ರಕ್ಷಿತ್ ಶೆಟ್ಟಿ (Rakshit Shetty) ನಟಿಸಿರುವ, ಹೇಮಂತ್ ರಾವ್ (Hemant Rao) ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಸಪ್ತ ಸಾಗರದಾಚೆ ಎಲ್ಲೋ ಪಾರ್ಟ್ ಬಿ’ ನಾಳೆ ಸಂಜೆ 7.30ಕ್ಕೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ. ಕೆಲವು ದಿನಗಳ ಹಿಂದೆಯಷ್ಟೇ ಇದೇ ವಾಹಿನಿಯು ಪಾರ್ಟ್ ಎ ಪ್ರಸಾರ ಮಾಡಿತ್ತು.

ಕೇವಲ ಪ್ರೇಕ್ಷಕರು ಮಾತ್ರವಲ್ಲ, ಸೆಲೆಬ್ರಿಟಿಗಳು ಈ ಸಿನಿಮಾವನ್ನು ಒಪ್ಪಿಕೊಂಡಿದ್ದರು. ಹೆಸರಾಂತ ನಟ ಪ್ರಕಾಶ್ ರಾಜ್ (Prakash Raj), ತಾವು ಮೆಚ್ಚಿದ ಸಿನಿಮಾಗಳ ಬಗ್ಗೆ ಆಗಾಗ್ಗೆ ಬರೆಯುತ್ತಲೇ ಇರುತ್ತಾರೆ. ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾ ನೋಡಿ ಸಂಭ್ರಮಿಸಿದ್ದಾರೆ. ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಸಿನಿಮಾ ಬಗ್ಗೆ, ‘ಸಪ್ತ ಸಾಗರದಾಚೆ ಎಲ್ಲೋ.. ಆಹಾ.. ಒಂದು ಸುಂದರ ದೃಶ್ಯಕಾವ್ಯ ಅನುಭವ. ಡೋಂಟ್ ಮಿಸ್’ ಎಂದು ಬರೆದುಕೊಂಡಿದ್ದರು.

ರಕ್ಷಿತ್ ಶೆಟ್ಟಿ, ನಿರ್ದೇಶಕ ಹೇಮಂತ್ ರಾವ್, ಚೈತ್ರಾ ಆಚಾರ್ಯ, ರುಕ್ಮಿಣಿ, ಚರಣ್ ರಾಜ್ ಹೀಗೆ ಸಿನಿಮಾದ ಕಲಾವಿದರು ಮತ್ತು ತಂತ್ರಜ್ಞರಿಗೆ ತಮ್ಮ ಬರಹವನ್ನು ಟ್ಯಾಗ್ ಮಾಡಿದ್ದರು. ಇಡೀ ತಂಡಕ್ಕೆ ಇಂಥದ್ದೊಂದು ಸಿನಿಮಾ ಕೊಟ್ಟಿದ್ದಕ್ಕೆ ಧನ್ಯವಾದಗಳನ್ನೂ ಪ್ರಕಾಶ್ ರಾಜ್ ಅರ್ಪಿಸಿದ್ದರು.

ಕೇವಲ ಕನ್ನಡದಲ್ಲಿ ಮಾತ್ರವಲ್ಲ, ‘ಸಪ್ತಸಾಗರದಾಚೆ ಎಲ್ಲೋ’ (Sapta Sagaradacche Yello) ತೆಲುಗು ನೆಲದಲ್ಲೂ ಸದ್ದು ಮಾಡಿತ್ತು. ಸ್ಯಾಂಡಲ್‌ವುಡ್‌ನಲ್ಲಿ ಕಮಾಲ್ ಮಾಡಿದ ಈ ಸಿನಿಮಾ, ಈಗ ತೆಲುಗಿನಲ್ಲೂ (Tollywood) ಅತ್ಯುತ್ತಮ ಪ್ರತಿಕ್ರಿಯೆಯನ್ನು ಕಂಡಿತ್ತು. ದೃಶ್ಯ ಕಾವ್ಯಕ್ಕೆ ಕನ್ನಡಿಗರು ಫಿದಾ ಆಗಿದ್ದರು. ಮನು- ಪ್ರಿಯಾ ಜೋಡಿಯ ಪ್ರೇಮ್ ಕಹಾನಿ ನೋಡಿ ಪ್ರೇಕ್ಷಕರು ಚಪ್ಪಾಳೆ ತಟ್ಟಿದ್ದರು.
‘ಕವಲುದಾರಿ’ ಖ್ಯಾತಿಯ ಹೇಮಂತ್ ನಿರ್ದೇಶನದಲ್ಲಿ ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್, ಅಚ್ಯುತ್ ಕುಮಾರ್, ಪವಿತ್ರಾ ಲೋಕೇಶ್, ರಮೇಶ್ ಇಂದಿರಾ, ಅವಿನಾಶ್ ಸೇರಿದಂತೆ ಹಲವರು ನಟಿಸಿದ್ದಾರೆ. ರಕ್ಷಿತ್ ಶೆಟ್ಟಿ ನಿರ್ಮಾಣ ಮಾಡಿದ್ದಾರೆ.









‘ಬೀರ್‌ಬಲ್’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ನಟಿ, ರಕ್ಷಿತ್ ಶೆಟ್ಟಿ ನಟನೆಯ ‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರಕ್ಕೆ ನಾಯಕಿಯಾಗಿ ರುಕ್ಮಿಣಿ ವಸಂತ್ ಮಿಂಚಿದ್ದರು. ಪ್ರಿಯಾ-ಮನು ಲವ್ ಸ್ಟೋರಿ ನೋಡುಗರಿಗೆ ಖುಷಿ ಕೊಟ್ಟಿತ್ತು. ರುಕ್ಮಿಣಿ ಆ್ಯಕ್ಟಿಂಗ್‌ಗೆ ಫ್ಯಾನ್ಸ್ ಫುಲ್ ಮಾರ್ಕ್ಸ್ ಕೊಟ್ಟರು. ಇದೇ ಚಿತ್ರ ತೆಲುಗಿಗೆ ಡಬ್ ಆಗಿ ಪ್ರೇಕ್ಷಕರ ದಿಲ್ ಗೆದ್ದಿದೆ. ಇದನ್ನೂ ಓದಿ:










