Tag: ಸಜೀವ ದಹನ

  • ವಾಮಾಚಾರದ ಆರೋಪ – ನೆರೆಹೊರೆಯವರಿಂದಲೇ ಮಹಿಳೆ ಸಜೀವ ದಹನ

    ವಾಮಾಚಾರದ ಆರೋಪ – ನೆರೆಹೊರೆಯವರಿಂದಲೇ ಮಹಿಳೆ ಸಜೀವ ದಹನ

    ಪಾಟ್ನಾ: ವಾಮಾಚಾರ (Witchcraft) ಮಾಡಿರುವ ಆರೋಪದ ಮೇಲೆ ಸ್ಥಳೀಯರು ಪರಿಶಿಷ್ಟ ಜಾತಿ ಸಮುದಾಯದ ಮಹಿಳೆಯನ್ನು (Woman) ತನ್ನ ಮನೆಯಲ್ಲಿಯೇ ಸಜೀವ ದಹನ ಮಾಡಿರುವ ಆಘಾತಕಾರಿ ಘಟನೆ ಶನಿವಾರ ಸಂಜೆ ಬಿಹಾರದಲ್ಲಿ (Bihar) ನಡೆದಿದೆ.

    ಜಾರ್ಖಂಡ್ ಅರಣ್ಯಕ್ಕೆ ಹೊಂದಿಕೊಂಡಿರುವ ಮೈಗ್ರಾ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಪಚ್ಮಾಹ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅರ್ಜುನ್ ದಾಸ್ ಅವರ ಪತ್ನಿ ರೀಟಾ ದೇವಿ (45) ಅವರ ಮೇಲೆ ಸ್ಥಳೀಯರು ಹಲ್ಲೆ ನಡೆಸಿದ್ದಾರೆ. ಬಳಿಕ ಅಲ್ಲಿಗೆ ಧಾವಿಸಿದ್ದ ಸ್ಥಳೀಯ ಪೊಲೀಸ್ ತಂಡವನ್ನು ಕೂಡಾ ಅಲ್ಲಿಂದ ತೆರಳುವಂತೆ ಒತ್ತಾಯಿಸಿದ್ದಾರೆ.

    ಬಳಿಕ ಇಮಾಮ್‌ಗಂಜ್ ಎಸ್‌ಡಿಪಿಒ ಮನೋಜ್ ರಾಮ್ ನೇತೃತ್ವದಲ್ಲಿ ಸ್ಥಳಕ್ಕೆ ಹೆಚ್ಚಿನ ಅಧಿಕಾರಿಗಳು ಬಂದಿದ್ದಾರೆ. ಈ ವೇಳೆ ಮಹಿಳೆಯ ಮೃತ ದೇಹವನ್ನು ಸುಟ್ಟ ಸ್ಥಿತಿಯಲ್ಲಿ ಪತ್ತೆಹಚ್ಚಿದ್ದಾರೆ. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಗಯಾಕ್ಕೆ ಕೊಂಡೊಯ್ದಿದ್ದಾರೆ. ಇದನ್ನೂ ಓದಿ: ಯುವತಿಗೆ ಆ್ಯಸಿಡ್ ಹಾಕಿ ಜೈಲು ಸೇರಿರುವ ನಾಗನಿಗೆ ಗ್ಯಾಂಗ್ರಿನ್

    ಘಟನೆಗೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 302 ಮತ್ತು 436 ಹಾಗೂ ವಾಮಾಚಾರ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, 9 ಮಹಿಳೆಯರನ್ನು ಬಂಧಿಸಲಾಗಿದೆ. ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (SSP) ಹರ್‌ಪ್ರೀತ್ ಕೌರ್ ಪ್ರಕಾರ, ಕೊಲೆ ನಡೆಸಿರುವ ಆರೋಪದಲ್ಲಿ ಇನ್ನೂ ಹೆಚ್ಚಿನವರ ಹುಡುಕಾಟ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

     

