಾಗರ್ ಮಗನ ಸಾಧನೆ ಕೊಂಡಾಡಿದ ಸುದೀಪ್
ಸಕಾಲಕ್ಕೆ ಸರಿಯಾಗಿ ರೈತರ ಕಬ್ಬನ್ನು ಅರೆದು ಅವರಿಗೆ ಹಣ ಪಾವತಿಸಬೇಕು. ಜೊತೆಗೆ ಕಾರ್ಮಿಕರಿಗೆ ತಿಂಗಳಿಗೆ ವೇತನವನ್ನು ನೀಡಬೇಕು. ಇಷ್ಟೆಲ್ಲಾ ಮಾಡಿಯೂ ನಾವು ಸುಳ್ಳು ಆರೋಪಗಳನ್ನು ಎದುರಿಸಬೇಕು ಎಂದರು. ನಿವೃತ್ತ ಅಧಿಕಾರಿ ರಂಗರಾಜನ್ ವರದಿಯ ಪ್ರಕಾರ, ಕಾರ್ಖಾನೆ ಒಟ್ಟು ಲಾಭಂಶದಲ್ಲದ ಶೇ.75 ರಷ್ಟನ್ನು ರೈತರು, ಕಾರ್ಮಿಕರು, ಕಾರ್ಖಾನೆಯ ಪುನಶ್ಚೇತನ, ಮೂಲಭೂತ ಸೌಕರ್ಯಗಳ ಬಳಕೆಗೆ ಬಳಸಿಕೊಳ್ಳಬೇಕು ಎಂದು ಹೇಳಿದರು.
ಕೇವಲ ಸರ್ಕಾರದ ಮೇಲೆ ಅವಲಂಬಿತರಾಗದೆ ಕಾರ್ಖಾನೆಯನ್ನು ಆಡಳಿತ ಮಂಡಳಿಯವರು ಮುನ್ನಡೆಸಬೇಕು. ಇಲ್ಲಿರುವ ಲೋಪದೋಷಗಳನ್ನು ಪತ್ತೆ ಮಾಡಿದರೆ, ಎಲ್ಲವೂ ಸರಿ ಹೋಗಲಿದೆ ಎಂದು ಅಭಿಪ್ರಾಯಪಟ್ಟರು.
ಬೆಂಗಳೂರು: ವಿದ್ಯುತ್ ಬಿಲ್ ನಲ್ಲಿ ತಿದ್ದುಪಡಿ ಮಾಡಿ ಬೆಸ್ಕಾಂಗೆ ನಷ್ಟ ಉಂಟು ಮಾಡಿದ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಿರುವುದಾಗಿ ಇಂಧನ ಮತ್ತು ಕನ್ನಡ ಹಾಗೂ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಮುಳಬಾಗಿಲು ಉಪವಿಭಾಗದ ಮೆಹಬೂಬ್ ಪಾಷ, ಕಿರಿಯ ಸಹಾಯಕ, ಗಾಯತ್ರಮ್ಮ ,ಕಿರಿಯ ಸಹಾಯಕಿ ಹಾಗೂ ಸುಜಾತಮ್ಮ, ಕಿರಿಯ ಸಹಾಯಕಿ ಈ ಮೂವರು ಅಮಾನತಿಗೊಳಗಾದ ಸಿಬ್ಬಂದಿಯಾಗಿದ್ದಾರೆ.
ಇವರು ಪ್ರತಿ ಮಾಹೆ ಗ್ರಾಹಕರಿಗೆ ವಿದ್ಯುತ್ ಬಿಲ್ಲು ವಿತರಿಸುವ ವೇಳೆಯಲ್ಲಿ ಕೆಲವು ಬಿಲ್ಲುಗಳನ್ನು ಮಾರ್ಪಾಟು ಮಾಡಿ ಅದರ ಮೊತ್ತವನ್ನು ಕಡಿಮೆ ಮಾಡಿ ಆ ಮೂಲಕ ಬೆಸ್ಕಾಂಗೆ ಬರಬೇಕಾದ ವಾಸ್ತವಿಕ ಆದಾಯದಲ್ಲಿ ನಷ್ಟ ಉಂಟಾಗಲು ಕಾರಣರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇವರ ಮೇಲೆ ಕೋಲಾರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ಕೂಡ ದಾಖಲಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.
