Tag: ಸತ್ಯ ಪ್ರಕಾಶ್

  • ಸತ್ಯಘಟನೆ ಆಧರಿಸಿದೆ ದುನಿಯಾ ವಿಜಯ್ ಹೊಸ ಸಿನಿಮಾ

    ಸತ್ಯಘಟನೆ ಆಧರಿಸಿದೆ ದುನಿಯಾ ವಿಜಯ್ ಹೊಸ ಸಿನಿಮಾ

    ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಾಯಕರಾಗಿ ನಟಿಸಿದ್ದ ‘ಸಾರಥಿ’ ಚಿತ್ರವನ್ನು ನಿರ್ಮಿಸಿದ್ದ ಕೆ‌.ವಿ.ಸತ್ಯಪ್ರಕಾಶ್ (Satya Prakash) ಅವರು ಹನ್ನೆರಡು ವರ್ಷಗಳ ನಂತರ ಸಾರಥಿ ಫಿಲಂಸ್ ಮೂಲಕ ನೂತನ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ. ನಿರ್ಮಾಣಕ್ಕೆ ಸತ್ಯಪ್ರಕಾಶ್ ಅವರ ಪುತ್ರ ಸೂರಜ್ ಗೌಡ ಅವರು ಸಾಥ್ ನೀಡುತ್ತಿದ್ದಾರೆ. ಜಂಟಲ್ ಮ್ಯಾನ್, ಗುರುಶಿಷ್ಯರು ಚಿತ್ರಗಳ ನಿರ್ದೇಶಕ ಹಾಗೂ ಕಾಟೇರ ಚಿತ್ರದ ಲೇಖಕ ಜಡೇಶ ಕೆ ಹಂಪಿ  (Jadesh Hampi)ನಿರ್ದೇಶನದ ಹಾಗೂ ದುನಿಯಾ ವಿಜಯ್ (Duniya Vijay) ನಾಯಕರಾಗಿ ನಟಿಸುತ್ತಿರುವ 29 ನೇ ಚಿತ್ರ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಮಹಾಲಕ್ಷ್ಮೀಪುರದ ಶ್ರೀವೀರಾಂಜನೇಯಸ್ವಾಮಿ ದೇವಸ್ಥಾನದಲ್ಲಿ ಆರಂಭವಾಯಿತು. ಶಾಸಕ ಶ್ರೀ ಗೋಪಲಯ್ಯ ಅವರು ಚಿತ್ರದ ಮೊದಲ ಸನ್ನಿವೇಶಕ್ಕೆ ಚಾಲನೆ ನೀಡಿದರು. ನಿರ್ದೇಶಕ ತರುಣ್ ಸುಧೀರ್ ಆಕ್ಷನ್ ಕಟ್ ಹೇಳಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಎನ್ ಎಂ ಸುರೇಶ್, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು. ರಚಿತಾರಾಮ್ ಈ ಚಿತ್ರದ ನಾಯಕಿಯಾಗಿ ನಟಿಸುತ್ತಿದ್ದು, ದುನಿಯಾ ವಿಜಯ್ ಪುತ್ರಿ ರಿತನ್ಯ(ಮೋನಿಕಾ) ಈ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಡೇರ್ ಡೆವಿಲ್ ಮುಸ್ತಫಾ ಖ್ಯಾತಿಯ ಶಿಶಿರ್ ಸಹ ಪ್ರಮುಖಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮುಹೂರ್ತ ಸಮಾರಂಭದ ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು.

    ಇದು ನಾನು ಕಂಡ, ಕೇಳಿದ ಹಾಗೂ ನೋಡಿದ ನೈಜ ಕಥೆ ಎಂದು ಮಾತನಾಡಿದ ನಿರ್ದೇಶಕ ಜಡೇಶ ಕೆ ಹಂಪಿ, ಇದು ಆಳಿದವರ ಕಥೆಯಲ್ಲ. ಅಳಿದು ಉಳಿದವರ ಕಥೆ.  ಕೋಲಾರ ಭಾಗದಲ್ಲಿ ನಡೆಯುವ ಕಥೆಯಾಗುವುದರಿಂದ ಸಂಭಾಷಣೆ ಕೋಲಾರದ ಭಾಷೆಯಲ್ಲೇ ಇರುತ್ತದೆ.   ಮಾಸ್ತಿ ಅವರು ಸಂಭಾಷಣೆ ಬರೆಯುತ್ತಿದ್ದಾರೆ. ಅವರು ಕೋಲಾರದವರೆ ಆಗಿರುವುದು ವಿಶೇಷ.ಇದು 90 ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಶಿವರಾಮ ಕಾರಂತರ “ಚೋಮನ ದುಡಿ”ಯ ಚೋಮನ ಪಾತ್ರ ಈ ಚಿತ್ರಕ್ಕೆ ಸ್ಪೂರ್ತಿ. ಹಾಗಂತ “ಚೋಮನ ದುಡಿ” ಚಿತ್ರಕ್ಕೂ ಈ ಚಿತ್ರಕ್ಕೂ ಸಂಬಂಧವಿಲ್ಲ. ಇನ್ನು ಈ ಚಿತ್ರವನ್ನು ಜಗದೀಶ್ ಅವರು ನಿರ್ಮಿಸಬೇಕಿತ್ತು‌. ಕಾರಣಾಂತರದಿಂದ ಆಗಲಿಲ್ಲ. ಆನಂತರ ಸ್ನೇಹಿತರೊಬ್ಬರ ಮೂಲಕ ಸತ್ಯಪ್ರಕಾಶ್ ಅವರ ಪರಿಚಯವಾಯಿತು. ಅವರು ಹಾಗೂ ಅವರ ಮಗ ಸೂರಜ್ ಈ ಚಿತ್ರದ ಕಥೆ ಕೇಳಿ ಮೆಚ್ಚಿಕೊಂಡರು. ಕೇವಲ ಇಪ್ಪತ್ತು ದಿನಗಳಲ್ಲಿ ಚಿತ್ರಕ್ಕೆ ಚಾಲನೆ ದೊರಕ್ಕಿದೆ. ಬೆಂಗಳೂರಿನಲ್ಲಿ ಅದ್ದೂರಿ ಸೆಟ್ ಹಾಕಲಾಗುತ್ತಿದೆ. ಉಳಿದಂತೆ ಕೋಲಾರ, ಮೈಸೂರಿನಲ್ಲೂ ಚಿತ್ರೀಕರಣ ನಡೆಯಲಿದೆ. ನಾಯಕ ವಿಜಯ್ ಅವರು ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಚಿತಾರಾಮ್ ಈ ಚಿತ್ರದ ನಾಯಕಿ. ದುನಿಯಾ ವಿಜಯ್ ಪುತ್ರಿ ಮೋನಿಕಾ ಈ ಚಿತ್ರದ ಮೂಲಕ ರಿತನ್ಯ ಎಂದು ಹೆಸರು ಬದಲಾವಣೆ ಮಾಡಿಕೊಂಡು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಶಿಶಿರ್ ಕೂಡ ಮುಖ್ಯಪಾತ್ರದಲ್ಲಿದ್ದಾರೆ. ಸ್ವಾಮಿ ಗೌಡ ಛಾಯಾಗ್ರಹಣ ಹಾಗೂ ಮಾಸ್ತಿ ಅವರ ಸಂಭಾಷಣೆ ಈ ಚಿತ್ರಕ್ಕಿದೆ. ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡುವುದಾಗಿ ಹೇಳಿದರು.

    ಈ ಚಿತ್ರದ ವಿಶೇಷವೆಂದರೆ ತಂದೆ – ಮಗ ನಿರ್ಮಿಸುತ್ತಿದ್ದಾರೆ. ತಂದೆ – ಮಗಳು ಅಭಿನಯಿಸುತ್ತಿದ್ದೇವೆ. ನನ್ನ ಮಗಳು ರಿತನ್ಯ, ಮುಂಬೈನ ಅನುಪಮ್ ಖೇರ್  ಇನ್ಸ್ಟಿಟ್ಯೂಟ್ ನಲ್ಲಿ ಅಭಿನಯದ ಕುರಿತು ಕಲಿತು ಬಂದಿದ್ದಾಳೆ. ಈ ಚಿತ್ರದಲ್ಲೂ ನನ್ನ ಮಗಳ ಪಾತ್ರದಲ್ಲೇ ಅಭಿನಯಿಸುತ್ತಿದ್ದಾಳೆ. ನಾನು ಚಿತ್ರರಂಗಕ್ಕೆ ಬಂದು ಮೂವತ್ತು ವರ್ಷ ಹಾಗೂ  ನಾಯಕನಾಗಿ ಹದಿನೆಂಟು ವರ್ಷಗಳಾಗಿದೆ. ಈ ಸಂದರ್ಭದಲ್ಲಿ ನನ್ನ ಮಗಳು ಚಿತ್ರರಂಗಕ್ಕೆ ಪ್ರವೇಶಿಸುತ್ತಿದ್ದಾಳೆ. ಒಬ್ಬ ತಂದೆ ಮಗಳಿಗಾಗಿ ಏನೆಲ್ಲಾ ಕೊಡಬಹುದು? ಸ್ಕ್ರಿಪ್ಟ್ ನಲ್ಲೂ ಅರ್ಧಭಾಗ ಕೊಡಬಹುದು ಎಂದು ತಿಳಿಸಿದ ದುನಿಯಾ ವಿಜಯ್,  ನಿರ್ದೇಶಕ ಜಡೇಶ್ ಅವರು ಒಳ್ಳೆಯ ಕಥೆ ಮಾಡಿಕೊಂಡಿದ್ದಾರೆ. ನನ್ನ ಪಾತ್ರ ಕೂಡ ಚೆನ್ನಾಗಿದೆ. ಜಡೇಶ್ ಕನ್ನಡ ಚಿತ್ರರಂಗದ ಅತ್ಯುತ್ತಮ ನಿರ್ದೇಶಕರಾಗುವುದು ಖಂಡಿತ. ಬಹಳ ವರ್ಷಗಳ ನಂತರ ಸತ್ಯಪ್ರಕಾಶ್ ಅವರು ನಿರ್ಮಾಣಕ್ಕೆ ಮರಳಿದ್ದಾರೆ‌. ಅವರಿಗೆ ಹಾಗೂ ಇಡೀ ತಂಡಕ್ಕೆ ಒಳ್ಳೆಯದಾಗಲಿ ಎಂದರು ನಾಯಕ ದುನಿಯಾ ವಿಜಯ್.