    ವರದಿಗಳ ಪ್ರಕಾರ ಅದೇ ಗ್ರಾಮದ ನಿವಾಸಿಯಾಗಿದ್ದ ಪರಮೇಶ್ವರ್ ಭುಯಾನ್ ಅವರು ದೀರ್ಘಕಾಲದ ಅನಾರೋಗ್ಯಕ್ಕೆ ತುತ್ತಾಗಿ, ಕಳೆದ ತಿಂಗಳು ಮೃತಪಟ್ಟಿದ್ದರು. ಆದರೆ ಅವರ ಕುಟುಂಬ ರೀಟಾ ದೇವಿ ವಾಮಾಚಾರದ ಮೂಲಕ ಕೊಲೆ ಮಾಡಿರುವುದಾಗಿ ಆರೋಪಿಸಿ, ನಿನ್ನೆ ಆಕೆಯನ್ನು ಕೊಂದಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಯಮಸ್ವರೂಪಿ ರಸ್ತೆ ಗುಂಡಿ ಅವಾಂತರ – ಬೈಕ್‌ನಿಂದ ಬಿದ್ದು ವ್ಯಕ್ತಿ ಕೋಮಾ

    Live Tv
    [brid partner=56869869 player=32851 video=960834 autoplay=true]

  • ಟಿಎಂಸಿ ಮುಖಂಡನ ಹತ್ಯೆ – ಹಲವು ಮನೆಗಳಿಗೆ ಬೆಂಕಿ, 10 ಮಂದಿ ಸಜೀವ ದಹನ

    ಟಿಎಂಸಿ ಮುಖಂಡನ ಹತ್ಯೆ – ಹಲವು ಮನೆಗಳಿಗೆ ಬೆಂಕಿ, 10 ಮಂದಿ ಸಜೀವ ದಹನ

    ಕೋಲ್ಕತ್ತ: ಟಿಎಂಸಿ ಮುಖಂಡನ ಹತ್ಯೆ ಬೆನ್ನಲ್ಲೇ ಪಶ್ಚಿಮ ಬಂಗಾಳದ ಬಿರ್‌ಭುಮ್‌ನಲ್ಲಿ ಹಲವು ಮನೆಗಳಿಗೆ ಬೆಂಕಿ ಬಿದ್ದ ಪರಿಣಾಮ 10 ಮಂದಿ ಸಜೀವ ದಹನವಾಗಿದ್ದಾರೆ ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

    ಇಲ್ಲಿನ ರಾಮಪುರಹಾಟ್‌ನ ಬಗುಟಿ ಗ್ರಾಮ ಪಂಚಾಯಿತಿ ಮುಖಂಡ ಭಾದು ಶೇಖ್ ಅವರ ಮೇಲೆ ಸೋಮವಾರ ರಾತ್ರಿ ದಾಳಿ ನಡೆದಿತ್ತು. ರಾಷ್ಟ್ರೀಯ ಹೆದ್ದಾರಿ-60ರ ಅಂಗಡಿಯೊಂದರಲ್ಲಿ ಇರುವಾಗ ಶೇಖ್ ಅವರ ಮೇಲೆ ಬಾಂಬ್ ದಾಳಿ ನಡೆಸಲಾಗಿತ್ತು. ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಅವರು ಮೃತಪಟ್ಟಿದ್ದರು. ಮುಖಂಡನ ಸಾವಿನ ಸುದ್ದಿ ತಿಳಿದು ರೊಚ್ಚಿಗೆದ್ದ ಗುಂಪೊಂದು ಅವರ ಗ್ರಾಮದಲ್ಲಿನ ವಿರೋಧಿ ಗುಂಪಿನ ಕೆಲವು ಮನೆಗಳ ಮೇಲೆ ದಾಳಿ ನಡೆಸಲು ಮುಂದಾಗಿದೆ. ಇದನ್ನೂ ಓದಿ: ಭಗತ್ ಸಿಂಗ್ ಪುಣ್ಯಸ್ಮರಣೆಯಂದು ಪಂಜಾಬ್‌ನಲ್ಲಿ ಸಾರ್ವಜನಿಕ ರಜೆ

