ತೆಲುಗು ನಟ ಸತ್ಯದೇವ್ (Satyadev) ಮತ್ತು ಡಾಲಿ (Daali Dhananjay) ನಟನೆಯ ‘ಜೀಬ್ರಾ’ (Zebra) ಸಿನಿಮಾ ಇದೇ ನ.22ರಂದು ರಿಲೀಸ್‌ಗೆ ಸಜ್ಜಾಗಿದೆ. ಪ್ರಚಾರ ಕಾರ್ಯದಲ್ಲಿ ಬ್ಯುಸಿಯಿರುವ ‘ಜೀಬ್ರಾ’ ಚಿತ್ರತಂಡ ಇದೀಗ ಬೆಂಗಳೂರಿನ ಶಿವಣ್ಣ ನಿವಾಸಕ್ಕೆ ಭೇಟಿ ಕೊಟ್ಟಿದೆ. ಶಿವಣ್ಣರನ್ನು ನಟ ಸತ್ಯದೇವ್ ಭೇಟಿಯಾಗಿದ್ದಾರೆ. ಇದನ್ನೂ ಓದಿ:ಗುಲಾಬಿ ಹಿಡಿದು ಪೋಸ್ ಕೊಟ್ಟ ‘ಸಿಂಗಾರ ಸಿರಿ’ ಸಪ್ತಮಿ
ಇಂದು (ನ.19) ಸಂಜೆ ಬೆಂಗಳೂರಿನಲ್ಲಿ ‘ಜೀಬ್ರಾ’ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮವನ್ನು ಚಿತ್ರತಂಡ ಆಯೋಜಿಸಿದೆ. ಹಾಗಾಗಿ ಇಡೀ ಟೀಮ್ ಬೆಂಗಳೂರಿಗೆ ಆಗಮಿಸಿದೆ. ಇದರ ನಡುವೆ ಸತ್ಯದೇವ್ & ಟೀಮ್ ಶಿವಣ್ಣರನ್ನು ಭೇಟಿಯಾಗಿ ಕುಶಲೋಪರಿ ವಿಚಾರಿಸಿದ್ದಾರೆ. ಈ ವೇಳೆ, ಶಿವಣ್ಣ ಅವರು ಸತ್ಯದೇವ್ ನಟನೆಯ ‘ಜೀಬ್ರಾ’ ಸಿನಿಮಾಗೆ ಶುಭಹಾರೈಸಿದ್ದಾರೆ.
ಇನ್ನೂ ‘ಜೀಬ್ರಾ’ ಸಿನಿಮಾ ಇದೇ ನ.22ಕ್ಕೆ ಬಹಭಾಷೆಗಳಲ್ಲಿ ರಿಲೀಸ್ ಆಗುತ್ತಿದೆ. ಸಿನಿಮಾದಲ್ಲಿ ಡಾಲಿ, ಸತ್ಯದೇವ್, ಅಮೃತಾ ಅಯ್ಯಂಗಾರ್ ಸೇರಿದಂತೆ ಅನೇಕರು ನಟಿಸಿದ್ದಾರೆ.
ಭಾರತೀಯ ಸಿನಿಮಾ ರಂಗದ ದಿಗ್ಗಜರುಗಳಾದ ರಜನಿ ಮತ್ತು ಅಮಿತಾಭ್ ಬಚ್ಚನ್ (Amitabh Bachchan) ವೆಟ್ಟೈಯನ್ (Vettaiyan)ಸಿನಿಮಾದಲ್ಲಿ ಜೊತೆಯಾಗಿದ್ದಾರೆ. ಹಲವು ವರ್ಷಗಳ ನಂತರ ಈ ಜೋಡಿ ಕಾಣಿಸಿಕೊಂಡಿದ್ದು ಕುತೂಹಲಕ್ಕೆ ಕಾರಣವಾಗಿತ್ತು. ಜೊತೆಗೆ ಅಮಿತಾಭ್ ಇಲ್ಲಿ ಯಾವ ರೀತಿಯ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ ಎನ್ನುವ ಕ್ಯೂರಿಯಾಸಿಟಿ ಕೂಡ ಇತ್ತು. ಅದಕ್ಕೀಗ ಉತ್ತರ ಸಿಕ್ಕಿದೆ.