    ಮೊದಲ ಚಿತ್ರ ಅಪ್ಪನ ಜೊತೆಗೆ ನಟಿಸುತ್ತಿರುವುದು ಖುಷಿಯಾಗಿದೆ. ಈ ಚಿತ್ರದಿಂದ ನನ್ನ ಹೆಸರನ್ನು ರಿತನ್ಯ ಎಂದು ಬದಲಿಸಿಕೊಂಡಿದ್ದೇನೆ. ನಿಮ್ಮೆಲ್ಲರ ಪ್ರೋತ್ಸಾಹ ನನಗಿರಲಿ ಎಂದರು ರಿತನ್ಯ(ಮೋನಿಕಾ). “ಸಾರಥಿ” ಚಿತ್ರ ನನಗೆ ತುಂಬಾ ಕೀರ್ತಿ ತಂದುಕೊಟ್ಟ ಚಿತ್ರ. ಆನಂತರ ಕೆಲವು ಚಿತ್ರಗಳ ಕಥೆ ಕೇಳಿದ್ದೆ. ಕಾರಣಾಂತರದಿಂದ ನಿರ್ಮಿಸಲು ಆಗಿರಲಿಲ್ಲ. ಜಡೇಶ್ ಅವರ ಕಥೆ ಇಷ್ಟವಾಯಿತು. ಕೇವಲ ಇಪ್ಪತ್ತು ದಿನಗಳಲ್ಲಿ ಚಿತ್ರ ಆರಂಭವಾಯಿತು. ನಿರ್ಮಾಣದಲ್ಲಿ ನನ್ನ ಜೊತೆಗೆ ಮಗ ಸೂರಜ್ ಗೌಡ ಇದ್ದಾರೆ. ನಮ್ಮ ಚಿತ್ರಕ್ಕೆ ನಿಮ್ಮೆಲ್ಲರ ಬೆಂಬಲವಿರಲಿ ಎಂದು ನಿರ್ಮಾಪಕ ಸತ್ಯಪ್ರಕಾಶ್ ತಿಳಿಸಿದರು.

    ಸಹ ನಿರ್ಮಾಪಕ ಸೂರಜ್ ಗೌಡ, ನಟ ಶಿಶಿರ, ಛಾಯಾಗ್ರಾಹಕ ಸ್ವಾಮಿ ಗೌಡ, ನಿರ್ಮಾಣ ನಿರ್ವಾಹಕ ನರಸಿಂಹ ಜಾಲಹಳ್ಳಿ ನೂತನ ಚಿತ್ರದ ಕುರಿತು ಮಾತನಾಡಿದರು. “ಭೀಮ” ಚಿತ್ರದ ನಿರ್ಮಾಪಕರ ಕೃಷ್ಣ ಸಾರ್ಥಕ್ ಶುಭ ಹಾರೈಸಿದರು.

  • ಸತ್ಯ ಪ್ರಕಾಶ್ ನಿರ್ದೇಶಿಸಿ, ನಟಿಸುತ್ತಿರುವ ಚಿತ್ರದ ಶೂಟಿಂಗ್ ಶುರು

    ಸತ್ಯ ಪ್ರಕಾಶ್ ನಿರ್ದೇಶಿಸಿ, ನಟಿಸುತ್ತಿರುವ ಚಿತ್ರದ ಶೂಟಿಂಗ್ ಶುರು

    ತ್ಯ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಇತ್ತೀಚಿಗೆ ಮುಹೂರ್ತ ಕಂಡ ರಾಷ್ಟ್ರಪ್ರಶಸ್ತಿ ಹಾಗೂ ರಾಜ್ಯಪ್ರಶಸ್ತಿ ವಿಜೇತ ನಿರ್ದೇಶಕ ಡಿ.ಸತ್ಯಪ್ರಕಾಶ್ (Satya Prakash) ನಿರ್ದೇಶನದ ‘X&Y’ ಚಿತ್ರದ ಚಿತ್ರೀಕರಣಕ್ಕೆ (Shooting) ಚಾಲನೆ ಸಿಕ್ಕಿದೆ. ಡಿಸೆಂಬರ್ 21 ರಿಂದ ಬೆಂಗಳೂರಿನಲ್ಲಿ ಚಿತ್ರೀಕರಣ ಪ್ರಾರಂಭಿಸಿರುವ ಚಿತ್ರತಂಡ,  ಫ್ಯಾಂಟಸಿ ಮತ್ತು ಭಾವನಾತ್ಮಕ ದೃಶ್ಯಗಳಿಂದ ಈ ಸಿನಿಮಾ ಪ್ರೇಕ್ಷಕರನ್ನು ತೇಲಿಸಲಿದೆ ಎನ್ನುತ್ತಾರೆ ನಿರ್ದೇಶಕ ಡಿ.ಸತ್ಯಪ್ರಕಾಶ್.

    ಒಂದು ತಿಂಗಳು ಶೂಟಿಂಗ್ ಮುಗಿಸಿ, ಹೊಸವರ್ಷದ ಫೆಬ್ರವರಿಯಲ್ಲಿ ಮಂಗಳೂರಿಗೆ ಪ್ರಯಾಣ ಬೆಳಸಲಿದೆ. ಹೊಸ ಚಿತ್ರದಲ್ಲಿ ಸತ್ಯಪ್ರಕಾಶ್ ಮತ್ತು ಅಥರ್ವ ಪ್ರಕಾಶ್ (Atharva) ನಾಯಕರಾಗಿ ಅಭಿನಯಿಸುತ್ತಿದ್ದು, ಲವಿತ್ ಛಾಯಾಗ್ರಹಣ, ವಾಸುಕಿ ವೈಭವ್ ಸಂಗೀತ ನಿರ್ದೇಶನ, ಬಿ.ಎಸ್ ಕೆಂಪರಾಜ್ ಸಂಕಲನವಿದ್ದು, ವರದರಾಜ್ ಕಾಮತ್ ಕಲಾ ನಿರ್ದೇಶನ ಮಾಡುತ್ತಿದ್ದಾರೆ.

    ಇತ್ತೀಚಿನ ದಿನಗಳಲ್ಲಿ ಹಲವು ನಿರ್ದೇಶಕರು ತಮ್ಮ ವಿಭಿನ್ನ ರೀತಿಯ ಕಥೆಯನ್ನು ತೆರೆ ಮೇಲೆ ತರಲು ತಾವೇ ನಟನೆಗಿಳಿಯುತ್ತಿದ್ದಾರೆ. ಈಗ ಆ ಸಾಲಿಗೆ ಹೊಸ ಸೇರ್ಪಡೆ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ಡಿ ಸತ್ಯಪ್ರಕಾಶ್‌ (Satya Prakash). ರಾಮಾ ರಾಮಾ ರೇ (Rama Rama Re) ಮತ್ತು ಒಂದಲ್ಲಾಎರಡಲ್ಲಾ ಸಿನಿಮಾಗಳ ಮೂಲಕ ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಿರ್ದೇಶಕ ಎಂದು ಹೆಸರು ಮಾಡಿದ್ದ ಇವರು ತಮ್ಮ ಮೊದಲೆರೆಡು ಸಿನಿಮಾಗಳಿಗೆ ಚಿತ್ರಗಳಿಗೆ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿಯನ್ನು ಪಡೆದವರು. ಕೆಲ ದಿನಗಳ ಹಿಂದೆಯಷ್ಟೇ ಇವರ ನಿರ್ದೇಶನಲ್ಲಿ (Director) ‘ಮ್ಯಾನ್‌ ಆಫ್‌ ದಿ ಮ್ಯಾಚ್‌’ ಎಂಬ ಸಿನಿಮಾ ಮೂಡಿ ಬಂದಿತ್ತು. ನಿರ್ದೇಶನದ ಜತೆಗೆ ತಮ್ಮದೇ ಬ್ಯಾನರ್ ನಲ್ಲಿ ನಿರ್ಮಾಣವನ್ನು ಸಹ ಮಾಡುವ ಸತ್ಯ ಸಿನಿಮಾಗಳ ವಿತರಣೆಯನ್ನು ಸಹ ಕಳೆದ ಒಂದೂವರೆ  ವರ್ಷಗಳಿಂದ ಮಾಡುತ್ತಿದ್ದಾರೆ.

