Tag: ‘ಸನ್ ಆಫ್ ಮುತ್ತಣ್ಣ’

  • ಪ್ರಣಂ ದೇವರಾಜ್ ನಟಿಸಿರುವ `ಸನ್ ಆಫ್ ಮುತ್ತಣ್ಣ’ ರಿಲೀಸ್ ಡೇಟ್ ಫಿಕ್ಸ್

    ಪ್ರಣಂ ದೇವರಾಜ್ ನಟಿಸಿರುವ `ಸನ್ ಆಫ್ ಮುತ್ತಣ್ಣ’ ರಿಲೀಸ್ ಡೇಟ್ ಫಿಕ್ಸ್

    ಪುರಾತನ ಫಿಲಂಸ್ ನಿರ್ಮಾಣದ, ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಪ್ರಣಂ ದೇವರಾಜ್ (Pranam Devaraj) ನಾಯಕನಾಗಿ ನಟಿಸಿರುವ `S\O ಮುತ್ತಣ್ಣ’ ಚಿತ್ರ (Son of Muthanna Movie) ಪ್ರಾರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಸಚಿನ್ ಬಸ್ರೂರ್ ಸಂಗೀತ ನೀಡಿರುವ ಈ ಚಿತ್ರದ ಕಮಂಗಿ ನನ್ನ ಮಗನೆ ಹಾಡು ಈಗಾಗಲೇ ಜನಮನ ಗೆದ್ದಿದೆ. ಟೀಸರ್ ಕೂಡ ಮೆಚ್ಚುಗೆ ಪಡೆದಿದೆ. ಬಹು ನಿರೀಕ್ಷಿತ ಈ ಚಿತ್ರ ಯಾವಾಗ ಬಿಡುಗಡೆಯಾಗಲಿದೆ ಎಂಬ ಕಾತುರ ಅಭಿಮಾನಿಗಳಲ್ಲಿತ್ತು. ಆ ಕಾತುರಕ್ಕೆ ಈಗ ತೆರೆ ಬಿದ್ದಿದೆ.

    “S\O ಮುತ್ತಣ್ಣ” ಚಿತ್ರ ಆಗಸ್ಟ್ 22 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಪ್ರತಿಷ್ಠಿತ ಬೆಂಗಳೂರು ಕುಮಾರ್ ಫಿಲಂಸ್ ಸಂಸ್ಥೆ ಕರ್ನಾಟಕದಾದ್ಯಂತ ಈ ಚಿತ್ರವನ್ನು ವಿತರಣೆ ಮಾಡುತ್ತಿದೆ. ಆಗಸ್ಟ್ ಮೊದಲವಾರದಲ್ಲಿ ಚಿತ್ರವನ್ನು ಅಮೆರಿಕ ಹಾಗೂ ದುಬೈನಲ್ಲಿ ಬಿಡುಗಡೆ ಮಾಡುವ ಸಿದ್ದತೆಯನ್ನು ಚಿತ್ರತಂಡ ನಡೆಸಿದೆ. ಇದನ್ನೂ ಓದಿ: ರಾಮಾಯಣ ಫಸ್ಟ್ ಟೈಟಲ್ ಟೀಸರ್ ರಿಲೀಸ್: ರಾಮ-ರಾವಣನ ಆರ್ಭಟ ಶುರು

    ಅಪ್ಪ – ಮಗನ ಬಾಂಧವ್ಯದ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ರಂಗಾಯಣ ರಘು (Rangayana Ragu) ಹಾಗೂ ಪ್ರಣಂ ದೇವರಾಜ್ ತಂದೆ – ಮಗನಾಗಿ ಅಭಿನಯಿಸದ್ದಾರೆ. ಅಪ್ಪ – ಮಗನ ಬಾಂಧವ್ಯದ ಸನ್ನಿವೇಶಗಳು ಮನಸ್ಸಿಗೆ ಹತ್ತಿರವಾಗಲಿದೆ. ಇದನ್ನೂ ಓದಿ: 2026ರ ಹಾಲಿವುಡ್ ವಾಕ್ ಆಫ್ ಫೇಮ್‌ ಗೌರವಕ್ಕೆ ಪಾತ್ರರಾದ ದೀಪಿಕಾ ಪಡುಕೋಣೆ