ಈ ಸಿನಿಮಾದಲ್ಲಿ ಅಮಿತಾಭ್ ಅವರು ಸತ್ಯದೇವ ಹೆಸರಿನ ಪಾತ್ರವನ್ನು ಮಾಡುತ್ತಿದ್ದಾರೆ. ಸಣ್ಣ ತುಣುಕೊಂದನ್ನು ನಿರ್ಮಾಣ ಸಂಸ್ಥೆ ರಿಲೀಸ್ ಮಾಡಿದೆ. ಪಾತ್ರದ ಪರಿಚಯವನ್ನೂ ಈ ಮೂಲಕ ನಿರ್ಮಾಪಕರು ಮಾಡಿದ್ದಾರೆ. ರಜನಿ ಜೊತೆ ಆತ್ಮೀಯವಾಗಿರೋ ದೃಶ್ಯ ಕೂಡ ಅದರಲ್ಲಿದೆ.
ರಜನಿಕಾಂತ್ (Rajanikanth) ನಟನೆಯ ‘ಲಾಲ್ ಸಲಾಂ’ (Lal Salaam) ಸಿನಿಮಾ ರಜನಿ ಅಭಿಮಾನಿಗಳಿಗೆ ಏನೆಲ್ಲ ಬೇಕೊ ಎಲ್ಲವನ್ನೂ ಕೊಟ್ಟಿದ್ದರು. ಆದರೂ, ಅಂದುಕೊಂಡಷ್ಟು ಚಿತ್ರಕ್ಕೆ ಸಿನಿಮಾಗೆ ಉತ್ತಮ ರೆಸ್ಪಾನ್ಸ್ ಸಿಗಲಿಲ್ಲ. ಮೊದಲ ದಿನ ಗಳಿಕೆ ನಾಲ್ಕುವರೆ ಕೋಟಿ ಎಂದು ಅಂದಾಜಿಸಲಾಗಿತ್ತು. ‘ಲಾಲ್ ಸಲಾಂ’ ಸೋಲಿನ ಬೆನ್ನಲ್ಲೇ ಹೊಸ ಸಿನಿಮಾ ತಲೈವ ಘೋಷಿಸಿದ್ದರು. ಅದೇ ವೆಟ್ಟೈಯನ್.
‘ವೆಟ್ಟೈಯನ್’ ಲಾಲ್ ಸಲಾಂ ನಿರ್ಮಾಣ ಮಾಡಿರುವ ಲೈಕಾ ಪ್ರೊಡಕ್ಷನ್ಸ್ ಸಂಸ್ಥೆಯೇ ಬಂಡವಾಳ ಹೂಡುತ್ತಿದೆ. ಈ ಸಿನಿಮಾಗೆ ಶೇಕಡ 80ರಷ್ಟು ಶೂಟಿಂಗ್ ಮುಕ್ತಾಯ ಆಗಿದೆ. ಇನ್ನುಳಿದ ಕೆಲಸಗಳು ಭರದಿಂದ ಸಾಗುತ್ತಿವೆ ಎಂದು ರಜನಿಕಾಂತ್ ಮಾಹಿತಿ ನೀಡಿದ್ದರು.