    ದಾಳಿ ಹಿನ್ನೆಲೆಯಲ್ಲಿ 10 ರಿಂದ 12 ಮಂದಿಗೆ ಬೆಂಕಿ ಬಿದ್ದಿದ್ದು, 10 ಮಂದಿ ಸಜೀವ ದಹನವಾಗಿದ್ದಾರೆ. ಸುಟ್ಟು ಕರಕಲಾದ 10 ಮೃತದೇಹವನ್ನು ಹೊರತೆಗೆಲಾಗಿದ್ದು, ಒಂದೇ ಮನೆಯಿಂದ 7 ಮೃತದೇಹಗಳನ್ನು ಹೊರತೆಗೆದಿರುವುದು ಇದೇ ವೇಳೆ ಬೆಳಕಿಗೆ ಬಂದಿದೆ. ದೇಹಗಳು ಸಂಪೂರ್ಣ ಸುಟ್ಟಿರುವುದರಿಂದ ವ್ಯಕ್ತಿಗಳ ಗುರುತು ಪತ್ತೆಯಾಗಿಲ್ಲ. ಎಲ್ಲ ದೇಹಗಳನ್ನು ಸಮೀಪದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕಳುಹಿಸಲಾಗಿದೆ. ಇನ್ನೂ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಮಾಹಿತಿ ನೀಢಿದಿದ್ದಾರೆ. ಇದನ್ನೂ ಓದಿ: ಸಂಸದ ಸ್ಥಾನಕ್ಕೆ ಅಖಿಲೇಶ್ ಯಾದವ್ ರಾಜೀನಾಮೆ

    ಇನ್ನೂ ಮುಖಂಡ ಶೇಖ್ ಅವರ ಹತ್ಯೆಯ ಸಂಬಂಧ ಈವರೆಗೂ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಮನೆಗೆ ಬೆಂಕಿಯಿಟ್ಟ ಗುಂಪಿನ ಬಗ್ಗೆ ರಾಜ್ಯ ಸರ್ಕಾರವು ಎಡಿಜಿ (ಸಿಐಡಿ) ಜ್ಞಾನವಂತ್ ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿದೆ ಎಂದು ಡಿಜಿಪಿ ಮಾಳವೀಯ ಹೇಳಿದ್ದಾರೆ.

  • ಮಗು ಸೇರಿ ಇಬ್ಬರು ಸಜೀವದಹನ – ಓರ್ವನ ಸ್ಥಿತಿ ಗಂಭೀರ

    ಮಗು ಸೇರಿ ಇಬ್ಬರು ಸಜೀವದಹನ – ಓರ್ವನ ಸ್ಥಿತಿ ಗಂಭೀರ

    – ಹಲವು ಅನುಮಾನಗಳಿಗೆ ಕಾರಣವಾಯ್ತು ಪ್ರಕರಣ

    ಮಂಡ್ಯ: 4 ವರ್ಷದ ಮಗು ಸೇರಿ ಇಬ್ಬರು ಸಜೀವದಹನ ಆಗಿರುವ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಅಗಚಹಳ್ಳಿ ಗ್ರಾಮದಲ್ಲಿ ನಡೆದಿದೆ. ದುರ್ಘಟನೆಯಲ್ಲಿ ತನ್ವಿತ್(4), ದೀಪಕ್(33) ಸಾವನ್ನಪ್ಪಿದ್ದಾರೆ. ಮಗುವಿನ ತಂದೆ ಭರತ್ ದೇಹ ಶೇ.90 ರಷ್ಟು ಸುಟ್ಟಿರುವುದರಿಂದ ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.

    ಮೂಲತಃ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯವರಾದ ಭರತ್ ನಾಗಮಂಗಲದಲ್ಲಿ ಪೇಂಟಿಂಗ್ ವೃತ್ತಿ ಮಾಡಿಕೊಂಡಿದ್ದರು. ಕಳೆದ 5ವರ್ಷಗಳ ಹಿಂದೆ ಮದುವೆಯಾಗಿದ್ದ ಭರತ್, ಇತ್ತೀಚೆಗೆ ಪತ್ನಿ ಜೊತೆ ಮುನಿಸಿಕೊಂಡು ದೂರಾಗಿದ್ದರು. ಬಳಿಕ ತನ್ನ ಮಗ ತನ್ವಿತ್ ಜೊತೆ ಬೆಳ್ಳೂರಿನ ಅಗಚಹಳ್ಳಿಯ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ರು. ತಾನಾಯ್ತು ತನ್ನ ಕೆಲಸವಾಯ್ತು ಅಂತಿದ್ದ ಭರತ್ ಮನೆಗೆ ನಿನ್ನೆ ಆತನ ಸಂಬಂಧಿ ದೀಪಕ್ ಬಂದಿದ್ದಾನೆ. ಸಂಬಂಧಿ ಬಂದ ಖುಷಿಯಲ್ಲಿ ರಾತ್ರಿ ಇಬ್ಬರು ಎಣ್ಣೆ ಪಾರ್ಟಿ ಮುಗಿಸಿದ್ದಾರೆ. ಬಳಿಕ ಎಂದಿನಂತೆ ಪಕ್ಕದ ಮನೆಯವರನ್ನ ಮಾತನಾಡಿಸಿಕೊಂಡು ಭರತ್ ಮಲಗಲು ತೆರಳಿದ್ದಾನೆ. ಆದರೆ ಬೆಳಗ್ಗಿನ ಜಾವ 3:30ರಲ್ಲಿ ಭರತ್ ಮನೆಯಿಂದ ಜೋರಾದ ಶಬ್ದ ಕೇಳಿಬಂದಿದ್ದು, ಗಾಬರಿಯಿಂದ ಓಡಿಬಂದ ಪಕ್ಕದ ಮನೆಯವರಿಗೆ ಮಗು ಹಾಗೂ ಭರತ್‍ನ ಚೀರಾಟ ಕೇಳಿಬಂದಿದೆ. ಮನೆ ಕಿಟಕಿಯಿಂದ ಹೊಗೆ ಬರುತ್ತಿದ್ದರಿಂದ ಬೆಂಕಿ ತಗುಲಿರುವುದು ಖಚಿತವಾಗಿದೆ.