    ಪುರಾತನ ಫಿಲಂಸ್ ನಿರ್ಮಾಣ ಮಾಡಿರುತ್ತಾರೆ ಇವರಿಗೆ ಎಸ್‌ಆರ್‌ಕೆ ಫಿಲಂಸ್ ಸಾಥ್ ನೀಡಿದೆ. ಪ್ರಣಂ ದೇವರಾಜ್ ಅವರಿಗೆ ನಾಯಕಿಯಾಗಿ ದಿಯಾ ಖ್ಯಾತಿಯ ಖುಷಿ ರವಿ ಅಭಿನಯಿಸಿದ್ದಾರೆ. ರಂಗಾಯಣ ರಘು ನಾಯಕನ ತಂದೆಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಸುಚೇಂದ್ರ ಪ್ರಸಾದ್, ಗಿರೀಶ್ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್ ಪ್ರಭು, ಸುಧಾ ಬೆಳವಾಡಿ, ಅರುಣ್ ಚಕ್ರವರ್ತಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಸಚಿನ್ ಬಸ್ರೂರು ಸಂಗೀತವಿರುವ ‘s/o ಮುತ್ತಣ್ಣ’ ಸಿನಿಮಾದ ಹಾಡುಗಳನ್ನು ಯೋಗರಾಜ್ ಭಟ್, ಜಯಂತ್ ಕಾಯ್ಕಿಣಿ, ಪ್ರಮೋದ್ ಮರವಂತೆ ಬರೆದಿದ್ದಾರೆ. ಸ್ಕೇಟಿಂಗ್ ಕೃಷ್ಣ ಛಾಯಾಗ್ರಹಣ ಹಾಗೂ ಹರೀಶ್ ಕೊಮ್ಮೆ ಅವರ ಸಂಕಲನ ಬಹು ನಿರೀಕ್ಷಿತ ಈ ಚಿತ್ರಕ್ಕಿದೆ. ಇದನ್ನೂ ಓದಿ: ಡೆವಿಲ್ ಸಿನಿಮಾದಲ್ಲಿ ನಟಿಸಿಲ್ಲ ದರ್ಶನ್ ಪುತ್ರ

  • ಪ್ರಣಂ ದೇವರಾಜ್, ಖುಷಿ ರವಿ ನಟನೆಯ ‘S/o ಮುತ್ತಣ್ಣ’ನಿಗೆ ಕುಂಬಳಕಾಯಿ ಪ್ರಾಪ್ತಿ

    ಪ್ರಣಂ ದೇವರಾಜ್, ಖುಷಿ ರವಿ ನಟನೆಯ ‘S/o ಮುತ್ತಣ್ಣ’ನಿಗೆ ಕುಂಬಳಕಾಯಿ ಪ್ರಾಪ್ತಿ

    ದೇವರಾಜ್ ಕಿರಿಯ ಮಗ ಪ್ರಣಂ ದೇವರಾಜ್ ನಟನೆಯ ‘ಸನ್ ಆಫ್ ಮುತ್ತಣ್ಣ’ ಸಿನಿಮಾ ಪೂರ್ಣಗೊಂಡಿದೆ. ಈ ಚಿತ್ರಕ್ಕೆ ಕುಂಬಳಕಾಯಿ ಪ್ರಾಪ್ತಿಯಾಗಿದೆ. ಸಿನಿಮಾ ಸೆಟ್ಟೇರಿದ ಜಾಗದಲ್ಲಿ ಕುಂಬಳಕಾಯಿ ಹೊಡೆಯಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿತ್ತು. ಅದರಂತೆ ಬೆಂಗಳೂರಿನ ಬಂಡೆ ಮಾಕಾಳಮ್ಮ ದೇವಸ್ಥಾನದಲ್ಲಿ ಕೊನೆಯ ಹಂತದ ಶೂಟಿಂಗ್ ಮಾಡಿ ಕುಂಬಳಕಾಯಿ ಹೊಡೆಯಲಾಗಿದೆ. ಈ ಸಂದರ್ಭದಲ್ಲಿ ಇಡೀ ಚಿತ್ರತಂಡ ಭಾಗಿಯಾಗಿ ಸಿನಿಮಾ ಕುರಿತು ಮಾಹಿತಿ ಹಂಚಿಕೊಂಡಿದೆ.