ತಾವು ಇಲಾಖೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ, ಅಕ್ರಮ ಎಸಗಿ ಆ ಮೂಲಕ ಇಲಾಖೆಗೆ ನಷ್ಟವುಂಟು ಮಾಡುವ ಯಾವುದೇ ಅಧಿಕಾರಿ, ಸಿಬ್ಬಂದಿ ಇರಲಿ ಅವರ ಮೇಲೆ ಮುಲಾಜಿಲ್ಲದೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಇನ್ನೆರಡು ದಿನ ಮಳೆ- ಹವಾಮಾನ ಇಲಾಖೆ ಮುನ್ಸೂಚನೆ
ಪ್ರಸ್ತುತ ಈ ಮೂವರು ಸಿಬ್ಬಂದಿ ಬೇರೆ, ಬೇರೆ ಐಪಿ ವಿಳಾಸಗಳ ಗಣಕಯಂತ್ರಗಳಲ್ಲಿ ಐಡಿಗಳನ್ನು ಉಪಯೋಗಿಸಿ ವಂಚನೆ ಎಸಗಿರುವುದು ದೃಢವಾಗಿರುವುದರಿಂದ ಹಾಗೂ 8 ಆರ್ ಆರ್ ಸಂಖ್ಯೆಗಳಲ್ಲಿ ಒಟ್ಟು 444966-00 ಗಳಷ್ಟು ಮೊತ್ತ ಕಂಪನಿಗೆ ನಷ್ಟವಾಗಿರುವುದರಿಂದ ಇವರ ಮೇಲೆ ಇಲಾಖಾ ವಿಚಾರಣೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ. ಜೊತೆಗೆ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆಯನ್ನು ಸಹ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಮನೆಯಂಗಳಕ್ಕೆ ಬಂದ ಹಾವು ಹಿಡಿದು ರಕ್ಷಿಸಿದ ಆರರ ಪೋರಿ
ಯಾದಗಿರಿ: ಅತ್ಯಾಚಾರ ನಡೆದಿಲ್ಲ ಅವರಿಬ್ಬರು ಸ್ನೇಹಿತರೇ, ಅವರಿಬ್ಬರು ನಾಟಕವಾಡುತ್ತಿದ್ದರು. ಪೊಲೀಸರು ಆಕ್ಷನ್ ತೆಗೆದುಕೊಂಡರು. ಆಗ ಗೊತ್ತಾಗಿದೆ ಎಂದು ಸಚಿವ ಎಸ್.ಟಿ ಸೋಮಶೇಖರ್ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ಅತ್ಯಾಚಾರನೂ ಇಲ್ಲ, ಏನೂ ಇಲ್ಲ ಎಂದು ಪ್ರಕರಣವನ್ನು ಅಲ್ಲಗೆಳೆದರು.
ಇದೇ ವೇಳೆ ಪೆಟ್ರೋಲ್, ಡಿಸೇಲ್, ಗ್ಯಾಸ್ ಬೆಲೆ ಏರಿಕೆ ವಿಚಾರವಾಗಿ ಮಾತನಾಡಿ, ಒಂದು ಸಲ ಜಾಸ್ತಿ ಒಂದು ಸಲ ಕಡಿಮೆ ಆಗುತ್ತೆ. ಕೇಂದ್ರ ಸರ್ಕಾರ ಸಮತೋಲನ ಮಾಡಿಕೊಳ್ಳುತ್ತಾ ಕೆಲಸ ಮಾಡುತ್ತೆ. ಇದರಲ್ಲಿ ಬಿಜೆಪಿ ಕಾಂಗ್ರೆಸ್ ಜೆಡಿಎಸ್ ಅಂತ ಅಲ್ಲ ಎಂದರು. ಇದನ್ನೂ ಓದಿ: ಕೊಲ್ಲೂರು ಸನ್ನಿಧಾನ ಪ್ರವೇಶಕ್ಕೆ ಆಧಾರ್ ಕಡ್ಡಾಯ – ಉಡುಪಿ ಜಿಲ್ಲಾಡಳಿತ ಆದೇಶ