    ತಕ್ಷಣ ಮನೆಮಾಲೀಕ ಮನೆ ಬೀಗ ಒಡೆದು ಒಳನುಗ್ಗಿದ್ದು. ಬೆಂಕಿ ನಂದಿಸಿ ಗಾಯಾಗಳನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ತನ್ವಿತ್ ಹಾಗೂ ಸಂಬಂಧಿ ದೀಪಕ್ ಮೃತಪಟ್ಟಿದ್ದಾರೆ. ತಂದೆ ಭರತ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಕಿ ಅವಘಡ ಎಂದುಕೊಂಡಿದ್ದ ಖಾಕಿಪಡೆಗೆ ಕೊಲೆಯ ವಾಸನೆ ಬಡಿದಿದ್ದು ತನಿಖೆ ಆರಂಭಿಸಿದ್ದಾರೆ.

    ಅಕ್ಕ-ಪಕ್ಕದ ಮನೆಯವರ ಹೇಳಿಕೆ ಸಂಗ್ರಹಿಸಿರುವ ಪೊಲೀಸರಿಗೆ, ನಿನ್ನೆ ರಾತ್ರಿ ದೀಪಕ್ ಜೊತೆ ಮತ್ತಿಬ್ಬರು ಭರತ್ ಮನೆಗೆ ಬಂದಿದ್ದ ಮಾಹಿತಿ ದೊರಕಿದೆ. ಎಲ್ಲರೂ ಒಟ್ಟಿಗೆ ಸೇರಿ ಎಣ್ಣೆ ಪಾರ್ಟಿ ಮಾಡಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳದಲ್ಲಿ ಬರ್ತಿದ್ದ ಪೆಟ್ರೋಲ್ ವಾಸನೆ ಹಾಗೂ ಮನೆಗೆ ಆಚೆಯಿಂದ ಹಾಕಲಾಗಿದ್ದ ಬೀಗ ಪೊಲೀಸರ ಸಂದೇಹ ಮತ್ತಷ್ಟು ಹೆಚ್ಚಿಸಿದ್ದು. ಎಲ್ಲರೂ ನಿದ್ದೆಗೆ ಜಾರಿದ ಬಳಿಕ ಹಂತಕರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ.

    ಅಗ್ನಿ ಅವಘಡ ಎಂದುಕೊಂಡಿದ್ದ ಪೊಲೀಸರಿಗೆ ಕೊಲೆಯ ಸುಳಿವು ಸಿಕ್ಕಿದ್ದು, ವಿವಿಧ ಆಯಾಮಗಳಿಂದ ತನಿಖೆ ಆರಂಭಿಸಿದ್ದಾರೆ.

  • ಬೇಕರಿಯಲ್ಲೇ ಮಾಲೀಕ ಸಜೀವ ದಹನ

    ಬೇಕರಿಯಲ್ಲೇ ಮಾಲೀಕ ಸಜೀವ ದಹನ

    ವಿಜಯಪುರ: ಬೇಕರಿಯಲ್ಲಿ ಆಕಸ್ಮಿಕ ಬೆಂಕಿ ಹೊತ್ತಿ ಉರಿದ ಪರಿಣಾಮ ಬೇಕರಿ ಮಾಲೀಕ ಸಜೀವ ದಹನವಾಗಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದಲ್ಲಿ ನಡೆದಿದೆ.