    ಕೊಂಚ ಫ್ಯಾಂಟಸಿ ಮತ್ತು ಕಮರ್ಷಿಯಲ್‌ ಎಲಿಮೆಂಟ್‌ಗಳಿರುವ ಈ ಹೊಸ ಸಿನಿಮಾದಲ್ಲಿ ಫ್ರೆಶ್‌ ಆಗಿರುವ ನಕ್ಕು ನಗಿಸುವಂತಹ ಕಥೆಯನ್ನು ಸಿನಿಮಾದಲ್ಲಿ ಸತ್ಯಪ್ರಕಾಶ್‌ ಹೇಳಲಿದ್ದಾರೆ. ಈ ಚಿತ್ರದಲ್ಲಿ ಸತ್ಯಪ್ರಕಾಶ್‌ ಜತೆಗೆ ಅಥರ್ವ ಪ್ರಕಾಶ್ ಎಂಬ ಯುವಕ ಕೂಡಾ ನಟಿಸುತ್ತಿದ್ದಾರೆ. ಸತ್ಯಪ್ರಕಾಶ್‌ ಅವರೇ ನಿರ್ದೇಶನ ಮಾಡಿದ್ದ ‘ಮ್ಯಾನ್‌ ಆಫ್‌ ದಿ ಮ್ಯಾಚ್‌’ ಸಿನಿಮಾದಲ್ಲಿ ಅಥರ್ವ ಪ್ರಕಾಶ್   ಒಂದು ಪ್ರಮುಖ ಪಾತ್ರವನ್ನು ನಿರ್ವಹಿಸಿ ಗಮನ ಸೆಳೆದಿದ್ದರು.

     

    ‘ಈಗ ಮಾಡಲು ಹೊರಟಿರುವ ಕಥೆಯನ್ನು ನಾನೇ ಬರೆದಿದ್ದೇನೆ. ಈ ಚಿತ್ರದಲ್ಲಿಎರಡು ಪ್ರಮುಖ ಪಾತ್ರಗಳು ಬರಲಿದ್ದು, ಒಂದನ್ನು ನಾನು ನಿರ್ವಹಿಸುತ್ತಿದ್ದೇನೆ. ಪಾತ್ರಕ್ಕೆ ನಾನು ಸೂಕ್ತವಾಗಿ ಹೊಂದಿಕೆಯಾಗುತ್ತೇನೆ ಎಂದು ಅನಿಸಿ ಮೇಲೆ ನಟನಾಗಲು ನಿರ್ಧರಿಸಿದೆ. ಈಗಾಗಲೇ ಅದಕ್ಕೆ ಬೇಕಾದ ತಯಾರಿಯನ್ನು ಮಾಡಿಕೊಳ್ಳುತ್ತಿದ್ದೇನೆ. ಪ್ರೇಕ್ಷಕರನ್ನು ನಕ್ಕು ನಗಿಸುತ್ತಾ ಒಂದು ಭಾವನಾತ್ಮಕ ಕಥೆಯನ್ನು ಈ ಚಿತ್ರದಲ್ಲಿ ಹೇಳುವ ಪ್ರಯತ್ನವಾಗಲಿದೆ.’ಎನ್ನುವುದು ಸತ್ಯಪ್ರಕಾಶ್‌ ಮಾತು.

  • ನಿರ್ದೇಶನದ ಜೊತೆಗೆ ನಟನೆಗೂ ಸೈ ಎಂದ ಸತ್ಯಪ್ರಕಾಶ್

    ನಿರ್ದೇಶನದ ಜೊತೆಗೆ ನಟನೆಗೂ ಸೈ ಎಂದ ಸತ್ಯಪ್ರಕಾಶ್

    ತ್ತೀಚಿನ ದಿನಗಳಲ್ಲಿ ಹಲವು ನಿರ್ದೇಶಕರು ತಮ್ಮ ವಿಭಿನ್ನ ರೀತಿಯ ಕಥೆಯನ್ನು ತೆರೆ ಮೇಲೆ ತರಲು ತಾವೇ ನಟನೆಗಿಳಿಯುತ್ತಿದ್ದಾರೆ. ಈಗ ಆ ಸಾಲಿಗೆ ಹೊಸ ಸೇರ್ಪಡೆ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ಡಿ ಸತ್ಯಪ್ರಕಾಶ್‌ (Satya Prakash). ರಾಮಾ ರಾಮಾ ರೇ (Rama Rama Re) ಮತ್ತು ಒಂದಲ್ಲಾಎರಡಲ್ಲಾ ಸಿನಿಮಾಗಳ ಮೂಲಕ ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಿರ್ದೇಶಕ ಎಂದು ಹೆಸರು ಮಾಡಿದ್ದ ಇವರು ತಮ್ಮ ಮೊದಲೆರೆಡು ಸಿನಿಮಾಗಳಿಗೆ ಚಿತ್ರಗಳಿಗೆ ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿಯನ್ನು ಪಡೆದವರು. ಕೆಲ ದಿನಗಳ ಹಿಂದೆಯಷ್ಟೇ ಇವರ ನಿರ್ದೇಶನಲ್ಲಿ (Director) ‘ಮ್ಯಾನ್‌ ಆಫ್‌ ದಿ ಮ್ಯಾಚ್‌’ ಎಂಬ ಸಿನಿಮಾ ಮೂಡಿ ಬಂದಿತ್ತು. ನಿರ್ದೇಶನದ ಜತೆಗೆ ತಮ್ಮದೇ ಬ್ಯಾನರ್ ನಲ್ಲಿ ನಿರ್ಮಾಣವನ್ನು ಸಹ ಮಾಡುವ ಸತ್ಯ ಸಿನಿಮಾಗಳ ವಿತರಣೆಯನ್ನು ಸಹ ಕಳೆದ ಒಂದೂವರೆ  ವರ್ಷಗಳಿಂದ ಮಾಡುತ್ತಿದ್ದಾರೆ.

    ಈಗಾಗಲೇ 35ಕ್ಕೂ ಹೆಚ್ಚಿನ ಸಿನಿಮಾಗಳನ್ನು ಸತ್ಯ ಸಿನಿ‌ ಡಿಸ್ಟ್ರಿಬ್ಯೂಟರ್ಸ್ ವತಿಯಿಂದ ವಿತರಿಸಿದ್ದಾರೆ.  ಈಗ ಅವರು ತಮ್ಮ ಮುಂದಿನ ಸಿನಿಮಾವನ್ನು ನಿರ್ದೇಶನ ಮಾಡಲು ಸಜ್ಜಾಗಿದ್ದು, ಈ ಚಿತ್ರದಲ್ಲಿ ತಾವು ಸಹ ಒಂದ ಪ್ರಮುಖ ಪಾತ್ರವನ್ನು ನಿರ್ವಹಿಸಲಿದ್ದಾರೆ.

    ಕೊಂಚ ಫ್ಯಾಂಟಸಿ ಮತ್ತು ಕಮರ್ಷಿಯಲ್‌ ಎಲಿಮೆಂಟ್‌ಗಳಿರುವ ಈ ಹೊಸ ಸಿನಿಮಾದಲ್ಲಿ ಫ್ರೆಶ್‌ ಆಗಿರುವ ನಕ್ಕು ನಗಿಸುವಂತಹ ಕಥೆಯನ್ನು ಸಿನಿಮಾದಲ್ಲಿ ಸತ್ಯಪ್ರಕಾಶ್‌ ಹೇಳಲಿದ್ದಾರೆ. ಈ ಚಿತ್ರದಲ್ಲಿ ಸತ್ಯಪ್ರಕಾಶ್‌ ಜತೆಗೆ ಅಥರ್ವ ಪ್ರಕಾಶ್ ಎಂಬ ಯುವಕ ಕೂಡಾ ನಟಿಸುತ್ತಿದ್ದಾರೆ. ಸತ್ಯಪ್ರಕಾಶ್‌ ಅವರೇ ನಿರ್ದೇಶನ ಮಾಡಿದ್ದ ‘ಮ್ಯಾನ್‌ ಆಫ್‌ ದಿ ಮ್ಯಾಚ್‌’ ಸಿನಿಮಾದಲ್ಲಿ ಅಥರ್ವ ಪ್ರಕಾಶ್   ಒಂದು ಪ್ರಮುಖ ಪಾತ್ರವನ್ನು ನಿರ್ವಹಿಸಿ ಗಮನ ಸೆಳೆದಿದ್ದರು.  ವಿಶೇಷ ಎಂದರೆ ಈ ಸಿನಿಮಾದಲ್ಲಿ ಸತ್ಯಪ್ರಕಾಶ್‌ ನಿರ್ದೇಶನ, ಮತ್ತು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುವುದರ ಜತಗೆ ನಿರ್ಮಾಣವನ್ನು ಸಹ ತಮ್ಮ ಸತ್ಯಪಿಕ್ಚರ್ಸ್‌ ಬ್ಯಾನರ್‌ನಲ್ಲಿ ಮಾಡುತ್ತಿದ್ದಾರೆ.