ಗಣೇಶೋತ್ಸವಕ್ಕೆ ಅವಕಾಶ ನೀಡುವ ವಿಚಾರವಾಗಿ, ಗಣೇಶೋತ್ಸವ ಭಾವನಾತ್ಮಕ ಸಂಬಂಧ ಇರುವಂತದ್ದು. ಇದೆ 5 ರಂದು ಸಿಎಂ ಸಭೆ ಮಾಡ್ತಾರೆ ಕಳೆದ ವಾರ ಒಂದು ಸಭೆ ಆಗಿದೆ. ಎಲ್ಲಾ ಡಿಸಿ ಮತ್ತು ಎಸ್‍ಪಿ ಅವರು ಗಣೇಶೋತ್ಸವ ಎಲ್ಲೆಲ್ಲಿ ಎಷ್ಟು ದಿನ ಮಾಡ್ಬೇಕು ಅಂತ ಮಾಹಿತಿ ಕೊಟ್ಟಿದ್ದಾರೆ. ತಜ್ಞರ ಸಮಿತಿ ಜೊತೆ ಸಿಎಂ ಅವರು ಮತ್ತೊಮ್ಮೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು. ಇದನ್ನೂ ಓದಿ:ಬೊಮ್ಮಾಯಿಯವರು ಮಾಜಿ ಮುಖ್ಯಮಂತ್ರಿಗಳಂತೆ ನಮ್ಮ ಸಮಾಜಕ್ಕೆ ಮೋಸ ಮಾಡುವುದಿಲ್ಲ: ಯತ್ನಾಳ್
ಗಣೇಶೋತ್ಸವಕ್ಕೆ ಅವಕಾಶ ಕೊಡ್ತಾರೆ. ಕಾರ್ಯಕ್ರಮ ಎಷ್ಟು ದಿನ ಮಾಡ್ಬೇಕು ಎಲ್ಲಲ್ಲಿ ಮಾಡಬೇಕು. ಯಾರು ಯಾರಿಗೆ ಅನುಮತಿ ಕೊಡಬೇಕು ಅನ್ನೋದನ್ನು ಸಿಎಂ ಇದೇ ತಿಂಗಳ 5 ರಂದು ತೀರ್ಮಾನ ಮಾಡ್ತಾರೆ ಎಂದು ಹೇಳಿದರು.
ವಿಜಯಪುರ: ಬಾಗಲಕೋಟೆ ಮತ್ತು ಶಿವಮೊಗ್ಗಕ್ಕೆ ಎರಡು ಸಚಿವ ಸ್ಥಾನ ನೀಡಿರೋದು ಯಾಕೆ? ಕಲಬುರಗಿ, ಚಾಮರಾಜನಗರ ಮತ್ತು ಮೈಸೂರಿನವರು ಮತ ನೀಡಿಲ್ಲವಾ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಪಕ್ಷದ ವಿರುದ್ಧವೇ ಗುಡುಗಿದ್ದಾರೆ.
ನ್ಯಾಯಯುತವಾಗಿ ವಿಜಯಪುರ ಜಿಲ್ಲೆಗೆ ಸಚಿವ ಸ್ಥಾನ ಕೊಡಬೇಕು. ಸಿಂದಗಿ ಉಪಚುನಾವಣೆಗೂ ಮೊದಲೇ ಸಚಿವ ಸ್ಥಾನ ನೀಡುವ ಕುರಿತು ಪಕ್ಷ ನಿರ್ಧಾರ ತೆಗೆದುಕೊಳ್ಳಬೇಕು. ಎಲ್ಲ ಜಿಲ್ಲೆಗೆ ಒಂದೊಂದು ಸಚಿವ ಸ್ಥಾನ ನೀಡಬೇಕು. ಕೆಲವರಿಗೆ ಯತ್ನಾಳ್ ಸಚಿವ ಆಗಬಾರದು ಅನ್ನೋದಿದೆ. ಹಣೆ ಬರಹದಲ್ಲದ್ದರೆ ಯಾರಿಂದಲೂ ತಪ್ಪಿಸಲು ಆಗಲ್ಲ. ಈ ಬಾರಿ ವಿಜಯಪುರಕ್ಕೆ ಅನ್ಯಾಯ ಆಗಲ್ಲ. ನಮ್ಮ ಹೈಕಮಾಂಡ್ ಒಳ್ಳೆಯ ನಿರ್ಧಾರ ತೆಗೆದುಕೊಳ್ಳುತ್ತೆ ಅನ್ನೋ ನಂಬಿಕೆ ಇದೆ. ಜಿಲ್ಲೆಯಲ್ಲಿ ಮೂಲ ಬಿಜೆಪಿಗರು ಮಂತ್ರಿ ಆಗ್ತಾರೆ ಎಂದು ಭವಿಷ್ಯ ನುಡಿದರು. ಇದನ್ನೂ ಓದಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಿದ್ದಕ್ಕೆ ಗಡ್ಡ ತೆಗೆದೆ: ಯತ್ನಾಳ್
