Tag: ಸತೀಶ್ ಜಾರಕಿಹೊಳಿ

  • ಡಿಕೆಶಿ, ಜಾರಕಿಹೊಳಿ ಅಲ್ಲ.. ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಸಿಎಂ ಆಗ್ತಾರೆ: ಯತ್ನಾಳ್ ಬಾಂಬ್

    ಡಿಕೆಶಿ, ಜಾರಕಿಹೊಳಿ ಅಲ್ಲ.. ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಸಿಎಂ ಆಗ್ತಾರೆ: ಯತ್ನಾಳ್ ಬಾಂಬ್

    – ವಿಜಯೇಂದ್ರ ಮತ್ತೆ ಬಿಜೆಪಿ ರಾಜ್ಯಾಧ್ಯಕ್ಷ ಆದ್ರೆ ಹೊಸ ಪಕ್ಷ ಕಟ್ತೀನಿ ಎಂದ ಶಾಸಕ

    ಬೆಳಗಾವಿ: ಡಿಕೆಶಿ, ಸತೀಶ್ ಜಾರಕಿಹೊಳಿ ಇಬ್ಬರೂ ಸಿಎಂ ಆಗಲ್ಲ. ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಸ್ಫೋಟಕ ಹೇಳಿಕೆ ನೀಡಿದ್ದಾರೆ.

    ಬೆಳಗಾವಿಯಲ್ಲಿ ಕನೇರಿ ಮಠದ ಸ್ವಾಮೀಜಿ ಬೆಂಬಲಿಸಿ ನಡೆದ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಯತ್ನಾಳ್, ಕಾಂಗ್ರೆಸ್‌ನಲ್ಲಿ ಸ್ಪರ್ಧೆಯಲ್ಲಿರುವ ಯಾವ ನಾಯಕರೂ ಸಿಎಂ ಆಗಲ್ಲ. ರಾಜ್ಯದ ಸಾರಥ್ಯ ಬ್ಲ್ಯಾಕ್ ಹಾರ್ಸ್ ಕೈಗೆ ಸಿಗಲಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಮುಖ್ಯಮಂತ್ರಿ ಆಗಲಿದ್ದಾರೆ. ಡಿಕೆಶಿಯೂ ಸಿಎಂ ಆಗಲ್ಲ, ಸತೀಶ್ ಜಾರಕಿಹೊಳಿ ಕೂಡ ಸಿಎಂ ಆಗಲ್ಲ. ಒಮ್ಮೆ ಸಿಎಂ ಆಗಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ಕಾಯುತ್ತಿದ್ದಾರೆ. ಸಿಎಂ ಪುತ್ರ ಕೂಡ ಬೆಳಗಾವಿಗೆ ಬಂದು ಸತೀಶ್ ಜಾರಕಿಹೊಳಿ ಹೆಸರು ಹೇಳಿ ಹೋಗಿದ್ದಾರೆ. ಆದರೆ, ನಾಯಕತ್ವ ಬದಲಾವಣೆ ಆಗಲಿದೆ. ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಲಿದ್ದಾರೆ ಎಂದು ಭವಿಷ್ಯ ನುಡಿದರು. ಇದನ್ನೂ ಓದಿ: ಶ್ರೀರಾಮುಲು ಕಾಂಗ್ರೆಸ್ ಪಕ್ಷಕ್ಕೆ ಕೊಟ್ಟ ಹಣವನ್ನೇ ಬಿಹಾರ ಚುನಾವಣೆಗೆ ಕಳುಹಿಸಿದ್ದೇವೆ: ಡಿಕೆಶಿ ಟಾಂಗ್‌

    ಡಿಕೆಶಿಯನ್ನ ಸಿಎಂ ಮಾಡ್ತೀನಿ ಅಂತ ನೀವು ಡಿಸೈಡ್ ಮಾಡಿದ್ರೆ, ನಾನು ಸತೀಶ್ ಪರವಾಗಿ ನಿಲ್ತೀನಿ ಅಂತ ಸಿದ್ದರಾಮಯ್ಯ ಸಂದೇಶ ಕೊಟ್ಟಿದ್ದಾರೆ. ತಮ್ಮ ಮಗನನ್ನು ಕಳಿಸಿ ಸಂದೇಶ ಸಾರಿದ್ದಾರೆ ಸಿಎಂ ಸಿದ್ದರಾಮಯ್ಯ ಯತ್ನಾಳ್ ಆರೋಪ ಮಾಡಿದ್ದಾರೆ.

    ವಿಜಯೇಂದ್ರ ಮರಳಿ ರಾಜ್ಯ ಬಿಜೆಪಿ ಅಧ್ಯಕ್ಷರಾದ್ರೆ ನಾನು ಹೊಸ ಪಕ್ಷ ಕಟ್ಟುತ್ತೇನೆ. ಕರ್ನಾಟಕ ರಾಜ್ಯದಲ್ಲಿ ಜೆಸಿಬಿ ಹೆಸರಲ್ಲಿ ಹೊಸ ಪಕ್ಷ ಕಟ್ಟುತ್ತೇನೆ. ಜೆ ಅಂದ್ರೆ ಜೆಡಿಎಸ್‌ನಲ್ಲಿ, ಸಿ ಅಂದ್ರೆ ಕಾಂಗ್ರೆಸ್ ಹಾಗೂ ಬಿ ಅಂದ್ರೆ ಬಿಜೆಪಿಯಲ್ಲಿ ನೊಂದವರು ನಮ್ಮ ಪಕ್ಷ ಸೇರುತ್ತಾರೆ. ಈಗ ಬಿಜೆಪಿಯಲ್ಲಿರುವ 50 ಕ್ಕೂ ಅಧಿಕ ಶಾಸಕರ ಬೆಂಬಲ ನನಗಿದೆ. ಹೆಚ್ಚಿನ ಸಂಖ್ಯೆಯ ಸಂಸದರ ಬೆಂಬಲವೂ ನನಗಿದೆ. ಹೀಗಾಗಿ, ಯಾವುದೇ ಕಾರಣಕ್ಕೂ ಬಿಜೆಪಿ ಹೈಕಮಾಂಡ್ ವಿಜಯೇಂದ್ರರನ್ನು ಅಧ್ಯಕ್ಷ ಮಾಡಬಾರದು. ಒಂದು ವೇಳೆ ವಿಜಯೇಂದ್ರ ಅಧ್ಯಕ್ಷರಾದ್ರೆ ನಾನು ಜೆಸಿಬಿ ಪಕ್ಷ ಕಟ್ಟುವೆ. ಜೆಸಿಬಿ ಪಾರ್ಟಿ ರಚನೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿದ್ದೇವೆ. ವಿಜಯೇಂದ್ರ ನೇಮಿಸಿದ ಮರುದಿನವೇ ಪಕ್ಷ ಆ್ಯಕ್ಟಿವ್ ಆಗಲಿದೆ. ನಾನು ಹೋದ ಕಡೆಗಳಲ್ಲಿ ಜನಬೆಂಬಲ ಸಿಗ್ತಿದೆ. ಹಿಂದುತ್ವದ ಆಧಾರದ ಮೇಲೆ ಪಕ್ಷ ಕಟ್ಟುವೆ ಎಂದು ತಿಳಿಸಿದರು. ಇದನ್ನೂ ಓದಿ: ಹಣೆಯಲ್ಲಿ ಬರೆದಿದ್ದರೆ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ, ಇಲ್ಲದಿದ್ದರೆ ಇಲ್ಲ: ಡಿ.ಕೆ.ಸುರೇಶ್

