Tag: ಸತ್ಯಭಾಮ ಕಂಬಾರ ನಿಧನ

  • ಕಂಬಾರ ಪತ್ನಿ ನಿಧನ- ಕಂಬನಿ ಮಿಡಿದ ಬೊಮ್ಮಾಯಿ

    ಕಂಬಾರ ಪತ್ನಿ ನಿಧನ- ಕಂಬನಿ ಮಿಡಿದ ಬೊಮ್ಮಾಯಿ

    ಬೆಂಗಳೂರು: ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತ ಡಾ. ಚಂದ್ರಶೇಖರ ಕಂಬಾರರ ಪತ್ನಿ ಸತ್ಯಭಾಮ ಚಂದ್ರಶೇಖರ್ ಕಂಬಾರರವರು ಇಂದು ನಿಧನ ಹೊಂದಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

    ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ  ಹಿರಿಯ ಸಾಹಿತಿ ಡಾ. ಚಂದ್ರಶೇಖರ ಕಂಬಾರ ಅವರ ಧರ್ಮ ಪತ್ನಿ ಶ್ರೀಮತಿ ಸತ್ಯಭಾಮ ಕಂಬಾರ ಅವರ ನಿಧನದ ಸುದ್ದಿ ತಿಳಿದು ದುಃಖಿತನಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

    ಸತ್ಯಭಾಮ ಅವರು ಚಂದ್ರಶೇಖರ ಕಂಬಾರ ಅವರ ಪ್ರೇರಣಾ ಶಕ್ತಿಯಾಗಿದ್ದು, ಅವರಿಗೆ ಅಪಾರವಾದ ಓದಿನ ಹವ್ಯಾಸವಿತ್ತು. ಹೀಗಾಗಿ ಅವರು ಸಾಹಿತ್ಯ ಕ್ಷೇತ್ರದಲ್ಲಿನ ಬೆಳವಣಿಗೆ ಕುರಿತು ಆಸಕ್ತಿ ಹೊಂದಿದ್ದರು. ಅವರ ಆತ್ಮಕ್ಕೆ ದೇವರು ಚಿರಶಾಂತಿ ನೀಡಲಿ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಕಂಬಾರ ಕುಟುಂಬದ ಸದಸ್ಯರಿಗೆ ನೀಡಲಿ ಅಂತ ಕೋರುತ್ತೇನೆ ಎಂದು ಕಂಬನಿ ಮಿಡಿದಿದ್ದಾರೆ.

    ಚಂದ್ರಶೇಖರ್ ಕಂಬಾರ್ ಪತ್ನಿ ಸತ್ಯಭಾಮ (76) ಇಂದು ಬೆಳಿಗ್ಗೆ 6:15ಕ್ಕೆ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಸತ್ಯಭಾಮ ಕಳೆದ ಜನವರಿ 3 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.