    ನಟ ಪ್ರಣಂ ದೇವರಾಜ್ (Pranam Devaraj) ಮಾತನಾಡಿ, ಇವತ್ತು ಖುಷಿಯೂ ಇದೆ. ಬೇಜಾರು ಇದೆ. ಖುಷಿ ಏನಕ್ಕೆ ಅಂದರೆ ನನ್ನ ಸಿನಿಮಾದ ಶೂಟಿಂಗ್ ಮುಕ್ತಾಯಗೊಂಡಿದೆ. ಬೇಜಾರು ಏನಕ್ಕೆ ಅಂದರೆ ನಾಳೆಯಿಂದ ಇವರು ಯಾರು ಸಿಗಲ್ಲ ಅಂತಾ. ಈ ಜರ್ನಿ ಖುಷಿ ಜೊತೆಗೆ ಎಮೋಷನಲ್ ಆಗಿಯೂ ಇತ್ತು. ಟೆನ್ಷನ್ ಕೂಡ ಇತ್ತು. ಸಿನಿಮಾ ತುಂಬಾ ಚೆನ್ನಾಗಿ ಬಂದಿದೆ. ಅಪ್ಪ ಮತ್ತು ಮಗನ ಬಾಂಧವ್ಯದ ಕಥೆ ಇದು. ನಮ್ಮ ಅಪ್ಪ ಮತ್ತು ಮಗನ ಬಾಂಧವ್ಯ ಹೇಗಿದೆ ಅಂತ ಗೊತ್ತಿದೆ, ರಘು ಸರ್ ಸೆಟ್‌ನಲ್ಲಿ ನನಗೆ ತಂದೆ ತರ ಇದ್ದರು. ಇವರಿಂದ ಸಾಕಷ್ಟು ಕಲಿತಿದ್ದೇನೆ. ಖುಷಿ ರವಿ ಅದ್ಭುತ ನಟಿ. ಸಾಕಷ್ಟು ಜನ ಕಲಾವಿದರು ಚಿತ್ರದಲ್ಲಿದ್ದಾರೆ. ಪುರಾತನ ಫಿಲ್ಮಂಸ್ ಈ ರೀತಿ ಅವಕಾಶ ಕೊಟ್ಟಿರುವುದಕ್ಕೆ ಧನ್ಯವಾದ ಎಂದರು.

    ನಾಯಕಿ ಖುಷಿ ರವಿ (Kushee Ravi) ಮಾತನಾಡಿ, ಶೂಟ್ ಮುಗಿಸಿ, ದೃಷ್ಟಿ ತೆಗೆದು ಕುಂಬಳಕಾಯಿ ಹೊಡೆಯೋದನ್ನು ನೋಡಿದ್ದೇವೆ. ಆದರೆ ಪುರಾತನ ಫಿಲ್ಮಂಸ್ ಅದ್ಧೂರಿಯಾಗಿ ಶೂಟಿಂಗ್ ಮುಗಿಸಿದೆ. 49 ದಿನ ಜರ್ನಿಯಲ್ಲಿಯೂ ಯಾವುದೇ ರೀತಿ ಕೊರತೆ ಇಲ್ಲದ ರೀತಿ ನೋಡಿಕೊಂಡಿದ್ದಾರೆ. ಹರೀಶ್ ಸರ್‌ಗೆ ಧನ್ಯವಾದ. ನಿರ್ದೇಶಕ ಶ್ರೀಕಾಂತ್ ಸರ್ ತುಂಬಾ ಕ್ಲಾರಿಟಿ ಇದೆ. ಈ ಜನರೇಷನ್‌ಗೆ ಅಪ್ಪ-ಮಗ, ಅಪ್ಪ-ಮಗಳು, ಸ್ನೇಹ ಎಲ್ಲಾ ಎಮೋಷನ್ ಸಿನಿಮಾದಲ್ಲಿ ತೋರಿಸಿದ್ದಾರೆ. ಸಾಂಗ್ ಸಚಿನ್ ಬಸ್ರೂರ್ ಅದ್ಭುತವಾಗಿ ಕಂಪೋಸ್ ಮಾಡಿದ್ದಾರೆ. ಧನು ಮಾಸ್ಟರ್ ಅದ್ಭುತವಾಗಿ ನನ್ನ ಕೈಯಿಂದ ಡ್ಯಾನ್ಸ್ ಮಾಡಿಸಿದ್ದಾರೆ. ಕೃಷ್ಣಣ್ಣ ನಮ್ಮನ್ನು ತುಂಬಾ ಚೆನ್ನಾಗಿ ಕ್ಯಾಪ್ಟರ್ ಮಾಡಿದ್ದಾರೆ ಎಂದರು.