    ರಾಜಸ್ಥಾನ ಮೂಲದ ಮಾಧವರಾವ್ ಚೌಧರಿ(35) ಮೃತ ದುರ್ದೈವಿ. ಪಟ್ಟಣದ ವಿದ್ಯಾನಗರದ ಮುಖ್ಯ ರಸ್ತೆಯಲ್ಲಿ ಈ ಬೇಕರಿ ಇದ್ದು, ಮಾಧವರಾವ್ ಕಳೆದ ಅನೇಕ ವರ್ಷಗಳಿಂದ ಬೇಕರಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು. ಬೇಕರಿಯೊಳಗಿದ್ದ ದೀಪದಿಂದ ಬೇಕರಿಯೊಳಗೆ ಬೆಂಕಿ ತಗುಲಿದೆ.

    ಸೋಮವಾರ ಅಮಾವಾಸ್ಯೆ ಹಿನ್ನೆಲೆಯಲ್ಲಿ ಮಾಧವರಾವ್ ರಾತ್ರಿ ಪೂಜೆ ಮಾಡಿ, ದೀಪ ಹಚ್ಚಿಟ್ಟು ತಾನೂ ಬೇಕರಿಯಲ್ಲೇ ಮಲಗಿದ್ದರು. ಬೇಕರಿ ಒಳಗಡೆ ಲಾಕ್ ಮಾಡಿ ಮಲಗಿದ್ದ ಮಾಧವರಾವ್ ಸಜೀವ ದಹನವಾಗಿದ್ದಾರೆ. ಬೆಳಗ್ಗಿನ ಜಾವ ಬೇಕರಿಯಿಂದ ಹೊಗೆ ಬರುತ್ತಿದ್ದುದನ್ನು ಕಂಡು ಸ್ಥಳೀಯರು ದೌಡಾಯಿಸಿದ್ದಾರೆ.

    ಬಳಿಕ ಸ್ಥಳೀಯರು ಬೇಕರಿಯ ಶೆಟರ್ ಮುರಿದು ಮಾಲೀಕನನ್ನು ಹೊರ ತೆಗೆದರು. ಆದರೆ ಅಷ್ಟರಲ್ಲೇ ಮಾಧವರಾವ್ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ರಾಜಸ್ಥಾನ ಮೂಲದ ವ್ಯಕ್ತಿ ಮಾಧವರಾವ್ ಈ ಅಂಗಡಿಯನ್ನು ಬಾಡಿಗೆ ಪಡೆದಿದ್ದರು.

    ಈ ಬಗ್ಗೆ ಚಡಚಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಗುಡಿಸಲಿಗೆ ಆಕಸ್ಮಿಕ ಬೆಂಕಿ- ಮನೆ ಒಳಗೆ ಇಟ್ಟಿದ್ದ ಹಣ ತರಲು ಹೋಗಿ ಸುಟ್ಟು ಕರಕಲಾದ ಮಹಿಳೆ