’ವೆಟ್ಟೈಯನ್’ ತಲೈವ ಅವರು ನಟಿಸುತ್ತಿರುವ 170ನೇ ಸಿನಿಮಾ. ಟೈಟಲ್ ಟೀಸರ್ ನೋಡಿದ ಎಲ್ಲರೂ ಈಗಾಗಲೇ ಮೆಚ್ಚುಗೆ ಸೂಚಿಸಿದ್ದಾರೆ. ಈ ಸಿನಿಮಾಗೆ ‘ಜೈ ಭೀಮ್’ ಖ್ಯಾತಿಯ ಟಿ.ಜೆ. ಜ್ಞಾನವೇಲ್ ಅವರು ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.
ನಟರಾಕ್ಷಸ ಡಾಲಿ ಧನಂಜಯ್ (Dhananjay) ಹಾಗೂ ತೆಲುಗಿನ ಪ್ರತಿಭಾನ್ವಿತ ನಾಯಕ ಸತ್ಯದೇವ್ (Satyadev) ನಟನೆಯ ಬಹುನಿರೀಕ್ಷಿತ ಮಲ್ಟಿಸ್ಟಾರ್ ಸಿನಿಮಾ ಜೀಬ್ರಾ (Zebra). ಫಸ್ಟ್ ಲುಕ್ ಮೂಲಕ ಗಮನಸೆಳೆದಿದ್ದ ಜೀಬ್ರಾದ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ. ಮೋಷನ್ ಪೋಸ್ಟರ್ ನಲ್ಲಿ ((Motion Poster)) ಸತ್ಯರಾಜ್, ಸತ್ಯ ಅಕ್ಕಲಾ, ಜೆನ್ನಿಫರ್ ಪಿಕ್ಕಿನಾಟೊ, ಸುನಿಲ್, ಪ್ರಿಯಾ ಭವಾನಿ ಶಂಕರ್, ಡಾಲಿ ಧನಂಜಯ್ ಮತ್ತು ಸತ್ಯ ದೇವ್ ಅವರನ್ನು ಪರಿಚಯಿಸಲಾಗಿದೆ.
ಮೋಷನ್ ಪೋಸ್ಟರ್ ನಲ್ಲಿ ಚೆಸ್ ಆಟ, ಕಾಯಿನ್ ಫ್ಲಿಪ್ಪಿಂಗ್, ಕರೆನ್ಸಿ ನೋಟುಗಳು ಮತ್ತು ಫ್ಲೈಓವರ್ ನಿಂದ ಕಾರ್ ಇಳಿಯುವ ದೃಶ್ಯಗಳು ಆಕರ್ಷಕವಾಗಿವೆ. ಬಹಳ ಕ್ರಿಯೇಟಿವಿಟಿಯಾಗಿ ಮೋಷನ್ ಪೋಸ್ಟರ್ ನ್ನು ಚಿತ್ರೀಕರಿಸಲಾಗಿದೆ. ಜೀಬ್ರಾ ಸಿನಿಮಾವನ್ನ ಈಶ್ವರ್ ಕಾರ್ತಿಕ್ ಡೈರೆಕ್ಷನ್ ಮಾಡಿದ್ದಾರೆ. ಕ್ರೈಂ ಮತ್ತು ಥ್ರಿಲ್ಲರ್ ಕಂಟೆಂಟ್ ಇರೋ ಚಿತ್ರ ಇದಾಗಿದೆ.