    ನರೇಂದ್ರ ಮೋದಿ ಜನರಿಂದ ಆದ ನಾಯಕ. ದೇಶದಲ್ಲಿ ಒಂದು ಸಂಚಲನ ಆಯ್ತು. ಮೋದಿಯವರ ನಂತರ ಯೋಗಿ ಆದಿತ್ಯನಾಥ್ ಪಿಎಂ ಆಗಬೇಕು ಎಂದು ಜನ ಬಯಸಿದ್ದಾರೆ. ಹಾಗೆಯೇ ರಾಜ್ಯದ ಜನರ ಆಶಾವಾದವಿದೆ. ಜನರಲ್ಲಿ ಯತ್ನಾಳ್ ಸಿಎಂ ಆಗಬೇಕು ಎನ್ನುವುದಿದೆ. ಇಲ್ಲಾವಾದರೆ ನಂದು ಜೆಸಿಬಿ ಪಾರ್ಟಿ ರೆಡಿ ಇದೆ. ಮುಂದಿನ ಚುನಾವಣೆವಣೆಯೊಳಗೆ ಹೈಕಮಾಂಡ್ ಕರೆಯಲಿ. ಕರೆಯದಿದ್ದರೆ ನಂದು ಜೆಸಿಪಿ ಪಾರ್ಟಿ ರೆಡಿ ಇದೆ ಎಂದು ಹೇಳಿದರು.

  • ಯತೀಂದ್ರ ಅಹಿಂದ ನಾಯಕತ್ವಕ್ಕೆ ಹೇಳಿದ್ದು, ಸಿಎಂ ಸ್ಥಾನಕ್ಕೆ ಅಲ್ಲ: ಸತೀಶ್ ಜಾರಕಿಹೊಳಿ

    ಯತೀಂದ್ರ ಅಹಿಂದ ನಾಯಕತ್ವಕ್ಕೆ ಹೇಳಿದ್ದು, ಸಿಎಂ ಸ್ಥಾನಕ್ಕೆ ಅಲ್ಲ: ಸತೀಶ್ ಜಾರಕಿಹೊಳಿ

    – ದಲಿತ ಸಿಎಂ ವಿಚಾರ; ಅವಕಾಶ ಬರುವವರೆಗೆ ಕಾಯಬೇಕು, ಈಗ ಅವಕಾಶ ಇಲ್ಲ

    ಬೆಂಗಳೂರು: ಸಿಎಂ ಸ್ಥಾನದ ವಿಚಾರವೇ ಬೇರೆ, ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹೇಳಿರೋದೇ ಬೇರೆ. ಸಿಎಂ ಸ್ಥಾನವಾಗಲೀ, ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆಯಾಗಲಿ ಹೇಳಿಲ್ಲ ಎಂದು ಯತೀಂದ್ರ ಹೇಳಿಕೆಯನ್ನ ಸಚಿವ ಸತೀಶ್ ಜಾರಕಿಹೊಳಿ (Satish Jarkiholi)  ಮತ್ತೆ ಸಮರ್ಥಿಸಿಕೊಂಡಿದ್ದಾರೆ.

    ಈ ವಿಚಾರವಾಗಿ ಬೆಂಗಳೂರಲ್ಲಿ (Bengaluru) ಮಾತನಾಡಿದ ಅವರು, ನಾನು 30 ವರ್ಷದಿಂದ ಅಹಿಂದ ಭಾಗ. ಜೆಡಿಎಸ್‌ನಲ್ಲಿ ಇದ್ದಾಗಲೂ ಅಹಿಂದ ಭಾಗವೇ, ಈಗಲೂ ಅಹಿಂದ ಭಾಗವೇ. ಪರಮೇಶ್ವರ್, ಮಹದೇವಪ್ಪ ಎಲ್ಲರೂ ಅಹಿಂದ ಭಾಗವೇ. ಯತೀಂದ್ರ ಎಲ್ಲಿಯೂ ಸಿಎಂ ಸ್ಥಾನವಾಗಲೀ. ಅಧ್ಯಕ್ಷ ಸ್ಥಾನದ ಬಗ್ಗೆಯಾಗಲಿ ಕೇಳಿಲ್ಲ ಎಂದಿದ್ದಾರೆ.

     ಸಿಎಂ ಸ್ಥಾನದ ವಿಚಾರವೇ ಬೇರೆ, ಯತೀಂದ್ರ ಹೇಳಿರೋದೇ ಬೇರೆ. ನಾವೇನೂ ಸಿಎಂ ಸ್ಥಾನ ಕೇಳಿಲ್ಲ. ಯಾರು ಯತೀಂದ್ರ ಹೇಳಿಕೆ ವಿರೋಧಿಸುತ್ತಿದ್ದಾರೋ, ಅವರು ತಪ್ಪು ತಿಳಿದುಕೊಂಡಿದ್ದಾರೆ. ಅಹಿಂದ ಒಕ್ಕೂಟ, ಅಹಿಂದ ಹೋರಾಟ ಮೊದಲಿನಿಂದಲೂ ಇದೆ ಎಂದಿದ್ದಾರೆ. ಇದನ್ನೂ ಓದಿ: ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ

    ಅಹಿಂದ ನಾಯಕತ್ವಕ್ಕೂ, ಸಿಎಂ ಗಾದಿಗೂ ಯಾವುದೇ ಸಂಬಂಧ ಇಲ್ಲ. ಯತೀಂದ್ರ ಅವರು ಅಹಿಂದ ನಾಯಕತ್ವ ಮುನ್ನಡೆಸುತ್ತಾರೆ ಎಂಬ ಅರ್ಥದಲ್ಲಿ ಹೇಳಿದ್ದಾರೆ. ನೋಡೋಣ ಸನ್ನಿವೇಶ, ಸಂದರ್ಭ ನೋಡಿ ನಿರ್ಧಾರ ಮಾಡುತ್ತೇನೆ. ಸಿಎಂ ಗಾದಿಗೆ ನಾನೇನು ಈಗ ಕೇಳಿಲ್ಲ. ಮುಂದೆ ನೋಡೋಣ ಎಂದು ಹೇಳಿದ್ದಾರೆ.