    ಗುಡಿಸಲಿಗೆ ಆಕಸ್ಮಿಕ ಬೆಂಕಿ- ಮನೆ ಒಳಗೆ ಇಟ್ಟಿದ್ದ ಹಣ ತರಲು ಹೋಗಿ ಸುಟ್ಟು ಕರಕಲಾದ ಮಹಿಳೆ

    ಹಾಸನ: ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಅದರಲ್ಲಿ ಇಟ್ಟಿದ್ದ ಹಣವನ್ನು ತರಲು ಹೋಗಿ ಮಹಿಳೆಯೊಬ್ಬರು ಸಜೀವ ದಹನವಾಗಿರುವ ದಾರುಣ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಸುಂಡಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಸುಂಡಹಳ್ಳಿ ಗ್ರಾಮದಲ್ಲಿ ಕಮಲಬಾಯಿ(60) ಮೃತ ದುರ್ದೈವಿ. ಕಮಲಬಾಯಿ ಹಾಗೂ ಅವರ ಪತಿ ಕುಮಾರನಾಯ್ಕ ಇಬ್ಬರೇ ಒಂದು ಗುಡಿಸಲಿನಲ್ಲಿ ವಾಸವಾಗಿದ್ದರು. ಶನಿವಾರ ಪತಿ ಮನೆಯಿಂದ ಹೊರಹೋಗಿದ್ದರು. ಈ ವೇಳೆ ತಡರಾತ್ರಿ ಸುಮಾರು 3 ಗಂಟೆ ಹೊತ್ತಿಗೆ ಗುಡಿಸಲಿಗೆ ಬೆಂಕಿ ಹೊತ್ತಿಕೊಂಡಿದೆ. ಗುಡಿಸಲಿನಲ್ಲಿ ಮಲಗಿದ್ದ ಕಮಲಬಾಯಿ ಬೆಂಕಿಬಿದ್ದ ಕೂಡಲೇ ಮನೆಯಿಂದ ಹೊರ ಬಂದಿದ್ದಾರೆ. ಬಳಿಕ ಮನೆ ಒಳಗೆ ಇಟ್ಟಿದ್ದ ಹಣ ತರಲು ಹೋಗಿ ವಾಪಸ್ ಬರಲು ಆಗದೇ ಬೆಂಕಿಗೆ ಬಲಿಯಾಗಿದ್ದಾರೆ.

    ಬೆಂಕಿಯ ಅಟ್ಟಹಾಸಕ್ಕೆ ಮನೆಯಲ್ಲಿದ್ದ ವಸ್ತುಗಳೆಲ್ಲಾ ಸುಟ್ಟು ಕರಕಲಾಗಿದೆ. ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶ್ರವಣಬೆಳಗೊಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕೆಮಿಕಲ್ ಕಂಟೇನರ್, ಲಾರಿ ನಡುವೆ ಭೀಕರ ಅಪಘಾತ- ಓರ್ವ ಸಜೀವ ದಹನ

    ಕೆಮಿಕಲ್ ಕಂಟೇನರ್, ಲಾರಿ ನಡುವೆ ಭೀಕರ ಅಪಘಾತ- ಓರ್ವ ಸಜೀವ ದಹನ

    ಸಾಂದರ್ಭೀಕ ಚಿತ್ರ

    ಬೆಳಗಾವಿ (ಚಿಕ್ಕೋಡಿ): ಕೆಮಿಕಲ್ ತುಂಬಿದ ಕಂಟೇನರ್ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದು ಸ್ಫೋಟಗೊಂಡ ಪರಿಣಾಮ ವಾಹನದಲ್ಲಿದ್ದ ಓರ್ವ ವ್ಯಕ್ತಿ ಸಜೀವ ದಹನವಾಗಿರುವ ಘಟನೆ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ವಿಟಾ ಪಟ್ಟಣದಲ್ಲಿ ನಡೆದಿದೆ.

    ವಿಟಾ ಪಟ್ಟಣದ ಹೊರವಲಯದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಕೆಮಿಕಲ್ ತುಂಬಿದ ಕಂಟೇನರ್ ಲಾರಿಗೆ ಎದುರಿನಿಂದ ಬಂದ ಇನ್ನೊಂದು ಲಾರಿ ಡಿಕ್ಕಿ ಹೊಡೆದಿದೆ. ಈ ವೇಳೆ ಎರಡು ಲಾರಿಗಳು ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ವಾಹನಗಳು ಸ್ಫೋಟಗೊಂಡಿದೆ. ಎರಡೂ ಲಾರಿಗಳಿಗೂ ಬೆಂಕಿ ಹತ್ತಿದ ಪರಿಣಾಮ ವಾಹನದಲ್ಲಿ 5 ರಿಂದ 6 ಮಂದಿ ಸಜೀವ ದಹನವಾಗಿದ್ದಾರೆ ಎಂದು ಶಂಕಿಸಲಾಗಿದೆ.

    ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಮತ್ತು ಪೊಲೀಸರು ಧಾವಿಸಿದ್ದು, ರಕ್ಷಣಾ ಕಾರ್ಯವನ್ನು ನಡೆಸುತ್ತಿದ್ದಾರೆ. ಸದ್ಯ ಅಪಘಾತ ಸ್ಥಳದಲ್ಲಿ ಓರ್ವ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಘಟನೆ ಕುರಿತು ವಿಟಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಂಟೈನರ್ ಗೆ ಗೂಡ್ಸ್ ಲಾರಿ ಡಿಕ್ಕಿ- ಇಬ್ಬರು ಸಜೀವ ದಹನ!

    ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಂಟೈನರ್ ಗೆ ಗೂಡ್ಸ್ ಲಾರಿ ಡಿಕ್ಕಿ- ಇಬ್ಬರು ಸಜೀವ ದಹನ!