ಪದ್ಮಜಾ ಫಿಲಂಸ್ ಪ್ರೈವೇಟ್ ಲಿಮಿಟೆಡ್ ಮತ್ತು ಓಲ್ಡ್ ಟೌನ್ ಪಿಕ್ಚರ್ಸ್ ಬ್ಯಾನರ್‌ಗಳ ಅಡಿಯಲ್ಲಿ ಎಸ್‌ಎನ್ ರೆಡ್ಡಿ, ಎಸ್ ಪದ್ಮಜಾ, ಬಾಲ ಸುಂದರಂ ಮತ್ತು ದಿನೇಶ್ ಸುಂದರಂ ನಿರ್ಮಾಣ ಮಾಡಲಾಗಿದೆ. ಕೆಜಿಎಫ್ ಮತ್ತು ಸಲಾರ್ ಖ್ಯಾತಿಯ ರವಿ ಬಸ್ರೂರ್ ಚಿತ್ರಕ್ಕೆ ಸಂಗೀತ ನೀಡಿದ್ದು, ಸತ್ಯ ಪೊನ್ಮಾರ್ ಅವರ ಛಾಯಾಗ್ರಹಣವಿದೆ. ಎಸ್ ಶ್ರೀಲಕ್ಷ್ಮಿ ರೆಡ್ಡಿ ಸಹ ನಿರ್ಮಾಪಕಿ. ಅನಿಲ್ ಕ್ರಿಶ್ ಸಂಕಲನ,ಮೀರಾಖ್ ಸಂಭಾಷಣೆ ಇದೆ. ಅಶ್ವಿನಿ ಮುಲ್ಪುರಿ, ಗಂಗಾಧರ ಬೊಮ್ಮರಾಜು ಕಾಸ್ಟ್ಯೂಮ್ ಡಿಸೈನರ್ ಆಗಿ ದುಡಿದಿದ್ದಾರೆ. ಮೋಷನ್ ಪೋಸ್ಟರ್ ಜೊತೆಗೆ ಚಿತ್ರತಂಡ ಬಿಡುಗಡೆ ದಿನಾಂಕ ಕೂಡ ಘೋಷಣೆ ಮಾಡಿದೆ. ಬೆಳಕಿನ ಹಬ್ಬ ದೀಪಾವಳಿಗೆ ಜೀಬ್ರಾ ತೆರೆಗೆ ಬರಲಿದೆ.
ಈಶ್ವರ್ ಕಾರ್ತಿಕ್ ನಿರ್ದೇಶನದ ಬಹುತಾರಾಗಣದ ಚಿತ್ರ `ಜೀಬ್ರಾ’ (Zebra) ಅನೌನ್ಸ್ ಮಾಡಿದ್ದು ಗೊತ್ತೇ ಇದೆ. ಈ ಸಿನಿಮಾಗೆ ಸತ್ಯದೇವ್ (Satyadev) ನಾಯಕನಾಗಿ ನಟಿಸುತ್ತಿದ್ದಾರೆ. ಮಾತ್ರವಲ್ಲ ಸ್ಯಾಂಡಲ್‌ವುಡ್ ಸ್ಟಾರ್ ಡಾಲಿ ಧನಂಜಯ (Dolly Dhananjay) ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿರುವುದು ವಿಶೇಷ. ಡಾಲಿ ಧನಂಜಯ್ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವ ಈ ತೆಲುಗಿನ ಪ್ಯಾನ್ ಇಂಡಿಯಾ ಸಿನಿಮಾ, ಸತ್ಯದೇವ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಫಸ್ಟ್ ಲುಕ್ ರಿವೀಲ್ ಮಾಡಿದೆ. ಈ ಸಿನಿಮಾದಲ್ಲಿ ಡಾಲಿ ಧನಂಜಯ್ ಜೊತೆಗೆ ಸತ್ಯ ದೇವ್ ಸಹ ಮುಖ್ಯ ಪಾತ್ರದಲ್ಲಿರಲಿದ್ದಾರೆ. ಪದ್ಮಜಾ ಫಿಲಂಸ್ ಪ್ರೈವೇಟ್ ಲಿಮಿಟೆಡ್ ಮತ್ತು ಓಲ್ಡ್ ಟೌನ್ ಪಿಕ್ಚರ್ಸ್ ಬ್ಯಾನರ್‌ಗಳ ಅಡಿಯಲ್ಲಿ ಎಸ್‌ಎನ್ ರೆಡ್ಡಿ, ಎಸ್ ಪದ್ಮಜಾ, ಬಾಲ ಸುಂದರಂ ಮತ್ತು ದಿನೇಶ್ ಸುಂದರಂ ನಿರ್ಮಾಣ ಮಾಡುತ್ತಿದ್ದಾರೆ. ಇದೀಗ ಜೀಬ್ರಾ ತಂಡ ಫಸ್ಟ್ ಲುಕ್ ಅನಾವರಣಗೊಳಿಸಿದೆ.