    ಸದ್ಯಕ್ಕೆ ಸಿನಿಮಾ ಅನೌನ್ಸ್‌ಮೆಂಟ್‌ ಮಾತ್ರ ಈಗ ಮಾಡಿದ್ದು,   ಸತ್ಯಪ್ರಕಾಶ್‌ ಅವರ ಹಿಂದಿನ ಸಿನಿಮಾಗಳಲ್ಲಿ ಕೆಲಸ ಮಾಡಿದ ತಂತ್ರಜ್ಞರ ತಂಡ ಈ ಚಿತ್ರದಲ್ಲಿಯೂ ಮುಂದುವರೆಯಲಿದೆ. ಸ್ಯಾಂಡಲ್‌ವುಡ್‌ನ ಪ್ರಮುಖ ಕಲಾವಿದರು  ಈ ಸಿನಿಮಾದ ಭಾಗವಾಗಲಿದ್ದಾರೆ. ಸದ್ಯಕ್ಕೆ ಸಿನಿಮಾಗೆ ಇನ್ನೂ ಟೈಟಲ್‌ ಇಟ್ಟಿಲ್ಲ, ಸದ್ಯದಲ್ಲೇ ಸಣ್ಣ ಟೀಸರ್‌ ಮೂಲಕ ಟೈಟಲ್‌ ಅನ್ನುಅನೌನ್ಸ್‌ ಮಾಡಲಿದ್ದಾರಂತೆ. ಇನ್ನೊಂದು ವಿಶೇಷ ಎಂದರೆ ಸತ್ಯಪ್ರಕಾಶ್‌ ಕಥೆ ಬರೆದಿರುವ ‘ಕಾಲಾ ಪತ್ಥರ್‌’ ಮತ್ತು ‘ಅನ್ಲಾಕ್‌ ರಾಘವ’ ಇದೇ ವರ್ಷ ಬಿಡುಗಡೆಯಾಗಲಿದೆ. ಈ ಎರಡೂ ಸಿನಿಮಾ ಮೂಲಕ ಪ್ರೇಕ್ಷಕರಿಗೆ ಒಂದು ನಿರೀಕ್ಷೆ ಇದೆ.

     

    ‘ಈಗ ಮಾಡಲು ಹೊರಟಿರುವ ಕಥೆಯನ್ನು ನಾನೇ ಬರೆದಿದ್ದೇನೆ. ಈ ಚಿತ್ರದಲ್ಲಿಎರಡು ಪ್ರಮುಖ ಪಾತ್ರಗಳು ಬರಲಿದ್ದು, ಒಂದನ್ನು ನಾನು ನಿರ್ವಹಿಸುತ್ತಿದ್ದೇನೆ. ಪಾತ್ರಕ್ಕೆ ನಾನು ಸೂಕ್ತವಾಗಿ ಹೊಂದಿಕೆಯಾಗುತ್ತೇನೆ ಎಂದು ಅನಿಸಿ ಮೇಲೆ ನಟನಾಗಲು ನಿರ್ಧರಿಸಿದೆ. ಈಗಾಗಲೇ ಅದಕ್ಕೆ ಬೇಕಾದ ತಯಾರಿಯನ್ನು ಮಾಡಿಕೊಳ್ಳುತ್ತಿದ್ದೇನೆ. ಪ್ರೇಕ್ಷಕರನ್ನು ನಕ್ಕು ನಗಿಸುತ್ತಾ ಒಂದು ಭಾವನಾತ್ಮಕ ಕಥೆಯನ್ನು ಈ ಚಿತ್ರದಲ್ಲಿ ಹೇಳುವ ಪ್ರಯತ್ನವಾಗಲಿದೆ. ’ಎನ್ನುವುದು ಸತ್ಯಪ್ರಕಾಶ್‌ ಮಾತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಕ್ಕಿ ವರುಣ್ ಹುಟ್ಟು ಹಬ್ಬಕ್ಕೆ ‘ಕಾಲಪತ್ಥರ್’ ಪೋಸ್ಟರ್ ರಿಲೀಸ್

    ವಿಕ್ಕಿ ವರುಣ್ ಹುಟ್ಟು ಹಬ್ಬಕ್ಕೆ ‘ಕಾಲಪತ್ಥರ್’ ಪೋಸ್ಟರ್ ರಿಲೀಸ್

    ಕೆಂಡಸಂಪಿಗೆ ಸಿನಿಮಾ ಮೂಲಕ ಚಂದನವನಕ್ಕೆ ಕಾಲಿಟ್ಟ ವಿಕ್ಕಿ ವರುಣ್ (Vicky Varun), ಇಂದು ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಹುಟ್ಟು ಹಬ್ಬಕ್ಕಾಗಿ  (Birthday,) ಅವರ ನಟನೆಯ ‘ಕಾಲಪತ್ಥರ್ ‘ ಸಿನಿಮಾದ ಪೋಸ್ಟರ್ (Poster) ರಿಲೀಸ್ ಆಗಿದೆ. ಈ ಸಿನಿಮಾದಲ್ಲಿ ಅವರು ವಿಭಿನ್ನ ರೀತಿಯ ಪಾತ್ರ ನಿರ್ವಹಿಸುತ್ತಿದ್ದು, ಆ ಪಾತ್ರದ ಪೋಸ್ಟರ್ ಅನ್ನು ವಿಕ್ಕಿ ಹುಟ್ಟು ಹಬ್ಬಕ್ಕೆ ರಿಲೀಸ್ ಮಾಡಿದೆ ಚಿತ್ರತಂಡ.

    ನಿರ್ದೇಶಕ ಸುಕ್ಕಾ ಸೂರಿ ಗರಡಿಯಲ್ಲಿ ಪಳಗಿದ್ದ ವಿಕ್ಕಿ, ಕೆಂಡಸಂಪಿಗೆ ಚಿತ್ರದಲ್ಲಿನ ಇವರ ಮುಗ್ಧ ಅಭಿನಯ ಎಲ್ಲರ ಗಮನ ಸೆಳೆದಿತ್ತು. ಮೊದಲ ಚಿತ್ರದ ಗೆಲುವಿನ ನಂತರ ಕಾಲೇಜ್ ಕುಮಾರನಾಗಿ ತೆರೆ ಮೇಲೆ ಎಂಟ್ರಿ ಕೊಟ್ಟ ಇವರು ಎರಡನೇ ಸಿನಿಮಾದಲ್ಲೂ ಸಕ್ಸಸ್ ಕಾಣುವ ಮೂಲಕ ಖ್ಯಾತಿ ಗಳಿಸಿದ್ರು. ಸಿನಿಮಾ ಆಯ್ಕೆ ವಿಚಾರದಲ್ಲಿ ಸಖತ್ ಚ್ಯೂಸಿಯಾಗಿರುವ ವಿಕ್ಕಿ ವರುಣ್ ಬಹಳ ದಿನಗಳ ನಂತರ ಹೊಸ ಚಿತ್ರಕ್ಕೆ ಸಹಿ ಹಾಕಿದ್ದಾರೆ. ಈ ಚಿತ್ರದ ಟೈಟಲ್ ಹಾಗೂ ಫಸ್ಟ್ ಲುಕ್ ಪೋಸ್ಟರ್ ಎಲ್ಲೆಡೆ ಕುತೂಹಲ ಮೂಡಿಸಿದೆ. ಇದನ್ನೂ ಓದಿ:ಪಿಎಚ್‌ಡಿ ಪ್ರವೇಶ ಪರೀಕ್ಷೆ ಬರೆದ ನಟಿ ಪವಿತ್ರಾ ಲೋಕೇಶ್

    ಕೆಂಡ ಸಂಪಿಗೆ, ಕಾಲೇಜ್ ಕುಮಾರ ಚಿತ್ರಗಳ ಬ್ಯಾಕ್ ಟು ಬ್ಯಾಕ್ ಸಕ್ಸಸ್ ನಂತರ ವಿಕ್ಕಿ ವರುಣ್ ಒಪ್ಪಿಕೊಂಡಿರುವ ನೂತನ ಚಿತ್ರವೇ ಈ ‘ಕಾಲಾ ಪತ್ಥರ್’ ((Kalapathar)). ಈಗಾಗಲೇ ನಟಿಸಿದ ಎರಡೂ ಸಿನಿಮಾಗಳು ಹಿಟ್ ಆಗಿರೋದ್ರಿಂದ ಸಾಕಷ್ಟು ಎಚ್ಚರಿಕೆ ವಹಿಸಿ ಮೂರನೇ ಸಿನಿಮಾ ಆಯ್ಕೆ ಮಾಡಿಕೊಂಡಿದ್ದಾರೆ ವಿಕ್ಕಿ ವರುಣ್. ‘ಕಾಲಾ ಪತ್ಥರ್’ ಸಿನಿಮಾ ಭಿನ್ನವಾಗಿದ್ದು ಖಂಡಿತಾ ಪ್ರೇಕ್ಷಕ ಪ್ರಭುಗಳಿಗೆ ಇಷ್ಟವಾಗುತ್ತೆ ಎನ್ನುತ್ತಾರೆ ನಟ ವಿಕ್ಕಿ ವರುಣ್.