    ಬೆಂಗಳೂರು: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಂಟೈನರ್ ವಾಹನಕ್ಕೆ ಗೂಡ್ಸ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಇಬ್ಬರು ಸಜೀವ ದಹನವಾಗಿರುವ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಅತ್ತಿಬೆಲೆ ಚೆಕ್ ಪೋಸ್ಟ್ ಬಳಿ ಗುರುವಾರ ತಡರಾತ್ರಿ ನಡೆದಿದೆ.

    ಮೃತರು ತಮಿಳುನಾಡು ಮೂಲದವರಾಗಿದ್ದು, ಓರ್ವ ತಂಜಾವೂರಿನ ವೇಲುಮುರುಗನ್(25) ಮತ್ತೊಬ್ಬನ ಗುರುತು ಪತ್ತೆಯಾಗಿಲ್ಲ. ಗುರುವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಹೊಸೂರು ಕಡೆಯಿಂದ ಬಂದ ಗೂಡ್ಸ್ ಲಾರಿ ನಿಂತಿದ್ದ ಕಂಟೈನರ್ ವಾಹನಕ್ಕೆ ಡಿಕ್ಕಿ ಹೊಡೆದಿದೆ.

    ಕ್ಷಣ ಮಾತ್ರದಲ್ಲಿ ಎರಡು ವಾಹನಗಳಿಗೆ ಬೆಂಕಿ ವ್ಯಾಪಿಸಿದ್ದು, ನೋಡ ನೋಡುತ್ತಿದ್ದಂತೆ ಲಾರಿಯಲ್ಲಿ ಸಿಲುಕಿದ್ದ ಇಬ್ಬರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಜೀವ ದಹನವಾಗಿದ್ದಾರೆ. ಕಂಟೈನರ್ ವಾಹನದಲ್ಲಿ ಕೆಮಿಕಲ್ ಸಾಗಾಟ ಮಾಡಲಾಗುತ್ತಿದ್ದು, ದಿಢೀರ್ ಬೆಂಕಿ ಹೊತ್ತಿಕೊಳ್ಳಲು ರಾಸಾಯನಿಕವೇ ಕಾರಣ ಎನ್ನಲಾಗಿದೆ.

    ಸ್ಥಳಕ್ಕೆ ಆಗಮಿಸಿದ ಅತ್ತಿಬೆಲೆ ಪೊಲೀಸರು ಮೃತ ದೇಹಗಳನ್ನು ಹತ್ತಿರದ ಖಾಸಗಿ ಆಸ್ಪತ್ರೆ ಶವಗಾರದಲ್ಲಿ ಇರಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

  • ಗುಡಿಸಲಿಗೆ ಬೆಂಕಿ- 7 ವರ್ಷದ ಬಾಲಕಿ ಸಜೀವ ದಹನ

    ಗುಡಿಸಲಿಗೆ ಬೆಂಕಿ- 7 ವರ್ಷದ ಬಾಲಕಿ ಸಜೀವ ದಹನ

    ಗದಗ: ಆಕಸ್ಮಿಕವಾಗಿ ಗುಡಿಸಲಿಗೆ ಬೆಂಕಿ ತಗುಲಿ ಗುಡಿಸಲಲ್ಲಿ ಮಲಗಿದ್ದ 7 ವರ್ಷದ ಬಾಲಕಿ ಸಜೀವ ದಹನವಾಗಿರುವ ಘಟನೆ ಗದಗದ ನೀಲಗುಂದ ಗ್ರಾಮದಲ್ಲಿ ನಡೆದಿದೆ.

    ರೇಣುಕಾ ಶರಣಪ್ಪ ಚಿಂಚಲಿ(7) ಮೃತ ಬಾಲಕಿ. ಹೊಲದಲ್ಲಿನ ಗುಡಿಸಲಿನಲ್ಲಿ ಬಾಲಕಿ ಮಲಗಿದ್ದ ವೇಳೆ ಆಕಸ್ಮಿಕ ಈ ಅವಘಡ ಸಂಭವಿಸಿದೆ. ಗುಡಸಲಿಗೆ ಬೆಂಕಿ ತಗುಲಿ ಬಾಲಕಿ ಮೃತಪಟ್ಟಿದ್ದಾಳೆ.