ಪೋಸ್ಟರ್‌ನಲ್ಲಿ ಸತ್ಯದೇವ್ ಅತ್ಯಂತ ಸ್ಟೈಲಿಶ್ ಅವತಾರ ತಾಳಿದ್ದಾರೆ. ಸೂಟ್ ಧರಿಸಿ ಅತ್ಯಂತ ಖಡಕ್ ಲುಕ್‌ನಲ್ಲಿ ಕಂಡಿದ್ದಾರೆ. ತುಂಬಾ ಗಂಭೀರವಾಗಿ ಕಂಡಿದ್ದಾರೆ ಸತ್ಯದೇವ್. ಭುಜದ ಮೇಲೆ ಚೀಲವನ್ನು ಹೊತ್ತುಕೊಂಡು ಬಹಳ ಗಭೀರದಿಂದ ನಡೆಯುತ್ತಿರುವ ಲುಕ್‌ನಲ್ಲಿ ಕಂಡಿದ್ದಾರೆ. ಇನ್ನೊಂದು ಕೈಯಲ್ಲಿ ಪೆನ್ನು ಇದೆ. ಪೋಸ್ಟರ್ ಬ್ಯಾಕ್‌ರೌಂಡ್‌ನಲ್ಲಿ ನೋಟುಗಳು ಚೆಲ್ಲಾಪಿಲ್ಲಿಯಾಗಿವೆ. ʻಜೀಬ್ರಾ’ ಸಿನಿಮಾದಲ್ಲಿ ಡಾಲಿ ಧನಂಜಯ್ ಜೊತೆಗೆ ಸತ್ಯದೇವ್, ನಟಿ ಅಮೃತಾ ಐಯ್ಯಂಗಾರ್, ಪ್ರಿಯಾ ಭವಾನಿ ಶಂಕರ್, ತೆಲುಗಿನ ಜನಪ್ರಿಯ ಹಾಸ್ಯನಟ ಸುನಿಲ್, ಕಟ್ಟಪ್ಪ ಖ್ಯಾತಿಯ ಸತ್ಯರಾಜ್, ಊರ್ವಶಿ ರೌಟೆಲ್ಲಾ ಇನ್ನೂ ಕೆಲವು ಪ್ರತಿಭಾವಂತ ನಟರು ಇರಲಿದ್ದಾರೆ. ಸಿನಿಮಾವನ್ನು ಈಶ್ವರ್ ಕಾರ್ತಿಕ್ ನಿರ್ದೇಶನ ಮಾಡಿದ್ದು, ಕತೆ-ಚಿತ್ರಕತೆ ಅವರದ್ದೇ.