    ಅವಕಾಶಕ್ಕಾಗಿ ಕಾಯಬೇಕು
    ದಲಿತ ಸಿಎಂ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಅವಕಾಶ ಬರುವವರೆಗೂ ಕಾಯಬೇಕು. ಈಗಂತೂ ಅವಕಾಶ ಇಲ್ಲ. ಸಮಯಕ್ಕಾಗಿ ಕಾಯಬೇಕು. ಅವಕಾಶ ಸೃಷ್ಟಿ ಆಗಬೇಕು ಅಲ್ಲಿ ತನಕ ಕಾಯಬೇಕು ಎಂದಿದ್ದಾರೆ. ಇದನ್ನೂ ಓದಿ: ಡಿಕೆಶಿ, JDS ಟ್ರಂಕ್ ವಾರ್ – ಹೆಚ್‌ಡಿಕೆ ಸಾಧನೆ ಪಟ್ಟಿ ಬಿಡುಗಡೆ ಮಾಡಿ ಟಾಂಗ್

    ನವೆಂಬರ್ ಕ್ರಾಂತಿ ಎಲ್ಲ ಆಗಲ್ಲ. ಇನ್ನೊಂದು 20 ರಿಂದ 30 ದಿನ ಇದೆ ಅಷ್ಟೇ. ಏನಾಗುತ್ತೆ ನೋಡೋಣ. ಕ್ರಾಂತಿ ಆಗೋದಕ್ಕೆ ಹೈಕಮಾಂಡ್ ಬಿಡಬೇಕಲ್ವ? ಹೈಕಮಾಂಡ್ ಹಾಗೆಲ್ಲ ಮಾಡೋಕೆ ಬಿಡಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಏಕನಾಥ್ ಶಿಂಧೆ ಒಬ್ಬರೇ, ಅಜಿತ್ ಪವಾರ್ ಕೂಡ ಒಬ್ಬರೇ, ಇನ್ನೊಬ್ಬ ಏಕನಾಥ್ ಶಿಂಧೆ, ಪವಾರ್ ಹುಟ್ಟಿಕೊಳ್ಳಲು ಸಾಧ್ಯವಿಲ್ಲ ಎಂದು ಡಿಕೆಶಿ ಬಣಕ್ಕೆ ಮಾರ್ಮಿಕವಾಗಿ ಟಕ್ಕರ್ ಕೊಟ್ಟಿದ್ದಾರೆ.

    2028ರ ಚುನಾವಣೆ ಆಗಬೇಕು. ಅವತ್ತು ಸ್ಥಿತಿಗತಿ ನೋಡಿಕೊಂಡು ನಿರ್ಧಾರ ಮಾಡೋಣ. ಪಕ್ಷದ ಹೈಕಮಾಂಡ್ ಯಾರನ್ನು ಏನು ಮಾಡಬೇಕು ನಿರ್ಧಾರ ಮಾಡ್ತಾರೆ. ಪಕ್ಷಕ್ಕೂ 70 ವರ್ಷದ ಅನುಭವ ಇದೆ. ಅವರು ಎಲ್ಲವನ್ನೂ ನಿರ್ಧಾರ ಮಾಡ್ತಾರೆ. ಡಿಕೆಶಿ ಡೆಡ್‌ಲೈನ್ ಬಗ್ಗೆ ನನಗೆ ಮಾಹಿತಿ ಇಲ್ಲ. ಪಾರ್ಟಿ ಕಚೇರಿಗಳನ್ನ ಎಲ್ಲಾ ಕಡೆ ಮಾಡಬೇಕು ಅಂತ ಅವರ ಕನಸಿದೆ ಎಂದಿದ್ದಾರೆ.

  • ಯತೀಂದ್ರ ಹೇಳಿಕೆ ನಾಯಕತ್ವ ಕುರಿತಲ್ಲ, ಸತೀಶ್ ಜಾರಕಿಹೊಳಿಗಿರುವ ಸೈದ್ಧಾಂತಿಕ ಬದ್ಧತೆ ಹಿನ್ನೆಲೆಯಲ್ಲಿ ಮಾತಾಡಿದ್ದಾರೆ – ಪರಮೇಶ್ವರ್

    ಯತೀಂದ್ರ ಹೇಳಿಕೆ ನಾಯಕತ್ವ ಕುರಿತಲ್ಲ, ಸತೀಶ್ ಜಾರಕಿಹೊಳಿಗಿರುವ ಸೈದ್ಧಾಂತಿಕ ಬದ್ಧತೆ ಹಿನ್ನೆಲೆಯಲ್ಲಿ ಮಾತಾಡಿದ್ದಾರೆ – ಪರಮೇಶ್ವರ್

    ಬೆಂಗಳೂರು: ಯತೀಂದ್ರ ಹೇಳಿಕೆ ನಾಯಕತ್ವ ಕುರಿತಲ್ಲ, ಸತೀಶ್ ಜಾರಕಿಹೊಳಿಗಿರುವ (Satish Jarkiholi) ಸೈದ್ಧಾಂತಿಕ ಬದ್ಧತೆ ಹಿನ್ನೆಲೆಯಲ್ಲಿ ಮಾತಾಡಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ (G Parameshwar) ತಿಳಿಸಿದ್ದಾರೆ.

    ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಂದಿನ ನಾಯಕತ್ವ ದೃಷ್ಟಿಯಲ್ಲಿಟ್ಟುಕೊಂಡು ಸತೀಶ್ ಜಾರಕಿಹೊಳಿ ಅವರ ಹೆಸರನ್ನು ಯತೀಂದ್ರ ಹೇಳಿಲ್ಲ. ಸತೀಶ್ ಜಾರಕಿಹೊಳಿ ಸಿದ್ದರಾಮಯ್ಯನವರ ಉತ್ತರಾಧಿಕಾರಿ ಅಂತ ಯತ್ರೀಂದ್ರ ಹೇಳಿಲ್ಲ. ಸೈದ್ಧಾಂತಿಕ ಹಿನ್ನೆಲೆಯಲ್ಲಿ ಹೇಳಿದ್ದಾರೆ. ಸೈದ್ಧಾಂತಿಕವಾಗಿ ಸಿದ್ದರಾಮಯ್ಯ ದಾರಿಯಲ್ಲೇ ಸತೀಶ್ ಹೋಗ್ತಾರೆ ಅಂತ ಹೇಳಿದ್ದಾರೆ. ಅಹಿಂದ ಪ್ರಾರಂಭವಾದಾಗ ಸತೀಶ್ ಜಾರಕಿಹೊಳಿ ಬಹಳ ಮುಖ್ಯ ಪಾತ್ರ ವಹಿಸಿದ್ದರು. ಆ ಹಿನ್ನೆಲೆಯಲ್ಲಿ ಹೇಳಿದ್ದಾರೆ ಅದರಲ್ಲಿ ತಪ್ಪೇನಿದೆ? ಲೀಡರ್‌ಶಿಪ್ ದೃಷ್ಟಿಯಿಂದ ಮಾತನಾಡಿಲ್ಲ. ಅವರು ಪಕ್ಷದ ಬದ್ಧತೆ, ಸಮಾಜದ ಬದ್ಧತೆ ಬಗ್ಗೆ ಮಾತನಾಡಿದ್ದಾರೆ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ.ಇದನ್ನೂ ಓದಿ: ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆ ಸದ್ಯಕ್ಕೆ ಇಲ್ಲ: ಹೆಚ್‌ಡಿಕೆ

