Tag: ಸತ್ಯವರ್ತ್ ಕಡಿಯಾನ್

  • ಹೋರಾಟದಿಂದ ಹಿಂದೆ ಸರಿದಿಲ್ಲ, ಸುಳ್ಳು ಸುದ್ದಿ ಹಬ್ಬಿಸಬೇಡಿ – ಸಾಕ್ಷಿ ಮಲಿಕ್

    ಹೋರಾಟದಿಂದ ಹಿಂದೆ ಸರಿದಿಲ್ಲ, ಸುಳ್ಳು ಸುದ್ದಿ ಹಬ್ಬಿಸಬೇಡಿ – ಸಾಕ್ಷಿ ಮಲಿಕ್

    ನವದೆಹಲಿ: ನಾವು ಯಾರ ಜೊತೆಗೂ ರಾಜಿ ಮಾಡಿಕೊಂಡಿಲ್ಲ, ಹೋರಾಟದಿಂದ ಹಿಂದೆಯೂ ಸರಿಯುವುದಿಲ್ಲ, ನ್ಯಾಯಕ್ಕಾಗಿ ಒಗ್ಗಟ್ಟಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ, ನಮ್ಮನ್ನು ದುರ್ಬಲಗೊಳಿಸಲು ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ ಎಂದು ಸಾಕ್ಷಿ ಮಲಿಕ್ (Sakshi Malik) ಹಾಗೂ ಅವರ ಪತಿ, ಕುಸ್ತಿಪಟು ಸತ್ಯವರ್ತ್ ಕಡಿಯಾನ್ (Satyawart Kadian) ಸ್ಪಷ್ಟನೆ ನೀಡಿದ್ದಾರೆ.

    ಶನಿವಾರ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಜೊತೆಗೆ ಸಭೆ ನಡೆಸಿದ ಬೆನ್ನಲ್ಲೇ ಭಾರತೀಯ ಕುಸ್ತಿ ಫೆಡರೇಷನ್ (WFI) ಮುಖ್ಯಸ್ಥ ಬ್ರಿಜ್ ಭೂಷಣ್ (Brij Bhushan Sharan Singh)
    ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಪ್ರಮುಖ ಕುಸ್ತಿಪಟುಗಳಲ್ಲಿ ಒಬ್ಬರಾದ ಸಾಕ್ಷಿ ಮಲಿಕ್ ಹೋರಾಟದಿಂದ ಹಿಂದೆ ಸರಿದಿದ್ದು, ತಮ್ಮ ಕೆಲಸಕ್ಕಾಗಿ ರೈಲ್ವೇ ಇಲಾಖೆಗೆ (Railway Department) ಮರಳಿದ್ದಾರೆ ಎಂದು ವರದಿಯಾಗಿತ್ತು. ಇದನ್ನೂ ಓದಿ: ಪ್ರತಿಭಟನೆಯಿಂದ ಹಿಂದೆ ಸರಿದ ಕುಸ್ತಿಪಟುಗಳು – ಮರಳಿ ರೈಲ್ವೇ ಉದ್ಯೋಗಕ್ಕೆ

    ಈ ವರದಿ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಸಾಕ್ಷಿ ಮಲಿಕ್ ಪತಿ, ಕುಸ್ತಿಪಟು ಸತ್ಯವರ್ತ್ ಕಡಿಯಾನ್ ಹೋರಾಟ ಹಿಂದಕ್ಕೆ ಪಡೆದಿರುವುದು ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದ್ದಾರೆ. ನಮ್ಮ ಹೋರಾಟ ಮುಂದುವರಿಯಲಿದ್ದು, ಇದರಲ್ಲಿ ಯಾವುದೇ ಗೊಂದಲ ಇಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ದುರಂತ- ಪತ್ರದ ಮೂಲಕ ಮೋದಿ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ

    ಟ್ವಿಟ್ಟರ್‌ನಲ್ಲಿ (Twitter) ಈ ಬಗ್ಗೆ ಖುದ್ದು ಸಾಕ್ಷಿ ಮಲಿಕ್ ಕೂಡಾ ಪ್ರತಿಕ್ರಿಯೆ ನೀಡಿದ್ದು, ಹೋರಾಟದಿಂದ ಹಿಂದೆ ಸರಿದಿರುವ ಸುದ್ದಿ ಸಂಪೂರ್ಣ ತಪ್ಪು. ನ್ಯಾಯಕ್ಕಾಗಿ ನಡೆಸುತ್ತಿರುವ ಹೋರಾಟದಿಂದ ನಾವು ಹಿಂದೆ ಸರಿದಿಲ್ಲ, ನಾವೂ ಹಿಂದೆ ಸರಿಯುವುದೂ ಇಲ್ಲ. ಸತ್ಯಾಗ್ರಹದ ಜೊತೆಗೆ ರೈಲ್ವೇಯಲ್ಲಿ ನನ್ನ ಜವಾಬ್ದಾರಿಯನ್ನು ನಿಭಾಯಿಸುತ್ತಿದ್ದೇನೆ. ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರೆಯುತ್ತದೆ. ದಯವಿಟ್ಟು ಯಾವುದೇ ತಪ್ಪು ಸುದ್ದಿ ಹಬ್ಬಿಸಬೇಡಿ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕಾನೂನು ಎಲ್ಲರಿಗೂ ಒಂದೇ, ತನ್ನದೇ ಆದ ಕ್ರಮ ತೆಗೆದುಕೊಳ್ಳಲಿ- ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ

  • ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕುಸ್ತಿಪಟು ಸಾಕ್ಷಿ ಮಲಿಕ್

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕುಸ್ತಿಪಟು ಸಾಕ್ಷಿ ಮಲಿಕ್

    ನವದೆಹಲಿ: 2016ರ ರಿಯೋ ಒಲಿಂಪಿಕ್ಸ್ ನಲ್ಲಿ ಕುಸ್ತಿಯಲ್ಲಿ ಕಂಚು ಗೆದ್ದು ಭಾರತಕ್ಕೆ ಕೀರ್ತಿ ತಂದಿದ್ದ ಸಾಕ್ಷಿ ಮಲಿಕ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. 22 ವರ್ಷದ ಸತ್ಯವರ್ತ್ ಕಡಿಯಾನ್ ಜೊತೆ ರೊಹ್ಟಕ್ ನಲ್ಲಿ ಭಾನುವಾರ ಸಪ್ತಪದಿ ತುಳಿದಿದ್ದಾರೆ.

    ಕಳೆದ ವರ್ಷ ಅಕ್ಟೋಬರ್‍ನಲ್ಲಿ ಸಾಕ್ಷಿ ಅವರಿಗೆ ಸತ್ಯವರ್ತ್ ಜೊತೆ ನಿಶ್ಚಿತಾರ್ಥವಾಗಿತ್ತು. ಸಾಕ್ಷಿ ಅವರು ತಮ್ಮ ಮೆಹಂದಿ ಕಾರ್ಯಕ್ರಮದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

    2008ರಲ್ಲಿ ಬೀಜಿಂಗ್ ಹಾಗೂ 2012ರಲ್ಲಿ ಲಂಡನ್ ಒಲಿಂಪಿಕ್ಸ್ ನಲ್ಲಿ ಕುಸ್ತಿಯಲ್ಲಿ ಪದಕಗಳನ್ನು ಗೆದ್ದಿದ್ದ ಸುಶಿಲ್ ಕುಮಾರ್ ಸಾಕ್ಷಿ ಮದುವೆಯಲ್ಲಿ ಭಾಗಿಯಾಗಿದ್ರು.

    ಸತ್ಯವರ್ತ್ ಕೂಡ ಕುಸ್ತಿಪಟುವಾಗಿದ್ದು, ಸಾಕ್ಷಿ ಮಲಿಕ್‍ಗಿಂತ 2 ವರ್ಷ ಚಿಕ್ಕವರು. ರೊಹ್ಟಕ್‍ನಲ್ಲಿ ತಂದೆಯ ಅಖಾಡಾದಲ್ಲಿ ಸತ್ಯವರ್ತ್ ತರಬೇತಿ ನೀಡ್ತಿದ್ದಾರೆ. ಸತ್ಯವರ್ತ್ ಕೂಡ ಒಬ್ಬ ಒಳ್ಳೆಯ ಆಟಗಾರರಾಗಿದ್ದು, ಗ್ಲಾಸ್ಗೋನಲ್ಲಿ ನಡೆದ ಕಾಮನ್‍ವೆಲ್ತ್ ಗೇಮ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಅದೇ ವರ್ಷ ಏಷ್ಯನ್ ಚಾಂಪಿಯನ್‍ಶಿಪ್‍ನಲ್ಲಿ ಕಂಚು ಗೆದ್ದಿದ್ದರು.

    ಕಳೆದ ವರ್ಷ ಬ್ರೆಜಿಲ್‍ನ ರಿಯೋ ಡಿ ಜನೈರೋದಲ್ಲಿ ನಡೆದ ಒಲಿಂಪಿಕ್ಸ್ ನಲ್ಲಿ ಭಾವಹಿಸಿದ್ದ ಸಾಕ್ಷಿ ಕುಸ್ತಿಯಲ್ಲಿ ಭಾರತಕ್ಕೆ ಕಂಚು ತಂದುಕೊಟ್ಟಿದ್ದರು. ಈ ಮೂಲಕ ಒಲಿಪಿಂಕ್ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಸಾಕ್ಷಿ ಪಾತ್ರರಾದ್ರು. ಒಲಿಂಪಿಕ್ಸ್ ನಲ್ಲಿ ಕಂಚು ಗೆದ್ದ ಬಳಿಕ ಭಾರತದ ಧ್ವಜವನ್ನು ಹಿಡಿದು ಸಾಕ್ಷಿ ಸಂಭ್ರಮಿಸಿದ್ದರು.

    https://twitter.com/SakshiMalik/status/848026310446243841