    ‘ಕಾಲಾಪತ್ಥರ್’ ಚಿತ್ರಕ್ಕೆ ವಿಕ್ಕಿ ವರುಣ್ ಇವರೇ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇವರ ನಿರ್ದೇಶನದ ಚೊಚ್ಚಲ ಸಿನಿಮಾ ಇದಾಗಿದ್ದು, ರಾಮಾ ರಾಮಾ ರೇ ಖ್ಯಾತಿಯ ನಿರ್ದೇಶಕ ಸತ್ಯ ಪ್ರಕಾಶ್ (Satya Prakash) ‘ಕಾಲಾ ಪತ್ಥರ್’ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಸುರೇಶ್ ಮತ್ತು ನಾಗರಾಜು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

  • ‘ಅನ್ಲಾಕ್ ರಾಘವ’ನಿಗೆ ಡಬ್ಬಿಂಗ್ ಮಾಡುತ್ತಿದ್ದಾರೆ ರೇಚಲ್ ಡೇವಿಡ್

    ‘ಅನ್ಲಾಕ್ ರಾಘವ’ನಿಗೆ ಡಬ್ಬಿಂಗ್ ಮಾಡುತ್ತಿದ್ದಾರೆ ರೇಚಲ್ ಡೇವಿಡ್

    ವಿಭಿನ್ನ ಟೈಟಲ್ ನಿಂದಲೇ ಗಮನ ಸೆಳೆದಿರುವ ‘ಅನ್ಲಾಕ್ ರಾಘವ’ (Unlock Raghava) ಚಲನಚಿತ್ರದ ಡಬ್ಬಿಂಗ್ ಪಿ.ಆರ್.ಕೆ. ಆಡಿಯೋ ಸ್ಟುಡಿಯೋದಲ್ಲಿ ಆರಂಭವಾಗಿದೆ. ಈ ಸಿನಿಮಾದ ನಾಯಕಿ ರೇಚಲ್ ಡೇವಿಡ್ (Rachel David) ತಮ್ಮ ಪಾತ್ರಕ್ಕಾಗಿ ಕನ್ನಡ ಪದಗಳ ಉಚ್ಛಾರಣೆಯನ್ನು ಕಲಿತು, ತಮ್ಮ ಪಾತ್ರಕ್ಕೆ ತಾವೇ ಡಬ್ ಮಾಡುತ್ತಿರುವುದು ವಿಶೇಷ. ತನ್ನ ಈ ಪ್ರಯತ್ನಕ್ಕೆ ಅನ್ಲಾಕ್ ರಾಘವ ಚಲನಚಿತ್ರ ತಂಡ ತುಂಬಾ ಸಹಕಾರ ನೀಡುತ್ತಿದೆ ಎಂದು ನಾಯಕಿ ರೇಚಲ್ ಡೇವಿಡ್ ಹರ್ಷ ವ್ಯಕ್ತಪಡಿಸಿದ್ದಾರೆ.

    ಅನ್ಲಾಕ್ ರಾಘವ ಚಿತ್ರತಂಡ ಚಿತ್ರದುರ್ಗ ಹಾಗೂ ಬೆಂಗಳೂರಿನಲ್ಲಿ 60 ದಿನಗಳ ಕಾಲ ಸಿನಿಮಾ ಶೂಟಿಂಗ್ ನಡೆಸಿದೆ. ಅನ್ಲಾಕ್ ರಾಘವದಲ್ಲಿ ಚಿತ್ರ ಸಿನಿಗೀತೆಪ್ರೇಮಿಗಳಿಗಾಗಿಯೇ ಕುಣಿಸಿ-ತಣಿಸುವ ಮೂರು ಹಾಡುಗಳ ರಸದೌತಣವಿದ್ದರೆ, ಆ್ಯಕ್ಷನ್ ಪ್ರಿಯರಿಗಾಗಿ ಬರೋಬ್ಬರಿ ನಾಲ್ಕು ವಿಭಿನ್ನ ಫೈಟ್ ಗಳ ಸಖತ್ ಮನರಂಜನೆಯಿದೆ ಎಂದು ಚಿತ್ರದ ನಿರ್ದೇಶಕರಾದ ದೀಪಕ್ ಮಧುವನಹಳ್ಳಿ (Deepak Madhuvanahalli) ಮಾಹಿತಿ ನೀಡಿದ್ದಾರೆ. ಜೊತೆಗೆ “ನಿರ್ದೇಶಕ, ಫೈಟ್ ಮಾಸ್ಟರ್, ನೃತ್ಯ ನಿರ್ದೇಶಕರು ಮೂವರೂ ಒಂದು ವಿಶೇಷ ಗೀತೆಯನ್ನು ವಿಭಿನ್ನವಾಗಿ ಒಟ್ಟಾಗಿ ಸಂಯೋಜಿಸಿದ್ದು, ಅದ್ಭುತವಾಗಿ ಮೂಡಿಬಂದಿದೆ” ಎಂದೂ ಕೂಡ ಹೇಳಿದ್ದಾರೆ.

    ಇತ್ತೀಚಿಗಷ್ಟೇ ಯುಗಾದಿ ಹಬ್ಬದ ವಿಶೇಷವಾಗಿ ‘ಅನ್ ಲಾಕ್ ರಾಘವ’  ಚಿತ್ರತಂಡ ಬಿಡುಗಡೆ ಮಾಡಿದ್ದ ಸಿನಿಮಾದ ಎರಡನೆಯ ಪೋಸ್ಟರ್ ಕೂಡ ವೈರಲ್ ಆಗಿದೆ. ‘ಅನ್ಲಾಕ್ ರಾಘವ’ ಸಿನಿಮಾವನ್ನು, ಇದೇ ವರ್ಷ ಜುಲೈ ಅಂತ್ಯದ ಒಳಗಾಗಿ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧವಾಗಿದೆ. ಇದನ್ನೂ ಓದಿ: ಬೋಲ್ಡ್ ಅವತಾರ ತಾಳಿದ ‘ಕಬ್ಜ’ ಸುಂದರಿ ಶ್ರೀಯಾ 

     

    ‘ಅನ್ ಲಾಕ್ ರಾಘವ’ ಚಿತ್ರವನ್ನು ಸತ್ಯ ಹಾಗೂ ಮಯೂರ ಪಿಕ್ಚರ್ಸ್ ಬ್ಯಾನರ್ ನಡಿ ಮಂಜುನಾಥ್ ದಾಸೇಗೌಡ, ಡಿ ಸತ್ಯಪ್ರಕಾಶ್ (Satya Prakash) ಹಾಗೂ ಗಿರೀಶ್ ಕುಮಾರ್ ಜಂಟಿಯಾಗಿ ನಿರ್ಮಿಸುತ್ತಿದ್ದು, ದೀಪಕ್ ಮಧುವನಹಳ್ಳಿ ಅವರು ನಿರ್ದೇಶಕರ ಕ್ಯಾಪ್ ತೊಟ್ಟಿದ್ದಾರೆ. ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಸತ್ಯಪ್ರಕಾಶ್ ಕಥೆ-ಚಿತ್ರಕಥೆ-ಸಂಭಾಷಣೆ ಬರೆದಿದ್ದು, ಲವಿತ್ ಛಾಯಾಗ್ರಾಹಣ, ಅನೂಪ್ ಸೀಳಿನ್ ಸಂಗೀತ, ಅಜಯ್ ಕುಮಾರ್ ಸಂಕಲನ ಚಿತ್ರಕ್ಕಿದೆ. ಧನಂಜಯ್ ಮಾಸ್ಟರ್ ಹಾಗೂ ಮುರಳಿ ಮಾಸ್ಟರ್ ನೃತ್ಯನಿರ್ದೇಶನದಲ್ಲಿ  ಹಾಡುಗಳು ಮೂಡಿಬಂದಿದ್ದು, ವಿನೋದ್ ಮಾಸ್ಟರ್ ಮತ್ತು ಅರ್ಜುನ್ ಮಾಸ್ಟರ್ ಸಾಹಸ ದೃಶ್ಯಗಳನ್ನು ಸಂಯೋಜಿಸಿದ್ದಾರೆ.

    ಮಿಲಿಂದ್ ನಾಯಕನಾಗಿ ಹಾಗೂ ರೇಚಲ್ ದೇವಿಡ್ ಚಿತ್ರದ ನಾಯಕಿಯಾಗಿ ಅಭಿನಯಿಸಿದ್ದಾರೆ. ಸಾಧುಕೋಕಿಲ, ಅವಿನಾಶ್, ಶೋಭರಾಜ್, ರಮೇಶ್ ಭಟ್, ವೀಣಾ ಸುಂದರ್, ಸುಂದರ್, ಧರ್ಮಣ್ಣ ಕಡೂರು, ಸಾಯಿ ಕುಡ್ಲ, ಭೂಮಿ ಶೆಟ್ಟಿ, ಮೂಗೂರು ಸುರೇಶ್, ಅಥರ್ವ ಪ್ರಕಾಶ್, ಶ್ರೀದತ್ತ, ಬೃಂದಾ ವಿಕ್ರಮ್ ಮೊದಲಾದವರು ಚಿತ್ರದ ಪ್ರಮುಖ ತಾರಾಗಣದಲ್ಲಿದ್ದಾರೆ.