    ಇನ್ನು ಸಿಎಂ ಬದಲಾವಣೆ ಮಾಡಿದರೆ ನೀವೂ ರೇಸ್‌ನಲ್ಲಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಮಲ್ಲಿ ತೀರ್ಮಾನ ಮಾಡುವುದು ಹೈಕಮಾಂಡ್. ಆ ಸಂದರ್ಭ ಬಂದಾಗ ಸಿಎಲ್‌ಪಿ ಕರೀತಾರೆ. ಎಂಎಲ್‌ಎಗಳ ಅಭಿಪ್ರಾಯ ತೆಗೆದುಕೊಳ್ಳುತ್ತಾರೆ. ಹೈಕಮಾಂಡ್‌ನಿಂದ ಬರುವ ವೀಕ್ಷಕರು ಹೈಕಮಾಂಡ್‌ಗೆ ಮಾಹಿತಿ ಕೊಡ್ತಾರೆ. ತೆಗೆದುಕೊಂಡ ತೀರ್ಮಾನದ ಬಗ್ಗೆ ಆ ಸಂದರ್ಭದಲ್ಲಿ ಅನೌನ್ಸ್ ಮಾಡ್ತಾರೆ. ಇದು ನಮ್ಮಲ್ಲಿರುವ ಪದ್ಧತಿ ಅದನ್ನ ಶಾರ್ಟ್ಕಟ್ ಮಾಡೋದು ನನಗೆ ಗೊತ್ತಿಲ್ಲ ಎಂದು ಹೇಳಿದ್ದಾರೆ.

  • ನಮ್ದೇನಿದ್ದರೂ 2028ಕ್ಕೆ ಸಿಎಂ ಕ್ಲೈಮ್‌, ಯತೀಂದ್ರ ಹೇಳಿಕೆ ಅದು ವೈಯಕ್ತಿಕ: ಸತೀಶ್‌ ಜಾರಕಿಹೊಳಿ

    ನಮ್ದೇನಿದ್ದರೂ 2028ಕ್ಕೆ ಸಿಎಂ ಕ್ಲೈಮ್‌, ಯತೀಂದ್ರ ಹೇಳಿಕೆ ಅದು ವೈಯಕ್ತಿಕ: ಸತೀಶ್‌ ಜಾರಕಿಹೊಳಿ

    ಬೆಳಗಾವಿ: ನಮ್ಮದು ಏನೇ ಇದ್ದರೂ 2028ಕ್ಕೆ ಸಿಎಂ ಸ್ಥಾನದ ಕ್ಲೈಮ್‌ ಮಾಡುತ್ತೇವೆ. ಯತೀಂದ್ರ ಹೇಳಿಕೆ ಅದು ಅವರ ವೈಯಕ್ತಿಕ ಅಭಿಪ್ರಾಯ ಎಂದು ಲೋಕೋಪಯೋಗಿ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ (Satish Jarkiholi) ಹೇಳಿದ್ದಾರೆ.

    ಸಿದ್ದರಾಮಯ್ಯ ಪುತ್ರ ಯತೀಂದ್ರ ಹೇಳಿಕೆಗೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಎಲ್ಲರನ್ನು ಜೊತೆಗೆ ಕರೆದುಕೊಂಡು ಹೋಗುವ ಕೆಲಸ ಮಾಡುತ್ತೇವೆ. ಏನೇ ಆಗಲಿ ಅದನ್ನು ಪಕ್ಷ ನಿರ್ಧಾರ ಮಾಡಲಿದೆ ಎಂದು ತಿಳಿಸಿದರು.  ಇದನ್ನೂ ಓದಿ:  ಯಾವುದೇ ಕ್ಷಣದಲ್ಲಿ ಹೇಮಾವತಿ ಡ್ಯಾಂನಿಂದ ನೀರು ಹೊರಕ್ಕೆ – ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚನೆ

     

    ಯತಿಂದ್ರ (Yathindra Siddaramaiah) ಅವರು ಅವರ ವೈಯಕ್ತಿಕ ಹೇಳಿಕೆ ನೀಡಿದ್ದಾರೆ. ಅಂತಿಮವಾಗಿ ಯಾರು ನಾಯಕ ಎನ್ನುವುದನ್ನು ಪಕ್ಷದ ಶಾಸಕರು ನಿರ್ಧಾರ ಮಾಡುತ್ತಾರೆ. ಅಹಿಂದ ನಾಯಕತ್ವ ಇಲ್ಲದೇ ಪಕ್ಷ ಸಂಘಟನೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು. ಇದನ್ನೂ ಓದಿ:  ಇಂದಿನಿಂದ ಸರ್ಕಾರಿ ಶಾಲೆಗಳು ಪುನಾರಂಭ

    ಎಲ್ಲವನ್ನೂ ಕಾಕತಿಯಲ್ಲಿ ನಿಂತು ನಿರ್ಧಾರ ಮಾಡಲು ಸಾಧ್ಯವಿಲ್ಲ. ಡಿಸೆಂಬರ್‌ ಕ್ರಾಂತಿಯ ಬಗ್ಗೆ ನಮಗೆ ಗೊತ್ತೇ ಇಲ್ಲ ಎಂದು ತಿಳಿಸಿದರು.  ಇದನ್ನೂ ಓದಿ:  ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿಗೆ ನಾಯಕತ್ವ- ಡಿಕೆಶಿಗೆ ಯತೀಂದ್ರ ಚೆಕ್‌ಮೇಟ್

    ಸಿದ್ದರಾಮಯ್ಯನವರ ನಂತರ ಪಕ್ಷವನ್ನು ಮುನ್ನಡೆಸುವ ವಿಚಾರಕ್ಕೆ, ಎಲ್ಲವನ್ನೂ ಕಾದು ನೋಡೋಣ ಎಂದು ಜಾರಕಿಹೊಳಿ ಉತ್ತರಿಸಿದರು.

  • ಸತೀಶ್ ಜಾರಕಿಹೊಳಿ ಸಿಎಂ ಉತ್ತರಾಧಿಕಾರಿನಾ? – ಪರ್ಯಾಯ ನಾಯಕತ್ವದ ದಾಳ ಉರುಳಿಸಿದ ಯತೀಂದ್ರ

    ಸತೀಶ್ ಜಾರಕಿಹೊಳಿ ಸಿಎಂ ಉತ್ತರಾಧಿಕಾರಿನಾ? – ಪರ್ಯಾಯ ನಾಯಕತ್ವದ ದಾಳ ಉರುಳಿಸಿದ ಯತೀಂದ್ರ

    – ಇತ್ತ ವ್ಯಕ್ತಿಪೂಜೆ ಬೇಡವೆಂದ ಡಿಕೆಶಿ

    ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಪವರ್ ಶೇರಿಂಗ್ ಸಂಘರ್ಷ ಮಧ್ಯೆ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ಹೊಸ ಲೆಕ್ಕಾಚಾರಕ್ಕೆ ನಾಂದಿ ಹಾಡುವ ಹೇಳಿಕೆ ಕೊಟ್ಟಿದ್ದಾರೆ. ಸತೀಶ್ ಜಾರಕಿಹೊಳಿ (Satish Jarkiholi) ಸಿದ್ದರಾಮಯ್ಯನವರ ಸಮರ್ಥ ಉತ್ತರಾಧಿಕಾರಿ ಎಂಬರ್ಥದಲ್ಲಿ ಮಾತನಾಡಿದ್ದಾರೆ.