ʻಲಕ್ ಫೇವರ್ಸ್ ದಿ ಬ್ರೇವ್ʼ ಎಂದು ಅಡಿಬರಹ ಕೂಡ ಇದೆ. ಈಗಾಗಲೇ ಸಿನಿಮಾದ ಚಿತ್ರೀಕರಣ ಮುಗಿದಿದೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಆಗುತ್ತಿವೆ. ಶೀಘ್ರದಲ್ಲೇ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಿಸಲಿದೆ. ಈಶ್ವರ್ ಕಾರ್ತಿಕ್ ನಿರ್ದೇಶನದ ಈ ಕ್ರೈಮ್ ಆಕ್ಷನ್ ಎಂಟರ್‌ಟೈನರ್‌ನಲ್ಲಿ ಪ್ರಿಯಾ ಭವಾನಿ ಶಂಕರ್ ಮತ್ತು ಜೆನ್ನಿಫರ್ ಪಿಕ್ಕಿನಾಟೊ ಪ್ರಮುಖ ಪಾತ್ರ ನಿಭಾಯಿಸುತ್ತಿದ್ದಾರೆ. ಸತ್ಯ ಅಕಾಲ ಮತ್ತು ಸುನಿಲ್ ಇತರ ಪ್ರಮುಖ ಪಾತ್ರಧಾರಿಗಳು. ಕೆಜಿಎಫ್ ಮತ್ತು ಸಲಾರ್ ಖ್ಯಾತಿಯ ರವಿ ಬಸ್ರೂರ್ ಚಿತ್ರಕ್ಕೆ ಸಂಗೀತ ನೀಡಿದ್ದು, ಸತ್ಯ ಪೊನ್ಮಾರ್ ಅವರ ಛಾಯಾಗ್ರಹಣವಿದೆ. ಎಸ್ ಶ್ರೀಲಕ್ಷ್ಮಿ ರೆಡ್ಡಿ ಸಹ ನಿರ್ಮಾಪಕಿ. ಅನಿಲ್ ಕ್ರಿಶ್ ಸಂಕಲನ,ಮೀರಾಖ್ ಸಂಭಾಷಣೆ ಇದೆ. ಅಶ್ವಿನಿ ಮುಲ್ಪುರಿ, ಗಂಗಾಧರ ಬೊಮ್ಮರಾಜು ಕಾಸ್ಟ್ಯೂಮ್ ಡಿಸೈನರ್ ಆಗಿದ್ದಾರೆ. ಚಿತ್ರ ಸತ್ಯದೇವ್, ಡಾಲಿ ಧನಂಜಯ, ಸತ್ಯರಾಜ್, ಪ್ರಿಯಾ ಭವಾನಿ ಶಂಕರ್, ಜೆನ್ನಿಫರ್ ಪಿಕ್ಕಿನಾಟೊ, ಸತ್ಯ ಅಕಾಲ, ಸುನಿಲ್ ಹೀಗೆ ಬಹು ತಾರಾಗಣ ಹೊಂದಿದೆ.
ಡಾಲಿ ಧನಂಜಯ್ (Dhananjay) ಮತ್ತು ತೆಲುಗಿನ ಸತ್ಯದೇವ್ ಜೊತೆಯಾಗಿ ನಟಿಸುತ್ತಿರುವ, ಪ್ಯಾನ್ ಇಂಡಿಯಾ ಚಿತ್ರಕ್ಕೆ ಟೈಟಲ್ ಫಿಕ್ಸ್ ಆಗಿದೆ. ಚಿತ್ರಕ್ಕೆ ‘ಜೀಬ್ರಾ’ (Zebra) ಎಂಬ ಹೆಸರನ್ನು ಇಡಲಾಗಿದೆ. ಓಲ್ಡ್ಟೌನ್ ಪಿಕ್ಚರ್ಸ್ ಎಲ್ಎಲ್ಪಿ ಮತ್ತು ಪದ್ಮಜಾ ಫಿಲಂಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ನಿರ್ಮಿಸುತ್ತಿರುವ ಈ ಮಲ್ಟಿಸ್ಟಾರರ್ ಚಿತ್ರವನ್ನು ‘ಪೆಂಗ್ವಿನ್’ ಖ್ಯಾತಿಯ ಈಶ್ವರ್ ಕಾರ್ತಿಕ್ ನಿರ್ದೇಶನ ಮಾಡುತ್ತಿದ್ದಾರೆ. ಈಗಾಗಲೇ 50 ದಿನಗಳ ಮೊದಲ ಹಂತದ ಚಿತ್ರೀಕರಣ ಮುಗಿದಿದ್ದು, ಬಾಕಿ ಉಳಿದಿರುವ ಚಿತ್ರೀಕರಣವನ್ನು ಹೈದರಾಬಾದ್, ಕೊಲ್ಕತ್ತಾ, ಮುಂಬೈ ಮುಂತಾದ ಕಡೆ ಚಿತ್ರೀಕರಣ ನಡೆಯಲಿದೆ.