  • ‘ಅನ್ ಲಾಕ್ ರಾಘವ’ ಸಿನಿಮಾಗೆ ಕೊನೆ ಹಂತದ ಶೂಟಿಂಗ್

    ‘ಅನ್ ಲಾಕ್ ರಾಘವ’ ಸಿನಿಮಾಗೆ ಕೊನೆ ಹಂತದ ಶೂಟಿಂಗ್

    ವಿಭಿನ್ನವಾದ ಟೈಟಲ್‌ನಿಂದ ಗಮನ ಸೆಳೆದಿರುವ  ‘ಅನ್‌ ಲಾಕ್‌ ರಾಘವ’ ಸಿನಿಮಾ ಈಗಾಗಲೇ 50ಕ್ಕೂ ಹೆಚ್ಚಿನ ದಿನಗಳ ಕಾಲ ಚಿತ್ರೀಕರಣ ಕಂಪ್ಲೀಟ್‌ ಮಾಡಿದೆ. ಕೋಟೆ ನಾಡು ಚಿತ್ರದುರ್ಗದ ವಿಭಿನ್ನ ಪ್ರದೇಶಗಳಲ್ಲಿಹಾಗೂ ಬೆಂಗಳೂರಿನ ವಿವಿಧೆಡೆ ಇಷ್ಟು ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ. ಕ್ಲೈಮ್ಯಾಕ್ಸ್‌ ಮತ್ತು ಹಾಡಿನ ಭಾಗದ ಚಿತ್ರೀಕರಣ ಮಾತ್ರ ಬಾಕಿ ಉಳಿದಿದ್ದು, ಅದನ್ನು ಸದ್ಯದಲ್ಲೇ ಚಿತ್ರತಂಡ ಆರಂಭಿಸಲಿದೆ.

    ‘ಅನ್‌ ಲಾಕ್‌ ರಾಘವ’ ಚಿತ್ರದ ನಾಯಕನಾಗಿ ‘ವೀಕೆಂಡ್‌’ ಚಿತ್ರದಲ್ಲಿನಟಿಸಿದ್ದ ಮಿಲಿಂದ್‌, ನಾಯಕಿಯಾಗಿ ‘ಲವ್‌ ಮಾಕ್ಟೇಲ್‌ 2’ ಖ್ಯಾತಿಯ ರೇಚಲ್‌ ಡೇವಿಡ್‌ ನಟಿಸುತ್ತಿದ್ದಾರೆ. ಸಾಧುಕೋಕಿಲ, ಅವಿನಾಶ್‌, ರಮೇಶ್‌ ಭಟ್‌, ವೀಣಾ ಸುಂದರ್‌, ಸುಂದರ್, ಧರ್ಮಣ್ಣ ಕಡೂರು, ಸಾಯಿ ಕುಡ್ಲ, ಮೂಗು ಸುರೇಶ್‌, ಭೂಮಿ ಶೆಟ್ಟಿ ಅವರು ಚಿತ್ರದ ಮುಖ್ಯಭೂಮಿಕೆಯಲ್ಲಿದ್ದಾರೆ. ಇದನ್ನೂ ಓದಿ: ವಸಿಷ್ಠ ಸಿಂಹ- ಹರಿಪ್ರಿಯಾ ಮದುವೆ ಡೇಟ್ ಫಿಕ್ಸ್

    ಹಾಸ್ಯಪ್ರಧಾನವಾದ ನವಿರಾದ ಪ್ರೇಮಕತೆಯುಳ್ಳ ‘ಅನ್‌ ಲಾಕ್‌ ರಾಘವ’ ಚಿತ್ರವನ್ನು ದೀಪಕ್‌ ಮಧುವನಹಳ್ಳಿ ಅವರು ನಿರ್ದೇಶನ ಮಾಡುತ್ತಿದ್ದಾರೆ. ರಾಜ್ಯ ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಡಿ ಸತ್ಯಪ್ರಕಾಶ್‌ ರಾಘವನ ಕಥೆ-ಚಿತ್ರಕಥೆ-ಸಂಭಾಷಣೆಯನ್ನು ಬರೆದಿದ್ದಾರೆ.  ಸತ್ಯ – ಮಯೂರ ಪಿಕ್ಚರ್ಸ್‌ ಬ್ಯಾನರ್‌ನಡಿ ಮಂಜುನಾಥ್‌ ಡಿ ಮತ್ತು ಸತ್ಯಪ್ರಕಾಶ್‌ ಜಂಟಿಯಾಗಿ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ.  ಲವಿತ್‌ ಛಾಯಾಗ್ರಹಕರಾಗಿದ್ದು, ರಾಗನಿಧಿ ಅನೂಪ್‌ ಸೀಳಿನ್‌ ಸಂಗೀತ ನೀಡಿದ್ದಾರೆ. ಬಾಕಿ ಉಳಿದಿರುವ ಚಿತ್ರೀಕರಣವನ್ನು ಮುಗಿಸಿಕೊಂಡು 2023ರಲ್ಲಿಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ.

    Live Tv
    [brid partner=56869869 player=32851 video=960834 autoplay=true]

  • ರಾಷ್ಟ್ರ ಪ್ರಶಸ್ತಿ ನಿರ್ದೇಶಕ ಸತ್ಯ ಪ್ರಕಾಶ್ ಇದೀಗ ಹೀರೋ

    ರಾಷ್ಟ್ರ ಪ್ರಶಸ್ತಿ ನಿರ್ದೇಶಕ ಸತ್ಯ ಪ್ರಕಾಶ್ ಇದೀಗ ಹೀರೋ

    ‘ರಾಮಾ ರಾಮಾ ರೇ’, ‘ಒಂದಲ್ಲ ಎರಡಲ್ಲ’ ಸಿನಿಮಾ ಖ್ಯಾತಿಯ ಪ್ರತಿಭಾವಂತ ನಿರ್ದೇಶಕ ಸತ್ಯ ಪ್ರಕಾಶ್. ಎರಡು ಅಪರೂಪದ ಸಿನಿಮಾಗಳ ಮೂಲಕ ಜನಮೆಚ್ಚುಗೆ ಜೊತೆಗೆ ರಾಜ್ಯ ಹಾಗೂ ರಾಷ್ಟ್ರ ಪ್ರಶಸ್ತಿಯನ್ನು ಪಡೆದುಕೊಂಡಿರುವ ಸತ್ಯ ಪ್ರಕಾಶ್ ಹೊಸದೊಂದು ಸಾಹಸಕ್ಕೆ ಹೊರಳಿದ್ದಾರೆ. ನಿರ್ದೇಶಕ, ನಿರ್ಮಾಪಕನಾಗಿ ಯಶಸ್ವಿಯಾಗಿರುವ ಸತ್ಯ ಪ್ರಕಾಶ್ ನಟನಾಗಿ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.

    ಈ ನಡುವೆ ನಿರ್ದೇಶಕರು ನಟನಾಗುತ್ತಿರೋದು ಕಾಮನ್ ವಿಚಾರವಾಗಿದೆ. ಜೊತೆಗೆ ತಾವೇ ಬರೆದ ಕಥೆಗೆ ನಿರ್ದೇಶನ ಮಾಡಿ ನಿರ್ಮಾಣ ಮಾಡಿ ನಟನಾಗುವುದು ಒಂದು ರೀತಿ ಟ್ರೆಂಡ್ ಆಗಿದೆ. ಅಂತಹದ್ದೇ ಒಂದು ಪ್ರಯತ್ನಕ್ಕೆ ಸತ್ಯ ಪ್ರಕಾಶ್ ಕೈ ಹಾಕಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸತ್ಯ ಪ್ರಕಾಶ್ ಇದೊಂದು ಹೊಸ ರೀತಿಯ ಕಥೆ. ಒಬ್ಬೊಬ್ಬರ ಜೀವನದಲ್ಲಿ ಒಂದೊಂದು ಘಟನೆ ನಡೆದಿರುತ್ತೆ. ನನ್ನ ಬದುಕಿನಲ್ಲೂ ಒಂದಷ್ಟು ಘಟನೆಗಳು ನಡೆದಿವೆ. ಅವೆಲ್ಲವನ್ನು ಆಧರಿಸಿ ಕಥೆ ಹೆಣೆದಿದ್ದೇನೆ. ಈ ಕಥೆಯಲ್ಲಿ ಒಬ್ಬ ಹೊಸ ನಾಯಕ ನನಗೆ ಕಾಣುತ್ತಿದ್ದಾನೆ ಆದ್ರಿಂದ ನಾನೇ ನಟಿಸುತ್ತಿದ್ದೇನೆ. ನಾಯಕ ನಟ ಅನ್ನೋದಕ್ಕಿಂತ ಮುಖ್ಯ ಪಾತ್ರ ಎಂದಷ್ಟೇ ಹೇಳಬಹುದು ಎನ್ನುತ್ತಾರೆ ನಿರ್ದೇಶಕ ಸತ್ಯ ಪ್ರಕಾಶ್.