    ಸಿಎಂ ಸಿದ್ದರಾಮಯ್ಯ ನಂತರ ಸತೀಶ್ ಜಾರಕಿಹೊಳಿ ಪಕ್ಷವನ್ನ ಮುನ್ನಡೆಸ್ತಾರೆ ಅಂತ ಹೇಳುವ ಮೂಲಕ ದೀಪಾವಳಿ ಹಬ್ಬದಂದೇ ರಾಜಕೀಯ ಸಂಚಲನ ಸೃಷ್ಟಿಸಿದ್ದಾರೆ. ಪವರ್ ಶೇರಿಂಗ್ ಗದ್ದಲದ ಸಂದರ್ಭಗಳಲ್ಲೇ ಪರ್ಯಾಯ ನಾಯಕತ್ವದ ದಾಳ ಉರುಳಿಸಿದ ಯತೀಂದ್ರ, ಇದ್ದಕ್ಕಿದ್ದಂತೆ ರ‍್ಯಾಯ ನಾಯಕ ಪ್ರಸ್ತಾಪಿಸುವ ಮೂಲಕ ಕಾಂಗ್ರೆಸ್‌ನಲ್ಲಿ (Congress) ಸತೀಶ್ ಜಾರಕಿಹೊಳಿಯ ನಾಯಕತ್ವವೂ ಇದೆ ಎಂಬ ಸಂದೇಶ ರವಾನಿಸಿದ್ದಾರೆ.

    ಬೆಳಗಾವಿ ಜಿಲ್ಲೆ ರಾಯಭಾಗದ ಕಾರ್ಯಕ್ರಮವೊಂದರಲ್ಲಿ ಯತೀಂದ್ರ, ನಮ್ಮ ತಂದೆಯವರು ರಾಜಕೀಯದ ಕೊನೆಗಾಲದಲ್ಲಿದ್ದಾರೆ. ಇಂಥ ಸಂದರ್ಭದಲ್ಲಿ ನಮಗೆ ಮಾರ್ಗದರ್ಶಕರ ಅಗತ್ಯತೆ ಇದೆ. ಸತೀಶ್ ಜಾರಕಿಹೊಳಿ ಮಾದರಿಯಾಗಿ ನಮ್ಮನ್ನು ಮುನ್ನಡೆಸುತ್ತಾರೆ ಎಂದು ಹೇಳಿದ್ದಾರೆ. ಈ ಮಾತು ಸಂಚಲನ ಸೃಷ್ಟಿಸುತ್ತಿದ್ದಂತೆಯೇ ಸ್ಪಷ್ಟನೆ ಕೊಟ್ಟ ಯತೀಂದ್ರ, ರಾಜಕೀಯ ಉತ್ತರಾಧಿಕಾರಿ ಬಗ್ಗೆ ಹೇಳಿಲ್ಲ, ಸೈದ್ಧಾಂತಿಕ ಉತ್ತರಾಧಿಕಾರಿ ಬಗ್ಗೆ ಅಷ್ಟೆ ಹೇಳಿದ್ದೇನೆ ಎಂದಿದ್ದಾರೆ.

    ಇತ್ತ ಸಿಎಂ ಆಗೋ ಕನಸು ಹೊತ್ತು ಟೆಂಪಲ್ ರನ್ ಮಾಡ್ತಿರೋ ಡಿಸಿಎಂ ಡಿಕೆಶಿಗೂ ಇದು ಮಾರ್ಮಿಕ ಸಂದೇಶವಾಗೋದು ಸುಳ್ಳಲ್ಲ. ಇವತ್ತು ಬೆಳಗ್ಗೆಯಷ್ಟೇ ಡಿಕೆಶಿ ಮಂತ್ರಾಲಯದಲ್ಲಿ ಗುರುರಾಯರ ದರ್ಶನ ಪಡೆದು ಸಂಕಲ್ಪ ಮಾಡಿದ್ರು. ವ್ಯಕ್ತಿ ಪೂಜೆ ಬೇಡ ಅಂದಿರೋ ಡಿಕೆಶಿ, ನಾವು ಒಟ್ಟಿಗೆ ಕೆಲಸ ಮಾಡಿಕೊಂಡು ಹೋಗ್ತೀವಿ ಎಂದಿದ್ದಾರೆ.

    ಇದು ಒಂದ್ಕಡೆಯಾದ್ರೆ ಸಿದ್ದರಾಮಯ್ಯ ಬಳಿಕ ಸಚಿವ ಪ್ರಿಯಾಂಕ್ ಖರ್ಗೆ ಅಂತಾ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ವೈರಲ್ ಆಗ್ತಿದೆ. ಸಿದ್ದರಾಮಯ್ಯ ನಂತರ ಯಾರು ಅಹಿಂದ ನಾಯಕರು ಯಾರು? ಉತ್ತರ ಈಗ ಸಿಕ್ಕಿದೆ. ಅದುವೆ ಏಕೈಕ ನಾಯಕ ಪ್ರಿಯಾಂಕ್ ಖರ್ಗೆ ಅಂತಾ ಪೋಸ್ಟ್ ಹಾಕಲಾಗಿದೆ.

  • ಬೆಳಗಾವಿ | ಸಹಕಾರ ಕ್ಷೇತ್ರಕ್ಕೂ ಕಾಲಿಟ್ಟ ರೆಸಾರ್ಟ್ ರಾಜಕೀಯ

    ಬೆಳಗಾವಿ | ಸಹಕಾರ ಕ್ಷೇತ್ರಕ್ಕೂ ಕಾಲಿಟ್ಟ ರೆಸಾರ್ಟ್ ರಾಜಕೀಯ

    ಬೆಳಗಾವಿ: ಸಹಕಾರ ಕ್ಷೇತ್ರಕ್ಕೂ ಸಹ ರೆಸಾರ್ಟ್ ರಾಜಕೀಯ ಕಾಲಿಟ್ಟಿದೆ. ಇಷ್ಟು ದಿನಗಳ ಕಾಲ ಶಾಸಕರು ರಾಜಕಾರಣದಲ್ಲಿ ರೆಸಾರ್ಟ್ ರಾಜಕೀಯ (Resort Politics) ಮಾಡ್ತಿದ್ರು. ಆದರೆ ಬೆಳಗಾವಿ (Belagavi) ಡಿಸಿಸಿ ಬ್ಯಾಂಕ್ ವಿಚಾರದಲ್ಲಿ ಸದ್ಯ ಮತದಾನದ ಹಕ್ಕು ಪಡೆದ ಪಿಕೆಪಿಎಸ್ ನಿರ್ದೇಶಕರಿಗೆ ಟೂರ್ ಭ್ಯಾಗ್ಯ ಒದಗಿ ಬಂದಿದೆ.