    ಈ ಘಟನೆ ಸಂಬಂಧ ಮುಳಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಮಗಳ ಜೊತೆ ಜಗಳವಾಡಿದ್ದಕ್ಕೆ ಮನೆಗೆ ಬಂದಿದ್ದ ಅಳಿಯನಿಗೇ ಬೆಂಕಿಯಿಟ್ಟ ಅತ್ತೆ!

    ಮಗಳ ಜೊತೆ ಜಗಳವಾಡಿದ್ದಕ್ಕೆ ಮನೆಗೆ ಬಂದಿದ್ದ ಅಳಿಯನಿಗೇ ಬೆಂಕಿಯಿಟ್ಟ ಅತ್ತೆ!

    ಮೈಸೂರು: ಮಗಳ ಜೊತೆ ಜಗಳವಾಡಿದ್ದಕ್ಕೆ ರೊಚ್ಚಿಗೆದ್ದ ಅತ್ತೆ ತನ್ನ ಮನೆಗೆ ಬಂದಿದ್ದ ಅಳಿಯನನ್ನು ಸಜೀವವಾಗಿ ದಹಿಸಿದ ಅಮಾನವೀಯ ಘಟನೆಯೊಂದು ಮೈಸೂರಿನಲ್ಲಿ ನಡೆದಿದೆ.

    ನಾಗರಾಜ ಶೆಟ್ಟಿ(43) ಹತ್ಯೆಯಾದ ಅಳಿಯ. ಈ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನ ಮಾಕನಪುರದಲ್ಲಿ ನಡೆದಿರುವ ಬಗ್ಗೆ ತಡವಾಗಿ ಬೆಳಕಿಗೆ ಬಂದಿದೆ.

    ಮೂಲತಃ ಗುಂಡ್ಲುಪೇಟೆಯ ಕೂತನೂರು ಗ್ರಾಮದ ನಿವಾಸಿಯಾಗಿರೋ ನಾಗರಾಜ್ ಶೆಟ್ಟಿ, 5 ವರ್ಷಗಳ ಹಿಂದೆ ಮಾಕಾಪುರ ಮಣಿ ಎಂಬುವರನ್ನು ಮದುವೆಯಾಗಿದ್ದರು. ಇತ್ತೀಚೆಗಷ್ಟೇ ನಾಗರಾಜ್ ಜೊತೆ ಪತ್ನಿ ಜಗಳವಾಡಿ ತಾಯಿ ಮನೆಗೆ ಬಂದಿದ್ದರು. ಹೀಗಾಗಿ ಪತ್ನಿಯನ್ನು ತನ್ನೊಂದಿಗೆ ವಾಪಾಸ್ ಕಳುಹಿಸಿಕೊಡುವಂತೆ ನಾಗರಾಜ್ ಮನೆಗೆ ಬಂದು ಅತ್ತೆ ಜೊತೆ ಜಗಳವಾಡಿದ್ದರು. ಅತ್ತೆ, ಅಳಿಯನ ಗಲಾಟೆ ತಾರಕಕ್ಕೇರಿದ್ದರಿಂದ ಅಳಿಯನನ್ನು ಪತ್ನಿ ಮಣಿ ಕುಟುಂಬ ಜೋಳದ ಹುಲ್ಲಿನ ಮೆದೆಗೆ ದೂಡಿ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ.

    ಅತ್ತೆ ಮನೆಗೆ ಹೋದ ನಾಗರಾಜ್ ಶೆಟ್ಟಿ ವಾಪಸ್ ಬರದೇ ಇದ್ದುದರಿಂದ ಅನುಮಾನಗೊಂಡು ಸೋದರರು ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಣಿ ಕುಟುಂಬಸ್ಥರ ಮೇಲೆ ಆರೋಪ ಮಾಡಿ ದೂರು ದಾಖಲಿಸಿದ್ದರಿಂದ ಪೊಲೀಸರು ತನಿಖೆ ನಡೆಸಿದಾಗ ಜೋಳದ ಮೆದೆಯಲ್ಲಿ ವ್ಯಕ್ತಿ ಸುಟ್ಟಿರುವ ಕುರುಹುಗಳು ಪತ್ತೆಯಾಗಿವೆ.

    ಪೊಲೀಸರು ಅತ್ತೆ ಕಾಳಮ್ಮ, ಮಾವ ಮಹಾದೇವ ಶೆಟ್ಟಿ, ಪತ್ನಿ ಮಣಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.