    ಈ ಚಿತ್ರ ಸಾಮಾನ್ಯ ಮನುಷ್ಯನ ಬದುಕಿಗೆ ಸಂಬಂಧಿಸಿದ ಕಥೆ ಒಳಗೊಂಡಿದೆ. ಸಾಮಾನ್ಯ ವ್ಯಕ್ತಿ ಬದುಕಲ್ಲಿ ಹಾಸ್ಯ, ಎಮೋಷನ್ಸ್, ರಾಜಕೀಯ ಎಲ್ಲವೂ ಇರುತ್ತೆ ಈ ಚಿತ್ರದಲ್ಲೂ ಅವೆಲ್ಲವೂ ಇದೆ. ಕಥಾನಾಯಕನಿಗೆ ಎಲ್ಲರಿಗೂ ಒಳ್ಳೆಯದನ್ನು ಬಯಸುವ ಗುಣವಿರುತ್ತೆ ಆದ್ರೆ ಆತನ ಒಳ್ಳೆಯ ಗುಣದಿಂದ ಅವನಿಗಾಗುವ ಪ್ರಯೋಜನ ಹಾಗೂ ತೊಂದರೆಗಳೇನು ಎಂಬುದನ್ನು ಹಾಸ್ಯದ ಮೂಲಕ ಹೇಳ ಹೊರಟಿದ್ದೇನೆ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ ಸತ್ಯ ಪ್ರಕಾಶ್. ಇದನ್ನೂ ಓದಿ:ರಶ್ಮಿಕಾ ಮಂದಣ್ಣ ರೀತಿಯಲ್ಲಿಯೇ ಕೈ ಸನ್ನೆ ಮಾಡಿ ರಿಷಬ್ ತಿರುಗೇಟು

    ನಾನು ಯಾವಾಗಲೂ ಯೂನಿವರ್ಸಲ್ ಸಬ್ಜೆಕ್ಟ್ ಆಯ್ಕೆ ಮಾಡಿಕೊಳ್ಳುತ್ತೇನೆ. ನನ್ನ ಸಿನಿಮಾವನ್ನು ಎಲ್ಲಾ ವರ್ಗದ ಜನರು ನೋಡಬೇಕು ಎನ್ನುವುದು ನನ್ನ ಆಸೆ.  ಈ ಚಿತ್ರದ  ಕಥೆಯೂ ಹಾಗೆ ಇದೆ. ಸಿನಿಮಾ ಚಿತ್ರೀಕರಣ ಜನವರಿಯಲ್ಲಿ ಆರಂಭವಾಗಲಿದೆ .ರಾಮಾ ರಾಮಾ ರೇ ಸಿನಿಮಾದಲ್ಲಿ ಕೆಲಸ ಮಾಡಿದ ತಂತ್ರಜ್ಞರೇ ಈ ಚಿತ್ರಕ್ಕೂ ಕೆಲಸ ಮಾಡಲಿದ್ದಾರೆ ಎಂದು ಮಾಹಿತಿ ನೀಡಿರುವ ಸತ್ಯ ಪ್ರಕಾಶ್ ಸದ್ಯದಲ್ಲೇ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ನೀಡೋದಾಗಿ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಶಿವರಾಜಕುಮಾರ್ ನಟನೆಯ ಹೊಸ ಸಿನಿಮಾ ‘ಘೋಸ್ಟ್’ ಆರಂಭ

    ಶಿವರಾಜಕುಮಾರ್ ನಟನೆಯ ಹೊಸ ಸಿನಿಮಾ ‘ಘೋಸ್ಟ್’ ಆರಂಭ

    ನ್ನಡ ಚಿತ್ರರಂಗಕ್ಕೆ ಸಾಕಷ್ಟು  ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ,  ಸಂದೇಶ್ ನಾಗರಾಜ್ (Sandesh Nagaraj) ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ ಹಾಗೂ ಶ್ರೀನಿ ನಿರ್ದೇಶನದಲ್ಲಿ  ಕರುನಾಡ ಚಕ್ರವರ್ತಿ ಶಿವರಾಜಕುಮಾರ್ (Shivraj Kumar) ನಾಯಕರಾಗಿ ಅಭಿನಯಿಸುತ್ತಿರುವ “ಘೋಸ್ಟ್‌” (Ghost) ಚಿತ್ರದ ಮುಹೂರ್ತ (Muhurta) ಸಮಾರಂಭ ಮಿನರ್ವ ಮಿಲ್ ನಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಗೀತಾ ಶಿವರಾಜಕುಮಾರ್ ಆರಂಭ ಫಲಕ ತೋರಿದರು. ಬೃಂದಾ ಜಯರಾಂ ಕ್ಯಾಮೆರಾ ಚಾಲನೆ ಮಾಡಿದರು. ಚಿತ್ರತಂಡದ ಸದಸ್ಯರು ಹಾಗೂ ಗಣ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು.

    ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಅದ್ದೂರಿ ಸೆಟ್ ಗಳನ್ನು ನಿರ್ಮಾಣ ಮಾಡಲಾಗಿದೆ.  ಮಿನರ್ವ ಮಿಲ್ ನಲ್ಲಿ 15 ತರಹದ ಸೆಟ್ ಗಳನ್ನು ಹಾಗೂ ಮೈಸೂರಿನಲ್ಲಿ  4 ತರಹದ ಸೆಟ್ ಗಳನ್ನು ಕಲಾ‌ ನಿರ್ದೇಶಕ ಮೋಹನ್ ಬಿ ಕೆರೆ ನಿರ್ಮಾಣ ಮಾಡಿದ್ದಾರೆ. ಬೆಂಗಳೂರು ಹಾಗೂ ಮೈಸೂರಿನಲ್ಲಿ ಚಿತ್ರೀಕರಣ ನಡೆಯಲಿದೆ. ಮಿನರ್ವ ಮಿಲ್ ನಲ್ಲಿ ನಿರ್ಮಿಸಲಾಗಿರುವ ಜೈಲ್ ಸೆಟ್ ನಲ್ಲೇ 24 ದಿನಗಳ ಚಿತ್ರೀಕರಣ ನಡೆಯಲಿದೆ. ಈ ಅದ್ದೂರಿ ಸೆಟ್ ಗಳ ನಿರ್ಮಾಣಕ್ಕೆ ಸುಮಾರು ಮೂರು ಕೋಟಿ ವೆಚ್ಚವಾಗಿದೆಯಂತೆ.

    “ಶ್ರೀನಿವಾಸ ಕಲ್ಯಾಣ”, ” ಓಲ್ಡ್ ಮಾಂಕ್” ಸೇರಿದಂತೆ ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಶ್ರೀನಿ (Srini) ನಿರ್ದೇಶನದ ಐದನೇ ಚಿತ್ರ “ಘೋಸ್ಟ್”. ನಿರ್ದೇಶಕರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಂಭಾಷಣೆ ಮಾಸ್ತಿ ಹಾಗೂ ಪ್ರಸನ್ನ ಅವರದು. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣ “ಘೋಸ್ಟ್‌ ” ಚಿತ್ರಕ್ಕಿದೆ. ಐದು ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿದೆ. ಇದನ್ನೂ ಓದಿ:ಬಿಗ್ ಬಾಸ್ ಆಟಕ್ಕೆ ಫುಲ್ ಸ್ಟಾಪ್ ಇಡಲು ನಿರ್ಧರಿಸಿದ ಆರ್ಯವರ್ಧನ್ ಗುರೂಜಿ

    ಶಿವರಾಜಕುಮಾರ್, ಸತ್ಯಪ್ರಕಾಶ್ (Satya Prakash), ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಆರು ವರ್ಷಗಳ ಬಳಿಕ ಜೀ ಪಿಕ್ಚರ್ಸ್ ನಲ್ಲಿ ಸೂಪರ್ ಹಿಟ್ ‘ರಾಮಾ ರಾಮಾ ರೇ’ ಸಿನಿಮಾ

    ಆರು ವರ್ಷಗಳ ಬಳಿಕ ಜೀ ಪಿಕ್ಚರ್ಸ್ ನಲ್ಲಿ ಸೂಪರ್ ಹಿಟ್ ‘ರಾಮಾ ರಾಮಾ ರೇ’ ಸಿನಿಮಾ

    ರಾಮಾ ರಾಮಾ ರೇ  (Rama Rama Re) ಕನ್ನಡದ ಸೂಪರ್ ಹಿಟ್ ಸಿನಿಮಾಗಳಲ್ಲೊಂದು. ಥಿಯೇಟರ್ ನಲ್ಲಿ ಬರೋಬ್ಬರಿ‌ 100 ದಿನ ಪೂರೈಸಿದ್ದ ಈ ಚಿತ್ರ ಸಿದ್ಧ ಸೂತ್ರಗಳನ್ನು ಪಕ್ಕಕ್ಕಿಟ್ಟು ತಯಾರಿಸಲಾಗಿತ್ತು. ಹೊಸ ತಾರಾಗಣ, ಹೊಸ ಕಥೆಯನ್ನು ಸತ್ಯಪ್ರಕಾಶ್ ಸಿನಿಮಾಪ್ರೇಮಿಗಳಿಗೆ ಉಣಬಡಿಸಿದ್ದರು. ಇದನ್ನೂ ಓದಿ:ಯುವ ರಾಜ್‌ಕುಮಾರ್ ಸಿನಿಮಾದ ಅಪ್‌ಡೇಟ್‌ಗಾಗಿ ಕಾಯುತ್ತಿದ್ದವರಿಗೆ ಇಲ್ಲಿದೆ ಸಿಹಿ ಸುದ್ದಿ

    ಪೊಲೀಸರನ್ನು ಕೊಂದು ನೇಣು ಶಿಕ್ಷೆಗೆ ಒಳಗಾಗಿರುವ ಖೈದಿಯೊಬ್ಬ ಜೈಲಿನಿಂದ ತಪ್ಪಿಸಿಕೊಳ್ಳುವುದರಿಂದ ಆರಂಭವಾಗುವ ಸಿನಿಮಾ, ಅವನು ತಾನಾಗಿಯೇ ಜೈಲಿಗೆ ಬಂದು ಶರಣಾಗುವ ದೃಶ್ಯದೊಂದಿಗೆ ಮುಗಿಯುತ್ತದೆ. ಇದರ ಮಧ್ಯೆ ಬದುಕಲು ಅವನು ನಡೆಸುವ ಹೋರಾಟ, ಪ್ರೇಮಿಗಳ ಕಷ್ಟ, ಸೈನಿಕನ ಪತ್ನಿಯ ಪ್ರಸವ ವೇದನೆ ಎಲ್ಲವನ್ನೂ ನಿರ್ದೇಶಕ ಸತ್ಯ ಪ್ರಕಾಶ್‌ ಚೆಂದವಾಗಿ ಕಟ್ಟಿಕೊಟ್ಟಿದ್ದರು. ಅಕ್ಟೋಬರ್ 21, 2016ರಂದು ರಿಲೀಸ್ ಆಗಿದ್ದ ಈ ಚಿತ್ರ ಆರು ವರ್ಷದ ಬಳಿಕ ಟಿವಿಯಲ್ಲಿ ಪ್ರದರ್ಶನವಾಗುತ್ತಿದೆ.