    ಗೋವಾ, ಮಹಾರಾಷ್ಟ್ರ, ಉತ್ತರ ಭಾರತದ ಧಾರ್ಮಿಕ ಕ್ಷೇತ್ರಗಳಿಗೆ ಪಿಕೆಪಿಎಸ್ ಸದಸ್ಯರು ಟೂರ್ ಹೊರಟಿದ್ದಾರೆ. ಡಿಸಿಸಿ ಬ್ಯಾಂಕ್‌ನ 16 ಸ್ಥಾನಗಳ ಪೈಕಿ 9 ನಿರ್ದೇಶಕರು ಈಗಾಗಲೇ ಅವಿರೋಧ ಆಯ್ಕೆಯಾಗಿದ್ದು, ಇನ್ನೂ 7 ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿದೆ. ನಿಪ್ಪಾಣಿ, ಹುಕ್ಕೇರಿ, ಅಥಣಿ, ರಾಯಭಾಗ, ರಾಮದುರ್ಗ, ಕಿತ್ತೂರು, ಬೈಲಹೊಂಗಲದಲ್ಲಿ ಚುನಾವಣೆ ನಡೆಯಲಿದೆ. ಇದನ್ನೂ ಓದಿ: ಚಿತ್ರದುರ್ಗದಲ್ಲಿ ಭ್ರಷ್ಟ ಅಧಿಕಾರಿಗೆ ಬೆಳ್ಳಂಬೆಳಗ್ಗೆ ಶಾಕ್; ಕೃಷಿ ಇಲಾಖೆ ಎಡಿ ಮನೆ ಮೇಲೆ ಲೋಕಾಯುಕ್ತ ದಾಳಿ

    ಜಾರಕಿಹೊಳಿ ಹಾಗೂ ಕತ್ತಿ ಸವದಿ ಬಣಗಳ ಮಧ್ಯೆ ಡಿಸಿಸಿ ಬ್ಯಾಂಕ್ ತೆಕ್ಕೆಗೆ ಪಡೆಯಲು ಜಿದ್ದಾಜಿದ್ದಿಯೂ ನಡೆದಿದೆ. ಅಡ್ಡ ಮತದಾನ, ಮತದಾರರ ಸೆಳೆಯುವ ಭೀತಿಯ ಕಾರಣ ಮತದಾರರನ್ನು ಬೇರೆಡೆ ಸ್ಥಳಾಂತರ ಮಾಡಲಾಗಿದೆ. ಅಕ್ಟೋಬರ್ 19ಕ್ಕೆ ನಡೆಯುವ ಚುನಾವಣೆಗೆ ಮತದಾನ ಮಾಡಲು ನೇರವಾಗಿ ಮತದಾರರು ಬರಲಿದ್ದಾರೆ. ಹೈಟೆಕ್ ಟಿಟಿಯಲ್ಲಿ ಬೇರೆ ಬೇರೆ ರಾಜ್ಯಗಳ ರೆಸಾರ್ಟ್ಗಳಿಗೆ ಮತದಾರರನ್ನು ಶಿಫ್ಟ್ ಮಾಡಲಾಗಿದೆ. ಮತದಾರರು ಭದ್ರತಾ ಸಿಬ್ಬಂದಿ ಕಣ್ಗಾವಲಿನಲ್ಲಿಯೇ ಇರಲಿದ್ದು, ರೆಸಾರ್ಟ್ಗೆ ತೆರಳುವ ಮತದಾರರಿಗೆ ಮೊಬೈಲ್ ಬಳಕೆಗೆ ಅವಕಾಶ ನೀಡಿಲ್ಲ ಎಂದು ತಿಳಿದು ಬಂದಿದೆ.

  • DCC Bank Election| ಮೇಲೆ ಕುಳಿತವನು ಆಟ ಆಡಿಸ್ತಾನೆ, ನಾವೆಲ್ಲ ಗೊಂಬೆಗಳು: ಲಕ್ಷ್ಮಣ ಸವದಿ

    DCC Bank Election| ಮೇಲೆ ಕುಳಿತವನು ಆಟ ಆಡಿಸ್ತಾನೆ, ನಾವೆಲ್ಲ ಗೊಂಬೆಗಳು: ಲಕ್ಷ್ಮಣ ಸವದಿ

    – ರೋಚಕತೆ ಪಡೆದ ಡಿಸಿಸಿ ಬ್ಯಾಂಕ್‌ ಚುನಾವಣೆ
    – ನಾಮಪತ್ರ ಸಲ್ಲಿಕೆ ಮಾಡಿದ ಸವದಿ, ರಾಜು ಕಾಗೆ
    – ಮೊದಲ ಬಾರಿಗೆ ಡಿಸಿಸಿ ಚುನಾವಣೆಗೆ ಕಾಗೆ ಎಂಟ್ರಿ

    ಬೆಳಗಾವಿ: ನಮ್ಮ ಸಮಿತಿ ಸದಸ್ಯರ ಸಂಖ್ಯೆ ಒಂಬತ್ತಾಗುತ್ತೋ? ಹನ್ನೊಂದಾಗುತ್ತೋ? ಹದಿನೈದಾಗುತ್ತೋ ನೋಡೋಣ. ಮೇಲೆ ಕುಳಿತವನು ಆಟ ಆಡಿಸ್ತಾನೆ. ನಾವೆಲ್ಲ ಗೊಂಬೆಗಳು, ಹೇಳಿದಂತೆ ಆಟ ಆಡುತ್ತೇವೆ ಎಂದು ಮಾಜಿ ಡಿಸಿಎಂ, ಅಥಣಿ ಕಾಂಗ್ರೆಸ್‌ ಶಾಸಕ ಲಕ್ಷ್ಮಣ ಸವದಿ (Laxman Savadi) ಹೇಳಿದ್ದಾರೆ.

    ಡಿಸಿಸಿ ಬ್ಯಾಂಕ್ ಚುನಾವಣೆ (DCC Bank Election) ದಿನದಿಂದ ದಿನಕ್ಕೂ ರೋಚಕತೆ ಪಡೆಯುತ್ತಿದೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಅಖಾಡದಲ್ಲಿ ಈಗಾಗಲೇ ಕತ್ತಿ ಜಾರಕಿಹೊಳಿ, ಹಾಗೂ ಹುಕ್ಕೇರಿ, ಜೊಲ್ಲೆ ಮನೆತನಗಳಿದ್ದು ಈಗ ಶಾಸಕರಾದ ಲಕ್ಷ್ಮಣ ಸವದಿ, ರಾಜು ಕಾಗೆ (Raju Kage) ಶಕ್ತಿ ಪ್ರದರ್ಶನ ಮಾಡಿದ್ದಾರೆ.