‘ಜೀಬ್ರಾ’ ಚಿತ್ರತಂಡಕ್ಕೆ ಇದೀಗ ‘ಕೆಜಿಎಫ್ 1 ಮತ್ತು 2’ ಮುಂತಾದ ಚಿತ್ರಗಳ ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಅವರ ಆಗಮನವಾಗಿದೆ. ಇತ್ತೀಚೆಗಷ್ಟೇ ಅಜಯ್ ದೇವಗನ್ ನಿರ್ದೇಶನದ ‘ಭೋಲಾ’ ಚಿತ್ರಕ್ಕೆ ಹಿನ್ನೆಲೆ ಸಂಗೀತ ಸಂಯೋಜಿಸಿರುವ ರವಿ ಬಸ್ರೂರು, ಇದೀಗ ಜೀಬ್ರಾ ಚಿತ್ರಕ್ಕೂ ಸಂಗೀತ ಸಂಯೋಜಿಸುತ್ತಿದ್ದಾರೆ.
ಚಿತ್ರತಂಡಕ್ಕೆ ರವಿ ಬಸ್ರೂರು ಸೇರ್ಪಡೆಯಾಗಿರುವ ವಿಷಯ ಕುರಿತು ಮಾತನಾಡಿರುವ ನಿರ್ಮಾಪಕರಾದ ಬಾಲಸುಂದರಂ ಮತ್ತು ಪದ್ಮಜಾ ರೆಡ್ಡಿ, ‘ರವಿ ಬಸ್ರೂರು ಅವರ ಸಂಗೀತ ಮತ್ತು ಹಿನ್ನೆಲೆ ಸಂಗೀತವು ಈ ಚಿತ್ರದ ಹೈಲೈಟ್ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ. ಅವರು ಚಿತ್ರದ ಆತ್ಮವನ್ನು ತಮ್ಮ ಸಂಗೀತದ ಮೂಲಕ ಅದ್ಭುತವಾಗಿ ಎತ್ತಿಹಿಡಿಯಲಿದ್ದಾರೆ’ ಎಂದು ಹೇಳಿದ್ದಾರೆ. ‘ಜೀಬ್ರಾ’ ಚಿತ್ರದಲ್ಲಿ ಧನಂಜಯ ಮತ್ತು ಸತ್ಯದೇವ್ (Satyadev) ಜೊತೆಗೆ ‘ಕಟ್ಟಪ್ಪ’ ಖ್ಯಾತಿಯ ಸತ್ಯರಾಜ್, ಸುನೀಲ್ ಮುಂತಾದವರು ನಟಿಸುತ್ತಿದ್ದಾರೆ. ಸತ್ಯ ಪೊನ್ಮಾರ್ ಅವರ ಛಾಯಾಗ್ರಹಣ ಮತ್ತು ಅನಿಲ್ ಕ್ರಿಶ್ ಅವರ ಸಂಕಲನ ಈ ಚಿತ್ರಕ್ಕಿದೆ.