    ದಸರಾ ಹಬ್ಬದ ಪ್ರಯುಕ್ತ ರಾಮಾ ರಾಮಾ ರೇ ಚಿತ್ರ ಜೀ ಪಿಕ್ಚರ್ಸ್ ನಲ್ಲಿ (OTT) ಸಂಜೆ 6ಕ್ಕೆ ಪ್ರಸಾರವಾಗಲಿದೆ. ಸತ್ಯಪ್ರಕಾಶ್ (Satya Prakash) ಚಿತ್ರಕಥೆ ಬರೆದು ನಿರ್ದೇಶನದಲ್ಲಿ ನಟರಾಜ್ (Nataraj), ಧರ್ಮಣ್ಣ ಕಡೂರ್ (Dharmanna Kadur), ಎಂ.ಕೆ.ಮಠ, ಶ್ರೀಧರ್, ರಾಧಾ ರಾಮಚಂದ್ರ, ಪ್ರಿಯಾ ಷಟಮರ್ಶನ್‌, ಶ್ರೀಧರ್‌ ಸೇರಿದಂತೆ ಎಲ್ಲ ಕಲಾವಿದರು ತಮ್ಮ ಪಾತ್ರಕ್ಕೆ ನ್ಯಾಯ ಸಲ್ಲಿಸಿದ್ದರು. ತಾಂತ್ರಿಕತೆಯಿಂದಲೂ ಗಮನ ಸೆಳೆದಿದ್ದ ರಾಮಾ ರಾಮಾ ರೇ ಕನ್ನಡದ ಪ್ರಯೋಗಾತ್ಮಕ ಸಿನಿಮಾವಾಗಿದ್ದು, ಇಂತಹ ಚಿತ್ರವನ್ನು ಥಿಯೇಟರ್ ನಲ್ಲಿ ಮಿಸ್ ಮಾಡಿಕೊಂಡವರು ಈಗ ಮನೆಯಲ್ಲಿ ನೋಡಬಹುದು.

    Live Tv
    [brid partner=56869869 player=32851 video=960834 autoplay=true]

  • ಅನ್ ಲಾಕ್ ರಾಘವ ಸಿನಿಮಾದ ಟೈಟಲ್ ಅನಾವರಣ ಮಾಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್

    ಅನ್ ಲಾಕ್ ರಾಘವ ಸಿನಿಮಾದ ಟೈಟಲ್ ಅನಾವರಣ ಮಾಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್

    ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ, ‘ ರಾಮಾ ರಾಮಾ ರೇ’, ‘ಒಂದಲ್ಲಾ ಎರಡಲ್ಲಾ’, ‘ಮ್ಯಾನ್ ಆಫ್ ದಿ ಮ್ಯಾಚ್’ನಂತಹ ಅಪರೂಪದ ಸಿನಿಮಾ ಕಥೆ  ಹೇಳಿ ಸಕ್ಸಸ್ ಕಂಡಿರುವ ನಿರ್ದೇಶಕ ಸತ್ಯಪ್ರಕಾಶ್ ನಿರ್ಮಾಣದ ಹೊಸ ಸಿನಿಮಾದ ಟೈಟಲ್ ನ್ನು ರಿವೀಲ್ ಆಗಿದೆ. ಸತ್ಯ & ಮಯೂರ ಪಿಕ್ಚರ್ಸ್ ವತಿಯಿಂದ ನಿರ್ಮಾಣವಾಗುತ್ತಿರುವ ‘ಅನ್ ಲಾಕ್ ರಾಘವ’ ಸಿನಿಮಾದ ಶೀರ್ಷಿಕೆ ಹಾಗೂ ಫಸ್ಟ್ ಲುಕ್ ನ್ನು ಶ್ರೀಮತಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅನಾವರಣಗೊಳಿಸಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

    ನಿರ್ಮಾಪಕ ಸತ್ಯಪ್ರಕಾಶ್ ಮಾತನಾಡಿ, ಇಂಡಸ್ಟ್ರೀಗೆ ಬಂದಾಗ ದೊಡ್ಡ ಟೀಂ ಕಟ್ಟಬೇಕು ಎಂಬ ಆಸೆ ಇತ್ತು. ದೀಪಕ್ ಮಧುವನಹಳ್ಳಿ ನಿರ್ದೇಶನ ಮಾಡ್ತಿರುವ ಈ ಸಿನಿಮಾ ನಿಜವಾದ ಕಮರ್ಷಿಯಲ್ ಸಿನಿಮಾ. ತುಂಬಾ ಹೊಸ ಪ್ರೆಸೆಂಟೇಷನ್ ನಲ್ಲಿ ಸಿನಿಮಾ ಮಾಡಿದ್ದೇವೆ. ಇಡೀ ಸಿನಿಮಾ ರೋಮ್ಯಾಂಟಿಕ್ ಕಾಮಿಡಿ ಜರ್ನಿ ಇರುತ್ತದೆ. ಮೂರು ರೀತಿ ಕಾಮಿಡಿ ಇರುತ್ತದೆ. ಪಾತ್ರ ಏನು ಮಾತಾಡ್ತಾರೆ ಅಂತಾ ಗೊತ್ತಾಗಲ್ಲ. ಆದ್ರೆ ಪ್ರೇಕ್ಷಕ ನಗ್ತಾರೆ. ಅನೂಪ್ ಸೀಳಿನ್ ಸರ್ ಅದ್ಭುತ ಮ್ಯೂಸಿಕ್ ಕೊಟ್ಟಿದ್ದಾರೆ ಎಂದರು. ಇದನ್ನೂ ಓದಿ: ಶಿವಣ್ಣನನ್ನೇ ಹಿಂದಿಕ್ಕಿದ ಶಿವಣ್ಣನ ಅಭಿಮಾನಿ ಕಾಫಿನಾಡು ಚಂದು!

    ‘ಭಾಗ್ಯರಾಜ್’, ‘ಕಳ್ಬೆಟ್ಟದ ದರೋಡೆಕೋರರು’, ‘ರಾಜು ಜೇಮ್ಸ್ ಬಾಂಡ್’ ಚಿತ್ರಗಳನ್ನು ನಿರ್ದೇಶಿಸಿರುವ ದೀಪಕ್ ಮಧುವನಹಳ್ಳಿ ನಿರ್ದೇಶಿಸುತ್ತಿರುವ ಈ ಸಿನಿಮಾಗೆ ಡಿ ಸತ್ಯಪ್ರಕಾಶ್ ಕತೆ-ಚಿತ್ರಕತೆ-ಸಂಭಾಷಣೆ ಬರೆದು ನಿರ್ಮಾಣದ ಜವಾಬ್ದಾರಿ ಕೂಡ ಹೊತ್ತುಕೊಂಡಿದ್ದಾರೆ. ‘ವೀಕೆಂಡ್’ ಸಿನಿಮಾ ಮೂಲಕ ಭರವಸೆ ಮೂಡಿಸಿರುವ ನವನಟ ಮಿಲಿಂದ್ ನಾಯಕನಾಗಿ ಹಾಗೂ ‘ಲವ್ ಮಾಕ್ಟೇಲ್ – 2’ ಚಿತ್ರದ ರೇಚಲ್ ಡೇವಿಡ್ ನಾಯಕಿಯಾಗಿ ಬಣ್ಣ ಹಚ್ಚಿದ್ದು, ಸಾಧುಕೋಕಿಲ, ಅವಿನಾಶ್, ರಮೇಶ್ ಭಟ್, ಸುಂದರ್ ವೀಣಾ, ಧರ್ಮಣ್ಣ ಕಡೂರು, ಭೂಮಿಶೆಟ್ಟಿ ಮೊದಲಾದ ಕಲಾವಿದರು ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾಕ್ಕೆ ಅನೂಪ್ ಸೀಳಿನ್ ಸಂಗೀತ ನೀಡುತ್ತಿದ್ದು, ಲವಿತ್ ಛಾಯಾಗ್ರಹಣ ಹಾಗೂ ಅಜಯ್ ಕುಮಾರ್ ಸಂಕಲನವಿದೆ.

    Live Tv
    [brid partner=56869869 player=32851 video=960834 autoplay=true]