    ಅಥಣಿ ತಾಲೂಕಿನಿಂದ ನಿರ್ದೇಶಕ ಸ್ಥಾನಕ್ಕೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಕಾಗವಾಡ ತಾಲೂಕಿನಿಂದ ನಿರ್ದೇಶಕ ಸ್ಥಾನಕ್ಕೆ ‌ರಾಜು ಕಾಗೆ ಸ್ಪರ್ಧೆ ಮಾಡುತ್ತಿದ್ದಾರೆ. ಇಂದು ಇಬ್ಬರೂ ಏಕಾಕಾಲಕ್ಕೆ ಆಗಮಿಸಿ ಬೃಹತ್ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದನ್ನೂ ಓದಿ:  ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ – ವಾಲಿಬಾಲ್‌ ಕೋಚ್‌ ವಿರುದ್ಧ ಲೈಂಗಿಕ ಕಿರುಕುಳ ಆರೋಪ

    ನಾವೂ ಯಾರ ಬಣದಲ್ಲೂ ಇಲ್ಲ ಎನ್ನುವ ಮೂಲಕ ಜಾರಕಿಹೊಳಿ ಸಹೋದರರಿಗೆ (Jarkiholi Brothers) ಶಾಸಕ ಕಾಗೆ ಶಾಕ್ ಕೊಟ್ಟಿದ್ದಾರೆ. ಮೊದಲ ಬಾರಿಗೆ ಡಿಸಿಸಿ ಬ್ಯಾಂಕ್ ಅಖಾಡಕ್ಕೆ ಶಾಸಕ ರಾಜು ಕಾಗೆ ಎಂಟ್ರಿಯಾಗುತ್ತಿದ್ದು ರಾಜು ಕಾಗೆಯವರನ್ನು ಗೆಲ್ಲಿಸುವ ಹೊಣೆ ಅಥಣಿ ಶಾಸಕ ಲಕ್ಷ್ಮಣ ಸವದಿ ಹೊತ್ತಿದ್ದಾರೆ. ಕಾಗೆ ವಿರುದ್ಧ ಮಾಜಿ ಸಚಿವ ಶ್ರೀಮಂತ ಪಾಟೀಲ ಪುತ್ರ ಕಣಕ್ಕಿಳಿದಿದ್ದು ಲಕ್ಷ್ಮಣ ಸವದಿ ವಿರುದ್ಧ ಮಾಜಿ ಶಾಸಕ ಮಹೇಶ ಕುಮಟಳ್ಳಿ ಸ್ಪರ್ಧೆ ಮಾಡುತ್ತಿದ್ದಾರೆ.

    ಈ ವೇಳೆ ಮಾತನಾಡಿದ ಲಕ್ಷ್ಮಣ ಸವದಿ, ನಾನು ಹಾಗೂ ರಾಜು ಕಾಗೆ ಒಂದೇ ಸಮಿತಿಯಲ್ಲಿದ್ದು ನಮ್ಮ ಸಮಿತಿಗೆ ಬರುವ ಎಲ್ಲರಿಗೂ ಸ್ವಾಗತ ಮಾಡುತ್ತೇವೆ. ಹೋಗುವವರಿಗೂ ಧನ್ಯವಾದ ಹೇಳಿ ಕಳಿಸುತ್ತೇವೆ ಎಂದರು. ಇದನ್ನೂ ಓದಿ: ಕುಕ್ಕರ್ ಬ್ರ್ಯಾಂಡ್ ಪ್ರೆಸ್ಟೀಜ್ ಸಂಸ್ಥಾಪಕ ಟಿಟಿ ಜಗನ್ನಾಥನ್ ನಿಧನ

    ನಮ್ಮ ಜೊತೆ ಯಾರೂ ಇಲ್ಲ ಎನ್ನುತ್ತೀರಿ. ಆದರೆ ಬಣ ಮಾಡುತ್ತಿರುವುದು ಯಾಕೆ ಎಂಬ ಪ್ರಶ್ನೆಗೆ, ಸಸಿ ನೆಡುವ ವೇಳೆ ಒಂದೇ ಇರುತ್ತೆ. ಬಳಿಕ ಎಲೆ, ಕಾಯಿ, ಹೂವು ಎಲ್ಲವೂ ಬರುತ್ತದೆ ಎನ್ನುವ ಮೂಲಕ ಮಾರ್ಮಿಕವಾಗಿ ತಮ್ಮ ಗುಂಪಿನ ಸದಸ್ಯರ ಸಂಖ್ಯೆ ಹೆಚ್ಚಾಗಲಿದೆ ಎಂಬ ಸುಳಿವು ನೀಡಿದರು.

  • ಸಂಪುಟ ಪುನರ್‌ಚನೆ ವದಂತಿ ಬೆನ್ನಲ್ಲೇ ಮೂವರು ಸಚಿವರಿಂದ ಬ್ರೇಕ್‌ಫಾಸ್ಟ್‌ ಮೀಟಿಂಗ್‌

    ಸಂಪುಟ ಪುನರ್‌ಚನೆ ವದಂತಿ ಬೆನ್ನಲ್ಲೇ ಮೂವರು ಸಚಿವರಿಂದ ಬ್ರೇಕ್‌ಫಾಸ್ಟ್‌ ಮೀಟಿಂಗ್‌

    ಬೆಂಗಳೂರು: ಸಚಿವ ಸಂಪುಟ ಪುನರ್‌ಚನೆ (Cabinet Reshuffle) ವದಂತಿ ಬೆನ್ನಲ್ಲೇ ಮೂವರು ಸಚಿವರು ಬ್ರೇಕ್‌ಫಾಸ್ಟ್‌ ಮೀಟಿಂಗ್‌ (Breakfast Meeting) ಮಾಡಿದ್ದಾರೆ.

    ಸಚಿವರಾದ ಪರಮೇಶ್ವರ್, ಸತೀಶ್ ಜಾರಕಿಹೊಳಿ ಮಹದೇವಪ್ಪನವರು ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಸಭೆ ನಡೆಸಿದ್ದಾರೆ. ಸಿಎಂ ಸಿದ್ದರಾಮಯ್ಯ (CM Siddaramaiah) ಸಚಿವರಿಗೆ ಡಿನ್ನರ್‌ ಸಭೆ ನಡೆಸುವ ಮೊದಲೇ ಮೂವರು ಸಭೆ ನಡೆಸಿದ್ದು ಮಹತ್ವ ಪಡೆದಿದೆ.

     

    ಸಿಎಂ ಸಿದ್ದರಾಮಯ್ಯ ಅ.13ರ ರಾತ್ರಿ ಸಚಿವರಿಗೆ ಔತಣಕೂಟ ಆಯೋಜನೆ ಮಾಡಿದ್ದಾರೆ. ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ನಡೆಯಲಿರುವ ಡಿನ್ನರ್ ಸಭೆಗೆ ಸಚಿವರನ್ನ ಊಟಕ್ಕೆ ಆಹ್ವಾನಿದ್ದಾರೆ. ಡಿನ್ನರ್ ಮೀಟಿಂಗ್ ನೆಪದಲ್ಲಿ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ಸಾಧ್ಯತೆಯಿದೆ.