    ನಿರ್ದೇಶಕ ಶ್ರೀಕಾಂತ್ ಮಾತನಾಡಿ, ಬಂಡಿ ಮಹಾಕಾಳಿ ದೇಗುಲದಲ್ಲಿ ಸಿನಿಮಾ ಶುರು ಮಾಡಿದ್ವಿ. ಹಾಗಾಗಿ ನಿರ್ಮಾಪಕರು ಇಲ್ಲಿಯೇ ಕುಂಬಳಕಾಯಿ ಹೊಡೆಯಬೇಕು ಎಂಬ ಆಸೆ ವ್ಯಕ್ತಪಡಿಸಿದ್ದರು. ಅದಕ್ಕಾಗಿ ಇಲ್ಲಿಯೇ ಕುಂಬಳಕಾಯಿ ಹೊಡೆದಿದ್ದೇವೆ. 49 ದಿನ ಶೂಟಿಂಗ್ ನಡೆಸಲಾಗಿದೆ. ವಾರಣಾಸಿ, ಬೆಂಗಳೂರಿನಲ್ಲಿ ನಡೆಸಲಾಗಿದೆ ಎಂದರು.

    ‘ಸನ್ ಆಫ್ ಮುತ್ತಣ್ಣ’ ಸಿನಿಮಾವನ್ನು ಶ್ರೀಕಾಂತ್ ಹುಣ್ಸೂರ್ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಮೂಲಕ ಶ್ರೀಕಾಂತ್, ಈ ಸಿನಿಮಾದ ಸ್ವತಂತ್ರ ನಿರ್ದೇಶಕರಾಗುತ್ತಿದ್ದಾರೆ. ಪ್ರಣಂ ದೇವರಾಜ್ ನಾಯಕನಾಗಿ ನಟಿಸಿದ್ದು, ಖುಷಿ ರವಿ ನಾಯಕಿಯಾಗಿ ಸಾಥ್ ಕೊಟ್ಟಿದ್ದಾರೆ. ರಂಗಾಯಣ ರಘು, ಸುಚೇಂದ್ರ ಪ್ರಸಾದ್, ಗಿರಿ ಶಿವಣ್ಣ, ತಬಲ ನಾಣಿ, ಶ್ರೀನಿವಾಸ್ ಪ್ರಭು, ಸುಧಾ ಬೆಳವಾಡಿ, ಅರುಣ್ ಚಕ್ರವರ್ತಿ ಸೇರಿದಂತೆ ಅನೇಕರು ನಟಿಸಿದ್ದಾರೆ.

    ಶೀರ್ಷಿಕೆಯೇ ಹೇಳುತ್ತಿರುವಂತೆ ಈ ಸಿನಿಮಾ ಅಪ್ಪ-ಮಗನ ಬಾಂಧವ್ಯದ ಕಥೆ. ಪುರಾತನ ಫಿಲ್ಮಂಸ್ ಬ್ಯಾನರ್ ಅಡಯಲ್ಲಿ ದಿವ್ಯಾ ನಿರ್ಮಾಣ ಮಾಡುತ್ತಿದ್ದಾರೆ. ‘ಸನ್ ಆಫ್ ಮುತ್ತಣ್ಣ’ ಸಿನಿಮಾಕ್ಕೆ ಸ್ಕೇಟಿಂಗ್ ಕೃಷ್ಣ ಛಾಯಾಗ್ರಹಣ ಮಾಡುತ್ತಿದ್ದಾರೆ. ಹರೀಶ್ ಕೊಮ್ಮೆ ಸಂಕಲನ ಮಾಡಿದ್ದಾರೆ, ಸಚಿನ್ ಬಸ್ರೂರ್ ಸಂಗೀತ ನಿರ್ದೇಶನ ಮಾಡುತ್ತಿರುವುದು ವಿಶೇಷ.