ಸಿಎಂ ಕುರ್ಚಿ ಮೇಲೆ ಯತ್ನಾಳ್ ಕಣ್ಣು ವಿಚಾರಕ್ಕೆ ಪ್ರತಿಕ್ರಿಯಿಸಿದ ಶಾಸಕರು, ಕಾಲ ಕೂಡಿ ಬಂದರೆ ಯಾರು ತಪ್ಪಿಸೋಕೆ ಆಗಲ್ಲ. ಕಾಲ ಯಾರನ್ನು ಕೇಳಿ ಬರಲ್ಲ. ಸಿಎಂ ಸ್ಥಾನದ ರೇಸ್ ನಲ್ಲಿ ಬೊಮ್ಮಾಯಿ ಅವರ ಹೆಸರು ಇರಲಿಲ್ಲ, ಆದ್ರೂ ಸಿಎಂ ಆದರಲ್ಲ. ಕಾಲಕ್ರಮೇಣ ಬದಲಾವಣೆ ನಡದೆ ನಡೆಯುತ್ತೆ. ಒಳ್ಳೆಕಾಲ ಬಂದೇ ಬರುತ್ತೆ ನಾವೇಕೆ ನಿರೀಕ್ಷೆ ಮಾಡಬಾರದು ಎಂದರು. ಇದನ್ನೂ ಓದಿ: ಕಾಂಗ್ರೆಸ್‍ಗೆ ಅಧಿಕಾರಕ್ಕೆ ಬರುವ ಹಗಲುಗನಸು ಕಾಣುವ ನೈತಕತೆ ಇಲ್ಲ: ಸಿ.ಟಿ.ರವಿ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದ ನೂತನ ಸಚಿವರಾಗಿ ಈ ಬಾರಿ ಕಾರ್ಕಳ ಶಾಸಕ ಸುನೀಲ್ ಕುಮಾರ್ ಸೇರ್ಪಡೆಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅಭಿನಂದಿಸಲು ಬರುವವರ ಬಳಿ ಸಚಿವರು ಮನವಿ ಮಾಡಿಕೊಂಡಿದ್ದಾರೆ.
ಹೌದು. ಈ ಸಂಬಂಧ ತಮ್ಮ ಫೋಟೋ ಇರುವ ಪೋಸ್ಟ್ ಹಾಕಿಕೊಂಡಿರುವ ಸುನೀಲ್ ಕುಮಾರ್, ಅಭಿನಂದಿಸಲು ಹಾರ ತುರಾಯಿ ತರಬೇಡಿ. ತರಲೇಬೇಕು ಎಂದಿದ್ದರೆ ಒಂದು ಪುಸ್ತಕ ತೆಗೆದುಕೊಂಡು ಬನ್ನಿ. ಅದನ್ನು ನಾನು ಕಾರ್ಕಳದಲ್ಲಿರುವ ಗ್ರಂಥಾಲಯಕ್ಕೆ ನೀಡುವುದಾಗಿ ತಿಳಿಸಿದ್ದಾರೆ.
ಸುನೀಲ್ ಕುಮಾರ್ ಅವರು 2004, 2013 ಹಾಗೂ 2018ರಲ್ಲಿ ಮೂರು ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್ ಗೋಪಾಲ ಭಂಡಾರಿ ವಿರುದ್ಧ ಗೆಲುವು ಸಾಧಿಸಿದ್ದರು. ಬಳಿಕ ಸರ್ಕಾರದ ಮುಖ್ಯ ಸಚೇತರಕರಾಗಿ, ಕೇರಳ ಬಿಜೆಪಿ ಸಹ ಉಸ್ತುವಾರಿಯಾಗಿ ಕೆಲಸ ಮಾಡಿದ್ದಾರೆ. ಇದೀಗ ಮೊದಲ ಬಾರಿ ಸಚಿವರಾಗಿದ್ದಾರೆ.
ಆತ್ಮೀಯರೇ, ಅಭಿನಂದಿಸಲು ಹಾರ ತುರಾಯಿ ತರಬೇಡಿ… ಕೊಡಲೇಬೇಕು ಅಂದಿದ್ದರೆ ಒಂದು ಕನ್ನಡ ಪುಸ್ತಕ ಕೊಂಡು ತನ್ನಿ ಅದನ್ನು ಕಾರ್ಕಳ ಗ್ರಂಥಾಲಯಕ್ಕೆ ಕೊಡುತ್ತೇನೆ. pic.twitter.com/fM9KK3BGB9