Live Tv
[brid partner=56869869 player=32851 video=960834 autoplay=true]
ಸ್ಯಾಂಡಲ್‌ವುಡ್ (Sandalwood) ನಟ ರಾಕ್ಷಸ ಧನಂಜಯ್ ಕನ್ನಡದ ಜೊತೆಗೆ ತೆಲುಗು ಮತ್ತು ತಮಿಳುನಲ್ಲಿಯೂ ಬೇಡಿಕೆ ಕ್ರಿಯೆಟ್ ಮಾಡಿಕೊಂಡಿದ್ದಾರೆ. ಕನ್ನಡದ ನಟನೊಬ್ಬ ಪಕ್ಕದ ರಾಜ್ಯದಲ್ಲೂ ಮಿಂಚ್ತಿದ್ದಾರೆ. ಸದ್ಯ `ಝೀಬ್ರಾ’ಗಾಗಿ (Zebra) ತೆಲುಗು ನಟ ಸತ್ಯದೇವ್ (Sathyadev) ಜೊತೆ ಡಾಲಿ (Dhananjay) ಕೈಜೋಡಿಸಿದ್ದಾರೆ. ಇದನ್ನೂ ಓದಿ: ಪತ್ನಿ ಸಂಗೀತಾಗೆ ವಿಜಯ್ ಡಿವೋರ್ಸ್, ಕೀರ್ತಿ ಸುರೇಶ್ ಜೊತೆ 2ನೇ ಮದುವೆ?
ಕನ್ನಡದ ಡಾಲಿ ಪರಭಾಷೆಗಳಲ್ಲೂ ಛಾಪೂ ಮೂಡಿಸಿದ್ದಾರೆ. ಪುಷ್ಪ ಚಿತ್ರದ ನಂತರ ಡಾಲಿ ಖದರ್ ಬೇರೆಯದ್ದೇ ಲೆವೆಲ್‌ಗೆ ಹೋಗಿದೆ. ಹೀಗಿರುವಾಗ `ಹೊಯ್ಸಳ’ (Hoysala Film) ಚಿತ್ರದ ನಂತರ ಇದೀಗ ತೆಲುಗಿನ ಹೊಸ ಸಿನಿಮಾಗೆ ಡಾಲಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.
`ಝೀಬ್ರಾ’ (Zebra) ಎಂಬ ಮಾಸ್ ಎಂಟರ್‌ಟೇನರ್ ಚಿತ್ರಕ್ಕೆ ಡಾಲಿ ಜೊತೆ ಸತ್ಯದೇವ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಆದರೆ ಈ ಚಿತ್ರದ ನೆಗೆಟಿವ್ ಶೇಡ್‌ನಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಸತ್ಯದೇವ್ ಮತ್ತು ಡಾಲಿ ಇಬ್ಬರೂ ಚಿತ್ರದ ನಾಯಕರಾಗಿದ್ದು, ಈಗಾಗಲೇ 50 ದಿನದ ಶೂಟಿಂಗ್ ಆಗಿದೆ. ಇನ್ನೂ ಉಳಿದ ಚಿತ್ರೀಕರಣವನ್ನು ಕೋಲ್ಕತ್ತಾ, ಮುಂಬೈನಲ್ಲಿ ಶೂಟಿಂಗ್ ಮಾಡಲು ಸಿನಿಮಾ ತಂಡ ಪ್ಲ್ಯಾನ್ ಮಾಡಿದೆ. ಸದ್ಯ ಈ ಚಿತ್ರದ ಫಸ್ಟ್ ಲುಕ್ ಕೂಡ ರಿವೀಲ್ ಆಗಿದೆ.
ಇನ್ನೂ ಝೀಬ್ರಾ ಸಿನಿಮಾ ತೆಲುಗು ಮತ್ತು ಕನ್ನಡದಲ್ಲಿ ಮೂಡಿ ಬರಲಿದೆ. ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಸಿನಿಮಾ ತೆರೆ ಕಾಣಲಿದೆ. ಇನ್ನೂ ಇದೇ ಮೊದಲ ಬಾರಿಗೆ ಸತ್ಯದೇವ್ ಮತ್ತು ಡಾಲಿ ಒಟ್ಟಿಗೆ ನಟಿಸಿದ್ದು, ಇಬ್ಬರ ಕಾಂಬಿನೇಷನ್ ಸಿನಿಮಾ ನೋಡಲು ಫ್ಯಾನ್ಸ್ ಕಾಯ್ತಿದ್ದಾರೆ.
Live Tv
[brid partner=56869869 player=32851 video=960834 autoplay=true]