    ಈ ವರ್ಷದ ಆರಂಭದಲ್ಲಿ ಸಚಿವ ಸತೀಶ್‌ ಜಾರಕಿಹೊಳಿ ಅವರ ಬೆಂಗಳೂರು ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಡಿನ್ನರ್‌ ಮೀಟಿಂಗ್‌ ನಡೆದಿತ್ತು. ಸಿಎಂ ಆಪ್ತರ ಜೊತೆ ನಡೆಸಿದ ಮೀಟಿಂಗ್‌ ಕಾಂಗ್ರೆಸ್‌ ಪಾಳಯದಲ್ಲಿ ಸಂಚಲನ ಸೃಷ್ಟಿಸಿತ್ತು. ಆ ಸಂದರ್ಭದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿದೇಶ ಪ್ರವಾಸದಲ್ಲಿದ್ದರು.

  • ಸತೀಶ್‌ ಜಾರಕಿಹೊಳಿಗೆ ಮುಖಭಂಗ – 15ಕ್ಕೆ 15 ಕ್ಷೇತ್ರ ಗೆದ್ದ ಕತ್ತಿ ಬಣ

    ಸತೀಶ್‌ ಜಾರಕಿಹೊಳಿಗೆ ಮುಖಭಂಗ – 15ಕ್ಕೆ 15 ಕ್ಷೇತ್ರ ಗೆದ್ದ ಕತ್ತಿ ಬಣ

    ಬೆಳಗಾವಿ: ಹುಕ್ಕೇರಿ (Hukeeri)  ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದ ಚುನಾವಣೆಯಲ್ಲಿ ರಮೇಶ್ ಕತ್ತಿ (Ramesh Katti) ಬಣ ಇತಿಹಾಸ ನಿರ್ಮಿಸಿದೆ. ಒಟ್ಟು 15 ಜನ ನಿರ್ದೇಶಕರ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ 15ಕ್ಕೆ 15 ಕ್ಷೇತ್ರಗಳನ್ನ  ರಮೇಶ್ ಕತ್ತಿ ಬಣ ಗೆದ್ದು ಬೀಗಿದೆ.

    ಕಳೆದ ಒಂದು ತಿಂಗಳಿನಿಂದ ಹುಕ್ಕೇರಿಯಲ್ಲೇಬಿಟ್ಟಿದ್ದ ಸತೀಶ್ ಜಾರಕಿಹೊಳಿ (Satish Jarkiholi) ಕುಟುಂಬಕ್ಕೆ ಭಾರಿ ಮುಖಭಂಗವಾಗಿದೆ. ಹುಕ್ಕೇರಿ ಪಟ್ಟಣದ ಬಾಪೂಜಿ ಕಾಲೇಜು ಬಳಿ ಕತ್ತಿ ಬೆಂಬಲಿಗರು ಸತೀಶ್ ಜಾರಕಿಹೊಳಿ ಬೆಂಬಗಲಿಗರು ಪ್ರಯಾಣಿಸುತ್ತಿದ್ದ ಕಾರಿಗೆ ಕಲ್ಲು ಹೊಡೆದಿದ್ದಾರೆ ಎಂದ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ:  ಮತ್ತೆ ಹೊಸ ನಾಟಕ- ಕಪ್‌ ನೀಡಲು ಹೊಸ ಷರತ್ತು ಮುಂದಿಟ್ಟ ನಖ್ವಿ

     

    ಮಲಪ್ರಭಾ ಸಕ್ಕರೆ ಕಾರ್ಖಾನೆ ಚುನಾವಣೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ನೇತೃತ್ವದ ಪುನಶ್ಚೇತನ ಪ್ಯಾನೆಲ್ ಭರ್ಜರಿ ಗೆಲುವು ಸಾಧಿಸಿದೆ. ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಶಾಸಕ ಬಾಬಾ ಸಾಹೇಬ್ ಪಾಟೀಲ್, ವಿಠ್ಠಲ ಹಲಗೇಕರ್ ನೇತೃತ್ವದ ಪ್ಯಾನೆಲ್‌ನಿಂದ ಸ್ಫರ್ಧಿಸಿದ್ದ 12ಕ್ಕೂ ಹೆಚ್ಚು ಸದಸ್ಯರು ಗೆಲುವು ಸಾಧಿಸಿದ್ದಾರೆ. ಇದನ್ನೂ ಓದಿ: ಮದ್ದೂರು ಕಲ್ಲು ತೂರಾಟಕ್ಕೆ ಟ್ವಿಸ್ಟ್ ಟಾರ್ಗೆಟ್ ಮಾಡಿದ್ದೇ ಒಂದು, ಕಲ್ಲು ತೂರಿದ್ದೇ ಮತ್ತೊಂದು ಗಣೇಶನ ಮೇಲೆ

    ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿಯಲ್ಲಿ ಮತ ಎಣಿಕೆ ಕಾರ್ಯ ನಡೆಯಿತು. ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಕಾರ್ಖಾನೆಯ ಎದುರು ಸಂಭ್ರಮಾಚರಣೆ ಮುಗಿಲು ಮುಟ್ಟಿತ್ತು.

  • 30 ಕೋಟಿ ಮೌಲ್ಯದ ಇಟಲಿ ಮೇಡ್‌ ಅಗಸ್ಟ ಹೆಲಿಕಾಪ್ಟರ್‌ ಖರೀದಿಸಿದ ಸತೀಶ್‌ ಜಾರಕಿಹೊಳಿ

    30 ಕೋಟಿ ಮೌಲ್ಯದ ಇಟಲಿ ಮೇಡ್‌ ಅಗಸ್ಟ ಹೆಲಿಕಾಪ್ಟರ್‌ ಖರೀದಿಸಿದ ಸತೀಶ್‌ ಜಾರಕಿಹೊಳಿ

    ಬೆಂಗಳೂರು: ಇಟಲಿ ಮೇಡ್‌ ಅಗಸ್ಟ ಹೆಲಿಕಾಪ್ಟರ್‌ ಅನ್ನು ಸಚಿವ ಸತೀಶ್‌ ಜಾರಕಿಹೊಳಿ ಖರೀದಿಸಿದ್ದಾರೆ.

    ಈ ಹೆಲಿಕಾಪ್ಟರ್‌ನ ಬೆಲೆ 30 ಕೋಟಿ ರೂ.. ಅಗಸ್ಟ ಡಬಲ್ ಇಂಜಿನ್ ಹೆಲಿಕಾಪ್ಟರ್ ಆಗಿದೆ. ಸತೀಶ್‌ ಜಾರಕಿಹೊಳಿ ಅವರು ಈ ಹಿಂದೆ ಸಿಂಗಲ್ ಇಂಜಿನ್ ಹೆಲಿಕಾಪ್ಟರ್ ಹೊಂದಿದ್ದರು.

    ಹಳೆ ಹೆಲಿಕಾಪ್ಟರ್ ಮಾರಾಟ ಮಾಡಿ ಹೊಸ ಇಟಲಿ ಮೇಡ್ ಡಬಲ್ ಇಂಜಿನ್ ಅಗಸ್ಟ ಹೆಲಿಕಾಪ್ಟರ್ ಖರೀದಿ ಮಾಡಿದ್ದಾರೆ.